Author: AIN Author

ಹಿರಿಯ ನಟಿ ಲೀಲಾವತಿ ಅವರ ಅಂತ್ಯ ಸಂಸ್ಕಾರವನ್ನು (Funeral) ಸರಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ (Soladevanahalli) ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸರಕಾರ ಮತ್ತು ಲೀಲಾವತಿ ಅವರ ಕುಟುಂಬದೊಂದಿಗೆ ಚರ್ಚಿಸಿ ಈ  ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು. ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದಿದ್ದಾರೆ. ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್  ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿದೆ. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು, ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ. https://ainlivenews.com/arrangements-for-last-darshan-of-actress-lilavati-at-ambedkar-maidan-nelamangala/ ಬೆಳಗ್ಗೆ 10 ಗಂಟೆವರೆಗೂ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲೇ ಪಾರ್ಥೀವ ಶರೀರ ಇರಿಸಲಾಗುತ್ತಿದ್ದು, ನಂತರ ಬೆಂಗಳೂರಿನತ್ತ ತಗೆದುಕೊಂಡು ಹೋಗಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿರುವ ಸಂಸ ಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕೆ…

Read More

ಗದಗ: ಮೆಣಸಿನಕಾಯಿ ಬೆಳೆ ಕಾಯುತ್ತಿದ್ದ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಜಮೀನೊಂದರಲ್ಲಿ ನಿನ್ನೆ ರಾತ್ರಿ ದುಷ್ಕರ್ಮಿಗಳು ಮೆಣಸಿನಕಾಯಿ ಬೆಳೆ ಕಾಯಲು ಇದ್ದ ವ್ಯಕ್ತಿಯನ್ನ ಮಾರಾಕಾಸ್ತ್ರಗಳಿಂದ ಕತ್ತು ಕತ್ತರಿಸಿ ರುಂಡದೊಂದಿಗೆ ಪರಾರಿಯಾಗಿದ್ದಾರೆ. ಕೊಲೆಗೀಡಾದ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಾಳೆಕೊಪ್ಪ ಗ್ರಾಮದ ನಿವಾಸಿ ಸಣ್ಣ ಹನಮಪ್ಪ ವಜ್ರದ (65) ‌ಎಂದು ತಿಳಿದು ಬಂದಿದೆ. ಗುಡಿಸಲಿನಲ್ಲಿ ದೇಹ ಮಾತ್ರ ಇದ್ದು, ಬೆಳಿಗ್ಗೆ ಜಮೀನು ಮಾಲೀಕರು ಬಂದು ನೋಡಿದಾಗ ಈ ದುಷ್ಕೃತ್ಯ ಬೆಳಕಿಗೆ ಬಂದಿದೆ. ಸುದ್ದಿ ತಿಳಿದು ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಭೀಕರ ಕೊಲೆಯಿಂದಾಗಿ ಸುತ್ತಮುತ್ತಲಿನ ರೈತರು ಬೆಚ್ಚಿ ಬಿದ್ದಿದ್ದಾರೆ. ಗದಗ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Read More

ಶಾರುಖ್ ಖಾನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಡಂಕಿ ಬಿಡುಗಡೆಗೆ ದಿನಗಣನೆಯಷ್ಟೇ ಬಾಕಿ ಇದೆ. ಕ್ರಿಸ್ಮಸ್ ಗೆ ತೆರೆಗೆ ಬರ್ತಿರುವ ಈ ಚಿತ್ರದ ಮೊದಲ ನೋಟ ರಿಲೀಸ್ ಆಗಿದೆ. ಬ್ಯಾಕ್ ಟು ಬ್ಯಾಕ್ ಮಾಸ್ ಸಿನಿಮಾಗಳಲ್ಲಿ ಅಬ್ಬರಿಸಿದ್ದ ಕಿಂಗ್ ಖಾನ್ ಕ್ಲಾಸ್ ಕಥೆ ಮೂಲಕ ಪ್ರೇಕ್ಷಕರ ಎದುರು ಹಾಜರಾಗ್ತಿದ್ದಾರೆ. ಫನ್-ಎಮೋಷನ್ ಪ್ರೀತಿ ಜೊತೆ ದೇಶಭಕ್ತಿ ಕಥೆ ಹೊತ್ತುಬಂದಿರುವ ಡಂಕಿ ಡ್ರಾಪ್-4 ಅಂದರೆ ಟ್ರೇಲರ್ ಸಖತ್ ಇಂಪ್ರೆಸಿವ್ ಆಗಿದೆ. 3 ನಿಮಿಷ 1 ಸೆಕೆಂಡ್ ಇರುವ ಟ್ರೇಲರ್ ನಲ್ಲಿ ಭರಪೂರ ಮನರಂಜನೆ ಜೊತೆಗೆ ಒಂದೊಳ್ಳೆ ಸಂದೇಶವನ್ನು ನಿರ್ದೇಶಕ ರಾಜ್ ಕುಮಾರ್ ಹಿರಾನಿ ಕಟ್ಟಿಕೊಟ್ಟಿದ್ದಾರೆ. ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಾಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಎಳೆಯಲ್ಲಿ ತೆರೆದಿಟ್ಟಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ ಖಾನ್ , ಮನು ಪಾತ್ರದಲ್ಲಿ ತಾಪ್ಸಿ ಪನ್ನು, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ನಟ ವಿಕ್ಕಿ ಕೌಶಲ್, ಅನಿಲ್ ಗ್ರೋವರ್…

Read More

ನೋವಿನ ಅಗ್ನಿಕುಂಡದಲ್ಲಿ ಬೆಂದು, ನೊಂದು ತಾವು ಉಳಿದು, ಮಗನನ್ನೂ ಉಳಿಸಿ ಬೆಳೆಸಿ ಇಲ್ಲೀವರೆಗೆ ಸಾಗಿಬಂದಿದ್ದ ಲೀಲಾವತಿಯವರು, ಈಗ ಕಾಲನ ಕರೆಗೆ ಓಗೊಟ್ಟು ಮಗನನ್ನು ಜಗತ್ತಿನ ಕೈಗಿಟ್ಟು ಹೊರಟು ಹೋಗಿದ್ದಾರೆ. ತಾಯಿಯನ್ನು ಕಳೆದುಕೊಂಡ ವಿನೋದ್ ರಾಜ್ ನೋವು ಕೇವಲ ಅವರೊಬ್ಬರದ್ದಲ್ಲ.. ಎಲ್ಲರದ್ದೂ.. ನಾಗಕನ್ನಿಕೆಯಾಗಿ ಚಂದನವಕ್ಕೆ ನಟಿಯ ಪದಾರ್ಪಣೆ ರಂಗಭೂಮಿಯಲ್ಲಿದ್ದ ಲೀಲಾವತಿಯವರು 1949 ರಲ್ಲಿ, ಶಂಕರ್ ನಾಗ್ ಅಭಿನಯದ ನಾಗಕನ್ನಿಕೆ ಸಿನಿಮಾದಲ್ಲಿ ಸಖಿಯ ಪಾತ್ರದ ಮೂಲಕ ಚಂದನವನಕ್ಕೆ ಪ್ರವೇಶ ಮಾಡ್ತಾರೆ. ಬಟ್​​​ ಇದು ಅವರ ನಟನಾ ಮೆರುಗಿನ ಆರಂಭವಷ್ಟೇ. ಅವರ ನಿಜವಾದ ಮೆರುಗು ಹೆಣ್ಣಿನ ಮಾಂಗಲ್ಯದ ಮಹತ್ವ ಸಾರುವುದರಿಂದ ಶುರುವಾಗುತ್ತೆ. ಹೌದು ಲೀಲಾವತಿಯವ್ರು ಮೊದಲು ನಾಯಕಿಯಾಗಿ ಕಾಣಿಸಿಕೊಂಡಿದ್ದ ಅಚ್ಚ ಕನ್ನಡದ ಚಿತ್ರ ‘ಮಾಂಗಲ್ಯ ಯೋಗ’. ಮೇರು ನಟ ಕಿರೀಟ.. ಡಾ.ರಾಜ್ ಕುಮಾರ್ ಲೀಲಾವತಿ ಮ್ಯಾಜಿಕ್​​​ ಅದು ನಟನೆಗೆ ಒಂದು ಭೂಷಣ. ಈ ಇಬ್ಬರ ಜೋಡಿ ಚಂದನವನಕ್ಕೆ ಅಂದ ತಂದವರು. ಡಾ. ರಾಜ್​​ ಮತ್ತು ಲೀಲಾವತಿ ಅವ್ರ ಮೊದಲ ಜೋಡಿ. ರಣಧೀರ ಕಂಠೀರವ. ಈ ಜೋಡಿಯ…

Read More

ಕಲಬುರಗಿ:- ಇಲ್ಲಿ ನಡೆದ ಬಿಜೆಪಿ v/s ಕಾಂಗ್ರೆಸ್ ನಡುವಿನ ಪಾಲ್ಟಿಕಲ್ ವಾರ್ ನಿಲ್ಲೋ ಲಕ್ಷಣ ಕಾಣಿಸ್ತಿಲ್ಲ. ಅದಕ್ಕೆ ಪೂರಕ ಎಂಬಂತೆ ಇವತ್ತು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಕೈ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿರೋ ಘಟನೆ ನಡೆದಿದೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ವಾಪಾಸ ಆಗ್ತಿದ್ದ ವೇಳೆ ಕೈ ಕಾರ್ಯಕರ್ತರು ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ್ದಾರೆ. ಕೂಡಲೇ ಮಧ್ಯಪ್ರವೇಶ ಮಾಡಿದ ಪೋಲೀಸ್ರು ನಂತ್ರ ಮಣಿಕಂಠಗೆ ಕಾರಲ್ಲಿ ಹೊರಡಲು ಅನುವು ಮಾಡಿಕೊಟ್ಟರು..

Read More

ಬೆಂಗಳೂರು:- ನಟಿ ಲೀಲಾವತಿ ಅವರ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪಡೆದರು. ಪುತ್ರ ವಿನೋದ್ ರಾಜ್ ಅವರಿಗೆ ಸಾಂತ್ವನ ಹೇಳಿದ್ದಾರೆ. ಅಂತಿಮ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿ ಲೀಲಾವತಿ ಪಾರ್ಥಿವ ಶರೀರಕ್ಕೆ ನಮಿಸಿ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಲೀಲಾವತಿ ಅವರ ಬಗ್ಗೆ ಮಾತನಾಡಿದ್ದು, ಅವರು ಅಪ್ರತಿಮ ಕಲಾವಿದೆಯಾಗಿದ್ದರು. ನಾನು ಬಾಲ್ಯದಲ್ಲಿ ಲೀಲಾವತಿ ನಟನೆಯ ಸಾಕಷ್ಟು ಚಿತ್ರಗಳನ್ನು ನೋಡಿದ್ದೇನೆ. ಭಕ್ತಪ್ರಹ್ಲಾದ ಚಿತ್ರದಲ್ಲಿ ಅವರ ನಟನೆ ಮನೋಗ್ನವಾಗಿದೆ. ಲೀಲಾವತಿ ತಮ್ಮನ್ನು ತಾವು ಸಮಾಕಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅವರು ಗಳಿಸಿದ ಹಣವನ್ನು ಕೇವಲ ತಮಗೆ ಮಾತ್ರ ಬಳಸದೆ, ಸಮಾಜಿಕ ಕಾರ್ಯವನ್ನೂ ಮಾಡಿದ್ದಾರೆ. ಆಸ್ಪತ್ರೆ ಕಟ್ಟಿಸಿದ್ದಾರೆ, ಸಾಕಷ್ಟು ಹೋರಾಟ ಮಾಡಿದ್ದಾರೆ. ಇತ್ತೀಚೆಗಷ್ಟೆ ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಅವರ ಅಗಲಿಕೆಯಿಂದ ತುಂಬಾ ದುಃಖವಾಗಿದೆ ಎಂದು ಹೇಳಿದ್ದಾರೆ.

Read More

ಕಲಬುರಗಿ:- ಇಲ್ಲಿ ನಡೆದ ವಕೀಲ ಈರಣ್ಣಗೌಡನ ಕೊಲೆ ಪ್ರಕರಣದ ಮತ್ತೊಂದು CCTV ವಿಡಿಯೋ ವೈರಲ್ ಆಗಿದ್ದು ಮೈ ಜುಮ್ಮೆನಿಸುವಂತಿದೆ. ಒಂದಲ್ಲ ಎರಡಲ್ಲ 20 ಕ್ಕೂ ಹೆಚ್ಚು ಬಾರಿ ಕೊಚ್ಚಿದ್ದಾರೆ ಹಂತಕರು. ಸಾಯಿನಗರದ ಅಪಾರ್ಟ್‌ಮೆಂಟಿನಲ್ಲಿ ಹತ್ಯೆ ನಡೆದಿದ್ದು ನೆಲಕ್ಕೆ ಬಿದ್ದು ಒದ್ದಾಡಿದ್ರೂ ಸತತ ಐದು ನಿಮಿಷಗಳ ಕಾಲ ಮಚ್ಚಿನೇಟು ಹಾಕಿದ CCTV ದೃಶ್ಯ ಇದೀಗ ಎಲ್ಲೆಡೆ ವೈರಲ್ ಆಗಿದೆ. ಕೊಲೆ ಆರೋಪದ ಹಿನ್ನಲೆ ವಿವಿ ಠಾಣೆ ಪೋಲೀಸ್ರು ಈಗಾಗಲೇ ಮೂವರನ್ನ ಅರೆಸ್ಟ್ ಮಾಡಿದ್ದಾರೆ.

Read More

ವಿಜಯಪುರ:- ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಏನು ಮಾತನಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇಂಥ ವಿಷಯಗಳಲ್ಲಿ ಬಹಿರಂಗವಾಗಿ ಚರ್ಚಿಸದೆ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡುತ್ತೇವೆ ಎಂದರು. ಅಪ್ಪಟ ಕಾಂಗ್ರೆಸ್ಸಿಗರಾದ ಬಿ.ಕೆ.ಹರಿಪ್ರಸಾದ್ ಬದ್ಧತೆಯನ್ನು ನಾವ್ಯಾರೂ ಪ್ರಶ್ನೆ ಮಾಡುವುದಿಲ್ಲ, ಪ್ರಶ್ನೆ ಮಾಡಲೂ ಅಗದು. ಅನೇಕ ಸಂದರ್ಭಗಳಲ್ಲಿ ಅವರು ಸಲಹೆ, ಸೂಚನೆ ಕೊಟ್ಟಿದ್ದಾರೆ. ಎಲ್ಲ ಸಮುದಾಯಗಳಿಗೂ ಅನುದಾನ ಕೊಡಿ ಎಂದು ಹೇಳಿರುತ್ತಾರೆ. ಹಿಂದುಳಿದ ಸಮುದಾಯಗಳ ನಾಯಕರಾದ ಅವರು ಜನರ ನೋವನ್ನು ಅರ್ಥೈಸಿಕೊಂಡವರು. ಹೀಗಾಗಿ ಎಲ್ಲರಿಗೂ ಅನುದಾನ ಕೊಡಿ ಎಂದು ಹೇಳಿರಬಹುದು, ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದರು. ನೋಣವಿನಕೆರೆ ಸ್ವಾಮೀಗಳು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗಲಿ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಮುಖ್ಯಮಂತ್ರಿ ಮಾಡುವ ವಿಷಯ ಕಾಂಗ್ರೆಸ್ ಪಕ್ಷದ ವರಿಷ್ಠರ ಕೈಯ್ಯಲ್ಲಿರುತ್ತದೆ ಎಂದರು.

Read More

ನವದೆಹಲಿ:- ಸೋನಿಯಾ ಗಾಂಧಿ ಜನ್ಮದಿನ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ. ಎಕ್ಸ್​ನಲ್ಲಿ ಶುಭಾಶಯ ಸಂದೇಶ ಪ್ರಕಟಿಸಿರುವ ಮೋದಿ, ಶ್ರೀಮತಿ ಸೋನಿಯಾ ಗಾಂಧಿ ಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ಅವರಿಗೆ ಭಗವಂತ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ. ಸುದೀರ್ಘ ಕಾಲ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಕಾರಣಗಳಿಗಾಗಿ ಕಳೆದ ಕೆಲವು ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ದೂರವಿದ್ದಾರೆ. ಅವರ ಮಗ ರಾಹುಲ್ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Read More

PM ನರೇಂದ್ರ ಮೋದಿಯನ್ನು ಬೆದರಿಸಲು ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ಪುಟಿನ್ ಹೇಳಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರನ್ನು ಹೆದರಿಸಲು ಅಥವಾ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳುವುದರ ಜತೆಗೆ ಅವರ ಕಠಿಣ ನಿಲುವನ್ನು ಪುಟಿನ್ ಗೌರವಿಸಿದರು. ಮೋದಿ ಭಾರತ ಮತ್ತು ಭಾರತೀಯ ಜನರ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಯಾವುದೇ ಕ್ರಮ ಕೈಗೊಳ್ಳುತ್ತಾರೆ ಎಂದು ನಾನು ಊಹಿಸಲು ಸಾಧ್ಯವಿಲ್ಲ. ನಾನು ಹೊರಗಿನಿಂದ ಏನಾಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇನೆ ಮತ್ತು ಕೆಲವೊಮ್ಮೆ, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಭಾರತದ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸುವ ಅವರ ಕಠಿಣ ನಿಲುವು ನನಗೆ ಆಶ್ಚರ್ಯ ತಂದಿದೆ. ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆಯೂ ಪುಟಿನ್ ಪ್ರಸ್ತಾಪಿಸಿದರು. ರಷ್ಯಾ ಮತ್ತು ಭಾರತದ ನಡುವಿನ ಸಂಬಂಧಗಳು ಎಲ್ಲಾ ದಿಕ್ಕುಗಳಲ್ಲಿಯೂ ಪ್ರಗತಿಪರವಾಗಿ ಅಭಿವೃದ್ಧಿ ಹೊಂದುತ್ತಿವೆ ಮತ್ತು ಪ್ರಧಾನಿ ಮೋದಿ ಅವರು ಅಳವಡಿಸಿಕೊಂಡ ನೀತಿಯು ಅದರ ಮುಖ್ಯ ಭರವಸೆಯಾಗಿದೆ. ಮೋದಿ ಸರಿಯಾದ ಕೆಲಸವನ್ನು ಮಾಡುತ್ತಿದ್ದಾರೆ ಭಾರತ ಮತ್ತು ರಷ್ಯಾ ನಡುವೆ ಹೆಚ್ಚುತ್ತಿರುವ ವ್ಯಾಪಾರದ…

Read More