ಹೊಟ್ಟೆಯನ್ನು ಕರಗಿಸಲು ಅನೇಕ ಮಾರ್ಗಗಳಿವೆ. ವಿಶೇಷವಾಗಿ ನೀವು ಹಗಲು ರಾತ್ರಿ ಮಲಗುವ ಮೊದಲು ಇಂದು ಉಲ್ಲೇಖಿಸಲಿರುವ ಶಕ್ತಿಯುತ ಕೊಬ್ಬು ಕತ್ತರಿಸುವ ಪಾನೀಯವನ್ನು ತೆಗೆದುಕೊಂಡರೆ, ನಿಮ್ಮ ಹೊಟ್ಟೆ ಒಂದು ತಿಂಗಳೊಳಗೆ ಕಣ್ಮರೆಯಾಗುತ್ತದೆ. ಆ ಕೊಬ್ಬು ಕರಿಗಿಸಬಹುದು ಪಾನೀಯವನ್ನು ಹೇಗೆ ತಯಾರಿಸುವುದು ಎಂದು ಕಂಡುಹಿಡಿಯೋಣ. ಮೊದಲು ಒಲೆಯನ್ನು ಆನ್ ಮಾಡಿ ಮತ್ತು ಬಾಣಲೆಯಲ್ಲಿ ಪ್ಯಾನ್ ಹಾಕಿ ಮತ್ತು ಅದರಲ್ಲಿ ನಾಲ್ಕು ಚಮಚ ಧನಿಯಾಸ್ ಸೇರಿಸಿ ಹುರಿಯಿರಿ. ನಂತರ ಅದೇ ಬಾಣಲೆಯಲ್ಲಿ ಎರಡು ಚಮಚ ಬೇವು, ಹತ್ತು ಲವಂಗ ಮತ್ತು ಎರಡು ಇಂಚು ದಾಲ್ಚಿನ್ನಿ ಸೇರಿಸಿ ಹುರಿಯಿರಿ. ಅದರ ನಂತರ, ಮಿಕ್ಸರ್ ಜಾರ್ನಲ್ಲಿ ಹುರಿದ ಎಲ್ಲಾ ಪದಾರ್ಥಗಳನ್ನು ಮೃದುವಾಗಿ ಪುಡಿ ಮಾಡಬೇಕು. ಈಗ ಈ ಪುಡಿಯನ್ನು ಪೆಟ್ಟಿಗೆಯಲ್ಲಿ ಸಂಗ್ರಹಿಸಿ, ನಂತರ ಒಲೆಯನ್ನು ಆನ್ ಮಾಡಿ ಮತ್ತು ಅದನ್ನು ಒಂದು ಬಟ್ಟಲಿನಲ್ಲಿ ಹಾಕಿ ಮತ್ತು ಒಂದು ಕಪ್ ನೀರನ್ನು ಸುರಿಯಿರಿ. ತಯಾರಿಸಿದ ಪುಡಿಯನ್ನು ಅರ್ಧ ಚಮಚ ಸೇರಿಸಿ ಮತ್ತು ಎಂಟರಿಂದ ಹತ್ತು ನಿಮಿಷಗಳ ಕಾಲ ಕುದಿಸಿ. ನಂತರ…
Author: AIN Author
ಕಲಬುರಗಿ:- ಇಲ್ಲಿ ನಿನ್ನೆ ಹಾಡುಹಗಲೇ ನಡೆದ ಲಾಯರ್ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಆರು ಜನರ ವಿರುದ್ಧ ವಿವಿ ಠಾಣೆಯಲ್ಲಿ FIR ದಾಖಲಾಗಿದೆ. ಮೃತ ವಕೀಲ ಈರಣ್ಣ ಪತ್ನಿ ನಾಗರತ್ನ ನೀಡಿದ ಹೇಳಿಕೆಯಂತೆ ನೀಲಕಂಠ ಪೋಲೀಸ್ ಪಾಟೀಲ್ ಸೇರಿದಂತೆ ಆರು ಜನರ ವಿರುದ್ಧ ಕೇಸ್ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಎರಡು ತಂಡಗಳನ್ನ ರಚಿಸಲಾಗಿದ್ದು ಪಾತಕಿಗಳನ್ನ ಬಲೆಗೆ ಕೆಡವಲು ಪೋಲೀಸ್ರು ತನಿಖೆ ಚುರುಕುಗೊಳಿಸಿದ್ದಾರೆ.
ಗದಗ:- ಇಲ್ಲಿನ ಶಿಂಗಟಾಲೂರು ಗ್ರಾಮದ ಬಳಿಯ ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷವಾದ ಘಟನೆ ಜರುಗಿದೆ. ಶಿಂಗಟಾಲೂರಿನ ಹನುಮಪ್ಪನ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಬುಲೆರೋ ವಾಹನದಲ್ಲಿ ಸಾಗುತ್ತಿದ್ದವರಿಗೆ ಚಿರತೆ ಪ್ರತ್ಯಕ್ಷವಾಗಿದೆ. ಸವಾರರು ತಮ್ಮ ಮೊಬೈಲ್ನಲ್ಲಿ ಚಿರತೆ ವಿಡಿಯೋ ಸೆರೆ ಹಿಡಿದಿದ್ದಾರೆ. ಹಲವು ಬಾರಿ ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು ಎನ್ನಲಾಗಿದೆ.
ಉತ್ತರ ಪ್ರದೇಶ :-ತಾಯಿ ಬುದ್ದಿ ಮಾತು ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ. ಆತ್ಯಹತ್ಯೆಗೆ ಶರಣಾದ 13 ವರ್ಷ ವಯಸ್ಸಿನ ಬಾಲಕಿಯನ್ನು ಖುಷಿ ಶರ್ಮಾ ಎಂದು ಗುರುತಿಸಲಾಗಿದ್ದು, ಆಕೆಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಇದರಿಂದ ಕುಪಿತಗೊಂಡ ಆಕೆಯು ತಾಯಿ ಮಗಳು ಶಾಲೆಗೆ ಹೋಗುವಂತೆ ಒತ್ತಾಯಿಸಿ, ಗದರಿಸಿದ್ದಾರೆ. ತದನಂತರ ಕಪಾಳಮೋಕ್ಷ ಕೂಡ ಮಾಡಿದ್ದಾರೆ. ಇದರಿಂದ ತೀವ್ರ ಮನನೊಂದ ಶರ್ಮಾ ಅವರ ಪುತ್ರಿ ಖುಷಿ, ಶಾಲೆಗೆ ಹೋಗುವ ಬದಲು ಅಲ್ವಾರ್-ಮಥುರಾ ರೈಲ್ವೇ ಟ್ರ್ಯಾಕ್ ಬಳಿ ಹೋಗಿ ರೈಲಿನ ಮುಂದೆ ಜಿಗಿದಿದ್ದಾಳೆ. ಘಟನೆಯನ್ನು ಕಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಕೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಖುಷಿ ತನ್ನ ತಾಯಿ ಬೈದು, ಗದರಿದ್ದಕ್ಕೆ ಮನನೊಂದು ಆತ್ಯಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಂಬಲಾಗಿದೆ.
ಹುಬ್ಬಳ್ಳಿ: ಇಲ್ಲಿನ ಕಿಮ್ಸ್ಗೆ ಪ್ರಭಾರಿ ನಿರ್ದೇಶಕರಾಗಿ ಡಾ. ಎಸ್. ಎಫ್. ಕಮ್ಮಾರ ಅವರು ನೇಮಕವಾಗಿದ್ದು ಅಧಿಕಾರ ಸ್ವೀಕರಿಸಿದರು. ಡಿ. 6ರಂದೇ ನಿರ್ದೇಶಕರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಎಲುಬು ಮತ್ತು ಕೀಲು ವಿಭಾಗದ ಪ್ರಾಧ್ಯಾಪಕ ಹಾಗೂ ಪಿಎಂಆರ್ ಮುಖ್ಯಸ್ಥ ಡಾ. ಕಮ್ಮಾರ ಅವರನ್ನು ಸರ್ಕಾರ ನೇಮಕ ಮಾಡಿದೆ. ಕಾಯಂ ನಿರ್ದೇಶಕರ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಈ ಹುದ್ದೆಯಲ್ಲಿ ಅವರು ಮುಂದುವರಿಯಲಿದ್ದಾರೆ. ನಿಗರ್ಮಿತ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರ ಸೇವೆಯು ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಮುಂದುವರಿಯಲಿದೆ. ಎಂಎಸ್ ನೇಮಕ: ಇಲ್ಲಿನ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವೈದ್ಯಕೀಯ ಅಧೀಕ್ಷಕರಾಗಿ ಮಕ್ಕಳ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಎಸ್. ರಾಜಾಶಂಕರ ಅವರು ನೇಮಕವಾಗಿದ್ದು, ಅವರೂ ಕೂಡ ಗುರುವಾರ ಆದೇಶ ಪ್ರತಿ ಸ್ವೀಕರಿಸಿ ಹುದ್ದೆ ಅಲಂಕರಿಸಿದರು. ಈ ವೇಳೆ ನೇಮಕವಾದ ಇಬ್ಬರಿಗೂ ಹಾಗೂ ನಿರ್ಗಮಿತ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರಿಗೂ ವೈದ್ಯಕೀಯ ಸಿಬ್ಬಂದಿ ಹೂಗುಚ್ಛ…
ರೋಮ್: ಚೀನಾಗೆ ಇಟಲಿ ಬಿಗ್ ಶಾಕ್ ನೀಡಿದೆ. ಚೀನಾದ (China) ಮಹತ್ವಾಕಾಂಕ್ಷೆಯ ಬೆಲ್ಟ್ ಅಂಡ್ ರೋಡ್ ಇನಿಷಿಯೇಟಿವ್ (BRI) ಯೋಜನೆಯಿಂದ ಹೊರಬರುವುದಾಗಿ ಇಟಲಿ (Italy) ಅಧಿಕೃತವಾಗಿ ತಿಳಿಸಿದೆ. ಈಗ ಇಟಲಿ ಅಧಿಕೃತವಾಗಿ ಈ ಯೋಜನೆಯಿಂದ ಹೊರಬರುವುದಾಗಿ ಚೀನಾಗೆ ತಿಳಿಸಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. 2019ರಲ್ಲಿ ನಡೆದ ಒಪ್ಪಂದವು ಮಾರ್ಚ್ 2024 ರಲ್ಲಿ ಮುಕ್ತಾಯಗೊಳ್ಳುತ್ತದೆ. ರೋಮ್ ಕನಿಷ್ಠ ಮೂರು ತಿಂಗಳ ಮೊದಲೇ ಲಿಖಿತವಾಗಿ ತಿಳಿಸದೇ ಇದ್ದರೆ ಅದು ಸ್ವಯಂಚಾಲಿತವಾಗಿ ನವೀಕರಿಸಲ್ಪಡುತ್ತದೆ. ಈಗ ಈ ಒಪ್ಪಂದವನ್ನು ನವೀಕರಿಸುವುದಿಲ್ಲಎಂದು ಇಟಲಿ ಚೀನಾಗೆ ಇತ್ತೀಚಿಗೆ ಪತ್ರದ ಮೂಲಕ ತಿಳಿಸಿದೆ ಎಂದು ವರದಿಯಾಗಿದೆ. ಚೀನಾದ ಈ ಯೋಜನೆಗೆ 2019ರಲ್ಲಿ ಇಟಲಿ ಸಹಿ ಹಾಕಿತ್ತು. ಬಿಆರ್ಐ ಸೇರಿದ ಏಕೈಕ ಪಾಶ್ಚಿಮಾತ್ಯ ದೇಶ ಇಟಲಿಯಾಗಿತ್ತು. ಲಾಭಕ್ಕಿಂತ ನಷ್ಟವೇ ಹೆಚ್ಚಾಗಬಹುದು ಎಂಬ ಕಾರಣಕ್ಕೆ ಇಟಲಿ ಈ ಯೋಜನೆಯಿಂದ ಹಿಂದಕ್ಕೆ ಸರಿಯಲಿದೆ ಎಂಬ ವಿಚಾರ ಕೆಲ ತಿಂಗಳಿಂದ ಸುದ್ದಿಯಾಗುತ್ತಿತ್ತು. ನಾವು ಇನ್ನು ಮುಂದೆ ಬಿಆರ್ಐ ಭಾಗವಾಗಿರದಿದ್ದರೂ ಸಹ ಚೀನಾದೊಂದಿಗೆ ಅತ್ಯುತ್ತಮ…
ದೆಹಲಿಯ ಡಾಕ್ಟರ್ ಕರುಣಿಸಿಂಗ್ ಶೂಟಿಂಗ್ ರೇಂಜ್ನಲ್ಲಿ ನಡೆಯಲಿರುವ ಡಿ. 12ರಿಂದ 16ರವರೆಗೆ ನಡೆಯಲಿರುವ ಖೇಲೋ ಇಂಡಿಯಾ ಪ್ರಥಮ ಪ್ಯಾರಾ ಗೇಮ್ಸ್ನ ಶೂಟಿಂಗ್ ಸ್ಪರ್ಧೆಗೆ ರಾಜ್ಯದ ಐವರು ಶೂಟರ್ಸ್ಗಳು ಆಯ್ಕೆಯಾಗಿದ್ದಾರೆ. ಆ ಪೈಕಿ ನಾಲ್ವರು ಶೂಟರ್ಗಳು ಹುಬ್ಬಳ್ಳಿ ಸ್ಪೋರ್ಟ್ಸ್ ಶೂಟಿಂಗ್ ಅಕಾಡೆಮಿಯ ಕ್ರೀಡಾಪಟುಗಳಾಗಿದ್ದಾರೆ. ಜ್ಯೋತಿ ಸಣ್ಣಕ್ಕಿ, ಶಂಕರಲಿಂಗ ತವಳಿ, ರಾಕೇಶ ನಿಡಗುಂದಿ, ಸಚಿನ್ ಸಿದ್ದಣ್ಣವರ, ಶ್ರೀಹರ್ಷ ದೇವರೆಡ್ಡಿ ಇವರೆಲ್ಲರೂ ರೈಫಲ್ ವಿಭಾಗದಲ್ಲಿ ಭಾಗವಹಿಸುತ್ತಿದ್ದಾರೆ. ಇಲ್ಲಿಯವರೆಗೆ ಖೇಲೋ ಇಂಡಿಯಾ ಗೇಮ್ಸ್ನಲ್ಲಿ ಸಾಮಾನ್ಯ ಕ್ರೀಡಾಪಟು ಮಾತ್ರ ಭಾಗವಹಿಸಲು ಅವಕಾಶವಿತ್ತು. ಆದರೆ, ಇದೇ ಮೊದಲ ಬಾರಿಗೆ ಅಂಗವಿಕಲ ಕ್ರೀಡಾಪಟುಗಳಿಗೂ ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್ ಅನ್ನು ಪ್ರಥಮ ಬಾರಿಗೆ ಭಾರತದಲ್ಲಿ ಆಯೋಜಿಸಲಾಗಿದೆ. ಇದರಲ್ಲಿ ಅತ್ಯುತ್ತಮ ಪ್ರದರ್ಶನ ಮತ್ತು ಪದಕ ಪಡೆದ ಕ್ರೀಡಾಪಟುಗಳಿಗೆ ಮುಂಬರುವ ದಿನಗಳಲ್ಲಿ ಉತ್ತಮ ಅವಕಾಶಗಳು ದೊರೆಯಲಿವೆ ಎಂದು ಹುಬ್ಬಳ್ಳಿ ಸ್ಪೋರ್ಟ್ಸ್ ಶೂಟಿಂಗ್ ಅಕಾಡೆಮಿ ತರಬೇತುದಾರ, ಮಾಜಿ ಸೈನಿಕ ರವಿಚಂದ್ರ ಬಾಲೆಹೊಸೂರ ತಿಳಿಸಿದ್ದಾರೆ. ರಾಜ್ಯದಿಂದ ಖೇಲೋ ಇಂಡಿಯಾ ಪ್ರಥಮ ಪ್ಯಾರಾ ಗೇಮ್ಸ್ನಲ್ಲಿ ಭಾಗವಹಿಸುತ್ತಿರುವ ಅಂಗವಿಕಲ ಕ್ರೀಡಾಪಟುಗಳು…
ಬೆಳಗಾವಿ:- ಸರ್ಕಾರಕ್ಕೆ ಗ್ಯಾರಂಟಿ ಜಾರಿಗಿರುವ ಆಸಕ್ತಿ ರೈತರ ಮೇಲಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಸಂಕಷ್ಟಕ್ಕೊಳಗಾಗಿರುವ ರೈತರ ನೆರವಿಗೆ ಸರ್ಕಾರವು ಧಾವಿಸಬೇಕಾದ ಅಗತ್ಯವಿದ್ದು, ಎರಡು ಲಕ್ಷ ರು.ವರೆಗಿನ ಕೃಷಿ ಸಾಲಮನ್ನಾ ಮಾಡುವುದರ ಜತೆಗೆ ತಕ್ಷಣ 10 ಸಾವಿರ ಕೋಟಿ ರು. ಅನುದಾನವನ್ನು ಒದಗಿಸಬೇಕು ಎಂದರು ಸರ್ಕಾರಕ್ಕೆ ಪ್ರಚಾರದ ಮೇಲೆ ಇರುವ ಆಸಕ್ತಿ ರೈತರ ಬಗ್ಗೆ ಇಲ್ಲ. ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಅಸಡ್ಡೆತನ ಆಶ್ಚರ್ಯವನ್ನುಂಟು ಮಾಡಿದೆ. ಕಳೆದ ಆರು ತಿಂಗಳಿನಿಂದ ಕೇವಲ ಗ್ಯಾರಂಟಿಗಳ ಬಗ್ಗೆಯೇ ಕೆಲಸ ಮಾಡುತ್ತಿರುವ ಈ ಸರ್ಕಾರ, ಆರ್ಥಿಕ ಹೊರೆಯನ್ನು ತನ್ನ ಮೇಲೆ ಎಳೆದುಕೊಂಡು ರೈತರಿಗೆ ಪ್ರತಿಯೊಂದಕ್ಕೂ ಬರೆ ಎಳೆಯುತ್ತಿದೆ. ಬೆಳೆ ನಾಶದಿಂದ ಅತೀವ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ಸಾಲಮನ್ನಾ ಮೂಲಕ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು. ಗ್ಯಾರಂಟಿಗಳ ಅನುಷ್ಠಾನಗೊಳಿಸುವ ಭರದಲ್ಲಿ ಉಳಿದ ಕಾರ್ಯಗಳ ಕಡೆಗಣನೆ ಮಾಡಲಾಗಿದೆ. ಗ್ಯಾರಂಟಿ ಜಾರಿಗೆ ಹೆಚ್ಚು ಸಮಯ ಕೊಟ್ಟು ಆರ್ಥಿಕ ಹೊರೆ ಅವರೇ ತಂದು…
ಬೆಂಗಳೂರು:- ಹಾಡಹಗಲೇ ಮನೆ ಬೀಗಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಅರೆಸ್ಟ್ ಮಾಡಲಾಗಿದೆ. ನಾಗರಾಜ್ ಅಲಿಯಾಸ್ ಡೈಮಂಡ್ ನಾಗ ಹಾಗೂ ತ್ರಿವೇಣ ಕುಮಾರ್ ಬಂಧಿತರು. ಆರೋಪಿಗಳಿಂದ ₹24.5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಾಲ್ಕು ಬೈಕ್ಗಳು ಸೇರಿದಂತೆ ₹28 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ನಗರದ ಹೊರವಲಯ ಜನ ಸಂಚಾರ ವಿರಳ ಇರುವ ವಸತಿ ಪ್ರದೇಶಗಳಲ್ಲಿ ಸಂಚರಿಸಿ ಮನೆಗಳ ಬೀಗ ಮುರಿದು ಆರೋಪಿಗಳು ಕಳ್ಳತನ ಮಾಡುತ್ತಿದ್ದರು. ಇತ್ತೀಚೆಗೆ ಸಿಂಗಾಪುರದ ವರದರಾಜಸ್ವಾಮಿ ಲೇಔಟ್ನಲ್ಲಿ ಜಿ.ಅನೂಷಾ ಅವರ ಮನೆ ಬೀಗ ಮುರಿದು 452 ಗ್ರಾಂ ಚಿನ್ನದ ಒಡವೆ ಹಾಗೂ ₹30 ಸಾವಿರ ನಗದು ದೋಚಿದ್ದರು. ಈ ಬಗ್ಗೆ ತನಿಖೆಗಿಳಿದ ಇನ್ಸ್ಪೆಕ್ಟರ್ ಸಿ.ಬಿ.ಶಿವಸ್ವಾಮಿ ನೇತೃತ್ವದ ತಂಡವು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹುಬ್ಬಳ್ಳಿ: ಎಲೆಕ್ಟ್ರಾನಿಕ್ ಸಾಮಗ್ರಿಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ನಂಬಿಸಿದ ವಂಚಕರು, ನಗರದ ವ್ಯಕ್ತಿಯೊಬ್ಬರಿಂದ 3.26 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ರೋಹಿತ್ ಎಂಬಾತ ಮೊಬೈಲ್ ಫೋನ್ ಬೇಕೆಂದು ಸಮಾಜಿಕ ಜಾಲತಾಣದ ಮೂಲಕ ಸಂದೇಶ ಕಳುಹಿಸಿದ್ದ. ಇದಕ್ಕೆ ಆರ್ಡರ್ ಒಕೆ ಆಗಿದೆ ಎಂದು ನಂಬಿಸಿದ ವಂಚಕರು, ಹಂತ ಹಂತವಾಗಿ 3.26 ಲಕ್ಷ ರೂ. ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.