Author: AIN Author

ಮೀರ್ಪುರ್: ಕಿವೀಸ್‌ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಸರಣಿಯ 2ನೇ ಪಂದ್ಯದಲ್ಲಿ ಬಾಂಗ್ಲಾದೇಶ ಕ್ರಿಕೆಟಿಗ ಮುಶ್ಫಿಕರ್ ರಹೀಮ್ (Mushfiqur Rahim) ಎಡವಟ್ಟಿನಿಂದ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿಕೊಂಡಿರುವುದು ಸುದ್ದಿಯಾಗಿದೆ. ಬಾಂಗ್ಲಾದೇಶ (Bangladesh) ಹಾಗೂ ನ್ಯೂಜಿಲೆಂಡ್‌‌ (New Zealand) ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ (Test Series) ಬಾಂಗ್ಲಾದೇಶ ತಂಡವು 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆದ್ರೆ 2ನೇ ಟೆಸ್ಟ್‌ ಪಂದ್ಯದಲ್ಲಿ ಇನ್ನಿಂಗ್ಸ್‌ ಆರಂಭಿಸಿದ ಬಾಂಗ್ಲಾದೇಶ ತಂಡ ಮೊದಲ ದಿನವೇ 66.2 ಓವರ್‌ಗಳಲ್ಲಿ 172 ರನ್‌ಗಳಿಗೆ ಆಲೌಟ್‌ ಆಯಿತು. ಈ ಪಂದ್ಯದಲ್ಲಿ 83 ಎಸೆತಗಳಲ್ಲಿ 35 ರನ್‌ ಗಳಿಸಿದ್ದ ಬಾಂಗ್ಲಾದೇಶ ಕ್ರಿಕೆಟಿಗ ಮುಶ್ಫಿಕರ್ ರಹೀಮ್ ಅಪರೂಪದ ಔಟ್‌ಗೆ ತುತ್ತಾಗಿದ್ದಾರೆ. ಇದು ಕ್ರಿಕೆಟ್‌ ಅಭಿಮಾನಿಗಳಲ್ಲೂ ಕುತೂಹಲ ಮೂಡಿಸಿದ್ದು, ಸೋಶಿಯಲ್‌ ಮೀಡಿಯಾಗಳಲ್ಲೂ ಸದ್ದು ಮಾಡುತ್ತಿದೆ. https://ainlivenews.com/the-most-wanted-terrorist-is-poisoned-in-pakistan-jail/  ಕಿವೀಸ್‌ ಬೌಲರ್ ಕೈಲ್ ಜೇಮಿಸನ್ (Kyle Jamieson) ‌41ನೇ ಓವರ್‌ನ 4ನೇ ಎಸೆತ ಬೌಲಿಂಗ್‌ ಮಾಡಿದಾಗ ಮುಶ್ಫಿಕರ್ ಅದನ್ನು ಬ್ಯಾಟ್‌ನಿಂದ ರಕ್ಷಣೆ ಮಾಡಿದರು. ತಕ್ಷಣವೇ ಸ್ಟಂಪ್ಸ್‌ನತ್ತ ಹೋಗುತ್ತಿದ್ದ ವೇಳೆ…

Read More

ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರಿನ ಸಾರಿಗೆ ಸಂಪರ್ಕ ವ್ಯವಸ್ಥೆಯ ಜೀವನಾಡಿಯಾಗಿರುವ ನಮ್ಮ ಮೆಟ್ರೋದ ಪಿಂಕ್ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣವಾಗಿದೆ. ನಮ್ಮ ಮೆಟ್ರೋ ಪಿಂಕ್ ಮಾರ್ಗದ ರೀಚ್ 6ರ ಅಂದರೆ ಕಾಳೇನ ಅಗ್ರಹಾರ – ನಾಗವಾರ ನಡುವಿನ ಮಾರ್ಗದಲ್ಲಿ ವೆಂಕಟೇಶಪುರ- ಕೆ.ಜಿ ಹಳ್ಳಿ ಸುರಂಗ ಕಾಮಗಾರಿ ಪೂರ್ಣಗೊಂಡಿದೆ. ಈ ಸುರಂಗ ಕೊರೆಯುತ್ತಿದ್ದ ತುಂಗಾ ಸುರಂಗ ಕೊರೆಯುವ ಯಂತ್ರವು ಕಾಡುಗೊಂಡನ ಹಳ್ಳಿ (ಕೆಜಿ ಹಳ್ಳಿ)ಯಲ್ಲಿ ಹೊರಗೆ ಬಂದಿದೆ. ಬೆಂಗಳೂರು ಮೆಟ್ರೋದ ಅತಿ ಉದ್ದದ ಸುರಂಗ ಮಾರ್ಗ ಇದಾಗಿದ್ದು, ನಮ್ಮ ಮೆಟ್ರೋದ ಪಿಂಕ್ ಮಾರ್ಗದಲ್ಲಿದೆ. ಗುಲಾಬಿ ಮಾರ್ಗದ ಸುರಂಗ ಕೊರೆಯುವ ಕಾಮಗಾರಿ ಶೇಕಡ 90 ಪೂರ್ಣಗೊಂಡಂತಾಗಿದೆ. https://ainlivenews.com/the-most-wanted-terrorist-is-poisoned-in-pakistan-jail/ ವೆಂಕಟೇಶಪುರ- ಕೆ.ಜಿ ಹಳ್ಳಿ ಸುರಂಗ ಕಾಮಗಾರಿಯನ್ನು 2022ರ ಅಕ್ಟೋಬರ್‌ನಲ್ಲಿ ಶುರುಮಾಡಲಾಗಿತ್ತು. ಈ ಸುರಂಗ ಮಾರ್ಗ 1.184.4 ಮೀಟರ್ ಉದ್ದ ಇದೆ. ಪಿಂಕ್ ಮಾರ್ಗದಲ್ಲಿ 24 ಸುರಂಗ ಮಾರ್ಗ ಇದ್ದು, ಈ ಪೈಕಿ 21 ಸುರಂಗ ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ.

Read More

ತಮಿಳಿನ ಖ್ಯಾತ ನಟ ಇವಿ ಗಣೇಶ್ ಬಾಬು ನಟಿಸಿ, ನಿರ್ದೇಶಿಸಿ, ನಿರ್ಮಿಸಿರುವ “ಮಂಚ” ಚಿತ್ರದ ಟ್ರೇಲರ್ ಇಂದು ಬಿಡುಗಡೆ ಆಗಿದೆ.. ಟ್ರೇಲರ್ ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ತಮ್ಮ ಸಂಗೀತದಿಂದ ನಮ್ಮ ಕನ್ನಡಿಗರ ಮನ ತಣಿಸಿದ “ಅಮೃತವರ್ಷಿಣಿ” ಖ್ಯಾತಿಯ ಸಂಗೀತ ನಿರ್ದೇಶಕ ದೇವಾ ರವರ ಮಗ ಶ್ರೀಕಾಂತ್ ದೇವಾ ರವರು ಹೃದಯಸ್ಪರ್ಶಿ ಸಂಗೀತ ನೀಡಿರುವ ಈ “ಮಂಚ” ಚಿತ್ರ ಕೇವಲ ವ್ಯಕ್ತಿಗಳ ಜೊತೆಗೆ ಮಾತ್ರವಲ್ಲದೆ ನಿರ್ಜೀವ ವಸ್ತುಗಳ ಜೊತೆಗೂ ಕೂಡ ನಮಗಿರುವ ಭಾವನಾತ್ಮಕ ಸಂಬಂಧಗಳ ವೈಶಿಷ್ಟ್ಯತೆಯನ್ನು ಎತ್ತಿ ಹಿಡಿಯುವ ಈ ವಿಶೇಷವಾದ ಚಿತ್ರ ಎಲ್ಲರ ಮನಸ್ಸನ್ನು ಗೆಲ್ಲಲಿದೆ. https://ainlivenews.com/the-most-wanted-terrorist-is-poisoned-in-pakistan-jail/ ತಮಿಳಿನ ಕನ್ನಡ ಅವತರಣಿಕೆಯ ಈ ಚಿತ್ರಕ್ಕೆ RRR ಹಾಗೂ ಪುಷ್ಪ ಖ್ಯಾತಿಯ ವರದರಾಜ್ ಚಿಕ್ಕಬಳ್ಳಾಪುರ ಸಾಹಿತ್ಯ ಹಾಗೂ ಸಂಭಾಷಣೆ ಬರೆದು ಡಬ್ಬಿಂಗ್ ಮಾಡಿದ್ದಾರೆ.”ಮಂಚ” ಎಂದರೆ ಅದು ಕೇವಲ ಮಲಗಲು ಬಳಸುವ ಸಾಧನವಲ್ಲ.. ಅದು ಹಲವು ಜನನ ಮರಣಗಳಿಗೆ ಸಾಕ್ಷಿಯಾಗುವ ಒಂದು ಅಚಲಿತ ಜೀವವಾಗಿರುತ್ತದೆ. ಕೇವಲ ಕಣ್ಣುಗಳಿಂದ ನೋಡಿದರೆ ಅದೊಂದು…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಐಸಿಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಇರುವ ಮುಸ್ಲೀಂ ಮೌಲ್ವಿ ಕುಳಿತಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್ ಐ ಎಗೆ ಒಪ್ಪಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯ ಜೊತೆ ವೇದಿಕೆ ಹಂಚಿಕೊಂಡ ಮೌಲ್ವಿಯ ವಿರುದ್ದ ವಿಜಯಪುರದಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿರುವ ಬಗ್ಗೆ ಪ್ರಕರಣಗಳು ದಾಖಲಾಗಿವೆ. ಅವರಿಗೆ ಐಎಸ್ ಐ ಸಂಪರ್ಕ ಇರುವ ಬಗ್ಗೆ ನಮ್ಮ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಗಳು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಎನ್ ಐಎ ಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು. ಈ ಹಿಂದೆ ಕುಕ್ಕರ್ ಬಾಂಬ್ ಪ್ರಕರಣದ ಬಗ್ಗೆ ಕಾಂಗ್ರೆಸ್ ನವರು ಲಘುವಾಗಿ ಪರಿಗಣಿಸಿದ್ದರು. ಆದರೆ, ಅವರಲ್ಲಿ ಐದಾರು ಜನರು ದೇಶದ್ರೋಹ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎನ್ನುವುದು ಬೆಳಕಿಗೆ ಬಂದಿದೆ. ಮುಖ್ಯಮಂತ್ರಿ ಗಳು ಮುಸ್ಲೀಂ ಸಮುದಾಯಕ್ಕೆ 10…

Read More

ಬೆಳಗಾವಿ: ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲದೇ ಪಾಪರ್ ಆಗಿದೆ. ಜನರ ಮೇಲೆ ವಿಪರೀತ ತೆರಿಗೆ ಹಾಕಿ ಹಣ ವಸೂಲಿ ಮಾಡಲು ಹೊರಟಿರುವ ಇದೊಂದು ಕೆಟ್ಟ ಸರ್ಕಾರ ಎಂದು ವಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ. ಬೆಳಗಾವಿಯ ಖಾಸಗಿ ಹೋಟೆಲ್​ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರ ಹಣ ದುರ್ಬಳಕೆ ಆಗಬಾರದು. ದಲಿತರಿಗೆ ಮೀಸಲಿಟ್ಟ ಹಣ ಅವರ ಕೇರಿಗಳ ಅಭಿವೃದ್ಧಿಗೆ ಬಳಸುವುದು ಬಿಟ್ಟು ನಿಮ್ಮ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದ್ದೀರಿ. ರಾಜ್ಯದಲ್ಲಿ ಬರಗಾಲ ಉಂಟಾಗಿರುವ ಸಂದರ್ಭದಲ್ಲಿ ಸರ್ಕಾರ ರಾಜ್ಯದ ಜನತೆ ಮೇಲೆ ಹೆಚ್ಚಿನ ತೆರಿಗೆ ಹೇರುತ್ತಿದೆ ಎಂದು ಕಿಡಿಕಾರಿದರು. ಚುನಾವಣೆಗೂ ಮುಂಚೆ ವೋಟ್​ಗಾಗಿ ಗ್ಯಾರೆಂಟಿ ಘೋಷಿಸಿದರು. ಈಗ ಅವುಗಳಿಗೆ ಹಣ ಬಳಸಿ ರಸ್ತೆ ಅಭಿವೃದ್ಧಿ, ಆಸ್ಪತ್ರೆ, ಶಾಲೆಗಳು ಮತ್ತು ರೈತರಿಗೆ ಕೊಡೋಕೆ ಇವರ ಬಳಿ ಹಣವಿಲ್ಲ. ಆದರೆ ಅಲ್ಪಸಂಖ್ಯಾತರಿಗೆ ಮಾತ್ರ ಕೋಟಿ ಕೋಟಿ ಹಣ ಕೊಡ್ತೀನಿ ಅಂತ ಹೇಳ್ತಾರೆ. ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡ್ತಿದೆ. ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಒಣಮೇವು, ಹಸಿ…

Read More

ತುಮಕೂರು:- ಜಿಲ್ಲೆಯಲ್ಲಿ ಗೊಲ್ಲರಹಟ್ಟಿಗಳ ಮೈಲಿಗೆ ಮೌಢ್ಯಾಚರಣೆ ಮುಂದುವರಿದಿದೆ. ಬಾಣಂತಿ- ಮಗು ಮತ್ತು ಋತುಮತಿಯಾದ ಮಹಿಳೆಯರನ್ನು ಊರ ಹೊರಗಿನ ಗುಡಿಸಲಿನಲ್ಲಿಟ್ಟು ಮೌಢ್ಯಾಚರಣೆ ನಡೆಯುತ್ತಿದೆ. ತುರುವೇಕೆರೆ ತಾಲೂಕಿನ ಮಾಯಸಂದ್ರದ ವರಹಸಂದ್ರ ಗೊಲ್ಲರಹಟ್ಟಿಯಲ್ಲಿ ಘಟನೆ ಜರುಗಿದೆ. ಬಾಣಂತಿ ಚೈತ್ರಾ ಮತ್ತು ಮಗುವನ್ನು ಈ ರೀತಿ ಊರ ಹೊರ ಇಡಲಾಗಿದೆ. ಹಾಗೂ ಋತುಮತಿಯರಾದ ಶಾರದಮ್ಮ, ಪಾರ್ವತಮ್ಮರನ್ನು ಊರ‌ ಹೊರಗಿಟ್ಟು ಅಮಾನುಷ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟು ಸಂತ್ರಸ್ತ ಮಹಿಳೆಯರನ್ನು ತಹಶಿಲ್ದಾರ್ ರೇಣುಕುಮಾರ್ ರಕ್ಷಣೆ ಮಾಡಿದ್ದಾರೆ.

Read More

ಹುಬ್ಬಳ್ಳಿ: ವೈಜ್ಞಾನಿಕವಾಗಿ ಮೀಸಲಾತಿ ಸೌಲಭ್ಯ ದೊರೆಯಲು ದೇಶದೆಲ್ಲೆಡೆ ಜಾತಿಗಣತಿ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಗಣತಿ ಆಧರಿಸಿ ಅವೈಜ್ಞಾನಿಕವಾಗಿ ಸೌಲಭ್ಯ ಕಲ್ಪಿಸಲಾಗಿದೆ. ಸರ್ವರಿಗೂ ಸಕಲ ಸೌಲಭ್ಯ ಸಿಗಲು ಜಾತಿಗಣತಿ ಅವಶ್ಯ. ರಾಜ್ಯದಲ್ಲಿ ನಡೆದ ಜಾತಿಗಣತಿ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿ, ಸದನದ ಮುಂದಿಡಬೇಕು ಎಂದು ಒತ್ತಾಯಿಸಿದರು. ಗೂಳಿಹಟ್ಟಿ ಶೇಖರ್ ಅವರನ್ನು ನಾಗಪುರದ ಹೆಗಡೇವಾರ್ ಸ್ಮಾರಕದೊಳಗೆ ಬಿಡದಿರುವ ಘಟನೆ ಜಾತಿ ಕಾರಣಕ್ಕೇ ನಡೆದಿದ್ದರೆ ಖಂಡನೀಯ. ಆರ್ ಎಸ್ಎಸ್ ಇದಕ್ಕೆ ತಲೆಬಾಗಬೇಕು. ಈ ಹಿಂದೆ ನಾನು ಬಿಜೆಪಿಯಲ್ಲಿದ್ದಾಗ ಹಲವು ಸಭೆಗಳಿಗೆ ಆಹ್ವಾನವನ್ನೇ ನೀಡುತ್ತಿರಲಿಲ್ಲ. ನಿಖರ ಕಾರಣ ಹೇಳದೆ ದೂರವಿಡಲಾಗುತ್ತಿತ್ತು ಎಂದು ಹೇಳಿದರು. ಪಂಚರಾಜ್ಯಗಳ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಒಗ್ಗಟ್ಟು ಪ್ರದರ್ಶಿಸಬೇಕಿತ್ತು. ಒಗ್ಗಟ್ಟು ಮೂಡದ ಕಾರಣ ಭಾರಿ ಹಿನ್ನಡೆ ಅನುಭವಿಸುವಂತಾಯಿತು. ಲೋಕಸಭೆ ಚುನಾವಣೆಯ ದೃಷ್ಟಿಯಿಂದಾದರೂ ನಾಯಕತ್ವ ಘೋಷಿಸಿ, ಬಿಜೆಪಿ ಎದುರಿಸಬೇಕು ಎಂದು ತಿಳಿಸಿದರು. ಸ್ಮಾರ್ಟ್ ಸಿಟಿ ಯೋಜನೆಗಳಡಿ ನಡೆದ…

Read More

ಹೈದರಾಬಾದ್:- ರೇವಂತ್​ ರೆಡ್ಡಿ ಅವರು ತೆಲಂಗಾಣ 2ನೆ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು. ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೊಡಂಗಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ರೇವಂತ್ ರೆಡ್ಡಿ ಅವರಿಗೆ ಮುಖ್ಯಮಂತ್ರಿಯಾಗಿ ಗವರ್ನರ್‌ ತಮಿಳಿಸೈ ಸೌಂದರರಾಜನ್ ಅವರು ಪ್ರಮಾಣವಚನ ಬೋಧಿಸಿದರು. ಇದೆ ವೇಳೆ, ತೆಲಂಗಾಣದ ಉಪ ಮುಖ್ತಮಂತ್ರಿಯಾಗಿ (ಡಿಸಿಎಂ) ಮಲ್ಲು ಭಟ್ಟಿ ವಿಕ್ರಮಾರ್ಕ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್‌ನ ಎಲ್ಲಾ ಪ್ರಮುಖ ನಾಯಕರು ಆಗಮಿಸಿದ್ದರಿಂದ ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು. ಬೆಳಗ್ಗೆಯಿಂದಲೇ ಕಾಂಗ್ರೆಸ್ ಕಾರ್ಯಕರ್ತರು ಕ್ರೀಡಾಂಗಣಕ್ಕೆ ಬರಲಾರಂಭಿಸಿದ್ರು. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಅತಿಥಿಗಳನ್ನು ರಂಜಿಸಲು 500 ಕಲಾವಿದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇಂದು ಮಧ್ಯಾಹ್ನ ಒಂದು ಗಂಟೆ ನಾಲ್ಕು ನಿಮಿಷಕ್ಕೆ ರೇವಂತ್ ರೆಡ್ಡಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.

Read More

ಬೆಂಗಳೂರು:- ತೆಲಂಗಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿನ್ನೆಲೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂದೆ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದು, ಎಸ್.ಮನೋಹರ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದೆ. ಈ ಸಂದರ್ಭದಲ್ಲಿ ಸಾಕಷ್ಟು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

Read More

ಬೆಂಗಳೂರು:- ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ. ಬಂಧಿತನಿಂದ ಸುಮಾರು ₹ 5 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ. ಆರೋಪಿಯು, ವಡೇರಹಳ್ಳಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ. ಈತ ವಿದ್ಯಾರ್ಥಿಗಳು ಹಾಗೂ ಸ್ಥಳೀಯರನ್ನು ಗುರಿಯಾಗಿರಿಸಿಕೊಂಡು ಡ್ರಗ್ ಮಾರಾಟ ಮಾಡುತ್ತಿದ್ದ. ಈ ಸಂಬಂಧ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿ ವಿರುದ್ಧ ಎಸ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತನಿಂದ 23 ಗ್ರಾಂ ಕೊಕೇನ್, 238 ಗ್ರಾಂ ಕೊಕೇನ್ ಮಾದರಿಯ ಸಿಂಥೆಟಿಕ್ ಡ್ರಗ್, 57 ಸಾವಿರ ನಗದು,2 ಮೊಬೈಲ್ ಸೀಜ್ ಮಾಡಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More