ದಾವಣಗೆರೆ: ಯತ್ನಾಳ್ ಹುಚ್ಚು ನಾಯಿ ಇದ್ದಂತೆ ಎಂದು ಸ್ವಪಕ್ಷದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧವೇ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಸರ್ವಜ್ಞರ ವಚನ ಹೇಳುವ ಮೂಲಕ ಯತ್ನಾಳ್ ವಿರುದ್ಧ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಆನೆ ಬೀದಿಗೆ ಇಳಿದಾಗ ಹುಚ್ಚು ನಾಯಿ ಬೊಗಳುತ್ತೆ. ಅದಕ್ಕೆ ಆನೆಗೆ ಇರುವ ಗೌರವ ಕಡಿಮೆಯಾಗುತ್ತಾ. ನಾಯಿಗೆ ಇರುವ ನಿಯತ್ತು ಆ ಮನುಷ್ಯನಿಗೆ ಇಲ್ಲ. ಜೆಡಿಎಸ್‌ಗೆ ಹೋದವರನ್ನು ಕರೆತಂದಿದ್ದು ಯಡಿಯೂರಪ್ಪ. ಆದರೆ ಆ ಮನುಷ್ಯನಿಗೆ ನಿಯತ್ತು ಅನ್ನೋದೇ ಇಲ್ಲ ಎಂದು ಗರಂ ಆದರು. ವಿಜಯೇಂದ್ರ, ಯಡಿಯೂರಪ್ಪ ಅವರನ್ನು ಟೀಕೆ ಮಾಡಿದ್ರೆ, ಮೋದಿ ಮತ್ತು ಕೇಂದ್ರ ವರಿಷ್ಠರನ್ನು ಟೀಕೆ ಮಾಡಿದಂತೆ. ಯಡಿಯೂರಪ್ಪ ಆನೆ ಇದ್ದಂತೆ, ಅವರ ಬಗ್ಗೆ ಮಾತನಾಡುವವರು ಹುಚ್ಚು ನಾಯಿ. ಹುಚ್ಚು ನಾಯಿ ಬಗ್ಗೆ ಮಾತನಾಡುವುದು ಕೂಡ ವೇಸ್ಟ್. ಆ ಹುಚ್ಚು ನಾಯಿ ಬಗ್ಗೆ ಮಾತನಾಡಬಾರದು ಎಂದುಕೊಂಡಿದ್ದೇನೆ ಎಂದು ಟೀಕಾಪ್ರಹಾರ ನಡೆಸಿದರು.
Author: AIN Author
ಈ ವಾರ ದೊಡ್ಮನೆಯ ಪಯಣ ಮುಗಿಸೋರು ಯಾರು ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಅಚ್ಚರಿಯನ್ನುವಂತೆ ಪವಿ ಪೂವಪ್ಪ ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಬಲ್ಲ ಮೂಲಗಳ ಪ್ರಕಾರ ಪವಿ (Pavi Poovappa) ಈ ವಾರ ಬಿಗ್ ಬಾಸ್ (Bigg Boss Kannada) ಪಯಣ ಮುಗಿಸಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ದೊಡ್ಮನೆ ಪ್ರವೇಶ ಮಾಡಿದ್ದ ಪವಿ, ಇಷ್ಟು ಬೇಗ ಆಚೆ ಬರುತ್ತಾರೆ ಎಂದು ಯಾರು ಅಂದುಕೊಂಡಿರಲಿಲ್ಲ. ಪವಿ ಪೂವಪ್ಪ ಮತ್ತು ಅವಿನಾಶ್ ಶೆಟ್ಟಿ ಇಬ್ಬರೂ ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದರು. ಆನೆಯನ್ನು ಪಳಗಿಸಲು ಅವಿನಾಶ್ ಬಂದಿದ್ದಾರೆ ಎಂದೇ ಹೇಳಲಾಗಿತ್ತು. ಪವಿ ಪೂವಪ್ಪ ಮನೆಯ ಮಹಿಳಾ ಸದಸ್ಯರಿಗೆ ಮತ್ತಷ್ಟು ಉತ್ತೇಜ ನೀಡಲಿದ್ದಾರೆ ಎನ್ನುವ ನಂಬಿಕೆ ಇತ್ತು. ಇವೆರಡೂ ಸುಳ್ಳಾಗಿವೆ. ಅವಿನಾಶ್ ತಾವು ಬಿಗ್ ಬಾಸ್ ಮನೆಗೆ ಯಾಕೆ ಬಂದಿದ್ದು ಎನ್ನುವುದನ್ನೇ ಮರೆತಿದ್ದಾರೆ. ಅತೀ ವೀಕ್ ಕಂಟೆಸ್ಟೆಂಟ್ ಆಗಿ ಬದಲಾಗಿದ್ದಾರೆ. ಪವಿ ಕಡಿಮೆ ಸಮಯದಲ್ಲೇ…
ನವದೆಹಲಿ: ಸಂಸತ್ತಿನ ಭದ್ರತಾ ಲೋಪಕ್ಕೆ (Parliament Security Breach) ಪ್ರಧಾನಿ ನರೇಂದ್ರ ಮೋದಿಯವರ (Narendra Modi) ನೀತಿಗಳೇ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಆರೋಪಿಸಿದ್ದಾರೆ. ಪ್ರಧಾನಿ ಮೋದಿಯವರ ನೀತಿಗಳಿಂದ ದೇಶದ ನಾಗರಿಕರಿಗೆ ಉದ್ಯೋಗ ಸಿಗುತ್ತಿಲ್ಲ. ನಿರುದ್ಯೋಗವೇ ಭದ್ರತಾ ಲೋಪ ಸಂಭವಿಸಲು ಕಾರಣ ಎಂದು ದೂರಿದ್ದಾರೆ. ಭಾರತೀಯರು ಪ್ರಸ್ತುತ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ನಿರುದ್ಯೋಗ. ಭದ್ರತಾ ಉಲ್ಲಂಘನೆಯು ನಿಜವಾಗಿಯೂ ಆಗಿದೆ. ಆದರೆ ಇದು ಏಕೆ ಆಯಿತು? ಅದಕ್ಕೆ ಮುಖ್ಯ ಕಾರಣ ನಿರುದ್ಯೋಗ. ಮೋದಿ ಅವರ ನೀತಿಗಳಿಂದಾಗಿ ಭಾರತದ ಜನರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ಹೇಳಿದ್ದಾರೆ. ಪ್ರಧಾನಿಯವರ ನೀತಿಗಳಿಂದಾಗಿ ನಿರುದ್ಯೋಗ ಮತ್ತು ಹಣದುಬ್ಬರ ಸಮಸ್ಯೆ ತಲೆದೋರಿದೆ. https://ainlivenews.com/what-did-dk-shivakumar-say-about-pratap-singh-being-trapped/ ಸಂಸತ್ತಿನ ಭದ್ರತಾ ಉಲ್ಲಂಘನೆಗೆ ಇವೇ ಮುಖ್ಯ ಕಾರಣ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಭದ್ರತಾ ಲೋಪ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಅವರು ಮಾಧ್ಯಮಗಳೊಂದಿಗೆ ಮಾತ್ರ ಮಾತನಾಡುತ್ತಾರೆ.…
ನವದೆಹಲಿ: ಸಂಸದ ಸಂಜಯ್ ಸಿಂಗ್ (Sanjay Singh) ಬದಲಿಗೆ ರಾಘವ್ ಛಡ್ಡಾ (Raghav Chadha) ಅವರನ್ನು ರಾಜ್ಯಸಭೆಯ ಪಕ್ಷದ ನಾಯಕನಾಗಿ ಆಯ್ಕೆ ಮಾಡಿದೆ ಎಂದು ಆಮ್ ಅದ್ಮಿ ಪಕ್ಷ ತಿಳಿಸಿದೆ. ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆದಿರುವ ಎಎಪಿ ಪಕ್ಷದ ನಾಯಕತ್ವವು ಸಂಜಯ್ ಸಿಂಗ್ ಅವರ ಅನುಪಸ್ಥಿತಿಯಲ್ಲಿ ರಾಘವ್ ಚಡ್ಡಾ ಅವರು ಇನ್ನು ಮುಂದೆ ಮೇಲ್ಮನೆಯಲ್ಲಿ ಪಕ್ಷದ ನಾಯಕರಾಗಿರುತ್ತಾರೆ ಎಂದು ಉಲ್ಲೇಖಿಸಿದೆ. ಸಂಜಯ್ ಸಿಂಗ್ ಹೊಸ ಮದ್ಯ ನೀತಿ ಪ್ರಕರಣದಲ್ಲಿ ಇಡಿ ಬಂಧನಕ್ಕೊಳಕ್ಕಾಗಿ ಸದ್ಯ ನ್ಯಾಯಂಗ ಬಂಧನದಲ್ಲಿದ್ದಾರೆ. ಅವರ ಜಾಮೀನು ಅರ್ಜಿಗಳು ವಜಾಗೊಂಡಿರುವ ಹಿನ್ನೆಲೆ ರಾಜ್ಯಸಭೆಯಲ್ಲಿ ಕಲಾಪಗಳಿಗೆ ಪೂರಕವಾಗುವಂತೆ ಹೊಸ ನಾಯಕತ್ವವನ್ನು ಆಯ್ಕೆ ಮಾಡಲಾಗಿದೆ. ಚಡ್ಡಾ ಅವರನ್ನು ಅದರ ಫ್ಲೋರ್ ಲೀಡರ್ ಆಗಿ ನೇಮಿಸುವ ಕುರಿತು ಎಎಪಿಯಿಂದ (AAP) ಪತ್ರವನ್ನು ಸ್ವೀಕರಿಸಲಾಗಿದೆ ಎಂದು ರಾಜ್ಯಸಭಾ ಸಚಿವಾಲಯದ ಮೂಲಗಳು ಖಚಿತಪಡಿಸಿವೆ. https://ainlivenews.com/what-did-dk-shivakumar-say-about-pratap-singh-being-trapped/ ಪತ್ರವು ಅನುಷ್ಠಾನಕ್ಕಾಗಿ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಬಳಿ ಇದೆ ಎಂದು ಹೇಳಲಾಗಿದೆ. ರಾಘವ್ ಚಡ್ಡಾ ಅವರು ರಾಜ್ಯಸಭೆಯ ಅತ್ಯಂತ ಕಿರಿಯ ಸದಸ್ಯರಲ್ಲಿ ಒಬ್ಬರಾಗಿದ್ದಾರೆ.…
ಬೆಂಗಳೂರು: ಗೌರವಾನ್ವಿತ ಮಾಜಿ ಶಾಸಕರಾದ ಸಿಟಿ ರವಿ ಅವರೇ, ನೀವು ಮತ್ತು ನಿಮ್ಮ ಪಕ್ಷ ಇಂಥಾ ಅಗ್ಗದ ಚೇಷ್ಠೆಗಳನ್ನು ಮಾಡಿದ್ದರ ಫಲವೇ ಇಂದು ಜನ ನಿಮ್ಮನ್ನು ಮನೆಯಲ್ಲಿ ಮತ್ತು ಪಕ್ಷವನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರು ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯನವರು, ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪರದಾಡಬೇಕಾದ ದು:ಸ್ಥಿತಿಯಲ್ಲಿ ನಿಮ್ಮ ಪಕ್ಷ ಇದೆ. ಆದರೂ ನಿಮಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ ಎಂದು ಹೇಳಿದರು. https://twitter.com/siddaramaiah/status/1736322324486578259?t=ohwcEI5U4JLqLKBb7Vfh2Q&s=19 ನಿಮ್ಮ ಗಮನಕ್ಕಾಗಿ ಈ ಪೂರ್ತಿ ವೀಡಿಯೋ. ನಾವು ನುಡಿದಂತೆ ನಡೆಯುವವರು, ಹಿಂದೆ 2013 – 18 ರ ಐದು ವರ್ಷಗಳ ಅವಧಿಯಲ್ಲಿ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು, ಇದರ ಜೊತೆಗೆ ಸಾಲ ಮನ್ನಾ, ಇಂದಿರಾ ಕ್ಯಾಂಟೀನ್ ಸೇರಿದಂತೆ 30ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಭರವಸೆ ನೀಡದ ಹೊರತಾಗಿಯೂ ಜಾರಿಗೆ ತಂದು ಬದ್ಧತೆ ಪ್ರಸರ್ಶಿಸಿದ್ದೆವು. 2018ರಲ್ಲಿ ಜನತೆಗೆ ನೀಡಿದ್ದ ಶೇ.90…
ಧಾರವಾಡ: ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಕೆಲ ವಿಕಲಚೇತ ನರಿಗೆ ಸಾಂಕೇತಿಕವಾಗಿ ತ್ರಿಚಕ್ರ ವಾಹನಗಳನ್ನು ವಿತರಿಸಿದ್ದ ಸಿಎಂ ಸಿದ್ದರಾಮಯ್ಯ, ನಾವು ಅಂಗವಿಕಲರು ಎಂದು ಕಿನ್ನತೆಗೆ ಒಳಗಾಗದೇ ಧೈರ್ಯದಿಂದ ಜೀವನ ನಡೆಸಬೇಕು ಎಂದು ಧೈರ್ಯ ಹೇಳಿದರು. https://ainlivenews.com/what-did-dk-shivakumar-say-about-pratap-singh-being-trapped/ ಇಡೀ ದೇಶದಲ್ಲಿ ಸಂಪತ್ತನ್ನು ಉತ್ಪಾದನೆ ಮಾಡುವವರು ಕಾಯಕ ಜೀವಿಗಳು. ಅದನ್ನೇ ಬಸವಾದಿ ಶರಣರು ಕಾಯಕ ಮತ್ತು ದಾಸೋಹ ಎಂದಿದ್ದರು. ಯಾರು ಉತ್ಪಾದನಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೋ ಅವರೆಲ್ಲ ಕಾಯಕ ಯೋಗಿಗಳು. ಇದನ್ನು ಪ್ರೊಡಕ್ಷನ್ ಮತ್ತು ಡಿಸ್ಟ್ರಿಬ್ಯುಷನ್ ಎನ್ನುತ್ತೇವೆ. ಸಮಾಜದಲ್ಲಿ ಶೇ.90 ರಷ್ಟು ಸಂಪತ್ತು ಕೇವಲ ಶೇ.10 ಜನರಲ್ಲಿ ಕೇಂದ್ರೀಕೃತವಾಗಿದೆ. ಸಮಾಜದಲ್ಲಿ ಐತಿಹಾಸಿಕ ಕಾರಣಗಳಿಂದ ಅಸಮಾನತೆ ಇದೆ. ಈ ಅಸಮಾನತೆ ಹೋಗಲಾಡಿಸುವುದನ್ನು ಅಂಬೇಡ್ಕರ್ ಒತ್ತಿ ಹೇಳಿದ್ದರು ಎಂದರು.
ಗಾಂಧಿನಗರ: ಅಮೆರಿಕದ ಪೆಂಟಗನ್ ಮೀರಿಸುವ ಹೊಸ ಕಚೇರಿ ಸಂಕೀರ್ಣವು ಭಾರತದಲ್ಲಿ ತಲೆ ಎತ್ತಿದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟನೆ ನೆರವೇರಿಸಿದ್ದಾರೆ. ವಿಶ್ವದ ಅತಿದೊಡ್ಡ ಕಾರ್ಪೊರೇಟ್ ಕಚೇರಿ ಕೇಂದ್ರವಾದ `ಸೂರತ್ ಡೈಮಂಡ್ ಬೋರ್ಸ್’ (Surat Diamond Bourse) ಅನ್ನು ಮೋದಿ ಅವರು ಇಂದು ಉದ್ಘಾಟಿಸಿ ಶುಭಹಾರೈಸಿದ್ದಾರೆ. ಈ ಮೂಲಕ ಗುಜರಾತ್‌ನ (Gujarat) ಸೂರತ್ ನಗರವು ವಜ್ರದ ರಾಜಧಾನಿಯಾಗುವ ಮಹತ್ವಾಕಾಂಕ್ಷೆಯನ್ನು ಖಚಿತಪಡಿಸಿದೆ. ಡೈಮಂಡ್ ಬೋರ್ಸ್ ವಿಶೇಷತೆ ಏನು? ಸೂರತ್ ಡೈಮಂಡ್ ಬೋರ್ಸ್ 35.54 ಎಕರೆ ಭೂಪ್ರದೇಶದಲ್ಲಿ, 3,400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಈ ಮೂಲಕ ಇದು 1943ರಲ್ಲಿ 6.5 ಮಿಲಿಯನ್ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಪೆಂಟಗನ್ ಸಂಕೀರ್ಣ ಕಚೇರಿಯನ್ನೂ ಹಿಂದಿಕ್ಕಿದೆ. 4,500ಕ್ಕೂ ಹೆಚ್ಚು ನೆಟ್‌ವರ್ಕ್ ಕಚೇರಿಗಳನ್ನು ಒಳಗೊಂಡಿದ್ದು ವಿಶ್ವದಲ್ಲೇ ಅತಿದೊಡ್ಡ ಕಚೇರಿ ಸಂಕೀರ್ಣ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಸೂರತ್‌ನ ಡೈಮಂಡ್ ಬೋರ್ಸ್ ಅಂತಾರಾಷ್ಟ್ರೀಯ ವಜ್ರ ಮತ್ತು ಆಭರಣ (Diamond And Jewellery) ವ್ಯಾಪಾರದ ಜಾಗತಿಕ ಕೇಂದ್ರವಾಗಲಿದೆ. 65,000ಕ್ಕೂ ಹೆಚ್ಚು…
ಬಾಲಿವುಡ್ ನಟ ದೀಪಿಕಾ ಪಡುಕೋಣೆ (Deepika Padukone) ನಿನ್ನೆ ರಾತ್ರಿಯೇ ತಿರುಪತಿಗೆ (Tirupati) ಬಂದಿಳಿದಿದ್ದಾರೆ. ಸಹೋದರಿ ಅನಿಶಾ ಪಡುಕೋಣೆ (Anisha Padukone) ಜೊತೆ ತಿರುಪತಿಗೆ ಆಗಮಿಸಿರುವ ದೀಪಿಕಾ, ಇಂದು ಬೆಳಗ್ಗೆ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಸಾಮಾನ್ಯರಂತೆಯೇ ಕಾಲ್ನಡಿಗೆಯಲ್ಲಿ ಬಂದ ದೀಪಿಕಾ, ವಿಐಪಿ ಕೌಂಟರ್ ನಲ್ಲಿ ದರ್ಶನ ಪಡೆದಿದ್ದಾರೆ. ದೀಪಿಕಾ ನಟನೆಯ ಫೈಟರ್ ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕಿದೆ. ಜೊತೆಗೆ ಈ ವರ್ಷ ದೀಪಿಕಾ ಅವರಿಗೆ ಅತ್ಯುತ್ತಮ ವರ್ಷವಾಗಿತ್ತಂತೆ. ಈ ಎಲ್ಲ ಕಾರಣವನ್ನಿಟ್ಟಿಕೊಂಡು ಸಹೋದರಿ ಜೊತೆ ದೀಪಿಕಾ ತಿರುಪತಿಗೆ ಆಗಮಿಸಿದ್ದರು ಎಂದು ಹೇಳಲಾಗುತ್ತಿದೆ. ನಿನ್ನ ರಾತ್ರಿ ತಿರುಪತಿಯಲ್ಲಿ ವಾಸ್ತವ್ಯ ಹೂಡಿದ್ದವರು. ಇಂದು ಬೆಳಗ್ಗೆಯೇ ಸಹೋದರಿ ಜೊತೆ ದರ್ಶನಕ್ಕೆ ಆಗಮಿಸಿದ್ದರು. ಕೆಲ ಹೊತ್ತು ವೆಂಕಟೇಶ್ವರನ ಸನ್ನಿಧಾನದಲ್ಲಿದ್ದು, ನಂತರ ಅಭಿಮಾನಿಗಳತ್ತ ಕೈ ಬಿಸಿ ಅಲ್ಲಿಂದ ಹೊರಟಿದ್ದಾರೆ.
ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹ್ರದಯ ಭಾಗದಲ್ಲಿರುವ ಜೋಡಿ ಕೆರೆ ಅಭಿವೃದ್ಧಿಗೆ 10 ಕೋಟಿ ರೂಪಾಯಿ ವಿಶೇಷ ಅನುದಾನ ಮಂಜೂರು ಮಾಡುವುದಾಗಿ ಪೌರಾಡಳಿತ ಸಚಿವ ರಹೀಮ್ ಖಾನ್ ಹೇಳಿದರು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪುರಸಭೆಯ ಸಭಾ ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಅಥಣಿ ಮತಕ್ಷೇತ್ರದ ಜನರಿಗೆ ಒಬ್ಬ ಒಳ್ಳೆಯ ಶಾಸಕ ಸಿಕ್ಕಿದ್ದಾರೆ. https://ainlivenews.com/what-did-dk-shivakumar-say-about-pratap-singh-being-trapped/ ಲಕ್ಷ್ಮಣ ಸವದಿ ಅವರ ಆಹ್ವಾನದ ಮೆರೆಗೆಅಥಣಿ ಪುರಸಭೆಗೆ ಭೇಟಿ ನೀಡಿದ್ದು ಐತಿಹಾಸಿಕ ಜೋಡಿ ಕೆರೆಗಳ ಅಭಿವೃದ್ಧಿಗೆ 10 ಕೋಟಿ ರೂಪಾಯಿ ವಿಶೇಷ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು. ಇದೆ ಸಂದರ್ಭದಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿ ರಹೀಮ್ ಖಾನ್ ಅವರು ಒಬ್ಬ ಕ್ರಿಯಾಶೀಲ ಸಚಿವರು ಜೋಡಿ ಕೆರೆ ಅಭಿವೃದ್ಧಿಗೆ ಸ್ಥಳದಲ್ಲೇ ಅನುದಾನ ಬಿಡುಗಡೆ ಮಾಡಲು ಇಲಾಖೆಗೆ ಸೂಚನೆ ನೀಡಿದ್ದು ಸಂತಸದ ಸಂಗತಿ ಎಂದರು ಬಳಿಕ ಪುರಸಭೆಯ ಸರ್ವ ಸದಸ್ಯರು ಅಥಣಿ ಪುರಸಭೆಯನ್ನು ನಗರಸಭೆ ಮಾಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರು: ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಪ್ರಸ್ತಾವನೆ ವಿಚಾರ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಟಿಪ್ಪು ಒಬ್ಬ ಮತಾಂಧ, ಮಂಡ್ಯದಲ್ಲಿ ಅವನ ಚರಿತ್ರೆ ಇದೆ. ಕೊಡಗಿನಲ್ಲಿ ಲಕ್ಷಾಂತರ ಹಿಂದೂಗಳ ಮತಾಂತರ ಹಾಗೂ ಹತ್ಯೆ ಮಾಡಿದ್ದ ಚರಿತ್ರೆ ಇದೆ. ಮೇಲುಕೋಟೆಯಲ್ಲಿ ಬ್ರಾಹ್ಮಣರನ್ನ ಕಟ್ಟಾಕಿ ಕತ್ತರಿಸಿ ಹಾಕಿದ್ದು ಇದೆ. ಒತ್ತಾಯ ಮಾಡುತ್ತಿರುವ ಕಾಂಗ್ರೆಸ್ ಶಾಸಕರಿಗೆ ಆಯಾ ಕ್ಷೇತ್ರದ ಜನಬುದ್ದಿ ಕಲಿಸುತ್ತಾರೆ ಎಂದು ಕಿಡಿಕಾರಿದ್ದಾರೆ. ಟಿಪ್ಪು ಸ್ವತಂತ್ರ ಹೋರಾಟಗಾರ ಎಂಬ ಕಾಂಗ್ರೆಸ್ ನಾಯಕರ ಸಮರ್ಥನೆಗೆ ಪ್ರತಿಕ್ರಿಯಿಸಿದ ಅವರು, ಮೈಸೂರು ಆಡಳಿತ ನಡೆಸುತ್ತಿದ್ದವರು ಒಡೆಯರ್ ವಂಶಸ್ಥರು. ಹೈದರಾಲಿ ಚಾಕ್ರಿ, ಕೂಲಿಗೆ ಬಂದವನು. ಒಡೆಯರ್ಗೆ ಮೋಸ ಮಾಡಿ ಸಿಂಹಾಸನ ಏರೋಕೆ ಬಂದಿದ್ರು. ಟಿಪ್ಪುನ ಹೋರಾಟಗಾರ ಅಂತಾರಲ್ಲ ನಾಚಿಕೆ ಆಗಲ್ವ ಅವರಿಗೆ ಎಂದು ಕುಟುಕಿದ್ದಾರೆ. ಪ್ಪು ಸುಲ್ತಾನ್, ಹೈದರಾಲಿ ಡ್ಯಾಂ ಕಟ್ಟಿಸಿದ್ದಾರಾ? ಒಂದು ಕೆರೆ ಕಟ್ಟಿಸಿದ್ದಾರಾ? ಆಸ್ಪತ್ರೆ, ಶಿಕ್ಷಣ ಸಂಸ್ಥೆ ಕಟ್ಟಿಸಿದ್ದಾರಾ? ಎಲ್ಲವನ್ನು ಕಟ್ಟಿದ್ದು ಮುಮ್ಮಡಿ ಕೃಷ್ಣರಾಜ…