Author: AIN Author

ಕಲಬುರಗಿ: ಭೀಕರ ಬರಗಾಲ ಎದುರಿಸುತ್ತಿರುವ ಬಿಸಿಲೂರು ಕಲಬುರಗಿ ರೈತರಿಗೆ ಇದೀಗ ಬ್ಯಾಂಕ್  ನೋಟೀಸ್ ನೀಡಿದ್ದು ಸಾಲ ಮರುಪಾವತಿ ಮಾಡುವಂತೆ ಸೂಚಿಸಿದೆ.. ಚಿಂಚೋಳಿ ತಾಲೂಕಿನ ರಟಕಲ್ ಸುತ್ತಮುತ್ತಲಿನ ರೈತರಿಗೆ  SBI ಮತ್ತು ಗ್ರಾಮೀಣ ಬ್ಯಾಂಕುಗಳು ನೀಡಿರುವ ನೋಟೀಸ್ ಗೆ ಅನ್ನದಾತರು ಆತಂಕಗೊಂಡಿದ್ದಾರೆ. ಈಗಾಗಲೇ ನೀವು ಪಡೆದಿರುವ ಸಾಲಕ್ಕೆ ಬಡ್ಡಿ ಹೆಚ್ಚಾಗಿದೆ ಹೀಗಾಗಿ ಒನ್ ಟೈಂ ಸೆಟ್ಲಮೆಂಟ್ ಮಾಡೋಣ ಸಾಲ ಪಾವತಿಸಲು ಬನ್ನಿ ಅಂತ ಪತ್ರದಲ್ಲಿ ಉಲ್ಲೇಖಿಸಲಾಗಿದೆ..ಈ ಬಗ್ಗೆ ಆಕ್ರೋಶ ಹೊರಹಾಕಿರುವ ಅನ್ನದಾತರು ಸಾಲ ಕಟ್ತೇವೆ ಆದ್ರೆ ಈಗ ಆಗಲ್ಲ ಏನ್ ಮಾಡ್ತೀರೋ ಮಾಡ್ಕಳ್ಳಿ ಅಂತ ಕಡ್ಡಿ ಮುರದಂಗೆ ಹೇಳಿದ್ದಾರೆ.

Read More

ಚಾಮರಾಜನಗರ: ನೆರೆಯ ಕೇರಳದಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕೇರಳದಿಂದ ಬರುವ ಪ್ರತಿಯೊಬ್ಬ ಪ್ರಯಾಣಿಕರನ್ನು ಆರೋಗ್ಯ ಇಲಾಖೆಯಿಂದ ತಪಾಸಣೆಗೆ ಗುರಿಪಡಿಸಲಾಗುತ್ತಿದೆ. ಕೊರೊನಾ ವೈರಸ್ ಹರಡದಂತೆ ಜಾಗೃತಿ ಮೂಡಿಸಲು ಯತ್ನಿಸಲಾಗುತ್ತಿದ್ದು, https://ainlivenews.com/can-diabetics-eat-dates-here-is-useful-information/  ಕೇರಳಕ್ಕೆ ಸನಿಹದಲ್ಲಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಿಲಾಗಿದೆ. ಮಾರಕ ಕೊರೊನಾ ವೈರಸ್ ಕೇರಳದ ಮೂಲಕ ಭಾರತಕ್ಕೂ ಕಾಲಿಟ್ಟಿದೆ. ಕೇರಳದಲ್ಲಿ ಕೊರೋನಾ ರೂಪಾಂತರ  Jn1 ಪತ್ತೆ ಹಾಗೂ ಸೋಂಕಿಗೆ ಇಬ್ಬರು ಬಲಿ ಹಿನ್ನಲೆ ಕಟ್ಡೆಚ್ಚರ ವಹಿಸಲಾಗಿದೆ.

Read More

ಬೆಂಗಳೂರು: ರಾಜ್ಯದಲ್ಲಿ ಕೊರೋನ ಮಹಾಮಾರಿ ಮತ್ತೆ ಆಗಮನವಾಗಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನಕ್ಕೂ ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲೂ ಪ್ರಕರಣಗಳು ಹೆಚ್ಚಾಗುತ್ತಲಿದ್ದು,ಕೆ ಸಿ ಜನರಲ್ ರಾಜೀವ್ ಗಾಂಧಿ ಆಸ್ಪತ್ರೆಯಲ್ಲೂ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ಈ ಕುರಿತ ಒಂದು ರಿಪೋರ್ಟ್ ಇಲ್ಲಿದೆ. ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಾಗೂ ಬೆಂಗಳೂರಿನಲ್ಲಿ ಕೋವಿಡ್‌ jn 1 ಹೂಸ ತಳಿಯಿಂದಾಗಿ ಕಳೆದ ಮೂರು ದಿನಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಪ್ರಸ್ತುತ ರಾಜ್ಯಧಲ್ಲಿ 105 Active COVID Case ಗಳಲ್ಲಿ 93 ಬೆಂಗಳೂರು ನಗರದಲ್ಲಿ ಇದೆ. ಬೆಂಗಳೂರು ನಗರದಲ್ಲಿ 1000 ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ.Co-morbidity ಇರುವವರು, ಒಂದೇ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಪ್ರಕರಣಗಳು ವರದಿಯಾದ ಸಂದರ್ಭದಲ್ಲಿ, ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದವರ ಜಿನೋಮ್‌ ಸಿಕ್ವೆನ್ಸಿಂಗ್‌ ಮಾಡಲಾಗುತ್ತಿದೆ. ಹಿಂದಿನ ಕೋವಿಡ್‌ ಅಲೆಗಳ ಸಂದರ್ಭದಲ್ಲಿ ನಡೆದ ತಪ್ಪುಗಳು ಈ ಬಾರಿ ಆಗಬಾರದು. ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ಗಳು ಯಾವುದಕ್ಕೂ ತೊಂದರೆ ಆಗಬಾರದು. ಕಳೆದ ಬಾರಿ ತೊಂದರೆ ಆಗಿ ಹಲವಾರು ಜನ ಮೃತಪಟ್ಟರು. ಆಕ್ಸಿಜನ್‌…

Read More

ಪರ್ಲ್‌: ಸಂಜು ಸ್ಯಾಮ್ಸನ್‌ ಅವರ ಚೊಚ್ಚಲ ಶತಕ ಹಾಗೂ ಅರ್ಷ್‌ದೀಪ್‌ ಸಿಂಗ್‌ ಶಿಸ್ತುಬದ್ಧ ಬೌಲಿಂಗ್‌ ದಾಳಿಯ ನೆರವಿನಿಂದ ಭಾರತ ತಂಡ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 78 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಮುಡಿಗೇರಿಸಿಕೊಂಡಿದೆ. ಈ ಸರಣಿ ಗೆಲುವು ಕೆ.ಎಲ್‌ ರಾಹುಲ್‌ ನಾಯಕತ್ವಕ್ಕೆ ಮತ್ತಷ್ಟು ಬಲ ನೀಡಿದೆ. ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅವರ ಬಳಿಕ ದಕ್ಷಿಣ ಆಫ್ರಿಕಾದಲ್ಲಿ ಹರಿಣರ ವಿರುದ್ಧ ಸರಣಿ ಗೆದ್ದ ಟೀಂ ಇಂಡಿಯಾದ 2ನೇ ನಾಯಕ ಎಂಬ ಖ್ಯಾತಿಯನ್ನೂ ರಾಹುಲ್‌ ಗಳಿಸಿದ್ದಾರೆ. ಇದರೊಂದಿಗೆ ಲೆಜೆಂಡ್‌ ಎಂ.ಎಸ್‌ ಧೋನಿ ಅವರ ಟ್ರೆಂಡನ್ನೇ ಮುಂದುವರಿಸಿ ಅಭಿಮಾನಿಗಳ ಮೆಚ್ಚುಗೆಗೂ ಪಾತ್ರರಾಗಿದ್ದಾರೆ. ಗಣ್ಯರಿಂದ ಸರಣಿ ಟ್ರೋಫಿ ಪಡೆಯುತ್ತಿದ್ದಂತೆ ಅದನ್ನು ಸಹ ಆಟಗಾರ ರಿಂಕು ಸಿಂಗ್‌ಗೆ ನೀಡಿದ್ದಾರೆ. ಗ್ರೂಪ್‌ ಫೋಟೋ ತೆಗೆಸಿಕೊಳ್ಳುವಾಗಲು ಕೆ.ಎಲ್‌ ರಾಹುಲ್‌ ಕೊನೆಯಲ್ಲಿ ನಿಂತು ಸಹ ಆಟಗಾರರೊಂದಿಗೆ ಸಂಭ್ರಮಿಸಿದ್ದಾರೆ. ಇದು ಧೋನಿ ಅಭಿಮಾನಿಗಳಿಂದಲೂ ಮೆಚ್ಚುಗೆಗೆ…

Read More

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ನಿವಾಸಕ್ಕೆ ನಟ ಸುದೀಪ್ (Sudeep) ಭೇಟಿ ನೀಡಿದ್ದಾರೆ. ಈ ವೇಳೆ ಸುಮಾರು ಅರ್ಧ ಗಂಟೆಗಳಿಗೂ ಹೆಚ್ಚಿನ ಕಾಲ ಗೃಹ ಸಚಿವರೊದಿಗೆ ಅವರು ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸದೆ ತೆರಳಿದ್ದಾರೆ. ಇನ್ನು ಸುದೀಪ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಜಿ.ಪರಮೇಶ್ವರ್, ಚಲನಚಿತ್ರ ಉದ್ಯಮದವರೆಲ್ಲ ಸೇರಿ ಕ್ರಿಕೆಟ್ ಮ್ಯಾಚ್ ಆಡುವ ಸಂಬಂಧ ಆಹ್ವಾನ ಕೊಡಲು ಬಂದಿದ್ದರು ಎಂದು ತಿಳಿಸಿದ್ದಾರೆ. 23, 24 ಹಾಗೂ 25ರಂದು ಮೂರು ದಿನಗಳ ಕಾಲ ಕ್ರಿಕೆಟ್ (Cricket) ಪಂದ್ಯಾವಳಿಗಳು ಆಡಲಿದ್ದಾರೆ. ಇದರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟರ್ಸ್ ಕೂಡ ಭಾಗಿಯಾಗುತ್ತಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬರಬೇಕು ಎಂದು ಆಹ್ವಾನ ನೀಡಿದ್ದಾರೆ ಎಂದಿದ್ದಾರೆ.

Read More

ಕೊಡಗು: ಸುಮಾರು 380 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಕೊಡಗು ಜಿಲ್ಲಾ ಪೊಲೀಸ್ ಘಟಕದ ಶ್ವಾನ ದಳ ವಿಭಾಗದ ಲಿಯೋ ಅನಾರೋಗ್ಯದಿಂದ ಮೃತಪಟ್ಟಿದೆ. ಲಿಯೋ 2013 ನೇ ಫೆ.26 ರಿಂದ 10 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿದೆ. ತನ್ನ ಸೇವಾ ಅವಧಿಯಲ್ಲಿ ವಿವಿಧ ಪೊಲೀಸ್ ಠಾಣೆಯಲ್ಲಿ ವರದಿಯಾದ ಕ್ಲಿಷ್ಟಕರ ಪ್ರಕರಣಗಳ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. 380 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಲಿಯೋ 46 ಅಪರಾದಿಗಳನ್ನು ಪತ್ತೆ ಮಾಡಿದೆ. 22 ಪ್ರಕರಣಗಳಲ್ಲಿ ಅಪರಾಧಿಗಳ ಸುಳಿವು ನೀಡಿದೆ. 2018 ನೇ ಸಾಲಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಭೂಕಸಿತದಿಂದ ನಾಪತ್ತೆಯಾದ ನಾಲ್ವರ ಮೃತ ದೇಹಗಳನ್ನು ಪತ್ತೆ ಮಾಡಿದೆ. ಚೆಕ್ ಪೋಸ್ಟ್ಗಳಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಪ್ರಕರಣವನ್ನು ಬಯಲಿಗೆಳೆದಿದೆ. https://ainlivenews.com/have-you-heard-about-the-mouth-growing-in-the-sheeps-ears/ ಪೊಲೀಸ್ ಸಿಬ್ಬಂದಿಗಳಾದ ಮನಮೋಹನ.ಬಿ.ಪಿ ಹಾಗೂ ಶಿವ.ಎಂ.ಆರ್ ಅವರುಗಳು ಲಿಯೋನ ಹ್ಯಾಂಡ್ಲರ್‌ಗಳಾಗಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಮೃತ ಲಿಯೋಗೆ ಅಂತಿಮ ಗೌರವ ಸಲ್ಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್,…

Read More

ಉಡುಪಿ: ಪ್ರಥಮ ಪಿಯುಸಿ ವಿದ್ಯಾರ್ಥಿ (PUC Student) ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಅಫ್ಕಾರ್ (17) ಮೃತಪಟ್ಟ ವಿದ್ಯಾರ್ಥಿ. ಈತ ಉಡುಪಿ (Udupi) ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜು ವಿದ್ಯಾರ್ಥಿಯಾಗಿದ್ದಾನೆ. https://ainlivenews.com/sore-throat-cough-problem-in-winter-make-these-things-and-drink-tea/ ಅಫ್ಕಾರ್, ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದನು. ಅಂತೆಯೇ ಡಿಸೆಂಬರ್ 6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ. ಡಿ.18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಮನೆಗೆ ಮರಳಿದ್ದ. ಊರಿಗೆ ಹಿಂದಿರುಗಿದ ಸಂದರ್ಭ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಹೀಗಾಗಿ ಮತ್ತೆ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಅಫ್ಕಾರ್ ಮೃತಪಟ್ಟಿದ್ದಾನೆ.

Read More

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Corona Virus) ಭೀತಿ ಮತ್ತೆ ಶುರುವಾಗಿದ್ದು, ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರದಲ್ಲಿ ಮೊದಲ ಕೇಸ್ ಪತ್ತೆಯಾಗಿದೆ. ದೇವನಹಳ್ಳಿ ತಾಲೂಕಿನ ನಲ್ಲೂರು ಬಳಿ ಮಗುವಿಗೂ ಕೊರೊನಾ ವಕ್ಕರಿಸಿದೆ. ಸ್ಪರ್ಶ ಮಕ್ಕಳಧಾಮದಲ್ಲಿದ್ದ ಮಗುವಿಗೆ ಕೊರೊನಾ ಪಾಸಿಟಿವ್ (Corona Positive For Baby) ಇರುವುದು ದೃಢವಾಗಿದೆ. ಜ್ವರ, ಕೆಮ್ಮು ಅಂತ ಟೆಸ್ಟ್ ಮಾಡಿಸಿದಾಗ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ಸದ್ಯ ತೀವ್ರ ಉಸಿರಾಟದ ತೊಂದರೆ (ಸಾರಿ) ಕೇಸ್ ಹಿನ್ನೆಲೆ ತಾಲೂಕು ಆಸ್ಪತ್ರೆಯಲ್ಲಿ ಮಗುವನ್ನು ಐಸೋಲೆಷನ್‍ನಲ್ಲಿ ಇರಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಡಿ.ಸಿ ಶಿವಶಂಕರ್ ಹೇಳಿದ್ದಾರೆ. ಸ್ವರ್ಶ ಮಕ್ಕಳ ಧಾಮದಲ್ಲಿ ಮೊದಲ‌ ಕೊರೊನಾ ಕೇಸ್ ಹಿನ್ನೆಲೆಯಲ್ಲಿ ಮಕ್ಕಳ ಧಾಮದ 21 ಮಂದಿ ಮಕ್ಕಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಟೆಸ್ಟಿಂಗ್ ಮಾಡಲಾಗಿದೆ. ಗಂಟಲು ದ್ರವ ಸ್ಯಾಂಪಲ್ ಪಡೆದು ಅಧಿಕಾರಿಗಳು ಟೆಸ್ಟಿಂಗ್ ಗೆ ಕಳುಹಿಸಿದ್ದು, ಸಂಜೆ ರಿಪೋರ್ಟ್‌ ಬರಲಿದೆ

Read More

ವಿಶ್ವಾದ್ಯಂತ ಅದ್ಧೂರಿಯಾಗಿ ಪ್ರಶಾಂತ್‌ ನೀಲ್‌-ಪ್ರಭಾಸ್‌ ಕಾಂಬಿನೇಶನ್‌ನ ‘ಸಲಾರ್‌’ ತೆರೆ ಕಾಣುತ್ತಿದೆ. ಕರ್ನಾಟಕದಲ್ಲಿ ಸಲಾರ್ ಕ್ರೇಜ್ ಈಗಾಗಲೇ ಶುರುವಾಗಿದೆ. ಥಿಯೇಟರ್ ಅಂಗಳದಲ್ಲಿ ಸಲಾರ್ ಕಟೌಟ್ಸ್ ರಾರಾಜಿಸುತ್ತಿವೆ. ಪ್ಯಾನ್ ಇಂಡಿಯಾ ಭಾಷೆಯಲ್ಲಿ ಸಲಾರ್‌ ರಿಲೀಸ್‌ ಆಗುತ್ತಿವೆ. ಸಲಾರ್ ಕನ್ನಡ ವರ್ಷನ್ ಸಂತೋಷ್ ಥಿಯೇಟರ್‌ನಲ್ಲಿ ಬಿಡುಗಡೆಗೊಳ್ಳುತ್ತಿದೆ. ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದಲ್ಲಿ ರೆಬೆಲ್ ಸ್ಟಾರ್ ಪ್ರಭಾಸ್ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಈ ಸಿನಿಮಾದ ಮೊದಲ ಶೋಗಳು ಅಮೆರಿಕದಲ್ಲಿ ನಡೆದಿದೆ. ಮೊದಲಿನಿಂದಲೂ ಈ ಸಿನಿಮಾ ಸಾಕಷ್ಟು ಕ್ರೇಜ್ ಹುಟ್ಟುಹಾಕಿತ್ತು. ಹೈದರಾಬಾದ್‌ನ ಕೆಲವು ಥಿಯೇಟರ್‌ಗಳಲ್ಲಿ ಆಫ್‌ಲೈನ್‌ನಲ್ಲಿ ಟಿಕೆಟ್ ಖರೀದಿಸಲು ಜನರು ಮುಗಿಬಿದ್ದರು. ಅವರನ್ನು ನಿಯಂತ್ರಿಸಲು ಪೊಲೀಸರ ದಂಡೇ ಬರೆಬೇಕಾಯಿತು. ಬಾಹುಬಲಿ ನಂತರ ಪ್ರಭಾಸ್‌ಗೆ ನಿರೀಕ್ಷಿತ ಯಶಸ್ಸು ಸಿಗದ ಕಾರಣ ತೆಲುಗು ಪ್ರೇಕ್ಷಕರು ಈ ಸಿನಿಮಾ ಸೂಪರ್‌ ಹಿಟ್‌ ಆಗಲೆಂದು ಕಾಯುತ್ತಿದ್ದಾರೆ. ಸಲಾರ್ ಮೊದಲ ಶೋನಿಂದಲೇ ಚಿತ್ರಕ್ಕೆ ಪಾಸಿಟಿವ್ ರೆಸ್ಪಾನ್ಸ್ ಸಿಗುತ್ತಿದೆ. ಮೊದಲೇ ನಿರೀಕ್ಷಿಸಿದಂತೆ ಇದು ಡಾರ್ಲಿಂಗ್ ಪ್ರಭಾಸ್‌ಗೆ ಮಾಸ್ ಕಮ್ ಬ್ಯಾಕ್ ಎಂದು ನೆಟಿಜನ್‌ಗಳು…

Read More

ವಾಷಿಂಗ್ಟನ್:  ಅಲಬಾಮಾದ 32 ವರ್ಷದ ಮಹಿಳೆ ಈಗ ಎರಡು ಗರ್ಭಾಶಯಗಳೊಂದಿಗೆ ಜನಿಸಿ  ಎರಡರಲ್ಲೂ ಗರ್ಭಿಣಿಯಾಗಿದ್ದಾರೆ. ಕೆಲ್ಸಿ ಹ್ಯಾಚರ್ ತನ್ನ ಇನ್ಸ್ಟಾಗ್ರಾಮ್ ಖಾತೆ “ಡಬಲ್ ಹ್ಯಾಚ್ಲಿಂಗ್ಸ್” ನಲ್ಲಿ ತನ್ನ ಕಥೆಯನ್ನು ದಾಖಲಿಸುತ್ತಿದ್ದಾರೆ. 17 ನೇ ವಯಸ್ಸಿನಿಂದ ಅವಳು “ಯುಟರ್ಸ್ ಡಿಡೆಲ್ಫಿಸ್” ಅನ್ನು ಹೊಂದಿದ್ದಾಳೆ ಎಂದು ಗೊತ್ತಾಗಿತ್ತು ಡಬಲ್ ಗರ್ಭಾಶಯವನ್ನು ಹೊಂದಿರುವ ಅಪರೂಪದ ಸ್ಥಿತಿಯು ಸುಮಾರು 0.3 ಪ್ರತಿಶತದಷ್ಟು ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಎಂದು ಭಾವಿಸಲಾಗಿದೆ. ಮೇ ತಿಂಗಳಲ್ಲಿ ಎಂಟು ವಾರಗಳ ಅಲ್ಟ್ರಾಸೌಂಡ್ ಚೆಕ್ ಅಪ್ ಸಮಯದಲ್ಲಿ ಮಸಾಜ್ ಥೆರಪಿಸ್ಟ್ ಮತ್ತು ಮೂರು ಮಕ್ಕಳ ತಾಯಿಯಾದ ಕೆಲ್ಸಿ ಹ್ಯಾಚರ್ ಗೆ ಅವಳಿ ಮಕ್ಕಳು ಇದೆ ಎಂಬುದು ಗೊತ್ತಾಗಿದೆ. ನಮಗೆ ಅಚ್ಚರಿಯಾಯಿತು.ಆ ಮೊದಲ ಅಲ್ಟ್ರಾಸೌಂಡ್ ಸಮಯದಲ್ಲಿ ನಾವು ಬಿದ್ದು ಬಿದ್ದು ನಕ್ಕೆವು ಎಂದು ಅವರು Instagram ಪೋಸ್ಟ್‌ನಲ್ಲಿ ಬರೆದಿದ್ದಾರೆ. https://ainlivenews.com/sore-throat-cough-problem-in-winter-make-these-things-and-drink-tea/ ಇದು ಹೇಗಾಗಿದೆ ಎಂದರೆ ಆಕೆ ಪ್ರತ್ಯೇಕವಾಗಿ ಅಂಡೋತ್ಪತ್ತಿ ಮಾಡಿದ್ದಾಳೆ. ಪ್ರತಿ ಫಾಲೋಪಿಯನ್ ಟ್ಯೂಬ್‌ನಿಂದ ಒಂದು ಅಂಡಾಣು ಕೆಳಗೆ ಬಂದಿತು, ಅಂದರೆ ಗರ್ಭಾಶಯದ ಪ್ರತಿ…

Read More