ಧಾರವಾಡ: ಹು-ಧಾ ಮುಖ್ಯ ರಸ್ತೆಯ ರಾಯಾಪುರದ ಬಳಿ ಒರೋ ಇಸ್ಕಾನ್’ನಲ್ಲಿ ಡಿಸೆಂಬರ್ 23 ರಂದು ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿದ್ದು, ಅಂದು ಮಂದಿರದಲ್ಲಿ ದಿನವಿಡೀ ವಿವಿಧ ಕಾರ್ಯಕ್ರಮಗಳನ್ನು ನಡೆಯಲಿವೆ ಎಂದು ಇಸ್ಕಾನ್ ಪ್ರಮುಖರಾದ ರಾಮಗೋಲದಾಸ್ ಹೇಳಿದರು. ಈ ಕುರಿತು ಇನ್ ನ್ಯೂಸನೊಂದಿಗೆ ಮಾತನಾಡಿದ ಅವರು, ಮಾತನಾಡಿದ ಅವರು, ಏಕಾದಶಿ ವೃತವನ್ನು ವಿಷ್ಣುವಿನ್ ಭಕ್ತರು ಭಗವಂತನ ನಾಮಸ್ಮರಣೆ, ಜಪ ಹಾಗೂ ಭಕ್ತಿ ಸಂಗೀತದೊಂದಿಗೆ ಆಚರಿಸಲಾಗುತ್ತದೆ. ಅದರಂತೆ ಮಾರ್ಗಶೀರ್ಷ ಮಾಸದ ಶುಕ್ಲಪಕ್ಷದಲ್ಲಿ (ಡಿಸೆಂಬರ್-ಜನೇವರಿ) ಬರುವ ಏಕಾದಶಿಯು ಮಹತ್ವದ್ದಾಗಿದ್ದು, ವೈಕುಂಠ ಏಕಾದಶಿಯೆಂದು ಕರೆಯಲ್ಪಡುತ್ತದೆ. ಇದು ದಕ್ಷಿಣ ಭಾರತದಾದ್ಯಂತ ವಿಷ್ಣುವಿನ ದೇವಾಲಯಗಳಲ್ಲಿ ಆಚರಿಸಲಾಗುತ್ತದೆ. ರಾಯಾಪುರದ ಇಸ್ಕಾನ್ ಟೆಂಪಲ್’ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ವೈಕುಂಠ ಏಕಾದಶಿ ಆಚರಣೆ ಮಾಡಲಾಗುತ್ತಿದೆ. ಈಗಾಗಲೇ ವೈಕುಂಠ ದ್ವಾರಕ್ಕೆ ಸ್ವರ್ಣ ರಂಗಿನಿಂದ ಲೇಪಿತವಾದ ಭವ್ಯವಾದ ವೈಕುಂಠ ದ್ವಾರವನ್ನು ನಿರ್ಮಿಸಲಾಗುತ್ತಿದೆ. ಇದು 15 ಅಡಿ ಎತ್ತರ ಮತ್ತು 11 ಅಡಿ ಅಗಲವಾಗಿದೆ. ಅಂದು ಬೆಳಿಗ್ಗೆ 8 ಕ್ಕೆ ವೈಕುಂಠ ದ್ವಾರದ ಪೂಜೆ ಆರಂಭವಾಗಲಿದೆ. ಈ ಸಂದರ್ಭದಲ್ಲಿ ದೇವಾಲಯವನ್ನು…
Author: AIN Author
ರಾಯಚೂರು: ಶಾಸಕ ಎಸ್.ಟಿ ಸೋಮಶೇಖರ್ ಹಾಗೂ ಹೆಬ್ಬಾರ್ ತಾಳಿ ಒಂದು ಕಡೆ ಕಟ್ಟಿಸಿಕೊಂಡು ಸಂಸಾರ ಇನ್ನೊಬ್ಬರ ಜೊತೆ ಮಾಡಬಾರದು ಅಂತ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಅವರನ್ನ ಚುನವಾಣೆಯಲ್ಲಿ ನಿಲ್ಲಿಸಿ, ಗೆಲ್ಲಿಸಿ ಮಂತ್ರಿ ಮಾಡಾಯ್ತು, ಈಗ ಮತ್ತೆ ಗೆದ್ದಾಯ್ತು. ಈಗ ಸಿದ್ದರಾಮಯ್ಯ, ಡಿಕೆಶಿ ಕಡೆ ಒಲವಾಗಿದೆ. ಬಿಜೆಪಿ ಅಲ್ಲಿ ಇಉವ ಹಾಗಿದ್ರೆ ಇರಿ, ಇಲ್ಲಾ ಹೋಗಿ. ತಾಳಿ ಒಬ್ಬರತ್ರ ಕಟ್ಟಿಸಿಕೊಂಡು ಸಂಸಾರ ಮತ್ತೊಬ್ಬರ ಜೊತೆ ಮಾಡಬಾರದು. ಅದು ನಮ್ಮ ಸಂಸ್ಕೃತಿ ಅಲ್ಲ. ಅವರಿಂದ ವೈಯಕ್ತಿಕವಾಗಿ ನೊಂದಿದ್ದೇನೆ ಅಂತ ಈಶ್ವರಪ್ಪ ಹೇಳಿದರು. ಇದೇ ವೇಳೆ ಜ್ಞಾನವ್ಯಾಪಿಯ ವೈಜ್ಞಾನಿಕ ಸಮೀಕ್ಷೆಗೆ ಮುಸಲ್ಮಾನ ಸಮುದಾಯ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ ಪ್ರತಿಕ್ರಿಯಿಸಿದ ಈಶ್ವರಪ್ಪ, ಎರಡು ಕನಸು ಈಗ ಈಡೇರಿದೆ. ಅಯೋದ್ಯಯಲ್ಲಿ ರಾಮಮಂದಿರ, ಆರ್ಟಿಕಲ್ 370 ಕಿತ್ತು ಬೀಸಾಕಾಯ್ತು ಎಂದರು.
ವಿಜಯನಗರ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಡ್ಡಿರಾಂಪುರ ಕ್ರಾಸ್ ಬಳಿ ಧಗ- ಧಗನೇ ಕಬ್ಬಿನ ಗದ್ದೆಯು ಹೊತ್ತಿ ಉರಿದಿದೆ. ಮಲಪನಗುಡಿಯ ರೈತರದಾರ ಮೈಲಾರಪ್ಪ, ಶಿವರಾಮಪ್ಪರಿಗೆ ಸೇರಿದ ಎರಡು ಎಕರೆ ಕಬ್ಬಿನ ಪೈರು ಸುಟ್ಟು ಭಸ್ಮವಾಗಿದೆ. https://ainlivenews.com/hebburu-police-operation-thieves-wanted-by-five-police-stations-arrested/ ಹೊಸಪೇಟೆಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕೆಲಸ ಮಾಡಲಾಯಿತು. ಹಂಪಿ ಪೊಲೀಸರು, ಕಬ್ಬಿನ ಗದ್ದೆಯ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಭೇಟಿ ನೀಡಿ, ಬೆಂಕಿ ನಂದಿಸುವ ಕೆಲಸಕ್ಕೆ ಸಾಥ್ ನೀಡಿದರು.
ಬೆಂಗಳೂರು: ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಪ್ರಸ್ತಾವನೆ ವಿಚಾರ ಕುರಿತು ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ನಮ್ಮ ಊರಿನವರೇ ಅಲ್ವಾ? ಅವರೇನು ಹೊರ ದೇಶದವರಾ? ಭೂ ಸುಧಾರಣೆ ಕಾಯ್ದೆ ತಂದವರು, ದೇವದಾಸಿ ಪದ್ಧತಿ ನಿರ್ಮೂಲನೆ ಮಾಡಿದ್ದು ಟಿಪ್ಪು ಸುಲ್ತಾನ್ ಅಲ್ವಾ? ಎಂದು ಪ್ರಶ್ನಿಸಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನ ಬಗ್ಗೆ ನಮ್ಮ ತಕಾರರು ಇಲ್ಲ. ಟಿಪ್ಪು ವಿಚಾರದಲ್ಲಿ ಕೆಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಭಿಪ್ರಾಯ ಹೇಳೋದು ಅಪರಾಧವಾ? ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ವಾ? ವಿಮಾನ ನಿಲ್ದಾಣ ವಿಚಾರದಲ್ಲಿ ಕ್ಯಾಬಿನೆಟ್ ತೀರ್ಮಾನವಾಗಿದೆ. ಅದನ್ನು ತಿರಸ್ಕರಿಸಲು ಸಾಧ್ಯವಾ? ಹೆಸರು ಇಡುವುದು ಬಿಡುವುದು ಬೇರೆ ವಿಚಾರ. ಆದರೆ, ಟಿಪ್ಪು ಸುಲ್ತಾನ್ ಅವರನ್ನು ದೇಶ ದ್ರೋಹಿ ಅಂತ ಬಿಂಬಿಸುವುದು ಸರಿಯಲ್ಲ ಎಂದು ಕುಟುಕಿದ್ದಾರೆ. ಸಂಸತ್ನಲ್ಲಿ ಸ್ಮೋಕ್ ಬಾಂಬ್ ವಿಚಾರವಾಗಿ ಮಾತನಾಡಿದ ಅವರು, ಇದು ಗಂಭೀರವಾದ ರಾಷ್ಟ್ರೀಯ ಭದ್ರತಾ ವಿಚಾರ. ಆರೋಪಿಗಳಿಗೆ ಬೇರೆಯವರು ಪಾಸ್ ಕೊಟ್ಟಿದ್ದರೆ ಮೈಸೂರು ಗತಿ…
ಕಾರವಾರ: ಕೋವಿಡ್ ಅರ್ಭಟ ಯಾಕೋ ನಿಲ್ಲವ ಲಕ್ಷಣ ಕಾಣ್ತಿಲ್ಲ.ಅಲೆಗಳ ಮೇಲೆ ಅಲೆಗಳು ಬಂದು ಈಗಾಗಲೇ ಜನರನ್ನ ಹಿಂಡಿ ಹಿಪ್ಪೆ ಮಾಡಿರೋ ಈ ಕ್ರೂರಿ ಇದೀಗ ಮತ್ತಷ್ಟು ಆತಂಕ ಹುಟ್ಟಿಸಿದೆ. ಕೇರಳದಲ್ಲಿ ಕಾಣಿಸಿಕೊಂಡಿರೋ ಹೆಮ್ಮಾರಿ ಭೀತಿ ರಾಜ್ಯಕ್ಕೂ ತಟ್ಟಿದ್ದು, ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಆದ್ರೆ ಇದೀಗ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಗೂ ಕೊರೊನಾ ಸೋಂಕು ಕಾಲಿಟ್ಟಿದೆ. ಕಾರವಾರ ತಾಲೂಕಿನ ಸದಾಶಿವಗಡ ಗ್ರಾಮದ ಯುವಕನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಗೋವಾದಿಂದ ಕಾರವಾರಕ್ಕೆ ಬಂದಿದ್ದ ಯುವಕನೋರ್ವನಲ್ಲಿ ಕಳೆದ 15 ದಿನಗಳ ಹಿಂದೆ ಸೋಂಕು ಪತ್ತೆಯಾಗಿದ್ದು, https://ainlivenews.com/dont-eat-eggplant-because-of-this-health-problem/ ಈಗ ಆರ್‌ಟಿಪಿಸಿಆರ್ ರಿಪೋರ್ಟ್ ನೆಗೆಟಿವ್ ಬಂದಿದೆ. ಒಟ್ಟು 15ರಿಂದ 20 ಜನರಲ್ಲಿ ಕೆಮ್ಮು, ನೆಗಡಿ ಹಾಗೂ ಜ್ವರ ಕಾಣಿಸಿಕೊಂಡಿತ್ತು. ಒಂದೇ ಕುಟುಂಬದ ಸದಸ್ಯರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಲಸಿಕೆ ಪಡೆದ ಹಿನ್ನೆಲೆ ಕೇವಲ 3ರಿಂದ 4 ದಿನಗಳಲ್ಲಿ ಪೂರ್ತಿ ಗುಣಮುಖರಾಗಿದ್ದಾರೆ. ಚಳಿಗಾಲದ ಹಿನ್ನೆಲೆ ಹೆಚ್ಚು ಜನರಲ್ಲಿ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಳ್ಳುತ್ತಿದೆ. ಕೊರೊನಾ ಲಕ್ಷಣ ಹೆಚ್ಚಾಗಿ ಕಂಡು…
ಬೆಂಗಳೂರು: ಕೇರಳದಲ್ಲಿ ಕೋವಿಡ್ ಪ್ರಕರಣಗಳು ಏರುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮುನ್ನೆಚರಿಕಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆ ಕೆಲವೊಂದು ಸಲಹಾಸೂಚನೆಗಳನ್ನು ಬಿಡುಗಡೆಗೊಳಿಸಿದೆ. ತಮಿಳುನಾಡು ಮತ್ತು ಕೇರಳದಲ್ಲಿ ಕೋವಿಡ್ ನ ಉಪತಳಿ JN1, ವರದಿಯಾಗಿದೆ. ರಾಜ್ಯದ ಹವಾಮಾನ ಏರಿಳಿತ ಚಳಿಗಾಲ ಜೊತೆಗೆ ಇನ್ನು ಕೆಲವೇ ದಿನಗಳಲ್ಲಿ ಕ್ರಿಸ್ಮಸ್ ಹಬ್ಬ, ಹೊಸವರ್ಷ ಸಂಭ್ರಮಾಚರಣೆ ಬರಲಿದ್ದು ಕೋವಿಡ್ ಎಚ್ಚಳವಾಗುವ ಸಾಧ್ಯತೆ ಇದೆ, ಈ ಹಿನ್ನೆಲೆ ರಾಜ್ಯದಲ್ಲಿ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಸಲಹಾ ಪತ್ರ ಹೊರಡಿಸಿದೆ. https://ainlivenews.com/epidemic-corona-entered-the-state-a-rare-case-of-jn1-appeared-in-a-person/ ಆರೋಗ್ಯ ಇಲಾಖೆ ಮಾರ್ಗಸೂಚಿಗಳು: 60 ವರ್ಷ ಮೇಲ್ಪಟ್ಟವರು ಮತ್ತು ಅನಾರೋಗ್ಯ ಪೀಡಿತರು, ಹಾಲುಣಿಸಿವ ತಾಯಂದಿರು ಜನದಟ್ಟಣೆಯಿಂದ ದೂರ ಉಳಿಯುವುದು. ಜ್ವರ, ಶೀತ, ಕೆಮ್ಮು ಇರುವವರು ಅಗತ್ಯ ಚಿಕಿತ್ಸೆ ಪಡೆಯುವುದು. ಬಾಯಿ ಮೂಗು ಮುಚ್ಚುವಂತೆ ಮಾಸ್ಕ್ ಧರಿಸುವುದು. ಜನದಟ್ಟನೆ ಪ್ರದೇಶಕ್ಕೆ ತೆರಳದಿರುವುದು. ಉತ್ತಮ ವೈಯಕ್ತಿಕ ಸ್ವಚ್ಚತೆ ಕಾಪಾಡಲು ಸಲಹೆ. ಆಗಾಗ ಕೈಗಳನ್ನ ಸಾಬೂನಿಂದ ತೊಳೆಯುವುದು. ಆರೋಗ್ಯ ಸಮಸ್ಯೆ ಇದ್ದಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿರುವುದು , ಹಿರಿಯರಿಂದ ದೂರ ಉಳಿಯುವುದು. ಅಂತರಾಷ್ಟ್ರಿಯ ಪ್ರಯಾಣದ…
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತಾ ಇಬ್ಬರು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಓಡಿ ಹೋಗಿ ಭಾನುವಾರ ಮದುವೆಯಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಅಂಕಿತಾ ಕುಟುಂಬಸ್ಥರು ಇಂದು ಯುವಕನ ತಂದೆ-ತಾಯಿ ಮನೆ ಮೇಲೆ ದಾಳಿ ನಡೆಸಿ ತಾಯಿ ವೆಂಕಟಲಕ್ಷ್ಮಮ್ಮ ಹಾಗೂ ತಂದೆ ಗಂಗರಾಜು ಮೇಲೆ ನಡುರಸ್ತೆಯಲ್ಲೇ ಮನಸ್ಸೋಇಚ್ಛೆ ಹಲ್ಲೆ ನಡೆಸಿದ್ದಾರೆ. https://ainlivenews.com/dont-eat-eggplant-because-of-this-health-problem/ ಮಧ್ಯಾಹ್ನದ ವೇಳೆಗೆ 20 ಮಂದಿ ಅಂಕಿತಾ ಪೋಷಕರ ಕಡೆಯವರು ಯುವಕನ ಮನೆ ಮೇಲೆ ದಾಳಿ ಮಾಡಿ ಮನೆಯಲ್ಲಿದ್ದ ವೆಂಕಟಲಕ್ಷ್ಮಮ್ಮ ಹಾಗೂ ಗಂಗರಾಜುವಿನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಂಬುಲೆನ್ಸ್ ಸಹ ಗ್ರಾಮದೊಳಗೆ ಬರಲು ಬಿಡದೆ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಬಂದ ನಂತರ ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕ-ಯುವತಿ ಪರಾರಿಯಾಗಲು ಯುವಕನ ಪೋಷಕರು ಸಹ ಕಾರಣ ಎಂದು ಈ ಕೃತ್ಯ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಎಡವಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 6 ತಿಂಗಳ ಆಡಳಿತದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಟೀಕಾಪ್ರಹಾರ ಮಾಡಿದ್ದರು. https://ainlivenews.com/siddaramaiah-pm-met-siddaramaiah-cm-requested-to-release-drought-relief/ ರಾಜ್ಯದಲ್ಲಿ ಸರ್ಕಾರ ಇದೆ ಎಂದು ಯಾರಿಗೂ ಅನಿಸುತ್ತಿಲ್ಲ. ನಮ್ಮ ಅವಧಿಯಲ್ಲಿ ಅನುಷ್ಠಾನಗೊಂಡ ಯೋಜನೆಗಳಿಗೆ ಹಣ ಬಿಡುಗಡೆ ಮಾಡಬೇಡಿ ಎಂದು ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಲಾಗಿದೆ. ರಾಜ್ಯದ ಪ್ರಗತಿ ಶೂನ್ಯವಾಗಿದೆ ಎಂದು ಆರೋಪಿಸಿದರು. ಪ್ರತಿ ವರ್ಷ ಬಂಡವಾಳ ವೆಚ್ಚ ಏರಿಕೆಯಾಗಬೇಕು. ಆದರೆ, ಅಧಿವೇಶನದಲ್ಲಿ ಮಂಡಿಸಿದ ಮಧ್ಯಂತರ ಹಣಕಾಸು ವರದಿಯಲ್ಲಿ ಬಂಡವಾಳ ವೆಚ್ಚ ಕಳೆದ ಐದು ವರ್ಷಗಳಲ್ಲಿ ಕಡಿಮೆಯಾಗಿರುವುದು ರಾಜ್ಯ ಹಣಕಾಸು ಸ್ಥಿತಿಗೆ ಹಿಡಿದ ಕನ್ನಡಿ ಎಂದು ಹೇಳಿದರು. ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರ, ರಾಜ್ಯಕ್ಕೆ ಬರಬೇಕಾದ ಅನುದಾನ, ಹಣಕಾಸು ನೆರವು ನೀಡುತ್ತಿಲ್ಲ ಎಂದು ಹೇಳುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ…
ಬಾಲಿವುಡ್ (Bollywood) ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಇಡಿ ವಿರುದ್ಧ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrashekar) ಒಳಗೊಂಡ 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕ್ರಿಮಿನಲ್ ಮೊಕದ್ದಮೆ ಮತ್ತು ಇಡಿ ಸಲ್ಲಿಸಿದ ಪೂರಕ ಆರೋಪಪಟ್ಟಿಯಿಂದ ತನ್ನ ಹೆಸರನ್ನ ಕೈಬಿಡುವಂತೆ ಜಾಕ್ವೆಲಿನ್ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಇಡಿ ದಾಖಲಿಸಿರುವ ಪ್ರಕರಣದಲ್ಲಿ ಜಾಕ್ವೆಲಿನ್ ಫೆರ್ನಾಂಡಿಸ್ ಸಹ- ಆರೋಪಿಯಾಗಿದ್ದಾರೆ. ಆದರೆ ಈ ಮೊದಲು ದೆಹಲಿ ಪೊಲೀಸರು ದಾಖಲಿಸಿದ್ದ ಈ ಸುಲಿಗೆ ಪ್ರಕರಣದಲ್ಲಿ ಜಾಕ್ವೆಲಿನ್ ಅವರನ್ನು ಸಾಕ್ಷಿಯಾಗಿ ಹೆಸರಿಸಲಾಗಿತ್ತು. ಆರೋಪಿ ಸುಕೇಶ್, ರೆಲಿಗೇರ್ ಎಂಟರ್‌ಪ್ರೈಸಸ್ ಮಾಜಿ ಪ್ರವರ್ತಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಅವರಿಂದ ಹಣ ಸುಲಿಗೆ ಮಾಡುತ್ತಿದ್ದನು ಎಂದು ಆರೋಪಿಸಿ, ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗ (EOW) ವಂಚನೆ ಪ್ರಕರಣ ದಾಖಲಿಸಿತ್ತು. ಆನಂತರ ಈ ಪ್ರಕರಣ ಇಡಿ ಅಂಗಳ ತಲುಪಿತು. ಆರೋಪಿ ಸುಕೇಶ್‌ಗೆ ತಾನು ಯಾವುದೇ ರೀತಿಯಲ್ಲಿ ಸಹಾಯ…
ದುಬೈ: ಐಪಿಎಲ್ ಮಿನಿ ಹರಾಜಿನಲ್ಲಿ (IPL 2024 Auction) ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್ (Pat Cummins) ಬರೋಬ್ಬರಿ 20.50 ಕೋಟಿ ರೂ.ಗೆ ಬಿಕರಿಯಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. 2023ರ ಐಪಿಎಲ್ ಮಿನಿ ಹರಾಜಿನಲ್ಲಿ ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರ್ರನ್ (Sam Curran) 18.50 ಕೋಟಿ ರೂ.ಗೆ ಮಾರಾಟವಾಗಿದ್ದು ಇತಿಹಾಸವಾಗಿತ್ತು. ಆದ್ರೆ ಈ ಬಾರಿ ಏಕದಿನ ವಿಶ್ವಕಪ್ (ODI World Cup) ವಿಜೇತ ತಂಡದ ಸಾರಥ್ಯ ವಹಿಸಿದ್ದ ಪ್ಯಾಟ್ ಕಮ್ಮಿನ್ಸ್ ದುಬಾರಿ ಮೊತ್ತಕ್ಕೆ ಸನ್ ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ ಬಿಡ್‍ನಲ್ಲಿ ಪ್ಯಾಟ್ ಕಮ್ಮಿನ್ಸ್ ಅವರನ್ನ ಖರೀದಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ಜಿದ್ದಾ-ಜಿದ್ದಿ ನಡೆದಿತ್ತು. ತನ್ನ ಪರ್ಸ್‌ನಲ್ಲಿ 23.25 ಕೋಟಿ ರೂ.ಗಳನ್ನಷ್ಟೇ ಉಳಿಸಿಕೊಂಡಿದ್ದ ಆರ್‌ಸಿಬಿ 20.25 ಕೋಟಿ ರೂ.ವರೆಗೂ ಬಿಡ್ ಮಾಡಿತ್ತು. ಅಂತಿಮವಾಗಿ…