ಮಡಿಕೇರಿ:- ಕೊಳೆತ ಸ್ಥಿತಿಯಲ್ಲಿ ಗಂಡಾನೆ ಮೃತದೇಹ ಪತ್ತೆಯಾಗಿರುವ ಘಟನೆ ಮಡಿಕೇರಿಯ ದುಬಾರೆಯ ಕಾಡಿನೊಳಗೆ ಜರುಗಿದೆ. ಸುಮಾರು 15 ದಿನಗಳಿಗೂ ಹಿಂದೆ ಮೃತಪಟ್ಟಿರುವ ಈ ಕಾಡಾನೆಯ ದೇಹ ಸಂಪೂರ್ಣ ಕೊಳೆತು ಹೋಗಿದೆ. ಆನೆಯ ಎರಡೂ ದಂತಗಳು ಸಿಕ್ಕಿವೆ. ಕಾಲಿಗೆ ಗಾಯವಾಗಿ ಕುಂಟುತ್ತಾ ಹೋಗುತ್ತಿದ್ದ ಆನೆಯೊಂದನ್ನು ಇತ್ತೀಚೆಗೆ ಸಿಬ್ಬಂದಿಯೊಬ್ಬರು ಪತ್ತೆ ಹಚ್ಚಿದ್ದರು. ಬಹುಶಃ ಅದೇ ಆನೆ ಇರಬಹುದು ಎಂದು ಅಂದಾಜು ಮಾಡಲಾಗಿದೆ’ ಎಂದು ತಿಳಿಸಿದರು. ಆನೆಕಾಡಿಗೆ ಕುರುಡು ಆನೆ ಮೃತದೇಹ ಶುಕ್ರವಾರ ರಾತ್ರಿ ಮೃತಪಟ್ಟಿದ್ದ ಕಣ್ಣು ಕಾಣದೇ ಅಲೆಯುತ್ತಿದ್ದ ಹೆಣ್ಣಾನೆಯ ಮೃತದೇಹವನ್ನು ಕುಶಾಲನಗರ ಸಮೀಪದ ಆನೆಕಾಡಿಗೆ ತರಲಾಯಿತು. ಮರಣೋತ್ತರ ಪರೀಕ್ಷೆ ನಡೆಸಿದಾಗ ಇದು ಗರ್ಭಿಣಿ ಅಲ್ಲ ಎಂದು ಖಚಿತಗೊಂಡಿತು
Author: AIN Author
ಬೆಂಗಳೂರು: ವಿಷ್ಣುವರ್ಧನ್ (Vishnuvardhan) ಅಂತ್ಯ ಸಂಸ್ಕಾರವಾದ ಜಾಗದಲ್ಲಿ ಪುಣ್ಯಭೂಮಿ ಆಗಬೇಕು ಎಂದು ವಿಷ್ಣು ಅಭಿಮಾನಿಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಷ್ಣುವರ್ಧನ್ ಅಭಿಮಾನಿಗಳೆಲ್ಲರೂ ಸೇರಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ (Protest) ಹಮ್ಮಿಕೊಂಡಿದ್ದಾರೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ ಎ ನಾರಾಯಣಗೌಡ ಮತ್ತು ಡಾ ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಪ್ರತಿನಿಧಿಗಳು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭಾನುವಾರ ಭೇಟಿ ಮಾಡಿದರು. ಬೆಂಗಳೂರಿನ ಉತ್ತರಹಳ್ಳಿ-ಕೆಂಗೇರಿ ಮುಖ್ಯರಸ್ತೆಯಲ್ಲಿ ವಿಷ್ಣುವರ್ಧನ್ ಸಮಾಧಿ ಸ್ಥಳ ಸೇರಿದಂತೆ ಆರು ಗುಂಟೆ ಜಾಗವನ್ನು ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಸರಕಾರದಿಂದ ಮಂಜೂರು ಮಾಡಿಸಬೇಕು ಎಂದು ಮನವಿ ಸಲ್ಲಿಸಿದರು.
ಬೆಂಗಳೂರು: ಮಹಿಳೆ (Belagavi Woman) ಮೇಲಿನ ದೌರ್ಜನ್ಯ ಪ್ರಕರಣ ದೊಡ್ಡಮಟ್ಟದಲ್ಲಿ ಸದ್ದು ಮಾಡ್ತಿದೆ. ಇದೇ ಹೊತ್ತಲ್ಲಿ ಸಂತ್ರಸ್ತೆಯ ಭೇಟಿಗೆ ಹೈಕೋರ್ಟ್ (High Court) ನಿರ್ಬಂಧ ವಿಧಿಸಿದೆ. ರಾಜಕಾರಣಿಗಳು ಸೇರಿ ಯಾರೇ ಆಗಲಿ ವೈದ್ಯರ ಲಿಖಿತ ಅನುಮತಿ ಇಲ್ಲದೇ ಸಂತ್ರಸ್ತೆಯನ್ನು ಭೇಟಿ ಮಾಡುವಂತಿಲ್ಲ. ಇದು ಕುಟುಂಬಸ್ಥರು, ಶಾಸನಬದ್ಧ ಸಂಸ್ಥೆ, ತನಿಖಾಧಿಕಾರಿಗಳಿಗೆ ಅನ್ವಯಿಸಲ್ಲ. ಹೀಗಾಗಿ ವೈದ್ಯರು, ಕುಟುಂಬಸ್ಥರು ಹಾಗೂ ತನಿಖಾಧಿಕಾರಿಗಳು ಮಾತ್ರ ಭೇಟಿ ಮಾಡಬಹುದು ಎಂದು ಸಿಜೆ ವರಾಳೆ ನೇತೃತ್ವದ ವಿಭಾಗೀಯ ಪೀಠ ಆದೇಶ ನೀಡಿದೆ. ಪ್ರಕರಣ ಸಂಬಂಧ ಶುಕ್ರವಾರ ದೆಹಲಿಯಲ್ಲಿ ದನಿ ಎತ್ತಿದ್ದ ಬಿಜೆಪಿಗರು (BJP) ಶನಿವಾರ ಬೆಳಗಾವಿಗೆ ಭೇಟಿ ನೀಡಿದ್ದಾರೆ. ಸಂಸದೆ ಅಪರಾಜಿತಾ ಸಿಂಗ್ ನೇತೃತ್ವದ ಬಿಜೆಪಿ ಸತ್ಯಶೋಧನಾ ಸಮಿತಿ ಸದಸ್ಯರು ಸಂತ್ರಸ್ತೆಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ರು. ಘಟನೆಯ ಬಗ್ಗೆ ಮಾಹಿತಿ ಪಡೆದ್ರು. ಘಟನಾ ಸ್ಥಳಕ್ಕೂ ತೆರಳಿ ಪರಿಶೀಲಿಸಿದ್ರು. ಇದು ನಿಜಕ್ಕೂ ತಲೆ ತಗ್ಗಿಸುವ ಘಟನೆ. ಬೆಳಗಾವಿಲಿದ್ರೂ ಸಿಎಂ ಸೇರಿ ಯಾರು ಕೂಡ ಸಂತ್ರಸ್ತೆಯನ್ನು ಏಕೆ ಭೇಟಿ ಮಾಡ್ಲಿಲ್ಲ ಎಂದು ಆಕ್ರೋಶ…
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಚಳಿಯ ಪ್ರಮಾಣ ಹೆಚ್ಚಳವಾಗುತ್ತಿದೆ. ಇದರ ನಡುವೆ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಮೈಸೂರು, ಮಂಡ್ಯ, ಮಡಿಕೇರಿ, ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೊಂಚ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಉತ್ತರ ಒಳನಾಡಿನಲ್ಲಿ ಈ ವಾರಪೂರ್ತಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಹೀಗಿದ್ದರೂ ಈ ಭಾಗದಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದಿದೆ. ರಾಜ್ಯದ ಬಹುತೇಕ ಕಡೆ ಗರಿಷ್ಠ ತಾಪಮಾನ ಮತ್ತು ಕನಿಷ್ಠ ತಾಪಮಾನ ಇಳಿಕೆ ಆಗಿದೆ. ಹೀಗಾಗಿ ಚಳಿಗಾಲ ಆರಂಭವಾದ ಅನುಭವವಾಗುತ್ತಿದೆ. ಈ ಮೂಲಕ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ ಆವರಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ
ಹುಬ್ಬಳ್ಳಿ, :ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣ ಗೊತ್ತಾದ ತಕ್ಷಣವೇ ಗೃಹ ಸಚಿವರು ಮಹಿಳೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಎಲ್ಲಿ ಸರ್ಕಾರ ಫೇಲ್ ಆಗಿದೆ ಎಂದು ಪ್ರಶ್ನಿಸಿದರು. ಉತ್ತರ ಪ್ರದೇಶದಲ್ಲಿ ಶಾಸಕ 9 ವರ್ಷದ ಹುಡುಗಿ ಮೇಲೆ ರೇಪ್ ಮಾಡಿ ಜೈಲು ಸೇರಿದ್ದಾನೆ. ಇದಕ್ಕೆ ಜೆಪಿ ನಡ್ಡಾ ಮತ್ತು ಬಿಜೆಪಿ ನಾಯಕರು ಏನು ಹೇಳತ್ತಾರೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಇಂತಹ ಎಂಎಲ್ಎ ಇಟ್ಟುಕೊಂಡು ಹೆಣ್ಣುಮಕ್ಕಳು ಮೇಲೆ ದೌರ್ಜನ್ಯ ಮಾಡುವ ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡಲು ಏನು ನೈತಿಕತೆಯಿದೆ ಎಂದು ವಾಗ್ದಾಳಿ ನಡೆಸಿದರು. ಯಾರ ಕಾಲದಲ್ಲಿ ಎಷ್ಟು ಪ್ರಕರಣ ಆಗಿವೆ ಅಂತ ನ್ಯಾಷನಲ್ ಕ್ರೈಂ ಬ್ಯಿರೋ ಅವರ ವರದಿ ನೋಡಲಿ. ಯಾರ ಮೇಲೆ ದೌರ್ಜನ್ಯ ಆದರೂ ಅವರ ಮೇಲೆ ನಾವು ಕಠಿಣ ಕ್ರಮ ತೆಗೆದುಕೊಳ್ಳತ್ತವೆ. ಬೆಳಗಾವಿಯಲ್ಲಿ ನಡೆದಿದ್ದು…
ಕಲಬುರಗಿ:- ಜಿಲ್ಲೆಯಲ್ಲಿ ಕಳವು ಪ್ರಕರಣ ಹೆಚ್ಚಾಗ್ತಿರೋ ಹಿನ್ನಲೆ ಜನರಲ್ಲಿ ಜಾಗೃತಿ ಮೂಡಿಸಲು ಪೋಲೀಸರು ಇದೀಗ ಡಂಗುರ ಮೊರೆ ಹೋಗಿದ್ದಾರೆ. ಹೌದು ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿರುವ ಅಫಜಲಪುರ ಪೋಲೀಸರು ಹಳ್ಳಿ ಹಳ್ಳಿಯಲ್ಲಿ ಡಂಗುರ ಸಾರಿ ತಿಳುವಳಿಕೆ ನೀಡ್ತಿದ್ದಾರೆ.. ಹೊಲದಲ್ಲಿನ ಬೆಳೆಕಡೆ ಗಮನ ಕೊಡಿ ಅಷ್ಟೇಅಲ್ಲ ಮನೆಯಲ್ಲಿನ ನಗನಾಣ್ಯ ಬ್ಯಾಂಕಲ್ಲಿಡಿ ಅತ ಬಡದಾಳ ಗ್ರಾಮದಲ್ಲಿ ಹಲಿಗೆ ಬಾರಿಸಿ ಡಂಗುರ ಹೊಡೆದಿದ್ದಾರೆ…
ಜೋಹಾನ್ಸ್ ಬರ್ಗ್: ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA) ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಭಾನುವಾರ (ಇಂದು) ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೊಸ ತಲೆಮಾರಿನ ತಾರೆಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಸಾಲುಗಟ್ಟಿ ನಿಂತಿದ್ದು ಭಾರತದ ಏಕದಿನ ಭವಿಷ್ಯದ ಪ್ರಯಾಣಕ್ಕೆ ಇದು ಮೊದಲ ಹೆಜ್ಜೆಯಾಗುವ ನಿರೀಕ್ಷೆ ಇದೆ. ಅಷ್ಟೇ ಅಲ್ಲದೇ ಉಭಯ ತಂಡಗಳಿಗೆ ಈ ಮುಖಾಮುಖಿಯು 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಮುಂಚಿತವಾಗಿ ಹೊಸ ಸ್ಟಾರ್ಗಳ ಆಗಮನವನ್ನು ಬಿಂಬಿಸುತ್ತದೆ. ಕಳೆದ ಒಂದೂವರೆ ದಶಕದಿಂದಲೂ ಏಕದಿನ ಸ್ವರೂಪದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ (Virat Kohli and Rohit Sharma) ಉತ್ತುಂಗದಲ್ಲಿದ್ದಾರೆ. ಆದರೀಗ ಅವರು ತಮ್ಮ ವೃತ್ತಿಜೀವನದ ಮುಸ್ಸಂಜೆಗೆ ಸರಿಯುತ್ತಿದ್ದಾರೆ. ಹೀಗಾಗಿ ಯುವ ಭಾರತೀಯರ ಹೆಸರು ತಮ್ಮ ಪರಂಪರೆ ಮುಂದುವರಿಸಬೇಕಾಗಿದೆ. ಮೂರು ಏಕದಿನ ಪಂದ್ಯಗಳ ಸರಣಿಯ ನಾಯಕತ್ವ ವಹಿಸಿರುವ ಕನ್ನಡಿಗ ಕೆ.ಎಲ್ ರಾಹುಲ್ (KL Rahul) ಪಂದ್ಯದ ಕೇಂದ್ರ ಬಿಂದುವಾಗಿದ್ದಾರೆ. ವಿಕೆಟ್ ಕೀಪರ್-ಬ್ಯಾಟರ್ ರಾಹುಲ್…
ಬೆಂಗಳೂರು: ಕಾಡುಗೋಡಿ ವಿದ್ಯುತ್ ದುರಂತ ಬಳಿಕ ಎಚ್ಚೆತ್ತುಕೊಳ್ತಾ ಬೆಸ್ಕಾಂ ಬೆಂಗಳೂರಿಗರ ಆಕ್ರೋಶಕ್ಕೆ ಮಣಿದು ಕೊನೆಗೂ ಡೆಡ್ಲಿ ವಿದ್ಯುತ್ ಸ್ಪಾಟ್ಗಳನ್ನ ಪತ್ತೆ ಹಚ್ಚಿದ ಬೆಸ್ಕಾಂ ಅಧಿಕಾರಿಗಳು..ಇಡೀ ಬೆಂಗಳೂರಿನ ಜನತೆಯನ್ನು ಬೆಚ್ಚಿಬೀಳಿಸುತ್ತಿದೆ ಬೆಸ್ಕಾಂ ಬಿಡುಗಡೆ ಮಾಡಿರುವ ಡೆಡ್ಲಿ ಸ್ಪಾಟ್ ಗಳ ಸಂಖ್ಯೆ ನಿಜಕ್ಕೂ ಸಿಲಿಕಾನ್ ಸಿಟಿ ಮಂದಿ ನೋಡಲೇಬೇಕು ಈ ಡೇಂಜರ್ ಸ್ಪಾಟ್ ಗಳನ್ನುವಿದ್ಯುತ್ ದುರಂತದ ಬಳಿಕ ಎಚ್ಚೆತ್ತು ಸರ್ವೇ ಮಾಡಿದ ಅಧಿಕಾರಿಗಳಿಗೆ ಡೆಡ್ಲಿ ಸ್ಪಾಟ್ ಗಳ ಸಂಖ್ಯೆಯೇ ನೋಡಿ ಶಾಕ್ 15 ದಿನಗಳ ಒಳಗಾಗಿ ಡೆಡ್ಲಿ ಸ್ಪಾಟ್ಗಳನ್ನ ಪತ್ತೆ ಹಚ್ಚೋದಾಗಿ ತಿಳಿಸಿದ ಬೆಸ್ಕಾಂ ಅಧಿಕಾರಿಗಳು 15 ದಿನದಲ್ಲಿ 38922 ಅಪಾಯಕಾರಿ ಸ್ಥಳಗಳನ್ನ ಪತ್ತೆ ಹಚ್ಚಿದ ಆಫೀಸರ್ಸ್ ಇನ್ಮೇಲೆ ಪುಟ್ಪಾತ್ ಮೇಲೆ ಓಡಾಡುವ ಮುನ್ನ ಬೆಂಗಳೂರು ಜನರೇ ಎಚ್ಚರ ಎಚ್ಚರ ಹಾಗಾದ್ರೆ ಯಾವ ಯಾವ ವಲಯದಲ್ಲಿ ಎಷ್ಟೆಷ್ಟು ಡೇಂಜರಸ್ ಬೆಸ್ಕಾಂ ವಿದ್ಯುತ್ ಸ್ಪಾಟ್ ಗಳಿವೆ..? 1) ಉತ್ತರ ವಲಯ – 5472 2) ಪೂರ್ವ – 4187 3) ಪಶ್ಚಿಮ – 12794 4)…
ಬಳ್ಳಾರಿ:-ಶಾಸಕರೇ ,ಸಚಿವರೇ, ಬಳ್ಳಾರಿ ಉಸ್ತುವಾರಿ ಸಚಿವರೇ ಸ್ವಲ್ಪ ಈ ಕಡೇ ಗಮನಹರಿಸಿ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಾದ ಜನಪ್ರತಿನಿಧಿಗಳೆ ಏಕೆ ಈ ನಿರ್ಲಕ್ಷ್ಯೆ……? ಹೌದು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳೆಂದರೇ ಯಾಕೆ ಈ ಅಸಡ್ಯೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕರೂರು ಗ್ರಾಮದಲ್ಲಿರುವ ಡಾ!ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಬಡವರು, ಕೂಲಿ ಕಾರ್ಮಿಕರು, ರೈತರು, ದಲಿತರ ಮಕ್ಕಳು ಓದುತ್ತಾರೆ. ಆದರೆ ಸಂಬಂಧಪಟ್ಟ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಈ ಶಾಲೆ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಯಾವುದೇ ಮೂಲಭೂತ ಸೌಲಭ್ಯಗಳು ಇಲ್ಲದೇ ಇದ್ದರು ವಿಧ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಈಗಾಗಲೇ ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ. ಈ ಭಾಗವನ್ನು ಅಭಿವೃದ್ದಿ ಪಡಿಸುವ ಸಲುವಾಗಿ 371(ಜೆ)ಯನ್ನು ಜಾರಿಗೊಳ್ಳಿಸಲಾಗಿದೆ. ಎಪಿಎಂಸಿ ಕಟ್ಟಡದಲ್ಲಿ ಅನಧಿಕೃತವಾಗಿ 7 ವರ್ಷಗಳಿಂದ ತರಗತಿ ನಡೆಸಿಕೊಂಡು ಸಿಬ್ಬಂದಿಗಳು ಬಂದಿದ್ದಾರೆ. ಬಾಲಕರು – 140, ಬಾಲಕೀಯರು -90, ಒಟ್ಟು 230 ವಿಧ್ಯಾರ್ಥಿಗಳನ್ನು ಹೊಂದಿರುವ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸುಮಾರು 230 ಮಕ್ಕಳಿಗೆ…
ಕಂಪ್ಲಿ:- ಸುಮಾರು 7 ವರ್ಷದ ಮೊಸಳೆಯೊಂದರ ಮೃತದೇಹ ಪತ್ತೆಯಾಗಿರುವ ಘಟನೆ ಕೋಟೆಯ ತುಂಗಾಭದ್ರ ನದಿ ತಟದ ಜಾಕ್ವೆಲ್ ಬಳಿ ಜರುಗಿದೆ ಪುರಸಭೆ ಸಿಬ್ಬಂದಿಯವರು ಕೆಲಸಕ್ಕೆಂದು ತೆರಳಿದ್ದಾಗ ಮೃತ ಮೊಸಳೆಯನ್ನು ಕಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಉಪ ವಲಯ ಅರಣ್ಯ ಅಧಿಕಾರಿ ಜಗದೀಶ್ ಭೇಟಿ ನೀಡಿ ಪರಿಶೀಲಿಸಿ, ನಂತರ ಮೃತ ಮೊಸಳೆಯನ್ನು ಮರಣೋತ್ತರ ಪರೀಕ್ಷೆಗಾಗಿ ಪಶು ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು. ಈ ವೇಳೆ ತಿಂದ ಆಹಾರವನ್ನು ಜೀರ್ಣಿಸಿಕೊಳ್ಳಲಾಗದೆ ಮೊಸಳೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.