Author: AIN Author

ಪಾಟ್ನಾ:- ರಾತ್ರಿಯ ಕತ್ತಲಲ್ಲಿ ತನ್ನ ಗೆಳತಿಯನ್ನು ಭೇಟಿಯಾಗಲು ಬಂದ ಪ್ರೇಮಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು ಇಬ್ಬರಿಗೂ ಮದುವೆ ಮಾಡಿಸಿದ್ದಾರೆ. ಕದ್ದು ಮುಚ್ಚಿ ಪ್ರೇಯಸಿಯನ್ನು ನೋಡಲು ಬಂದಾತನಿಗೆ ಗ್ರಾಮಸ್ಥರು ಒತ್ತಾಯಪೂರ್ವಕವಾಗಿ ಮದುವೆಯನ್ನೇ ಮಾಡಿಸಿದ್ದಾರೆ. ಈ ಮದುವೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಪ್ರಕರಣವು ಜಮುಯಿ ಜಿಲ್ಲೆಯ ಚರ್ಕಪಥರ್ ಪೊಲೀಸ್ ಠಾಣೆ ವ್ಯಾಪ್ತಿಯ ಪನನ್ಮಾ ಗ್ರಾಮದ್ದಾಗಿದ್ದು, ರಾತ್ರಿಯ ಕತ್ತಲೆಯಲ್ಲಿ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯ ಬಿಶನ್‌ಪುರ ಗ್ರಾಮದ 24 ವರ್ಷದ ಮನೋರಂಜನ್ ಕುಮಾರ್ ತನ್ನ 19 ವರ್ಷದ ಗೆಳತಿ ರಂಜು ಕುಮಾರಿ ಮನೆಗೆ ತಲುಪಿದ್ದ. ಈ ವಿವಾರ ಗ್ರಾಮಸ್ಥೈರಿಗೂ ತಿಳಿದು ಬಂದಿದ್ದು, ಇಬ್ಬರೂ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಕೂಡಲೇ ಮನೆಯ ಅಂಗಳದಲ್ಲಿ ಅವರ ಮನೆಯವರ ಸಮ್ಮುಖದಲ್ಲಿ ಈ ಜೋಡಿಗೆ ಮದುವೆ ಮಾಡಿಸಿದ್ದಾರೆ. ಸುಮಾರು ಒಂದು ವರ್ಷದಿಂದ ಇಬ್ಬರ ನಡುವೆ ಪ್ರೇಮ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ರಾತ್ರಿ ಖೈರಾದ ಬಿಶನ್‌ಪುರ ನಿವಾಸಿ ಮನೋರಂಜನ್ ತನ್ನ ಗೆಳತಿ ರಂಜು ಅವರನ್ನು…

Read More

ಬೆಂಗಳೂರು :- ಸಂತರನ್ನು ಉಗ್ರಗಾಮಿ ಎಂದು ಹೇಳುವುದು ಸರಿಯಲ್ಲ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ತರನ್ನು ಉಗ್ರಗಾಮಿ ಎಂದು ಹೇಳುವುದು ಸರಿಯಲ್ಲ . ಸಂತ ಸೂಫಿಗಳ ಪ್ರಭಾವಕ್ಕೆ ಒಳಗಾದವರು ಉಗ್ರಗಾಮಿ ಆಗ್ತಾರಾ?, ಭ್ರಾತೃತ್ವ ಭಾವನೆ ಬೆಳೆಸಲು ಪ್ರಯತ್ನ ಮಾಡುವವರು, ಸಂತರನ್ನು ಸಮ ಭಾವನೆಯಿಂದ ನೋಡುವವರು, ಟೆರರಿಸ್ಟ್ ಮ

Read More

ಜಾನುವಾರುಗಳಿಗೆ ಉಪಯೋಗಿಸುವ ಪೌಷ್ಟಿಕ ಆಹಾರವಾದ ಅಜೋಲಾ, ರೈತನ ಬದುಕನ್ನೇ ಉಜ್ವಲಗೊಳಿಸುವ ಸಾಧ್ಯತೆಯನ್ನು ತೆರೆದಿಟ್ಟಿದೆ. ಪಶುಪಾಲನೆ ಮಾಡುವವರು ಪ್ರತಿ ವರ್ಷ ಮೇವು ಸಂಗ್ರಹಿಸಿಟ್ಟುಕೊಳ್ಳಲು, ಬೇರೆಡೆಯಿಂದ ತರಿಸಲು ನಡೆಸುತ್ತಿದ್ದ ಕಸರತ್ತಿಗೆ ಅಜೋಲಾ ಮುಕ್ತಿ ನೀಡಲಿದೆ. ನೀರಿನ ಮೇಲೆ ತೇಲಾಡಿಕೊಂಡು ಬೆಳೆಯಬಲ್ಲ ಝರಿ ರೀತಿಯ ಸಸ್ಯವೇ ಅಜೋಲಾ. ಇದರ ಕಾಂಡ ಮತ್ತು ಎಲೆಗಳು ಚಿಕ್ಕದಾಗಿದ್ದು, ಒಂದರ ಮೇಲೊಂದು ಜೋಡಿಸಿದಂತೆ ಇರುತ್ತವೆ. 8 ಸೇ.ಮಿ ಉದ್ದದ ಬೇರುಗಳು ನೀರಿನಲ್ಲಿ ಇಳಿಬಿದ್ದಿರುತ್ತದೆ. ಅನಬೇನಾ ಅಜೋಲಾ ಎಂಬ ನೀಲಿ ಹಸಿರು ಪಾಚಿ ಅಜೋಲಾ ಸಹಜೀವಿಯಾಗಿದೆ. ಅಜೋಲಾ ಸಸ್ಯದ ಎಲೆಯ ಕೆಳಭಾಗದಲ್ಲಿ ಸಣ್ಣ ರಂಧ್ರಗಳಿದ್ದು, (ಅವುಗಳಲ್ಲಿ ಅನಬೀನಾ ಎಂಬ ನೀಲಿ ಹಸಿರು ಪಾಚಿಯು ಅಡಕವಾಗಿದ್ದು, ಇವು ವಾಯುಮಂಡಲದಲ್ಲಿ ಮುಕ್ತವಾಗಿ ಸಿಗುವಂತ ಸಾರಜನಕವನ್ನು ಹೀರಿ ಹಿಡಿದಿಟ್ಟುಕೊಳ್ಳುವ ಶಕ್ತಿ ಪಡೆದಿರುತ್ತದೆ). ಈ ಪಾಚಿಗೆ ವಾಸಿಸಲು ಇದು ಸ್ಥಳ ಒದಗಿಸುತ್ತದೆ. ಇದಕ್ಕೆ ಪ್ರತ್ಯುಪಕರವಾಗಿ ಅನಬೇನಾ ಅಜೋಲಾವು ಗಾಳಿಯಲ್ಲಿರುವ ಮುಕ್ತವಾಗಿ ಸಿಗುವ ಸಾರಜನಕವನ್ನು ಸ್ಥಿರೀಕರಿಸಿ ಬೆಳವಣಿಗೆಗೆ ಚೇತರಿಸುವ ಪದಾರ್ಥಗಳನ್ನು ಕೊಡುತ್ತದೆ. ಇದನ್ನು ಹಸಿರು ಎಲೆ ಗೊಬ್ಬರವಾಗಿ  ಉಪಯೋಗಿಸುವುದಕ್ಕಿಂತ…

Read More

ಲಕ್ನೋ: ವೈದ್ಯನೊಬ್ಬ (Doctor) ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ತಾನು ಕೂಡಾ ಆತ್ಮಹತ್ಯೆಗೆ (Suicide) ಶರಣಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ (Uttar Pradesh) ರಾಯ್‌ಬರೇಲಿಯಲ್ಲಿ (Rae Bareli) ನಡೆದಿದೆ. ತಡರಾತ್ರಿ ಈ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವೈದ್ಯನನ್ನು ಅರುಣ್ ಕುಮಾರ್ ಸಿಂಗ್ (45) ಎಂದು ಗುರುತಿಸಲಾಗಿದೆ. ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿ ಆಸ್ಪತ್ರೆಯ ನೇತ್ರ ತಜ್ಞನಾಗಿದ್ದ ಸಿಂಗ್‌ಗೆ ತನ್ನ ಕುಟುಂಬದವರು ಹಾಗೂ ಸಹೋದ್ಯೋಗಿಗಳು ಕರೆ ಮಾಡಿದ್ದರು. https://ainlivenews.com/the-founder-of-byjus-who-barricaded-his-own-house-to-give-salary-to-the-employees/ ಕರೆಯನ್ನು ಸ್ವೀಕರಿಸದೇ ಹೋದಾಗ ಆಸ್ಪತ್ರೆಯ ಸಂಕೀರ್ಣದ ಒಳಗೆಯೇ ಇರುವ ಮನೆಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಮನೆಯ ಬಾಗಿಲನ್ನು ತೆರೆದಾಗ ಅರುಣ್ ಪತ್ನಿ ಅರ್ಚನಾ (40) ಮಕ್ಕಳಾದ ಅರಿಬಾ (12) ಹಾಗೂ ಆರವ್ (4) ಶವವಾಗಿ ಪತ್ತೆಯಾಗಿದ್ದಾರೆ. ಸಿಂಗ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸಿಂಗ್ ಮಕ್ಕಳಿಗೆ ಚುಚ್ಚು ಮದ್ದು ನೀಡಿ, ಅವರನ್ನು ಪ್ರಜ್ಞಾಹೀನರನ್ನಾಗಿ ಮಾಡಿ ಬಳಿಕ ಕೊಂದಿದ್ದಾನೆ. ಅವರಿಬ್ಬರ ತಲೆಯಲ್ಲಿ ಬಲವಾಗಿ ಹೊಡೆದಿರುವ ಗಾಯಗಳಾಗಿವೆ.…

Read More

ಬೆಂಗಳೂರು:- ಮಿಚಾಂಗ್ ಚಂಡಮಾರುತದ ಹಿನ್ನೆಲೆ ಬೆಂಗಳೂರು ಸೇರಿ ಕರ್ನಾಟಕದ 21ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Read More

ಬೆಂಗಳೂರು/ ಬೆಳಗಾವಿ:- ಡಿ.11ರವರೆಗೆ ಬಿ.ಇಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ ಸಚಿವರ ಪರವಾಗಿ ಕಂದಾಯ ಸಚಿವರು ಉತ್ತರಿಸಿದರು. ‘ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳ ಫಲಿತಾಂಶ ವಿಳಂಬ ಹಿನ್ನೆಲೆ ಬಿ.ಎಡ್. ಪ್ರವೇಶ ನೋಂದಣಿ ಕೊನೆಯ ದಿನ ಮುಕ್ತಾಯ ಆಗುವುದರಿಂದ ಅನೇಕ ವಿದ್ಯಾರ್ಥಿಗಳಿಗೆ ತೊಂದರೆ ಆಗುವುದನ್ನು ಗಮನಿಸಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು. 2023-24ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿತ್ತು. ಅದರಂತೆ ಆಸಕ್ತರು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ನ. 29 ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ವಿಸ್ತರಣೆ ಮಾಡಲಾಗಿದೆ ಎಂದರು.

Read More

ಚಿನ್ನ, ಬೆಳ್ಳಿ ಖರೀದಿಸಬೇಕು ಎಂದುಕೊಂಡವರು ಸಿದ್ಧರಾಗಬಹುದು. ನಿನ್ನೆಗಿಂತ ಬಂಗಾರದ ಬೆಲೆ ಇಳಿಕೆಯಾಗಿದೆ. ಆಭರಣ ಪ್ರಿಯರು ಚಿನ್ನದ ದರ ಕುಸಿಯುತ್ತಿರುವುದನ್ನು ಕಂಡು ಸಂತಸ ಪಡುತ್ತಿದ್ದಾರೆ. ಚಿನಿವಾರ ಪೇಟೆಯಲ್ಲಿ ದರ ಏರಿಳಿತ ಉಂಟಾಗಲು ಕಾರಣಗಳು ಹಲವಿವೆ. ಇತ್ತೀಚಿಗೆ ದೇಶದ ಜಿಡಿಪಿ ದರದಲ್ಲಿ ಏರಿಕೆಯಾಗುತ್ತಿರುವುದು ಸಕಾರಾತ್ಮಕ ಸೂಚಕವಾಗಿದೆ. 1 ಗ್ರಾಂ ಚಿನ್ನದ ಬೆಲೆ ನಿನ್ನೆ 5,785 ಇದ್ದು ಇಂದು 5,745 ಇಳಿದಿದೆ, ಇದರ ಪ್ರಕಾರ 40 ರೂಪಾಯಿ ಇಳಿಕೆ ಆಗಿದೆ. 8 ಗ್ರಾಂ ಚಿನ್ನಕ್ಕೆ ನಿನ್ನೆ 46,280 ರೂ. ಇತ್ತು ಇಂದು 45,960 ರೂಗೆ ಇಳಿದಿದ್ದು 320 ರೂಪಾಯಿ ಕಡಿಮೆ ಆಗಿದೆ. 10 ಗ್ರಾಂ ಚಿನ್ನದ ಬೆಲೆ ಬುಧವಾರಕ್ಕಿಂದ ಇಂದು 400 ರೂ. ಕಡಿಮೆ ಆಗಿದೆ. ನಿನ್ನೆ 57,850 ಇದ್ದ ಚಿನ್ನದ ಬೆಲೆ ಇಂದು 57,450 ರೂಪಾಯಿಗೆ ಇಳಿದಿದೆ. ಹಾಗೇ 100 ಗ್ರಾಂ ಚಿನ್ನದ ಬೆಲೆ ನಿನ್ನೆ 5,78,500 ಹಾಗೂ ಇಂದು 5,74,500 ಇಳಿದಿದೆ. ಇದರ ಪ್ರಕಾರ ಒಂದು ದಿನದಲ್ಲಿ 4,000 ರೂ. ಕಡಿಮೆ ಆಗಿದೆ.…

Read More

ಇಸ್ಲಾಮಾಬಾದ್‌: ಭಾರತಕ್ಕೆ (India) ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಉಗ್ರರು ಪಾಕಿಸ್ತಾನದಲ್ಲಿ (Pakistan) ಅನಾಮಿಕ ವ್ಯಕ್ತಿಗಳ ಗುಂಡೇಟಿಗೆ ಬಲಿಯಾಗುವುದು ಈಗ ಹೊಸದೆನಲ್ಲ. ಆದರೆ ಈಗ ಉಗ್ರನೊಬ್ಬ ಪಾಕ್‌ ಜೈಲಿನಲ್ಲೇ ವಿಷ ಪ್ರಾಶನಕ್ಕೆ ತುತ್ತಾಗಿರುವುದು ಹೊಸದು. ಮುಂಬೈ ದಾಳಿಯ (Mumbai 26/11 Attacks) ಪ್ರಮುಖ ಸಂಚುಕೋರ, ಲಷ್ಕರ್‌ ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಸದಸ್ಯ ಸಾಜಿದ್ ಮಿರ್ (Sajid Mir) ವಿಷ ಆಹಾರ ಸೇವಿಸಿದ್ದು ಸದ್ಯ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ.  ಕೆಲವು ತಿಂಗಳ ಹಿಂದೆ ಸಾಜಿದ್ ಮಿರ್‌ನನ್ನು ಲಾಹೋರ್ ಜೈಲಿನಿಂದ ಡೇರಾ ಘಾಜಿ ಖಾನ್‌ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ಸದ್ಯ ವಿಷ ಆಹಾರ ಸೇವಿಸಿ ಗಂಭೀರವಾಗಿ ಅಸ್ವಸ್ಥಗೊಂಡಿರುವ ಸಾಜಿದ್‌ ಮಿರ್‌ನನ್ನು ಪಾಕಿಸ್ತಾನ ಸೇನೆ ಏರ್‌ಲಿಫ್ಟ್‌ ಮಾಡಿ ಬಹವಾಲ್‌ಪುರದ ಸಿಎಂಎಚ್‌ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ ಕಾಲೇಜಿಗೆ ದಾಖಲಿಸಲಾಗಿದೆ. ವಿಷ ಪ್ರಾಶನ ಪ್ರಕರಣ ವರದಿಯಾದ ಬೆನ್ನಲ್ಲೇ ಜೈಲಿನಲ್ಲಿದ್ದ ಅಡುಗೆ ಮಾಡುತ್ತಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾನೆ. ಯಾರು ಈ ಸಾಜಿದ್ ಮಿರ್? ಸಾಜಿದ್ ಮಿರ್ ಪಾಕಿಸ್ತಾನ ಮೂಲದ…

Read More

ನನಗೆ ಎಲ್ಲಿಯವರೆಗೆ ನಡೆದಾಡಲು ಸಾಧ್ಯವೋ ಅಲ್ಲಿಯವರೆಗೆ ಐಪಿಎಲ್​ನಲ್ಲಿ ಆಡುವೆ ಎಂದು ಆಸ್ಟ್ರೆಲಿಯಾದ ಆಲ್ರೌಂಡರ್​ ಗ್ಲೆನ್​ ಮ್ಯಾಕ್ಸ್​ವೆಲ್​ ಹೇಳಿದ್ದಾರೆ. ವೃತ್ತೀಜಿವನದ ಯಶಸ್ಸಿನಲ್ಲಿ ಐಪಿಎಲ್​ ಮಹತ್ವದ ಪಾತ್ರ ವಹಿಸಿದೆ. ಹೀಗಾಗಿ ನನಗೆ ಎಲ್ಲಿಯವರೆಗೆ ನಡೆದಾಡಲು ಸಾಧ್ಯವೋ ಅಲ್ಲಿಯವರೆಗೆ ಐಪಿಎಲ್​ನಲ್ಲಿ ಆಡುವೆ ಎಂದರು. ಬಹುಶಃ ಐಪಿಎಲ್​ ನಾನು ಜೀವನದಲ್ಲಿ ಆಡುವ ಕೊನೇ ಟೂರ್ನಿಯಾಗಿರುತ್ತದೆ. ನನಗೆ ಐಪಿಎಲ್​ನಿಂದ ಭಾರಿ ಲಾಭವಾಗಿದೆ. ಎಬಿ ಡಿವಿಲಿಯರ್ಸ್​, ವಿರಾಟ್​ ಕೊಹ್ಲಿ ಅವರಂಥ ಆಟಗಾರರ ಜತೆಗೆ 2 ತಿಂಗಳ ಕಾಲ ಆಡುವ ಅವಕಾಶ ಕಲ್ಪಿಸಿದೆ. ಅವರೊಂದಿಗೆ ಮಾತನಾಡುತ್ತ, ಆಡುತ್ತ ಸಾಕಷ್ಟು ಕಲಿತಿರುವೆ’ ಎಂದು ಆರ್​ಸಿಬಿ ಆಟಗಾರ ತಿಳಿಸಿದ್ದಾರೆ.

Read More

ಬೆಂಗಳೂರು: ಮನೆಯ ಎರಡನೇ ಯಜಮಾನರಿಗೂ ಅನ್ನ ಭಾಗ್ಯ ಹಣ ನೀಡುವ ಮೂಲಕ ಆಹಾರ ಇಲಾಖೆ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದೆ.ಈ ಕುರಿತ ಡೀಟೈಲ್ಸ್ ಇಲ್ಲಿದೆ. ಸರ್ಕಾರ ನೀಡಿರುವ ಯೋಜನೆಗಳಲ್ಲಿ ಒಂದಲ್ಲ ಒಂದು ಕೊರತೆಗಳಿದ್ದು,ಅನ್ನ ಭಾಗ್ಯ ಯೋಜನೆ ಬಗ್ಗೆ ಯು ಸಾಕಷ್ಟು ದೂರುಗಳು ಬಂದಿವೆ.ಅನ್ನ ಭಾಗ್ಯ ಯೋಜನೆ DBT ಪ್ರತಿ ತಿಂಗಳು 8 ರಿಂದ 10 ಸಾವಿರ ಜನರಿಗೆ ಸಿಗದೆ ದೂರುಗಳು ಹೆಚ್ಚಾಗುತ್ತಲೆ ಇತ್ತು. ಈ ಹಿಂದೆ ಕೇವಲ ಕೇವಲ ಕಾರ್ಡ್ ನ ಮೊದಲ ಯಜಮಾನರಿಗೆ DBTಮೂಲಕ ಹಣ ಹಾಕಲಾಗುತ್ತಿತ್ತು. https://ainlivenews.com/the-founder-of-byjus-who-barricaded-his-own-house-to-give-salary-to-the-employees/ ಆದ್ರೀಗ ದೂರುಗಳು ಹೆಚ್ಚಾಗಿದ್ದರಿಂದ  ಮನೆಯ ಎರಡನೇ ಯಜಮಾನರಿಗೂ ಹಣ ಹಾಕುವುದಾಗಿ ನಿರ್ಧರಿಸಲಾಗಿದೆ. ಈಗಾಗಲೇ ಕ್ಯಾಬಿನೆಟ್ ಒಪ್ಪಿಗೆ ಸಿಕ್ಕಿದ್ದು, ಅಧಿಕೃತವಾಗಿ ಈ ತಿಂಗಳಿನಿಂದ ಜಾರಿ ಮಾಡಲಾಗುತ್ತದೆ.ಇದರಿಂದ ಸುಮಾರು 9ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ದಾರರಿಗೆ ಇದರ ಲಾಭ ಸಿಗಲಿದೆ. ಒಟ್ಟಿನಲ್ಲಿ ಯೋಜನೆಗಳು ಘೋಷಣೆ ಆಗಿ ಜಾರಿಗೆ ಬಂದರು ಸರಿಯಾಗಿ ಸಮರ್ಪಕವಾಗಿ ನಿರ್ವಹಣೆ ಆಗದೆ ದೂರುಗಳ ಸರಮಾಲೆಯೆ ಕಾಣುತ್ತಿದ್ದು ಇನ್ನು ಮುಂದೆ…

Read More