ವೀಕೆಂಡ್ ನಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಸಾಂಪ್ರದಾಯಿಕವಾಗಿ, ಹಣದುಬ್ಬರ ಹೆಚ್ಚಾದಂತೆ, ಚಿನ್ನದ ಬೇಡಿಕೆಯು ಹೆಚ್ಚಾಗುತ್ತದೆ, ಹೂಡಿಕೆದಾರರು ಸುರಕ್ಷಿತ ಸ್ವತ್ತುಗಳನ್ನು ಹುಡುಕುತ್ತಾರೆ. ಆದಾಗ್ಯೂ, ಹೆಚ್ಚಿನ ಹಣದುಬ್ಬರದ ಅವಧಿಯಲ್ಲಿ ಚಿನ್ನದ ಬೆಲೆಗಳು ಏರಿಳಿತಗಳನ್ನು ಪ್ರದರ್ಶಿಸಬಹುದು. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,300 ರೂ. 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,510ರೂ. ಬೆಳ್ಳಿ ಬೆಲೆ 1 ಕೆಜಿ: 75,500 ರೂ. ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 57,750ರೂಪಾಯಿ ಇತ್ತು. ಆದರೆ ಇಂದು 57,300 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 450 ರೂಪಾಯಿ ಇಳಿಕೆಯಾಗಿದೆ. ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 63,000ರೂಪಾಯಿ ಇತ್ತು. ಆದರೆ ಇಂದು 62,510 ರೂಪಾಯಿ ಆಗಿದೆ. ನಿನ್ನೆ…
Author: AIN Author
ಬೆಂಗಳೂರು:- ವಿದೇಶಿ ಡ್ರಗ್ ಪೆಡ್ಲರ್ ಜೊತೆ ಕನ್ನಡದ ಕೆಲ ಕಿರುತೆರೆ ನಟ- ನಟಿಯರು ನಿತಂತರ ಸಂಪರ್ಕದಲ್ಲಿದ್ದರು ಎಂಬುದು ಸಿಸಿಬಿ ಪೊಲೀಸರ ತನಿಖೆ ವೇಳೆ ಬಯಲಾಗಿದೆ ಈ ಹಿಂದೆ ಸಹ ಡ್ರಗ್ ಜಾಲದಲ್ಲಿ ಸ್ಯಾಂಡಲ್ವುಡ್ ನಟ- ನಟಿಯರ ಹೆಸರು ಕೇಳಿ ಬಂದಿತ್ತು. ಹೀಗಾಗಿ ಪೊಲೀಸರು ಕೆಲ ನಟ-ನಟಿಯರನ್ನು ವಿಚಾರಣೆ ನಡೆಸಿದ್ದರು.ಈಗ ಮತ್ತೆ ಬಣ್ಣದ ಜಗತ್ತಿಗೆ ಡ್ರಗ್ ಜಾಲದ ನಂಟು ಇರುವುದು ಗೊತ್ತಾಗಿದೆ. ಕೆಲ ದಿನಗಳ ಹಿಂದೆ ಡ್ರಗ್ ಪೆಡ್ಲರ್ ಬಂಧಿಸಿದ್ದ ಸಿಸಿಬಿ ಪೊಲೀಸರು ತನಿಖೆ ವೇಳೆ ಪೆಡ್ಲರ್ ಮೊಬೈಲ್ ಪರಿಶೀಲನೆ ವೇಳೆ ಬಣ್ಣದ ಲೋಕದ ನಂಟು ಬಯಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಲಿಯೋನಾರ್ಡ್ ಒಕುವೊಡ್ಲಿ ಎಂಬಾತ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 16 ಕೋಟಿ ಮೌಲ್ಯದ ಎಂಡಿಎಂಎ, 5 ಕೋಟಿ ಮೌಲ್ಯದ ಎಂಡಿಎಂಎ ಸೀಜ್ ಮಾಡಲಾಗಿತ್ತು. ಹೊಸ ವರ್ಷದ ಸಂಭ್ರಮಾಚಣೆ ವೇಳೆ ಡ್ರಗ್ ಮಾರಲು ಈತ ಪ್ಲಾನ್ ಮಾಡಿಕೊಂಡಿದ್ದ. ಇನ್ನೂ…
ಸಲಾರ್ ಸಿನಿಮಾ ರಿಲೀಸ್ ಬೆನ್ನಲ್ಲೇ ನಿರ್ದೇಶಕ ಪ್ರಶಾಂತ್ ನೀಲ್ ಅವರನ್ನು ಹಾಡಿಹೊಗಳಿದ್ದಾರೆ ನಟ ಪ್ರಭಾಸ್. ನಿರ್ದೇಶಕರ ಕಾರ್ಯ ವೈಖರಿಗೆ ಪ್ರಭಾಸ್ ಫಿದಾ ಆಗಿದ್ದಾರೆ. ಪ್ರಶಾಂತ್ ಜೊತೆ ಕೆಲಸ ಮಾಡಲು ಯಾವಾಗಲೂ ನಾನು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ. ಇಡೀ ವಿಶ್ವವೇ ಇದರತ್ತ ನೋಡುತ್ತಿದೆ. ಮೂರು ವರ್ಷದಿಂದ ಕಾಯುತ್ತಿದ್ದ ಗಳಿಗೆ ಹತ್ತಿರವಾಗಿದೆ. ಕಾರಣ ಸಲಾರ್ (Salaar) ಅಬ್ಬರಿಸಲು ಸಜ್ಜಾಗಿದೆ. ಈ ಹೊತ್ತಲ್ಲಿ ಹಲವು ರಹಸ್ಯ ಬಿಚ್ಚಿಟ್ಟಿದ್ದಾರೆ ಕ್ಯಾಮೆರಾಮನ್ ಭುವನ್ ಗೌಡ. ಯರ‍್ಯಾರೊ ಏನೇನೊ ಅಂದುಕೊಂಡಿದ್ದು ಸುಳ್ಳು. ಇದು ಸತ್ಯ ಎಂದು ಗುಡುಗಿದ್ದಾರೆ. ಏನಿದು ಸಲಾರ್ ಅಪರೂಪದ ಸಮಾಚಾರ ಇಲ್ಲಿದೆ ನೋಡಿ. ಬರೀ ಪ್ರಭಾಸ್ (Prabhas) ಫ್ಯಾನ್ಸ್ ಮಾತ್ರ ಅಲ್ಲ, ಇಡೀ ವಿಶ್ವವೇ ಸಲಾರ್‌ಗಾಗಿ ಕಾಯುತ್ತಿದೆ. ಒಂದು ಕಡೆ ಪ್ರಶಾಂತ್ ನೀಲ್ ಏನು ಮಾಡಲಿದ್ದಾರೆ ಎನ್ನುವ ಕುತೂಹಲ ಇನ್ನೊಂದು ಕಡೆ ಪ್ರಭಾಸ್ ಕಾಂಬಿನೇಶನ್ ಹೆಂಗೆ ಕಿಕ್ ಏರಿಸುತ್ತದೆ ಎನ್ನುವ ಹಂಬಲ. ಎರಡೂ ಸೇರಿ ಸಲಾರ್‌ಗೆ ಭೂಮಿ ತೂಕದ ಬಲ ತಂದುಕೊಟ್ಟಿದೆ. ಈ ಹೊತ್ತಲ್ಲಿ ಕ್ಯಾಮೆರಾಮನ್ ಭುವನ್…
ಬೆಂಗಳೂರು:- ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಪೋಷಕರು ಹೇಳಿದ ಕಥೆ ಕೇಳಿದರೆ ಎಂಥವರಿಗೂ ಕರುಳು ಹಿಂಡುವಂತೆ ಮಾಡುತ್ತದೆ. ಕಾರು ಹತ್ತಿರುವ ವಿಚಾರ ತಿಳಿಯದೇ ಮಗುವನ್ನು ಹಿಡಿದು ಪೋಷಕರು ನಾಲ್ಕು ಆಸ್ಪತ್ರೆ ಸುತ್ತಿದ್ದಾರೆ. ಕೈಯಲ್ಲಿ ಹಣವಿಲ್ಲದೇ ಅಸಹಾಯಕರಾಗಿ ಆಸ್ಪತ್ರೆ ಸುತ್ತಾಡಿದ್ದರು. ಆದರೂ ಕೂಡ ಖಾಸಗಿ ಆಸ್ಪತ್ರೆ ವೈದ್ಯರು ಮಾನವೀಯತೆ ಮರೆತ್ರಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಕೈಯಲ್ಲಿ ಹಣವಿಲ್ಲದೇ ಅಸಹಾಯಕರಾಗಿ ಆಸ್ಪತ್ರೆ ಸುತ್ತಾಡಿದ್ದರು. ಸಾವು ಬದುಕಿನ ನಡುವೆ ಹೋರಾಡ್ತಿದ್ದ ಮಗುವಿಗೆ ಚಿಕಿತ್ಸೆ ನೀಡಲು 30 ಸಾವಿರ ಹಣವನ್ನು ಖಾಸಗಿ ಆಸ್ಪತ್ರೆ ಸಿಬ್ವಂದಿ ಕೇಳಿದ್ದರು. ಅಸಹಾಯಕರಾಗಿ ಸಂಜಯ್ ಗಾಂಧಿ ಆಸ್ಪತ್ರೆಗೆ ಪೋಷಕರು ಕೊಂಡೊಯ್ದಿದ್ದಾರೆ. ಅಲ್ಲಿಂದ ನಿಮ್ಹಾನ್ಸ್ ಕೊಂಡೊಯ್ಯುವಷ್ಟರಲ್ಲಿ ಬಾಲಕಿ ಪ್ರಾಣ ಬಿಟ್ಟಿದ್ದಾಳೆ. ತಂದೆ ಮಡಿಲಲ್ಲಿ ನರಳುತ್ತಾ ಮೂರು ವರ್ಷದ ಕಂದಮ್ಮ ಪ್ರಾಣ ಬಿಟ್ಟಿದೆ. ನಾಲ್ಕು ಆಸ್ಪತ್ರೆಯಲ್ಲಿ ಒಬ್ಬರಾದ್ರು ಸರಿಯಾಗಿ ಗಮನಿಸಿದ್ರೆ ಪುಟ್ಟ ಕಂದಮ್ಮನ ಜೀವ ಉಳಿತಿತ್ತು ಎಂಬ ಮಾತುಗಳು ಕೇಳಿ ಬಂದಿದೆ.
ಮೈಸೂರು: ಜಾತಿಗಣತಿ ವರದಿಯನ್ನು ಎರಡು ಪ್ರಬಲ ಸಮುದಾಯಗಳು ವಿರೋಧಿಸುತ್ತಿವೆ. ಜಾತಿಗಣತಿಯಿಂದ ಮಾತ್ರ ವೈಜ್ಞಾನಿಕವಾಗಿ ಮೀಸಲಾತಿ ನೀಡಲು ಸಾಧ್ಯ. ಯಾವ ಜನಾಂಗ ಎಷ್ಟಿದ್ದಾರೆ ಎಂದು ತಿಳಿಯಬೇಕು ಎಂದಾದರೆ ಜಾತಿಗಣತಿ ವರದಿಯನ್ನು ಸ್ವೀಕರಿಸಬೇಕು ಎಂದು ಎಎಪಿ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಶನಿವಾರ ಒತ್ತಾಯಿಸಿದರು. ಮೈಸೂರಿನಲ್ಲಿ ನಡೆದ ಮೈಸೂರು ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, 1931ರ ಬಳಿಕ ದೇಶದಲ್ಲಿ ಜಾತಿಗಣತಿ ಆಗಿಯೇ ಇಲ್ಲ. ಆಯಾ ಸರ್ಕಾರಗಳು ಅನುಕೂಲಕ್ಕೆ ತಕ್ಕಂತೆ ಮೀಸಲಾತಿ ನೀಡುತ್ತಾ ಬಂದಿವೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ, ಮುಸ್ಲಿಂರಿಗೆ ಸದ್ಯ ಯಾವುದೇ ತೊಂದರೆ ಆಗಿಲ್ಲ. ಏಕೆಂದರೆ ಜನಗಣತಿ ವೇಳೆಯಲ್ಲಿಯೇ ಆ ಸಮುದಾಯ ಎಷ್ಟಿದೆ ಎಂಬ ಅಂಕಿಅಂಶಗಳು ಸಿಕ್ಕಿವೆ. ಇಲ್ಲಿ ತೊಂದರೆಗೆ ಒಳಗಾಗಿರುವವರು, ಪ್ರವರ್ಗ 1 ಮತ್ತು ಪ್ರವರ್ಗ 2ಎ ಅಡಿಯಲ್ಲಿ ಬರುವ ಜಾತಿಗಳು. ಈ ವರ್ಗದಲ್ಲಿ ಕುರುಬರು, ಈಡಿಗರನ್ನು ಸೇರಿಸಿ 197 ಜಾತಿಗಳಿವೆ. ಈ ಜಾತಿಗಳಲ್ಲಿ ಜನಸಂಖ್ಯೆ ಎಷ್ಟಿದೆ ಎಂಬುದು ತಿಳಿಯದೇ ಮೀಸಲಾತಿ ನೀಡಲಾಗುತ್ತಿದೆ ಎಂದು…
‘ಲಿಯೋ’ (Leo Film) ಸಿನಿಮಾ ನಿರ್ಮಾಪಕರು ಇದೀಗ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಲೇಡಿ ಸೂಪರ್ ಸ್ಟಾರ್ ನಯನತಾರಾ ಪತಿ ವಿಘ್ನೇಶ್ ಶಿವನ್ ಜೊತೆ ‘ಲಿಯೋ’ ಟೀಮ್ ಕೈಜೋಡಿಸಿದೆ. ತಮಿಳಿನ ಈ ಸಿನಿಮಾಗೆ ಕನ್ನಡದ ನಟಿಗೆ ಹೀರೋಯಿನ್ ಆಗಿದ್ದಾರೆ. ಸಾಲು ಸಾಲು ಫ್ಲಾಪ್ ನಂತರ ಕರಾವಳಿ ನಟಿ ಕೃತಿ ಶೆಟ್ಟಿ (Krithi Shetty) ಅವರು ತಮಿಳು ಚಿತ್ರರಂಗದತ್ತ ಮುಖ ಮಾಡಿದ್ದಾರೆ. ವಿಘ್ನೇಶ್ ಶಿವನ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಕೃತಿ ಶೆಟ್ಟಿ ನಾಯಕಿಯಾಗಿ ಫೈನಲ್ ಆಗಿದ್ದಾರೆ. ಒಂದು ವಿಭಿನ್ನ ಪ್ರೇಮಕಥೆಗೆ ನಟಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಚಿತ್ರದ ಮುಹೂರ್ತ ಸಮಾರಂಭ ಇಂದು (ಡಿ.15) ನೆರೆವೇರಿದ್ದು, ಹೀರೋ ಆಗಿ ‘ಲವ್ ಟುಡೇ’ ನಟ ಪ್ರದೀಪ್ (Pradeep) ಆಯ್ಕೆ ಆಗಿದ್ದಾರೆ. ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ ರವಿಚಂದರ್ ಸಂಗೀತ ನೀಡಲಿದ್ದಾರೆ
ಬೆಂಗಳೂರು:- ದೇವರನಾಡು ಕೇರಳಾದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ಹೀಗಾಗಿ ನಮ್ಮಲಿಯೂ ಕೊರೊನಾ ಆತಂಕ ಮತ್ತೆ ಶುರುವಾಗಿದೆ. ಕಳೆದ ಮೂರು ವರ್ಷದಿಂದ ಭಾರತದಲ್ಲಿ ಮೊದಲ ಪ್ರಕರಣ ಕೇರಳದಲ್ಲೇ ಕಂಡು ಬಂದಿತ್ತು. ಈಗ ಮತ್ತೆ ಅದೇ ರಾಜ್ಯದಲ್ಲಿ ಸಂಕ್ರಾಮಿಕ ರೋಗದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ನಿರಂತರ ಮುಂಜಾಗ್ರತೆ ವಹಿಸುವಂತೆ ಸೂಚನೆಗಳನ್ನು ಕೇಂದ್ರ ಆರೋಗ್ಯ ಇಲಾಖೆ ನೀಡಿದೆ. ಕೇರಳದಲ್ಲಿನ ಕೊರೊನಾ ಏರಿಕೆ ಆತಂಕ ರಾಜ್ಯಕ್ಕೆ ಡವ ಡವ ಶುರುವಾಗಿದೆ. ಈಗಾಗಲೇ ಸಿಂಗಾಪುರ, ಮಲೇಷ್ಯಾ ಮತ್ತು ಇಂಡೋನೇಷ್ಯಾ ಸೇರಿದಂತೆ ಆಗ್ನೇಯ ಏಷ್ಯಾದ ದೇಶಗಳಲ್ಲಿ ಕೊರೊನಾ ಪ್ರಕರಣಗಳು ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ ಈ ನಡುವೆ ಕೇರಳದಲ್ಲೂ ಕೊರೊನಾ ಏರಿಕೆ ಕಂಡಿದೆ. ಓಮಿಕ್ರಾನ್‌ನ ಉಪ ತಳಿಯಾದ ಜೆಎನ್.1 ಹೆಚ್ಚಳವು ಪಕ್ಕದ ರಾಜ್ಯ ಕೇರಳದಲ್ಲಿ ಈಗ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಮ್ಮಲ್ಲಿಯೂ ಕೊರೊನಾ ಏರಿಕೆಯ ಆತಂಕ ಶುರುವಾಗಿದೆ. ಜೆಎನ್.1 ಲಕ್ಷಣಗಳು? ಜ್ವರ, ಕೆಮ್ಮು, ಸುಸ್ತು, ಮೂಗು ಕಟ್ಟುವಿಕೆ, ಸ್ರವಿಸುವ ಮೂಗು, ಅತಿಸಾರ ಮತ್ತು ತಲೆನೋವು. ಕೇರಳದಲ್ಲಿ…
ಬೆಂಗಳೂರು: ಕಾರ್ಯನಿರ್ವಹಣೆಯ ಸಂದರ್ಭದಲ್ಲಿ ಪೈಲಟ್‌ಗಳಿಗೆ ದಿಕ್ಕು ತಪ್ಪಿಸುವುದನ್ನು ತಡೆಯಲು ಫೈಟರ್‌ಜೆಟ್‌ಗಳಿಗೆ ಶೀಘ್ರದಲ್ಲೇ ಡಿಜಿಟಲ್ ನಕ್ಷೆ (India Made Digital Maps) ಗಳನ್ನು ಅಳವಡಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಸಜ್ಜಾಗಿರುವುದಾಗಿ ಹೆಚ್‌ಎಎಲ್‌ನ ಉನ್ನತ ಅಧಿಕಾರಿ ತಿಳಿಸಿದ್ದಾರೆ. ಡಿಜಿಟಲ್ ನಕ್ಷೆ (Digital Maps) ಹೊಂದುವುದರಿಂದ ಪೈಲಟ್‌ಗಳು ಅಚಾನಕ್ಕಾಗಿ ಗಡಿ ದಾಟುವುದಿಲ್ಲ. ಗ್ರೂಪ್ ಕ್ಯಾಪ್ಟನ್ ಅಭಿನಂದನ್ ಅವರ ರೀತಿ ಮತ್ತೊಂದು ಘಟನೆ ಸಂಭವಿಸಬಾರದು. ಅದಕ್ಕಾಗಿ ಈ ಡಿಜಿಟಲ್ ನಕ್ಷೆಯನ್ನು ಸಿದ್ಧಪಡಿಸಲಾಗಿದೆ. ಇನ್ಮುಂದೆ ಅವರು ತಮ್ಮ ಕೈಯಲ್ಲಿ ಮ್ಯಾಪ್ ಹಿಡಿದಿಟ್ಟುಕೊಳ್ಳುವ ಅಗತ್ಯವಿರುವುದಿಲ್ಲ ಎಂದು ಹೆಚ್‌ಎಎಲ್‌ನ ಎಂಜಿನಿಯರಿಂಗ್ ಮತ್ತು ಆರ್&ಡಿ ವಿಭಾಗದ ನಿರ್ದೇಶಕ ಡಿ.ಕೆ ಸುನೀಲ್ ಹೇಳಿದ್ದಾರೆ. ಡಿಜಿಟಲ್ ನಕ್ಷೆಯಿಂದ ಏನು ಅನುಕೂಲ? ಡಿಜಿಟಲ್ ನಕ್ಷೆಯಿಂದ ವಿಮಾನ ಹಾರಾಟ ಸಂದರ್ಭದಲ್ಲಿ ಪೈಲಟ್‌ಗಳು ಕಾಕ್‌ಪಿಟ್ ಡಿಸ್‌ಪ್ಲೇನಲ್ಲಿ (Cockpit Display) ನಕ್ಷೆಯನ್ನು ಪರಿಶೀಲಿಸಬಹುದು. 2ಡಿ ಮತ್ತು 3ಡಿ ರೂಪದಲ್ಲಿ ನಕ್ಷೆ ಲಭ್ಯವಿರಲಿದ್ದು, ಪೈಲಟ್‌ಗಳು ಗುಡ್ಡಗಾಡು ಪ್ರದೇಶದಲ್ಲಿದ್ದರೆ ಮೊದಲೇ ಎಚ್ಚರಿಸುತ್ತದೆ. ಹಾಗಾಗಿ ಎತ್ತರದ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಉಂಟಾಗುವ ಅಪಘಾತಗಳನ್ನು ತಡೆಯಲು…
ರಿಲಯನ್ಸ್ ಜಿಯೋದಿಂದ (Reliance Jio) ಈಗ ಜಿಯೋಟಿವಿ ಪ್ರೀಮಿಯಂ ಪ್ಲ್ಯಾನ್‌ಗಳನ್ನು (JioTV Premium Plans) ಪರಿಚಯಿಸಲಾಗುತ್ತಿದೆ. ಜಿಯೋ ಪ್ರೀಪೇಯ್ಡ್ ಬಳಕೆದಾರರು ಈಗ ಜಿಯೋಟಿವಿ ಪ್ರೀಮಿಯಂ ಪ್ಲ್ಯಾನ್‌ಗಳ ಜೊತೆಗೆ ನಿರಂತರ ಮನರಂಜನೆ ಆನಂದಿಸಬಹುದು. ಮಾಸಿಕ, ತ್ರೈಮಾಸಿಕ ಹಾಗೂ ವಾರ್ಷಿಕ ಪ್ಲ್ಯಾನ್‌ಗಳು ಇರಲಿದ್ದು, ಇದರ ಮೂಲಕ ಅನಿಯಮಿತ ಡೇಟಾ, ಧ್ವನಿ, ಎಸ್‌ಎಂಎಸ್ ಹಾಗೂ 14 ಪ್ರಮುಖ OTT (ಓವರ್ ದಿ ಟಾಪ್)ಗಳಿಗೆ ಚಂದಾದಾರಿಕೆ ಪಡೆಯಬಹುದು. 1,000 ರೂ. ಮೌಲ್ಯದ ಒಟಿಟಿ ಚಂದಾದಾರಿಕೆ ಯಾವುದೇ ಹೆಚ್ಚುವರಿ ಶುಲ್ಕ ಇಲ್ಲದೇ ಇದು ಲಭ್ಯವಾಗಲಿದೆ. ಪ್ಲ್ಯಾನ್‌ಗಳು ತಿಂಗಳಿಗೆ 398 ರೂ.ನೊಂದಿಗೆ ಆರಂಭವಾಗುತ್ತದೆ. ಅಂದ ಹಾಗೆ ಈ 14 OTT ಗಳಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಹಾಗೂ ಪ್ರಾದೇಶಿಕ ಕಂಟೆಂಟ್ ಲಭ್ಯವಾಗುತ್ತದೆ. ಡಿಜಿಟಲ್ ಟಿವಿ, ಕ್ರೀಡಾ, ಒರಿಜಿನಲ್ಸ್, ಟೀವಿ ಶೋಗಳು ಮುಂತಾದವು ದೊರೆಯುತ್ತವೆ. ಪ್ರೀಪೇಯ್ಡ್ ಸೆಗ್ಮೆಂಟ್‌ನಲ್ಲಿ ವಾರ್ಷಿಕ ಪ್ಲ್ಯಾನ್ ಖರೀದಿ ಮಾಡುವಂಥ ಗ್ರಾಹಕರಿಗಾಗಿಯೇ ಒನ್ ಕ್ಲಿಕ್ ಕಾಲ್ ಸೆಂಟರ್ ಬೆಂಬಲ ಸಹ ದೊರೆಯುತ್ತದೆ. ಯಾವ್ಯಾವ ಆ್ಯಪ್‌ಗಳು ದೊರೆಯುತ್ತವೆ? ರಾಷ್ಟ್ರೀಯ ಆ್ಯಪ್‌ಗಳು: ಜಿಯೋಸಿನಿಮಾ (JioCinema)…
ಕನ್ನಡದ ಹೆಸರಾಂತ ನಟ ದರ್ಶನ್ (Darshan) ಅವರ ಸಿನಿಮಾರಿಲೀಸ್ ಆಗುವ ವೇಳೆಯಲ್ಲೇ ಬೇಕು ಅಂತಾನೇ ಕೆಲವರು ನೆಗೆಟಿವ್ ಟ್ರೋಲ್ (Troll) ಮಾಡುತ್ತಾರೆ. ಈ ಬಾರಿಯೂ ಕಾಟೇರ (Katera)ಕುರಿತಾಗಿ ಟ್ರೋಲ್ ಮಾಡಲಾಗುತ್ತಿದೆ. ಈ ಕುರಿತಂತೆ ದರ್ಶನ್ ಫ್ಯಾನ್ಸ್ ಗರಂ ಆಗಿದ್ದಾರೆ. ನೆಗೆಟಿವ್ ಟ್ರೋಲ್ ಮಾಡುವವರನ್ನು ಹುಡುಕುವ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಕನ್ನಡ ಸಿನಿಮಾ ಕುರಿತಂತೆ ದರ್ಶನ್ ಮೊನ್ನೆಯಷ್ಟೇ ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದಾರೆ. ನಮ್ಮದು ಪ್ಯಾನ್ ಇಂಡಿಯಾ ಸಿನಿಮಾವಲ್ಲ, ಅಪ್ಪಟ ಕನ್ನಡ ಸಿನಿಮಾ. ನಮ್ಮ ನೆಲದಲ್ಲಿ ಬೇರೆ ಸಿನಿಮಾಗಳು ರಿಲೀಸ್ ಆಗೋಕೆ ಭಯ ಪಡಬೇಕು. ನಾವೇಕೆ ಭಯ ಪಡಬೇಕು ಎಂದೆಲ್ಲ ಮಾತನಾಡಿದ್ದಾರೆ. ಈ ಕುರಿತಂತೆಯೂ ಟ್ರೋಲ್ ಮಾಡಲಾಗುತ್ತಿದೆ. ನಾನಾ ಕಾರಣಗಳಿಂದಾಗಿ ಕಾಟೇರ ಸಿನಿಮಾ ನಿರೀಕ್ಷೆ ಮೂಡಿಸಿದೆ. ಇವತ್ತು ಸಿನಿಮಾದ ಟ್ರೈಲರ್ ಕೂಡ ಬಿಡುಗಡೆ ಆಗುತ್ತಿದೆ. ಅದಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಸಿನಿಮಾದಲ್ಲಿ ದರ್ಶನ್ ಹೊಸ ಬಗೆಯ ಪಾತ್ರ ಮಾಡಿದ್ದು, ಆ ಪಾತ್ರವನ್ನು ನೋಡಲು ನೋಡುಗರು ಕಾಯುತ್ತಿದ್ದಾರೆ.