ಜೈಪುರ: ಮಹಾರಾಷ್ಟ್ರದ ನಾಗ್ಪುರ ಕಂಪನಿಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 9 ಜನ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಭಾನುವಾರ ಬೆಳಗ್ಗೆ 9:30 ಗಂಟೆ ವೇಳೆಗೆ ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ನಲ್ಲಿ ಸ್ಫೋಟ ಸಂಭವಿಸಿದೆ. ಸ್ಪೋಟದಲ್ಲಿ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು, ಘಟನೆಯಲ್ಲಿ ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ. https://ainlivenews.com/what-did-dk-shivakumar-say-about-pratap-singh-being-trapped/ ಕಲ್ಲಿದ್ದಲು ಸ್ಫೋಟಗೊಳಿಸಲು ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿದೆ. ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್ ಕಂಪನಿಯು ದೇಶದ ರಕ್ಷಣಾ ಇಲಾಖೆಗೆ ಸ್ಫೋಟಕಗಳು ಮತ್ತು ಇತರ ರಕ್ಷಣಾ ಸಾಧನಗಳ ಪೂರೈಕೆಯೊಂದಿಗೆ ವ್ಯವಹರಿಸುತ್ತಿರುವುದಾಗಿ ತಿಳಿದುಬಂದಿದೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕಂಪನಿ ಆವರಣದ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಅಂಬುಲೆನ್ಸ್‌ಗಳೂ ಸ್ಥಳಕ್ಕಾಗಿಮಿಸಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.
Author: AIN Author
ಬೆಂಗಳೂರು: ಬಿಎಂಟಿಸಿಯು ಕೇಂದ್ರ ಸರಕಾರದ ‘ಫೇಮ್-2’ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಖರೀದಿಸುತ್ತಿರುವ ಹವಾನಿಯಂತ್ರಣ ರಹಿತ 921 ವಿದ್ಯುತ್ ಚಾಲಿತ ಬಸ್‌ಗಳ ಪೈಕಿ, ಮೊದಲ ಹಂತದಲ್ಲಿ 100 ಬಸ್‌ಗಳು ಸಂಸ್ಥೆಯ ತೆಕ್ಕೆ ಸೇರುತ್ತಿವೆ. ಈ ಬಸ್‌ಗಳಿಗೆ ಡಿ. 26ರಂದು ಚಾಲನೆ ನೀಡಲಾಗುತ್ತಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು 100 ಎಲೆಕ್ಟ್ರಿಕ್ ಬಸ್‌ಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಉಳಿದ 821 ಬಸ್‌ಗಳು 2024ರ ವರ್ಷಾಂತ್ಯಕ್ಕೆ ಸಂಸ್ಥೆಯನ್ನು ಸೇರಲಿವೆ. ಈ ಎಲ್ಲಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿ12 ವರ್ಷಗಳ ಅವಧಿಗೆ ಪಡೆಯಲಾಗುತ್ತಿದೆ. ಸಂಸ್ಥೆಯು ಈಗಾಗಲೇ 390 ಇವಿ ಬಸ್‌ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ. ಟಾಟಾ ಕಂಪೆನಿಯ 100 ಬಸ್ ಸೇರ್ಪಡೆ ನಂತರ ಆ ಸಂಖ್ಯೆ 490ಕ್ಕೆ ಏರಿಕೆಯಾಗಲಿದೆ.
ಹುಬ್ಬಳ್ಳಿ: ಇದೇ ಡಿಸೆಂಬರ್ 29 ರಂದು ತೆರೆಗೆ ಬರಲು ಸಜ್ಜಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಮಾಲಾಶ್ರೀ ಪುತ್ರಿ ಆರಾಧನಾ ಜೊತೆಯಾಗಿ ನಟಿಸಿರುವ ʻಕಾಟೇರʼ ಚಿತ್ರದ ಟ್ರೈಲರ್ ಹುಬ್ಬಳ್ಳಿಯಲ್ಲಿ ಬಿಡುಗಡೆಯಾಗಿದೆ. ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ರೈಲರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಸಕರಾದ ಕೋನರೆಡ್ಡಿ, ಪ್ರಸಾದ್ ಅಬ್ಬಯ್ಯ ಸಾಥ್ ನೀಡಿದರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹ ಚಿತ್ರ ತಂಡಕ್ಕೆ ಆಲ್ ದ ಬೆಸ್ಟ್ ಹೇಳಿದರು. ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುದೀರ್ ನಿರ್ದೇಶನದ ಕಾಟೇರ ಚಿತ್ರ ಇದೇ ತಿಂಗಳು 29ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ನಟ ದರ್ಶನರ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರ ಭಾರೀ ಹೈಪ್ ಕ್ರಿಯೆಟ್ ಮಾಡಿದೆ. ಬಹಳ ದಿನಗಳ ಬಳಿಕ ಡಿ ಬಾಸ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಸಾಂಗ್ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಈ…
ಬೆಂಗಳೂರು: ರಾಮನಗರದ ಅರಳಿಕರೆದೊಡ್ಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಯಿಂದ ಮೃತಪಟ್ಟಿರುವ ತಿಮ್ಮಪ್ಪ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ, ಅವರ ಮಗಳಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೂಚನೆ ನೀಡಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ತಮ್ಮ ಗೃಹ ಕಚೇರಿಯಿಂದ ಭಾನುವಾರ ದೂರವಾಣಿ ಮೂಲಕ ಅರಣ್ಯಾಧಿಕಾರಿಗಳಿಂದ ಮಾಹಿತಿ ಪಡೆದ ಡಿಸಿಎಂ ಅವರು, “ಗ್ರಾಮಸ್ಥರ ಬೇಡಿಕೆಯಂತೆ ಅಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡಿ. ಅವರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಿ” ಎಂದು ತಿಳಿಸಿದರು. ಅರಳಿಕರೆ ದೊಡ್ಡಿ ಗ್ರಾಮದ ತಿಮ್ಮಪ್ಪ (60) ಅವರು ಇಂದು ಮುಂಜಾನೆ ನಾಯಿಗಳು ಬೊಗಳುತ್ತಿದ್ದ ಶಬ್ದ ಕೇಳಿ ತೋಟದ ಮನೆ ಬಳಿ ಹೋದಾಗ ಒಂಟಿ ಕಾಡಾನೆ ದಾಳಿಗೆ ಸಿಕ್ಕಿ ಬಲಿಯಾಗಿದ್ದಾರೆ.
ಬೆಂಗಳೂರು: ಕೇರಳದಲ್ಲಿ ಕೊವಿಡ್ ರೂಪಾಂತರಿ ತಳಿ ಪತ್ತೆಯಾಗಿದ್ದು, ರಾಜ್ಯದಲ್ಲಿ ಕೊವಿಡ್ ಆತಂಕ ಮನೆ ಮಾಡಿದೆ. ಕೊವಿಡ್ ಬಗ್ಗೆ ನಿರ್ಲಕ್ಷ್ಯವಹಿಸದಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ. ಈ ಕುರಿತು ಕೆಲವೊಂದು ಸೂಚನೆಗಳನ್ನು ನೀಡಿರುವ ವೈದ್ಯರು, ಒಂದು ಕಡೆಯಿಂದ ಇನ್ನೊಂದು ಕಡೆ ಸಂಚಾರ ಮಾಡುವಾಗ ಕಡ್ಡಾಯವಾಗಿ ಮಾಸ್ಕ್ ಬಳಸುವುದು ಕಡ್ಡಾಯ. ವಯಸ್ಸಾದವರು, ಸಕ್ಕರೆ ಕಾಯಿಲೆ ಇರುವವರು ಆದಷ್ಟು ಎಚ್ಚರ ವಹಿಸಲು ವೈದ್ಯರು ಸಲಹೆ ನೀಡಿದ್ದಾರೆ. ಕೆಮ್ಮು, ನೆಗಡಿ, ಜ್ವರ ಇದ್ದರೆ ಈಗಿನಿಂದಲೇ ಮಾಸ್ಕ್ ಬಳಸಲು ಸೂಚನೆ ನೀಡಲಾಗಿದೆ. ಇನ್ನು, ಯಾರಿಗೆ ಕೆಮ್ಮು ಇರುತ್ತದೆಯೋ ಅಂತಹವರ ಹತ್ತಿರ ಹೋಗುವುದು ಕಡಿಮೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಆದಷ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ವೈದ್ಯರು ಸೂಚನೆ ನೀಡಿದ್ದಾರೆ.
ಇಸ್ಲಾಮಾಬಾದ್: ಹಲವು ಔಷಧೀಯ ಗುಣಗಳನ್ನು ಹೊಂದಿರುವ ಅಪರೂಪದ ಮೀನುಗಳನ್ನು ಮಾರಾಟ ಮಾಡಿ ಪಾಕಿಸ್ತಾನದ ಮೀನುಗಾರನೊಬ್ಬ (Pakistan Fisherman) ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಬಡ ಇಬ್ರಾಹಿಂ ಹೈದರಿ ಮೀನುಗಾರಿಕಾ ಗ್ರಾಮದಲ್ಲಿ ವಾಸಿಸುವ ಹಾಜಿ ಬಲೋಚ್ ಮತ್ತು ಆತನ ಸಂಗಡಿಗರು ಅರಬ್ಬಿ ಸಮುದ್ರದಿಂದ ಗೋಲ್ಡನ್ ಫಿಶ್ ಅಥವಾ “ಸೋವಾ” (Sowa Fish) ಎಂದು ಕರೆಯಲ್ಪಡುವ ಮೀನುಗಳನ್ನು ಹಿಡಿದಿದ್ದರು. ಮೀನು ಮಾರಿ ಬಂದ ಹಣವನ್ನು 7 ಮಂದಿ ಮೀನುಗಾರರು ಹಂಚಿಕೊಂಡಿದ್ದಾರೆ. ಬೆಳಗ್ಗೆ ಕರಾಚಿ ಬಂದರಿನಲ್ಲಿ ಅಪರೂಪದ ಮೀನುಗಳನ್ನು ಹರಾಜು ಹಾಕಲಾಯಿತು. ಸುಮಾರು 7 ಕೋಟಿ ರೂಪಾಯಿಗೆ ಮೀನು ಮಾರಾಟವಾಗಿದೆ ಎಂದು ಪಾಕಿಸ್ತಾನದ ಮೀನುಗಾರರ ಜಾನಪದ ವೇದಿಕೆಯ ಮುಬಾರಕ್ ಖಾನ್ ತಿಳಿಸಿದ್ದಾರೆ. ಸೋವಾ ಮೀನು ಅಪರೂಪದ್ದು ಮತ್ತು ಬೆಲೆಬಾಳುವಂತಹದ್ದು. ಏಕೆಂದರೆ ಅದರ ಹೊಟ್ಟೆಯಲ್ಲಿರುವ ಪದಾರ್ಥಗಳು ಕಾಯಿಲೆಗಳನ್ನು ಗುಣಪಡಿಸುವ ಮತ್ತು ಔಷಧೀಯ ಗುಣಗಳನ್ನು ಹೊಂದಿವೆ ಎಂದು ಹೇಳಲಾಗುತ್ತದೆ. ಮೀನಿನ ದಾರದಂತಹ ವಸ್ತುವನ್ನು ಶಸ್ತ್ರಚಿಕಿತ್ಸಾ ವಿಧಾನಗಳಲ್ಲಿಯೂ ಬಳಸಲಾಗುತ್ತದೆ. https://ainlivenews.com/what-did-dk-shivakumar-say-about-pratap-singh-being-trapped/ ಒಂದು ಮೀನು ಹರಾಜಿನಲ್ಲಿ ಸುಮಾರು 70 ಲಕ್ಷ ರೂಪಾಯಿಗೆ ಮಾರಾಟವಾಗುತ್ತದೆ. ಸಾಮಾನ್ಯವಾಗಿ…
ಮಡಿಕೇರಿ:- ಡಿ. 18ರಂದು ಅಂದರೆ ನಾಳೆ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಮಡಿಕೇರಿಯ ಮುತ್ತಪ್ಪ ದೇವಾಲಯದಲ್ಲಿ ಸುಬ್ರಹ್ಮಣ್ಯಸ್ವಾಮಿ ಷಷ್ಠಿ ಮಹೋತ್ಸವ ನಡೆಯಲಿದೆ ಎಂದು ತಿಳಿದು ಬಂದಿದೆ. ಮಹೋತ್ಸವದಲ್ಲಿ ದೇಗುಲದ ಆವರಣದಲ್ಲಿರುವ ಸುಬ್ರಹ್ಮಣ್ಯದೇವರ ಮೂರ್ತಿಗೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಮೊದಲಾದ ಸೇವೆಗಳು ನಡೆಯಲಿವೆ ಎಂದು ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದರು. ಬೆಳಿಗ್ಗೆ 9 ಗಂಟೆಗೆ ಮುತ್ತಪ್ಪದೇವರ ವೆಳ್ಳಾಟಂ, 10 ಗಂಟೆಗೆ ಗುಳಿಗ ದೇವರ ವೆಳ್ಳಾಟಂ, 10.30ಕ್ಕೆ ಪೋದಿ ದೇವರ ವೆಳ್ಳಾಟಂ, ಮಧ್ಯಾಹ್ನ 12 ಗಂಟೆಗೆ ಸುಬ್ರಹ್ಮಣ್ಯದೇವರ ಶ್ರೀಭೂತ ಬಲಿ, 12.30ಕ್ಕೆ ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದರು.
ಬೆಂಗಳೂರು: ಇಂದು ಮಾಜಿ ಸಚಿವರು ಹಾಗೂ ಶಾಸಕರಾದ ಎಚ್.ಡಿ.ರೇವಣ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಟಿ.ಎ,ಶರವಣ ಅವರು ಶುಭ ಹಾರೈಸಿದ್ದಾರೆ. ಜನಪ್ರಿಯ ಶಾಸಕರಾದ ಎಚ್.ಡಿ.ರೇವಣ್ಣ ಅವರ ಬೆಂಗಳೂರಿನ ಬಸವನಗುಡಿ ನಿವಾಸಕ್ಕೆ MLC ಟಿ. ಎ. ಶರವಣ ಅವರು ಭೇಟಿ ನೀಡಿ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದರು. ಸಾಯಿಬಾಬಾ ಅವರ ಆಶೀರ್ವಾದ ಸದಾ ಇವರ ಮೇಲಿರಲಿ, ಇನ್ನೂ ಹೆಚ್ಚಿನ ಜನ ಸೇವೆಯನ್ನು ಮಾಡುವ ಶಕ್ತಿ ಭಗವಂತ ಕರುಣಿಸಲಿ ಎಂದು ಹಾರೈಸಿದರು.
ರಾಮನಗರ:- ಒಂಟಿ ಸಲಗ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಮಗಳಿಗೆ ಕೆಲಸ ನೀಡಲು ಡಿಕೆಶಿ ಸೂಚನೆ ನೀಡಿದ್ದಾರೆ. ರಾಮನಗರ ಜಿಲ್ಲೆಯ ಹರಳಿಕರೆ ದೊಡ್ಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಯಿಂದ ವ್ಯಕ್ತಿಯೋರ್ವ ಸಾವನ್ನಪ್ಪಿದ ವಿಚಾರವನ್ನು ಅರಣ್ಯಾಧಿಕಾರಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ. ತಿಮ್ಮಪ್ಪ (64) ಮುಂಜಾನೆ ಜಮೀನಿಗೆ ತೆರಳಿದ ವೇಳೆ ಒಂಟಿ ಸಲಗ ದಾಳಿ ಮಾಡಿದೆ. 12 ಕಿ.ಮೀ ರೈಲ್ವೆ ಬ್ಯಾರಿಕೇಡ್ ಹಾಕುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಮೃತ ವ್ಯಕ್ತಿಯ ಮಗಳಿಗೆ ಅರಣ್ಯ ಇಲಾಖೆಯಲ್ಲಿ ಕೆಲಸ ನೀಡುವಂತೆ ಮನವಿ ಮಾಡಿದ್ದಾರೆ ಎಂದು ಅರಣ್ಯಾಧಿಕಾರಿಗಳು ಡಿಸಿಎಂ ಗೆ ಮಾಹಿತಿ ನೀಡಿದರು. ಮೃತರ ಕುಟುಂಬಕ್ಕೆ ಪರಿಹಾರ ನೀಡಿ, ಬ್ಯಾರಿಕೇಡ್ ಅಳವಡಿಸಿ. ಜತೆಗೆ ಆ ಹೆಣ್ಣು ಮಗಳಿಗೆ ನಿಮ್ಮ ಇಲಾಖೆಯಲ್ಲಿ ಕೆಲಸ ನೀಡಿ ಎಂದು ಸೂಚನೆ ನೀಡಿದ್ದಾರೆ.
ಬೆಂಗಳೂರು: : ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾಲಾ ಮಕ್ಕಳನ್ನು ಮಲದ ಗುಂಡಿ ಸ್ವಚ್ಚಕಾರ್ಯಕ್ಕೆ ಬಳಸಿಕೊಂಡ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕೋಲಾರದ ಮಾಲೂರು ಮಲದಗುಂಡಿ ಪ್ರಕರಣದಿಂದ ವಿಷಯ ಗೊತ್ತಾಗಿದೆ. ಈ ಬಗ್ಗೆ ಮಾಹಿತಿ ತರಿಸುತ್ತಿದ್ದೇನೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ. ಶಾಲಾ ಮಕ್ಕಳನ್ನ ಶೌಚ ಗುಂಡಿಗೆ ಇಳಿಸಿದ ಪ್ರಕರಣ ಸಂಬಂಧ ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕರಾದ ಅಭಿಷೇಕ್, ಮುನಿಯಪ್ಪ, ವಾರ್ಡನ್ ಮಂಜುನಾಥ್ರನ್ನು ಅಮಾನತು ಮಾಡಲಾಗಿದೆ. ಸಚಿವ ಡಾ.H.C.ಮಹದೇವಪ್ಪ ಸೂಚನೆ ಮೇರೆಗೆ ಜಿಲ್ಲಾಧಿಕಾರಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವರು ಸೂಚನೆ ನೀಡಿದ್ದಾರೆ.