ಧಾರವಾಡ: ಮಾಜಿ ಶಾಸಕ ಅಮೃತ ದೇಸಾಯಿ ಅವರು ಕಾರ್ತಿಕ ಮಾಸದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವು ಶ್ರೀ ಕ್ಷೇತ್ರ ಉಳವಿಗೆ ಪದಯಾತ್ರೆ ಕೈಗೊಂಡರು. ಧಾರವಾಡ ತಾಲೂಕಿನ ಗರಗ ಮಡಿವಾಳೇಶ್ವರ ಮಠದಿಂದ ಶ್ರೀ ಕ್ಷೇತ್ರ ಉಳವಿಗೆ ಪಾದಯಾತ್ರೆ ನಡೆಲಿದೆ. ಏಳನೇ ಬಾರಿಗೆ ಗರಗ ಮಠದಿಂದ ಅಮೃತ ದೇಸಾಯಿ ಅವರು ಶ್ರೀ ಕ್ಷೇತ್ರ ಉಳವಿಯತ್ತ ಇಂದು ಪದಯಾತ್ರೆ ಆರಂಭಿಸಿದರು. ಇನ್ನೂ ಪಾದಯಾತ್ರೆ ಆರಂಭಕ್ಕೂ ಮುನ್ನ ಗರಗ ಮಡಿವಾಳೇಶ್ವರರ ಕರ್ತೃ ಗದ್ದುಗೆಗೆ ವಿವಿಧ ಮಠಾಧೀಶರು ಹಾಗೂ ಗರಗ ಮಠದ ಉತ್ತರಾಧಿಕಾರಿ ಪ್ರಶಾಂತ ದೇವರ ನೇತೃತ್ವದಲ್ಲಿ ಅಮೃತ ದೇಸಾಯಿ ಹಾಗೂ ಅವರ ಪತ್ನಿ ಪ್ರಿಯಾ ದೇಸಾಯಿ ಅವರು ವಿಶೇಷ ಪೂಜೆ ಸಲ್ಲಿಸಿದರು. ಪೂಜೆಯ ನಂತರ ವಿವಿಧ ಮಠಾಧೀಶರ ಪಾದಪೂಜೆಯನ್ನು ಅಮೃತ ದೇಸಾಯಿ ಹಾಗೂ ದಂಪತಿ ನೆರವೇರಿಸಿದರು. ಆನಂತರ ಶ್ರೀಮಠದಿಂದ ಪಾದಯಾತ್ರೆಗೆ ಪ್ರಶಾಂತ ದೇವರಾದಿಯಾಗಿ ವಿವಿಧ ಮಠಾಧೀಶರು ಚಾಲನೆ ನೀಡಿದರು. ಮಠದಿಂದ ಆರಂಭಗೊಂಡ ಪಾದಯಾತ್ರೆ ಗರಗ ಗ್ರಾಮದ ವಿವಿಧ ಗಲ್ಲಿಗಳ ಮೂಲಕ ಸಾಗಿ ಮುಂದೆ ಧಾರವಾಡ ರಸ್ತೆ ರಾ…
Author: AIN Author
ಗದಗ: ಗದುಗಿನಲ್ಲಿ ಅತಿಥಿ ಉಪನ್ಯಾಸಕರು ಸೇವಾ ಖಾಯಮಾತಿಗಾಗಿ ಆಗ್ರಹಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ತಮಟೆ ಬಾರಿಸುತ್ತಾ ಕಾಲ್ನಡಿಗೆಯಲ್ಲಿ ತೆರಳಿದ್ರು. ಬೇಕೆ ಬೇಕು ನ್ಯಾಯ ಬೇಕು ಅತಿಥಿ ಉಪನ್ಯಾಸಕರ ಖಾಯಮಾತಿ ಆಗಲೇಬೇಕು ಅಂತಾ ಘೋಷಣೆ ಕೂಗಿದ್ರು. ಇನ್ನು ೧೬,೦೦೦ ಅತಿಥಿ ಶಿಕ್ಷಕರನ್ನು ಖಾಯಂ ಮಾಡಲು ದೆಹಲಿ ಸರ್ಕಾರ ವಿಶೇಷ ನಿಯಮಾವಳಿ ರೂಪಿಸಿ ಖಾಯಂಮಾತಿ ಮಾಡಿಕೊಂಡಿದೆ, ಹಾಗೆಯೇ ಹರಿಯಾಣ ಸರ್ಕಾರವು ಕೂಡ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿದ ನಿದರ್ಶನಗಳು ಇವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ನಿಯಮಾವಳಿ ರೂಪಿಸಿ, ಸಚಿವ ಸಂಪುಟ ಸಭೆಯಲ್ಲಿ ದೃಡ ನಿರ್ಧಾರ ಕೈಗೊಳ್ಳುವುದರ ಮೂಲಕ ಅತಿಥಿ ಉಪನ್ಯಾಸಕರನ್ನು ಖಾಯಂ ಗೋಳಿಸಬೆಕುಂದು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ರು.
ಹುಬ್ಬಳ್ಳಿ: ಸಂವಿಧಾನಿಕ ಹುದ್ದೆಯಲಿರುವ ವ್ಯಕ್ತಿಗಳಿಗೆ ಅಪಮಾನ ಮಾಡಿರುವುದನ್ನ ಖಂಡಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ಮಾಡಿದರು . ಅಮಾನತು ಆಗಿರೋ ಸಂಸದರು ಪ್ರತಿಭಟನೆ ವೇಳೆ ಅಣಕು ಸಂಸತ್ ನಿರ್ವಹಿಸಿ ಈ ಸಂದರ್ಭದಲ್ಲಿ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ, ಉಪರಾಷ್ಟ್ರಪತಿಯೂ ಆಗಿರೋ ರಾಜ್ಯಸಭೆ ಚೇರ್ಮನ್ ಜಗದೀಪ್ ಧನ್ಕರ್ ರನ್ನು ಅನುಕರಿಸಿ ಮಿಮಿಕ್ರಿ ಮಾಡಿದ್ದು ಸರಿಯಲ್ಲ, ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಅಣಕಿಸಿ, ಸಂಭ್ರಮಿಸಿದ ವಿವಾದದ ನಡುವೆ, ಸಂಸತ್ತಿನ ಹೊರಗೆ ಸಂಸದರು ಕುಳಿತಿರುವುದನ್ನು ತಮ್ಮ ಫೋನಿನಲ್ಲಿ ಚಿತ್ರೀಕರಿಸಿದ್ದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ ಇದಾವ ಪ್ರಜಾಪ್ರಭುತ್ವ ವ್ಯವಸ್ಥೆ ಎಂದು ಕಿಡಿಕಾರಿರುವ ಭಾರತೀಯ ಜನತಾ ಪಕ್ಷದ ನಾಯಕರು ಸದನದಿಂದ ಸಂಸದರನ್ನು ‘ಹೊರಹಾಕಿರುವ’ ಬಗ್ಗೆ ಏಕೆ ಚರ್ಚೆಗಳು ನಡೆಯುತ್ತಿಲ್ಲ ಎಂದು ಪ್ರಶ್ನಿಸಿದ್ದು, ನಾಯಕರಿಗೆ ಅಸಂಭಧ ರೀತಿಯಲ್ಲಿ ವರ್ತನೆ ಮಾಡಿದಂತೆ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಮಂಗಳವಾರ ಸಂಸತ್ತಿನ ಮೆಟ್ಟಿಲುಗಳ ಮೇಲೆ ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆಯ ವೇಳೆ…
ಬೆಳಗಾವಿ:- ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ತಗಲುವ ಖರ್ಚು-ವೆಚ್ಚಗಳನ್ನು ಲೆಕ್ಕಾಚಾರ ಮಾಡಲು ಅನುಕೂಲವಾಗುವಂತೆ ವಿವಿಧ ಸೇವೆಗಳಿಗೆ ನಿಗದಿಪಡಿಸಲಾದ ಮಾರುಕಟ್ಟೆ ದರಗಳನ್ನು ಆಧರಿಸಿಯೇ ವೆಚ್ಚವನ್ನು ಲೆಕ್ಕ ಮಾಡಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಎಸ್.ಆರ್. ದರ ನಿಗದಿಪಡಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ(ಡಿ.21) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್.ಆರ್. ದರಗಳನ್ನು ಆರು ತಿಂಗಳ ಹಿಂದೆಯೇ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಿಗದಿಪಡಿಸಲಾಗಿರುತ್ತದೆ. ಆದಾಗ್ಯೂ ಪ್ರಸ್ತುತ ಮಾರುಕಟ್ಟೆ ದರಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಲಹೆಗಳನ್ನು ಆಧರಿಸಿ ದರಗಳಲ್ಲಿ ಅಗತ್ಯ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದರು. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಬಳಕೆ ಮಾಡುವ ಹೂವುಗಳ ದರವನ್ನು ಕಡಿಮೆಗೊಳಿಸಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಪ್ರತಿನಿಧಿಗಳು ಸಲಹೆ ನೀಡಿದರು. ನಗರದಲ್ಲಿರುವ ಪುಷ್ಪ ಹರಾಜು ಕೇಂದ್ರದಿಂದ ಸಗಟು ಮಾರುಕಟ್ಟೆ ದರಗಳನ್ನು ಪಡೆದುಕೊಂಡು ದರಗಳನ್ನು ಪರಿಷ್ಕರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್…
ಬಳ್ಳಾರಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ಸದನದಲ್ಲಿ ಭಾರತದ ಉಪರಾಷ್ಟ್ರಪತಿ ವಿಡಿ ಜಗದೀಶ್ ದನಕರ್ ಅವಮಾನಿಸುವುದನ್ನು ಖಂಡಿಸಿನಗರದ ರಾಯಲ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ವಿಧಾನಪರಿಷತ್ ಸದಸ್ಯರಾದ ವೈಎಂ ಸತೀಶ್ ಅವರು ಮಾತನಾಡಿ ಸಂಸತ್ ಭವನದಲ್ಲಿ ಅಧಿವೇಶನ ನಡೆಯುವ ಸಮಯದಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ಉಪರಾಷ್ಟ್ರಪತಿ ವಿಡಿ ಜಗದೀಶ್ ದನಕರ್ ಅವರನ್ನು ಅವಮಾನಿಸಿದ್ದಾರೆ. ಇದನ್ನು ಖಂಡಿಸಿ ಬಳ್ಳಾರಿಯ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.ಜಿಲ್ಲಾಧ್ಯಕ್ಷರಾದ ಮುರಹರಿ ಗೌಡ ಅವರು ಮಾತನಾಡಿ ಹಿಂದುಳಿದ ವರ್ಗದ ಉಪರಾಷ್ಟ್ರಪತಿ ವಿಡಿ ಜಗದೀಶ್ ದನಕರ್ ಅವರನ್ನು ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ಅವಮಾನಿಸಿದ್ದು ಕೂಡಲೇ ರಾಹುಲ್ ಗಾಂಧಿ ಅವರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಇಬ್ರಾಹಿಂ ಬಾಬು, ರಾಮಾಂಜನಿ, ಪುಷ್ಪಲತಾ, ಅಂಜಿ ಕಮ್ಮರಚೇಡು, ಉಪ್ಪಾರ್ ಸಿದ್ದೇಶ್,ಮೋಹನ್ ಸೇರಿದಂತೆ ಮತ್ತಿತರ ಇದ್ದರು.
ಮಂಡ್ಯ: ಇಬ್ಬರು ವ್ಯಕ್ತಿಗಳು ಬಾರ್ ಮುಂದೆ ನಿಂತಿದ್ದ ವ್ಯಕ್ತಿಗೆ ಮನಸ್ಸೊ ಇಚ್ಚೆ ಚಾಕುವಿನಿಂದ ಇರಿದು ಹತ್ಯೆ ಮಾಡಿರೋ ಘಟನೆ ಮಂಡ್ಯ ನಗರದ ಫ್ಯಾಕ್ಟರಿ ಸರ್ಕಲ್ ಬಳಿ ನಡೆದಿದೆ. ಭೀಕರ ಕೊಲೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೇ ತಿಂಗಳ 14ರ ರಾತ್ರಿ ಮಂಡ್ಯ ನಗರದಲ್ಲಿ ಮರ್ಡರ್ ನಡೆದಿತ್ತು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕಡಿಲುವಾಗಿಲು ಗ್ರಾಮದ ಗುರು ವಿಲಾಸ್ ಎಂಬಾತನನ್ನ ಹತ್ಯೆ ಮಾಡಲಾಗಿದೆ. ಬಾರ್ನಲ್ಲಿ ಕುಡಿದು ಗಲಾಟೆಯಾದ ಬಳಿಕ ಗುರುವಿಲಾಸ್ ಹತ್ಯೆ ಮಾಡಲಾಗಿದೆ. ಕುಡಿದ ಮೇಲೆ ಬಾರ್ ಮುಂದೆ ಗುರು ವಿಲಾಸ್ ನಿಂತಿರೋದನ್ನ ಗಮನಿಸಿ ಕಾರ್ನಲ್ಲಿ ಬಂದು ಹತ್ಯೆ ಮಾಡಿದ್ದಾರೆ. ಕಡಿಲುವಾಗಿಲು ಗ್ರಾಮದ ಶಿವಕುಮಾರ್, ಮಂಡ್ಯದ ಗುತ್ತಲು ಕಾಲೋನಿಯ ರಾಘವೇಂದ್ರ ಎಂಬುವರಿಂದ ಹತ್ಯೆ ಮಾಡಲಾಗಿದೆ. ಗುರುವಿಲಾಸ್ನನ್ನ ಚಾಕುವಿನಿಂದ ಇರಿದು ಮತ್ತೆ ಅದೇ ಕಾರ್ನಲ್ಲಿ ಇಬ್ಬರು ತೆರಳಿದ್ದಾರೆ. ಮಂಡ್ಯದ ಪೂರ್ವ ಪೊಲೀಸ್ ಠಾಣೆ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.
ರಾಮನಗರ: ಪಾಪಿ ತಾಯಿಯೊಬ್ಬಳು (Mother) ಹೆತ್ತ ಮಗುವನ್ನೇ (Baby) ನದಿಗೆ (River) ಎಸೆದ ಘಟನೆ ರಾಮನಗರ (Ramanagara) ಜಿಲ್ಲೆ ಚನ್ನಪಟ್ಟಣ (Channaptna) ತಾಲೂಕಿನ ಕಾಲಿಕೆರೆ ಗ್ರಾಮದಲ್ಲಿ ನಡೆದಿದೆ. ಭಾಗ್ಯಾ ಹೆತ್ತ ಮಗುವನ್ನು ನದಿಗೆ ಎಸೆದ ತಾಯಿ. ಕಳೆದ 2 ವರ್ಷದಿಂದ ಭಾಗ್ಯಾ ತಾಯಿ ಮನೆಯಲ್ಲೇ ವಾಸವಿದ್ದಳು. ಭಾಗ್ಯಾ ಹಾಗೂ ಶ್ರೀನಿವಾಸ್ ದಂಪತಿಯ 1 ವರ್ಷ 6 ತಿಂಗಳ ಹಸುಗೂಸನ್ನು, https://ainlivenews.com/sore-throat-cough-problem-in-winter-make-these-things-and-drink-tea/ ಭಾಗ್ಯಾ ರಾತ್ರಿ ಕೊಂಡಾಪುರ ಬಳಿಯ ಕಣ್ವ ನದಿಗೆ ಎಸೆದಿದ್ದಾಳೆ. ಇಂದು ಬೆಳಗ್ಗೆ ಕುಟುಂಬಸ್ಥರು ಮಗು ಎಲ್ಲಿ ಎಂದು ಕೇಳಿದಾಗ ನದಿಗೆ ಎಸೆದಿರುವುದಾಗಿ ಭಾಗ್ಯಾ ಹೇಳಿದ್ದಾಳೆ. ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗ್ರಾಮಸ್ಥರು ನದಿಯಿಂದ ಮೃತ ಮಗುವಿನ ಶವ ಹೊರತೆಗೆದಿದ್ದಾರೆ. ಮಗುವನ್ನು ನದಿಗೆ ಎಸೆದಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಮೈಸೂರು:- ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲು ಸಮರ್ಥರು ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದ್ದಾರೆ. ಸಂಸತ್ತಿನ ವ್ಯವಹಾರ ಮಂತ್ರಿಗಳಿಗೆ ವಿಪಕ್ಷಗಳ ಕೆಲಸವೇ ಅರ್ಥವಾಗುತ್ತಿಲ್ಲ. ಪ್ರಶ್ನಿಸಿದವರನ್ನೇ ಅಮಾನತ್ತುಗೊಳಿಸುತ್ತಿದ್ದಾರೆ. ಮೂರು ಸುತ್ತಿನ ಬೇಹುಗಾರಿಕೆ ಭೇದಿಸಿ ಒಳ ಬಂದಿದ್ದಾರೆ ಅಂದರೆ ಅದರ ಹಿಂದೆ ಯಾರಿದ್ದಾರೆ? ಅದನ್ನ ಕೇಳಲು ಹೋದರೆ ಅಮಾನತು ಮಾಡಿದ್ದಾರೆ. ಹಾಗಾದರೇ ಸಂಸತ್ ಇರೋದು ಯಾಕೇ? ಸಂಸತ್ ಚರ್ಚೆ ಮಾಡಲಿಕ್ಕೆ ಇರುವ ಒಂದು ವೇದಿಕೆ ಅಲ್ಲವೇ ಎಂದರು. https://ainlivenews.com/sore-throat-cough-problem-in-winter-make-these-things-and-drink-tea/ ಪ್ರಧಾನಿಗೆ ಮಾಧ್ಯಮ ಎದುರು ಬಂದು ನಿಲ್ಲುವ ತಾಕತ್ತು ಇಲ್ಲ. ಇಡೀ ಜಗತ್ತಿನ ಮುಂದೆ ಭಾರತದ ಮಾನ ಬೆತ್ತಲಾಗಿದೆ. ಸಂಸತ್ತನ್ನು ಸಂಸತ್ತಿನ ಪ್ರಶ್ನೋತ್ತರಗಳನ್ನು ದುರ್ಬಲಗೊಳಿಸುವುದು ಪ್ರಜಾಪ್ರಭುತ್ವಕ್ಕೆ ದೊಡ್ಡ ದ್ರೋಹ ಮಾಡಿದಂತೆ. ಇಂಥಾ ವ್ಯವಸ್ಥೆಯಲ್ಲಿ ಪ್ರಶ್ನೆ ಮಾಡೋದೆ ಬೇಡ ಅಂದರೆ ಹೇಗೆ? ಇದು ನಮ್ಮ ದೇಶದ ಸಂವಿಧಾನ ವ್ಯವಸ್ಥೆಗೆ ಮಾರಕ. 141 ಜನರ ಅಮಾನತನ್ನು ಹಿಂದಕ್ಕೆ ಪಡೆಯಬೇಕು. ಆರೋಗ್ಯಕರ ವಾತಾವರಣದಲ್ಲಿ ಚರ್ಚೆಗಳ ನಡೆಯಬೇಕು ಎಂದು ಭಾರತ ಸರ್ಕಾರವನ್ನು ನಾನು ಒತ್ತಾಯ ಮಾಡುತ್ತಿದ್ದೇನೆ. ಈ ಕೂಡಲೇ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಭೇಟಿ ಸಂಸತ್ ಭವನದ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆಯಿತು. ಇಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ಪ್ರಧಾನಿಗಳ ಕಾರ್ಯಾಲಯಕ್ಕೆ ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿಗಳು ಆಗಮಿಸಿದರು. ಇಬ್ಬರು ನಾಯಕರ ಜತೆ ಪ್ರಧಾನಿಗಳು ವಿವಿಧ ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿರುವಂತೆ; ರಾಜ್ಯ ರಾಜಕೀಯ ಪರಿಸ್ಥಿತಿಯ ಜತೆಗೆ ಕೊಬರಿ ಖರೀದಿ, ಕಾಡುಗೊಲ್ಲ ಜಾತಿಗೆ ಮೀಸಲಾತಿ ಸೌಲಭ್ಯ ಹಾಗೂ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮಾಜಿ ಪ್ರಧಾನಿಗಳು ಮೋದಿ ಅವರ ಜತೆ ಚರ್ಚೆ ನಡೆಸಿದರು. ಇದೇ ವೇಳೆ ಕೊಬರಿಗೆ ಬೆಂಬಲ ಬೆಲೆ ನೀಡುವುದು ಹಾಗೂ ನಾಫೆಡ್ ಮೂಲಕ ಖರೀದಿ ಮಾಡಬೇಕು ಎಂಬ ಬಗ್ಗೆ ಪ್ರಧಾನಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಬಗ್ಗೆ ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಮಾಜಿ ಸಂಸದರಾದ ಕುಪೇಂದ್ರ…
ಹೊಸ ಫೋಟೋಶೂಟ್‌ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ‘ಅನಿಮಲ್’ (Animal) ಬ್ಯೂಟಿಯ ಹೊಸ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಇಂಟರ್‌ನೆಟ್ ಸೆನ್ಸೇಷನ್ ಕ್ವೀನ್ ತೃಪ್ತಿ ಅವರು ಗುಲಾಬಿ ಬಣ್ಣದ ಡ್ರೆಸ್‌ನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ತೃಪ್ತಿ ಬ್ಯೂಟಿಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಸಖತ್ ಹಾಟ್ ಆಗಿದ್ದೀರಾ ಎಂದೆಲ್ಲಾ ನಟಿಗೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ. ‘ಅನಿಮಲ್’ ಚಿತ್ರದಲ್ಲಿ ಸೆಕೆಂಡ್ ಹೀರೋಯಿನ್ ಅದ್ಯಾವಾಗ ದರ್ಶನ ಕೊಟ್ಟ ದಿನದಿಂದ ತೃಪ್ತಿ ದಿಮ್ರಿ ಲಕ್ ಬದಲಾಯ್ತು. ರಶ್ಮಿಕಾ (Rashmika Mandanna) ನ್ಯಾಷನಲ್ ಕ್ರಶ್ ಅಲ್ಲ, ನೀವು ನಿಜವಾದ ನ್ಯಾಷನಲ್ ಕ್ರಶ್ ಎಂದು ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ. ರಣ್‌ಬೀರ್ (Ranbir Kapoor) ಜೊತೆ ಅರೆ ಬೆತ್ತಲೆಯಾಗಿ ಕಾಣಿಸಿಕೊಂಡಿದ್ದ ತೃಪ್ತಿಗೆ ಇದೀಗ ಬಾಲಿವುಡ್‌ನಲ್ಲಿ ಬೇಡಿಕೆ ಜಾಸ್ತಿ ಆಗಿದೆ. ತೆಲುಗು, ತಮಿಳು ಸಿನಿಮಾಗಳಲ್ಲೂ ನಟಿಗೆ ಅವಕಾಶಗಳು ಒಲಿದು ಬರುತ್ತಿವೆ.