Author: AIN Author

ಬೆಳಗಾವಿ: “ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣ ತಲೆ ತಗ್ಗಿಸುವ ವಿಚಾರ. ಎಲ್ಲರೂ ಜಂಟಿಯಾಗಿ ಕೆಲಸ‌ ಮಾಡುವ ಮೂಲಕ ದೊಡ್ಡ ಮಟ್ಟದ ಹೋರಾಟ ಮಾಡಿದರೆ ಭ್ರೂಣ ಹತ್ಯೆ ತಡೆಯಲು ಸಾಧ್ಯವಾಗುತ್ತದೆ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್​ ಗುಂಡೂರಾವ್ ತಿಳಿಸಿದರು. ಬೆಳಗಾವಿಯಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ನಮಗೆ ಬಂದಿರುವ ಎಲ್ಲ ಮಾಹಿತಿಯನ್ನು ನಾವು ಸಿಒಡಿಗೆ ಕೊಡುತ್ತಿದ್ದೇವೆ. ಅವರು ತನಿಖೆ ಮಾಡುತ್ತಿದ್ದಾರೆ. ಅಲ್ಲದೇ ಸಾರ್ವಜನಿಕರು ಕೊಟ್ಟಿರುವ ಮಾಹಿತಿಯನ್ನೂ ಕಳುಹಿಸಿಕೊಟ್ಟಿದ್ದೇವೆ. ಸಾರ್ವಜನಿಕರೂ ಸಹ ನಮಗೆ ಹೆಚ್ಚಿನ ಸಹಕಾರ ಕೊಡಬೇಕು” ಎಂದು ಮನವಿ ಮಾಡಿದರು. ಉತ್ತರ ಕರ್ನಾಟಕದ ಬಗ್ಗೆ ಸದನದಲ್ಲಿ ಚರ್ಚೆ ಆಗುತ್ತಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, “ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಪ್ರತ್ಯೇಕವಾಗಿ ಚರ್ಚಿಸಲು ಸಭಾಧ್ಯಕ್ಷರು ದಿನಾಂಕ ನಿಗದಿಪಡಿಸಿದ್ದಾರೆ. ಆ ಚರ್ಚೆಯಲ್ಲಿ ಹೆಚ್ಚು ಶಾಸಕರು ಭಾಗಿಯಾಗಿ ಈ ಭಾಗದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಿದ್ದು ಖಂಡಿತವಾಗಿಯೂ ಅರ್ಥಪೂರ್ಣವಾಗುತ್ತದೆ” ಎಂದು ದಿನೇಶ್​…

Read More

ಬೆಳಗಾವಿ: “ಮಸ್ಲಿಮರು ಸೇರಿ ಎಲ್ಲಾ ಸಮುದಾಯದವರಿಗೂ ಅನುದಾನ ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದೆ, ಅದನ್ನು ನೀವು(ಮಾಧ್ಯಮದವರು) ಬರೆದರಾ?” ಎಂದು ಸಿಎಂ ಸಿದ್ದರಾಮಯ್ಯ ಅವರು ಗರಂ ಆದ ಪ್ರಸಂಗ ನಡೆಯಿತು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ಅನುದಾನ‌ ನೀಡುತ್ತೇನೆ ಎಂಬ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ ಅವರು, “ನಾನು ಮುಸ್ಲಿಂರು ಸೇರಿದಂತೆ ಎಲ್ಲ ಸಮುದಾಯಗಳಿಗೆ ಅನುದಾನ ನೀಡುತ್ತೇನೆ ಎಂದಿದ್ದೆ. ಆದರೆ ಮಾಧ್ಯಮಗಳು ನನ್ನ ಹೇಳಿಕೆಯನ್ನು ಸರಿಯಾಗಿ ಬರೆದಿಲ್ಲ, ಹೀಗಾಗಿ ನನ್ನ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ” ಎಂದರು. ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿ ಇದ್ದಾಗ ಬೆಂಗಳೂರಿನ ಗುಂಡಿ ಮುಚ್ಚಲಾಗಲಿಲ್ಲ, ಹೈಕೋರ್ಟ್ ಇವರಿಗೆ ಛೀಮಾರಿ ಹಾಕಿತ್ತು. ಬ್ರಾಂಡ್ ಬೆಂಗಳೂರು ಬಗ್ಗೆ ಮಾತನಾಡುವುದಕ್ಕೆ ಅವರಿಗೆ ಯಾವ ನೈತಿಕತೆ ಇದೆ?” ಎಂದು ಬಿಜೆಪಿ ನಾಯಕರ ಹೇಳಿಕೆಗೆ ಸಿಎಂ ತಿರುಗೇಟು ನೀಡಿದರು. ಸಚಿವರು ಸದನಕ್ಕೆ ಗೈರಾಗಿ ತೆಲಂಗಾಣಕ್ಕೆ ಹೋಗಿದ್ದಾರೆ ಎಂದು ಆರೋಪದ ಬಗ್ಗೆ ಪ್ರತಿಕ್ರಿಯಿಸಿ, “ಎಲ್ಲರೂ ತೆಲಂಗಾಣಕ್ಕೆ…

Read More

ಬೆಳಗಾವಿ:- ಹುಬ್ಬಳ್ಳಿ ಮುಸ್ಲಿಂ ಸಮಾವೇಶದಲ್ಲಿ ತೆರಳಿದ್ದ ಸಿಎಂ ಮೇಲೆ ಬಿಜೆಪಿ ಶಾಸಕ ಯತ್ನಾಳ ಅವರು ಬೇರೆ ಉಗ್ರ ಸಂಘಟನೆಗಳೊಂದಿಗೆ ಲಿಂಕ್ ಮಾಡುವುದು ಸರಿಯಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸಚಿವರುಗಳಿಗೆ ಸಾಕಷ್ಟು ಜನ ಮನವಿ ಕೊಡಲು ಬರುತ್ತಾರೆ. ಅವರು ಯಾರು ಅಂಥಾ ನಮಗೆ ಗೊತ್ತಾಗಬೇಕು. ಸಿಎಂ ಹುಬ್ಬಳ್ಳಿ ಮುಸ್ಲಿಂ ಸಮುದಾಯದ ಸಭೆಗೆ ಹೋದಾಗ ಅಲ್ಲಿಯ ವ್ಯಕ್ತಿಯ ಪಕ್ಕದಲ್ಲಿ ನಿಂತ ಮಾತ್ರಕ್ಕೆ ಸಿಎಂಗೂ ಉಗ್ರ ಸಂಘಟನೆ ಜೊತೆ ಲಿಂಕ್ ಮಾಡುವುದು ಸರಿಯಲ್ಲ. ಸಂಬಂಧಿಸಿದ ಇಲಾಖೆಯ ಅದನ್ನು ನೋಡಿಕೊಳ್ಳುತ್ತದೆ ಎಂದರು.

Read More

ಬೆಂಗಳೂರು:- ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಡಿಸಿಎಂ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನಿಂದ ಕಾಂಗ್ರೆಸ್ ಶಾಸಕರು ತೆರಳಿದ್ದಾರೆ. ಶಾಸಕರಾದ ರಂಗನಾಥ್, ಶರತ್ ಬಚ್ಚೇಗೌಡ, ಶ್ರೀನಿವಾಸ್, ಶಿವಣ್ಣ , ಇಕ್ಬಾಲ್ ಹುಸೇನ್ ತೆಲಂಗಾಣಕ್ಕೆ ಪ್ರಯಾಣ ಬೆಳೆಸಿದ್ದು, ವಿಶೇಷ ವಿಮಾನದ ಮೂಲಕ ತೆರಳಿದ ರಾಜ್ಯ ಕಾಂಗ್ರೆಸ್ ಶಾಸಕರು ತೆಲಂಗಾಣಕ್ಕೆ ತೆರಳಿದ್ದಾರೆ.

Read More

ಬೆಂಗಳೂರು:- ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೋರ್ವ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಮೃತಪಟ್ಟಿರುವ ಘಟನೆ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಜರುಗಿದೆ. ನಿನ್ನೆ ಮದ್ಯಾಹ್ನ ಸುಮಾರಿಗೆ ಈ ಘಟನೆ ನಡೆದಿದೆ. ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ಯುವಕ ರಾಕೇಶ್ ಮೃತ ದುರ್ದೈವಿ. ಮೃತ ಯುವಕ ಐದಾರು ವರ್ಷದಿಂದ‌ ಯುವತಿ ಜೊತೆ ಪ್ರೀತಿ ಮಾಡುತ್ತಿದ್ದ. ಆದರೆ ಯುವತಿ ಇತ್ತೀಚೆಗೆ ಬೇರೆ ಯುವಕನ ಜೊತೆಗೆ ಮದುವೆಗೆ ಸಿದ್ದವಾಗಿದ್ದಳು. ಇದರಿಂದಾಗಿ ಯುವತಿ ರಾಕೇಶನನ್ನು ಅವಾಯ್ಡ್ ಮಾಡಿದ್ದಳು. ನಿನ್ನೆ ರಾಕೇಶ್ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ. ಈ ಸಂದರ್ಭದಲ್ಲಿ ರಾಕೇಶ್ ಹಾಗೂ ಯುವತಿ ಜೊತೆ ಗಲಾಟೆ ಆಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಲಾಗಿದೆ. ಪೆಟ್ರೋಲ್ ಸುರಿದುಕೊಂಡು ರಾಕೇಶ್ ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ರಾಕೇಶ್ ನನ್ನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ರಾಕೇಶ್ ದೇಹದ ಬಹುತೇಕ ಬಾಗ ಸುಟ್ಟು ಹೋಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ನಿನ್ನೆ ರಾತ್ರಿ ಮೃತಪಟ್ಟಿದ್ದಾನೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿ ತಡರಾತ್ರಿ ಎಟಿಎಂ ಕಳ್ಳತನಕ್ಕೆ ವಿಫಲಯ ಯತ್ನ ನಡೆಸಿದ ಘಟನೆ ಜರುಗಿದೆ. ಇಬ್ಬರು ಕಳ್ಳರು ರಾತ್ರಿ 1:50ರ ಸುಮಾರಿಗೆ ನೆಲಮಂಗಲ ಟೌನ್ ಬಳಿ ಇರುವ ಎಟಿಎಂಗೆ ನುಗ್ಗಿ ಕಟರ್ ಮೂಲಕ ಎಟಿಎಂ ಯಂತ್ರ ಕಟ್ ಮಾಡಲು ಯತ್ನಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಮುಂಬೈ ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳು ಕಟ್ಟಡ ಮಾಲಿಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಕಟ್ಟಡದ ಮಾಲೀಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಾಲಿಕರು ಸ್ಥಳಕ್ಕೆ ಬರುತ್ತಿಂದ ಕಳ್ಳರು ಕೃತ್ಯಕ್ಕೆ ಬಳಸುತ್ತಿದ್ದ ವಸ್ತುಗಳನ್ನೆಲ್ಲ ಸ್ಥಳದಲ್ಲೇ ಬಿಟ್ಟು ಕಳ್ಳರು ಪರಾರಿಯಾಗಿದ್ದಾರೆ. ಆದರೆ, ಗ್ಯಾಸ್ ಕಟರ್ ಬಳಸಿ ಯಂತ್ರವನ್ನು ಕಟ್ ಮಾಡುವ ವೇಳೆ ಬೆಂಕಿ ತಗುಲಿ ಸಾವಿರಾರು ರೂಪಾಯಿ ಸುಟ್ಟು ಹೋಗಿವೆ. ಘಟನಾ ಸ್ಥಳಕ್ಕೆ ಬ್ಯಾಂಕ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ:- ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೇಯೇಂದ್ರ ಹೇಳಿದ್ದಾರೆ ನಗರದ ಖಾಸಗಿ ಹೊಟೇಲ್‌ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿ ಹೊಂದಿಲ್ಲ. ರೈತರಿಗೆ ಪರಿಹಾರ ಕೊಡುವ ಕಳಕಳಿ ಇಲ್ಲ. ರೈತರಿಗೆ ಪರಿಹಾರ ಕೊಡಲು ಖಜಾನೆಯಲ್ಲಿ ಹಣ ಇಲ್ಲದಿದ್ದರೂ ಅಲ್ಪಸಂಖ್ಯಾತರಿಗೆ ಹಣ ಕೊಡ್ತೀನಿ ಅಂತ ಹೇಳ್ತಾರೆ. ರಾಜ್ಯ ಸರ್ಕಾರದ ಆಧ್ಯತೆ ಸಂಕಷ್ಟದಲ್ಲಿರುವ ರೈತರಲ್ಲ. ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದನೆ ಮಾಡ್ತಿಲ್ಲ. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಒಲೈಕೆ ಮಾಡ್ತಿದೆ ಎಂದರು. ಇನ್ನೂ ಅಧಿವೇಶನ ಸಂದರ್ಭದಲ್ಲೊ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಇಂದು ಸದನದಲ್ಲಿ ಈ ಬಗ್ಗೆ ಪ್ರಶ್ನೆ ಮಾಡ್ತೀನಿ ಎಂದರು. ಪೃಥ್ವಿ ಸಿಂಗ್ ಮೇಲೆ ಹಲ್ಲೆ ವಿಚಾರವಾಗಿ ಮಾತನಾಡಿ, ಬಿಜೆಪಿಯ ದಲಿತ ಮುಖಂಡನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಆಗಿದೆ. ಪೊಲೀಸ್…

Read More

ಬೆಂಗಳೂರು:- ನಗರದ ತಲಘಟ್ಟಪುರ ಠಾಣೆ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ಹಳೇ ದ್ವೇಷಕ್ಕೆ ಯುವಕ ನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಜರುಗಿದೆ. 30 ವರ್ಷದ ಶರತ್ ಕೊಲೆಯಾದ ದುರ್ದೈವಿ ಎನ್ನಲಾಗಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶರತ್‌ನನ್ನು ಮಂಗಳವಾರ ರಾತ್ರಿ ಮಲ್ಲಸಂದ್ರ ಸಮೀಪದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದು, ಮೃತದೇಹವನ್ನು ಸಮೀಪದ ಪೊದೆ ಪಕ್ಕ ಎಸೆದು ಪರಾರಿಯಾಗಿದ್ದಾರೆ. ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಕೊಲೆಯಾದವ ಶರತ್‌ ಎಂಬುದು ಗೊತ್ತಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಮತ್ತೂಂದೆಡೆ ಶರತ್‌ ವಿರುದ್ಧ ಈ ಹಿಂದೆ ಆರ್‌.ಆರ್‌.ನಗರ ಠಾಣೆ ವ್ಯಾಪ್ತಿಯಲ್ಲಿ ಎನ್‌ಡಿಪಿಎಸ್‌ ಅಡಿಯಲ್ಲಿ ಕೇಸ್‌ ದಾಖಲಾಗಿತ್ತು ಎಂದು ಹೇಳಲಾಗಿದೆ

Read More

ಬೆಳಗಾವಿ:- ಬೆಳಗಾವಿ ತಾಲೂಕಿನ ದೇವಗಿರಿ-ಬಂಬರಗಾ ಕ್ರಾಸ್ ಬಳಿ ಟಿಪ್ಪರ್ ಮತ್ತು ಕಾರಿನ ಮಧ್ಯೆ ಅಪಘಾತದಲ್ಲಿ ಟಿಪ್ಪರ್​​​​ನ ಡೀಸೆಲ್​​​ ಟ್ಯಾಂಕರ್​​​​​​ ಸ್ಫೋಟಿಸಿ ಹೊತ್ತಿಕೊಂಡ ಬೆಂಕಿಯಿಂದ ಇಬ್ಬರು ಸಜೀವ ದಹನವಾಗಿರುವ ಘಟನೆ ಜರುಗಿದೆ. ಮೋಹನ್ ಮಾರುತಿ ಬೆಳ್ಗಾಂವಕರ್ (24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್ (12) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮದುವೆ ಮುಗಿಸಿಕೊಂಡು ರಾತ್ರಿ ಬಂಬರಗಾ ಗ್ರಾಮಕ್ಕೆ ಬರುವಾಗ ಕಾರು ಮತ್ತು ಟಿಪ್ಪರ್​ ನಡುವೆ ಅಪಘಾತ ಸಂಭವಿಸಿದೆ. ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್​ನ ಡಿಸೇಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿ ಉರಿದಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸಜೀವ ದಹನವಾಗಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡ ಮತ್ತಿಬ್ಬರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳಾದ ಮಹೇಶ್ ಬೆಳಗಾಂವಕರ್ ಮತ್ತು ಸ್ನೇಹಾ ಬೆಳಗುಂದಕರ್ ಸದ್ಯ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಸಿಬ್ಬಂದಿ…

Read More

ಬೆಂಗಳೂರು :- ನಗರದ ಜೆಪಿ ಭವನದಲ್ಲಿ ದೇವೇಗೌಡರ ಅಧ್ಯಕ್ಷತೆಯಲ್ಲಿ ಡಿ.9ರಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಪಕ್ಷದ ಶಾಸಕರು, ಸಂಸದರು ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರಿಗೂ ಆಹ್ವಾನ ನೀಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಿದ ನಂತರ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇದಾಗಿದೆ. ಕೆಲವು ಮಹತ್ವದ ನಿರ್ಣಯಗಳನ್ನು ಪಕ್ಷ ಕೈಗೊಳ್ಳಲಿದೆ. ಮುಂದಿನ ಲೋಕಸಭೆ ಚುನಾವಣೆ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಿದ್ಧತೆ, ಪಕ್ಷದ ವಿವಿಧ ಘಟಕಗಳ ಪುನಾರಚನೆ, ಎನ್.ಡಿ.ಎ ಮೈತ್ರಿಕೂಟ ಸೇರ್ಪಡೆ, ಪಕ್ಷ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎನ್‍ಡಿಎ ಮೈತ್ರಿಕೂಟ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ. ಇಬ್ರಾಹಿಂ ವಿರೋಧ ವ್ಯಕ್ತಪಡಿಸಿ ಪ್ರತ್ಯೇಕ ಸಭೆ ನಡೆಸಿದ್ದರು. ಪಕ್ಷ…

Read More