ಬೆಂಗಳೂರು: ಬರಗಾಲದಲ್ಲೂ ರಾಜ್ಯದ ಜನರಿಗೆ ಸರ್ಕಾರ ಕುಡಿಯುವ ನೀರಿನ ತೆರಿಗೆ ಹೆಚ್ಚಿಸುವ ಮೂಲಕ ಶಾಕ್ ನೀಡಿದೆ. ಗೃಹ ಉಪಯೋಗ ಬಳಕೆ ನೀರಿನ ಮೇಲಿನ ತೆರಿಗೆ ಹೆಚ್ಚಳಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಒಪ್ಪಿಗೆ ನೀಡಲಾಗಿದ್ದು, ಜನರಿಗೆ ಕುಡಿಯುವ ನೀರು ದುಬಾರಿಯಾಗಲಿದೆ ಕೈಗಾರಿಕೆಗಳಿಗೆ ನೀಡುವ ನೀರಿನ ಜೊತೆಗೆ ಗೃಹ ಬಳಕೆ ನೀರಿಗೂ ಟ್ಯಾಕ್ಸ್ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಈ ಸಂಬಂಧ ಕರ್ನಾಟಕ ನೀರಾವರಿ (ನೀರಿನ ಕರ ವಿಧಿಸುವಿಕೆ) ನಿಯಮಗಳು 1965 ಕ್ಕೆ ತಿದ್ದುಪಡಿಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಹೊಸ ತೆರಿಗೆ ಪ್ರಕಾರ ಗೃಹ ಬಳಕೆ ನೀರಿಗೆ ಪ್ರತಿ MCFTಗೆ (Million Cubic Feet) 320 ರೂ. ಟ್ಯಾಕ್ಸ್ ಹೆಚ್ಚಳವಾಗಲಿದೆ. ಅದರಂತೆ ಕೈಗಾರಿಕೆಗಳಿಗೆ ಪ್ರತಿ MCFT ಗೆ 3 ಲಕ್ಷ ರೂ. ಟ್ಯಾಕ್ಸ್ ಹೆಚ್ಚಳವಾಗಲಿದೆ ರಾಜ್ಯದಲ್ಲಿ ಬರ ತಾಂಡವವಾಡುವ ಸಮಯದಲ್ಲಿ ಗೃಹ ಉಪಯೋಗಿ ನೀರು ಬಳಕೆಗೆ ಟ್ಯಾಕ್ಸ್ ಹೆಚ್ಚಳ ಬೇಕಿತ್ತಾ ಎಂಬ ಆಕ್ರೋಶ ಶುರುವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ…
Author: AIN Author
ವಿಶ್ವಾದ್ಯಂತ ಪ್ರಭಾಸ್ ಅಭಿನಯದ ಸಲಾರ್ ಚಿತ್ರ ಇಂದು ರಿಲೀಸ್ ಆದ ಬಳಿಕ ಪ್ರಭಾಸ್ ಫ್ಯಾನ್ಸ್ ಥಿಯೇಟರ್‌ಗಳಿಗೆ ಮುಗಿಬೀಳುತ್ತಿದ್ದಾರೆ. ಇದೀಗ ಪ್ರೇಕ್ಷಕರು ಸಲಾರ್ ವಿಮರ್ಶೆಯನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಪ್ರಶಾಂತ್ ನೀಲ್ ಅವರ ನಿರ್ದೇಶನ ಹಾಗೂ ಪ್ರಭಾಸ್ ಅವರ ಅಭಿನಯಕ್ಕಾಗಿ ಹಾಡಿ ಹೊಗಳುತ್ತಿದ್ದಾರೆ. ವ್ಯಾಪಾರ ತಜ್ಞ ಮನೋಬಾಲಾ ವಿ ಅವರು ಸಲಾರ್ ವಿಮರ್ಶೆಯನ್ನು ಬರೆದು, ಪೃಥ್ವಿರಾಜ್ ಸುಕುಮಾರನ್ ಅವರ ನಟನೆಯನ್ನು ಶ್ಲಾಘಿಸಿದರು. ಮನೋಬಾಲಾ ಅವರು ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ, ʻʻಪ್ರಭಾಸ್ ದೇವನಾಗಿ ಮಿಂಚಿದ್ದಾರೆ. ಹ್ಯಾಟ್ರಿಕ್ ಬ್ಲಾಕ್‌ಬಸ್ಟರ್‌ಗಳನ್ನು ನೀಡಿದ ಬಳಿಕ ಪ್ರಶಾಂತ್ ನೀಲ್ ಈ ಸಿನಿಮಾದೊಂದಿಗೆ ಯಶಸ್ಸನ್ನು ಮುಂದುವರಿಸುವಲ್ಲಿ ಗೆದ್ದಿದ್ದಾರೆ. ವರ್ಧರಾಜ ಮನ್ನಾರ್ ಪಾತ್ರಕ್ಕೆ ಪೃಥ್ವಿರಾಜ್ ಸೂಕ್ತವಾಗಿ ಹೊಂದಿಕೆಯಾಗುತ್ತದೆ. ಜಗಪತಿ ಬಾಬು ಅವರು ತಂದೆಯಾಗಿ ಮಿಂಚಿದ್ದಾರೆ. ಹಿನ್ನೆಲೆ ಧ್ವನಿ ಅದ್ಭುತʼʼಎಂದು ಬರೆದುಕೊಂಡಿದ್ದಾರೆ. ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಇದೇ ರೀತಿಯ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ʻʻಪ್ರಭಾಸ್ ಅವರ ಅತ್ಯುತ್ತಮ ಚಿತ್ರಗಳಲ್ಲಿ ಸಲಾರ್ ಕೂಡ ಒಂದಾಗಿದೆ. ಕ್ಲೈಮ್ಯಾಕ್ಸ್ ಖುಷಿ ಕೊಡುತ್ತದೆ. ಪೃಥ್ವಿರಾಜ್ ನಟನೆ ಖುಷಿ ಕೊಡುತ್ತದೆ. ಯಶ್…
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. https://ainlivenews.com/apple-watch-series-9-watch-ultra-2-sales-halt-in-us-why/ ವಿದ್ಯುತ್ ಗುತ್ತಿಗೆದಾರ ಪ್ರದೀಪ್ ಎಂಬುವವರ ಬಳಿ ವಿದ್ಯುತ್ ಕಾಮಗಾರಿಯ ವರ್ಕ್ ಆರ್ಡರ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನಲೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಕಾಮಗಾರಿ ವರ್ಕ್ ಆರ್ಡರ್ ಕೊಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಎಇಇ ರಮೇಶ್ನನ್ನು ಹಿಡಿದಿದ್ದಾರೆ.
ಬೆಂಗಳೂರು: ಅಂದ್ರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ವಿಚಾರಕ್ಕೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇದರ ಬಗ್ಗೆ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ ಖಂಡಿತವಾಗಿ ಈ ರೀತಿ ನಡೆಯಬಾರದು. ಜನರಲ್ಲಿ ಸುತ್ತೋಲೆ ಹೊರಡಿಸುತ್ತೇವೆ ಶಾಲೆಗಳಲ್ಲಿ ಈ ರೀತಿ ಘಟನೆ ನಡೆಯಬಾರದು ಮಕ್ಕಳನ್ನ ಈ ರೀತಿಯ ಕೆಲಸಗಳಿಗೆ ಬಳಸಿಕೊಳ್ಳಬಾರದು ಯಾವ ಉಪಾಧ್ಯಾಯರು ಮಕ್ಕಳ ಬಳಿ ಈ ಕೆಲಸ ಮಾಡಿಸಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಲು ನಾನು ಸೂಚಿಸುತ್ತೇನೆ ಎಂದು ಹೇಳಿದರು.
ಬಳ್ಳಾರಿ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಖಾತೆ ತೆರೆಯುತ್ತಿವೆ. ಗಣಿ ನಾಡು ಬಳ್ಳಾರಿಯಲ್ಲಿ ಕೊರೊನಾ ಪ್ರಕರಣಗಳು (Corona Virus) ಮತ್ತೆ ಕಾಣಿಸಿಕೊಂಡಿದ್ದು, ಜಿಂದಾಲ್ ಉಕ್ಕಿನ ಕಾರ್ಖಾನೆಯು (Jindal Factory) ಗಣಿ ನಾಡಿನ ಜನರ ನಿದ್ದೆ ಕೆಡಿಸಿದೆ. ಹೊರ ರಾಜ್ಯದಿಂದ ಬಂದ ಇಬ್ಬರು ಜಿಂದಾಲ್ʼನ ಉದ್ಯೋಗಿಗಳಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ. ಕಳೆದ ಎರಡು ದಿನಗಳ ಹಿಂದೆ ಜಿಂದಾಲ್ ನ ಇಬ್ಬರು ಉದ್ಯೋಗಿಗಳಿಗೆ ಕೊರೊನಾ ಪಾಸಿಟಿವ್ (COVID Positive) ಬಂದಿದ್ದು, ಇಬ್ಬರನ್ನೂ ಹೋಂ ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗ್ತಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಅವರಿಗೆ ಯಾವ ರೀತಿ ಕೊರೊನಾ ಬಂತು ಅನ್ನೋದರ ಬಗ್ಗೆ ಅವರ ಟ್ರಾವಲ್ ಹಿಸ್ಟರಿ ಸಂಗ್ರಹ ಮಾಡಲು ಮುಂದಾಗಿದೆ. https://ainlivenews.com/apple-watch-series-9-watch-ultra-2-sales-halt-in-us-why/
ಬೆಂಗಳೂರು: ನಗರದ ಅಂದ್ರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ವಿಚಾರ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳನ್ನು ಯಾವ ಕಾರಣಕ್ಕೂ ಆ ರೀತಿ ಮಾಡಿಸಬಾರದು. ಈಗ ನಾನು ವಿಧಾನಸೌಧದಲ್ಲಿ ಸಭೆ ಕರೆದಿದ್ದೇನೆ ನನಗೆ ವಿಚಾರ ಗೊತ್ತಾಗಿದೆ. ಮೂರು ಗಂಟೆಗೆ ಸಭೆ ಕರೆದಿದ್ದು ಅಲ್ಲೆ ಇದರ ಬಗ್ಗೆ ವರದಿ ತರಿಸಿಕೊಳ್ತಿದ್ದೇನೆ ಎಂದು ಹೇಳಿದರು. ನಿನ್ನೆಯೂ ಇದೇ ರೀತಿ ಘಟನೆ ಆದಾಗ ಕಾನೂನು ಕ್ರಮ ಕೈಗೊಂಡಿದ್ದೆವು. ಮಕ್ಕಳಿಗೆ ಶಕ್ತಿಕೊಡುವ ಕೆಲಸ ಮಾಡಬೇಕು ಶಾಲೆಯಲ್ಲಿ ಕಮಿಟಿ ಇದೆ ಸ್ವಚ್ಚತೆ ಮಾಡುವ ಸಂಧರ್ಭದಲ್ಲಿ ಅವರು ಕ್ರಮ ವಹಿಸಬೇಕು ಮಕ್ಕಳನ್ನ ದುರುಪಯೋಗ ಮಾಡೋದನ್ನ ತಡೆಯಬೇಕಿದೆ ಎನ್‌ಎಸ್‌ಎಸ್ ಆ ಜಾಗವನ್ನ ಸ್ವಚ್ಚತೆ ಮಾಡೋದು, ಗಿಡ ನೆಡೋದು ಮಾಡ್ತಿದ್ರು ಈಗ ಶೌಚಾಲಯ ಸ್ವಚ್ಚತೆ ಮಾಡೋದಕ್ಕೆ ಬಿಡೋದಿಲ್ಲ ಮುಂದಕ್ಕೂ ಬಿಡೋದಿಲ್ಲ ಏನು ಕ್ರಮ ಕೈಗೊಳ್ಳಬೇಕು ಮಾಡ್ತೀವಿ ಎಂದು ಹೇಳಿದರು.
ನವದೆಹಲಿ: ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ (Sanjay Singh) ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭಾರತದ ಕುಸ್ತಿಪಟು ಸಾಕ್ಷಿ ಮಲಿಕ್ (Sakshee Malikkh) ಕುಸ್ತಿಗೆ ವಿದಾಯ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ, ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಬ್ಯುಸಿನೆಸ್ ಪಾರ್ಟನರ್ ಹಾಗೂ ಆಪ್ತರಾಗಿರುವ ಸಂಜಯ್ ಸಿಂಗ್ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ನಾನು ಕುಸ್ತಿ ಪಂದ್ಯಗಳಿಂದ ದೂರವಾಗುತ್ತಿದ್ದೇನೆ ಎಂದು ಕಣ್ಣೀರು ಹಾಕುತ್ತಾ ಘೋಷಿಸಿದರು. ಅಲ್ಲದೇ ಇದೇ 2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಸಾಕ್ಷಿ ಮಲಿಕ್ ಕಂಚಿನ ಪದಕ ವಿಜೇತರಾಗಿದ್ದರು. ಕಾಮನ್‌ವೆಲ್ತ್, ಏಷ್ಯನ್ ಗೇಮ್ಸ್ ಪದಕ ವಿಜೇತೆ ವಿನೇಷ್ ಫೋಗಟ್ ಕೂಡಾ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟರು. ಸಂಜಯ್ ಸಿಂಗ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಮಹಿಳಾ ಕುಸ್ತಿ ಪಟುಗಳ ಮೇಲೆ ದೌರ್ಜನ್ಯ ಮುಂದುವರಿಯಲಿದೆ. ನಮಗೆ ನ್ಯಾಯ ಸಿಗುವುದು ಹೇಗೆ ಎಂದು ನಮಗೆ ಗೊತ್ತಾಗುತ್ತಿಲ್ಲ. ನಮ್ಮ ಕುಸ್ತಿ ಭವಿಷ್ಯ ಹೇಗೆ ಎಂಬ ಚಿಂತೆ ಶುರುವಾಗಿದೆ. ಎಲ್ಲಿಗೆ ಹೋಗಬೇಕು ಎಂದು ಗೊತ್ತಾಗುತ್ತಿಲ್ಲ ಎಂದು…
ಬೆಂಗಳೂರು: ಕರ್ತವ್ಯ ಲೋಪ ಹಿನ್ನೆಲೆ ಪುಲಿಕೇಶಿನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮಾನತು ಮಾಡಿ ಆದೇಶ ಹೊರಡಿಸಿದ ನಗರ ಪೊಲೀಸ್ ಆಯುಕ್ತರು. ಸೋಮಶೇಖರ್ ಅಮಾನತ್ತಾದ ಇನ್ಸ್ಪೆಕ್ಟರ್ ಕೋರ್ಟ್ ಆದೇಶವಿದ್ದರೂ ಖಾಸಗಿ ದೂರುಗಳನ್ನ ದಾಖಲು ಮಾಡಿಕೊಳ್ಳದೇ ವಿಳಂಬ ಹಾಗೆ ಆರು ತಿಂಗಳಿನಿಂದ ಎಫ್ಐಆರ್ ಮಾಡದೇ ಬಾಕಿ ಉಳಿಸಿಕೊಂಡಿದ್ದ ಇನ್ಸ್ಪೆಕ್ಟರ್ ಅದೇರೀತಿ ರಾಬರಿ ಪ್ರಕರಣಗಳ ದೂರು ದಾಖಲಿಸಿಕೊಳ್ಳದ ಆರೋಪ ಹೊಂದಿದ್ದರು. ಅಂದಹಾಗೆ ಇನ್ನುಳಿದಂತೆ ಡೈ ರಿ ಮೈಂಟೇನ್ ಮಾಡದ ಆರೋಪ ಹಾಗೆ ಆರು ತಿಂಗಳಿನಿಂದ ಎಫ್ಐಆರ್ ಮಾಡದೇ ಬಾಕಿ ಉಳಿಸಿಕೊಂಡಿದ್ದಆರೋಪವನ್ನು ಸಹ ಹೊತ್ತಿದ್ದರಿಂದ ಅಮಾನತುಗೊಳಿಸಲಾಗಿದೆ.
ನವದೆಹಲಿ: ಎಲ್ ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ ಮಾಡಿ ಕ್ರಿಸ್ಮಸ್ ಮತ್ತು ಹೊಸ ವರ್ಷಕ್ಕೆ ಮುನ್ನವೇ ಗ್ರಾಹಕರಿಗೆ ಸಿಹಿ ಸುದ್ದಿ ಕೊಟ್ಟಿದೆ. ತೈಲ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 39.50 ರೂ. ಇಳಿಕೆ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಪ್ರಸ್ತುತ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್‌ಗೆ 1,757.50 ರೂ. ದರವಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ತಿಂಗಳ ಮೊದಲ ದಿನ ಎಲ್‌ಪಿಜಿ ಸಿಲಿಂಡರ್ ಬೆಲೆ ಸಾಧಾರಣವಾಗಿ ಪರಿಷ್ಕರಣೆಗೊಳ್ಳುತ್ತವೆ. https://ainlivenews.com/apple-watch-series-9-watch-ultra-2-sales-halt-in-us-why/ ಪ್ರಸ್ತುತ ದಿನ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಬೆಂಗಳೂರಿನಲ್ಲಿ 905.50 ರೂ. ಇದೆ. ಉಜ್ವಲ ಯೋಜನೆ ಹೊಂದಿದ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ 300 ರೂ. ಸಬ್ಸಿಡಿ ಸಿಗುತ್ತಿದೆ. ಉಜ್ವಲ ಯೋಜನೆ ಅಡಿ ವರ್ಷಕ್ಕೆ ಒಟ್ಟು 12 ಸಿಲಿಂಡರ್‌ಗಳಿಗೆ ಈ ಸಬ್ಸಿಡಿ ಹಣ ನೀಡಲಾಗುತ್ತದೆ.
ಈ ವಾರ ಬಿಗ್‌ಬಾಸ್ ಮನೆಯಲ್ಲಿ ವ್ಯವಹಾರದ್ದೇ ಮೇನಿಯಾ. ಖರೀದಿ ಮಾರಾಟದ ವ್ಯವಹಾರವೀಗ ಹೊಸದೊಂದು ಮಜಲು ತಲುಪಿದೆ. ಹೌದು,ಇಷ್ಟು ದಿನ ವ್ಯಕ್ತಿಗಳನ್ನು ಖರೀದಿಸುವ, ಟಾಸ್ಕ್‌ಗಳ ಮೂಲಕ ಹಣ ಸಂಪಾದಿಸುವ ಚಟುವಟಿಕೆಯಲ್ಲಿ ಮುಳುಗಿಹೋಗಿದ್ದ ಸದಸ್ಯರಿಗೆ ಬಿಗ್‌ಬಾಸ್ ಹೊಸದೊಂದು ಅವಕಾಶ ನೀಡಿದ್ದಾರೆ. ಅದು ಲಕ್ಷುರಿ ಖರೀದಿಸುವ ಅವಕಾಶ. ಆದರೆ ಮನೆಯ ಸದಸ್ಯರು ಅವರ ಬಳಿ ಇರುವ ಹಣದಿಂದ ದಿನಸಿಗಳನ್ನು ಖರೀದಿಸಬೇಕು. ಯಾರ ಬಳಿ ಇರುವ ಹಣವನ್ನು ದಿನಸಿಗೆ ವ್ಯವಿಸಬೇಕು ಎಂಬಲ್ಲಿ ಮನೆಯ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡಿದೆ. ‘ಲೀಡರ್‍ಗಳ ಬಳಿ ಜಾಸ್ತಿ ಹಣವಿದೆ’ ಎಂದು ವಿನಯ್ ಹೇಳಿದ್ದಾರೆ. ಸಂಗೀತಾ, ‘ಅರ್ಧ ಅರ್ಧ ಶೇರ್ ಮಾಡಿಕೊಳ್ಳೋಣ’ ಎಂದೂ ಹೇಳಿದ್ದಾರೆ. ಆದರೆ ತನಿಷಾ ಅದಕ್ಕೆ ಒಪ್ಪಿಲ್ಲ. ‘ದಿನಸಿ ಬೇಕಾಗಿರುವುದು ಮನೆಯ ಎಲ್ಲ ಸದಸ್ಯರಿಗೆ. ಹಾಗಾಗಿ ಎಲ್ಲರೂ ಹಣ ವ್ಯಯಿಸಬೇಕು’ ಎಂಬುದು ಅವರ ವಾದ. ಈ ಹೊತ್ತಿನಲ್ಲಿ ಮಧ್ಯಪ್ರವೇಶಿಸಿದ ನಮ್ರತಾ ವಿರುದ್ಧವೂ ತನಿಷಾ ಹರಿಹಾಯ್ದಿದ್ದಾರೆ. ಇದರಿಂದ ಮಾತಿಗೆ ಮಾತು ಬೆಳೆದು ಜಗಳ ನಡೆದಿದೆ. ಮನೆಯ ಸದಸ್ಯರ ಭಿನ್ನಾಭಿಪ್ರಾಯದಲ್ಲಿ ಲಕ್ಷುರಿ ಬಜೆಟ್ ಕಳೆದುಕೊಳ್ಳುತ್ತಾರಾ?…