ಬಾಲಿವುಡ್ ಸೆಲಬ್ರಿಟಿಗಳು ಪೈಪೋಟಿಗೆ ಬಿದ್ದಂತೆ ಮಾರುಕಟ್ಟೆಯಲ್ಲಿರುವ ಲಭ್ಯವಿರುವ ಅತ್ಯಂತ ಐಷಾರಾಮಿ ಕಾರುಗಳನ್ನು ಖರೀದಿಸುತ್ತಾರೆ. ಸಿನಿಮಾ ರಂಗದ ನಟರಿಗೆ ಮಾತ್ರವಲ್ಲದೇ ನಟಿಯರಿಗೂ ಕೂಡ ಐಷಾರಾಮಿ ಕಾರುಗಳ ಬಗ್ಗೆ ಕ್ರೇಜ್ ಹೆಚ್ಚು ಇರುತ್ತದೆ. ಹೆಚ್ಚಾಗಿ ಐಷಾರಾಮಿ ಕಾರುಗಳಲ್ಲಿ ಓಡಾಡಲು ಇಷ್ಟ ಪಡುತ್ತಾರೆ. ಇದರಿಂದ ಮಾರುಕಟ್ಟೆಗೆ ಲಗ್ಗೆ ಇಡುವ ಹೊಸ ಐಷಾರಾಮಿ ಕಾರುಗಳನ್ನು ಖರೀದಿಸುವುದು ಸೆಲಬ್ರಿಟಿಗಳ ನಡುವೆ ಒಂದು ಟ್ರೆಂಡ್ ಆಗಿದೆ. ಅದರಲ್ಲಿಯೂ ಬಾಲಿವುಡ್ ನಟಿಯರು ಆಗ್ಗಾಗ ಐಷಾರಾಮಿ ಕಾರುಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಈ ವರ್ಷ ಬಾಲಿವುಡ್ ನಟಿಯರು ಖರೀದಿಸಿದ ಕಾರುಗಳ ಬಗ್ಗೆ ಮಾಹಿತಿ ಇಲ್ಲಿದೆ. ಶ್ರದ್ಧಾ ಕಪೂರ್: ಇತ್ತೀಚೆಗೆ ಬಾಲಿವುಡ್ ಖ್ಯಾತ ನಟಿ ಶ್ರದ್ಧಾ ಕಪೂರ್ ಭಾರತದಲ್ಲಿ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಹೊಚ್ಚಹೊಸ ಲ್ಯಾಂಬೋರ್ಗಿನಿ ಹುರಾಕನ್ ಖರೀದಿಸಿದ್ದಾರೆ. ಶ್ರದ್ಧಾ ಕಪೂರ್ ಅವರು 4.5 ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಹುರಾಕನ್ ಟೆಕ್ನಿ ಮಾದರಿಯನ್ನು ಖರೀದಿಸಿದ್ದಾರೆ. ಪೂಜಾ ಹೆಗ್ಡೆ: ಬಾಲಿವುಡ್, ಟಾಲಿವುಡ್ ಹಾಗೂ ಕಾಲಿವುಡ್ ಸಿನಿರಂಗದಲ್ಲಿ ಜನಪ್ರಿಯತೆ ಗಳಿಸಿರುವ ನಟಿ ಪೂಜಾ ಹೆಗ್ಡೆ (Pooja Hegde), ರೂ.4 ಕೋಟಿ…
Author: AIN Author
ನಟಿ ಅಭಿರಾಮಿ ದರ್ಶನ್ ಅಭಿನಯದ ಲಾಲಿಹಾಡು, ಶಿವರಾಜ್ಕುಮಾರ್ ನಟನೆಯ ಶ್ರೀರಾಮ್, ಉಪೇಂದ್ರ ಅವರ ರಕ್ತ ಕಣ್ಣೀರು ಮತ್ತು ಸುದೀಪ್ ಅಭಿನಯದ ಕೋಟಿಗೊಬ್ಬ 3 ಸೇರಿದಂತೆ ಕನ್ನಡ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಕನ್ನಡ, ತಮಿಳು ಹಾಗೂ ಮಲಯಾಳ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಿಗೆ ಬಣ್ಣ ಹಚ್ಚುತ್ತಿದ್ದಾರೆ. ಸ್ಟಾರ್ ನಟರೊಂದಿಗೆ ನಟಿಸಿರುವ ಅಭಿರಾಮಿ 1990-2000 ದಶಕದಲ್ಲಿ ಸ್ಟಾರ್ ನಟಿಯಾಗಿ ಮಿಂಚಿದರು ಕುಟುಂಬದ ಜತೆಗೆ ಸಿನಿಮಾ ವೃತ್ತಿಯನ್ನು ಮುಂದುವರಿಸಿರುವ ಅಭಿರಾಮಿ, ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ತಮ್ಮ ಇನ್ಸ್ಟಾಗ್ರಾಂನಲ್ಲಿ 2.9 ಲಕ್ಷ ಫಾಲೋವರ್ಸ್ ಹೊಂದಿದ್ದು, ಅಭಿಮಾನಿಗಳ ಜತೆ ನಿರಂತರ ಸಂಪರ್ಕದಲ್ಲಿ ಇರುತ್ತಾರೆ. ಆಗಾಗ ಸೆಲೆಬ್ರಿಟಿಗಳು ಇನ್ಸ್ಟಾಗ್ರಾಂನಲ್ಲಿ ಪ್ರಶ್ನೋತ್ತರ ಚಟುವಟಿಕೆ ನಡೆಸುವುದನ್ನು ನೀವು ನೋಡಿರುತ್ತೀರಿ. ಅದೇ ರೀತಿ ಅಭಿರಾಮಿ ಕೂಡ ಇತ್ತೀಚೆಗೆ ನೆವರ್ ಹ್ಯಾವ್ ಐ ಎವರ್ ಆವೃತ್ತಿಯ ಹೌದು ಅಥವಾ ಇಲ್ಲ ಎಂದು ಉತ್ತರಿಸುವ ಪ್ರಶ್ನೋತ್ತರ ಚಟುವಟಿಕೆ ನಡೆಸಿದರು. ಈ ವೇಳೆ ಆಸಕ್ತಿದಾಯಕ ಪ್ರಶ್ನೆಗಳಿಗೆ ಬೋಲ್ಡ್ ಆಗಿಯೇ ಉತ್ತರಿಸಿದ್ದಾರೆ. ಟಾಯ್ಲೆಟ್ನಲ್ಲಿ ಎಂದಾದರೂ ಬಿದ್ದಿದ್ದೀರಾ? ಬ್ರೇಕಪ್…
ಟೊಮೆಟೊಗಳನ್ನು ತಾಜಾವಾಗಿಡಲು ಜನರು ಅವುಗಳನ್ನು ಫ್ರಿಜ್‌ನಲ್ಲಿ ಸಂಗ್ರಹಿಸುತ್ತಾರೆ. ಈ ರೀತಿಯಾಗಿ ಅವು ಹಲವಾರು ವಾರಗಳವರೆಗೆ ಹಾಳಾಗುವುದಿಲ್ಲ. ಆದರೆ ಹಾಗೆ ಮಾಡುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು. ಟೊಮೆಟೊವನ್ನು ಫ್ರಿಜ್ ನಲ್ಲಿ ಇಡುವುದರಿಂದ ಅದರ ರೋಗಲಕ್ಷಣಗಳನ್ನು ಬದಲಾಯಿಸಬಹುದು. ಟೊಮೆಟೊಗಳನ್ನು ಫ್ರಿಜ್ ಇರಿಸಿ ತಿನ್ನಬಾರದು. ಟೊಮೆಟೊವನ್ನು ಫ್ರಿಜ್ ನಲ್ಲಿ ಇಡುವುದರಿಂದ ಅದರ ರುಚಿ ಮತ್ತು ವಾಸನೆ ಎರಡೂ ಬದಲಾಗುತ್ತದೆ. ಟೊಮೆಟೊವನ್ನು ಫ್ರಿಜ್ ನಲ್ಲಿ ಇಡುವುದರಿಂದ ಅದರಲ್ಲಿನ ಪದರಕ್ಕೆ ಹಾನಿಯಾಗುತ್ತದೆ. ಇದು ಟೊಮೆಟೊಗಳು ಬೇಗನೆ ಕೊಳೆಯಲು ಕಾರಣವಾಗುತ್ತದೆ. ಫ್ರಿಜ್ ನಲ್ಲಿ ಇಟ್ಟಿರುವ ಟೊಮೆಟೊ ಹಾನಿಕಾರಕ. ಟೊಮೆಟೊವನ್ನು ಫ್ರಿಜ್ನಲ್ಲಿ ಇಡುವುದರಿಂದ ದೇಹಕ್ಕೆ ಕೆಟ್ಟದಾದ ಟೊಮೆಟೊಯಿನ್ ಗ್ಲೈಕೋಲ್ಕಲಾಯ್ಡ್ಗಳು ಉತ್ಪತ್ತಿಯಾಗುತ್ತವೆ. ಅಂತಹ ಟೊಮೆಟೊಗಳನ್ನು ತಿನ್ನುವುದು ಕರುಳಿನ ಉರಿಯೂತ, ವಾಕರಿಕೆ, ವಾಂತಿ ಮತ್ತು ಅತಿಸಾರಕ್ಕೆ ಕಾರಣವಾಗಬಹುದು. ಇದು ಯಕೃತ್ತು ಮತ್ತು ಮೂತ್ರಪಿಂಡಗಳಿಗೆ ತುಂಬಾ ಕೆಟ್ಟದು. ನೀವು ಟೊಮೆಟೊಗಳನ್ನು ಕೋಣೆಯ ತಾಪಮಾನದಲ್ಲಿ ಸಂಗ್ರಹಿಸಬಹುದು.
ಕೆ.ಆರ್.ಪುರ: ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯವು ಸೆಮಿಕಂಡಕ್ಟರ್ ತಯಾರಿಕೆಯ “ಸೆಂಟರ್ ಆಫ್ ಎಕ್ಸಲೆನ್ಸ್” ತೆರೆದ ದೇಶದ ಪ್ರಪ್ರಥಮ ಶೈಕ್ಷಣಿಕ ಸಂಸ್ಥೆಯಾಗಿದ್ದು, ಕರ್ನಾಟಕ ಸರ್ಕಾರವು ಇದಕ್ಕೆ ಉತ್ತೇಜನ ನೀಡುವುದು ಹಾಗು ಜಾಗತಿಕ ಸೆಮಿಕಂಡಕ್ಟರ್ ತಯಾರಿಕಾ ಕಂಪನಿಗಳಿಂದ ಮುಂದಿನ ವರ್ಷಗಳಲ್ಲಿ 10 ಲಕ್ಷ ಸೆಮಿಕಂಡಕ್ಟರ್ ಚಿಪ್ ಡಿಸೈನರ್-ಗಳಿಗೆ ಬೇಡಿಕೆಯಿದೆ ಎಂದು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಐಟಿಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆಯವರು ತಿಳಿಸಿದರು. ಕೆ.ಆರ್.ಪುರ ಕ್ಷೇತ್ರದ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕೇಂದ್ರ ಸರ್ಕಾರದ ಅನುದಾನದಲ್ಲಿ ಸ್ಥಾಪಿತವಾಗಿರುವ ಸೆಮಿಕಂಡಕ್ಟರ್ ಚಿಪ್ ತಯಾರಿಕೆಯ ‘ಸೆಂಟರ್ ಆಫ್ ಎಕ್ಸಲೆನ್ಸ್” ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಬೆಂಗಳೂರು ಜಾಗತಿಕ ಮಟ್ಟದಲ್ಲಿ ನಾಲ್ಕನೇ ಅತಿದೊಡ್ಡ ತಂತ್ರಜ್ಞಾನ ಹಬ್ ಆಗಿ ಬೆಳೆದಿದ್ದು, ವರ್ಷಕ್ಕೆ ಸುಮಾರು 4.52 ಬಿಲಿಯನ್ ಡಾಲರ್ ಎಲಕ್ಟ್ರಾನಿಕ್ ಸಾಮಾಗ್ರಿಗಳು ರಫ್ತಾಗುತ್ತಿದೆ. ಭಾರತದ ಸಾಫ್ಟ್‌ರ್ ಅಭಿವೃದ್ಧಿಯಲ್ಲಿ ಕರ್ನಾಟಕದ ಪಾಲು ಶೇ. 63 ರಷ್ಟಿದೆ ಹಾಗು 50ಕ್ಕೂ ಹೆಚ್ಚು ಯೂನಿಕಾರ್ನ್ ಕಂಪನಿಗಳು ಬೆಂಗಳೂರಿನಲ್ಲಿಯೇ ಇವೆ. ಕರ್ನಾಟಕ ಸರ್ಕಾರವು 33 ದೇಶಗಳೊಂದಿಗೆ ಗ್ಲೋಬಲ್…
ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ 64ನೇ ಹುಟ್ಟುಹಬ್ಬ ಆಚರಣೆಗೆ ಇಂದು ರಾಜ್ಯದ ಗಣ್ಯವ್ಯಕ್ತಿಗಳಿಂದ ಶುಭಾಶಯದ ಮಾಹಾಪೂರವೇ ಹರಿದು ಬಂದಿತ್ತು ಈ ಹಿನ್ನೆಲೆಯಲ್ಲಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಎಲ್ಲರಿಗೂ ಟ್ವೀಟ್ ಮಾಡುವ ಮೂಲಕ ಧನ್ಯವಾದಗಳನ್ನ ತಿಳಿಸಿದ್ದಾರೆ. ಮೋದಿ ಅವರಿಗೆ ಧನ್ಯವಾದ ತಿಳಿಸಿದ ಮಾಜಿ ಮುಖ್ಯಮಂತ್ರಿ ಅವರು ಹಾಗೆ ತಮಗೆ ತುಂಬು ಹೃದಯದ ಧನ್ಯವಾದಗಳು ಸರ್. ನಿಮ್ಮ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಚಿರಋಣಿ ಆಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಕೃತಜ್ಞತೆ ಸಲ್ಲಿಸಿದರು. ಹಾಗೆ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ.ದೇವೇಗೌಡರು ಕುಮಾರಸ್ವಾಮಿ ಅವರನ್ನು ಹರಿಸಿದ್ದಾರೆ. ನನ್ನ ಪುತ್ರ, ಮಾಜಿ ಮುಖ್ಯಮಂತ್ರಿಗಳು ಹಾಗು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ನಿಮಗೆ ಉತ್ತಮ ಆರೋಗ್ಯ, ಆಯುಷ್ಯ ಕರುಣಿಸಿ ಸುಧೀರ್ಘ ಅವಧಿ ಜನಸೇವೆ ಮಾಡುವ ಅವಕಾಶವನ್ನು ನೀಡಲಿ ಎಂದು ಹಾರೈಸುತ್ತೇನೆ. ಶುಭವಾಗಲಿ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಸಿಎಂ ಗಳಾದ…
ತಿರುವನಂತಪುರಂ: ಕೇರಳದಲ್ಲಿ ಮಾರಕ ಕೊರೊನಾ ವೈರಸ್‌ಗೆ ವೃದ್ಧ ಬಲಿಯಾಗಿದ್ದು, ಕಳೆದ 48 ಗಂಟೆಗಳಲ್ಲಿ ಎರಡನೇ ಸಾವು ದಾಖಲಾಗಿದೆ. ಮಹಾಮಾರಿ ಕೊರೊನಾ ಮತ್ತೆ ದೇಶಕ್ಕೆ ವಕ್ಕರಿಸಿದೆ. ಹೋದೆಯಾ ಪಿಶಾಚಿ ಎಂದರೆ ಬಂದೆಯಾ ಗವಾಕ್ಷಿ ಎಂಬಂತೆ ಕೇರಳದಲ್ಲಿ ಹೊಸ ಕೊರೊನಾ ರೂಪಾಂತರ ಪತ್ತೆಯಾಗಿದೆ. ಚೀನಾದಲ್ಲಿ ಹರಡುತ್ತಿರುವ JN.1 ಸಬ್ ವೆರಿಯಂಟ್ ಕೇರಳದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದೆ. ಇದನ್ನು ಪಿರೋಲಾ ಅಥವಾ BA.2.86 ಎಂದು ಕರೆಯಲಾಗುತ್ತದೆ. 79 ವರ್ಷದ ಮಹಿಳೆಗೆ ಈ ಸೋಂಕು ತಗುಲಿದೆ. RT-PCR ಪರೀಕ್ಷೆಯಲ್ಲಿ ಕಳೆದ ಶುಕ್ರವಾರ ಪ್ರಕರಣ ಪತ್ತೆಯಾಗಿದ್ದು, ಇಂದು ಬೆಳಕಿಗೆ ಬಂದಿದೆ. ಈ ರೂಪಾಂತರ ವೇಗವಾಗಿ ಹರಡುತ್ತದೆ. ವ್ಯಕ್ತಿಯ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಕೋವಿಡ್ ಪ್ರಕರಣ ಹೆಚ್ಚಳ ಕೇವಲ ಒಂದು ತಿಂಗಳಲ್ಲಿ ಕೇರಳದಲ್ಲಿ ಕೋವಿಡ್ ಪ್ರಕರಣಗಳು 33 ರಿಂದ 768 ಕ್ಕೆ ಏರಿಕೆಯಾಗಿದ್ದು ಜನರಲ್ಲಿ ಆತಂಕವನ್ನು ಉಂಟುಮಾಡಿದೆ. ಈ ಜೆ1 ರೂಪಾಂತರದ ಲಕ್ಷಣಗಳು ಜ್ವರ, ಕೆಮ್ಮು, ಸುಸ್ತು, ಮೂಗು ಕಟ್ಟುವಿಕೆ, ಸ್ರವಿಸುವ ಮೂಗು, ಅತಿಸಾರ ಮತ್ತು…
ಹಾವೇರಿ: ಡಿಸೆಂಬರ್ 23 & 24 ರಂದು 24 ನೇ ಅಖಿತ ಭಾರತ ವೀರಶೈವ ಲಿಂಗಾತ ಮಹಾಸಭಾ ಅಧಿವೇಶನ ದಾವಣಗೆರೆಯಲ್ಲಿ ನೆಡೆಸಲಾಗುತ್ತಿದೆ ಅಂತಾ ಹಾವೇರಿ ಜಿಲ್ಲೆ ವೀರಶೈವ ಲಿಂಗಾತ ಸಮುದಾಯದ ಜಿಲ್ಲಾಧ್ಯಕ್ಷರು MS ಕೋರಿಶೆಟ್ಟರ್ ಹೇಳಿದರು. ಹಾವೇರಿ ನಗರದ ಪ್ರಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಾವಣಗೆರೆ ನಗರದ MBA ಕಾಲೇಜ್ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಬಾರಿ ಸಮುದಾಯದ ಅಧಿವೇಶನ ಅದ್ದೂರಿಯಾಗಿ ನಡೆಸಲಾಗುತ್ತಿದೆ. ರಾಜ್ಯದ ನಾನಾ ಜಿಲ್ಲೆಗಳಿಂದ ಲಕ್ಷಾಂತ ಸಂಖ್ಯೆಯಲ್ಲಿ ಭಾಗಿಯಾಗು ನಿರೀಕ್ಷೆ ಇದೆ. ಇನ್ನು ರಾಜ್ಯದ ನಾಯಕರು ಸಹ ಅಧಿವೇಶನದಲ್ಲಿ ಭಾಗಿಯಾಲಿದ್ದಾರೆ ಅಂತಾ ಜಿಲ್ಲಾಧ್ಯಕ್ಷರು MS ಕೋರಿಶೆಟ್ಟರ ಹೇಳಿದರು…
ಬೆಂಗಳೂರು: ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಸಿದ್ದರಾಮಯ್ಯ (Siddaramaiah) ಸಾಹೇಬರು ನಾಳೆ ಯತೀಂದ್ರ (Yatindra) ಅವರಿಗೆ ಟಿಪ್ಪು(Tippu) ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಹೇಳಿದೆ. ಕಾಂಗ್ರೆಸ್ (Congres) ಕೆಲ ಶಾಸಕರು ಟಿಪ್ಪು ಜಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ ಸರ್ಕಾರಕ್ಕೆ ಬಿಜೆಪಿ ಟಾಂಗ್ ನೀಡಿದೆ. ಪೋಸ್ಟ್‌ನಲ್ಲಿ ಏನಿದೆ? ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ರೂ. ಕೊಡುತ್ತಿರುವ ಸಿದ್ದರಾಮಯ್ಯನವರು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು – ಮೈಸೂರಿನಲ್ಲಿ ಟಿಪ್ಪು ವಿಮಾನ ನಿಲ್ದಾಣ, ವಿಧಾನಸೌಧಕ್ಕೆ ಟಿಪ್ಪು ಸೌಧವೆಂದು ಮರು ನಾಮಕರಣ, ಮೈಸೂರು ವಿವಿಗೆ ಟಿಪ್ಪು ಹೆಸರು, ಟಿಪ್ಪುವಿನ 108 ಅಡಿ ಪ್ರತಿಮೆ, ಟಿಪ್ಪು ಮದ್ಯದ ಬಾಟಲಿ, ಬಿಎಂಟಿಸಿ/ಕೆಎಸ್‌ಆರ್‌ಟಿಸಿಗೆ ಟಿಪ್ಪು ಸಾರಿಗೆ ಎಂಬ ಹೆಸರು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿಯವರು ತಮ್ಮ 64 ನೇ ಜನ್ಮದಿನ ಹಿನ್ನೆಲೆ ಅನೇಕ ಗಣೈರು ನಾಯಕರು ಶುಭ ಕೋರಿದ್ದಾರೆ. ಜೆಡಿಎಸ್ ನಾಯಕರು ಸೇರಿದಂತೆ ಕರ್ನಾಟಕದ ಅನೇಕ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. ಇದರ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ಹೆಚ್ಡಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ! ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ನನ್ನ ಶುಭಾಶಯಗಳು. ದೇವರು ಉತ್ತಮ ಆಯುಷ್ಯ, ಒಳ್ಳೆಯ ಆರೋಗ್ಯವನ್ನು ನೀಡಿ ನಿಮ್ಮನ್ನು ಕಾಪಾಡಲಿ ಎಂದು ಪ್ರಧಾನಿ ಮೋದಿ ಶುಭಾಶಯಗಳನ್ನು ಕೋರಿದ್ದಾರೆ.
ಬೆಂಗಳೂರು: ಹೊಸ ವರ್ಷ ಹೊಸ್ತಿಲಿನಲ್ಲಿ ಮದ್ಯಪ್ರಿಯರಿಗೆ ಸರ್ಕಾರ ಶಾಕ್ ಕೊಟ್ಟಿದೆ. ಅಬಕಾರಿ ಇಲಾಖೆಗೆ ಡಿಸೆಂಬರ್ ತಿಂಗಳಿನಲ್ಲಿ ಮೂರು ಸಾವಿರ ಕೋಟಿ ಆದಾಯದ ಟಾರ್ಗೆಟ್ ನೀಡಲಾಗಿದೆ. ವರ್ಷಾಂತ್ಯದಲ್ಲಿ ಬರುವ ಕ್ರಿಸ್ಮಸ್, ನ್ಯೂ ಇಯರ್ಗೆ ಅಬಕಾರಿ ಇಲಾಖೆ ಆದಾಯ ಹೆಚ್ಚಿಸಲು ಭರ್ಜರಿ ತಯಾರಿ ನಡೆಸಿದೆ. ಕಳೆದ 14 ದಿನದಲ್ಲಿ ಮದ್ಯ ಮಾರಾಟದಲ್ಲಿ ಇಳಿಕೆ ಯಾಗಿದ್ದು, ಕಳೆದ ವರ್ಷ 14 ದಿನಗಳಲ್ಲಿ 24.50 ಲಕ್ಷ ಬಾಕ್ಸ್ IML ಮಾರಾಟವಾಗಿತ್ತು. ಆದರೆ ಈ ವರ್ಷ 14 ದಿನದಲ್ಲಿ 21.82 ಲಕ್ಷ IML ಬಾಕ್ಸ್ ಮದ್ಯ ಮಾರಾಟ ಆಗಿದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ಶೇಕಡ 10ರಷ್ಟು ಮಾರಾಟ ಕುಸಿತವಾಗಿದೆ. ಪ್ರತಿ ವರ್ಷ, ಹೊಸ ವರ್ಷ ಹಾಗೂ ಕ್ರಿಸ್ಮಸ್ ಹಿನ್ನೆಲೆ ಅಡ್ವಾನ್ಸ್ ಆಗಿ ಮದ್ಯದ ಅಂಗಡಿಗಳು ಬಿಯರ್ ಹಾಗೂ IML ಬುಕ್ ಮಾಡುತ್ತಿದ್ದರು. ಆದರೇ ಈ ವರ್ಷ IML ಮದ್ಯ ಮಾರಾಟವಾಗದೇ ಸ್ಟಾಕ್ ಹಾಗೆಯೇ ಉಳಿದಿದೆ. ಹೀಗಾಗಿ ಇನ್ನೂ 14 ದಿನದಲ್ಲಿ 1818 ಕೋಟಿ ಸಂಗ್ರಹವಾದರೇ, ಅಬಕಾರಿ ಇಲಾಖೆ…