Author: AIN Author

ಕೋಲಾರ:- ಮಾಲೂರಿನ ಯಳವಳ್ಳಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಗುಂಡಿ ಸ್ವಚ್ಛತೆ ಮಾಡಿಸಿರುವ ಘಟನೆ ಖಂಡನೀಯ ಮತ್ತು ಹೇಯಕೃತ್ಯ ಎಂದು ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್ ಸುರೇಶ್ ಅವರು ತಿಳಿಸಿದರು. ಇಂದು ಮಾಲೂರಿನ ಯಳವಳ್ಳಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್. ಸುರೇಶ್ ಅವರು ಅಧಿಕಾರಿಗಳು, ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದ ಜೊತೆ ಮಾತನಾಡಿದ ಅವರು, ಮಕ್ಕಳನ್ನು ಶೌಚಗುಂಡಿ ಸ್ವಚ್ಛತೆಗೆ ಇಳಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಈ ಪ್ರಕರಣ ನಾಗರೀಕ ಸಮಾಜ ತಲೆ ತಗ್ಗಿಸುವ ಹೇಯಕೃತ್ಯವಾಗಿದೆ. ತಪ್ಪು ಮಾಡಿದವರ ವಿರುದ್ದ ಈಗಾಗಲೇ ಪ್ರಕರಣ ದಾಖಲು ಮಾಡಲಾಗಿದೆ. ವಿಚಾರಣೆ ವೇಳೆ ಇನ್ನು ಯಾವುದಾದರೂ ಅಧಿಕಾರಿಗಳ ಲೋಪ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದರು. ಪ್ರಸ್ತುತ ವಸತಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಯನ್ನು ಶಿಕ್ಷೆಯ ಮೇಲೆ ವರ್ಗಾವಣೆಗೊಳಿಸಲಾಗುವುದು. ಶಾಲೆಯಲ್ಲಿ ಓದುತ್ತಿರುವ ಮಕ್ಕಳ…

Read More

ಮಡಿಕೇರಿ:- 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಮಾಸ್ಕ್ ಕಡ್ಡಾಯ ಇಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.‌ ಕೊರೋನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡಾ ನಿನ್ನಯೇ ಸಭೆ ನಡೆಸಿ ಕೆಲವು ಸಲಹೆಗಳನ್ನ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಸಮಿತಿಯ ಸಲಹೆಗಳನ್ನ ಆಧರಿಸಿ ಆರೋಗ್ಯ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Read More

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಖಾಸಗಿ ಶಾಲೆಗೆ ಸೇರಿದ್ದ ಬಸ್ ಪಲ್ಟಿಯಾಗಿದ್ದು ವಿದ್ಯಾರ್ಥಿಗಳು ಸೇರಿದಂತೆ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ. ಸೋಮವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಚಾಲಕ ಹಾಗೂ ನಿರ್ವಾಹಕ ಸೇರಿದಂತೆ 10 ವಿದ್ಯಾರ್ಥಿಗಳು ಬಸ್ ನಲ್ಲಿದ್ದರು. ಅದೃಷ್ಟವಶಾತ್ ಬಸ್ ಉರುಳಿ ಬಿದ್ದರು ಯಾವುದೇ ಹಾನಿ ಸಂಭವಿಸಿಲ್ಲ. ತಾಲೂಕಿನ ಹಲವೆಡೆ ಖಾಸಗಿ ಸಂಸ್ಥೆಗಳು ನಾಯಿ ಕೊಡೆಗಳಂತೆ ತಲೆ ಎತ್ತಿದ್ದು ಬಸ್ ಚಾಲನೆ ಮಾಡುವವರಿಗೆ ಯಾವುದೇ ಲಗಾಮು ಇಲ್ಲದಂತಾಗಿದೆ. ಓವರ್ ಸ್ಪೀಡ್ ನಲ್ಲಿ ಬಸ್ ಚಾಲನೆ ಮಾಡುತ್ತಿದ್ದು ಮಕ್ಕಳು ಕೈಯಲ್ಲಿ ಜೀವ ಹಿಡಿದು ಸಂಚರಿಸಬೇಕಾಗಿದೆ.‌ ಈ‌ ಕುರಿತು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತ ಖಾಸಗಿ ಶಾಲೆಗಳಿಗೆ ಎಚ್ಚರಿಕೆ ನೀಡಿದರೆ ಮಾತ್ರ ಮುಂದೆ ಆಗುವ ಅಪಾಯಗಳನ್ನು ತಡೆಗಟ್ಟಬಹುದು.

Read More

ಕೆಲವೊಬ್ಬರು ಬಾಯಿಯ ದುರ್ನಾತದಿಂದ ಬೇರೆಯವರ ಜೊತೆ ಮಾತನಾಡಲು ಕೂಡ ಮುಜುಗರ ಪಟ್ಟಿಕೊಳ್ಳುತ್ತಿರುತ್ತಾರೆ. ದಿನಕ್ಕೆ ಎರಡು ಬಾರಿ ಹಲ್ಲುಜ್ಜಿದ ನಂತರವೂ ಬಾಯಿಯಿಂದ ದುರ್ವಾಸನೆ ಬರುತ್ತಿರುತ್ತದೆ. ಹೀಗಾದಾಗ ನೀವು ಬಳಸುವ ಟೂತ್ ಪೇಸ್ಟ್ ಅನ್ನು ಬದಲಾಯಿಸುವ ಅಗತ್ಯವಿಲ್ಲ. ಹೀಗಾಗಲು ಕಾರಣ ಏನು ಎನ್ನುವುದನ್ನು ತಿಳಿದುಕೊಳ್ಳಲು ಪ್ರಯತ್ನಿಸಬೇಕು. ನಾವು ಆಹರ ಸೇವಿಸುವಾಗ ಸಾಮಾನ್ಯವಾಗಿ ಆ ಆಹಾರದ ಕಣಗಳು ಹಲ್ಲು ಮತ್ತು ವಸಡುಗಳಲ್ಲಿ ಸೇರಿಕೊಳ್ಳುತ್ತವೆ. ಅವುಗಳನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ ಅವು ಫ್ಲೆಕ್ ರೂಪವನ್ನು ಪಡೆಯುತ್ತವೆ. ಫ್ಲೆಕ್ ಅನ್ನು ಹಾಗೆಯೇ ಬಿಟ್ಟರೆ ಟಾರ್ಟರ್ ಆಗಿ ಬದಲಾಗುತ್ತದೆ. ಹೌದು, ಈ ಹಳದಿ ಕಲೆಗಳು ಹಲ್ಲುಗಳ ಮೇಲೆ ಜಮೆಯಾಗುತ್ತಾ ಹೋದ ಹಾಗೆ ಆಸಿಡ್ ರಚನೆಗೂ ಅದು ಕಾರಣವಾಗುತ್ತದೆ. ಇದು ಹಲ್ಲಿನ ದಂತಕವಚವನ್ನು ನಾಶಪಡಿಸುತ್ತದೆ. ಹಲ್ಲುಗಳಿಂದ ಪ್ಲೇಕ್ ಅನ್ನು ತೆಗೆದುಹಾಕಲು ದಂತ ವೈದ್ಯರ ಬಳಿಗೆಯೇ ಹೋಗಬೇಕೆಂದಿಲ್ಲ. ಅವುಗಳನ್ನು ಬಿಳುಪುಗೊಳಿಸಲು ಕೆಲವು ಮನೆಮದ್ದುಗಳನ್ನು ಕೂಡಾ ಪ್ರಯತ್ನಿಸಬಹುದು. ಹಲ್ಲುಗಳಿಂದ ಪ್ಲೇಕ್ ಅನ್ನು ತೆಗೆದುಹಾಕಲು ಮನೆಮದ್ದುಗಳು: ಬೇಕಿಂಗ್ ಸೋಡಾ : ಅಡಿಗೆ ಸೋಡಾ ಹಲ್ಲುಗಳಿಂದ ಪ್ಲೇಕ್ ಅನ್ನು…

Read More

ಹುಬ್ಬಳ್ಳಿ: – ಹುಬ್ಬಳ್ಳಿಬಧಾರವಾಡ ಅವಳಿನಗರ ತ್ಯಾಜ್ಯ ನಿರ್ವಹಣೆ ಕುರಿತು ಇಂದು ಧಾರವಾಡದಲ್ಲಿ ನಿವೃತ್ತ ನ್ಯಾಯಾಧೀಶರು ಹಾಗೂ ಉಪ ಲೋಕಾಯುಕ್ತರಿಂದ ಅಧಿಕಾರಿಗಳ ಸಭೆ ಜರುಗಿತು. ನಗರದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಸಭೆ ಜರುಗಿಸಲಾಗಿದ್ದು, ನಿವೃತ್ತ ನ್ಯಾಯಾಧೀಶರು ಹಾಗೂ ಉಪಲೋಕಾಯುಕ್ತರು ಆಗಿರುವ ಸುಭಾಷ ಆಡಿ ಅವರು ತ್ಯಾಜ್ಯ ನಿರ್ವಹಣೆಯ ಕುರಿತು ಅಧಿಕಾರಿಗಳಿಂದ ಸಭೆಯಲ್ಲಿ ಮಾಹಿತಿ ಪಡೆದುಕೊಂಡರು.‌ ಘನತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹಾಗೂ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈಗಾಗಲೇ ಪ್ಲಾಸ್ಟಿಕ್ ನಿಷೇಧವಾದರೂ ಸಹ ಎತೆಚ್ಚವಾಗಿ ಪ್ಲಾಸ್ಟಿಕ್ ಬಳಕೆ ಆಗುತ್ತಿದ್ದು, ಪ್ಲಾಸ್ಟಿಕ್ ತಡೆಗಟ್ಟುವಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಾಧೀಶರು ಅಧಿಕಾರಗಳನ್ನು ತರಾಟೆಗೆ ತೆಗೆದುಕೊಂಡರು. ಸಭೆಯಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿ ಧಾರವಾಡದ ಮಹಾನಗರ ಪಾಲಿಕೆಯ ಎಲ್ಲ ಅಧಿಕಾರಿಗಳಿಗೆ ತ್ಯಾಜ್ಯ ನಿರ್ವಹಣೆ ವ್ಯವಸ್ಥಿತವಾಗಿ ನಡೆಯಬೇಕು, ಪ್ಲಾಸ್ಟಿಕ್ ತಡೆಗಟ್ಡುವಲ್ಲಿ ಅಗತ್ಯಕ್ರಮವಹಿಸಿ ಎಂದು ಖಡಕ್ ಸೂಚನೆ ನೀಡಿದರು.‌

Read More

ಬೆಂಗಳೂರು:- ಸ್ವಪಕ್ಷದ ನಾಯಕರ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವಿಚಾರದ ಕುರಿತು ಸಚಿವ ಬಿಸಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಯತ್ನಾಳ್ ಅವರು ಯಾವ ಪಕ್ಷದಲ್ಲಿದ್ದಾರೆ ಅನ್ನೋ ಅನುಮಾನ ಮೂಡಿಸುತ್ತಿದೆ. ವಿಜಯೇಂದ್ರ ಅವರನ್ನು ರಾಜ್ಯಾದ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ಯಡಿಯೂರಪ್ಪ ಅವರಲ್ಲ. ಹೈಕಮಾಂಡ್ ನಾಯಕರು ಆಯ್ಕೆ ಮಾಡಿದ್ದಾರೆ. ರಾಜಸ್ಥಾನದಲ್ಲಿ ಮೊದಲ ಬಾರಿಗೆ ಗೆದ್ದ ಶಾಸಕನಿಗೆ ಸಿಎಂ ಸ್ಥಾನ ಕೊಟ್ಟಿದೆ. ಅಲ್ಲಿನ ಹಿರಿಯ ಘಟಾನುಘಟಿ ನಾಯಕರು, ಮಾಜಿ ಸಿಎಂ ವಸುಂಧರಾ ರಾಜೇ ಅವರು ಅದನ್ನ ಒಪ್ಪಿಕೊಂಡು ಸುಮ್ನೆ ಇದ್ದಾರೆ. ಯತ್ನಾಳ್ ಅವರ ಬದ್ಧತೆ ಯಾರಿಗೆ ಅನ್ನೋದು ನಾವು ಪ್ರಶ್ನೆ ಮಾಡಬೇಕಾಗುತ್ತದೆ. ಹೀಗಾಗಿ ಯತ್ನಾಳ್ ಅವರು ಕೂಡ ಪಕ್ಷದ ಹಿತ ದೃಷ್ಟಿಯಿಂದ ಸೈಲೆಂಟ್ ಆಗಿದ್ದರೆ ಒಳ್ಳೆಯದು ಎಂದು ಹೇಳಿದರು. ಮಾಜಿ ಸಚಿವ ಸೋಮಣ್ಣ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಬಿ ಸಿ ಪಾಟೀಲ್, ಸೋಮಣ್ಣ ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಸಮಸ್ಯೆ ಕೂಡ ಸರಿಯಾಗುತ್ತದೆ. ಎಲ್ಲ ಸರಿಯಾಗುತ್ತದೆ…

Read More

ಬೆಂಗಳೂರು:- ಎರಡು ವರ್ಷದೊಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದರು. ಎತ್ತಿನ ಹೊಳೆ ಯೋಜನೆಗೆ ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ನಮ್ಮ ಸರ್ಕಾರವು ಅನುದಾನ ಬಿಡುಗಡೆ ಮಾಡಿದೆ. ಯೋಜನೆಯ ಅಂದಾಜು ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ 22 ಸಾವಿರ ಕೋಟಿ ರೂ. ಆಗುತ್ತಿದೆ. ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ತಿಳಿಸಿದರು. ವಾಟರ್ ಸ್ಟೋರೆಜ್‌ಗಾಗಿ ಕೊರಟಗೆರೆ ರೈತರು ನೀಡಿರುವ ಭೂಮಿಗೆ ಎಕರೆಗೆ 8 ಲಕ್ಷ ರೂ ಹಾಗೂ ದೊಡ್ಡಬಳ್ಳಾಪುರದಲ್ಲಿ…

Read More

ಬೆಂಗಳೂರು:- ನಾಳೆ ಪ್ರಧಾನಿ ಜೊತೆ ಬರಗಾಲದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ದೆಹಲಿಗೆ ತೆರಳುತ್ತಿದ್ದೇನೆ. ಬರಗಾಲದ ಬಗ್ಗೆ ಪ್ರಧಾನಿ ಜೊತೆ ಚರ್ಚೆ ಮಾಡಲು ಸಮಯ ಕೇಳಿದ್ದೇ. ಜೊತೆಗೆ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಮೀಟಿಂಗ್ ಇದೆ, ಅದನ್ನು ಅಟೆಂಡ್ ಮಾಡುತ್ತೇನೆ. ಜೊತೆಗೆ ಲೋಕಸಭಾ ಚುನಾವಣೆ ಬಗ್ಗೆಯೂ ಚರ್ಚೆ ಮಾಡುತ್ತೇನೆ. ಹೈಕಮಾಂಡ್ ಜೊತೆ ನಿಗಮ ಮಂಡಳಿ ನೇಮಕಾತಿ ಕುರಿತು ಚರ್ಚೆ ಮಾಡುತ್ತೇವೆ. ಈಗಾಗಲೇ ಲಿಸ್ಟ್ ಕಳಿಸಲಾಗಿದೆ ಎಂದರು. ನೆರೆ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ ಸಂಬಂಧ ಪ್ರತಿಕ್ರಿಯಿಸಿ, ಆರೋಗ್ಯ ಸಚಿವರಿಗೆ ಸಭೆ ಮಾಡಲು ಹೇಳಿದ್ದೇನೆ. ಮುಂಜಾಗ್ರತಾ ಕ್ರಮಗಳನ್ನು ತಗೆದುಕೊಳ್ಳಲು ಸೂಚಿಸಿದ್ದೇನೆ ಎಂದರು. ದೆಹಲಿಗೆ ತೆರಳುತ್ತಿದ್ದೇನೆ. ಬರಗಾಲದ ಬಗ್ಗೆ ಪ್ರಧಾನಿ ಜೊತೆ ಚರ್ಚೆ ಮಾಡಲು ಸಮಯ ಕೇಳಿದ್ದೇ. ಜೊತೆಗೆ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಮೀಟಿಂಗ್ ಇದೆ, ಅದನ್ನು ಅಟೆಂಡ್ ಮಾಡುತ್ತೇನೆ. ಜೊತೆಗೆ ಲೋಕಸಭಾ ಚುನಾವಣೆ ಬಗ್ಗೆಯೂ ಚರ್ಚೆ ಮಾಡುತ್ತೇನೆ. ಹೈಕಮಾಂಡ್ ಜೊತೆ ನಿಗಮ ಮಂಡಳಿ ನೇಮಕಾತಿ ಕುರಿತು ಚರ್ಚೆ…

Read More

ರಾಯಬಾಗ :- ತಾಲೂಕೀನ ಹಾರೂಗೇರಿ ಪಟ್ಟಣದಲ್ಲಿರುವ ಐತಿಹಾಸಿಕ, ಪುರಾತನ ಬಾವಿಯಾದ ಶಂಕರ ಬಾವಿಯಲ್ಲಿ ಇವತ್ತು ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ನೀಲಿ ಬಣ್ಣದ ಜಾಕೆಟ್,ಕಪ್ಪು ಪ್ಯಾಂಟ್, ಬೂದಿ ಬಣ್ಣದ ಶರ್ಟ್,ನೀಲಿ ಬನಿಯನ್ ಹಾಕಿದ್ದು ದಪ್ಪ ದೇಹ, ಗೋದಿ ಬಣ್ಣದ ಚರ್ಮದ ಸುಮಾರು 40 ವಯಸ್ಸಿನ ಆಸುಪಾಸಿನ ವ್ಯಕ್ತಿಯಾಗಿದೆ. ಸಂಬಂಧಪಟ್ಟವರು ಹಾರೂಗೇರಿ ಪೊಲೀಸ್ ಠಾಣೆಗೆ ಸಂರ್ಪಕಿಸಿ ಎಂದು ಪಿಎಸ್ಐ ಗಿರಮಲ್ಲಪ್ಪಾ ಉಪ್ಪಾರ್ ತಿಳಿಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರಿಕ್ಷೇ ಮಾಡಲು ಹಾರೂಗೇರಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಈ ಪ್ರಕರಣ ಹಾರೂಗೇರಿ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.

Read More

ಹಾಸನ: ಕಾಡು ಹಂದಿ ದಾಳಿಗೆ ಓರ್ವ ರೈತ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಾರಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜೇಗೌಡ (63) ಮೃತ ದುರ್ದೈವಿಯಾಗಿದ್ದು, ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿದ್ದಾರೆ. ರಾಜೇಗೌಡ, ಕಾಂತಮ್ಮ ಹಾಗೂ ನಂಜಮ್ಮ ಎಂಬುವವರು ಜಮೀನಿಗೆ ನೀರು ಹಾಯಿಸುತ್ತಿದ್ದಾಗ, ಕಾಡುಹಂದಿ ದಾಳಿ ಮಾಡಿದೆ. https://ainlivenews.com/aishwarya-rai-left-her-husbands-house-mother-in-law-rift-in-big-bs-house/ ಹಂದಿ ತಪ್ಪಿಸಿಕೊಳ್ಳಲು ಕಿರುಚಾಡಿದ್ದಾರೆ. ಆದರೆ ಕಾಡುಹಂದಿ ರಾಜೇಗೌಡರ ಮೇಲೆ ಎರಗಿ ಸಾಯಿಸಿದೆ. ಕಾಡುಹಂದಿ ದಾಳಿಯಿಂದ ಸ್ಥಳದಲ್ಲೇ ರಾಜೇಗೌಡ ಸಾವನ್ನಪ್ಪಿದ್ದಾರೆ. ಇತ್ತ ರಾಜೇಗೌಡನನ್ನು ಬಚಾವ್ ಮಾಡಲು ಹೋದ ಶಾಂತಮ್ಮ, ನಂಜಮ್ಮನಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳನ್ನು ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಹಿಮ್ಸ್‌ಗೆ ರವಾನೆ ಮಾಡಲಾಗಿದೆ.

Read More