ಬೆಳಗಾವಿ: ಸಹಕಾರಿ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ. ಇದರಿಂದ ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ. ಬಿಜೆಪಿಯವರು 2018 ರ ತಮ್ಮ ಪ್ರಣಾಳಿಕೆಯಲ್ಲಿ ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರಿಕೃತ ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದರಾ? ನಯಾಪೈಸೆ ಬಿಡುಗಡೆ ಮಾಡಿದರಾ? ಹೇಳಿ. ಯಡಿಯೂರಪ್ಪನವರು 2019 ರ ಆಗಸ್ಟ್‌ನಲ್ಲಿ ಅತಿವೃಷ್ಟಿಯ ಕಾರಣಕ್ಕೆ ಬೆಳೆ ಹಾನಿಯಾಗಿತ್ತು. https://ainlivenews.com/mother-sells-her-daughter-for-rs-4-lakh-compulsion-to-engage-in-immoral-activity-by-an-intoxicated-person/ ಆಗ ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಏನು ಹೇಳಿದರು ಗೊತ್ತಾ? “ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ” ಎಂದು ಹೇಳಿದ್ದರು. ಯಡಿಯೂರಪ್ಪನವರು ಈ ರೀತಿ ಹೇಳಿದ್ದು…
Author: AIN Author
ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಯುದ್ಧ ಆರಂಭಗೊಂಡ ಬಳಿಕ ಇದೇ ಮೊದಲ ಬಾರಿಗೆ ತಮ್ಮ ವರ್ಷಾಂತ್ಯದ ಮೊದಲ ಪತ್ರಿಕಾಗೋಷ್ಠಿ ನಡೆಸಿದರು. ಪುಟಿನ್ ಅವರು ತನ್ನ ಗುರಿಗಳಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ ಎಂದು ಸ್ಪಷ್ಟಪಡಿಸಿದ್ದು, ಶಾಂತಿ ಸ್ಥಾಪನೆಯಾಗುವ ತನಕ ಉಕ್ರೇನ್‌ನಲ್ಲಿ ತಮ್ಮ ಗುರಿಯ ಹಿಂದೆ ಸಾಗುವುದಾಗಿ ಘೋಷಿಸಿದರು. ಪುಟಿನ್ ಅವರು 2024ರಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ತಾನು ಮರಳಿ ಭಾಗವಹಿಸಲು ಇಚ್ಛಿಸುವುದಾಗಿ ಘೋಷಿಸಿದ ಕೆಲ ಸಮಯದಲ್ಲಿ ಈ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ರಷ್ಯಾದಲ್ಲಿ ಅವರು ಹೊಂದಿರುವ ಛಾಪು, ಪ್ರಭಾವವನ್ನು ಗಮನಿಸಿದರೆ, 71 ವರ್ಷದ ಪುಟಿನ್ ಐದನೇ ಬಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದು, 2030ರ ತನಕ ತನ್ನ ಅಧ್ಯಕ್ಷೀಯ ಗದ್ದುಗೆಯನ್ನು ವಿಸ್ತರಿಸುವ ಸಾಧ್ಯತೆಗಳು ದಟ್ಟವಾಗಿವೆ. ಈ ಗೆಲುವು ಅಧ್ಯಕ್ಷರಾಗಿ ಅವರ ಸ್ಥಾನವನ್ನು ಇನ್ನಷ್ಟು ಬಲಪಡಿಸಲಿದ್ದು, ಅವರು ಒಟ್ಟು 24 ವರ್ಷಗಳ ಕಾಲ ರಷ್ಯಾ ಅಧ್ಯಕ್ಷರಾದಂತಾಗುತ್ತದೆ. https://ainlivenews.com/mother-sells-her-daughter-for-rs-4-lakh-compulsion-to-engage-in-immoral-activity-by-an-intoxicated-person/ ಪ್ರಶ್ನೋತ್ತರ ಅವಧಿಯಲ್ಲಿ ಪುಟಿನ್ ಅವರು ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆಯಾಗಬೇಕಾದರೆ ಆ ರಾಷ್ಟ್ರ ನಾಜಿ ಮುಕ್ತವಾಗಬೇಕು, ನಿಶ್ಶಸ್ತ್ರೀಕರಣಗೊಳ್ಳಬೇಕು ಮತ್ತು…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy) ಅವರು ಸಿಂಗಾಪುರಕ್ಕೆ (Singapore) ಹಾರಿದ್ದಾರೆ. ಶನಿವಾರ ಕುಮಾರಸ್ವಾಮಿ ಅವರ ಹುಟ್ಟುಹಬ್ಬವಿದ್ದು, ಜನ್ಮದಿನದ (Birthday) ಆಚರಣೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಟುಂಬ ಮತ್ತು ಕೆಲ ಆಪ್ತರ ಜೊತೆ ಕುಮಾರಸ್ವಾಮಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. https://ainlivenews.com/govt-monitoring-right-wing-activists-to-prevent-hate-speech-cases-g-parameshwar/ ಅಭಿಮಾನಿಗಳಲ್ಲಿ ಮನವಿ: ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಹೆಚ್‌ಡಿಕೆ ಪೋಸ್ಟ್ ಮಾಡಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕನ್ನಡ ಹೆಸರಾಂತ ನಟಿ, ಕನಸಿನ ರಾಣಿ ಮಾಲಾಶ್ರೀ ಕುರಿತಾಗಿ ಬಿಸಿಬಿಸಿ ಚರ್ಚೆಯಾಗಿದೆ. ವಿಧಾನ ಪರಿಷತ್ (Vidhana Parishad) ನಲ್ಲಿ ಈ ಚರ್ಚೆ ನಡೆದಿದ್ದು, ಉಮಾಶ್ರೀ (Umashree) ಸೇರಿದಂತೆ ಹಲವರು ಇದರಲ್ಲಿ ಭಾಗಿಯಾಗಿದ್ದರು. ಅಷ್ಟಕ್ಕೂ ಮಾಲಾಶ್ರೀಯನ್ನು ನೆನಪಿಸಿಕೊಂಡಿದ್ದು ಬಿಜೆಪಿಯ ಸದಸ್ಯ ವಿಶ್ವನಾಥ್ (Vishwanath) ಎನ್ನುವುದು ವಿಶೇಷ. ವಿಧೇಯಕದ ಮೇಲಿನ ಚರ್ಚೆ ವೇಳೆ ಉಮಾಶ್ರೀ ಹೆಸರಿನ ಬದಲಾಗಿ, ಬಾಯ್ತಪ್ಪಿ ಮಾಲಾಶ್ರೀ (Malashree) ಅವರ ಹೆಸರು ಹೇಳಿದರು ವಿಶ್ವನಾಥ್. ಮಾಲಾಶ್ರೀ ಹೆಸರು ಕೇಳಿ ಸಭಾಪತಿಗಳಿಗೆ ಒಂದು ರೀತಿಯಲ್ಲಿ ಅಚ್ಚರಿ ಆಯಿತು. ಹಾಗಾಗಿ ಮಾಲಾಶ್ರೀ ಅವರನ್ನು ಈಗೇಕೆ ನೆನಪಿಸಿಕೊಂಡಿರಿ ಎಂದು ತಮಾಷೆಯಾಗಿಯೇ ವಿಶ್ವನಾಥ್ ಅವರನ್ನು ಕೇಳಿದರು. ಈ ವೇಳೆ ಮಧ್ಯ ಪ್ರವೇಶ ಮಾಡಿದ ತೇಜಸ್ವಿನಿ ಗೌಡ, ಭಾರತದಲ್ಲಿ ಹೇಮಾಮಾಲಿನಿ ಹೇಗೆ ಕನಸಿನ ಕನ್ಯೆ ಎಂದು ಹೆಸರು ಪಡೆದಿದ್ರೊ, ಅದೇ ರೀತಿ ಕನ್ನಡ ಚಿತ್ರರಂಗದಲ್ಲಿ ಮಾಲಾಶ್ರೀ ನಟನೆಯಿಂದ ಹೆಸರು ಮಾಡಿದ್ರು ಎಂದರು. ಮಾತು ಮುಂದುವರೆಸಿದ ತೇಜಸ್ವಿನಿಗೌಡ ನಾಯಕಿಯಾಗಲು ಸೌಂದರ್ಯದ ಮಾನದಂಡ ಬದಲು ನಟನೆಯ…
ಹೆಸರಾಂತ ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಿಂಗಳ ಹಿಂದೆಯಷ್ಟೇ ಇವರ ಡೀಪ್‌ಫೇಕ್ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ಸರಕಾರದ ಮಟ್ಟದಲ್ಲಿ ಚರ್ಚೆಗೂ ಕಾರಣವಾಗಿತ್ತು. ಆದರೂ, ಅದನ್ನು ತಡೆಯಲು ಸಾಧ್ಯವಾಗಿಲ್ಲ ಎನ್ನುವುದಕ್ಕೆ ಹರಿಬಿಟ್ಟ ಮತ್ತೊಂದು ವಿಡಿಯೋ ಸಾಕ್ಷಿಯಾಗಿದೆ. ತಿಂಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಶ್ಮಿಕಾ ಪರ ಅನೇಕರು ಮಾತನಾಡಿದ್ದರು. ದುರುಳರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್‌ಫೇಕ್ ಕಾಟ ಮುಂದುವರೆದಿದೆ. ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದರು. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿತ್ತು. ಡೀಪ್‌ಫೇಕ್ ತಂತ್ರಜ್ಞಾನ (Deepfake Technology) ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ…
ನವದೆಹಲಿ: ಸಂಸತ್ತಿನಲ್ಲಿ ಬುಧವಾರ ನಡೆದ ಭದ್ರತಾ ಉಲ್ಲಂಘನೆಯ ಮಾಸ್ಟರ್‌ಮೈಂಡ್ ಲಲಿತ್ ಝಾನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೋಲ್ಕತ್ತಾ ಮೂಲದ ಶಿಕ್ಷಕ ಎರಡು ದಿನಗಳ ಕಾಲ ಪರಾರಿಯಾಗಿದ್ದ. ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಜಿಗಿದ ಇಬ್ಬರು ಯುವಕರು ಹಳದಿ ಬಣ್ಣದ ಹೊಗೆ ಸಿಂಪಡಿಸಿದ್ದರು. ಭದ್ರತಾ ಉಲ್ಲಂಘನೆಗಾಗಿ ಐವರನ್ನು ಬುಧವಾರ ಬಂಧಿಸಲಾಗಿತ್ತು. https://ainlivenews.com/mother-sells-her-daughter-for-rs-4-lakh-compulsion-to-engage-in-immoral-activity-by-an-intoxicated-person/ ಸಾಗರ್, ಮನೋರಂಜನ್, ಅಮೋಲ್ ಮತ್ತು ನೀಲಂ ಅವರನ್ನು ಸ್ಥಳದಲ್ಲೇ ವಶಕ್ಕೆ ಪಡೆಯಲಾಗಿತ್ತು. ಅವರ ಜೊತೆ ಕೈಜೋಡಿಸಿದ್ದ ಮತ್ತೊಬ್ಬ ಆರೋಪಿ ವಿಶಾಲ್‌ನನ್ನು ಬಳಿಕ ವಿಚಾರಣೆಗೆ ಒಳಪಡಿಸಲಾಗಿತ್ತು. ಆರೋಪಿಗಳು ಸಂಸತ್ತಿಗೆ ಬರುವ ಮೊದಲು ವಿಶಾಲ್ ಅವರ ಗುರುಗ್ರಾಮದ ಮನೆಯಲ್ಲೇ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಲಲಿತ್ ಝಾ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈಗ ಪ್ರಕರಣದ ಮಾಸ್ಟರ್‌ಮೈಂಡ್‌ನನ್ನು ಬಂಧಿಸಿದ್ದಾರೆ. ಲಲಿತ್ ಝಾ ತಾನಾಗಿಯೇ ಠಾಣೆಗೆ ಬಂದು ಸರೆಂಡರ್ ಆಗಿದ್ದಾನೆ ಎನ್ನಲಾಗಿದೆ.
ಬೆಳಗಾವಿ, ಡಿ. 15: “ಬಿಜೆಪಿ ನಾಯಕರಿಗೆ ರಾಜಕಾರಣ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಾಗಲಿ, ಜನರ ಸಮಸ್ಯೆಯಾಗಲಿ ಅಲ್ಲ. ಅವರಿಗೆ ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡೋಕಾಗುತ್ತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಸುವರ್ಣಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಉತ್ತರಿಸಿದರು. “ಬಿಜೆಪಿ ಹಾಗೂ ಜನತಾದಳದವರಿಗೆ ಜನರ ಸಮಸ್ಯೆ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಮುಖ್ಯ. ಆದರೆ ಬಿಜೆಪಿಯವರಿಗೆ ಈ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲದಿದ್ದರೆ ನಾವೇನು ಮಾಡಲು ಸಾಧ್ಯ? ಬಿಜೆಪಿಗೆ ಕೇವಲ ರಾಜಕಾರಣ ಬೇಕು. ಅವರು ರಾಜಕಾರಣ ಮಾಡಿಕೊಂಡಿರಲಿ, ನಾವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ” ಎಂದರು. ಭೋಜನಕೂಟದಲ್ಲಿ ಅನ್ಯ ಪಕ್ಷಗಳ ಶಾಸಕರ ಭಾಗಿ ವಿಚಾರವಾಗಿ ಕೇಳಿದಾಗ, “ಮದುವೆ, ಶುಭ ಸಮಾರಂಭ, ಭೋಜನ ಕೂಟದಲ್ಲಿ ನಾಯಕರು ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಸೇರುತ್ತಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿಯವರು ನನ್ನ ಜೊತೆ ಮಾತನಾಡುವುದು, ನಮ್ಮ ಪಕ್ಷದ ನಾಯಕರು ಅವರ ಜೊತೆ ಮಾತನಾಡುವುದು ಸಹಜವಾದುದ್ದು. ರಾಜಕೀಯವಾಗಿ…
ಬೆಂಗಳೂರು: ದ್ವೇಷದ ಭಾಷಣ ಪ್ರಕರಣಗಳನ್ನು ತಡೆಯಲು ಬಲಪಂಥೀಯ ಕಾರ್ಯಕರ್ತರ ಮೇಲೆ ಸರ್ಕಾರ ನಿಗಾ ಇರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ತುಳಸಿ ಮುನಿರಾಜು ಕೇಳಿದ ಪ್ರಶ್ನೆಗೆ ಡಾ.ಜಿ.ಪರಮೇಶ್ವರ ಉತ್ತ ತಿಳಿಸಿದ್ದಾರೆ. ಇದು ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ಯುದ್ಧಕ್ಕೆ ಕಾರಣವಾಯಿತು. ಚಕ್ರವರ್ತಿ ಸೂಲಿಬೆಲೆ ಅವರಂತಹ ಕಾರ್ಯಕರ್ತರನ್ನು ಸರ್ಕಾರ ಗುರಿಯಾಗಿಸಿಕೊಂಡಿದೆ ಎಂದು ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದುತ್ವವಾದಿಗಳ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಬಗ್ಗೆ ಬಿಜೆಪಿಯ ಮುನಿರಾಜುಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ಅಂತಹ ಯಾವುದೇ ಘಟನೆ ವರದಿಯಾಗಿಲ್ಲ. ಆದರೂ ಸರ್ಕಾರ ಬಲಪಂಥೀಯ ಕಾರ್ಯಕರ್ತರು ನೀಡುವ ಹೇಳಿಕೆಗಳ ಮೇಲೆ ನಿಗಾ ಇಟ್ಟಿದೆ ಎಂದು ಹೇಳಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಅವರು ಯುವಕರಲ್ಲಿ ರಾಷ್ಟ್ರಾಭಿಮಾನ ಮೂಡಿಸಿದ್ದಾರೆ. ಅವರ ವಿರುದ್ಧ ಕೋಮುಗಲಭೆ ಪ್ರಕರಣಗಳನ್ನು ಹಾಕುವ ಮೂಲಕ ಕಾಂಗ್ರೆಸ್ ಅವರನ್ನು ಗುರಿಯಾಗಿಸುತ್ತಿದೆ ಎಂದು ಗೌಡ ದೂರಿದ್ದಾರೆ.
ಮಹಾರಾಷ್ಟ್ರ: ತಮ್ಮ ನಟನೆಯ ‘ಡಂಕಿ’ ಸಿನಿಮಾದ ಬಿಡುಗಡೆಗೂ ಮುನ್ನ, ಬಾಲಿವುಡ್‌ನ ಖ್ಯಾತ ನಟ ಶಾರುಕ್ ಖಾನ್ ತಮ್ಮ ಪುತ್ರಿ ಸುಹಾನಾ ಖಾನ್ ಅವರೊಂದಿಗೆ ಶಿರ್ಡಿಯ ಸಾಯಿಬಾಬಾ ಸಮಾಧಿ ದೇಗುಲಕ್ಕೆ ಭೇಟಿ ನೀಡಿದರು. https://ainlivenews.com/katera-trailer-release-on-december-16/ ಶಾರುಕ್ ಖಾನ್ ಅವರ ಭೇಟಿ ವೇಳೆ ದೇಗುಲದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಶಾರೂಕ್ ಜತೆಗೆ ಅವರ ವ್ಯವಸ್ಥಾಪಕಿ ಪೂಜಾ ದದ್ದಾನಿ ಕೂಡ ಇದ್ದರು. ಎರಡು ದಿನಗಳ ಹಿಂದಷ್ಟೇ ಜಮ್ಮುವಿನ ರೆಯಾಸಿ ಜಿಲ್ಲೆಯಲ್ಲಿರುವ ವೈಷ್ಟೋದೇವಿ ದೇಗುಲಕ್ಕೂ ಶಾರುಕ್ ಭೇಟಿ ನೀಡಿದ್ದರು. ಜವಾನ್ ಚಿತ್ರ ಬಿಡುಗಡೆ ಸಂದರ್ಭದಲ್ಲಿ ಅವರು ತಿರುಪತಿಗೆ ಭೇಟಿ ನೀಡಿದ್ದರು. ಶಾರುಕ್ ಅಭಿನಯದ ‘ಡುಂಕಿ’ ಚಿತ್ರ ಡಿ.21ರಂದು ಬಿಡುಗಡೆಯಾಗಲಿದೆ.
2021ರಲ್ಲಿ ತೆರೆಗೆ ಬಂದ ‘ಬಡವ ರಾಸ್ಕಲ್ ‘ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ ಅವರು ನಿರ್ಮಾಪಕರಾಗಿ ಬಡ್ತಿ ಪಡೆದಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್‌ನಡಿ ನಿರ್ಮಿಸಿ ನಟಿಸಿದ್ದ ‘ಬಡವ ರಾಸ್ಕಲ್’ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ. ಹೌದು ಡಾಲಿ ಧನಂಜಯ್ ಜನ್ಮದಿನಕ್ಕೆ ಸಣ್ಣದೊಂದು ಝಲಕ್ ಬಿಟ್ಟು ಥ್ರಿಲ್ ಹೆಚ್ಚಿಸಿರುವ ಅಣ್ಣ From Mexico ಚಿತ್ರತಂಡವೀಗ ಸದ್ದಿಲ್ಲದೇ ಮುಹೂರ್ತ ಮುಗಿಸಿ ಶೂಟಿಂಗ್ ಅಖಾಡಕ್ಕೆ ಹೆಜ್ಜೆ ಇಡಲು ತಯಾರಾಗಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿಂದು ಧನು ಹಾಗೂ ಶಂಕರ್ ಗುರು ಜೋಡಿಯ ಅಣ್ಣ From Mexico ಸಿನಿಮಾದ ಮುಹೂರ್ತ ನೆರವೇರಿದೆ. ರಾಯಲ ಸ್ಟುಡಿಯೋಸ್ ನ ಪಾಲುದಾರರಾದ ಜಾನ್ವಿ ರಾಯಲ ಕ್ಲ್ಯಾಪ್ ಮಾಡಿದ್ದು, ನಿರ್ದೇಶಕ ಶಂಕರ್ ಗುರು ತಾಯಿ ಕ್ಯಾಮೆರಾಗೆ ಚಾಲನೆ ನೀಡಿದರು. ಸ್ನೇಹಿತ ಹಾಗು ಹಿತೈಷಿಗಳಾದ ಮೃಣಾಲ್ ಹೆಬ್ಬಾಳ್ಕರ್ ರವರು ಸಿನಿಮಾದ ಮುಹೂರ್ತಕ್ಕೆ ಆಗಮಿಸಿ…