Author: AIN Author

ಬೆಂಗಳೂರು: ಇಂದು ಎಚ್.ಡಿ. ರೇವಣ್ಣ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ತಮ್ಮ ಸಹೋದರನಿಗೆ ಶುಭಾಶಯ ಕೋರಿದ್ದಾರೆ. https://twitter.com/hd_kumaraswamy/status/1736245671571890502 ನನ್ನ ಪ್ರೀತಿಯ ಸಹೋದರರು ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಸಚಿವರೂ ಆಗಿರುವ ಹೆಚ್.ಡಿ.ರೇವಣ್ಣ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಇನ್ನಷ್ಟು ಸುದೀರ್ಘ ಕಾಲ ಜನಸೇವೆ ಮಾಡುವುದಕ್ಕೆ ಆ ದೇವರು ಅವರಿಗೆ ಶಕ್ತಿ, ಚೈತನ್ಯ ಹಾಗೂ ಆಯುರಾರೋಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹಾರೈಸಿದ್ದಾರೆ.

Read More

ಕೋಲಾರ:- ಸ್ವಚ್ಛತೆಯ ನೆಪದಲ್ಲಿ ಮಕ್ಕಳನ್ನೇ ಮಲದ ಗುಂಡಿಗೆ ಇಳಿಸಿದ ಪ್ರಕರಣ ಕೋಲಾರದಲ್ಲಿ ಬೆಳಕಿಗೆ ಬಂದಿದೆ. ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ಜರುಗಿದ್ದು, ಪೋಷಕರು ದೂರು ನೀಡಿದ್ದಾರೆ. ಮಾಲೂರು ತಾಲೂಕಿನ ಯಲಹೊಳ್ಳಿ ಗ್ರಾಮದಲ್ಲಿರುವ ಈ ಶಾಲೆಯ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ್ದ ಶಿಕ್ಷಕರು ಸ್ವಚ್ಛತಾ ಕಾರ್ಯ ಮಾಡಿಸಿದ್ದರು. ಮೂರ್ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿತ್ತು. ಈ ಕುರಿತ ಚಿತ್ರ ಎಲ್ಲೆಡೆ ಹರಿದಾಡಿ ವಿರೋಧ ವ್ಯಕ್ತಗೊಂಡಿತ್ತು. ಬಳಿಕ ಮೊರಾರ್ಜಿ ಶಾಲೆ ಪ್ರಾಂಶುಪಾಲ ಹಾಗೂ, ಶಿಕ್ಷಕರ ವಿರುದ್ಧ ಪೋಷಕರು ದೂರು ದಾಖಲಿಸಲಾಗಿದೆ. ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿಗಳು ಮಕ್ಕಳಿಂದ ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದರು. ಕಳೆದ ಹಲವು ದಿನಗಳಿಂದ ಮಕ್ಕಳಿಗೆ ಇದೇ ರೀತಿಯಲ್ಲಿ ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್ ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರಿಂದ ಮಕ್ಕಳಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪವಿದೆ. ಮಕ್ಕಳಿಗೆ ಹೊಡೆಯುವುದು, ಮಕ್ಕಳನ್ನು ರಾತ್ರಿ…

Read More

ಬಿಗ್‌ಬಾಸ್ ದಿನದಿಂದ ದಿನಕ್ಕೆ ಕಷ್ಟದ ದಾರಿಯಲ್ಲಿ ಸಾಗುತ್ತಿದೆ. ಮನೆಯೊಳಗಿನ ಸ್ಪರ್ಧಿಗಳಿಗೆ ಪ್ರತಿ ವಾರವೂ ಹೊಸ ಹೊಸ ಚಾಲೆಂಜ್‌ಗಳು ಎದುರಾಗುತ್ತಿವೆ. ಇಂದಿದ್ದ ಹಾಗೆ ನಾಳೆ ಇಲ್ಲ. ಈ ಮನೆಯೊಳಗೆ ಯಾರೂ ಸ್ನೇಹಿತರೂ ಅಲ್ಲ, ಯಾರೂ ಶತ್ರುಗಳೂ ಅಲ್ಲ ಎಂಬುದು ಸತ್ಯವಾಗುತ್ತಿದೆ. ಅದನ್ನು ಮತ್ತೊಮ್ಮೆ ಮನವರಿಕೆ ಮಾಡಿಕೊಡುವಂಥ ಚಟುವಟಿಕೆಯನ್ನು ಕಿಚ್ಚ ‘ಸೂಪರ್‍ ಸಂಡೆ ವಿತ್ ಸುದೀಪ್‌’ ಎಪಿಸೋಡಿನಲ್ಲಿ ಮಾಡಿಸಿದ್ದಾರೆ. ಆ ಚಟುವಟಿಕೆಯ ಝಲಕ್‌ JioCinema ಬಿಡುಗಡೆಮಾಡಿರುವ ಪ್ರೋಮೊದಲ್ಲಿ ಜಾಹೀರಾಗಿದೆ. ಒಂದು ಬೆರ್ಚಪ್ಪನನ್ನು ನಿಲ್ಲಿಸಲಾಗಿದೆ. ಅದರ ಮೇಲೆ ಒಂದು ಮಡಿಕೆ ಇದೆ. ಅದರ ಮೇಲೆ ಸದಸ್ಯರು ಒಬ್ಬರ ಫೋಟೊ ಹಾಕಿ, ಯಾವ ವಿಚಾರಕ್ಕೆ ಅವರ ಮೇಲೆ ಕೋಪ ಇದೆ ಎಂಬುದನ್ನು ಹೇಳಿ ಆಮೇಲೆ ಆ ಮಡಿಕೆಯನ್ನು ಒಡೆಯಬೇಕು. ಈ ಚಟುವಟಿಕೆ ಮನೆಯೊಳಗಿನ ಸಮತೋಲವನ್ನು ಒಮ್ಮೆ ಕದಡುವುದಂತೂ ಖಚಿತ. ಎಲ್ಲರೂ ಊಹಿಸುವಂತೆ ವಿನಯ್‌, ಸಂಗೀತಾ ಫೋಟೊ ಇಟ್ಟು ಮಡಿಕೆ ಒಡೆದಿದ್ದಾರೆ. ಸಂಗೀತಾ ಕೂಡ ವಿನಯ್ ಫೋಟೊ ಇಟ್ಟು ಮಡಿಕೆ ಒಡೆದಿದ್ದಾರೆ. ಆದರೆ ಈ ನಡುವೆ ಇನ್ನೊಂದು ಶಾಕಿಂಗ್…

Read More

ಧಾರವಾಡ:- ಅಸಮಾನತೆ ಇರೋವರೆಗೂ ಸಮಾಜದಲ್ಲಿ ನೆಮ್ಮದಿಯಿರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಕಲಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ವಿಶೇಷಚೇತನರಿಗೆ ವಾಹನ ವಿತರಣೆ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್​​​ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಸಮಾಜದಲ್ಲಿಂದು ಶೇ. 90ರಷ್ಟು ಸಂಪತ್ತು ಕೇವಲ ಶೇ. 10ರಷ್ಟು ಜನರಲ್ಲಿ ಕೇಂದ್ರೀಕೃತವಾಗಿದೆ. ಇದರಿಂದಾಗಿಯೇ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ. ಈ ಅಸಮಾನತೆ ತೊಲಗಿಸುವ ಬಗ್ಗೆ ಅಂಬೇಡ್ಕರ್ ಹೇಳಿದ್ದರು. ಅಸಮಾನತೆ ಇರೋವರೆಗೂ ಸಮಾಜದಲ್ಲಿ ನೆಮ್ಮದಿ, ಶಾಂತಿ ಇರಲು ಸಾಧ್ಯವಿಲ್ಲ. ಅಸಮಾನತೆಯಿಂದ ಬಳಲುವವರು ಮುಖ್ಯವಾಹಿನಿಗೆ ಬರಬೇಕು. ಇಲ್ಲದೇ ಹೋದರೆ ಅಸಮಾನತೆ ಮುಂದುವರೆಯುತ್ತದೆ ಎಂದರು. ಅಂಬೇಡ್ಕರ್ ಅವರು 1949ರ ನ. 25ರಂದು ಭಾಷಣ ಮಾಡಿದ್ದರು. 1950ರ ಜನವರಿ 26ರಿಂದ ವೈವಿಧ್ಯತೆಯ ಸಮಾಜಕ್ಕೆ ಕಾಲಿಡುತ್ತೇವೆ ಎಂದು ಹೇಳಿದ್ದರು. ಇಂದು ನಮಗೆ ಸ್ವಾತಂತ್ರ್ಯ ಬಂದಿದೆ. ರಾಜಕೀಯ ಪ್ರಜಾಪ್ರಭುತ್ವ ಸಿಕ್ಕಿದೆ. ಅದು ಯಶಸ್ವಿಯಾಗಲು ಅಸಮಾನತೆಯನ್ನು ತೊಡೆದು ಹಾಕಲೇಬೇಕು. ಆದ್ರೆ ಸ್ವಾತಂತ್ರ್ಯ ಬಂದ ಮೇಲೂ ಅಸಮಾನತೆಯಿಂದ ಜನರು ನರಳುತ್ತಿದ್ದಾರೆ. ಈ ರಾಜಕೀಯ, ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಬೇಕು…

Read More

ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್​ ಅವರ ಸ್ಮಾರಕ ಹಾಗೂ ಪುಣ್ಯಭೂಮಿಗೆ ಸಂಬಂಧಿಸಿದಂತೆ ಮೊದಲಿನಿಂದಲೂ ಗೊಂದಲಗಳು ಏರ್ಪಟ್ಟಿವೆ. ಈ ಕುರಿತು ನಟ ಕಿಚ್ಚ ಸುದೀಪ್​ ಅವರು ಮತ್ತೊಮ್ಮೆ ತಮ್ಮ ಅನಿಸಿಕೆ ಏನು ಎಂಬುದನ್ನು ಹಂಚಿಕೊಂಡಿದ್ದಾರೆ. ಇಂದು ವಿಷ್ಣುವರ್ಧನ್​ ಅವರ ಅಭಿಮಾನಿಗಳು ಬೆಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್​ ಅವರು ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನೆ ನಡೆಯಲಿರುವ ಹಿನ್ನೆಲೆಯಲ್ಲಿ ಸುದೀಪ್ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿದ್ದು ‘ಡಾ. ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು-ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ’ ಎಂದು ಕಿಚ್ಚ ತಿಳಿಸಿದ್ದಾರೆ.

Read More

ಹುಬ್ಬಳ್ಳಿ:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಅವರ‌ ಜನ್ಮದಿನದ ಪ್ರಯುಕ್ತ ಶುಭ ಕೋರಿದರು. ಶೆಟ್ಟರ್ ನಿವಾಸಕ್ಕೆ‌ ಬಂದ ಸಿದ್ದರಾಮಯ್ಯ ಅವರನ್ನು ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಶೆಟ್ಟರ್‌ಗೆ ಹೂಗುಚ್ಛ ನೀಡಿ ಸಿ.ಎಂ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾರ ಹಾಕಲು ಮುಂದಾದಾಗ ಶೋಕಾಚರಣೆ ಇದೆ ಎಂದು ಸಿ.ಎಂ ನಿರಾಕರಿಸಿದರು. ಬಳಿಕ ಶೆಟ್ಟರ್ ಅವರ ನಿವಾಸದಲ್ಲಿ ಉಪಾಹಾರ ಸೇವಿಸಿದರು.

Read More

ಮುಂಬೈ: ಅಚ್ಚರಿ ಬೆಳವಣಿಯಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ಫ್ರಾಂಚೈಸಿಯು 2024ರ ಐಪಿಎಲ್‌ ಆವೃತ್ತಿಗೆ ಹಾರ್ದಿಕ್‌ ಪಾಂಡ್ಯ (Hardik Pandya) ಅವರನ್ನು ನಾಯಕನನ್ನಾಗಿ ನೇಮಿಸಿದೆ. ಪಾಂಡ್ಯ ಅವರನ್ನು ಹೊಸ ನಾಯಕ ಎಂದು ಘೋಷಿಸಿದ 1 ಗಂಟೆಯೊಳಗೆ ಮುಂಬೈ ಇಂಡಿಯನ್ಸ್ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ 4,00,000 ಫಾಲೋವರ್ಸ್‌ (Followers) ಕಳೆದುಕೊಂಡಿದೆ. ರೋಹಿತ್‌ ಶರ್ಮಾ (Rohit Sharma) ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ ವಿಷಯ ತಿಳಿಯುತ್ತಿದ್ದಂತೆ ನಿರಾಸೆ ಹೊಂದಿದ ಅಭಿಮಾನಿಗಳು ಮುಂಬೈ ಫ್ರಾಂಚೈಸಿಗೆ ಗುಡ್‌ಬೈ ಹೇಳಿದ್ದಾರೆ 10 ವರ್ಷಗಳ ಕಾಲ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಆಡುತ್ತಿರುವ ರೋಹಿತ್‌ ಶರ್ಮಾ 2013, 2015, 2017, 2019 ಹಾಗೂ 2020ರ ಆವೃತ್ತಿಗಳಲ್ಲಿ ತಂಡವನ್ನು ಚಾಂಪಿಯನ್‌ ಪಟ್ಟಕ್ಕೆ ಕೊಂಡೊಯ್ದಿದ್ದರು. ಪ್ರಸಕ್ತ ವರ್ಷದ ಐಪಿಎಲ್‌ ಆವೃತ್ತಿಯಲ್ಲೂ ಪ್ಲೇ ಆಫ್‌ ತಲುಪಿತ್ತು ಇನ್ನೂ 2022ರಲ್ಲಿ ಗುಜರಾತ್ ಟೈಟಾನ್ಸ್ (Gujarat Taitans) ತಂಡ ಸೇರಿದ್ದ ಹಾರ್ದಿಕ್ ಪಾಂಡ್ಯ ನಾಯಕನಾಗಿ ತಂಡದ ಚೊಚ್ಚಲ ಆವೃತ್ತಿಯಲ್ಲೇ ಪ್ರಶಸ್ತಿ ಗೆಲ್ಲುವಂತೆ ಮಾಡಿದ್ದರು. 2023ರ ಐಪಿಎಲ್‌ ಫೈನಲ್‌ನಲ್ಲಿ ಚೆನ್ನೈ ಸೂಪರ್‌…

Read More

ಬೆಳಗಾವಿ:- ಜಿಲ್ಲೆಯ ಗೋಕಾಕ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿ ತಡರಾತ್ರಿ ಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ 7 ಜನರು ಗಂಭೀರ ಗಾಯಗೊಂಡಿರುವ ಘಟನೆ ಜರುಗಿದೆ. ನಿರ್ವಾಣಿ, ಅಶೋಕ ನಿರ್ವಾಣ, ಸೋಮನಗೌಡ, ದೀಪಾ, ನವೀನ , ವಿದ್ಯಾ ,ಬಸನಗೌಡ ನಿರ್ವಾಣಿ ಗಾಯಗೊಂಡವರು. ಘಟನೆಯಲ್ಲಿ ಇಬ್ಬರಿಗೆ ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ‌ದಾಖಲಿಸಲಾಗಿದೆ, ಇನ್ನುಳಿದವರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿ ಅಡುಗೆ ತಯಾರಿಸಿ ಊಟ ಮಾಡಿ ಲೈಟ್ ಆಫ್ ಮಾಡಿ ಮಲಗಿರುವ ಕುಟುಂಬ ಮಧ್ಯರಾತ್ರಿ ಗ್ಯಾಸ್ ಸೋರಿಕೆ ಆಗಿರೋ ವಾಸನೆ ಬಂದಿದೆ. ಹೀಗಾಗಿ ಅಡುಗೆ ಮನೆಯಲ್ಲಿ ಗ್ಯಾಸ್ ಇಟ್ಟಕ್ಕೆ ಜಾಗಕ್ಕೆ ತೆರಳಲು ಮೊಬೈಲ್ ಬ್ಯಾಟರಿ ಆನ್ ಮಾಡಿದ್ದಾರೆ ಗ್ಯಾಸ್ ಬಳಿ ಹೋದಾಗ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ.

Read More

ನವದೆಹಲಿ:- ಪತಿಯೊಬ್ಬ ಸಿಟ್ಟಿಗೆದ್ದು ಒಂದು ವರ್ಷವಲ್ಲ, ಎರಡು ವರ್ಷವಲ್ಲ 20 ವರ್ಷಗಳಿಂದ ಪತ್ನಿಯೊಂದಿಗೆ ಮಾತನಾಡಿರಲಿಲ್ಲ. 20 ವರ್ಷಗಳ ಕಾಲ ಮಾತನಾಡದೇ ಸುಮ್ಮನಿದ್ದನೆ ಇರುವಷ್ಟು ಗಂಡನಿಗೆ ಯಾಕೆ ಇಷ್ಟೊಂದು ಕೋಪ ಬಂತು ಎಂದು ಆಶ್ಚರ್ಯ ಪಡುತ್ತೀರಾ?.. ಜಪಾನ್‌ನಲ್ಲಿ ಈ ವಿಚಿತ್ರ ಘಟನೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ… ಒಟೌ ಕಟಯಾಮ ಎನ್ನುವ ವ್ಯಕ್ತಿ ತಮ್ಮ ಪತ್ನಿ ಯುಮಿ ಮತ್ತು ಮೂವರು ಮಕ್ಕಳೊಂದಿಗೆ ದಕ್ಷಿಣ ಜಪಾನ್‌ನಲ್ಲಿ ವಾಸವಾಗಿದ್ದಾರೆ. ಒಟೌ ಅವರು 20 ವರ್ಷಗಳ ಹಿಂದೆ ಪತ್ನಿ ಯುಮಿ ಮೇಲೆ ಕೋಪಗೊಂಡಿದ್ದರು. ಅಂದಿನಿಂದ ಅಂದರೆ ಕಳೆದ 20 ವರ್ಷಗಳಿಂದ ಆತ ತನ್ನ ಪತ್ನಿಯೊಂದಿಗೆ ಮಾತನಾಡಿಲ್ಲ. ಆಶ್ಚರ್ಯದ ಸಂಗತಿಯೆಂದರೆ ಓಟೌ ತನ್ನ ಮಕ್ಕಳೊಂದಿಗೆ ಮಾತನಾಡುತ್ತಾನೆ.. ತನ್ನ ಹೆಂಡತಿಯೊಂದಿಗೆ ಒಂದೇ ಒಂದು ಮಾತಿಲ್ಲ. ಇಂಗ್ಲಿಷ್ ವೆಬ್‌ಸೈಟ್ ಮಿರರ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ತಮ್ಮ ಹೆಂಡತಿಯೊಂದಿಗೆ ಏಕೆ ಮಾತನಾಡುತ್ತಿಲ್ಲ ಎಂದು ಕೇಳಿದಾಗ ಓಟೌ ಅವರು ಮೌನಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಅವನು ‘ಸಂಕಷ್ಟ’ ಎಂದು ಉತ್ತರಿಸಿದನು ಏಕೆಂದರೆ ಅವನ ಹೆಂಡತಿ ತಮ್ಮ ಮಕ್ಕಳ…

Read More

ವಿಷ್ಣುವರ್ಧನ್ ಅಂತ್ಯ ಸಂಸ್ಕಾರವಾದ ಜಾಗದಲ್ಲಿ ಪುಣ್ಯಭೂಮಿ ಆಗಬೇಕು ಎಂದು ವಿಷ್ಣು ಅಭಿಮಾನಿಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ ವಿಷ್ಣುವರ್ಧನ್ ಅಭಿಮಾನಿಗಳೆಲ್ಲರೂ ಸೇರಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ವಿಷ್ಣು ಅಭಿಮಾನಿಗಳ ಹೋರಾಟಕ್ಕೆ ನಟ ಡಾಲಿ ಧನಂಜಯ ಬೆಂಬಲ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದ ಮೇರು ನಟರು, ಹಿರಿಯಣ್ಣರಲ್ಲಿ ಒಬ್ಬರಾದ ಡಾ.ವಿಷ್ಣು ಸರ್ ಪುಣ್ಯಭೂಮಿಗೆ ರಾಜಧಾನಿಯಲ್ಲಿ ಅಂಗೈಯಗಲ ಜಾಗವಿಲ್ಲವೆಂಬುದು ಯಾಕೋ ಅರಗಿಸಿಕೊಳ್ಳಲಾಗುತ್ತಿಲ್ಲ. ಸರ್ಕಾರ ಕೂಡಲೇ ಡಾ.ವಿಷ್ಣು ಸರ್ ಪುಣ್ಯಭೂಮಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುವೆ. ಅವರ ಅಭಿಮಾನಿಗಳ ಹೋರಾಟದಲ್ಲಿ ನಾನೂ ಇದ್ದೇನೆ. ಈ ವಿಷಯ ಬೇಗ ಸುಖಾಂತ್ಯ ಕಾಣಲಿ. ಎಂದು ಟ್ವೀಟ್ ಮಾಡುವ ಮೂಲಕ ತಮ್ಮ ಬೆಂಬಲ ಸೂಚಿಸಿದ್ದಾರೆ

Read More