ತುಮಕೂರು:- ಹೆರಿಗೆ ಮಾಡಿಸಲು 3000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ಡಾ.ಹರಿಪ್ರಸಾದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತುರುವೇಕೆರೆಯಲ್ಲಿ ಸರ್ಕಾರಿ ವೈದ್ಯನಾಗಿ ಕಾರ್ಯನಿರ್ವಹಿಸುತ್ತಿದ್ದ 44 ವರ್ಷದ ಡಾ.ಹರಿಪ್ರಸಾದ್ ಅವರು, ಹನುಮಂತಪ್ಪ ಎಂಬುವವರಿಂದ ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ಹನುಮಂತಪ್ಪ ತುರುವೇಕೆರೆ ತಾಲ್ಲೂಕಿನ ಪಿಕೆಎಸ್ ಕಾಲೋನಿ ವಾಸಿಯಾಗಿದ್ದ. ತುರುವೇಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಘಟನೆ ಜರುಗಿದೆ. ಲಂಚಕ್ಕೆ ಬೇಡಿಕೆ ಹಿನ್ನೆಲೆ ಹನುಮಂತಪ್ಪ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಹೆರಿಗೆಗೂ ಮುನ್ನ ಹಣ ಪಡೆಯುವಾಗ ಲಾಕ್ ಮಾಡಿದ್ದಾರೆ. ಇಂದು ಸಂಜೆ 7.30ಕ್ಕೆ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸರ್ಕಾರಿ ವೈದ್ಯ ಸಿಕ್ಕಿ ಬಿದ್ದಿದ್ದಾರೆ. ತುಮಕೂರು ಲೋಕಾಯುಕ್ತ ಎಸ್ಪಿ ವಲೀಬಾಷಾ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸಿಬ್ಬಂದಿಗಳಾದ ಸಲೀಂಅಹಮದ್, ಶಿವರುದ್ರಪ್ಪ ನೇತೃತ್ವದಲ್ಲಿ ಕಾರ್ಯಚರಣೆ ನಡೆದಿದೆ. ತುಮಕೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: AIN Author
ಬೆಂಗಳೂರು:- ಜೆಡಿಎಸ್ ಪಕ್ಷದ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಮೆಟ್ಟಿಲೇರಿದ್ದು, ತಮ್ಮನ್ನು ಕಾನೂನು ಬಾಹಿರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ. ಅರ್ಜಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎನ್‍ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ಸಂಬಂಧ ಡಿ.21ರಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಹಾಗೂ ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಮುಂದಿನ ಲೋಕಸಭಾ ಚುನಾವಣೆ ಸಂಬಂಧ ಮಹತ್ವದ ಚರ್ಚೆ ನಡೆಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ದೇಶದ ಸಾರಿಗೆ ನಿಗಮಗಳ ಇತಿಹಾಸದಲ್ಲಿಯೇ ಪ್ರಥಮವಾಗಿ ತನ್ನ ನೌಕರರಿಗೆ ಪ್ರೀಮಿಯಂ ರಹಿತ ರೂ.1.20 ಕೋಟಿ ವಿಮಾ ಯೋಜನೆಗೆ ಗುರುವಾರ ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದೆ.. ಈ ವಿಮೆ ಯೋಜನೆಯಡಿ ನೌಕರರು ಅಪಫಾತದಲ್ಲಿ ನಿಧನರಾದಲ್ಲಿ ಅಂತಹ ನೌಕರರ ಅವಲಂಬಿತರಿಗೆ 1.20 ಕೋಟಿ ರೂ. ಅಪಘಾತ ವಿಮೆ ಹಣ ದೊರಕಲಿದೆ. ನೌಕರರು ಶಾಶ್ವತ ಅಂಗನ್ಯೂನ್ಯತೆ / ಭಾಗಶಃ ಶಾಶ್ವತ ಅಂಗನ್ಯೂನ್ಯತೆ ಒಳಗಾದಲ್ಲಿ 1 ಕೋಟಿ ರೂ. ವಿಮೆ ಪಡೆಯಬಹುದು. ಇದಲ್ಲದೆ ಅಪಘಾತವಲ್ಲದ ಸ್ವಾಭಾವಿಕ ಮರಣಕ್ಕೆ 5 ಲಕ್ಷ ರೂ. ವಿಮೆದೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯಗಳನ್ನು ನೀಡಲಾಗುತ್ತದೆ ಅಂತ KKRTC ವ್ಯವಸ್ಥಾಪಕನಿರ್ದೇಶಕ ರಾಚಪ್ಪ ತಿಳಿಸಿದ್ದಾರೆ..
ಬೆಂಗಳೂರು:- ಸಿಎಂ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿಯ ಹೊಸ ಉತ್ಪನ್ನಗಳ ಲೋಕಾರ್ಪಣೆ ಮಾಡಿದರು. ಜತೆಗೆ ನೂತನ ರಾಯಭಾರಿ ಶಿವರಾಜಕುಮಾರ್ ಅವರ ಜಾಹೀರಾತು ಟೀಸರ್ ಬಿಡುಗಡೆ ಮಾಡಿ ಅವರನ್ನು ಸನ್ಮಾನಿಸಿ ಗೌರವಿಸಿದರು. ನಂತರ ಸುದ್ದಿಗಾರರೊಂದಿಗೆ ಭೀಮಾನಾಯ್ಕ ಮಾತನಾಡಿ ನಂದಿನಿ ಬ್ರ್ಯಾಂಡ್‌ನ ಉತ್ಪನ್ನಗಳಿಗೆ ಸಾಕಷ್ಟು ಬೇಡಿಕೆಯಿದೆ. ಎಮ್ಮೆಹಾಲಿಗೆ ರಾಜ್ಯದ ಗಡಿಜಿಲ್ಲೆಗಳು, ವಿಶೇಷವಾಗಿ ಆಂಧ್ರಪ್ರದೇಶದಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಸಿಎಂ ಲೋಕಾರ್ಪಣೆ ಮಾಡಿದ್ದಾರೆ. ನಂದಿನಿಯ ಮೊಸರು, 2-3 ಸಿಹಿ ಉತ್ಪನ್ನಗಳು ಬಿಡುಗಡೆಯಾಗಿವೆ. ಉತ್ಪಾದನೆ, ವಹಿವಾಟು ಮತ್ತು ಹಾಲು ಒಕ್ಕೂಟದ ಸದಸ್ಯರ ಹಿತರಕ್ಷಣೆ ವಿಷಯದಲ್ಲಿ ಕೆಎಂಎ ಸದಾ ಮುಂದಿದೆ ಎಂದರು. ಸಿಎಂ ಸಿದ್ದರಾಮಯ್ಯ ಅವರಿಗೆ ರೈತರ ಸಮಸ್ಯೆಗಳು ಗೊತ್ತಿವೆ. ಈ ಹಿಂದೆ ಕೆಎಂಎ ಅಧ್ಯಕ್ಷರಾಗಿ ಒಂದು ವರ್ಷದ ಅವಧಿಗೆ ನಿರ್ವಹಿಸಿದ್ದಾರೆ. ಇದರಿಂದಾಗಿ ಹಾಲು ಒಕ್ಕೂಟಗಳು, ಕೆಎಂಎ ಮತ್ತು ಒಕ್ಕೂಟದ ಸದಸ್ಯರ ಬಗ್ಗೆಯೂ ಗೊತ್ತಿದ್ದು, ಹೆಚ್ಚಿನ ವಿವರಣೆ ನೀಡಬೇಕಾದ ಅಗತ್ಯವೇನಿಲ್ಲ. ಕೆಎಂಎ ಕೋರಿಕೆಯಂತೆ ಆಗಸ್ಟ್‌ನಲ್ಲಿ ಹಾಲಿನ ದರವನ್ನು ಮೂರು ರೂ.ಗೆ ಹೆಚ್ಚಿಸಿದರು. ರೈತರ ತಾಪತ್ರಯ ಅರಿತಿದ್ದ ಸಿಎಂ…
ನವದೆಹಲಿ:- ಇಡಿ ಸಮನ್ಸ್ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದರು. ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಮೂಲಕ ಬದುಕಿದ್ದು, ಮರೆಮಾಚಲು ಏನೂ ಇಲ್ಲ ಎಂದು ಕೇಜ್ರಿವಾಲ್ ಅವರು ಹೇಳಿದ್ದಾರೆ. ಇನ್ನೂ ಆಮ್ ಆದ್ಮಿ ಪಕ್ಷದ ನಾಯಕನಿಗೆ ಮೊದಲು ನವೆಂಬರ್ 2 ರಂದು ಸಮನ್ಸ್ ನೀಡಿ ವಿಚಾರಣೆಗೆ ಕರೆಯಲಾಗಿತ್ತು. ಆದರೆ ಅವರು ಆ ಕರೆಯನ್ನು ತಿರಸ್ಕರಿಸಿ, ಮಧ್ಯಪ್ರದೇಶ ಚುನಾವಣೆಗೆ ಪ್ರಚಾರ ಮಾಡಲು ಆಯ್ಕೆ ಮಾಡಿದ್ದರು. ಆಮ್ ಆದ್ಮಿ ಪಕ್ಷವು ಸಮನ್ಸ್ನ ಸಮಯವನ್ನು ಪ್ರಶ್ನಿಸಿದ್ದು, ಪಕ್ಷದ ವಕೀಲರು ನೋಟಿಸ್ ಅಧ್ಯಯನ ಮಾಡುತ್ತಿದ್ದಾರೆ ಮತ್ತು “ಕಾನೂನುಬದ್ಧ” ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿತ್ತು.
ನವದೆಹಲಿ:- ಯಾವುದೇ ಕಾರಣಕ್ಕೂ ನಿಖಿಲ್ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ನಿಖಿಲ್ ಕುಮಾರಸ್ವಾಮಿ ಅವರು ಈ ಬಾರಿ ಜನರು ಚುನಾವಣೆಗೆ ನಿಲ್ಲಿ ಎಂದು ಹೇಳುತ್ತಿದ್ದಾರೆ. ಮಂಡ್ಯ ಕ್ಷೇತ್ರದಿಂದಲೇ ಕಣಕ್ಕೆ ಇಳಿಯಲಿ ಎಂದು ಬಯಸುತ್ತಿದ್ದಾರೆ. ಎರಡು ಬಾರಿ ಅವರು ಸೋತಿದ್ದಾರೆ. ಹೀಗಾಗಿ ಜನರ ಅನುಕಂಪವೂ ಇದೆ. ಆದರೆ, ಅವರಿಗೆ ಸ್ಪರ್ಧೆ ಮಾಡುವ ಉದ್ದೇಶವಿಲ್ಲ ಎಂದು ತಿಳಿಸಿದರು. ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕುಳಿತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಒಂದು ಕ್ಷೇತ್ರ ಹೆಚ್ಚೂ ಕಡಿಮೆ ಆಗಬಹುದು ಅಷ್ಟೇ. ಅದರಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಮುಖ್ಯವಾಗಿ ಪರಸ್ಪರ ವಿಶ್ವಾಸ ಬೇಕು ಅಷ್ಟೇ, ಅದನ್ನು ನಾವು ಉಳಿಸಿಕೊಳ್ಳಬೇಕು. ಅದಕ್ಕೆ ಏನೆಲ್ಲ ಮಾಡಬೇಕೋ ಅದನ್ನು ಮಾಡುತ್ತೇನೆ. ಜನವರಿ ಅಂತ್ಯದ…
ಬೆಂಗಳೂರು:- ಪ್ರತಿ ವರ್ಷವೂ ಮತದಾರ ಪಟ್ಟಿ ಪರಿಷ್ಕರಣೆಯನ್ನು ಮಾಡಲಾಗುತ್ತದೆ. ಈ ಪೈಕಿ ಭಾರತ ಚುಣಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ಶುದ್ಧೀಕರಣವನ್ನು ಅಧಿಕಾರಿಗಳು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಇಂದು ಮನೆ-ಮನೆಗೆ ಭೇಟಿ ನಿಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು. ಜಿಲ್ಲಾ ಚುನಾವಣಾಧಿಕಾರಿಗಳು-ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ: 27.10.2023 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಸದರಿ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ, ತಪ್ಪಾಗಿದ್ದಲ್ಲಿ, ತಪ್ಪಾಗಿ ಸೇರ್ಪಡೆಗೊಂಡಿದ್ದಲ್ಲಿ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ನಮೂನೆ-6, 7 ಮತ್ತು 8 ರಲ್ಲಿ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಭಾರತ ಚುನಾವಣಾ ಆಯೋಗವು ದಿನಾಂಕ: 27.10.2023 ರಿಂದ 09.12.2023 ರವರೆಗೆ ಅವಕಾಶ ಕಲ್ಪಿಸಿತ್ತು. ಈ ವೇಳೆ ಎಲ್ಲಾ ಬಿ.ಎಲ್.ಓ ಮತ್ತು ಬಿ.ಎಲ್.ಓ ಮೇಲ್ವಿಚಾರಕರುಗಳು ಮನೆ-ಮನೆಗೆ ಭೇಟಿ…
ಬೆಂಗಳೂರು:- ಕರ್ನಾಟಕದಲ್ಲಿಂದು ಹೊಸದಾಗಿ 24 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ರಾಜಧಾನಿ ಬೆಂಗಳೂರು ಒಂದರಲ್ಲೇ 23 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಇಂದು 11 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್‌ಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದ್ದು, 85 ಜನರು ಹೋಂ ಐಸೋಲೇಷನ್‌ನಲ್ಲಿದ್ದಾರೆ. ಇನ್ನುಳಿದಂತೆ 20 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಶೇಕಡಾ 1.6 ರಷ್ಟು ಕೊರೊನಾ ಪಾಸಿಟಿವಿಟಿ ದರ ಏರಿಕೆಯಾಗಿದೆ. ಕೇರಳದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದ್ದಂತೆ ರಾಜ್ಯದಲ್ಲೂ ಕೋವಿಡ್ ಆತಂಕ ಶುರುವಾಗಿದೆ. ವರ್ಷದ ಮೊದಲ ವಾರದ ಬಳಿಕ ರಾಜ್ಯದಲ್ಲಿ ಕೊರೊನಾ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಂದು ನಡೆದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ IISC ತಜ್ಞರು ಹಾಗೂ TAC ಎಕ್ಸ್ಪರ್ಟ್ ತಂಡವು ವರದಿ ನೀಡಿದೆ. ಜನವರಿ ಮೊದಲ ವಾರದಲ್ಲಿ ಅತಿ ಹೆಚ್ಚು ಕೇಸ್ ದಾಖಲಾಗುವ ಸಾಧ್ಯತೆಯಿದೆ. ಹಾಗೆಯೇ ಫೆಬ್ರವರಿ ಕೊನೆಯ ವಾರ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು…
ಜಂಕ್ ಫುಡ್ ಬಿಟ್ಟು, ಸಿರಿಧಾನ್ಯ ಸೇವನೆ ಮಾಡಿ ಎಂದು ಸಚಿವ ಚೆಲುವರಾಯಸ್ವಾಮಿ ಸಲಹೆ ನೀಡಿದ್ದಾರೆ. ಕ್ರೈಸ್ಟ್ ವಿವಿ ಆವರಣದಲ್ಲಿ ನಡೆದ ಮಿಲೆಟ್ಸ್ ತಿಂತೀರಾ- ಸಿರಿಧಾನ್ಯ ಸಂಸ್ಕೃತಿ ಉತ್ತೇಜಿಸೋಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ, ಕೃಷಿ ಸಚಿವ ಚೆಲುವರಾಯಸ್ವಾಮಿ, ಸಿರಿ ಧಾನ್ಯಗಳು ದೇಹಕ್ಕೆ ಪುಷ್ಠಿ ನೀಡುತ್ತದೆ. ಧೀರ್ಘಕಾಲ ದೇಹಕ್ಕೆ ಸ್ಥಿರತೆ ನೀಡಲು ನೆರವಾಗುತ್ತದೆ. ಅಲ್ಲದೇ ನೀರಿನಲ್ಲಿ ಸಿರಿಧಾನ್ಯ ಬೆಳೆಯುವುದರಿಂದ ರೈತರಿಗೆ ವೆಚ್ಚ ಕಡಿಮೆಯಾಗಿ, ಹೆಚ್ಚು ಆದಾಯ ತಂದುಕೊಡುತ್ತದೆ ಎಂದು ಸಚಿವರು ಹೇಳಿದರು. ಹೆಚ್ಚು ಪೌಷ್ಠಿಕತೆ ಹೊಂದಿರುವ ಸಿರಿಧಾನ್ಯ ಸದೃಡ ದೇಹ ಹಾಗೂ ಮನಸ್ಸಿನ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಯುವ ಸಮುದಾಯ ಇದನ್ನು ಹೆಚ್ಚು ಬಳಸಿ ಸಾರ್ವಜನಿಕರಿಗೂ ಅರಿವು ಮೂಡಿಸಬೇಕು. ಸಿರಿಧಾನ್ಯ ಅತ್ಯಂತ ಪರಿಪೂರ್ಣ ಆಹಾರ, ಜಾಗತಿಕ ಮಾರುಕಟ್ಟೆಯಲ್ಲಿಯೂ ಇದಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳು ಸಹ ಜಂಕ್ ಪುಡ್ ಬಿಟ್ಟು ಪ್ರತಿದಿನ ಮಿಲೆಟ್ ಬಳಸುವುದು ಉತ್ತಮ. ಸಿರಿಧಾನ್ಯ ಕಡಿಮೆ ವೆಚ್ಚ, ಮಿತ ನೀರಿನಲ್ಲಿ ಬೆಳೆಯುವ ಆಹಾರವಾಗಿದೆ. ಕರ್ನಾಟಕ ಸರ್ಕಾರ 2013 ರಿಂದಲೂ ಇದರ ಪ್ರೋತ್ಸಾಹಕ್ಕೆ ಹಲವು…
ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯಿಂದ ಹೊರಗುಳಿದಿರುವ ಸಿರಾಜ್ ವಿಶ್ರಾಂತಿ ಪಡೆಯುತ್ತಿದ್ದಾರೆ. ಸದ್ಯ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಐದು ಒಡೆದ ಹೃದಯಗಳ ಎಮೋಜಿಯನ್ನು ಪೋಸ್ಟ್ ಮಾಡಿದ್ದಾರೆ. ಆದರೆ, ಹೆಚ್ಚಿನ ಮಾಹಿತಿ ನೀಡಿಲ್ಲ. ಆದರೆ, ಮೊನ್ನೆಯಷ್ಟೇ ಮುಗಿದ ಐಪಿಎಲ್ ಹರಾಜಿಗೂ ಸಿರಾಜ್ ಅವರ ಇನ್ಸ್ಟಾಗ್ರಾಂ ಸ್ಟೋರಿಗೂ ತಳುಕು ಹಾಕಲಾಗಿದೆ. ಸಿರಾಜ್ ಅವರು ಒಡೆದ ಹೃದಯದ ಎಮೋಜಿಯನ್ನು ಯಾವ ಉದ್ದೇಶದಿಂದ ಪೋಸ್ಟ್ ಮಾಡಿದ್ದಾರೆ ಎಂಬುದನ್ನು ಅವರೇ ಹೇಳಬೇಕು. ಆದರೆ, ಐಪಿಎಲ್ ಹರಾಜಿನ ಬೆನ್ನಲ್ಲೇ ಈ ರೀತಿಯ ಸ್ಟೋರಿ ಪೋಸ್ಟ್ ಮಾಡಿರುವುದು ನಾನಾ ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ. ಆರ್ಸಿಬಿ ಕ್ಯಾಂಪ್ನಲ್ಲಿ ಏನು ನಡೆಯುತ್ತಿದೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಹರಾಜಿನಲ್ಲಿ ಆರ್ಸಿಬಿ ತೊಡಗಿಸಿಕೊಂಡ ರೀತಿ ಸಿರಾಜ್ಗೆ ಬೇಸರ ತರಿಸಿರಬಹುದಾ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ. ಇನ್ನು ಡಿ.19ರಂದು ದುಬೈನಲ್ಲಿ ನಡೆದ ಮಿನಿ ಐಪಿಎಲ್ ಹರಾಜಿಗೂ ಮುನ್ನ ಆರ್ಸಿಬಿ ತಂಡ ಸಿರಾಜ್ ಅವರನ್ನು ರೀಟೇನ್ ಮಾಡಿಕೊಂಡಿದೆ. ಐಪಿಎಲ್ ಹರಾಜಿನಲ್ಲಿ ಅಲ್ಜರಿ ಜೋಸೆಫ್, ಟಾಮ್ ಕರ್ರನ್, ಲುಕಿ ಫರ್ಗೂಸನ್…