ಶಬರಿಮಲೆ ಸೀಸನ್ ಆರಂಭವಾದ ಮೇಲೆ ಕೋಳಿ ಮಾಂಸಕ್ಕೆ ಬೇಡಿಕೆ ಕಡಿಮೆಯಾಗಿದೆ. ಒಮ್ಮೆಲೇ ಅರ್ಧಕ್ಕೆ ಕುಸಿದ ಚಿಕನ್ ದರದಿಂದ ವ್ಯಾಪಾರಿಗಳು ಕಂಗಲಾಗಿದ್ದಾರೆ. ಈ ತನಕ ಕೆಜಿಗೆ 130 ರೂ.ವರೆಗೆ ಇದ್ದ ಬ್ರಾಯ್ಲರ್ ಚಿಕನ್ ಎರಡು ದಿನಗಳ ಹಿಂದೆ 80 ರೂ.ಗೆ ಕುಸಿದಿದೆ. ಶಬರಿಮಲೆ ಸೀಸನ್ ಆರಂಭವಾದ ಬಳಿಕ ಏಕಾಏಕಿ ಚಿಕನ್ಗೆ ಬೇಡಿಕೆ ಕುಸಿದಿದೆ ಎನ್ನುತ್ತಾರೆ ವ್ಯಾಪಾರಿಗಳು. ಸಂಕಷ್ಟದಲ್ಲಿ ರೈತರು ಕೋಳಿ ದರ ಕುಸಿತದಿಂದ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಸೀಸನ್ನಲ್ಲಿ 160 ರೂ.ವರೆಗೆ ಇದ್ದ ಕೋಳಿ ಮಾಂಸದ ದರ 80 ರೂ.ಗೆ ಇಳಿದಿದೆ. ಆದರೆ ಪ್ರಸ್ತುತ ಕೋಳಿ ಉತ್ಪಾದನಾ ವೆಚ್ಚ ಕೆಜಿಗೆ 105 ರೂ.ಗಳಾಗಿದ್ದರೆ, ಚಿಲ್ಲರೆ ದರ ಹಲವೆಡೆ 80ರಿಂದ 90 ರೂ. ಇದೆ. ಆದರೆ ರೈತನಿಗೆ ಕೇವಲ 58ರಿಂದ 60 ರೂ. ಮಾತ್ರ ಸಿಗುತ್ತದೆ. ಮಧ್ಯವರ್ತಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳು ಇದರ ಲಾಭ ಪಡೆಯುತ್ತಿದ್ದಾರೆ. ಮಧ್ಯವರ್ತಿಗಳು ಕೆಜಿಗೆ 10ರಿಂದ 12 ರೂ., ಚಿಲ್ಲರೆ ವ್ಯಾಪಾರಿಗಳು ಕೆಜಿಗೆ 20ರಿಂದ 25 ರೂ.ವರೆಗೆ ಲಾಭ ಪಡೆಯುತ್ತಿದ್ದಾರೆ. ಆದರೆ…
Author: AIN Author
ಮಂಗಳೂರು:- ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರ ರದ್ದುಗೊಳಿಸಲಾಗಿದೆ. ಈ ಸಂಬಂಧ ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ. ಡಿಸೆಂಬರ್ 14 ರಿಂದ 18 ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 8 ರವರೆಗೆ ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರಸಂಪರ್ಕ ಬ್ಲಾಕ್ ಕೆಲಸಗಳು ಆಗುತ್ತವೆ. ಈ ಸಮಯದಲ್ಲಿ ರೈಲು ಸಂಚಾರಕ್ಕೆ ಹಾಸನದಲ್ಲಿ ಯಾವುದೇ ರೈಲು ಮಾರ್ಗಗಳು ಲಭ್ಯವಿರುವುದಿಲ್ಲ. ಡಿಸೆಂಬರ್ 19 ರಿಂದ ಡಿಸೆಂಬರ್ 22 ರವರೆಗೆ, ಎಂಜಿನಿಯರಿಂಗ್ ಕೆಲಸಕ್ಕಾಗಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಟ್ರಾಫಿಕ್ ಬ್ಲಾಕ್ ಅನ್ನು ಮಾಡಲಾಗುವುದು ಮತ್ತು ಈ ಅವಧಿಯಲ್ಲಿ ಯಾವುದೇ ರೈಲುಗಳು ಕಾರ್ಯನಿರ್ವಹಿಸುವುದಿಲ್ಲ. ಈ ಅವಧಿಯಲ್ಲಿ ಹಾಸನ ಜಂಕ್ಷನ್ ಯಾರ್ಡ್ ನಲ್ಲಿ ಸಿಗ್ನಲಿಂಗ್, ಇಂಟರ್ಲಾಕ್ ಮತ್ತು ಇತರ ಇಂಜಿನಿಯರಿಂಗ್ ವ್ಯವಸ್ಥೆ ಮರುವಿನ್ಯಾಸಗೊಳಿಸುವ ಕೆಲಸ ನಡೆಯಲಿದೆ. ಈ ಕಾರಣದಿಂದ ರೈಲು ಸಂಚಾರ ರದ್ದುಪಡಿಸಲಾಗಿದೆ…
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ರಾಣಿಝರಿ ಜಲಪಾತದ ಬಳಿ ಸುಮಾರು 4 ಸಾವಿರ ಅಡಿ ಪ್ರಪಾತದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ ಬೆಂಗಳೂರು ಮೂಲದ ಟೆಕ್ಕಿ (Techie) ಭರತ್ ಮೃತದೇಹವನ್ನ ತರಲಾಗಿದೆ. ಮೃತದೇಹ ಪತ್ತೆಯಾಗಿದ್ದರೂ ದಟ್ಟಕಾನನ, ಕಾಡು-ಪ್ರಾಣಿಗಳ ಕಾಟ, ಕತ್ತಲಲ್ಲಿ 4 ಸಾವಿರ ಅಡಿ ಪ್ರಪಾತದಿಂದ ಮೃತದೇಹ ಹೊರತರೋದು ಕಷ್ಟಸಾಧ್ಯ ಎಂದು ಪೊಲೀಸರು, ಅರಣ್ಯ ಸಿಬ್ಬಂದಿ ಸೇರಿದಂತೆ ಸ್ಥಳೀಯರು ಕಾರ್ಯಾಚರಣೆಯನ್ನ ನಿಲ್ಲಿಸಿದ್ದರು. ರಾಣಿಝರಿ ಜಲಪಾತದ ಕಡೆಯಿಂದ ಪ್ರಪಾತಕ್ಕೆ ಇಳಿದ 25 ಜನರ ತಂಡ, ಹರಸಾಹಸಪಟ್ಟು ಮೃತದೇಹವನ್ನು ಮೇಲಕ್ಕೆ ತಂದಿದ್ದಾರೆ. 4 ಸಾವಿರ ಅಡಿಯ ಪ್ರಪಾತದಿಂದ ಮೃತದೇಹವನ್ನ ತರೋದು ಅಷ್ಟು ಸುಲಭವಲ್ಲ. ಆದರೆ 25 ಜನರ ತಂಡ ಸುಮಾರು 5 ಕಿ.ಮೀ. ಮೃತದೇಹವನ್ನ ಹೊತ್ತು ತಂದು ತೀರಾ ಕಡಿದಾದ ಪ್ರದೇಶದಲ್ಲಿ ಮರದಿಂದ ಮರಕ್ಕೆ ಹಗ್ಗ ಕಟ್ಟಿಕೊಂಡು ಮೃತದೇಹ ಹೊತ್ತುಕೊಂಡು ಹಗ್ಗದ ಮೂಲಕ ಬೆಟ್ಟ ಹತ್ತಿದ್ದಾರೆ. https://ainlivenews.com/see-how-hot-and-hot-this-cold-can-be/ ರಾಣಿಝರಿ ವ್ಯೂ ಪಾಯಿಂಟ್‍ನಿಂದ (Rani Jhari View Point) ಮೃತದೇಹವಿದ್ದ 4 ಸಾವಿರ ಅಡಿ ಪ್ರಪಾತಕ್ಕೆ ಸುಮಾರು 14…
ಜೈಪುರ್: ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ (Sukhdev Singh Gogamedi) ಅವರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಶಸ್ತ್ರಾಸ್ತ್ರ ಒದಗಿಸಿದ ಆರೋಪದ ಮೇಲೆ ಮಹಿಳೆ ಒಬ್ಬಳನ್ನು ರಾಜಸ್ಥಾನ (Rajasthan) ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಪೂಜಾ ಸೈನಿ ಎಂದು ಗುರುತಿಸಲಾಗಿದೆ. ಜೈಪುರದ ಜಗತ್‍ಪುರದಲ್ಲಿರುವ ಮಹಿಳೆಯ ಬಾಡಿಗೆ ಫ್ಲಾಟ್‍ನಲ್ಲಿ ಹತ್ಯೆ ಆರೋಪಿ ನಿತಿನ್ ಫೌಜಿಗೆ, ಪೂಜಾ ಸೈನಿ ಮತ್ತು ಆಕೆಯ ಪತಿ ಮಹೇಂದ್ರ ಮೇಘವಾಲ್ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದಾರೆ. ಈ ಬಗ್ಗೆ ಸುಳಿವು ಸಿಕ್ಕದ್ದು ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯ ಪತಿ ಪರಾರಿಯಾಗಿದ್ದಾನೆ ಎಂದು ಜೈಪುರ್‌ನ ಪೊಲೀಸ್ ಕಮಿಷನರ್ ಬಿಜು ಜಾರ್ಜ್ ಜೋಸೆಫ್ ತಿಳಿಸಿದ್ದಾರೆ. https://ainlivenews.com/see-how-hot-and-hot-this-cold-can-be/ ಮೇಘವಾಲ್ ಮೂಲಕ ಫೌಜಿ ದರೋಡೆಕೋರರ ಗುಂಪು ರೋಹಿತ್ ಗೋಡಾರಾ ಜೊತೆ ಸಂಪರ್ಕದಲ್ಲಿದ್ದರು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನೊಂದಿಗೆ ಸಂಪರ್ಕ ಹೊಂದಿರುವ ಗೋದಾರಾ ಫೇಸ್‍ಬುಕ್‍ನಲ್ಲಿ ಗೊಗಮೆಡಿಯ ಹತ್ಯೆಯ ಹೊಣೆಯನ್ನು ಹೊತ್ತುಕೊಂಡು ಪೋಸ್ಟ್ ಮಾಡಿದ್ದ. ಕರ್ಣಿ ಸೇನಾ ಮುಖ್ಯಸ್ಥ ತಮ್ಮ ಶತ್ರುಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಆತ ಬರೆದುಕೊಂಡಿದ್ದ ಎಂದು ಪೊಲೀಸರು…
ನಮ್ಮ ದೈನಂದಿನ ಬಹುತೇಕ ಚಟುವಟಿಕೆಗಳಿಗೆ ಸ್ಮಾರ್ಟ್ ಫೋನ್ ನೆರವಾಗುತ್ತದೆ. ಹೀಗೆ ನಿರಂತರ ಸ್ಮಾರ್ಟ್ ಫೋನ್ ಬಳಕೆ ಸಹಜವಾಗಿಯೇ ಬ್ಯಾಟರಿಯನ್ನು ಖಾಲಿ ಮಾಡುತ್ತದೆ. ಹೀಗಾಗಿ, ಆಗಾಗ ಬ್ಯಾಟರಿ ಚಾರ್ಜ್ ಕೂಡಾ ಮಾಡುತ್ತಲೇ ಇರಬೇಕಾಗುತ್ತದೆ. ಆದರೆ, ನಮ್ಮ ಆಂಡ್ರಾಯ್ಡ್ ಫೋನ್ನ ಬ್ಯಾಟರಿ ಅವಧಿಯನ್ನು ವಿಸ್ತರಿಸಲು ಕೆಲವೊಂದು ಸರಳ ಹಾಗೂ ಪರಿಣಾಮಕಾರಿ ಮಾರ್ಗಗಳೂ ಇವೆ. ಅವುಗಳ ಬಗ್ಗೆ ಇಲ್ಲಿ ನೋಡೋಣ ಬ್ರೈಟ್ನೆಸ್ ಕಡಿಮೆ ಮಾಡಿ ಸ್ಕ್ರೀನ್ನ ಬ್ರೈಟ್ನೆಸ್ ಕಡಿಮೆ ಮಾಡುವುದು ಬಹಳ ಉತ್ತಮ ಕ್ರಮಗಳಲ್ಲಿ ಒಂದು. ಸಾಮಾನ್ಯವಾಗಿ ಎಲೆಕ್ಟ್ರಾನಿಕ್ ಡಿವೈಜ್ಗಳಲ್ಲಿ ಡಿಸ್ಪ್ಲೇ ಹೆಚ್ಚಿನ ಶಕ್ತಿಯನ್ನು ಬಳಸುತ್ತದೆ ಹಾಗೂ ಬೇಗ ಬ್ಯಾಟರಿ ಖಾಲಿಯಾಗುವಂತೆ ಮಾಡುತ್ತದೆ. ಹೀಗಾಗಿ ನಿಮ್ಮ ಆಂಡ್ರಾಯ್ಡ್ ಫೋನ್ನಲ್ಲಿ ಸಾಧ್ಯವಾದಷ್ಟು ಬ್ರೈಟ್ನೆಸ್ ಕಡಿಮೆ ಇಟ್ಟುಕೊಳ್ಳುವುದರಿಂದ ಶಕ್ತಿಯ ಬಳಕೆಯನ್ನು ಕಡಿಮೆ ಮಾಡುತ್ತದೆ ಟರ್ನ್ ಆಫ್ ಸಮಯ ಕಡಿಮೆ ಮಾಡಿ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳ ಸ್ಕ್ರೀನ್ ಆಟೋಮ್ಯಾಟಿಕ್ ಆಗಿ ಟರ್ನ್ ಆಫ್ ಆಗುತ್ತದೆ. ಆದರೆ, ಹೀಗೆ ಟರ್ನ್ ಆಫ್ ಆಗುವ ಸಮಯವನ್ನು ಸೆಟ್ ಮಾಡುವ ಅವಕಾಶ ಕೂಡಾ ಬಳಕೆದಾರರಿಗೆ…
ದೇವನಹಳ್ಳಿ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಕ್ರಾಸ್ ಬಳಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ವೈದ್ಯ ಶ್ರೀನಿವಾಸ್ಗೆ ಸೇರಿದ SPG ಆಸ್ಪತ್ರೆ, ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ ದಾಖಲಾತಿ ಪರಿಶೀಲನೆಗೆ ಬಂದಿದ್ದ ವೇಳೆ ಲೈವ್ನಲ್ಲಿ ಭ್ರೂಣ ಹತ್ಯೆ ಪತ್ತೆ ಆಗಿದೆ. ಆಸ್ಪತ್ರೆಯಲ್ಲಿ 5 ತಿಂಗಳ ಗರ್ಭಿಣಿಗೆ ಗರ್ಭಪಾತ ಮಾಡಿ ಭ್ರೂಣ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಕಳೆದ 1 ವಾರದಿಂದ ಆಸ್ಪತ್ರೆ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಹಲವು ದಾಖಲೆಗಳ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ಅನುಮಾನ ಬಂದಿದ್ದರಿಂದ ಹೀಗಾಗಿ ಇಂದು ಮತ್ತೊಮ್ಮೆ ಪರಿಶೀಲನೆಗೆ ಅಧಿಕಾರಿಗಳ ತಂಡ ಆಗಮಿಸಿದೆ. ಕೂಡಲೇ ಅಲರ್ಟ್ ಆದ ಅಧಿಕಾರಿಗಳಿಂದ ಮತ್ತಷ್ಟು ತೀವ್ರ ತನಿಖೆ ಮಾಡಲಾಗಿದ್ದು, ಸ್ಥಳಕ್ಕೆ ರಾಜ್ಯ ಆರೋಗ್ಯ ಇಲಾಖೆಯ ನೋಡಲ್ ಅಧಿಕಾರಿ ವಿವೇಕ್ ದೊರೆ ಹಾಗೂ ಶ್ರೀನಿವಾಸ್ ಭೇಟಿ ನೀಡಿದ್ದು, ಆಸ್ಪತ್ರೆಯಲ್ಲಿನ ಸಂಪೂರ್ಣ ದಾಖಲೆ ಪರಿಶೀಲಿಸಿದ್ದಾರೆ. 2 ದಿನದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ಖಾಸಗಿ…
ಬಾಲಿವುಡ್ (Bollywood) ನಟಿ ವಾಣಿ ಕಪೂರ್ (Vaani Kapoor) ಅವರು ಸಿನಿಮಾಗಿಂತ ಆಗಾಗ ಫೋಟೋಶೂಟ್ ಮೂಲಕ ಹೆಚ್ಚುಚ್ಚು ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಬ್ಯಾಕ್‌ಲೆಸ್ ಪೋಸ್ ಕೊಟ್ಟು, ವಾಣಿ ಕಪೂರ್ ಸಖತ್ ಹಾಟ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ವಾಣಿ ಕಪೂರ್ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸುವ ಮೂಲಕ ಪಡ್ಡೆಹುಡುಗರ ಗಮನ ಸೆಳೆದಿದ್ದಾರೆ. ಬ್ಯಾಕ್‌ಲೆಸ್ ಆಗಿ ಪೋಸ್ ಕೊಟ್ಟು ಮಾದಕ ನೋಟದಲ್ಲಿ ಕ್ಯಾಮೆರಾ ಕಣ್ಣಿಗೆ ವಿವಿಧ ಭಂಗಿಯಲ್ಲಿ ಪೋಸ್ ನೀಡಿದ್ದಾರೆ. ಬಿಳಿ ಬಣ್ಣದ ಧಿರಿಸಿನಲ್ಲಿ ಅಪ್ಸರೆಯಂತೆ ನಟಿ ಮಿಂಚಿದ್ದಾರೆ ಹಿಂದಿ ಚಿತ್ರರಂಗದ ಹಾಟ್ ವಾಣಿ ಕಪೂರ್ ಅವರು ತಮ್ಮ ನಟನೆಯ ಸಾಕಷ್ಟು ಸಿನಿಮಾಗಳಲ್ಲಿ ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಟನೆಯ ಜೊತೆಗೆ ಹಾಟ್ ಸೀನ್‌ನಲ್ಲಿ ನಟಿಸಿರೋದಕ್ಕೂ ಸುದ್ದಿಯಾಗಿದ್ದು ಇದೆ. ಬಾಲಿವುಡ್‌ನಲ್ಲಿ ಇದೆಲ್ಲಾ ಕಾಮನ್. ಅದರಂತೆ ಈಗ ಹೊಸ ಫೋಟೋಶೂಟ್ ಮೂಲಕ ನಟಿ ಸಂಚಲನ ಮೂಡಿಸಿದ್ದಾರೆ. ಶಮ್‌ಶೇರಾ, ವಾರ್, ಶುದ್ಧ ದೇಸಿ ರೊಮ್ಯಾನ್ಸ್, ಬೆಲ್ ಬಾಟಮಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕಿಯಾಗಿ…
ಬಾಕ್ಸ್ ಆಫೀಸಿನಲ್ಲಿ ಅನಿಮಲ್ (Animal) ಸಿನಿಮಾ ಕೋಟಿ ಕೋಟಿ ಬಾಚುತ್ತಿದ್ದಂತೆಯೇ ರಶ್ಮಿಕಾ (Rashmika Mandanna) ಖದರ್ ಬದಲಾಗಿ ಬಿಟ್ಟಿದೆ. ರಶ್ಮಿಕಾ ಮತ್ತು ರಣಬೀರ್ ಕಪೂರ್ ಜೋಡಿಯ ಕುರಿತಂತೆ ಸಾಕಷ್ಟು ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಈ ಹೊಗಳಿಕೆಯ ಬೆನ್ನಲ್ಲೇ ಪುಷ್ಪ 2 ಕಥೆಯಲ್ಲಿ ಒಂದಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಪುಷ್ಪ 2 ಸಿನಿಮಾದ ಸ್ಟೋರಿಯಲ್ಲಿ ರಶ್ಮಿಕಾಗೆ ಕಡಿಮೆ ದೃಶ್ಯಗಳು ಇದ್ದವಂತೆ. ಅವುಗಳನ್ನು ಈಗ ಹೆಚ್ಚಿಸಲಾಗಿದೆ ಎನ್ನುವುದು ಲೆಟೆಸ್ಟ್ ಸಮಾಚಾರ. ಇದರ ಜೊತೆಗೆ ಪುಷ್ಪ ಸಿನಿಮಾದ ‘ವೂಂ ಅಂಟಾವ ಮಾವ..’ ಹಾಡಿ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. ಈ ಹಾಡೇ ಪಷ್ಪ ಸಿನಿಮಾಗೆ ಜನರನ್ನೂ ಕರೆತಂದಿದ್ದು. ಸೋಷಿಯಲ್ ಮೀಡಿಯಾದಲ್ಲಂತೂ ಕೋಟ್ಯಂತರ ಜನರು ರೀಲ್ಸ್ ಮಾಡಿದ್ದರು. ಈ ಹಾಡಿಗೆ ಸಮಂತಾ (Samantha) ಸಖತ್ತಾಗಿಯೇ ಸೊಂಟ ಬಳುಕಿಸಿದ್ದರು. ಈ ಯಶಸ್ಸನ್ನು ಮತ್ತೊಂದು ಬಾರಿ ಬಳಸಿಕೊಳ್ಳಲು ನಿರ್ದೇಶಕರು ಪ್ಲ್ಯಾನ್ ಮಾಡಿದ್ದಾರೆ. ಪುಷ್ಪ 2 ಸಿನಿಮಾದಲ್ಲೂ ಐಟಂ ಸಾಂಗ್ (Item Song) ವೊಂದಿದ್ದು, ಅದಕ್ಕೆ ಸಮಂತಾ ಅವರೇ ಡ್ಯಾನ್ಸ್…
ಲಕ್ನೋ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ (Mohammad Shami) ಅವರ ಉತ್ತರಪ್ರದೇಶದಲ್ಲಿರುವ ಫಾರ್ಮ್ ಹೌಸ್‌ಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಮೊಹಮ್ಮದ್ ಶಮಿಯವರು ಉತ್ತರ ಪ್ರದೇಶದಲ್ಲಿ (Uttar Pradesh) ಬೆಳೆದವರು. ಸದ್ಯ ತಮ್ಮ ತವರೂರಿನಲ್ಲಿ ಶಮಿ ಅತ್ಯಂತ ಜನಪ್ರಿಯ ವ್ಯಕ್ತಿಯಾಗಿದ್ದಾರೆ. ವೀಶ್ವಕಪ್ ಲ್ರಿಕೆಟ್‌ನಲ್ಲಿ ಅಮೋಘ ಸಾಧನೆ ಮಾಡಿರುವ ಅವರು, ಸಹಜವಾಗಿಯೇ ಖ್ಯಾತಿ ಗಳಿಸಿದ್ದಾರೆ. ಹೀಗಾಗಿ ಅವರ ಫಾರ್ಮ್ ಹೌಸ್‌ಗೆ (Farm House) ನೂರಾರು ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ. ಅಲ್ಲದೇ ಶಮಿಯವರ ಜೊತೆ ಫೋಟೋಗಾಗಿ ಅಭಿಮಾನಿಗಳು ಪ್ರತಿನಿತ್ಯ ಬಂದು ಕಾಯುತ್ತಿದ್ದಾರೆ. ಹೀಗಾಗಿ ಮನೆ ಬಳಿ ಭದ್ರತೆ (Security) ಹೆಚ್ಚಿಸಲಾಗಿದೆ. ಈ ಕುರಿತು ಖುದ್ದು ಮೊಹಮ್ಮದ್ ಶಮಿ ಅವರೇ ಇತ್ತೀಚೆಗೆ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ಈ ವೀಡಿಯೋದಲ್ಲಿ ಫಾರ್ಮ್ ಹೌಸ್ ಮುಂದೆ ಅಭಿಮಾನಿಗಳು ಕ್ಯೂನಲ್ಲಿ ಜಮಾಯಿಸಿರುವುದನ್ನು ಕಾಣಬಹುದಾಗಿದೆ. ಭದ್ರತಾ ಸಿಬ್ಬಂದಿ ಗೇಟ್ ಬಳಿ ನಿಂತು ಅಭಿಮಾನಿಗಳನ್ನು ನಿಭಾಯಿಸುತ್ತಿರುವುದು ಕಂಡುಬಂದಿದೆ.
ಬೆಂಗಳೂರು: ರೋಹಿತ್ ಶರ್ಮಾ (Rohit Sharma) ಉತ್ತಮ ಫಾರ್ಮ್‍ನಲ್ಲಿಯೇ ಉಳಿದಿದ್ದರೆ, 2024ರ ಟಿ20 ವಿಶ್ವಕಪ್ (T20 World Cup) ಪಂದ್ಯದಲ್ಲಿ ಭಾರತ ತಂಡವನ್ನು (Team India) ಮುನ್ನಡೆಸಬೇಕು ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ (Gautam Gambhir) ಹೇಳಿದ್ದಾರೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು, ರೋಹಿತ್ ಉತ್ತಮ ಫಾರ್ಮ್‍ನಲ್ಲಿ ಉಳಿದರೆ ಟಿ20 ವಿಶ್ವಕಪ್‍ನ್ನು ಮುನ್ನಡೆಸಲಿ. ಅಲ್ಲದೇ ಉತ್ತಮ ಫಾರ್ಮ್‍ನಲ್ಲಿ ಇಲ್ಲದವರನ್ನು ಟಿ20 ವಿಶ್ವಕಪ್‍ಗೆ ಆಯ್ಕೆ ಮಾಡಬಾರದು. ನಾಯಕತ್ವ ಎನ್ನುವುದು ದೊಡ್ಡ ಜವಾಬ್ದಾರಿ. ಆಟಗಾರನ ಉತ್ತಮ ಪ್ರದರ್ಶನದ ಮೇಲೆ ನಾಯಕನಾಗುವ ಅರ್ಹತೆ ಬೆಳೆಯುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ ಆಟಗಾರನನ್ನು ತಂಡದಿಂದ ಕೈಬಿಡಲು ವಯಸ್ಸು ಮಾನದಂಡವಾಗಬಾರದು. ಕೇವಲ ಫಾರ್ಮ್ ಮಾತ್ರ ಮಾನದಂಡವಾಗಿರಬೇಕು. ಆಟಗಾರನನ್ನು ಏಕೆ ಕೈಬಿಡಬೇಕು ಅಥವಾ ಏಕೆ ಆಯ್ಕೆ ಮಾಡಬೇಕು ಎಂಬುದಕ್ಕೆ ವಯಸ್ಸು ಅರ್ಹತೆಯೇ ಅಲ್ಲ. ಆಟಗಾರನ ನಿವೃತ್ತಿ ಆತನ ವೈಯಕ್ತಿಕ ನಿರ್ಧಾರವಾಗಿದೆ. ಇದರಲ್ಲಿ ಯಾರ ಒತ್ತಾಯವು ಇರಬಾರದು ಎಂದು ಅವರು ಹೇಳಿದ್ದಾರೆ. ರೋಹಿತ್ ಶರ್ಮಾ ಈ ಬಾರಿಯ ಏಕದಿನ…