ಮಂಡ್ಯ: ರಾಜ್ಯದಲ್ಲಿ ಗೋ ಹತ್ಯೆ ನಿಷೇಧವಿದ್ದರೂ ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆಗಳು ತಲೆ ಎತ್ತಿವೆ. ತೂಬಿನಕೆರೆ ಗ್ರಾಮದ ಹೊರ ವಲಯದ ಜಮೀನಿನಲ್ಲಿ ಅಕ್ರಮ ಶೆಡ್ ನಿರ್ಮಾಣ ಮಾಡಿ ಜಾನುವಾರುಗಳನ್ನು ಕೊಂದು ಅವುಗಳ ಮೂಳೆ, ಮಾಂಸ ಸಂಗ್ರಹ ಮಾಡಲಾಗುತ್ತಿದೆ. ಗುಜರಿ ವಸ್ತುಗಳ ಸಂಗ್ರಹದ ಹೆಸರಲ್ಲಿ ಗೋವುಗಳ ಮಾರಣಹೋಮ ನಡೆಸಲಾಗುತ್ತಿದೆ. ಕೊಳೆತ ವಾಸನೆ ಹೆಚ್ಚಾಗ್ತಿದ್ದಂತೆ ಸ್ಥಳೀಯರಿಗೆ ಅನುಮಾನ ಉಂಟಾಗಿದ್ದು, ಭಜರಂಗದಳದ ಕಾರ್ಯಕರ್ತರು ಅಖಾಡಕ್ಕಿಳಿದು ಅಕ್ರಮ ಶೆಡ್ ಪತ್ತೆಹಚ್ಚಿದ್ದಾರೆ. ತೂಬಿನಕೆರೆ ಗ್ರಾಮದ ಲಿಂಗರಾಜು ಎಂಬುವರ ಜಮೀನನ್ನು ಮಂಡ್ಯದ ಮೂಲದ ವ್ಯಕ್ತಿ ಬಾಡಿಗೆ ಪಡೆದು ಶೆಡ್ ನಿರ್ಮಿಸಿ ಗೋವುಗಳ ಮೂಳೆ ಸಂಗ್ರಹ ಮಾಡುತ್ತಿದ್ದನು. ಈ ಮೂಳೆಗಳಿಂದ ಪೌಡರ್ ತಯಾರಿಸುತ್ತಿದ್ದ ಎನ್ನುವ ಆರೋಪ ಕೇಳಿಬಂದಿದ್ದು, ಮಾಹಿತಿ ನೀಡಿದರೂ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
Author: AIN Author
ಬೆಂಗಳೂರು: ರಾಜ್ಯದ ಜಾತಿಗಣತಿ ವರದಿ ಬಿಡುಗಡೆಯ ವಿರೋಧದ ಕಾವು ದೊಡ್ಡ ಮಟ್ಟದಲ್ಲಿ ಜೋರಾಗ್ತಿದೆ. ಒಕ್ಕಲಿಗರ ವಿರೋಧದ ನಂತರ ರಾಜ್ಯದ ಅತೀ ದೊಡ್ಡ ಸಮುದಾಯ ಜಾತಿ ವರದಿ ವಿರೋಧಿಸಿ ಸಹಿ ಸಂಗ್ರಹಿಸಿದೆ. ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೇ ಅಖಾಡಕ್ಕಿಳಿದಿದ್ದು ಸಿಎಂ ಸಿದ್ದರಾಮಯ್ಯಗೆ ಪತ್ರ ಕೊಟ್ಟು ಸಮೀಕ್ಷೆ ಅವೈಜ್ಞಾನಿಕ ಅಂತ ಕಿಡಿ ಕಾರಿದ್ದಾರೆ. ಜಾತಿಗಣತಿ ವರದಿ ಪಡೆಯಲು ಉತ್ಸುಕರಾಗಿರೋ ಸಿದ್ದರಾಮಯ್ಯಗೆ ಶಾಮನೂರು ಬಂಡಾಯ ನುಂಗಲಾರದ ಬಿಸಿತುಪ್ಪವಾಗ್ತಿದೆ…. ಬಿಹಾರದಲ್ಲಿ ಜಾತಿಗಣತಿ ವರದಿ ಬಿಡುಗಡೆಯಾದ್ಮೇಲೆ ರಾಜ್ಯದಲ್ಲೂ ಜಾತಿ ವರದಿ ಬಿಡುಗಡೆಗೆ ಒತ್ತಡ ಕೇಳಿಬಂದಿತ್ತು. 2015 ಸಿಎಂ ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಕಾಂತರಾಜ್ ನೇತೃತ್ವದಲ್ಲಿ ಸಿದ್ದರಾಮಯ್ಯ ಮಾಡಿಸಿದ್ದ ಶೈಕ್ಷಣಿಕ ಮತ್ತು ಸಾಮಾಜಿಕ ವರದಿಯನ್ನೇ ಜಾತಿಗಣತಿ ವರದಿಯನ್ನಾಗಿ ಪಡೆಯುತ್ತೇವೆ ಅಂತ ಸಿಎಂ ಸಿದ್ದರಾಮಯ್ಯ ಹೇಳ್ತಿದ್ದಂತೆ. ಜಾತಿಗಣತಿಗೆ ವಿರೋಧಗಳು ಶುರುವಾದ್ರು ಮೊದಲು ಶುರುಮಾಡಿದ್ದೆ ರಾಜ್ಯದ ಪ್ರಬಲ ಸಮುದಾಯಗಳಲ್ಲಿ ಒಂದಾದ ಒಕ್ಕಲಿಗರು. ಸಿದ್ದು ಸರ್ಕಾರದಲ್ಲಿ ಡಿಸಿಎಂ ಆಗಿರುವ ಡಿಕೆ ಶಿವಕುಮಾರ್ ಅವ್ರೆ ಜಾತಿ ವರದಿಗೆ ವಿರೋಧ ವ್ಯಕ್ತಪಡಿಸಿದ್ರು, ಇದಾದ್ಮೇಮೇಲೆ ಮೊನ್ನೆ ಮೊನ್ನೆಯಷ್ಟೇ…
ಬೆಂಗಳೂರು: ನಾನು ನಾಳೆ ದೆಹಲಿಗೆ ಹೋಗ್ತಾ ಇದೀನಿ. ಪ್ರಧಾನಿ ಮೋದಿ ಭೇಟಿಗೆ ಕಾಲಾವಕಾಶ ಕೇಳಿದ್ದೆ ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದರು. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಅವಕಾಶ ನೀಡಲಾಗಿದೆ. ಬೆಳಗ್ಗೆ 11 ಗಂಟೆಗೆ ಸಂಸತ್ನಲ್ಲಿ ಮೋದಿ ಭೇಟಿಗೆ ಸಮಯ ನಿಗದಿ ಮಾಡಲಾಗಿದೆ. ಬರಗಾಲದ ಬಗ್ಗೆ ಪ್ರಧಾನಿಗಳ ಜೊತೆ ಚರ್ಚೆ ಮಾಡ್ತೀನಿ ಪಿಎಂ ಜೊತೆ ಸಮಯ ಕೇಳಿದ್ದೇ ಬರಗಾಲದ ಬಗ್ಗೆ ಚರ್ಚೆ ಮಾಡಲು.. ಜೊತೆಗೆ ಕಾಂಗ್ರೆಸ್ ವರ್ಕಿಂಗ್ ಕಿಮಿಟಿ ಮೀಟಿಂಗ್ ಇದೆ ಅದಕ್ಕೂ ಅಟೆಂಡ್ ಮಾಡ್ತೀನಿ ಜೊತೆಗೆ ಲೋಕಸಭಾ ಚುನಾವಣೆ ಬಗ್ಗೆಯೂ ಚರ್ಚೆ ಮಾಡ್ತೀನಿ..ಹೈಕಮಾಂಡ್ ಜೊತೆ ನಿಗಮ ಮಂಡಳಿದು ಚರ್ಚೆ ಮಾಡ್ತೀವಿ ಈಗಾಗಲೇ ಲಿಸ್ಟ್ ಕಳಿಸಲಾಗಿದೆ ಎಂದರು. ನೆರೆ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ ವಿಚಾರ ಬಗ್ಗೆಯೂ ಆರೋಗ್ಯ ಸಚಿವರಿಗೆ ಸಭೆ ಮಾಡಲು ಹೇಳಿದ್ದೇನೆ ಮುಂಜಾಗ್ರತಾ ಕ್ರಮಗಳನ್ನ ತಗೆದುಕೊಳ್ಳಲು ಹೇಳಿದ್ದೇನೆ ಎಂದು…
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಕೆಪಿಟಿಸಿಎಲ್ ಯಲ್ಲಿ ೧೧೦ ಕವಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೨೦೨೩ ೨೦೨೪ ರ ಆರ್ಥಿಕ ವರ್ಷದ ಮಾಸಿಕ ಕಾ ನಿರ್ವಹಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಬಕವಿ ಸಹಾಯಕ ಅಭಿಯಂತರರು ತಿಳಿಸಿದ್ದಾರೆ. ಡಿಸೆಂಬರ್ ೧೯. ೧೨.೨೦೨೩ ರಂದು ಬೆಳಿಗ್ಗೆ ೧೦ ಗಂಟೆ ಯಿಂದ ಸಂಜೆ ೬.೦೦ ಗಂಟೆಗೆವರೆಗೆ ರಬಕವಿ. ರಾಮಪುರ. ಹೋಸೋರ. ಯರಗಟ್ಟಿ. ಹನಗಂಡಿ. ಹಳಿಂಗಳಿ ಸೇರಿದಂತೆ ಈ ಭಾಗದ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯ ಉಂಟಾಗಲಿದೆ ಒಂದು ದಿನ ಮಟ್ಟಿಗೆ ಗ್ರಾಹಕರು ಸಹಕರಿಸಬೇಕು ಈ ಮೂಲಕ ವಿನಂತಿಸಿದ್ದಾರೆ. ಪ್ರಕಾಶ ಕುಂಬಾರ ಬಾಗಲಕೋಟೆ
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಆರಾಧ್ಯದೈವ ಶ್ರೀ ಕಾಡಸಿದ್ದೇಶ್ವರ ದೇವಸ್ಥಾನದ ಬಂಗಾರ ಲೇಪನಾ ಕಳಸರೋಹಣ ಸಮಾರಂಭ ನಡೆಯಲಿದೆ. ಡಿಸೆಂಬರ 18. 12. 2023 ರಂದು ಮುಂಜಾನೆ 9 ಗಂಟೆಗೆ ಶ್ರೀ ವೈಭವ ಚಿತ್ರಮಂದಿರದಿಂದ ಭವ್ಯ ಬಂಗಾರ ಲೇಪನಾ ಕಳಸದ ಮೆರವಣಿಗೆ ಕುಂಭಮೇಳ ಹಾಗೂ ವಿವಿಧ ವಾದ್ಯ ಮೇಳಗಳೊಂದಿಗೆ ಬನಹಟ್ಟಿಯ ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ ಶ್ರೀ ಕಾಡುಸಿದ್ದೇಶ್ವರ ದೇವಾಲಯಕ್ಕೆ ತಲುಪಿದೆ. ಬಂಗಾರ ಲೇಪನಾ ಕಳಸೋತ್ಸವ ಕಾರ್ಯಕ್ರಮದಲ್ಲಿ ಬನಹಟ್ಟಿಯ 34 ಸಮಾಜದ ಹಿರಿಯರು ಕೂಡಿ ಅದ್ದೂರಿಯಾಗಿ ನಡೆಸಿಕೊಟ್ಟಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಲಿ ಶ್ರೀಶೈಲ ದಬಾಡಿ ಶಂಕರ ಸೋರಗಾಂವಿ. ಶ್ರೀಪಾದ ಬಾಣಕಾರ. ಪಂಡಿತ ಪಟ್ಟಣ. ರಾಜಶೇಖರ ಮಾಲಾಪುರ. ಸಿದ್ದನಗೌಡ ಪಾಟೀಲ. ಬಿಮಶಿ ಮಗದುಮ. ದಾನಪ್ಪ ಹುಲಜತ್ತಿ. ಮಲ್ಲಿಕಾರ್ಜುನ ಬಾಣಕಾರ.ಅಶೋಕ ರಾವಳ. ಶಂಕರ ಅಂಗಡಿ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು. ಪ್ರಕಾಶ ಕುಂಬಾರ ಬಾಗಲಕೋಟೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೆ ಡಿ.ಕೆ.ಶಿವಕುಮಾರ್ ಅವರು ನಾಳೆ ದೆಹಲಿಗೆ ತೆರಳಲಿದ್ದು ಪ್ರಧಾನಿ ಮೋದಿ ಭೇಟಿಗೆ ಕಾಲಾವಕಾಶ ಕೇಳಿದ್ದರು. ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಅವಕಾಶ ನೀಡಲಾಗಿದೆ. ಬೆಳಗ್ಗೆ 11 ಗಂಟೆಗೆ ಸಂಸತ್ನಲ್ಲಿ ಮೋದಿ ಭೇಟಿಗೆ ಸಮಯ ನಿಗದಿ ಮಾಡಲಾಗಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗುತ್ತಿರುವ ಎರಡನೇ ಭೇಟಿ ಆಗಿದೆ. ನಾಳೆ ಸಂಸತ್ ಭವನದಲ್ಲಿ ಮೋದಿ ಅವರನ್ನು ಭೇಟಿಯಲಿರುವ ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಬರಗಾಲದ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಇದೇ ವೇಳೆ ಬರ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸುವ ಸಾಧ್ಯತೆ ಇದೆ.
ಗದಗ: ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಗದಗ ಜಿಲ್ಲೆ ಹಾಗೂ ಕೆ ಈ ಕಾಂತೇಶ ಗುರುಸ್ವಾಮಿಗಳ ಸಹಯೋಗದಲ್ಲಿ ಗದಗ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಡಿ. 20 ರಂದು ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜಾ ಹಾಗೂ ಮಹಾಪ್ರಸಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಗದಗ ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನ ನಡೆಸಿ ಮಾತನಾಡಿದ, ಆನಂದ ಗುರುಸ್ವಾಮಿ ಅವರು ಕೇರಳದ ಅಯ್ಯಪ್ಪ ಸ್ವಾಮಿ ದೇವಾಲಯದ ತಂತ್ರಿಗಳಾದ ಶಿವಶಂಕರನ್ ನಂಬೂದಿರಿಪ್ಪಾಡ್ ರವರಿಂದ ಮಹಾಪೂಜೆ ನಡೆಯಲಿದ್ದು ಸುಮಾರು 1500 ಅಯ್ಯಪ್ಪ ಮಾಲಾಧಾರಿಗಳು ಭಾಗವಹಿಸಲಿದ್ದಾರೆ ಅಂದ್ರು. ಸುದ್ದಿಗೋಷ್ಠಿಯಲ್ಲಿ ಗದಗ-ಬೆಟಗೇರಿ ನಗರಸಭೆ ಸದಸ್ಯ ಅನಿಲ್ ಅಬ್ಬಿಗೇರಿ, ಮುಖಂಡ ರಮೇಶ ಸಜ್ಜಗಾರ, ಮಂಜುನಾಥ ಹಳ್ಳೂರಮಠ ಗುರುಸ್ವಾಮಿ, ಸದಾನಂದ, ನಾಗರಾಜ ಬಾಗಲಕೋಟೆ, ಪ್ರಸಾದ್ ಕೋಡಿತ್ಕರ್, ಜಗದೀಶ ಸಂಕನಗೌಡ್ರ, ರಂಗಪ್ಪ ಬಂಡಿವಡ್ಡರ, ಮುತ್ತಣ್ಣ ಬೂದಿಹಾಳ, ಶಿದ್ಲಿಂಗಪ್ಪ ಉಮಚಗಿ, ಗುರುನಾಥ ಗುರುಸ್ವಾಮಿ, ವೆಂಕಟೇಶ ದ್ವಾಸಲಕೇರಿ ಸೇರಿದಂತೆ ಇತರ ಅಯ್ಯಪ್ಪ ಮಾಲಾಧಾರಿಗಳು ಅಯ್ಯಪ್ಪ ಭಕ್ತರು ಉಪಸ್ಥಿತರಿದ್ದರು.
ರಾಯಚೂರು: ಲಿಂಗಸುಗೂರು ಬಿಜೆಪಿ ಶಾಸಕ ಮಾನಪ್ಪ ಡಿ ವಜ್ಜಲ್ ಅವರಿಗೆ ಪುತ್ರ ವಿಯೋಗವಾಗಿದೆ. ಶಾಸಕರ ದ್ವಿತೀಯ ಪುತ್ರ ಶ್ರೀಮಂತರಾಯ ವಜ್ಜಲ್ (33) ಅವರು ಹೃದಯಘಾತದಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಬೆನ್ನಲ್ಲೇ ಅವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶ್ರೀಮಂತರಾಯ ಮೃತದೇಹವನ್ನು ಲಿಂಗಸುಗೂರಿಗೆ ರವಾನೆ ಮಾಡಲಾಗುತ್ತಿದೆ. ಲಿಂಗಸುಗೂರಿನಲ್ಲಿ ಇಂದು ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಶಾಸಕರ ಜಮೀನಿನಲ್ಲಿ ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಯಲಿದೆ. ಶ್ರೀಮಂತರಾಯ ವಜ್ಜಲ್ ನಿಧನಕ್ಕೆ ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ. ಮೃತರಿಗೆ ಪುತ್ರ, ಪತ್ನಿ, ಸಹೋದರರ ಬಳಗವಿದೆ. ಇಂದು ಲಿಂಗಸೂರಿನಲ್ಲಿ ಸಾರ್ವಜನಿಕ ದರ್ಶನದ ಬಳಿಕ ಅಂತ್ಯಕ್ರೀಯೆ ನಡೆಸಲಾಗುತ್ತದೆ.
ತುಮಕೂರು: ನಗರದ ಮಧುಗಿರಿ ಹಾಗೂ ಪಾವಗಡದಲ್ಲಿ ಕರಡಿಯೊಂದು ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ. ಇಂದು ಬೆಳಿಗ್ಗೆ ಮಧುಗಿರಿ ತಾಲೂಕಿನ ಕಾಮೇಗೌಡನಹಳ್ಳಿ ಗ್ರಾಮದಲ್ಲಿ ಕರಡಿ ಪ್ರತ್ಯಕ್ಷಗೊಂಡಿದೆ. ತುಮಕೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕವನ್ನು ಉಂಟು ಮಾಡುತ್ತಿತ್ತು. ಇದೀಗ ಕರಡಿ ಗ್ರಾಮಗಳಲ್ಲಿ ಕಾಣಿಸಿಕೊಂಡಿದ್ದು, ಜನರಲ್ಲಿ ಮತ್ತಷ್ಟು ಭಯವನ್ನು ಹೆಚ್ಚು ಮಾಡಿದೆ. ಕರಡಿ ಸೆರೆಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.
ಬೆಂಗಳೂರು: ಇಂದಿನಿಂದಲೇ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ.ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದರು. ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ರವಿ ಅವರ ನೇತೃತ್ವದಲ್ಲಿ ನಿನ್ನೆಯೂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಚರ್ಚೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಜೊತೆಗೂ ಚರ್ಚೆ ಮಾಡಿದ್ದಾರೆ. ಕೆಲವು ಸಲಹೆ ಮಾರ್ಗಸೂಚಿ ಪಡೆದಿದ್ದೇವೆ ಎಂದರು. ಇನ್ನೂ ಈಗಾಗಲೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜು ಆಗುವಂತೆಯೂ ಸೂಚನೆ ನೀಡಲಾಗಿದೆ. ಹಾಗೆಯೇ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ…