Author: AIN Author

ಗೀತಾ ಜಯಂತಿ,ವರ್ಷದ ಅಂತ್ಯಂತ ಕಡಿಮೆ ದಿನ,ಮೋಕ್ಷದ ಏಕಾದಶಿ ಸೂರ್ಯೋದಯ: 06.37 AM, ಸೂರ್ಯಾಸ್ತ : 05.59 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ದಶಮಿ 08:16 AM ತನಕ ನಂತರ ಏಕಾದಶಿ ನಕ್ಷತ್ರ: ಇವತ್ತು ಅಶ್ವಿನಿ 09:36 PM ತನಕ ನಂತರ ಭರಣಿ ಯೋಗ: ಇವತ್ತು ಪರಿಘ 11:11 AM ತನಕ ನಂತರ ಶಿವ ಕರಣ: ಇವತ್ತು ಗರಜ 08:16 AM ತನಕ ನಂತರ ವಣಿಜ 07:42 PM ತನಕ ನಂತರ ವಿಷ್ಟಿ ರಾಹು ಕಾಲ: 10:30 ನಿಂದ 12:00 ವರೆಗೂ ಯಮಗಂಡ: 03:00 ನಿಂದ 04:30 ವರೆಗೂ ಗುಳಿಕ ಕಾಲ: 07:30 ನಿಂದ 09:00 ವರೆಗೂ ಅಮೃತಕಾಲ: 02.34 PM to 04.07 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:52 ನಿಂದ ಮ.12:36 ವರೆಗೂ ಮೇಷ ರಾಶಿ: ಷರತ್ತುಗಳಿಗೆ ಸಹಿ ಮಾಡಬೇಡಿ, ನೂತನ ಉದ್ಯೋಗ ದೊರೆತು…

Read More

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ  ಇತ್ತಿಚ್ಚೆಗಷ್ಟೆ ಲೋಕಾರ್ಪಣೆಗೊಂಡ ವಿಮಾನ ನಿಲ್ದಾಣ ಮುಖಟಮಣಿಯಾಗಿದೆ. ವಿಮಾನ ಯಾನ ಆರಂಭವಾದಗಿಂದ ಜನರಿಂದ ಉತ್ತಮ ಪ್ರತಿಕ್ರೀಯೆ ವ್ಯಕ್ತವಾಗಿದೆ. 80 ಆಸನವುಳ್ಳ ವಿಮಾನದಲ್ಲಿ ಕನಿಷ್ಠ ಏನಿಲ್ಲವೆಂದರೂ 60 ಕ್ಕಿಂತ ಹೆಚ್ಚು ಆಸನಗಳು ಮುಂಗಡವಾಗಿ ಬುಕ್ಕಿಂಗ್ ಆಗಿರುವುದು ಏರ್ ಲೈನ್ ಗೆ ವ್ಯಕ್ತವಾಗಿರುವ ಅಭೂತಪೂರ್ವ ಪ್ರತಿಕ್ರೀಯೆಯಾಗಿದೆ. ಆದರೆ ವಿಮಾನ ನಿಲ್ದಾಣದಲ್ಲಿ ಕೆಲವು ತಾಂತ್ರಿಕ ದೋಷಗಳಿಂದಾಗಿ ವಿಮಾನ ಲ್ಯಾಂಡಿಂಗ್ ಆಗುವುದು ಮತ್ತು ಟೇಕ್ ಆಫ್ ಆಗುತ್ತಿರುವುದು ವಿಳಂಬವಾಗುತ್ತಿದೆ. ಇದರಿಂದ ಪ್ರಯಾಣಿಕರು ಬೇಸರ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಬಹುದಿನ ನಿರೀಕ್ಷೆ ಯಾಗಿದ್ದ ಅಂತರಾಷ್ಟ್ರೀಯ ಗುಣಮಟ್ಟದ ವಿಮಾನ ನಿಲ್ದಾಣವೇನೋ ಲೋಕಾರ್ಪಣೆಗೊಂಡು ಅರ್ದ ವರ್ಷವೇ ಕಳೆದಿದೆ. ಜನರ ನಿರೀಕ್ಷೆಯಂತೆ ಹೈಟೆಕ್ ಸ್ಪರ್ಷ ಪಡೆದಿರುವ ವಿಮಾನ ನಿಲ್ದಾಣದಲ್ಲಿ ಕೆಲವು ನ್ಯೂನ್ಯತೆಗಳಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಚಳಿಗಾಲದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಟೇಕಾಫ್ ಆಗುವುದು ಮತ್ತು ಲ್ಯಾಂಡಿಂಗ್ ಆಗುವುದು ಕಷ್ಟವಾಗಿದೆ. ಅತಿಯಾದ ಮಂಜುಕವಿದ ವಾತಾವರಣ ವಿಮಾನ ಯಾನಕ್ಕೆ ಅಡ್ಡಿಯಾಗಿದೆ. https://ainlivenews.com/sore-throat-cough-problem-in-winter-make-these-things-and-drink-tea/ ಮೊದಲೇ ಭದ್ರಾ…

Read More

ಮಲಬದ್ಧತೆ ಸಮಸ್ಯೆ ಇರುವವರು ಜೋಳದ ರೊಟ್ಟಿಯನ್ನು ತಿನ್ನಬಹುದೇ ಎಂಬ ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಮಾಹಿತಿ. ಇದರಲ್ಲಿ ಕ್ಯಾಲ್ಸಿಯಂ, ಪೊಟ್ಯಾಶಿಯಂ, ರಂಜಕ, ಕಬ್ಬಿಣ, ಪ್ರೋಟೀನ್ ಸೇರಿದಂತೆ ಹಲವು ಪೋಷಕಾಂಶವಿದ್ದು, ಇದು ನಿಮ್ಮ ರೋಗಗಳಿಂದ ರಕ್ಷಿಸುತ್ತದೆ. ಇದು ನಿಮ್ಮ ಮೂಳೆಗಳನ್ನು ಗಟ್ಟಿಗೊಳಿಸುತ್ತದೆ. ಇದರಲ್ಲಿ ಸಾಕಷ್ಟು ಫೈಬರ್ ಅಂಶ ಇರುವುದರಿಂದ ಇದು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಕಾಡುವುದಿಲ್ಲ. ಅಲ್ಲದೇ ಇದರಲ್ಲಿ ನಾರಿನಾಂಶ ಸಮೃದ್ಧವಾಗಿರುವ ಕಾರಣ ಇದು ನಿಮ್ಮ ಹೊಟ್ಟೆಯನ್ನು ದೀರ್ಘಕಾಲ ತುಂಬಿರುವಂತೆ ಮಾಡುತ್ತದೆ. ಇದರಿಂದ ನಿಮ್ಮ ತೂಕ ನಿಯಂತ್ರಣಕ್ಕೆ ಬರುತ್ತದೆ. ಇದರಲ್ಲಿ ಮೆಗ್ನೀಶಿಯಂ ಮತ್ತು ಪೊಟ್ಯಾಶಿಯಂ ಸಮೃದ್ಧವಾಗಿದ್ದು, ಇದು ಹೃದಯವನ್ನು ಆರೋಗ್ಯವಾಗಿಡುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ

Read More

ಪ್ರಸ್ತುತ ಜೀವನದಲ್ಲಿ ಅನೇಕ ಜನರು ಎದುರಿಸುತ್ತಿರುವ ಸಮಸ್ಯೆ ಮಧುಮೇಹ. ಇಂದಿನ ದಿನಗಳಲ್ಲಿ ಮಕ್ಕಳಲ್ಲೂ ಕಂಡು ಬರುತ್ತಿದೆ. ವಂಶಪಾರಂಪರ್ಯವಾಗಿ ಬರುವ ಸಮಸ್ಯೆಗಳಲ್ಲಿ ಇದೂ ಕೂಡ ಒಂದು. ಅದೇ ರೀತಿ, ಅಸಮರ್ಪಕ ಜೀವನಶೈಲಿಯಿಂದ ಕೂಡ ಈ ಸಮಸ್ಯೆ ಉಂಟಾಗುತ್ತದೆ. ಈ ಸಮಸ್ಯೆ ಉಂಟಾದಾಗ, ಅದನ್ನು ತ್ವರಿತವಾಗಿ ನಿಯಂತ್ರಿಸಬೇಕು. ಇಲ್ಲದಿದ್ದರೆ, ಇದು ಇತರ ಅಂಗಗಳ ಮೇಲೆ ಪರಿಣಾಮ ಬೀರುತ್ತದೆ. ಸಿಹಿ ಇರುವ ಪದಾರ್ಥಗಳನ್ನು ಹೆಚ್ಚಾಗಿ ತಿನ್ನುವುದರಿಂದ ಈ ಸಮಸ್ಯೆ ಹೆಚ್ಚುತ್ತದೆ ಎಂಬ ವಾದವಿದೆ. ಖರ್ಜೂರವು ಸಿಹಿಯಾಗಿರುತ್ತದೆ. ಆದರೂ ಕೂಡಾ ಮಧುಮೇಹ ಇರುವವರು ಇದನ್ನು ತಿನ್ನಬಹುದು. ಇದು 43 ರಿಂದ 55 ಪ್ರತಿಶತದಷ್ಟು ಗ್ಲೈಸೆಮಿಕ್ ಇಂಡೆಕ್ಸ್ ಇರುತ್ತದೆ. ಆದ್ದರಿಂದ, ರಕ್ತದಲ್ಲಿನ ಗ್ಲೂಕೋಸ್ ಮಟ್ಟವು ತ್ವರಿತವಾಗಿ ಏರುವುದಿಲ್ಲ. ಆದ್ದರಿಂದ, ಅವುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶವು ಮಧುಮೇಹ ರೋಗಿಗಳಿಗೆ ಸಹಾಯ ಮಾಡುತ್ತದೆ. ಸುಮಾರು 100 ಗ್ರಾಂ ಖರ್ಜೂರದಲ್ಲಿ 8 ಗ್ರಾಂ ಫೈಬರ್ ಇರುತ್ತದೆ. ಖರ್ಜೂರವು ಸಿಹಿಯಾಗಿದ್ದರೂ, ಅದರಲ್ಲಿ ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತವೆ. ಇದರಿಂದ ಮಧುಮೇಹ ಸಮಸ್ಯೆಗೆ ಯಾವುದೇ ತೊಂದರೆಯಾಗುವುದಿಲ್ಲ.…

Read More

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಟಿಕೆಟ್‌ ಆಕಾಂಕ್ಷಿಯೂ ನಾನಲ್ಲ. ಅದರ ಬಗ್ಗೆ ನನಗೆ ಆಸಕ್ತಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಈ ಹಿಂದೆಯೂ ಹೇಳಿದ್ದೇನೆ. ನಾನು ಲೋಕಸಭೆ ಚುನಾವಣೆ ಟಿಕೆಟ್‌ ಆಕಾಂಕ್ಷಿ ಅಲ್ಲ ಎಂದರು. https://ainlivenews.com/sore-throat-cough-problem-in-winter-make-these-things-and-drink-tea/ ಹಿಂದಿನ ಸರ್ಕಾರದ ಅವಧಿಯಲ್ಲಿ ಆರಂಭವಾಗಿರುವ ಏಳು ವಿಶ್ವವಿದ್ಯಾಲಯಗಳನ್ನು ಅನುದಾನದ ಕೊರತೆ ನೆಪದಲ್ಲಿ ಮುಚ್ಚುವ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಬೊಮ್ಮಾಯಿ, ಹೊಸ ಸರ್ಕಾರ ಬಂದು ಬೆಳಗಾವಿಯಲ್ಲಿ ಪ್ರಥಮ ಅಧಿವೇಶನ ನಡೆಸುವ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಚರ್ಚೆ ಮತ್ತು ಸಮರ್ಪಕವಾಗಿ ಉತ್ತರವನ್ನು ಉತ್ತರ ಕರ್ನಾಟಕದ ಜನರು ನಿರೀಕ್ಷೆ ಮಾಡಿದ್ದರು. ಆದರೆ, ಯಾವುದೇ ವಿಶೇಷವಾಗಿರುವ ಅಭಿವೃದ್ಧಿ ಪರ ನಿರ್ಣಯಗಳನ್ನು ಸರ್ಕಾರ ಘೋಷಿಸದೇ ಈಗಾಗಲೇ ಇರುವಂತಹ ಕಾರ್ಯಕ್ರಮಗಳನ್ನು ಪುನಃ ಘೋಷಿಸಿ ಜನರ ನಿರೀಕ್ಷೆಯನ್ನು ಹುಸಿಗೊಳಿಸಿದ್ದೀರಿ ಎಂದಿದ್ದಾರೆ.  

Read More

ನವದೆಹಲಿ:- ಇನ್ನು ಮುಂದೆ ಯುಐಡಿಎಐ ಬದಲು ರಾಜ್ಯ ಸರ್ಕಾರವು ಆಧಾರ್‌ ನೋಂದಣಿಯ ಸಂಪೂರ್ಣ ಪರಿಶೀಲನೆ ನಡೆಸಲಿದೆ. ಈ ಕಾರ್ಯಕ್ಕಾಗಿ, ರಾಜ್ಯ ಸರ್ಕಾರವು ಜಿಲ್ಲಾ ಮತ್ತು ಉಪ-ವಿಭಾಗೀಯ ಮಟ್ಟದಲ್ಲಿ ನೋಡಲ್ ಅಧಿಕಾರಿಗಳು ಮತ್ತು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟರ್‌ಗಳನ್ನು ನೇಮಿಸುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 18 ವರ್ಷಕ್ಕಿಂತ ಮೇಲ್ಪಟ್ಟವರು ನಿಗದಿಪಡಿಸಿದ ಕೇಂದ್ರಗಳಲ್ಲಿ ಆಧಾರ್ ಕಾರ್ಡ್‌ ಪಡೆಯಬಹುದು. ಪ್ರತಿ ಜಿಲ್ಲೆಯ ಮುಖ್ಯ ಅಂಚೆ ಕಚೇರಿ ಮತ್ತು ಯುಐಡಿಎಐ ನಿರ್ದಿಷ್ಟಪಡಿಸಿದ ಇತರ ಆಧಾರ್ ಕೇಂದ್ರಗಳಲ್ಲಿಯೂ ಈ ಸೌಲಭ್ಯ ದೊರೆಯಲಿದೆ. ಆಧಾರ್ ಅರ್ಜಿಗಳನ್ನು ಸೇವಾ ಪೋರ್ಟಲ್ ಸ್ವೀಕರಿಸುವ ಮೊದಲು ಡೇಟಾ ಗುಣಮಟ್ಟ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಎಲ್ಲ ಅಪ್ಲಿಕೇಷನ್‌ನ ಪರಿಶೀಲನೆಯನ್ನು ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಮೇಲ್ವಿಚಾರಣೆ ನಡೆಸುತ್ತಾರೆ. ಅನುಮತಿ ಪಡೆದ 180 ದಿನಗಳಲ್ಲಿ ಆಧಾರ್ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಐಡಿಎಐ ಅಧಿಕಾರಿ ಪ್ರಶಾಂತ್ ಕುಮಾರ್ ಸಿಂಗ್ ಮಾತನಾಡಿ, ʼʼಇತ್ತೀಚೆಗೆ ಹೊರಡಿಸಲಾದ ನಿರ್ದೇಶನಗಳು ಮೊದಲ ಬಾರಿಗೆ ಆಧಾರ್‌ ಕಾರ್ಡ್‌ ಪಡೆಯುವ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳಿಗೆ ಅನ್ವಯವಾಗುತ್ತದೆʼʼ ಎಂದು…

Read More

ಬೆಂಗಳೂರು:– ಕೋವಿಡ್ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಅಗತ್ಯ ಕಾರ್ಯಯೋಜನೆ ಹಮ್ಮಿಕೊಳ್ಳಲು ಸಚಿವ ಸಂಪುಟ ಉಪಸಮಿತಿ ರಚಿಸಲು ನಿರ್ಧಾರ ಮಾಡಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಎರಡು ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ನಗರದಲ್ಲಿ 136 ಸಂಚಾರಿ ಸಿಗ್ನಲ್ ವ್ಯವಸ್ಥೆ ಉನ್ನತೀಕರಿಸಲು ಮತ್ತು ಅಡಾಪ್ಟಿವ್ ಸಂಚಾರ ವ್ಯವಸ್ಥೆ ನಿಯಂತ್ರಣ ಅಳವಡಿಸಿ ಸಿಂಕ್ರೋನೈಸೇಶನ್ ಮಾಡಲು ಹಾಗೂ 165 ಅಡಾಪ್ಟಿವ್ ಸಂಚಾರ ವ್ಯವಸ್ಥೆ ನಿಯಂತ್ರಣ ಘಟಕಗಳನ್ನು 5 ವರ್ಷ ಅವಧಿಗೆ ನಿರ್ವಹಿಸುವ ಕಾಮಗಾರಿ ಒಟ್ಟು 58.54 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡದೆ ಎಂದು ಕಾನೂನು ಸಚಿವ H​.K.ಪಾಟೀಲ್​ ಹೇಳಿದ್ದಾರೆ. ವಿವಿಧ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿರುವ ಲ್ಯಾಬ್‌ಗಳಿಗೆ ಅಗತ್ಯವಿರುವ ರಾಸಾಯನಿಕಗಳು, ಕಂಪ್ಯೂಟರ್ ರೇಡಿಯಾಗ್ರಫಿ ಸಿಸ್ಟಂಗಳಿಗೆ ಡ್ರೈಲೇಸರ್ ಎಕ್ಸ್​​ರೇಗಳನ್ನು 50.15 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಕಾಲೇಜು ಶಿಕ್ಷಣ ಇಲಾಖೆ…

Read More

ಹಾಸನ : ಹಾಸನ ಸೇರಿದಂತೆ ಚಿಕ್ಕಮಗಳೂರು ಮತ್ತು ಮೂಡಿಗೆರೆಯಲ್ಲಿ ಕಾಡಾನೆಗಳ ಹಾವಳಿಯಿಂದ ಪ್ರತಿನಿತ್ಯ ಸಾವು ನೋವುಗಳು ಸಂಭವಿಸುತ್ತಿದ್ದು, ಈ ಸಂಬಂಧ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಕುರಿತು ಸಭೆ ನಡೆಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು,  ಕಾಡು ಪ್ರಾಣಿಗಳು ಮತ್ತು ಮನುಷ್ಯರ ಸಂಘರ್ಷ ಹೆಚ್ಚಾಗುತ್ತಿದೆ ಇದಕ್ಕೆ ಪ್ರಮುಖ ಕಾರಣ ಅರಣ್ಯ ಒತ್ತುವರಿಯಾಗಿರುವುದರಿಂದ ಪ್ರಾಣಿಗಳು ನಾಡಿಗೆ ಬರುತ್ತಿವೆ, ಅಲ್ಲದೆ ಕಾಡಿನಲ್ಲಿ ಆಹಾರ ಸಿಗದೇ ಊರಿಗೆ ಆಗಮಿಸುತ್ತಿವೆ, https://ainlivenews.com/sore-throat-cough-problem-in-winter-make-these-things-and-drink-tea/ ಇದನ್ನು ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದೆಂದು ಹೇಳಿದರು. ಜಿಲ್ಲೆಯಲ್ಲಿ ಹೆಚ್ಚಾಗಿರುವ ಕಾಡಾನೆಯಿಂದ ಮನುಷ್ಯನ ಪ್ರಾಣಹಾನಿ ಸಂಭವಿಸುತ್ತಿದ್ದು, ಈ ಬಗ್ಗೆ ಶೀಘ್ರದಲ್ಲಿಯೇ ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚಿಸಿ, ಶ್ರೀಲಂಕಾ ಮಾದರಿಯಲ್ಲಿ ಆನೆ ಕ್ಯಾಂಪ್‌ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಭರವಸೆ ನೀಡಿದರು.  

Read More

ಧಾರವಾಡ:- ಜಿಲ್ಲೆಯಲ್ಲಿ ಯಾವುದೇ ಕೊವಿಡ್ ಪ್ರಕರಣವಿಲ್ಲ, ಗಾಬರಿ ಬೇಡ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೂ ಮತ್ತೆ ಯಾವುದೇ ಸ್ವರೂಪದ ಕೊವಿಡ್ ಪ್ರಕರಣಗಳು ವರದಿಯಾಗಿಲ್ಲ. ಸಾರ್ವಜನಿಕರು ಕೊವಿಡ್ ಬಗ್ಗೆ ಗಾಬರಿ ಪಡದೇ ಆರೋಗ್ಯ ಸುರಕ್ಷತೆಗಾಗಿ ಸೂಕ್ತ ಮುನ್ನೆಚ್ಚರಿಕೆ, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಕೊವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಕೊವಿಡ್-19 ರ ಅಂಕಿ-ಅಂಶಗಳು, ಕೇರಳದಲ್ಲಿನ ಕೊವಿಡ್-19 ಪ್ರಕರಣಗಳ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೊವಿಡ್-19 ರ ಉಪತಳಿ ಜೆಎನ್.1 (JN.1) ವರದಿ, ಚಳಿಗಾಲದ ಹವಾಮಾನ, ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆಯನ್ನು ಗಮನದಲ್ಲಿರಿಸಿಕೊಂಡು ಕೆಲವು ಸಲಹಾತ್ಮಕ ಮಾರ್ಗಸೂಚಿಗಳನ್ನು ಶಿಫಾರಸ್ಸು ಮಾಡಿದೆ. ಈ ಅಂಶಗಳನ್ನು ಜಿಲ್ಲೆಯ ಸಾರ್ವಜನಿಕರು ಸಹ ಪಾಲಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದ್ದಾರೆ.ಕೊವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಕೊವಿಡ್-19 ರ ಅಂಕಿ-ಅಂಶಗಳು, ಕೇರಳದಲ್ಲಿನ ಕೊವಿಡ್-19 ಪ್ರಕರಣಗಳ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ…

Read More

ಬೆಂಗಳೂರು:- ರೌಡಿಶೀಟರ್ ಕೊಲೆಗೆ ನೆಲಮಂಗಲದ ಹುಡುಗರಿಗೆ ಸುಪಾರಿ ಶಂಕೆ ಹಿನ್ನೆಲೆ ಸಿಸಿಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ 5 ಜನರಲ್ಲಿ 4 ಜನರನ್ನು ಅರೆಸ್ಟ್ ಮಾಡಿದ್ದಾರೆ. ಪೀಣ್ಯ ರೌಡಿಶೀಟರ್ ಸಂತೋಷ್ ಸಹಚರರಾದ ನೆಲಮಂಗಲದ ಚೇತನ್(25), ಕಿರಣ್(25), ಶರತ್(29), ನವೀನ್ (27) ಬಂಧಿತರು. ಶಶಿಕುಮಾರ ಬಸವೇಶ್ವರ ನಗರದ ರೌಡಿಶೀಟರ್ ಎಸ್ಕೇಪ್ ಆಗಿದ್ದಾನೆ. ರವಿಕುಮಾರ್ @ಟ್ಯಾಂಗೋ ರವಿ ಕೊಲೆಗೆ ಯತ್ನಿಸಲಾಗಿದ್ದು, ಪೀಣ್ಯದಲ್ಲಿ ಮಾರಕಾಸ್ತ್ರದೊಂದಿಗೆ ನಾಲ್ವರು ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆ ಕೊಲೆಗೆ ಪಿತೂರಿ ಶಂಕೆ ಮೂಡಿದೆ. ನೆಲಮಂಗಲದ ಹುಡುಗರಿಗೆ ಸಂತೋಷ @ಸಂತು ಸುಫಾರಿ ಕೊಟ್ಟಿದ್ದರು. ದಾಳಿ ವೇಳೆ ಎರಡು ಲಾಂಗ್, ಖಾರದಪುಡಿ, ಎರಡು ರಾಡ್, 1 ಕಾರು, ದೊಣ್ಣೆ ಜಪ್ತಿ ಮಾಡಲಾಗಿದೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More