ದುಬೈ: ಬೆಂಗಳೂರು ಮೂಲದ ನ್ಯೂಜಿಲೆಂಡ್ ಸ್ಟಾರ್ ಆಲ್ರೌಂಡರ್ ರಚಿನ್ ರವಿಂದ್ರ ಅವರು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಪಾಲಾಗಿದ್ದಾರೆ. ದುಬೈನ ಕೋಕಾ ಕೋಲಾ ಅರೆನಾದಲ್ಲಿ ಈ ಮಿನಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಚೆನ್ನೈ ತಂಡ ಅಳೆದು ತೂಗಿ ಆಟಗಾರರನ್ನು ಖರೀದಿಸಿದೆ. ವಿಶೇಷವೆಂದರೆ ನ್ಯೂಜಿಲೆಂಡ್ ತಂಡದ ಸ್ಟಾರ್ ಆಟಗಾರರನ್ನೇ ತಂಡಕ್ಕೆ ಸೇರಿಸಿಕೊಂಡಿದೆ. 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ರಚಿನ್ ರವೀಂದ್ರ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು. ರಚಿನ್ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ನಡುವೆ ಪೈಪೋಟಿ ನಡೆಯಿತು. ಅಂತಿಮವಾಗಿ 1.80 ಕೋಟಿ ರೂ.ಗೆ ರಚಿನ್ ಅವರನ್ನು ತಮ್ಮ ತೆಕ್ಕೆಗೆ ಹಕಿಕೊಳ್ಳುವಲ್ಲಿ ಚೆನ್ನೈ (ಸಿಎಸ್ಕೆ) ಯಶಸ್ವಿಯಾಯಿತು. 14 ಕೊಟಿ ರೂ.ಗೆ ಮಿಚೆಲ್ ಸೇಲ್ ಮತ್ತೊಬ್ಬ ಕಿವೀಸ್ ಸ್ಟಾರ್ ಪ್ಲೇಯರ್ ಡ್ಯಾರಿಲ್ ಮಿಚೆಲ್ ಭರ್ಜರಿ ಬೆಲೆಗೆ ಮಾರಾಟವಾಗಿದ್ದಾರೆ. 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಮಿಚೆಲ್ ಹರಾಜಿನಲ್ಲಿ ಭಾಗವಹಿಸಿದ್ದರು. ಅಂತಿಮವಾಗಿ ಮಿಚೆಲ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಬರೋಬ್ಬರಿ 14…
Author: AIN Author
ಬೆಂಗಳೂರು:- ಕಾಂಗ್ರೆಸ್ ಸರ್ಕಾರಕ್ಕೆ ಆಪರೇಷನ್ ಕಮಲದ ಅಗತ್ಯವಿಲ್ಲ. ತಾನಾಗಿಯೇ ಪತನವಾಗುವುದು ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಆಪರೇಷನ್ ಕಮಲದ ಮೂಲಕ ಕರ್ನಾಟಕದಲ್ಲಿ ಆಡಳಿತಾರೂಢ ಸರ್ಕಾರವನ್ನು ನಾವು ಬೀಳಿಸುವುದಿಲ್ಲ ಎಂದು ಹೇಳಿದರು. ರಾಜಕೀಯ ಪಕ್ಷಗಳಲ್ಲಿ ಸಹಜವಾಗಿಯೇ ಭಿನ್ನಾಭಿಪ್ರಾಯಗಳಿದ್ದು, ರಾಜ್ಯದ ಕಾಂಗ್ರೆಸ್ ಪಕ್ಷವೂ ಇದಕ್ಕೆ ಹೊರತಾಗಿಲ್ಲ. ಕರ್ನಾಟಕ ಕಾಂಗ್ರೆಸ್ ಪಕ್ಷದೊಳಗೆ ಅಜಿತ್ ಪವಾರ್ ಅವರಂತಹ ವ್ಯಕ್ತಿಗಳು ಇದ್ದಾರೆ ಎಂದು ಅಶೋಕ ಒತ್ತಿ ಹೇಳಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿವೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಎನ್‌ಐಎ ದಾಳಿ ನಡೆಸಿದೆ. ಕರ್ನಾಟಕದ ವಿವಿಧೆಡೆ ಭಯೋತ್ಪಾದಕ ಚಟುವಟಿಕೆಗಳಿಗೆ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಪಿಎಫ್ ಐ ಸಂಘಟನೆಯನ್ನು ನಿಷೇಧಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಿಎಫ್ ಐ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂದು ಅಶೋಕ ಕಿಡಿಕಾರಿದರು. ಕರ್ನಾಟಕ ಭಯೋತ್ಪಾದಕರ ಹಬ್ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದರು.
ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ (David Warner) ಅವರನ್ನು ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಬ್ಲಾಕ್ ಮಾಡಿದೆಯಂತೆ. ಈ ವಿಚಾರವನ್ನು ಸ್ವತಃ ವಾರ್ನರ್ ಅವರೇ ಶೇರ್ ಮಾಡಿಕೊಂಡಿದ್ದಾರೆ. ಟ್ರಾವಿಸ್ ಹೆಡ್ (Travis Head) ಅವರನ್ನು ಹರಾಜಿನಲ್ಲಿ ಹೈದರಾಬಾದ್ ಇಂದು ಖರೀದಿಸಿದೆ. ದುಬೈನಲ್ಲಿ ನಡೆದ ಐಪಿಎಲ್ 2024 ಹರಾಜಿನಲ್ಲಿ ಟ್ರಾವಿಸ್ ಹೆಡ್ ಅವರನ್ನು ಸನ್‌ರೈಸರ್ಸ್ 6.80 ಕೋಟಿಗೆ ಖರೀದಿಸಿತು. ಹೀಗಾಗಿ ಟ್ರಾವಿಸ್ ಹೆಡ್‌ಗೆ ಡೇವಿಡ್ ವಾರ್ನರ್ ಅವರು ಅಭಿನಂದನೆ ಸಲ್ಲಿಸಲು ಮುಂದಾಗಿದ್ದರು. ಈ ವೇಳೆ ಇನ್ ಸ್ಟಾ ಹಾಗೂ ಫೇಸ್‌ಬುಕ್ ನಲ್ಲಿ ಬ್ಲಾಕ್ ಆಗಿರೋ ವಿಚಾರ ವಾರ್ನರ್ ಗಮನಕ್ಕೆ ಬಂದಿದೆ. ಡೇವಿಡ್ ವಾರ್ನರ್ ಸನ್‌ರೈಸರ್ಸ್ ಹೈದರಾಬಾದ್ ಪರ ಐಪಿಎಲ್‌ನಲ್ಲಿ (IPL) ಆಡಿದ್ದರು. ಸನ್‌ರೈಸರ್ಸ್ ಹೈದರಾಬಾದ್‌ನ ನಾಯಕನಾಗಿ ಐಪಿಎಲ್ 2016ರ ಪ್ರಶಸ್ತಿಯನ್ನು ವಾರ್ನರ್ ಗೆದ್ದಿದ್ದರು. ಆದರೆ ಈಗ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದಲ್ಲಿ ಆಡುತ್ತಿದ್ದಾರೆ.
ವಿಶ್ವದ ಕೆಲವೆಡೆ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಹಲವೆಡೆ ಏರಿಕೆ ಆಗಿದೆ. ಭಾರತದಲ್ಲಿ ಬಹುತೇಕ ಕಡೆ ಬೆಲೆ ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,620 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 21ಕ್ಕೆ): 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,750 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,000 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 785 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,750 ರೂ 24 ಕ್ಯಾರಟ್ನ 10 ಗ್ರಾಂ…
ಬೆಂಗಳೂರು:- ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಮಗನಿಗೆ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶರತ್ ಕುಮಾರ್ ಶಿಕ್ಷೆಗೆ ಒಳಗಾದ ಅಪರಾಧಿ. ನ್ಯಾಯಾಧೀಶರಾದ ಎಂ.ಎಸ್.ಕಲ್ಪನಾ ಅವರು ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ. ‘ಅಪರಾಧಿ ವಿಪರೀತವಾಗಿ ಮದ್ಯ ಸೇವಿಸುತ್ತಿದ್ದ. ಕುಡಿತದ ಚಟಕ್ಕೆ ಹಣ ನೀಡುವಂತೆ ತಾಯಿ ಬಳಿ ಬಲವಂತ ಮಾಡುತ್ತಿದ್ದ. ಹಣ ಕೊಡದಿದ್ದರೆ ಮದುವೆ ಮಾಡು ಎಂದು ಪೀಡಿಸುತ್ತಿದ್ದ. ಅದಾದ ಮೇಲೆ ಮನೆ ಮಾರಾಟ ಮಾಡುವಂತೆ ಒತ್ತಾಯ ಹೇರುತ್ತಿದ್ದ. ನನ್ನ ಉಸಿರು ನಿಂತರೂ ಮನೆ ಮಾರಾಟ ಮಾಡುವುದಿಲ್ಲ ಎಂದು ತಾಯಿ ಹೇಳಿದ್ದರು. ಶಾಶ್ವತವಾಗಿಯೇ ಉಸಿರು ನಿಲ್ಲಿಸುತ್ತೇನೆ ಎಂದು ಹೇಳಿದ್ದ ಅಪರಾಧಿ, 2018ರ ಜೂನ್ 13ರಂದು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಅದಾದ ಮೇಲೆ ಕೊಲೆ ಮಾಡಿಲ್ಲ ಎಂದು ನಾಟಕವಾಡಿದ್ದ’ ಎಂದು ಮೂಲಗಳು ಹೇಳಿವೆ.
ಬೆಂಗಳೂರು:- ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿಚಾರಣೆ ಪ್ರಶ್ನಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ, ಖಾದರ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಿವಾಜಿನಗರ ಠಾಣೆ ಸಬ್ ಇನ್ಸ್‌ಪೆಕ್ಟರ್ ದಾಖಲಿಸಿದ್ದ ಖಾಸಗಿ ದೂರು ಮತ್ತು ಆ ಕುರಿತ ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಯು.ಟಿ. ಖಾದರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. ಇದೇ ಪ್ರಕರಣ ಸಂಬಂಧ, ಈ ಹಿಂದೆ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರ ವಿರುದ್ಧ ಶಿವಾಜಿ ನಗರ ಠಾಣೆ ಪೊಲೀಸರು ದಾಖಲಿಸಿದ್ದ ದೂರು ರದ್ದುಪಡಿಸಿ ಹೈಕೋರ್ಟ್, 2023ರ ಜುಲೈ 7ರಂದು ಆದೇಶಿಸಿತ್ತು. ಅದೇ ಆದೇಶವನ್ನು ಆಧರಿಸಿ ಯು.ಟಿ. ಖಾದರ್ ಅವರ ವಿರುದ್ಧದ ಪ್ರಕರಣವನ್ನೂ ರದ್ದುಪಡಿಸಿ ಆದೇಶಿಸಿದೆ.
ಟರ್ಕಿ ಸಂಸದ ಹಸನ್ ಬಿಟ್ಮೆಜ್ ಭಾಷಣವನ್ನು ನೀಡುತ್ತಿದ್ದರು ಮತ್ತು ಬಿಟ್ಮೆಜ್ ಗಾಜಾದ ಮೇಲೆ ಇಸ್ರೇಲ್ ದಾಳಿಯನ್ನು ಬಲವಾಗಿ ಟೀಕಿಸುತ್ತಿದ್ದರು. ಅಲ್ಲಾನ ಕೋಪದಿಂದ ಯಾರೂ ತಪ್ಪಿಸಿಕೊಳ್ಳಲಾಗದು ಎಂದು ಹೇಳುತ್ತಿರುವಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿರೋಧ ಪಕ್ಷ ಫೆಲಿಸಿಟಿಯ ಸಂಸದ ಹಸನ್ ಅವರನ್ನು ಅಂಕಾರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಫಹ್ರೆಟಿನ್ ತಿಳಿಸಿದ್ದಾರೆ. ಕೈರೋದ ಅಲ್ ಅಜರ್ ವಿಶ್ವವಿದ್ಯಾನಿಲಯದ ಪದವೀಧರರಾದ ಬಿಟ್ಮೆಜ್ ಅವರು ಇಸ್ಲಾಮಿಕ್ ಯೂನಿಯನ್ ಸಂಶೋಧನಾ ಕೇಂದ್ರದ ಅಧ್ಯಕ್ಷರಾಗಿದ್ದರು. https://twitter.com/D_abdulkader/status/1735289241888821575?ref_src=twsrc%5Etfw%7Ctwcamp%5Etweetembed%7Ctwterm%5E1735289241888821575%7Ctwgr%5Ede2c5d5121c920062683e1af4cd3ed82e2f8b5d4%7Ctwcon%5Es1_&ref_url=https%3A%2F%2Ftv9kannada.com%2Fworld%2Fturkish-mp-hasan-bitmez-who-suffered-heart-attack-during-speech-in-parliament-dies-nyr-740773.html ಈ ಹಿಂದೆ ಇಸ್ಲಾಮಿಕ್ ಸರ್ಕಾರೇತರ ಸಂಸ್ಥೆಗಳಿಗೆ ಕೆಲಸ ಮಾಡಿದ್ದರು ಎಂದು ಅವರ ಸಂಸತ್ತಿನ ಪರಿಚಯ ಪತ್ರದಲ್ಲಿ ತಿಳಿಸಲಾಗಿದೆ. ಬಿಟ್ಮೆಜ್ ಅವರಿಗೆ ಒಂದು ಮಗು ಇದೆ. ಇಸ್ರೇಲ್ ದುಷ್ಕೃತ್ಯಗಳು ಮತ್ತು ಹತ್ಯಾಕಾಂಡಗಳನ್ನು ಮಾಡಿದ್ದು ಇಡೀ ಮಾನವಕುಲವನ್ನು ನಾಚಿಕೆಗೇಡು ಮಾಡಿದೆ. ಅಲ್ಲಾ ಇಸ್ರೇಲ್ಗೆ ತಕ್ಕ ಪಾಠ ಕಲಿಸುತ್ತಾನೆ ಎಂದು ಹೇಳುತ್ತಾ ಕುಸಿದುಬಿದ್ದಿದ್ದಾರೆ.
ಬೆಂಗಳೂರು:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾಗಿ ಈ ಹಿಂದೆ ಬೆಳಗಾವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ವಿರುದ್ಧ ಜಿಲ್ಲಾ ಕಚೇರಿ ಸಿಬ್ಬಂದಿಗೆ ಹಾಗೂ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಿರುಕುಳ, ಮಾನಸಿಕ ಹಿಂಸೆ, ಮಹಿಳಾ ಸಿಬ್ಬಂದಿ ಜೊತೆ ದುರ್ನಡತೆ, ದಬ್ಬಾಳಿಕೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿಬಂದಿದ್ದು, ಹೀಗಾಗಿ ಅವರನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಕಚೇರಿ ಸಮಯ ಮುಗಿದ ನಂತರವೂ ಅವಶ್ಯಕತೆ ಇಲ್ಲದಿದ್ದರೂ ಮಹಿಳಾ ಸಿಬ್ಬಂದಿಯನ್ನು ರಾತ್ರಿ 8-9 ಗಂಟೆವರೆಗೆ ಕಚೇರಿಯಲ್ಲಿ ಉಳಿಯುವಂತೆ ಆದೇಶಿಸಿದ್ದರು. ಮನೆಗೆ ಹೋದ ಬಳಿಕವೂ ಸಿಬ್ಬಂದಿಗೆ ರಾತ್ರಿ 10-11 ಗಂಟೆಗೆ ಕರೆ ಮಾಡಿ ಕೆಲಸ ಹೇಳುತ್ತಿದ್ದರು. ಇಲಾಖೆಯ ಕಾರ್ಯಕ್ರಮ ನಡೆಯುತ್ತಿದ್ದಾಗ ಬೇರೆ ಇಲಾಖೆ ಅಧಿಕಾರಿಗಳ ಎದುರಿಗೆ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು, ಸಿಬ್ಬಂದಿಯನ್ನು ಕೆಟ್ಟ ಶಬ್ದಗಳಿಂದ ಬೈದು ಅವಮಾನಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು. ಸಿಬ್ಬಂದಿಗೆ ಯೋಗ್ಯತೆ ಇಲ್ಲ, ದನ ಕಾಯೋನು, ಯೂಸ್ ಲೆಸ್ ಫೆಲೋ, ಕತ್ತೆ ಮೇಯಿಸೋಕೆ ಹೋಗಿ ಎಂದು ಬಾಯಿಗೆ ಬಂದಂತೆ ಮಾತನಾಡುತ್ತಿದ್ದರು. ಕಾಲಕಾಲಕ್ಕೆ…
NTPC ಅಧಿಕೃತ ಅಧಿಸೂಚನೆಯ ಮೂಲಕ ಎಕ್ಸಿಕ್ಯೂಟಿವ್ ಟ್ರೈನಿ-ಫೈನಾನ್ಸ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. NTPC ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಹುದ್ದೆಗಳ ಸಂಖ್ಯೆ: 30 ಉದ್ಯೋಗ ಸ್ಥಳ: ಭಾರತ ಹುದ್ದೆಯ ಹೆಸರು: ಎಕ್ಸಿಕ್ಯುಟಿವ್ ಟ್ರೈನಿ-ಫೈನಾನ್ಸ್ ಸಂಬಳ: ರೂ.40000-140000/- ಪ್ರತಿ ತಿಂಗಳು NTPC ನೇಮಕಾತಿ 2023 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ: NTPC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ CA, CMA ಪೂರ್ಣಗೊಳಿಸಿರಬೇಕು. ವಯಸ್ಸಿನ ಮಿತಿ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 20-ಡಿಸೆಂಬರ್-2023 ರಂತೆ 29 ವರ್ಷಗಳು. ವಯೋಮಿತಿ ಸಡಿಲಿಕೆ: OBC ಅಭ್ಯರ್ಥಿಗಳು: 03 ವರ್ಷಗಳು SC/ST ಅಭ್ಯರ್ಥಿಗಳು: 05…
ಬಾಳೆ ಹಣ್ಣು ನೈಸರ್ಗಿಕವಾಗಿ ಸಿಗುವಂತಹ ಹಣ್ಣು. ಬಾಳೆಹಣ್ಣು ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ನಮ್ಮ ರಾಜ್ಯದಲ್ಲಿಯೂ ಹೆಚ್ಚಾಗಿ ಬಾಳೆ ಬೆಳೆಯುತ್ತಾರೆ. ಮಾರುಕಟ್ಟೆಯಲ್ಲಿ ಬೇರೆ ಹಣ್ಣುಗಳಿಗಿಂತ ಸ್ವಲ್ಪ ಕಡಿಮೆ ಬೆಲೆಯಲ್ಲಿ ಸಿಗುವಂತಹ ಬಾಳೆಹಣ್ಣನ್ನು ತಿನ್ನುವುದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳು ಇವೆ. ಹೆಚ್ಚು ಉಪ್ಪಿನಾಂಶ ಇರುವ ಆಹಾರ ಸೇವನೆಯ ನಂತರ ರಕ್ತದೊತ್ತಡ, ಮಟ್ಟವನ್ನು ನಿಯಂತ್ರಣದಲ್ಲಿಡಲು ಪೊಟ್ಯಾಶಿಯಂ ಅಂಶವಿರುವ ಬಾಳೆಹಣ್ಣು ಸೇವನೆ ಸಹಾಯಕ ವಾಗುತ್ತದೆ. ನಿಯಮಿತವಾಗಿ ಬಾಳೆಹಣ್ಣು ಸೇವನೆಯಿಂದ ಕಾಲಾಂತರದಲ್ಲಿ ಪಾರ್ಶ್ವವಾಯು ಅಪಾಯ ಕಡಿಮೆಯಾಗುತ್ತದೆ. ಬಾಳೆಹಣ್ಣಿನಲ್ಲಿ ನಾರಿನಂಶ ಹೇರಳವಾಗಿರುವುದರಿಂದ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬಾಳೆ ಹಣ್ಣನ್ನು ತಿನ್ನುವುದರಿಂದ ಹೃದಯ ಸಂಬಂಧಿ ಕಾಯಿಲೆಗಳನ್ನು ದೂರ ಮಾಡಿಕೊಳ್ಳಬಹುದು ಮತ್ತು ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶವೂ ಇರುವುದರಿಂದ ಅದು ರಕ್ತದ ಒತ್ತಡ ಕಡಿಮೆ ಮಾಡುವುದರ ಜೊತೆಗೆ ಹಿಮೋಗ್ಲೋಬಿನ್ ಅಂಶವನ್ನು ಹೆಚ್ಚು ಮಾಡುತ್ತದೆ. ಒಂದು ಗ್ಲಾಸ್ ಹಾಲು ಮತ್ತು ಬಾದಾಮಿಯನ್ನು ತಿನ್ನುವುದರಿಂದ ಎಷ್ಟು ಪೊಟ್ಯಾಶಿಯಂ ಅಂಶವು ದೇಹಕ್ಕೆ ದೊರೆಯುತ್ತದೋ ಅಷ್ಟೊಂದು ಪೊಟ್ಯಾಶಿಯಂ ಅಂಶವನ್ನು ಒಂದು ಬಾಳೆಹಣ್ಣು ತಿನ್ನುವುದರಿಂದ ನಾವು ಪಡೆಯಬಹುದು.…