ವಿಜಯಪುರ:- ಖೊಟ್ಟಿ ದಾಖಲೆ ಸೃಷ್ಟಿಸಿ ನೋಂದಣಿ ಮಾಡುವವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವಿಜಯಪುರ ನಗರ ಸೇರಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ನೋಂದಣಿ ಮಾಡುವ ಪ್ರಕರಣಗಳು ಕಂಡು ಬಂದಿದ್ದು, ಇಂತವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದರು. ಕೆಲವರು ಆಧಾರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಮೂಲಕ ಭೂ ಮಾಲೀಕರ ಹೆಸರಿನಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ನೋಂದಣಿ ಮಾಡಿರುವ 13 ಪ್ರಕರಣಗಳನ್ನು ಈಗಾಗಲೇ ದಾಖಲಿಸಲಾಗಿದೆ. ಖೊಟ್ಟಿ ದಾಖಲೆ ಸೃಷ್ಟಿ ಮಾಡಿ, ಆಸ್ತಿಗಳನ್ನು ನೋಂದಣಿ ಮಾಡುವ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಾಂಡ್ ರೈಟರ್ಸ್ ಗುರುತಿಸಿ, ಅವರ ಬಾಂಡ್ ರೈಟರ್ಸ್ ಲೈಸೆನ್ಸ್ ರದ್ದುಗೊಳಿಸವಂತೆ” ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಅದರಂತೆ ಉಪ ನೋಂದಣಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹಲವು ದಿನಗಳಿಂದ ಒಂದೇ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವರನ್ನು ಜಿಲ್ಲಾ ವ್ಯಾಪ್ತಿಯಿಂದ ತಾಲೂಕು ಮಟ್ಟಕ್ಕೆ ವರ್ಗಾವಣೆ ಮಾಡಿ, ತಾಲೂಕು…
Author: AIN Author
ಕಡಲೆಕಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಲಾಭಗಳಿವೆ ಎನ್ನುವುದು ತಿಳಿಸುಕೊಳ್ಳೋಣ… ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಫೈಬರ್, ಜೀವಸತ್ವಗಳು (ಉದಾಹರಣೆಗೆ ಬಿ ಜೀವಸತ್ವಗಳು ಮತ್ತು ವಿಟಮಿನ್ ಇ), ಮತ್ತು ಖನಿಜಗಳು (ಮೆಗ್ನೀಸಿಯಮ್, ರಂಜಕ ಮತ್ತು ಪೊಟ್ಯಾಸಿಯಮ್) ಸೇರಿದಂತೆ ಕಡಲೆಕಾಯಿಗಳು ಅಗತ್ಯವಾದ ಪೋಷಕಾಂಶಗಳ ಉತ್ತಮ ಮೂಲವಾಗಿದೆ. 1) ಅತ್ಯಧಿಕ ನಾರಿನಾಂಶವನ್ನು ಒಳಗೊಂಡ ಕಾರಣ ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಊರಿಯೂತವನ್ನು ನಿಯಂತ್ರಣದಲ್ಲಿಡುತ್ತದೆ. 2) ಕಡಲೆಕಾಯಿಯಲ್ಲಿ ಪ್ರೋಟೀನ್, ಫೈಬರ್ ಮತ್ತು ಆರೋಗ್ಯಕರ ಕೊಬ್ಬಿನ ಸಂಯೋಜನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. 3) ಕಡಲೆಕಾಯಿಯು ಮೆಗ್ನೀಸಿಯಮ್, ಫಾಸ್ಫರಸ್ ಮತ್ತು ಇತರ ಖನಿಜಗಳ ಉತ್ತಮ ಮೂಲವಾಗಿದೆ, ಇದು ಬಲವಾದ ಮತ್ತು ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳುವಲ್ಲಿ ಸಹಾಯ ಮಾಡುತ್ತದೆ. 4) ಕಡಲೆಕಾಯಿಯಲ್ಲಿ ಬಹು ಉಪಯುಕ್ತವಾದ ಕೊಬ್ಬುಗಳು ಸಮೃದ್ಧವಾಗಿವೆ, ಅವು ಹೃದಯ-ಆರೋಗ್ಯ ಸಮಸ್ಯೆಗಳಿಗೆ ಉತ್ತಮ ಪರಿಹಾರವಾಗಿವೆ. ಅವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು. 5) ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಸಹಾಯ…
ಬೆಂಗಳೂರು:- ಕಾರ್ತಿಕ ಮಾಸದಲ್ಲಿ ಮಾಂಸಾಹಾರವನ್ನು ಸೇವಿಸುವ ಮಂದಿ ಕಡಿಮೆ. ಇದರ ಪರಿಣಾಮ ಬೆಂಗಳೂರು ಸೇರಿ ಹಲವೆಡೆ ಕೋಳಿ ಬೆಲೆಯಲ್ಲಿ ಕುಸಿತವಾಗಿದೆ. ಕಳೆದ ಹಲವು ದಿನಗಳಿಂದ ಚಿಕನ್ ಬೆಲೆ 260 ರಿಂದ 300 ರೂಪಾಯಿ ವರೆಗೆ ಇತ್ತು. ಪ್ರಸ್ತುತ ಬೆಂಗಳೂರಿನಲ್ಲಿ 1 ಕೆಜಿ ಚಿಕನ್ ಬೆಲೆ 160 ರೂಪಾಯಿ ಇದೆ. ಚಿಕನ್ ಲಿವರ್ 120 ರೂಪಾಯಿ ಇದ್ದರೆ, ಬೊನ್‌ಲೆಸ್ ಚಿಕನ್ 210 ರೂಪಾಯಿ, ನಾಟಿ ಕೋಳಿ 360 ರೂಪಾಯಿ, ಲೈವ್ ಚಿಕನ್ ರೂ. 130 ಹಾಗೂ ಸ್ಕಿನ್‌ಲೆಸ್ ಚಿಕನ್ ಕೆಜಿಗೆ ರೂ. 200 ರೂಪಾಯಿ ಇದೆ. ಆರ್‌ಟಿ ನಗರದಲ್ಲಿ ಲೈವ್ ಚಿನ್ ಕೆಜಿಗೆ 130 ರೂಪಾಯಿ ಇದ್ದರೆ, ಲಿವರ್ 105 ರೂಪಾಯಿ, ಸ್ಕಿನ್‌ಲೆಸ್ 180 ರೂ. ಹಾಗೂ ವಿತ್ ಸ್ಕಿನ್ 150 ರೂಪಾಯಿ ಇದೆ. ಬೆಲೆ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ಮೂಲಗಳು ಹೇಳುತ್ತಿವೆ. ಕಾರ್ತಿಕ ಮಾಸ, ಹಬ್ಬ ಹರಿದಿನಗಳು ಯಾವುದನ್ನೂ ನಂಬದ ನಾನ್ ವೆಜ್ ಪ್ರಿಯರಿಗೆ ಬೆಲೆ ಕುಸಿತದಿಂದ…
ಮೈಸೂರು:- ಅರ್ಜುನ ಆನೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆ ಕ್ಷಣದಲ್ಲಿ ಆಗಿದ್ದೇನು? ಹಾಗೂ ಕಾರ್ಯಾಚರಣೆಯ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ. ಈ ಸುದ್ದಿ ಪೂರ್ತಿ ಓದಿ. ಕಾಡಾನೆಗಳ ಕಾರ್ಯಾಚರಣೆ ಆರಂಭವಾಗಿದ್ದು ನವೆಂಬರ್ 23 ರಂದು. ಒಟ್ಟು ಎರಡು ತಂಡಗಳಾಗಿ ಕಾಡಾನೆಗಳ ಕಾರ್ಯಾಚರಣೆ ನಡೆಸಲಾಗುತಿತ್ತು. ಒಂದು ತಂಡ ಮೂಡಿಗೆರೆ ಬಳಿ ಕಾರ್ಯಾಚರಣೆ ನಡೆಸುತಿತ್ತು. ಮತ್ತೊಂದು ತಂಡ ಸಕಲೇಶಪುರದ ಬಳಿ ಕಾರ್ಯಾಚರಣೆ ನಡೆಸುತ್ತಿತ್ತು. ಸಕಲೇಶಪುರೆ ಬಳಿಯ ಕಾರ್ಯಾಚರಣೆಯ ತಂಡದಲ್ಲಿದ್ದದ್ದು ಅರ್ಜುನ, ಕರ್ನಾಟಕದ ಭೀಮ, ಧನಂಜಯ ಮತ್ತು ಪ್ರಶಾಂತ್ ಸೇರಿ ಒಟ್ಟು 6 ಆನೆಗಳು. ತಂಡದಲ್ಲಿ ಡಾ. ರಮೇಶ್, ರಂಜನ್ ಹಾಗೂ ಮಾವುತ ಕಾವಾಡಿಗಳಿದ್ದರು. ಅರ್ಜುನ ಆನೆ ಇದ್ದ ತಂಡಕ್ಕೆ 9 ಆನೆಗಳ ಕಾರ್ಯಾಚರಣೆ ಟಾಸ್ಕ್ ನೀಡಲಾಗಿತ್ತು. ಸಾಮಾನ್ಯವಾಗಿ ಕಾಡಿನಲ್ಲಿರುವ ಎಲ್ಲಾ ಆನೆಗಳಿಗೂ ರೇಡಿಯೋ ಕಾಲರ್‌ಗಳನ್ನು ಹಾಕುವಂತಿಲ್ಲ. ಮೊದಲು ಕಾರ್ಯಾಚರಣೆ ಮಾಡಬೇಕಾದ ಆನೆಗಳನ್ನು ಗುರುತಿಸಲಾಗುತ್ತದೆ. ಅವುಗಳ ಪೋಟೋಗಳನ್ನು ಕ್ಲಿಕ್ಕಿಸಿಕೊಂಡು ಅವುಗಳ ಚಲನ ವಲನಗಳ ಬಗ್ಗೆ ನಿಗಾ ಇಡಲಾಗುತ್ತದೆ. ಎಲ್ಲಾ ಆದ ಮೇಲೆ ಕಾರ್ಯಾಚರಣೆ ನಡೆಸಲಾಗುತ್ತದೆ. ಇದೇ ರೀತಿಯಲ್ಲಿ…
ಹುಬ್ಬಳ್ಳಿ:- ನನಗೆ ಸಿಎಂ ಸಿದ್ದರಾಮಯ್ಯ ಅಷ್ಟೇನೂ ಪರಿಚಯಸ್ಥರಲ್ಲ ಎಂದು ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ʻನಾನು ಪುಟ್ಬಾಲ್ ಇದ್ದಂತೆ. ತುಳಿದಷ್ಟು ಮೇಲೆ ಪುಟ್ಟಿದೇಳುತ್ತೇನೆʼ ಎಂದು ಹೇಳುವ ಮೂಲಕ ಸಿಎಂಗೆ ಟಾಂಗ್ ನೀಡಿದ್ದಾರೆ. ʻನನಗೆ ಸಿಎಂ ಅಷ್ಟೇನು ಪರಿಚಯವಿಲ್ಲ, ನಾನೆಂದು ಮ್ಯಾಚ್ ಫಿಕ್ಸಿಂಗ್ ರಾಜಕಾರಣ ಮಾಡಿಲ್ಲ, ಮಾಡಿದ್ರೆ ನಂಗೆ ಎಲ್ಲರೂ ಚೆನ್ನಾಗಿರ್ತಿದ್ರುʼ ಅಂತ ಸಿಎಂ ವಿರುದ್ದ ಹರಿಪ್ರಸಾದ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇನ್ನು ಅರಮನೆ ಮೈದಾನದಲ್ಲಿ ನಡೆದ ಈಡಿಗ ಸಮಾವೇಶಕ್ಕೆ ಗೈರಾದ ಬಗ್ಗೆ ರಿಪ್ಲೈ ನೀಡಿ, ಇದು ರಾಜಕೀಯ ಪ್ರೇರಿತ ಮತ್ತು ರಾಜಕೀಯ ಕುತಂತ್ರದಿಂದ ಆಯೋಜನೆ ಆಗಿರೋ ಸಮಾವೇಶ. ಅದ್ರಿಂದ್ಲೇ ನಾನು ಹೋಗುತ್ತಿಲ್ಲ. ನಮ್ಮ ಸಮಾಜಕ್ಕೆ ಒಳ್ಳೆಯದಾಗುವುದಿದ್ದರೆ ನಾನು ಪಾಲ್ಗೊಳ್ಳುತ್ತಿದ್ದೆ. ರಾಜಕೀಯ ಪ್ರೇರಿತ ಸಮಾವೇಶಗಳಲ್ಲಿ ನಾನು ಭಾಗಿಯಾಗುವುದಿಲ್ಲ ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ಅಂದ್ಹಾಗೆ ಸಚಿವ ಸ್ಥಾನ ವಿಚಾರದಲ್ಲಿ ಈಡಿಗ ಸಮುದಾಯದಿಂದ ತಮ್ಮ ಬದಲಿಗೆ ಮಧು ಬಂಗಾರಪ್ಪ ಅವ್ರನ್ನ ಮಂತ್ರಿ ಮಾಡಿದ್ದರು. ಇದೀಗ ಈಡಿಗ ಸಮಾವೇಶಕ್ಕೆ ಮಧು ಬಂಗಾರಪ್ಪ ಸಿಎಂಗೆ ಆಹ್ವಾನಿಸಿ…
ಬೆಂಗಳೂರು: ಯಾವುದೇ ಮಾಹಿತಿ ಇಲ್ಲದೆ ನ್ಯಾಯ ಬೆಲೆ ಅಂಗಡಿ ಸ್ಥಳಾಂತರ ಹಿನ್ನೆಲೆ, ಆಹಾರ ಇಲಾಖೆಯ ವಿರುದ್ಧ ಜನರು ಆಕ್ರೋಶ ಹೊರ ಹಾಕಿದ್ದಾರೆ. ನ್ಯಾಯ ಬೆಲೆ ಅಂಗಡಿ ಸ್ಥಳಾಂತರಕ್ಕೆ ಜನಸಾಮಾನ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಯಶವಂತಪುರ ಕ್ಷೇತ್ರದ ಚನ್ನಕ್ಕಿಪಾಳ್ಯದಿಂದ ಚಿಕ್ಕಬಿದರಕಲ್ಲು ಗ್ರಾಮಕ್ಕೆ ಸ್ಥಳಾಂತರ ಮಾಡಲಾಗಿದೆ. ಇದರಿಂದ ಸುಮಾರು 250 ಪಡಿತರ ಕಾರ್ಡ್ ಇರುವ ಜನರಿಗೆ ಶಾಕ್ ನೀಡಿದಂತಾಗಿದೆ. ಸುಮಾರು 30 ವರ್ಷದಿಂದ ಇದ್ದ ನ್ಯಾಯ ಬೆಲೆ ಅಂಗಡಿ ಶಿಪ್ಟ್ ಮಾಡಲಾಗಿದ್ದು, ಪ್ರಭಾವಿಗಳ ಒತ್ತಡಕ್ಕೆ ಮಣಿದು ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತವಾಗಿದೆ. ಇಂದು ಪಡಿತರ ಧಾನ್ಯ ಪಡೆಯಲು ಬಂದ ಜನರಿಗೆ ಶಾಕ್ ನೀಡಿದೆ.bನಮಗೆ ಚನ್ನಕ್ಕಿ ಪಾಳ್ಯದ ನ್ಯಾಯ ಬೆಲೆ ಅಂಗಡಿಯಲ್ಲಿ ಪಡಿತರ ನೀಡುವಂತೆ ಆಗ್ರಹಿಸಿದ್ದಾರೆ
ಬೆಂಗಳೂರು:- ಈಡಿಗ ಸಮುದಾಯದ ಅಭಿವೃದ್ಧಿ ನಿಗಮಕ್ಕೆಗೆ ₹500 ಕೋಟಿ ಅನುದಾನ ನೀಡಬೇಕು ಎಂಬ ಮನವಿ ಬಂದಿದ್ದು, ಇದನ್ನು ಈಡೇರಿಸುವ ಭರವಸೆ ನೀಡುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕದ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವದಲ್ಲಿ ಮಾತನಾಡಿ, “ಈಗ ಅಧಿವೇಶನ ನಡೆಯುತ್ತಿದ್ದು ಅಧಿಕೃತ ಘೋಷಣೆ ಮಾಡಲು ಆಗುವುದಿಲ್ಲ. ಹೀಗಾಗಿ ನಿಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡುತ್ತೇನೆ” ಎಂದರು. ಉಳಿದಂತೆ ಅವರು ಹೇಳಿದ್ದಿಷ್ಟು; “ರಾಜ್ಯದ ಈಡಿಗ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಒಟ್ಟಾಗಿ ಶ್ರಮಿಸಿದೆ. ನಿಮ್ಮ ಬೆಂಬಲಕ್ಕೆ ಎಷ್ಟು ಅಭಿನಂದನೆ ತಿಳಿಸಿದರೂ ಸಾಲದು. ನಾವು ನಿಮಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ವಿಧಾನಸಭಾ ಚುನಾವಣೆಯಲ್ಲಿ ಮತ್ತು ಇಂದು ಈಡಿಗ ಸಮುದಾಯದವರೆಲ್ಲಾ ಒಗ್ಗಟ್ಟಾಗಿ, ಸಿದ್ದರಾಮಯ್ಯನವರ ಸರ್ಕಾರದ ಜೊತೆಗೆ ಇದ್ದೇವೆ ಎಂಬ ಸಂದೇಶ ನೀಡಿದ್ದೀರಿ. ಇದಕ್ಕೆ ನಾನು ಆಭಾರಿ. ‘ವಿದ್ಯೆಯಿಂದ ವಿವೇಕವಂತರಾಗಬೇಕು, ಸಂಘಟನೆಯಿಂದ ಬಲಿಷ್ಠರಾಗಬೇಕು’ ಎನ್ನುವ ನಾರಾಯಣಗುರುಗಳ ಮಾತುಗಳನ್ನು ನಾವು ಮತ್ತು ನೀವು ಎಂದಿಗೂ ಮರೆಯಬಾರದು. ನಾನು,…
ಬೆಂಗಳೂರು:- ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿದವರು ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮೈಸೂರು ನಾಲ್ವಡಿ ಕೃಷ್ಣರಾಜ ಒಡೆಯರು ಸಾಮಾಜಿಕ ಅಸಮಾನತೆ ಇರುವುದನ್ನು ಅರಿತಿದ್ದರು. ಶೋಷಿತರು ಹಾಗೂ ಹಿಂದುಳಿದವರ ಅಭಿವೃದ್ಧಿಗಾಗಿ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿದರು ಎಂದರು. ಸ್ವಾತಂತ್ರ್ಯಪೂರ್ವದಲ್ಲಿ ಅಧಿಕಾರ ಮತ್ತು ಆಸ್ತಿ ಕೆಲವೇ ಸಮುದಾಯಗಳಿಗೆ ಮಾತ್ರ ಸೀಮಿತವಾಗಿದ್ದರಿಂದ ಸಾಮಾಜಿಕ ಅಸಮಾನತೆ ಉಂಟಾಯಿತು ಎಂದರು. ಶಿಕ್ಷಣ ಎಂಬುದು ಜ್ಞಾನಸಂಪಾದನೆ. ಇದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಹಲವರು ದಾರ್ಶನಿಕರು ಹೇಳಿದ್ದಾರೆ. ಅದರಂತೆಯೇ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಲ್ಲ ವರ್ಗದವರಿಗೂ ಶಿಕ್ಷಣ ಮತ್ತು ಉದ್ಯೋಗದ ಮೀಸಲಾತಿ ಕಲ್ಪಿಸಿದರು. ಅವರು ಕಾನೂನು ತಜ್ಞರು ಆಗಿರದಿದ್ದರೆ ದೇಶದಲ್ಲಿ ಸಮಾನತೆ ಸಾಧ್ಯವಾಗುತ್ತಿರಲಿಲ್ಲ ಎಂದು ಅವರು ಹೇಳಿದರು. ದೇವಾಂಗ ಸಮುದಾಯದ ಮಕ್ಕಳು ಇಂಜಿನಿಯರಿಂಗ್, ವೈದ್ಯಕೀಯ, ಕಾನೂನು ಪದವಿ ಸೇರಿದಂತೆ ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು. ಐಎಎಸ್, ಐಪಿಎಸ್ ಸೇರಿ ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಕಲಿಕೆಗಾಗಿ ಸುಸಜ್ಜಿತ…
ಮೈಸೂರು:- ಬಿಜೆಪಿಯ ಅನಾಗರಿಕತೆ, ಮಹಿಳಾ ವಿರೋಧಿ ಧೋರಣೆಗೆ ಕನ್ನಡಿ ಆಗಿದೆ ಎಂದು ಎಂ.ಲಕ್ಷ್ಮಣ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರನ್ನು ಲೋಕಸಭಾ ಸದಸ್ಯತ್ವದಿಂದ ಉಚ್ಚಾಟಿಸಿರುವುದು ಬಿಜೆಪಿಯ ಅನಾಗರಿಕತೆ ಹಾಗೂ ಮಹಿಳಾ ವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದರು. ಸಂಸದೆಯಾದ ಮಹುವಾ ಅವರಿಗೆ ಮಾತನಾಡಲೂ ಅವಕಾಶ ಕೊಡದೇ ಕ್ರಮ ಕೈಗೊಂಡಿರುವುದನ್ನು ಪಕ್ಷವು ತೀವ್ರವಾಗಿ ಖಂಡಿಸುತ್ತದೆ’ ಎಂದರು. ಬಿಜೆಪಿಯು ಮಹಿಳೆಯರು, ರೈತರು, ದಲಿತರ ವಿರುದ್ಧವಿದೆ. ಕೇವಲ ಉದ್ಯಮಿಗಳ ಅನುಕೂಲಕ್ಕಾಗಿ ಕಾರ್ಯನಿರ್ವಹಿಸುತ್ತಿದೆ. ಈ ರಹಸ್ಯ ಕಾರ್ಯಸೂಚಿಯನ್ನು ಮಹಿಳೆಯರು ಅರಿಯಬೇಕು. ಮೊಯಿತ್ರಾ ಅವರು ಮಾಡಿರುವ ತಪ್ಪಾದರೂ ಏನೆಂಬುದನ್ನೇ ಹೇಳದೇ ಅವರ ವಿರುದ್ಧ ಕ್ರಮ ಕೈಗೊಂಡಿರುವುದು, ಇಲ್ಲಸಲ್ಲದ ಆರೋಪ ಮಾಡಿರುವುದು ಖಂಡನೀಯ. ಅವರು ಬಿಜೆಪಿ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದರು ಎಂಬ ಕಾರಣಕ್ಕೆ ಉಚ್ಚಾಟಿಸಲಾಗಿದೆ. ಅವರು ಟಿಎಂಸಿ ನಾಯಕಿಯಾದರೂ ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ’ ಎಂದು ತಿಳಿಸಿದರು. ‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರು ಬಿಜೆಪಿಗೆ ಪಾಠ ಕಲಿಸಲಿದ್ದಾರೆ’ ಎಂದರು. ‘ಮೈಸೂರಿಗೆ ನೀಡಿರುವ ಕೊಡುಗೆಗಳೇನು…
ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಶಕ್ತಿ ಯೋಜನೆಯು ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ನೀಡುತ್ತಿದೆ. ಆಧಾರ್ ಕಾರ್ಡ್ ತೋರಿಸಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಒಂದೇ ನಂಬರ್ನ ಎರಡು ಆಧಾರ್ ಕಾರ್ಡ್ಗಳನ್ನು ತೋರಿಸಿ ಪ್ರಯಾಣಿಸಲು ಯತ್ನಿಸಿದ ಇಬ್ಬರು ಮಹಿಳೆಯರು ನಿರ್ವಾಹಕನ ಕೈಗೆ ಸಿಕ್ಕಿಬಿದ್ದಿದ್ದಾರೆ. ಒಂದು ಆಧಾರ್ ಕಾರ್ಡ್ನ ಎರಡು ಪ್ರತಿಗಳನ್ನು ತೋರಿಸಿ ವಾಯುವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ನ ನಲ್ಲಿ ಪ್ರಯಾಣ, ಸಿಕ್ಕಿಬಿದ್ದ ಇಬ್ಬರು ಮಹಿಳೆಯರ ಕೃತ್ಯದಿಂದ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಸಹ ಒಂದು. ಅದು ಹೇಗೆ ದುರುಪಯೋಗ ಆಗುತ್ತದೆ ಎಂಬುದಕ್ಕೆ ಇದು ತಾಜಾ ಉದಾಹರಣೆ ಅಷ್ಟೇ. ಮಹಿಳೆಯರು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಹೀಗಿದ್ದಾಗಲೂ ಇಬ್ಬರು ಮಹಿಳೆಯರು ಮೋಸ ಮಾಡಿ ಪ್ರಯಾಣ ಮಾಡಲು ಮುಂದಾಗಿ ಸಿಕ್ಕಿಬಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು, ಹುಬ್ಬಳ್ಳಿಯ ನೇಕಾರ ನಗರದಿಂದ ಕಿಮ್ಸ್ ಕಡೆಗೆ ಹೋಗುವ ಬಸ್ನಲ್ಲಿ ಬುರ್ಖಾ ಹಾಕಿರುವ…