Author: AIN Author

ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕು ಯಲವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ ನಡೆದಿತ್ತು. ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಲಾಗಿತ್ತು. ಸದ್ಯ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪರನ್ನು ಮಾಸ್ತಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಬಂಧಿತರು. ಹಾಸ್ಟೆಲ್ ವಾರ್ಡನ್ ಮಂಜುನಾಥ್ ಮತ್ತು ಅತಿಥಿ ಶಿಕ್ಷಕ ಅಭಿಷೇಕ್‌ ಪರಾರಿ ಆಗಿದ್ದು, https://ainlivenews.com/aishwarya-rai-left-her-husbands-house-mother-in-law-rift-in-big-bs-house/ ಹುಡುಕಾಟ ನಡೆಸುತ್ತಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ದೂರು ಹಿನ್ನೆಲೆ ಮಲಹೊರುವ ಪದ್ಧತಿ ನಿಯಂತ್ರಣ ಕಾಯ್ದೆ, ಅಟ್ರಾಸಿಟಿ ಕಾಯ್ದೆಯಡಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕಳೆದ ಹಲವು ದಿನಗಳಿಂದ ಮಕ್ಕಳಿಗೆ ವಿವಿಧ ರೀತಿಯಲ್ಲಿ ಕಿರುಕುಳ ಕೂಡ ನೀಡಲಾಗುತ್ತಿದೆ ಅಂತಾ ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್, ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರ ವಿರುದ್ಧ ಆರೋಪ ಕೇಳಿಬಂದಿತ್ತು.

Read More

ಜೋಹಾನ್ಸ್‌ಬರ್ಗ್‌: ಅರ್ಷ್‌ದೀಪ್‌ ಸಿಂಗ್‌ (Arshdeep Singh) ಮತ್ತು ಅವೇಶ್​ ಖಾನ್​ ಅವರ ಘಾತಕ ಬೌಲಿಂಗ್​ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾ ತಂಡ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಹೀನಾಯ ಸೋಲಿಗೆ ತುತ್ತಾಗಿದೆ. ಯುವ ಆರಂಭಿಕ ಸಾಯಿ ಸುದರ್ಶನ್‌ ಹಾಗೂ ಶ್ರೇಯಸ್‌ ಅಯ್ಯರ್‌ (Shreyas Iyer) ಅರ್ಧಶತಕಗಳ ಬ್ಯಾಟಿಂಗ್‌ ನೆರವಿನಿಂದ ಭಾರತ (Team India) 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-0 ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಸ್ಟೇಡಿಯಂನಲ್ಲಿ ಸೂಪರ್‌ ಸಂಡೇ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ದಕ್ಷಿಣ ಆಫ್ರಿಕಾ (South Africa) ತಂಡ 27.3 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್‌ ಆಯಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಭಾರತ 16.4 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 117 ರನ್‌ ಗಳಿಸಿ ಜಯ ಸಾಧಿಸಿತು. ಭಾರತದ ಪರ ತಾಳ್ಮೆಯ ಆಟವಾಡಿದ ಯುವ ಆರಂಭಿಕ ಸಾಯಿ ಸುದರ್ಶನ್‌ (Sai Sudharsan) ಹಾಗೂ…

Read More

ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ (Leelavati) ಅವರ ನಿಧನಾ ನಂತರ ಮನೆಯಲ್ಲಿ 11ನೇ ದಿನದ ಸ್ಮರಣೆ ಕಾರ್ಯ ನಡೆಯುತ್ತಿದೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ 9Soladevanahalli) ತೋಟದ ಮನೆಯಲ್ಲಿ ಮಗ ವಿನೋದ್ ರಾಜ್ (Vinod Raj) ಮತ್ತು ಕುಟುಂಬ 11ನೇ ದಿನದ ಕಾರ್ಯವನ್ನು ನೆರವೇರಿಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಪೂಜೆ ಕಾರ್ಯಗಳು ಶುರುವಾಗಿದ್ದು, ಸಿನಿಮಾ ರಂಗದ ಗಣ್ಯರು ಆಗಮಿಸುವ ಸಾಧ್ಯತೆಯಿದೆ. ಕನ್ನಡ ಸಿನಿಮಾ ರಂಗದ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟಿದ್ದ ಲೀಲಾವತಿ (Leelavati) ಅವರು, ಆನಂತರ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ನಟಿಸಿದವರು. ತಮಿಳು, ತೆಲುಗು, ಕನ್ನಡ, ಮಲೆಯಾಳಂ ಸೇರಿದಂತೆ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. 1949ರಲ್ಲಿ ತೆರೆ ಕಂಡ ಶಂಕರ್ ಸಿಂಗ್ ಅವರ ನಾಗಕನ್ನಿಕ ಇವರ ಮೊದಲ ಚಿತ್ರ. ಇದಕ್ಕೂ ಮೊದಲು ಲೀಲಾವತಿ ಅವರು ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಕಯಾದುವಿನ ಸಖಿ, ಭಕ್ತ ಪ್ರಹ್ಲಾದ ಸೇರಿದಂತೆ ಸಾಕಷ್ಟು ನಾಟಕಗಳಲ್ಲಿ ಇವರು ಅಭಿನಯಿಸಿದ್ದಾರೆ. ಸಿನಿಮಾ ರಂಗಕ್ಕೆ ಬಂದ ನಂತರ,…

Read More

ಇಸ್ಲಾಮಾಬಾದ್: ತಲೆಮರೆಸಿಕೊಂಡಿದ್ದ ಮುಂಬೈ ಸರಣಿ ಸ್ಫೋಟದ ರೂವಾರಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ (Karachi Hospital) ದಾಖಲಾಗಿರುವುದಾಗಿ ಮೂಲಗಳು ತಿಳಿಸಿವೆ. ಸದ್ಯ ಪ್ರಾಥಮಿಕ ಮೂಲಗಳ ಮಾಹಿತಿಯಿಂದ ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಇನ್ನೂ ಸ್ಪಷ್ಟವಾಗಿಲ್ಲ. ಕಳೆದ ಎರಡು ದಿನಗಳಿಂದಲೂ ಇಬ್ರಾಹಿಂ ಆಸ್ಪತ್ರೆಯಲ್ಲಿರುವುದಾಗಿ ತಿಳಿದುಬಂದಿದೆ. ದಾವೂದ್‌ ಇಬ್ರಾಹಿಂ ದಾಖಲಾಗಿರುವ ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಆಸ್ಪತ್ರೆಯ ಉನ್ನತ ಅಧಿಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಮಾತ್ರವೇ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಇಬ್ರಾಹಿಂ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ಮುಂಬೈ ಪೊಲೀಸರು (Mumbai Police) ಪಾತಕಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಯು ಪ್ರಯತ್ನಿಸುತ್ತಿದ್ದಾರೆ. https://ainlivenews.com/aishwarya-rai-left-her-husbands-house-mother-in-law-rift-in-big-bs-house/ ಈ ವರ್ಷದ ಜನವರಿ ತಿಂಗಳಲ್ಲಿ ದಾವೂದ್‌ ಸಹೋದರಿ ಹಸೀನಾ ಪಾರ್ಕರ್‌ನ ಮಗ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹೇಳಿಕೆ ನೀಡಿದ್ದು, ಇಬ್ರಾಹಿಂ 2ನೇ ಮದುವೆಯಾಗಿ ಕರಾಚಿಯಲ್ಲೇ ನೆಲೆಸಿರುವುದಾಗಿ ತಿಳಿಸಿದ್ದ. ಭೂಗತ…

Read More

ಪುಣೆ:- ನನಗಿನ್ನೂ ವಯಸ್ಸಾಗಿಲ್ಲ ಇನ್ನೂ ಶಕ್ತಿ ಇದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹೇಳಿದ್ದಾರೆ. ಎತ್ತಿನ ಬಂಡಿ ಓಟದ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನನಗೆ ನಿಮ್ಮ ಬಗ್ಗೆ ಒಂದು ದೂರು ಇದೆ. ನನಗೆ 83 ವರ್ಷವಾಗಿದೆ ಎಂದು ನೀವು ನಿಮ್ಮ ಭಾಷಣಗಳಲ್ಲಿ ಹೇಳುತ್ತೀರಿ. ನನಗೆ 84 ವರ್ಷವಾಗಿದೆ. ನೀವು ಗಮನಿಸಿದ್ದು ಏನು? ನನಗೆ ವಯಸ್ಸಾಗಿಲ್ಲ. ನನಗೆ ಕೆಲವರನ್ನು ಸರಿಪಡಿಸುವ ಶಕ್ತಿ ಇದೆ. ತಲೆಕೆಡಿಸಿಕೊಳ್ಳಬೇಡಿ’ ಎಂದು ಹೇಳಿದ್ದಾರೆ. ಶರದ್‌ ಪವಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಎತ್ತಿನ ಬಂಡಿ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ‘ಅಧಿಕಾರದಲ್ಲಿ ಇರುವವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಈರುಳ್ಳಿ ಸೇರಿ ಇನ್ನಿತರ ಕೃಷಿ ಉತ್ಪನ್ನಗಳನ್ನು ರಫ್ತು ಮಾಡುವುದನ್ನು ನಿಷೇಧಿಸಿದ್ದೇ ಇದಕ್ಕೆ ಉದಾಹರಣೆ. ರೈತರಿಗೆ ಸಹಾಯ ಮಾಡುವ ಬದಲು. ಮತ್ತಷ್ಟು ಅಡೆತಡೆಗಳನ್ನು ಸೃಷ್ಠಿಸುತ್ತಿದೆ’ ಎಂದು ಪವಾರ್ ದೂರಿದರು.

Read More

ಗದಗ: ಭಾರತ ಕೇವಲ ಹಿಂದೂಗಳ ದೇಶ ಅಲ್ಲ. ಇಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ದಲಿತರು ಹೀಗೆ ಅನೇಕ ಜಾತಿ ಜನಾಂಗದವರಿದ್ದು, ಇದು ಬಹುತ್ವದ ದೇಶ. ಭಾರತ ಹಿಂದೂ ರಾಷ್ಟ್ರ ಎನ್ನುವುದು ಬಿಜೆಪಿಯ ಸ್ಲೋಗನ್ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇದೇವೇಳೆ ಬಿಜೆಪಿ, ಸಂಘ ಪರಿವಾರ, ಎಬಿವಿಪಿ, ಬಜರಂಗದಳ, ಯುವ ಮೋರ್ಚಾ ಎಲ್ಲವೂ ಸುಳ್ಳಿನ ಕಾರ್ಖಾನೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1950ರಲ್ಲಿ ಜನಸಂಘ ಸ್ಥಾಪನೆಯಾಯಿತು. ಅಂದಿನಿಂದ ಇಂದಿನ ವರೆಗೆ ಭಾರತ ಹಿಂದೂ ರಾಷ್ಟ್ರ ಮಾಡುತ್ತೇವೆ ಎನ್ನುತ್ತಲೇ ಬಂದಿದ್ದಾರೆ. ಹಿಂದೂ ರಾಷ್ಟ್ರ ಬಿಜೆಪಿಯ ಸ್ಲೋಗನ್ ಅಷ್ಟೇ, ಭಾರತ ಕೇವಲ ಹಿಂದೂ ರಾಷ್ಟç ಆಗಲು ಸಾಧ್ಯವಿಲ್ಲ ಎಂದರು. https://ainlivenews.com/yatnal-is-like-a-mad-dog-mp-renukacharya-lashes-out/ ಎಬಿವಿಪಿ, ಭಜರಂಗದಳ ಇವೆಲ್ಲಾ ಬಿಜೆಪಿ ಅಂಗ ಸಂಸ್ಥೆಗಳು. ಸುಳ್ಳು ಹೇಳುವುದೇ ಇವರ ಕೆಲಸ. ಬಿಜೆಪಿ ಎಂದರೆ ಸುಳ್ಳಿನ ಕಾರ್ಖಾನೆ. ನಮ್ಮ ಸರಕಾರ ನುಡಿದಂತೆ ನಡೆದಿದೆ. 4 ಗ್ಯಾರಂಟಿಗಳನ್ನು ಈಗಾಗಲೇ ಈಡೇರಿಸಲಾಗಿದೆ. 5 ಗ್ಯಾರಂಟಿಯನ್ನು 2024ರ ಜನವರಿಯಲ್ಲಿ ಜಾರಿಗೊಳಿಸಲಾಗುವುದು. ಸರಕಾರದ ಬಳಿ ಅನುದಾನದ ಕೊರತೆ ಇಲ್ಲ…

Read More

ಬೆಂಗಳೂರು:- ಹೊಸ ವರ್ಷಾಚರಣೆಗೆ ಕೌಂಟ್‌ ಡೌನ್‌ ಶುರುವಾಗಿದ್ದು, ಮುನ್ನೆಚ್ಚರಿಕೆಗಾಗಿ ಬೆಂಗಳೂರು ನಗರ ಪೊಲೀಸರು ಅಲರ್ಟ್​ ಆಗಿದ್ದಾರೆ. ಬೆಂಗಳೂರಲ್ಲಿ ಪ್ರತಿ ಬಾರಿ ಹೊಸ ಸಂಭ್ರ,ಮದಲ್ಲಿದ್ದ ಸಿಟಿ ಜನರು ನಗರದ ಬ್ರಿಗೇಡ್ ರೋಡ್‌, ಎಂಜಿ ರಸ್ತೆಯಲ್ಲಿ ಸೇರಿಕೊಂಡು ಎಂಜಾಯ್‌ ಮಾಡುತ್ತಾರೆ ಈ ನಡುವೆ ಗಲಭೆಗಳು ನಡೆಯುತ್ತಲೇ ಇರುತ್ತದೆ. ಈ ನಿಟ್ಟಿನಲ್ಲಿ ಅಹಿತಕರ ಘಟನೆ ನಡೆಯದಂತೆ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಅವರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಗೈಡ್ ಲೈನ್ಸ್ ನಲ್ಲಿ ಏನಿದೆ?* -ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು -ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ -ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್ -ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ -ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ -ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ -ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ -ಬಾರ್, ಪಬ್ ಗಳಿಗೂ…

Read More

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಪ್ರಚೋದಾನಾಕಾರಿ ಭಾಷಣವನ್ನು ಮಾಡಿದ್ದಾರೆ. ನಮ್ಮ ಸಮಾಜದ ನಾಯಕರು, ಮಠಾಧೀಪತಿಗಳ ಕೈಯಲ್ಲಿ ಆಯುಧ ಕೊಡಬೇಕು. ಆಯುಧ ಕೊಟ್ಟು ಮಠ ಮಾನ್ಯಗಳು, ಗಣ್ಯರ ರಕ್ಷಣೆ ಮಾಡಬೇಕು ಎಂದು ಪುರಾಣದ ಮಾತು ಉಲ್ಲೇಖಿಸಿ ಆಯುಧ ಕೊಡಬೇಕು ಎಂದು ಸ್ವಾಮೀಜಿ ಹೇಳಿದ್ದು, ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ದೇವಿ ಕಡೆ ಸ್ವತಂತ್ರ ಆಯುಧ ಇರಲಿಲ್ಲ. ಎಲ್ಲರೂ ಒಂದು ಆಯುಧ ಕೊಟ್ಟಿರುವ ಕಾರಣಕ್ಕೆ ದುಷ್ಟರ ಸಂಹಾರ ಮಾಡಿದಳು. ಇದನ್ನು ಹೇಳೋಕೆ ಕಾರಣ, ನಮ್ಮ ನಾಯಕರುಗಳಿಗೆ ಒಬ್ಬೊಬ್ಬರು ಆಯುಧ ಕೊಡಬೇಕು. ಸಮಾಜದಲ್ಲಿ ಬಲಿಷ್ಠ ಆಗುವ ವ್ಯಕ್ತಿಗಳಿಗೆ ತೊಂದರೆ ಕೊಡುವ ಕೆಲಸ ಈ ನಾಡಿನಲ್ಲಿದೆ. ಮಠಾಧಿಪತಿಗಳಿಗೂ ಇದು ತಪ್ಪಿಲ್ಲ. ಮಠಾಧಿಪತಿಗಳನ್ನು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ ಎಂದಿದ್ದಾರೆ. ನಮ್ಮ ಮಠಗಳನ್ನ ನಾಶ ಮಾಡುವುದರ ಜೊತೆಗೆ ಎರಡನೇ ಹಂತದ ನಾಯಕರನ್ನು ರಾಜಕೀಯವಾಗಿ ನಾಶ ಮಾಡುವ ವ್ಯವಸ್ಥೆ ಇದೆ. ಹುಟ್ಟುಹಬ್ಬದಲ್ಲಿ ಇದನ್ನು ಹೇಳಬೇಕೋ ಬೇಡವೋ, ಆದರೆ ನಮ್ಮ ಭಾವನೆ ಹೇಳುತ್ತೇನೆ. ಯಾರ ಅಧಃಪತನವನ್ನೂ ನಾವು…

Read More

ದಾವಣಗೆರೆ: ಸಾಕಿದ ನಾಯಿ ಎಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಯತ್ನಾಳರದ್ದು ಯಾವಾಗಲೂ ಅಶ್ಲೀಲ ಪದ ಬಳಸುವುದೇ ಚಾಳಿ. ಅಂತವರ ಬಗ್ಗೆ ಮಾತಾಡೋಕೆ ನನಗೆ ಅಸಹ್ಯ ಅನಿಸುತ್ತೆ, ನಾಚಿಕೆ ಆಗುತ್ತೆ ಎಂದು ತಿರುಗೇಟನ್ನ ನೀಡಿದ್ದಾರೆ. ದಾವಣಗೆರೆಯಲ್ಲಿ ಈ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ, ಶಾಸಕ ಯತ್ನಾಳ್ ವಿರುದ್ದ ಹರಿಹಾಯ್ದರು. ಆನೆ ಬೀದಿಗೆ ಇಳಿದಾಗ ಹುಚ್ಚು ನಾಯಿ ಬೊಗಳುತ್ತವೆ. ಅವುಗಳು ಬೊಗಳಿದರೆ ಆನೆಯ ತೂಕವೇನು ಕಡಿಮೆಯಾಗಲ್ಲ. ಹೀಗೆ ಯತ್ನಾಳ್ ಕೂಡ ಮಾತಾನಾಡುತ್ತಾರೆ. ಅವರು ಮಾತಾಡುವುದರಿಂದ ಯಡಿಯೂರಪ್ಪನ ತೂಕವೇನು ಕಡಿಮೆಯಾಗಲ್ಲ. ನಾಯಿಗೆ ಇರುವ ನಿಯತ್ತು ಕೂಡ ಆ ಮನುಷ್ಯನಿಗೆ ಇಲ್ಲ. https://ainlivenews.com/yatnal-is-like-a-mad-dog-mp-renukacharya-lashes-out/ ನಿಮ್ಮನ್ನ ಬಿಜೆಪಿಗೆ ಕರೆ ತಂದದ್ದು ಯಡಿಯೂರಪ್ಪ, ಕೇಂದ್ರ ಮಂತ್ರಿ ಮಾಡಿದ್ದು ಯಡಿಯೂರಪ್ಪ. ಈತ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಬೆಳಕು ಚಲ್ಲಬೇಕಿತ್ತು. ಅದನ್ನು ಬಿಟ್ಟು ಕೇವಲ ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಒಳಗು ಹೊರಗು ಅದನ್ನೇ…

Read More

ಐಪಿಎಲ್​ 2024ರ ಆಟಗಾರ ಮಿನಿ ಹರಾಜಿನ ಮೇಲೆ ಅಭಿಮಾನಿಗಳ ಚಿತ್ತ ನೆಟ್ಟಿದೆ. 10 ತಂಡಗಳ ಅಭಿಮಾನಿಗಳು ತಮ್ಮ ತಂಡಕ್ಕೆ ಯಾವ ಆಟಗಾರು ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಕುತೂಹಲದಲ್ಲಿದ್ದಾರೆ. ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಭಾರತದ ವಿಶ್ವಕಪ್​ ಟ್ರೋಫಿ ಕನಸನ್ನು ಭಗ್ನ ಗೊಳಿಸಿದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರಿಗೆ ಈ ಬಾರಿಯ ಹರಾಜಿನಲ್ಲಿ ಭಾರಿ ಮೊತ್ತ ಸಿಗುವ ನಿರೀಕ್ಷೆ ಇದೆ. ಈಗಾಗಕೇ ಅವರನ್ನು ಆಕ್ಷನ್​ನಲ್ಲಿ 20 ಕೋಟಿ ರೂ. ನೀಡಿಯಾದರೂ ಖರೀದಿಸಲು ಕೆಲವು ಫ್ರಾಂಚೈಸಿ ಮುಂದಾಗಿದೆ ಎಂದು ವರದಿಯಾಗಿದೆ 50 ಲಕ್ಷ ಮೂಲಬೆಲೆ ಹೊಂದಿರುವ ನ್ಯೂಜಿಲ್ಯಾಂಡ್​ನ ಯುವ ಆಟಗಾರ ರಚಿನ್​ ರವೀಂದ್ರ ಅವರಿಗೂ ಭಾರಿ ಮೊತ್ತ ಸಿಗುವ ಸಾಧ್ಯತೆ ಇದೆ. ಈ ಬಾರಿಯ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಚೊಚ್ಚಲ ಬಾರಿ ಕಣಕ್ಕಿಳಿದರೂ, ಶ್ರೇಷ್ಠ ಬ್ಯಾಟಿಂಗ್​ ಪ್ರದರ್ಶನ ತೋರುವ ಮೂಲಕ ಟೂರ್ನಿಯಲ್ಲಿ ಅತ್ಯಧಿಕ ರನ್​ ಸಾಧಕರ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದಿದ್ದರು. ವಿಶ್ವಕಪ್​ನಲ್ಲಿ ಅವರು 578 ರನ್​ ಬಾರಿಸಿದ್ದರು.…

Read More