ರಾಯಚೂರು: ಬಸನಗೌಡ ಪಾಟೀಲ್ ಯತ್ನಾಳ ಸ್ವಪಕ್ಷದ ವಿರುದ್ಧ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೇ ನೀಡಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಆನೇ ಇದ್ದಂತೆ ಗಜಾಂಬೀರ್ಯದಿಂದ ಹೋಗುವಾಗ ನಾಯಿ ನರಿಗಳು ಬೊಗಳುತ್ತೆ, ಯತ್ನಾಳ್ ಅವರದ್ದೇನು ಹೊಸದಲ್ಲ, ಯಾರನ್ನು ಬಿಟ್ಟಿದ್ದಾರೆ ಅವರು. ಯಡಿಯೂರಪ್ಪ, ಬೊಮ್ಮಾಯಿ, ಶಟ್ಟರ್ ಅವರನ್ನೆ ಬಿಟ್ಟಿಲ್ಲ, ಇಂಥ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೆಜ್ ಆಗಿದೆ.. ನಮ್ಮಲ್ಲಿ ತುಂಬಾ ಗುಂಪುಗಾರಿಕೆ ಇಲ್ಲ, ನಾಲ್ಕು ಜನ ಮಾಡಿದ್ದನ್ನು ಗುಂಪುಗಾರಿಕೆ ಅಂದ್ರೆ ಒಪ್ಪಲ್ಲ. ಯತ್ನಾಳ್, ಬೆಲ್ಲದ್, ಸೋಮಣ್ಣ ಅವರಿಗಾದ ಅಸಮಧಾನ ಬಹಿರಂಗ ಹೊರಹಾಕಿದ್ದಾರೆ. ನಮ್ಮಲ್ಲಿ ತಪ್ಪಿದೆ, ಶಿಸ್ತು ಇಲ್ಲ, ರಿಪೇರಿ ಮಾಡೋಕೆ ಹಿರಿಯರಿದ್ದಾರೆ ಎಂದು ಯತ್ನಾಳ್ ಹೇಳಿಕೆ ವಿರುದ್ದ ಕೆ ಎಸ್ ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ.
Author: AIN Author
ಕಲಬುರಗಿ: ರಾಜ್ಯದ ಬರ ಪರಸ್ತಿತಿ ಚರ್ಚೆಗೆ ಸಿಎಂ ಸಿದ್ರಾಮಯ್ಯ ಪ್ರಧಾನಿ ಮೋದಿ ಭೇಟಿ ಮಾಡ್ತಿರೋ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಬರ ವಿಚಾರ ಬಗ್ಗೆ ಮಾತನಾಡಲು ಪ್ರಧಾನಿ ಮೋದಿಯವರಿಗೆ ಇವತ್ತು ಪುರುಸೊತ್ತು ಸಿಕ್ಕಂತಿದೆ ಅಂತ ಹೇಳಿದ್ದಾರೆ..ನಾವು ಚಲುವರಾಯ ಸ್ವಾಮಿ ಕೃಷ್ಣಭೈರೇಗೌಡ ಈ ಮುಂಚೆನೇ ಮನವಿ ಮಾಡಿದ್ವಿ..ಹೋಗ್ಲಿ ಈಗಲಾದ್ರೂ ಗಮನ ಹರಿಸಿ ಬರದ ಅನುದಾನ ನೀಡಲಿ ಅಂತ ಕೋರಿದ್ದಾರೆ..
ಬೆಂಗಳೂರು: ಕೊರೊನಾ ವೈರಸ್ನ ಜೆಎನ್1 ರೂಪಾಂತರಿಯಿಂದಾಗಿ ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೋವಿಡ್ – 19 ರಾಜ್ಯ ತಾಂತ್ರಿಕ ಸಲಹಾ ಸಮಿತಿ 202ನೇ ಸಭೆಯ ಶಿಫಾರಸಿನ ಅನ್ವಯ ಈ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಕೋವಿಡ್ ಮಾರ್ಗಸೂಚಿಯಲ್ಲಿ ಏನೇನಿದೆ? ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಕೊವಿಡ್ ನಿರ್ಬಂಧ ಅವಶ್ಯಕತೆ ಇಲ್ಲ ಗಡಿ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ಹೆಚ್ಚಿಸಬೇಕು ಗಡಿ ಜಿಲ್ಲೆಗಳ ಕೋವಿಡ್ ಪರೀಕ್ಷಾ ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ ತೀವ್ರ ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ರೋಗ ಲಕ್ಷಣ ಇರುವವರನ್ನು ಕೊವಿಡ್ ಪರಿಶೀಲನೆಗೆ ಒಳಪಡಿಸಬೇಕು ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪನೆಗೆ ಸೂಚನೆ ಡಿ.3, 4ನೇ ವಾರದಲ್ಲಿ ಮಾಕ್ ಡ್ರಿಲ್ ಮುಕ್ತಾಯಗೊಳಿಸಲು ಸೂಚನೆ ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು…
ಹಾವೇರಿ: ಯುವಕ-ಯುವತಿ ಪ್ರೇಮ ಪ್ರಕರಣದಲ್ಲಿ ಮುದೇನೂರು ಗ್ರಾಮ ಪಂಚಾಯತಿ ಸದಸ್ಯನನ್ನು ಅರೇ ಬೆತ್ತಲೆ ಗೊಳಿಸಿದ ಘಟನೆ ಹಾವೇರಿ ಜಿಲ್ಲೆಯ ಮುದೇನೂರು ಗ್ರಾಮದಲ್ಲಿ ನಡೆದಿದೆ. ಹಲವು ವರ್ಷಗಳಿಂದ ಮಾದಿಗ ಸಮುದಾಯದ ಯುವಕ ಪ್ರಕಾಶ್ 28, ಮಾದಿಗ ಸಮುದಾಯದ ಸಂಗೀತಾ 22 ಪ್ರೀತಿಸುತ್ತಿದ್ದರು. ಇದೀಗ ನಾಲ್ಕೈದು ದಿನಗಳ ಹಿಂದೆ ಪ್ರೇಮಿಗಳು ಮನೆ ಬಿಟ್ಟು ಓಡಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ಹುಡುಗಿ ಮನೆಯವರು ಸಿಟ್ಟಿಗೆದ್ದು,ಮುದೇನೂರು ಗ್ರಾಮದಲ್ಲಿನ ಹುಡುಗನ ಅಕ್ಕನ ಗಂಡನ ಮೇಲೆ ಹಲ್ಲೆ ನಡೆಸಿದ್ದಾರೆ. https://ainlivenews.com/dont-eat-eggplant-because-of-this-health-problem/ ಮಾದಿಗ ಸಮುದಾಯದ ಗ್ರಾಮ ಪಂಚಾಯತಿ ಸದಸ್ಯ ಪ್ರಶಾಂತ್ ಮಣಕೂರು ಅವರನ್ನು ಹೊಡೆದು ಪೋಲಿಸ್ ಠಾಣೆಯ ಮುಂದೆ ಪತ್ನಿಯ ಜೊತೆ ನಿಲ್ಲಿಸಿ ಹೋಗಿದ್ದಾರೆ.ಯುವಕ ಪ್ರಕಾಶ್ ಮಾವನಾಗಿರುವ ಗ್ರಾಮ ಪಂಚಾಯತಿ ಸದಸ್ಯ ಪ್ರಶಾಂತ್ ಮಣಕೂರು ಅವರ ಮೇಲೆ ಶಿವಾಜಿ ಕಮದೋಡು,ಬಸಣ್ಣ ಸೇರಿದಂತೆ 20 ಜನರಿಂದ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.ಹಲ್ಲೆ ಮಾಡಿದ ಹುಡುಗಿಯ ಮನೆಯವರ ವಿರುದ್ಧ ಗ್ರಾಮ ಪಂಚಾಯತಿ ಸದಸ್ಯ ದೂರು ನೀಡಿದ್ದಾನೆ.ಹಲಗೇರಿ ಪೋಲಿಸ್…
ಬೆಂಗಳೂರು: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ, ಭೂಮಿ ಮೇಲೆ ನರಕದ ಪರಿಚಯ ಮಾಡಿಸಿದ ಮಹಾಮಾರಿ ಕೊರೊನಾ(Coronavirus) ಸದ್ಯ ತನ್ನ ಆರ್ಭಟ ಮತ್ತೆ ತೋರುತ್ತಿದೆ. ಇದೀಗ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು (Corona Virus) ದೃಢಪಟ್ಟಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಕೇರಳದಲ್ಲಿ (Kerala) ಕೊರೊನಾ ರೂಪಾಂತರಿ JN.1 ಕೇಸ್ (Corona JN.1 Case) ಪತ್ತೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಜ್ವರದಿಂದಾಗಿ ಆಸ್ಪತ್ರೆಗೆ (Mandya Hospital) ತೆರಳಿದ್ದು, ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿರುವುದು ಗೊತ್ತಾಗಿದೆ. ಕೋವಿಡ್ ಸೋಂಕಿತ ವ್ಯಕ್ತಿಯ ಕುಟುಂಬಸ್ಥರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅವರೆಲ್ಲರಿಗೂ ನೆಗೆಟಿವ್ ಬಂದಿದೆ. ಸೋಂಕಿತ ವ್ಯಕ್ತಿ ಮಂಗಳವಾರವೇ (ಇಂದು) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ ಎಂದು ವೈದ್ಯರು ತಿಳಿಸಿದ್ದಾರೆ
ಬೆಂಗಳೂರು: 2023ರ ವರ್ಷಕ್ಕೆ ಗುಡ್ ಬೈ ಹೇಳೋಕೆ ಕೌಂಟ್ ಡೌನ್ ಶುರುವಾಗಿದೆ.ಇತ್ತ ಸಿಲಿಕಾನ್ ಸಿಟಿ ಜನರು ಹೊಸ ವರ್ಷವನ್ನ ವೆಲ್ ಕಮ್ ಮಾಡೋಕೆ ಕಾತುರರಾಗಿರೋ ಹೊತ್ತಲ್ಲೇ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಕೂಡ ನ್ಯೂ ಇಯರ್ ಸೆಲೆಬ್ರೇಷನ್ ನಲ್ಲಿ ಲೋಪವಾಗದಂತೆ ತಡೆಯೋಕೆ ಪ್ಲಾನ್ ನಡೆಸಿದೆ. ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಪತ್ರಿಕಾಗೋಷ್ಠಿ ನಡೆಸಿ ಸಿದ್ಧತೆ ಬಗ್ಗೆ ಮಾತನಾಡಿದರು. ಬೇಗೂರಿನಲ್ಲಿ ಸಿಲಿಂಡರ್ ಬ್ಲಾಸ್ಟ್ ಘಟನೆ ಬಗ್ಗೆ ಗಮನವಹಿಸಲಾಗಿದೆ ಅಕ್ರಮ ಗ್ಯಾಸ್ ಸಿಲಿಂಡರ್ ಅಡ್ಡೆಗಳ ಮೇಲೆ ಕಣ್ಣಿಡಲಾಗಿದೆ ಕೋರಮಂಗಲದ ಅಕ್ರಮ ಗ್ಯಾಸ್ ಸಿಲಿಂಡರ್ ಅಡ್ಡೆ ಮೇಲೆ ದಾಳಿ ನಡೆಸಲಾಗಿದೆ 120ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್ ಗಳನ್ನ ವಶಪಡೆಯಲಾಗಿದೆ ಅಕ್ರಮವಾಗಿ ನಡೆಸ್ತಿರೋ ಪ್ರೈವೆಟ್ ಗ್ಯಾಸ್ ಅಡ್ಡೆಗಳನ್ನ ಮುಚ್ಚಲಾಗುತ್ತೆ. ಈ ರೀತಿಗ ಘಟನೆಗಳಿಗೆ ಕಡಿವಾಣ ಹಾಕಲಾಗುತ್ತೆ ಎಂದು ಹೇಳಿದರು. ಹಾಗೆ ನ್ಯೂ ಇಯರ್ ಗೆ ಸಂಬಂಧಿಸಿದಂತೆ ಸಭೆಗಳನ್ನ ನಡೆಸಲಾಗ್ತಿದೆ ಆಚರಣೆ ನಡೆಸೋ ಯಾರಿಗೂ ಕೂಡ ಅಡಚಣೆ ಆಗದ ರೀತಿ ನೋಡಿಕೊಳ್ಳಲಾಗುತ್ತೆ.. ಕಳೆದಬಾರಿ ಹೇಗೆ ನಡೆಸಲಾಗಿತ್ತೋ ಈ…
ಬೆಂಗಳೂರು: ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್ ಟಾಪ್ ಕದಿಯುತ್ತಿದ್ದ ಆರೋಪಿಗಳನ್ನ ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಯುವರಾಜು, ಪ್ರಭು, ಸೆಲ್ವರಾಜು ಬಂಧಿತ ಆರೋಪಿಗಳಾಗಿರುತ್ತಾರೆ.ಬಂಧಿತರಿಂದ 50ಲ್ಯಾಪ್ ಟಾಪ್ ಗಳು, 22 ಮೊಬೈಲ್ ಗಳು ಜಪ್ತಿ. ಕೆಆರ್ ಪುರಂನಲ್ಲಿ ರೂಮ್ ಮಾಡಿಕೊಂಡಿದ್ದ ಪ್ರಭು ಮತ್ತು ಯುವರಾಜ್ ಸ್ಟೂಡೆಂಟ್ಸ್ ರೀತಿ ಡ್ರೆಸ್ ಮಾಡ್ಕೊಂಡು ಪಿಜಿಗಳ ಬಳಿ ಹೋಗ್ತಿದ್ದ ಆರೋಪಿಗಳು ಸಂಪೂರ್ಣ ಪಿಜಿ ಅಬ್ಸರ್ವ್ ಮಾಡಿ ಲ್ಯಾಪ್ ಟಾಪ್ ಟಾರ್ಗೆಟ್. ಯಾವ್ಯಾವ ರೂಮ್ ನಲ್ಲಿ ಲ್ಯಾಪ್‌ಟಾಪ್ ಇವೆ ಅನ್ನೋದನ್ನ ನೋಡಿಕೊಳ್ತಿದ್ರು ರೂಮ್ ಗಳಲ್ಲಿ ಯಾರು ಇಲ್ಲದ ವೇಳೆ ಲ್ಯಾಪ್‌ಟಾಪ್ ಕಳ್ಳತನ ಹಾಡು ಹಗಲೇ ಕಳ್ಳತನ ಮಾಡ್ತಿದ್ದ ಆರೋಪಿಗಳು.. ಬೆಳಗ್ಗೆ 9ರಿಂದ 10ಗಂಟೆ ಟೈಮಲ್ಲಿ ಲ್ಯಾಪ್‌ಟಾಪ್ ಕಳ್ಳತನ ಮಾಡ್ತಿದ್ದು ಲ್ಯಾಪ್ ಟಾಪ್ ಗಳನ್ನ ಕದ್ದ ಕೆಲವೇ ಗಂಟೆಗಳಲ್ಲಿ ಬಸ್ ನಲ್ಲಿ ಪಾರ್ಸಲ್ ಚಿತ್ತೂರು ಬಸ್ ನಲ್ಲಿ ಪಾರ್ಸಲ್ ಕಳಿಸ್ತಿದ್ದ ಆರೋಪಿಗಳು ಅಲ್ಲಿ ಕಲೆಕ್ಟ್ ಮಾಡ್ಕೊಂಡು ಸೇಲ್ ಮಾಡ್ತಿದ್ದ ಮತ್ತೊಂದು ಮತ್ತೋರ್ವ ಆರೋಪಿ ಸೆಲ್ವರಾಜ್. ಒಂದು ಲ್ಯಾಪ್ ಟಾಪ್ ಅನ್ನ 25ಸಾವಿರಕ್ಕೆ…
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್.ಡಿ.ಆರ್.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. https://ainlivenews.com/dont-eat-eggplant-because-of-this-health-problem/ ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡಲು 2015-16…
ಬೆಂಗಳೂರು: ಮಚ್ಚಿನಿಂದ ಹೊಡೆದು 60 ಲಕ್ಷ ದೋಚಿದ್ದ ಐವರು ಆರೋಪಿಗಳನ್ನ ಬಸವೇಶ್ವರ ನಗರ ಪೊಲೀಸರಿಂದ ಬಂಧಿಸಿದ್ದಾರೆ. ಸೈಯದ್ ಇರ್ಫಾನ್ , ರಿಜ್ವಾನ್ , ದಿವಾಕರ, ಸತೀಶ್ ,ಅಶ್ರಫ್ ಬಂಧಿತ ಆರೋಪಿಗಳಾಗಿದ್ದು ಬಂಧಿತರಿಂದ 53 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ಬಸವೇಶ್ವರ ನಗರದ ಆದರ್ಶ್ ಲೇಔಟ್ ನಲ್ಲಿ ಡಿಸೆಂಬರ್ 11 ನಡೆದಿದ್ದ ಘಟನೆಯಾಗಿದ್ದು ಪಾನ್ ಬ್ರೋಕರ್ ಕೆಲಸ ಮಾಡುವ ಸಂಕೇತ್ ಎಂಬಾತನಿಂದ 60 ಲಕ್ಷ ಹಣವನ್ನ ದರೋಡೆ ಮಾಡಲಾಗಿತ್ತು ಸಂಕೇತ್ ಗೆ ಸಂಪರ್ಕ ಮಾಡಿ ಆದರ್ಶ ನಗರಕ್ಕೆ ಕರೆಸಿಕೊಂಡಿದ್ದ ಆರೋಪಿಗಳು ಕಡಿಮೆ ಬೆಲೆಗೆ ದುಬೈ ನಿಂದ ಚಿನ್ನ ತರಿಸಿದ್ದೆವೇ ಎಂದು ಹೇಳಿದ್ರು ಹಣ ತೆಗೆದುಕೊಂಡು ಬನ್ನಿ ದುಬೈ ರೇಟ್ ಗೆ ಚಿನ್ನವನ್ನು ಕೊಡ್ತಿನಿ ಎಂದು ಹೇಳಿದ್ರುಏರಿಯಾಗೆ ಬಂದ ಬಳಿಕ ಹಣಕೊಡುವಂತೆ ಬೆದರಿಕೆ ಚಿನ್ನ ಇಲ್ಲದೇ ಸುಳ್ಳು ಹೇಳಿ ಹಣ ದೋಚುವ ಪ್ಲಾನ್ ಮಾಡಿದ್ದ ಗ್ಯಾಂಗ್ ಹಣ ಕೊಡಲು ಒಪ್ಪದೇ ಇದ್ದಾಗ ಮಚ್ಚಿನಿಂದ ಹಲ್ಲೆ ಮಾಡಿದ್ದ ಗ್ಯಾಂಗ್ ಬಳಿಕ ಹಣದ ಸಹಿತ ಎಸ್ಕೇಪ್ ಆಗಿದ್ರ…
ಮೈಸೂರು: ದೆಹಲಿಯ ಸಂಸತ್ (Parliament) ಭವನದ ಕಲಾಪದ ವೇಳೆ ಸ್ಮೋಕ್ ಬಾಂಬ್ (Smoke Bomb) ಹಾಕಿದ್ದ ಆರೋಪಿ ಮನೋರಂಜನ್‍ನ ಮೈಸೂರಿನ ನಿವಾಸಕ್ಕೆ ಇಂದು ದೆಹಲಿಯ ಪೊಲೀಸರು ಎಂಟ್ರಿ ಕೊಟ್ಟಿದ್ರು. ಓರ್ವ ಮಹಿಳಾ ಪೊಲೀಸ್ ಸೇರಿದಂತೆ ಇಬ್ಬರು ಅಧಿಕಾರಿಗಳ ತಂಡ ಮನೋರಂಜನ್ ನಿವಾಸದಲ್ಲಿ ತಪಾಸಣೆ ಮಾಡಿದ್ರು. ಮನೆಯಿಂದ ಹೊರಗೆ ಹೋಗಿದ್ದ ಮನೋರಂಜನ್ (Manoranjan) ತಂದೆ ದೇವರಾಜೇಗೌಡ ಮಧ್ಯಾಹ್ನದ ವೇಳೆಗೆ ಮನೆಗೆ ಬಂದ್ರು. ಈ ಮೊದಲೇ ಮನೋರಂಜನ್ ರೂಂ ಸೀಜ್ ಮಾಡಿದ್ದ ಪೊಲೀಸರು, ಕೊಠಡಿ ತೆರೆದು ಇಂಚಿಂಚು ಪರಿಶೀಲನೆ ಮಾಡಿದ್ರು. ಮನೋರಂಜನ್ ಪೋಷಕರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸ್ರು, ತಂದೆ ತಾಯಿ ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದ್ರು. https://ainlivenews.com/dont-eat-eggplant-because-of-this-health-problem/ ಸಾಗರ್ ಶರ್ಮ ನಿಮಗೆ ಪರಿಚಯ ಇದ್ದಾನಾ. ಎಷ್ಟು ದಿನಗಳ ಹಿಂದೆ ಸಾಗರ್ ಶರ್ಮ ಬಂದಿದ್ದ. ಸಾಗರ್ ಒಬ್ಬನೇ ಬಂದಿದ್ನಾ, ನಿಮ್ಮ ಮಗ ಎಂಜಿನಿಯರಿಂಗ್ ಯಾಕಾಗಿ ಅರ್ಧಕ್ಕೆ ನಿಲ್ಲಿಸಿದ್ದ ಕೆಲಸ ಮಾಡದ ಮೇಲೆ ಅವನಿಗೆ ಹಣ ಎಲ್ಲಿಂದ ಬರುತ್ತಿತ್ತು. ಮನೆಯಲ್ಲಿ ಯಾವ ರೀತಿ ಇರ್ತಾ ಇದ್ದ, ಅವನ…