Author: AIN Author

ಬೇಲೂರು:- ತಾಲೂಕಿನ ದೇವರಕೇಶವಿ ಗ್ರಾಮದಲ್ಲಿ ರುದ್ರಭೂಮಿಗೆ ತೆರಳು ಗ್ರಾಮಸ್ಥರು ದಶಕಗಳಿಂದ ಅನುಭವಿಸುತ್ತಿದ್ದ ಸಮಸ್ಯೆಗೆ ತಹಶೀಲ್ದಾರ್ ಮಮತಾ ಅವರು ಸ್ಪಂದಿಸಿ ಇಂದು ಒತ್ತುವರಿಯಾಗಿದ್ದ ರಸ್ತೆಯನ್ನು ತೆರವುಗೊಳಿಸಿದರು. ಅರೇಹಳ್ಳಿ ಹೋಬಳಿ, ಹುನುಗನಹಳ್ಳಿ ಗ್ರಾ.ಪಂ ವ್ಯಾಪ್ತಿಯ ದೇವರಕೇಶವಿ ಗ್ರಾಮದಲ್ಲಿ‌ ಸರ್ವೆ ನಂಬರ್ 45ರಲ್ಲಿ ಇದ್ದ ರುದ್ರಭೂಮಿಗೆ ಗ್ರಾಮಸ್ಥರು ತೆರಳಲು ರಸ್ತೆ ಇಲ್ಲದೆ ಸಮಸ್ಯೆ ಅನುಭವಿಸುತ್ತಿದ್ದರು. ಅನೇಕ ಭಾರಿ ಈ ಸಮಸ್ಯೆ ಕುರಿತು ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳಿಗೆ ದಶಕಗಳಿಂದ ಮನವಿ‌ ಮಾಡುತ್ತಲೆ ಇದ್ದರು. ಆದರೆ ಗ್ರಾಮಸ್ಥರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ತಹಶೀಲ್ದಾರ್ ಮಮತಾ ಅವರು ಇಂದು ಬೆಳ್ಳಂಬೆಳಗ್ಗೆ ದೇವರಕೇಶವಿ ಗ್ರಾಮಕ್ಕೆ ತೆರಳಿ ರಸ್ತೆ ತೆರವುಗೊಳಿಸುವ ಮೂಲಕ ಗ್ರಾಮದ ಸಮಸ್ಯೆಗೆ ತಿಲಾಂಜಲಿ ಹಾಡಿದ್ದಾರೆ. ಇಂದು ದೇವರಕೇಶವಿ ಗ್ರಾಮಕ್ಕೆ ಬೆಳ್ಳಂಬೆಳಗ್ಗೆ 7 ಗಂಟೆಗೆ ತಹಶೀಲ್ದಾರ್ ಮಮತಾ ಹಾಗೂ ಸಿಂಬಂಧಿಗಳೊಂದಿಗೆ ತೆರಳಿ ಸ.ನಂ 45 ರಲ್ಲಿದ್ದ ರುದ್ರಭೂಮಿಗೆ ತೆರಳುವ ಸರ್ವೆ ನಂಬರ್ 45/2 ಮತ್ತು 45/3ರ ಜಾಗದಲ್ಲಿ ರಸ್ತೆ ತೆರವುಗೊಳಿಸಿ ರುದ್ರಭೂಮಿಗೆ ತೆರಳಲು ಅನುವುಮಾಡಿಕೊಟ್ಟು, ದಶಕಗಳ ಬೇಡಿಕೆಯಾದ ಈ ಸಮಸ್ಯೆಯನ್ನು ಬಗೆಹರಿಸಿದ‌…

Read More

ಹುಬ್ಬಳ್ಳಿ: ರಾಜ್ಯ ಸರ್ಕಾರ ಅಧಿಕಾರಿಗಳ ವರ್ಗಾವಣೆಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಿರುವುದರಿಂದ ಅಧಿಕಾರಿಗಳು ಯೋಜನೆಯಲ್ಲಿ ಕಮಿಷನ್ ಟಾರ್ಗೆಟ್ ಫಿಕ್ಸ್ ಮಾಡುತ್ತಾರೆ. ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ ಎಂದು ಅನಿಸುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಆರು ತಿಂಗಳ ಆಡಳಿತದ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರೂ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಕೇವಲ ಸುಳ್ಳು ಹೇಳುವುದರಲ್ಲಿಯೇ ಕಾಲಹರಣ ಮಾಡುತಿದ್ದಾರೆ ಎಂದು ಆರೋಪಿಸಿದರು. ಈ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನೀಡಿರುವ ಭರವಸೆ ಈಡೇರಿಲ್ಲ. ಅವರೇ ಮಧ್ಯಂತರ ಆರ್ಥಿಕ ಸ್ಥಿತಿಗತಿ ಕುರಿತು ವರದಿ ಮಂಡನೆ ಮಾಡಿದರು. ಆದರೆ, ಅದರಿಂದ ಏನು ಸುಧಾರಣೆ ಆಗಿಲ್ಲ ಎಂದು ಗೊತ್ತಾಗುತ್ತದೆ. ಪ್ರತಿ ವರ್ಷ ಬಂಡವಾಳ ವೆಚ್ಚ ಹೆಚ್ಚಾಗುತ್ತ ಹೋಗಬೇಕು. ಆದರೆ, ಈ ವರ್ಷ ಕಡಿಮೆತಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತೆಗೆದುಕೊಂಡು ಹೋಗಿದ್ದಾರೆ. ಎಷ್ಟೇ ಗ್ಯಾರೆಂಟಿ ಯೋಜನೆ ಘೋಷಣೆ ಮಾಡಲಿ…

Read More

ಬೆಂಗಳೂರು:- ನಗರದಲ್ಲಿ ಧೂಮಪಾನ ಮಾಡದ ಮಕ್ಕಳು, ಮಹಿಳೆಯರು ಮತ್ತು ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಮಂಡಳಿ ಉಪಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ರಾಘವೇಂದ್ರ ಶೆಟ್ಟಿಗಾರ್* ರವರು ತಿಳಿಸಿದರು. ನಗರದ ದಕ್ಷಿಣ ವಲಯ ಕಛೇರಿ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಕೋಟ್ಪಾ ಕಾಯ್ದೆ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಿ, ಕಾಯ್ದೆ ಉಲ್ಲಂಘಿಸುವವರ ವಿರುದ್ದ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ಪೀಳಿಗೆಗೆ ಉತ್ತಮ ಸಮಾಜವನ್ನು ನಿರ್ಮಿಸಲು ನಾವೆಲ್ಲರೂ ಕೈಜೋಡಿಸಬೇಕೆಂದು ಹೇಳಿದರು. ಹಿರಿಯ ಪೋಲಿಸ್ ಅಧಿಕಾರಿಯಾದ ಶ್ರೀ ಬದ್ರಿನಾಥ್ ರವರು ಮಾತನಾಡಿ, ರಸ್ತೆ ಬದಿಯ ಸಣ್ಣ ಸಣ್ಣ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದರ ಮೇಲೆ ನಿಗಾವಹಿಸಿ ತಡೆಯಬೇಕು. ಹುಕ್ಕಾಬಾರ್, ಬಾರ್ ಮತ್ತು ರೆಸ್ಟೊರೆಟ್, ತಂಬಾಕು ಉತ್ಪನ್ನ ಮಾರಾಟಗಾರರು ಕಾಯ್ದೆ ಉಲ್ಲಂಘಿಸಿರುವ ವಿರುದ್ದ ಕ್ರಮ ಜರುಗಿಸಬೇಕೆಂದು ತಿಳಿಸಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶ…

Read More

ಬೆಂಗಳೂರು:- ಶರಾವತಿ ಸಂತ್ರಸ್ತರ ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಲಿಂಗನಮಕ್ಕಿ ಜಲಾಶಯಕ್ಕಾಗಿ ತಮ್ಮ ಭೂಮಿ ಕಳೆದುಕೊಂಡ ಸಂತ್ರಸ್ತರು ಮತ್ತು ಉಳಿಮೆ ಜಾಗದ ಭೂ ಹಕ್ಕು ಪತ್ರ ನೀಡುವಂತೆ 6 ದಶಕಗಳಿಂದ ಹೋರಾಟ ಮಾಡುತ್ತಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ತ್ವರಿತವಾಗಿ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಎಂದರು. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕು ಕಲ್ಪಿಸುವ, ಅರಣ್ಯ ಹಕ್ಕು ಕಾಯಿದೆಯಡಿ ಅರಣ್ಯವಾಸಿಗಳ ಹಕ್ಕು ರಕ್ಷಿಸುವ ಹಾಗೂ ಹುಲಿ ಉಗುರು ಸೇರಿದಂತೆ ವನ್ಯ ಜೀವಿಗಳ ಅಂಗಾಂಗದ ಫಲಕಗಳು, ಆಭರಣಗಳೇ ಮೊದಲಾದ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು ಒಂದು ಬಾರಿ ಅವಕಾಶ ನೀಡುವ ನಿಟ್ಟಿನಲ್ಲಿ ಕಾನೂನಾತ್ಮಕ ವಿಷಯಗಳ ಕುರಿತಂತೆ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಮತ್ತು ಕಾನೂನು ಇಲಾಖೆ ಹಾಗೂ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರು ಸೂಚನೆ ನೀಡಿದ್ದಾರೆ. 1958ರಿಂದ 1969ರ ನಡುವೆ ರಾಜ್ಯಕ್ಕೆ ಬೆಳಕು ನೀಡುವ ಲಿಂಗನಮಕ್ಕಿ ಜಲಾಶಯ…

Read More

ಬೆಂಗಳೂರು:- ಕಾಂಗ್ರೆಸ್ ಗೂಂಡಾಗಿರಿ ಮುಂದುವರಿದರೆ ಬಿಜೆಪಿ ಕಾರ್ಯಕರ್ತರು ತಕ್ಕ ಉತ್ತರ ಕೊಡಲಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಿನ್ನೆ ಚಿತ್ರದುರ್ಗದಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಪತ್ರಿಕಾಗೋಷ್ಠಿ ಮಾಡುವಾಗ ಕೆಲವು ಕಾಂಗ್ರೆಸ್ ಗೂಂಡಾಗಳು ಬಂದು ಅವರ ಮೇಲೆ ಇಲ್ಲಸಲ್ಲದ ಆಪಾದನೆ ಮಾಡಿದ್ದಾರೆ. ಜೊತೆಗೆ ಅವರ ಪತ್ರಿಕಾಗೋಷ್ಠಿಗೆ ತೊಂದರೆಯನ್ನುಂಟು ಮಾಡಿ ಅವರ ಮೇಲೆ ಎರಗಿದ್ದು ಖಂಡನೀಯ ಎಂದರು. ಕಾರಜೋಳ ಅವರು ಪಕ್ಷದ ಪರವಾಗಿ ಅನೇಕ ಕಾರ್ಯಚಟುವಟಿಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದಲಿತರಿಗಾಗಿ ಮೀಸಲಿಟ್ಟ ಎಸ್‍ಸಿಎಸ್‍ಪಿಎಸ್‍ಟಿಪಿ 11 ಸಾವಿರ ಕೋಟಿ ಹಣವನ್ನು ಬೇರೆ ಉದ್ದೇಶಕ್ಕೆ ವಿನಿಯೋಗಿಸುವುದನ್ನು ನಮ್ಮ ಪಕ್ಷ ಮೊದಲಿನಿಂದಲೂ ಖಂಡಿಸುತ್ತಿದೆ ಹಾಗೂ ವಿರೋಧಿಸುತ್ತಿದೆ. ಇದೇ ವಿಚಾರವನ್ನು ಬಳಸಿ, ನಾನು, ಕಾರಜೋಳ, ರಾಜೀವ್, ಎನ್.ಮಹೇಶ್ ಹೀಗೆ ಅನೇಕ ಮುಖಂಡರು ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಆಂದೋಲನ ಶುರು ಮಾಡಿದ್ದೇವೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ದಲಿತರಿಗೆ ದೋಖಾ ಮಾಡಿದೆ,…

Read More

ಬಾಗಲಕೋಟೆ: ಟಾಟಾ‌ ಸಫಾರಿ  ಬೈಕ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟ ಪ್ರಕರಣ ಇದೀಗ ತಿರುವು ಪಡೆದುಕೊಂಡಿದೆ. ಆಸ್ತಿ ವಿಚಾರವಾಗಿ ರೈತನನ್ನು ವಿಜಯಪುರದ ಜಲನಗರ ಠಾಣೆ ಕಾನ್​ಸ್ಟೇಬಲ್ ಕೊಲೆ ಮಾಡಿದ್ದಾಗಿ ತಿಳಿದುಬಂದಿದೆ. ಡಿಸೆಂಬರ್ 5 ರಂದು ಬೆಳಗ್ಗೆ ಹತ್ತೂವರೆ ಸಮಯಕ್ಕೆ ಟಾಟಾ‌ ಸಫಾರಿ ಬೈಕ್ ಮುಖಾಮುಖಿ ಡಿಕ್ಕಿಯಾಗಿ ರೈತ ಮಡ್ಡೆಸಾಬ್ ಗಲಗಲಿ (55) ಮೃತಪಟ್ಟಿದ್ದರು ಎಂದು ವರದಿಯಾಗಿತ್ತು. ಆದರೆ ಇದು ಅಪಘಾತವಲ್ಲ, ಆಸ್ತಿ ವಿಚಾರದಲ್ಲಿ ನಡೆದ ಕೊಲೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ. https://ainlivenews.com/hebburu-police-operation-thieves-wanted-by-five-police-stations-arrested/ ಮುಧೋಳ ತಾಲೂಕಿನ ಶಿರೋಳ‌ ಗ್ರಾಮದಲ್ಲಿರುವ ಮೂರುವರೆ ಎಕರೆ ಜಮೀನು ವಿವಾದ ವಿಚಾರವಾಗಿ ಕಾನ್​ಸ್ಟೇಬಲ್ ಮನ್ಸೂರ್ ಅಲಿ ಟಾಟಾ ಸಫಾರಿ ಕಾರಿನಿಂದ ಬೈಕಕ್​ಗೆ ಡಿಕ್ಕಿ‌ ಹೊಡೆದು ಮಡ್ಡೆಸಾಬ್ ಗಲಗಲಿ ಅವರನ್ನು ಕೊಲೆ ಮಾಡಿದ್ದನು. ಕೃತ್ಯ ಎಸಗಲು ಸಹೋದರ‌ ಮೆಹಮೂದ್ ಕೈಜೋಡಿಸಿದ್ದಾನೆ. ಸದ್ಯ, ಕೃತ್ಯದ ಸಮಯದಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಿಸಿದ್ದ ಸಾವಳಗಿ ಠಾಣಾ ಪೊಲೀಸರು ಇದೀಗ ಕೊಲೆ ಪ್ರಕರಣ ದಾಖಲಿಸಿಕೊಂಡು ಮನ್ಸೂರ್ ಹಾಗೂ ಈತನ ಸಹೋದರ ಮೆಹಮೂದ್​ನನ್ನು ಬಂಧಿಸಿ…

Read More

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್‌-19 (Covid-19) ಹೊಸ ತಳಿ (JN.1) ಆರ್ಭಟ ಶುರುವಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆಗಳನ್ನು ನೀಡಿದೆ. ಕೇಂದ್ರ ಆರೋಗ್ಯ ಇಲಾಖೆ ಕೊರೊನಾ ನಿಯಂತ್ರಣಕ್ಕೆ ರಾಜ್ಯಗಳಿಗೆ ಸಲಹೆ ನೀಡಿದೆ. ಮುಂಬರುವ ಹಬ್ಬಳ ಬಗ್ಗೆ ನಿಗಾ ವಹಿಸಿ. ಅಲ್ಲದೇ ಜಾಗೃತಿ ಮೂಡಿಸುವ ಕ್ರಮವಹಿಸಿ ಎಂದು ಸೂಚಿಸಿದೆ. ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ನಿಗಾ ವಹಿಸಬೇಕು. ನಿಯಮಿತವಾಗಿ ಇನ್ಫ್ಲುಯೆನ್ಸ ತರಹದ ಕಾಯಿಲೆಗಳ ಬಗ್ಗೆ ಎಚ್ಚರವಹಿಸಬೇಕು. ತೀವ್ರತರವಾದ ಉಸಿರಾಟದ ಕಾಯಿಲೆ ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಬೇಕು ಎಂದು ತಿಳಿಸಿದೆ. https://ainlivenews.com/hebburu-police-operation-thieves-wanted-by-five-police-stations-arrested/ ರೋಗ ಲಕ್ಷಣಗಳಿದ್ದರೆ ಪರೀಕ್ಷೆ ಮಾಡಬೇಕು. ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಮಾದರಿ ಪರೀಕ್ಷೆ ಮಾಡಬೇಕು. ಆಸ್ಪತ್ರೆಗಳು ಸುಸಜ್ಜಿತವಾಗಿರುವಂತೆ ನೋಡಿಕೊಳ್ಳಬೇಕು. ಐಎಲ್‌ಐ, ಸಾರಿ ಕೇಸ್‌ಗಳ ಮೇಲೆ ನಿಗಾ ವಹಿಸಬೇಕು. ಚಿಕಿತ್ಸೆಗೆ ಬೇಕಾದ ಮೂಲಸೌಕರ್ಯ ಕ್ರೋಢೀಕರಿಸಿಕೊಳ್ಳಬೇಕು ಎಂದು ಸಲಹೆ ನೀಡಿದೆ.  ಪ್ರತಿ ಜಿಲ್ಲೆ ಮತ್ತು ನಗರಗಳಲ್ಲಿ ಆರ್‌ಟಿಪಿಸಿಆರ್‌, ರ‍್ಯಾಪಿಡ್‌ ಆ್ಯಂಟಿಜನ್ ಟೆಸ್ಟ್ ಮಾಡಬೇಕು. ಆರ್‌ಟಿಪಿಸಿಆರ್‌ ಪಾಸಿಟಿವ್ ಆದರೆ ಜೆನೆಮಿಕ್ ಸೀಕ್ವೆನ್ಸ್‌ಗೆ ಸ್ಯಾಂಪಲ್ ಕಳಿಸಬೇಕು. ಕೊವಿಡ್ ರೂಲ್ಸ್‌ಗಳನ್ನ…

Read More

ಬೆಂಗಳೂರು: ಸಾರ್ವಜನಿಕರ ಬಳಿ ಇರುವ ವನ್ಯಜೀವಿ  ಅಂಗಾಂಗಗಳನ್ನು ಅರಣ್ಯ ಇಲಾಖೆಗೆ (Forest Department) ವಾಪಸ್ ಮಾಡಲು 3 ತಿಂಗಳ ಅವಧಿ ನೀಡಲು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಇಂದು ವಿಕಾಸ ಸೌಧದಲ್ಲಿ ಸಭೆ ನಡೆಸಿ 3 ತಿಂಗಳ ಕಾಲಾವಕಾಶ ಕೊಡುವ ನಿರ್ಧಾರ ಮಾಡಲಾಗಿದೆ. https://ainlivenews.com/where-is-the-morality-of-the-congressmen-they-should-remember-the-emergency-situation-ct-ravi/ ಅರಣ್ಯ ಇಲಾಖೆ, ಕಾನೂನು ಇಲಾಖೆ ಸಭೆ ಬಳಿಕ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ವನ್ಯಜೀವಿ ಅಂಗಾಗ ವಾಪಸ್ ಕೊಡಲು ಕೊನೇ ಅವಕಾಶ ಕೊಡಲು ತೀರ್ಮಾನ ಮಾಡಲಾಗಿದೆ. ಒನ್ ಟೈಂ ಪ್ರಾಣಿ ಅಂಗಾಂಗ ಹಿಂತಿರುಗಿಸಲು 3 ತಿಂಗಳು ಸಮಯ ಕೊಡಲು ತೀರ್ಮಾನ ಆಗಿದೆ. ಕಾನೂನು ಇಲಾಖೆ ಕೂಡಾ ಇದಕ್ಕೆ ಒಪ್ಪಿಗೆ ನೀಡಿದೆ. ಮುಂದಿನ ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತೇವೆ ಎಂದರು.

Read More

ಬೆಂಗಳೂರು: ಈ ಹಿಂದೆ ಅಧಿಕಾರಕ್ಕಾಗಿ ದೇಶಕ್ಕೆ ತುರ್ತು ಪರಿಸ್ಥಿತಿ  ಹೇರಿದ್ದ ಕಾಂಗ್ರೆಸ್ (Congress) ಪಕ್ಷದವರಿಗೆ ಸದನದಲ್ಲಿ ಹೇಗೆ ನಡೆದುಕೊಳ್ಳಬೇಕೆಂದು ತಿಳಿದಿಲ್ಲ ಎಂದು ಬಿಜೆಪಿ (BJP) ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ (CT Ravi) ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಧಾನಮಂತ್ರಿಯವರ ಕುರಿತು ಅನಗತ್ಯ ಟೀಕೆ ಮಾಡುವ ಕಾಂಗ್ರೆಸ್ಸಿಗರು ಪ್ರಧಾನಿಯವರನ್ನು ಸರ್ವಾಧಿಕಾರಿ ಎನ್ನುತ್ತಿದ್ದಾರೆ. ಡಿ.ಕೆ.ಸುರೇಶ್ (DK Suresh) ಮತ್ತು ಇತರ ಕಾಂಗ್ರೆಸ್ಸಿಗರಿಗೆ ನೈತಿಕತೆ ಎಲ್ಲಿದೆ? ಅವರು ತುರ್ತು ಪರಿಸ್ಥಿತಿಯನ್ನು ನೆನಪು ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು ತುರ್ತು ಪರಿಸ್ಥಿತಿ ಹೇರಿ, ಕಮಿಟಿ ಪ್ರವಾಸಕ್ಕೆ ಬಂದ ಸಂಸದರನ್ನು ಬಂಧಿಸಿ ಜೈಲಿಗೆ ಹಾಕಿದ್ದರು. ಕರ್ನಾಟಕದ ಜೈಲಿನಲ್ಲಿ ಎಲ್‌ಕೆ ಅಡ್ವಾಣಿ, ವಾಜಪೇಯಿ ಇವರೆಲ್ಲರೂ ಇದ್ದರು. ಅಲಹಾಬಾದ್ ಹೈಕೋರ್ಟ್ ಇಂದಿರಾಗಾಂಧಿಯವರ ಲೋಕಸಭಾ ಸದಸ್ಯತ್ವ ರದ್ದು ಮಾಡಿದ್ದನ್ನೇ ಕಾರಣ ಮಾಡಿ ತುರ್ತು ಪರಿಸ್ಥಿತಿ ಹೇರಲಾಗಿತ್ತು ಎಂದು ಪ್ರಶ್ನೆಗೆ ಉತ್ತರ ನೀಡಿದರು. ಅವರು…

Read More

ದೊಡ್ಡಬಳ್ಳಾಪುರ: ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ RDPR ದೊಡ್ಡಬಳ್ಳಾಪುರ ವತಿಯಿಂದ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ರಣರೋಚಕ‌ ಫೈನಲ್ ಪಂದ್ಯದಲ್ಲಿ ಪೊಲೀಸ್ ಇಲಾಖೆ ಕಡೆಯ ಓವರ್ ನಲ್ಲಿ ಆರ್ ಡಿಪಿಆರ್ ಎದುರು ವಿಜಯ ಸಾಧಿಸಿ 2023-24ನೇ ಸಾಲಿನ ಸೌಹಾರ್ದ ಕ್ರಿಕೆಟ್ ಕಪ್ ಗೆಲ್ಲುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ(RDPR) ತಂಡ ರನ್ನರ್ಸ್ ಪ್ರಶಸ್ತಿ ಪಡೆಯಿತು. ಕಂದಾಯ ಇಲಾಖೆ ತಂಡ‌ ಹಾಗೂ ಮಾಧ್ಯಮ ಬಳಗ ಕ್ರಮವಾಗಿ ಮೂರು‌ ಮತ್ತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡವು. ಮಾಧ್ಯಮ ಬಳಗ ಹಾಗೂ ಪೊಲೀಸ್ ತಂಡಗಳ ನಡುವೆ ನಡೆದ ಮೊದಲ ಪಂದ್ಯದಲ್ಲಿ ಮಾಧ್ಯಮ ತಂಡ ಪರಾಭವಗೊಂಡಿತು. ಪೊಲೀಸ್ ತಂಡದ ಆಟಗಾರ ಶಿವಾನಂದ್ ಅವರ ಅದ್ಭುತ ಬ್ಯಾಟಿಂಗ್ ಫಲವಾಗಿ ಪೊಲೀಸ್ ಇಲಾಖೆ ವಿಜಯ ಸಾಧಿಸಿತು. ದ್ವಿತೀಯ ಪಂದ್ಯ ಕಂದಾಯ ಇಲಾಖೆ ಹಾಗೂ ಆರ್ ಡಿಪಿಆರ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್ ಡಿಪಿಆರ್ ವಿಜಯ ಸಾಧಿಸಿತು. ಮೂರನೇ…

Read More