Author: AIN Author

ತುಮಕೂರು:- ನನ್ನ ದುರಹಂಕಾರ ನನಗೆ ತೊಂದರೆ ಕೊಟ್ಟಿದೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೆಲ ನಾಯಿ, ನರಿಗಳಿಂದ ಸಮಸ್ಯೆಯಾಗಿದೆ ಎಂದು ಬಿಜೆಪಿ ಮುಖಂಡರ ವಿರುದ್ಧ ಸೋಮಣ್ಣ ವಾಗ್ದಾಳಿ ನಡೆಸಿದರು. ಕೆಲವು ಸಂದರ್ಭಗಳಲ್ಲಿ ನನ್ನ ದುರಹಂಕಾರ ನನಗೆ ತೊಂದರೆ ಕೊಟ್ಟಿದೆ. ಮೇಲೆ ಆಕಾಶವಿದೆ ಎಂದು ತಿಳಿಯದೆ ಅತ್ತ ಕಡೆಗೆ ಉಗುಳಿದೆ. ಅದು ನನ್ನ ಮೇಲೆ ಬಿದ್ದಿದೆ. ಅದನ್ನು ಒರೆಸಿಕೊಂಡು ಮುಂದೆ ಹೋಗುವ ಕೆಲಸ ಮಾಡುತ್ತೇನೆ’ ಎಂದರು. ‘ಬಿಜೆಪಿ ವರಿಷ್ಠರ ಭೇಟಿಗೆ ನ. 30ರಂದು ಸಮಯ ನೀಡಿದ್ದರು. ಅಂದು ಹೋಗಿ ಭೇಟಿಯಾಗಲು ಸಾಧ್ಯವಾಗಲಿಲ್ಲ. ಮುಂದೆ ಏನಾಗುವುದೊ ಗೊತ್ತಿಲ್ಲ. ಆಗಿರುವ ತಪ್ಪುಗಳನ್ನು ಹೈಕಮಾಂಡ್ ಯಾವ ರೀತಿ ಸರಿಪಡಿಸಲಿದೆ ಎಂಬುದು ಗೊತ್ತಿಲ್ಲ. ಕೆಲ ದಿನಗಳು ನೋಡುತ್ತೇನೆ. ಎಲ್ಲವನ್ನೂ ಜನರ ಮುಂದೆ ಹೇಳುತ್ತೇನೆ. ನಂತರ ನಿರ್ಧಾರ ಮಾಡುತ್ತೇನೆ’ ಎಂದು ಹೇಳಿದರು.

Read More

ನವೆಂಬರ್ 19ರಂದು ಅಹಮದಾಬಾದ್‌ನಲ್ಲಿ ನಡೆದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುವ ಮೂಲಕ, ಭಾರತ ತಂಡವು ಐಸಿಸಿ ಟ್ರೋಫಿ ಎತ್ತುವ ಸುವರ್ಣ ಅವಕಾಶವನ್ನು ಕಳೆದುಕೊಂಡಿತು. ಇದೀಗ ಮುಂದಿನ ಅವಕಾಶಕ್ಕಾಗಿ ತಂಡದ ಕ್ರಮವೇನು ಎಂಬುದರ ಕುರಿತು ಟೀಮ ಇಂಡಿಯಾ ಮ್ಯಾನೇಜ್‌ಮೆಂಟ್ ಈಗ ತ್ವರಿತ ನಿರ್ಧಾರ ತೆಗೆದುಕೊಳ್ಳಬೇಕಿದೆ. ಆರಂಭಿಕವಾಗಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಮತ್ತು ಅವರ ಸಹಾಯಕ ಸಿಬ್ಬಂದಿಯ ಒಪ್ಪಂದದ ಅವಧಿಯನ್ನು ವಿಸ್ತರಿಸಿದೆ. ಏಕದಿನ ವಿಶ್ವಕಪ್‌ನೊಂದಿಗೆ ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕೊನೆಗೊಂಡಿತ್ತು. 2024ರ ಟಿ20 ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯರನ್ನು ನಾಯಕನಾಗಿ ನೇಮಕಕ್ಕೆ ಸಿದ್ಧತೆ ನಡೆಸುತ್ತಿತ್ತು. ಆದರೆ, ಹಾರ್ದಿಕ್ ಪಾಂಡ್ಯಗೆ ಅನಿರೀಕ್ಷಿತ ಗಾಯವು, ವಿಶೇಷವಾಗಿ, ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಅತ್ಯುತ್ತಮವಾಗಿ ಮುನ್ನಡೆಸಿದ ವಿಧಾನದ ನಂತರ, ತಂಡದ ಮ್ಯಾನೇಜ್‌ಮೆಂಟ್‌ ಆಯ್ಕೆಗಳನ್ನು ಪರಿಗಣಿಸುವಂತೆ ಒತ್ತಾಯಿಸಿದೆ. ವಿಡಿಯೋ ಕಾಲ್ ಮೂಲಕ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಹಾಜರಾಗಿದ್ದ ರಾಹುಲ್ ದ್ರಾವಿಡ್ ಮತ್ತು ರೋಹಿತ್ ಶರ್ಮಾ ಅವರೊಂದಿಗೆ ಬಿಸಿಸಿಐ…

Read More

ಬೆಳಗಾವಿ/ ಬೆಂಗಳೂರು:- 30 ಸಾವಿರ ವಿದ್ಯಾರ್ಥಿಗಳಿಗೆ ಹಾಸ್ಟೆಲ್​ನಲ್ಲಿ ಹೆಚ್ಚುವರಿ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಬಿ ಪಿ ಹರೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಒಟ್ಟು 2443 ವಿದ್ಯಾರ್ಥಿ ನಿಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಒಟ್ಟು 2,28,411 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶದ ಸೌಲಭ್ಯ ಕಲ್ಪಿಸಲಾಗಿದೆ. ಹರಿಹರ ವಿಧಾನಸಭಾ ಕ್ಷೇತ್ರದ 9 ಹಾಸ್ಟೆಲ್​ಗಳಲ್ಲಿ 745 ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗಿದೆ. ವಿದ್ಯಾರ್ಥಿನಿಲಯಗಳ ಪ್ರವೇಶ ಪ್ರಕ್ರಿಯೆ ಮುಗಿದ ಬಳಿಕ ಜಿಲ್ಲೆಯಲ್ಲಿ ಆಯಾ ತಾಲೂಕಿನ ವಿದ್ಯಾರ್ಥಿ ನಿಲಯಗಳಿಗೆ ತಾತ್ಕಾಲಿಕವಾಗಿ ಸ್ಥಾನಗಳನ್ನು ಆಂತರಿಕ ವರ್ಗಾವಣೆ ಮಾಡಿಕೊಂಡು ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವನ್ನು ಕಲ್ಪಿಸಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿ ನಿಲಯಗಳಿಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಿ, ಪ್ರವೇಶ ದೊರಕದ ಅರ್ಹ ಹಿಂದುಳಿದ ವಿದ್ಯಾರ್ಥಿಗಳಿಗೆ ಪರ್ಯಾಯವಾಗಿ ಅನುದಾನದ ಲಭ್ಯತೆಯ ಅನುಸಾರ, ವಿದ್ಯಾಸಿರಿ ಯೋಜನೆಯಡಿ ಪ್ರತಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 1500 ರೂ. ನಂತೆ ಗರಿಷ್ಠ 10 ತಿಂಗಳಿಗೆ 15 ಸಾವಿರ ರೂ. ನೀಡಲಾಗುತ್ತಿದೆ…

Read More

ಬೆಂಗಳೂರು/ಬೆಳಗಾವಿ:- ಗ್ರಾಮೀಣ ಭಾಗದಲ್ಲಿ ಮೂಲಸೌಲಭ್ಯಗಳ ಕೊರತೆಯಿಂದಾಗಿ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಅವಕಾಶ ಸಿಗುತ್ತಿಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ಹಾಗೂ ಇತರ ನಗರ ಪ್ರದೇಶಗಳ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಆದರೆ ಗ್ರಾಮೀಣ ಭಾಗದಲ್ಲಿ ಮೂಲಸೌಲಭ್ಯಗಳ ಕೊರತೆಯಿಂದಾಗಿ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಅವಕಾಶ ಸಿಗುತ್ತಿಲ್ಲ. ಹಾಗೆಯೇ ಪ್ರತಿ ಜಿಲ್ಲೆಯಲ್ಲೂ ಸಿಂಥೆಟಿಕ್ ಟ್ರ್ಯಾಕ್‌ಗಳ ನಿರ್ಮಾಣದ ಬಗ್ಗೆ ಹೇಳಲಾಗಿತ್ತು. ಈ ಯೋಜನೆಯ ಎಲ್ಲಿಯವರೆಗೆ ತಲುಪಿದೆ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಸಚಿವ ನಾಗೇಂದ್ರ, ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತಿ ಯೋಜನೆಯಡಿ 75 ಮಂದಿಯನ್ನು ಆಯ್ಕೆ ಮಾಡಿಕೊಂಡು ತರಬೇತಿ ಕೊಡಿಸಲಾಗುತ್ತಿದೆ. ಜೊತೆಗೆ ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ ಸೇರಿದಂತೆ ಹಲವು ಸೌಲಭ್ಯಗಳ ಮೂಲಕ ಕ್ರೀಡೆಗೆ ಬೆಂಬಲ ನೀಡಲಾಗುತ್ತಿದೆ ಎಂದರು. 2024ರ ಒಲಿಂಪಿಕ್ ಕ್ರೀಡೆಗೆ ಸಜ್ಜುಗೊಳ್ಳುವ ಕ್ರೀಡಾಪಟುಗಳಿಗೆ ಆಹಾರದಿಂದ ಹಿಡಿದು ಎಲ್ಲಾ ರೀತಿಯ ಕಾಳಜಿಯನ್ನು ವಹಿಸಲಾಗುತ್ತಿದೆ. ಪ್ರತಿಯೊಬ್ಬರ ತರಬೇತಿಗೆ 10 ಲಕ್ಷ ರೂ.ಗಳನ್ನು ಖರ್ಚು…

Read More

ಬೆಂಗಳೂರು/ ಬೆಳಗಾವಿ :- ಸುವರ್ಣವಿಧಾನಸೌಧ ಡಿ.05: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ. ಈ ಹುದ್ದೆಗಳಿಗೆ ಎರೆಡು ಹಂತದಲ್ಲಿ ನೇಮಕಾತಿಯ ಪ್ರಕ್ರಿಯೆ ನಡೆಯಲಿದೆ ಎಂದು ಕೃಷಿ ಸಚಿವ ಎನ್.ಚಲವರಾಯಸ್ವಾಮಿ ಹೇಳಿದರು. ಬುಧವಾರ ವಿಧಾನಸಭಾ ಅಧಿವೇಶನದಲ್ಲಿ ಬೀಳಗಿ ಶಾಸಕ ಪಾಟೀಲ್.ಜೆ.ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿವ ವೇಳೆ ನಡೆದ ಚರ್ಚೆಯಲ್ಲಿ, ಅವರು ಈ ಮಾಹಿತಿಯನ್ನು ಸದನಕ್ಕೆ ನೀಡಿದರು. ಕೃಷಿ ಇಲಾಖೆಯಲ್ಲಿ ಶೇ.60 ರಷ್ಟು ಹುದ್ದೆಗಳ ಕೊರತೆ ಇದೆ. ಇದರಿಂದಾಗಿ ಹೋಬಳಿ ಹಾಗೂ ಗ್ರಾಮಗಳಲ್ಲಿ ಅಧಿಕಾರಿಗಳು ತೆರಳಿ ಕ್ಷೇತ್ರ ಕಾರ್ಯನಿರ್ವಹಿಸುವಲ್ಲಿ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ನೇಮಕಾತಿ ಮಾಡುವ ಮೂಲಕ ಶೀಘ್ರವೇ ಬಗೆಹರಿಸಲಾಗುವುದು. ಸರ್ಕಾರ ಕೃಷಿ, ನೀರಾವರಿ ಹಾಗೂ ರೈತರ ಜಮೀನ ರಸ್ತೆಗಳ ಬಗ್ಗೆ ಹೆಚ್ಚಿನ ಒತ್ತು ನೀಡಿದೆ. ಸದ್ಯ ಕೃಷಿ ವಿಶ್ವವಿದ್ಯಾಲಯ, ಸಂಶೋಧನಾ ಕೇಂದ್ರ ಹಾಗೂ ಇಲಾಖೆ ಅಧಿಕಾರಿಗಳು ರೈತರ ಹೊಲಗಳಿಗೆ ತೆರಳಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ. ಅತಿಯಾದ ರಸಗೊಬ್ಬರಗಳ ಬಳಕೆಯಿಂದ ಕೃಷಿ ಭೂಮಿಯ…

Read More

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿ.9ರ ತನಕ ಚಳಿಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಜನರು ಡಿ.9ರವರೆಗೂ ಬೆಚ್ಚನೆಯ ವಾತಾವರಣ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಡಿ.7ರಿಂದ ಡಿ.9ರತನಕ ಹಲವು ಭಾಗಗಳಲ್ಲಿ ಮಳೆಯಾಗಬಹುದು. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಂತಹ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಡಿ.9 ರಂದು ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದಿದ್ದಾರೆ. ತಮಿಳುನಾಡಿನಲ್ಲಿ ಮಳೆಯ ಅಬ್ಬರದಿಂದಾಗಿ ಬೆಂಗಳೂರನ್ನೂ ಕೊಂಚಮಟ್ಟಿಗೆ ಕಾಡಲಿದೆ

Read More

ಬೆಂಗಳೂರು/ ಬೆಳಗಾವಿ:- ಸಾರಿಗೆ ನೌಕರರಿಗೆ ಸಕಾಲದಲ್ಲಿ ವೇತನ ನೀಡಲಾಗುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಪ್ರಶ್ನೋತ್ತರ ಅವಯಲ್ಲಿ ಬಿಜೆಪಿ ಸದಸ್ಯ ಕೆ.ಎಸ್.ನಳೀನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಎಸ್‌ಆರ್ಟಿಸಿಯಲ್ಲಿ ಪ್ರತಿ ತಿಂಗಳು 1ನೇ ತಾರೀಖು, ಬಿಎಂಟಿಸಿಯಲ್ಲಿ 5ನೇ ತಾರೀಖು ಹಾಗೂ ವಾಯುವ್ಯ ಮತ್ತು ಈಶಾನ್ಯ ನಿಗಮಗಳಲ್ಲಿ ತಿಂಗಳ 10ರೊಳಗೆ ವೇತನವನ್ನು ಒದಗಿಸುತ್ತಿದ್ದೇವೆ. ವಿಳಂಬ ಮಾಡುತ್ತಿಲ್ಲ. ಸಮಯಕ್ಕೆ ಸರಿಯಾಗಿ ವೇತನವನ್ನು ಪಾವತಿಸಲಾಗುತ್ತಿದೆ ಎಂದು ತಿಳಿಸಿದರು. ಕೆಎಸ್‌ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಮತ್ತು ಈಶಾನ್ಯ ಸಾರಿಗೆ ಸಂಸ್ಥೆ ಒಟ್ಟು ನಾಲ್ಕು ನಿಗಮಗಳಿಂದ 5 ಸಾವಿರದ 200 ಕೋಟಿ ಸಾಲ ಇದೆ. ಕೇಂದ್ರ ಸರ್ಕಾರ 9 ಸಾವಿರ ಕೋಟಿ ನೀಡದಿದ್ದರೆ ಸಾಲದ ಮೊತ್ತ 15 ಸಾವಿರ ಕೋಟಿಯಾಗುತ್ತಿತ್ತು ಎಂದರು. ನಮ್ಮ ಸರ್ಕಾರ ಅಕಾರಕ್ಕೆ ಬಂದ ಮೇಲೆ 9 ಸಾವಿರ ನೌಕರರನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, 5 ಸಾವಿರ ಹೊಸದಾಗಿ ಬಸ್ಗಳನ್ನು ಖರೀದಿ ಮಾಡಲು ಮುಂದಾಗಿದ್ದೇವೆ. ಹಿಂದಿನ ಸರ್ಕಾರ ಒಂದೇ ಒಂದು ಬಸ್ನ್ನು ಖರೀದಿ ಮಾಡಿರಲಿಲ್ಲ. 13,088 ನೌಕರರು…

Read More

ಮಂಗಳೂರು:- ದೇಶದ ಸಂಪತ್ತಿನಲ್ಲಿ ದೇಶದ್ರೋಹಿಗಳಿಗೆ ಅಧಿಕಾರವಿಲ್ಲ ಎಂದು ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಭಾರತದಲ್ಲೇ ಇದ್ದು, ದೇಶಕ್ಕೆ ದ್ರೋಹ ಬಗೆಯುವ ಮಾನಸಿಕತೆ ಹೊಂದಿರುವವರಿಗೆ ಈ ದೇಶದ ಸಂಪತ್ತಿನಲ್ಲಿ ಅಧಿಕಾರ ಇಲ್ಲ. ಅದೇನಿದ್ದರೂ ಭಾರತೀಯ ಮಾನಸಿಕತೆಯವರಿಗೆ ಸೇರಿದ್ದು’ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದರು. ಹುಬ್ಬಳ್ಳಿಯಲ್ಲಿ ಈಚೆಗೆ ನಡೆದ ದಕ್ಷಿಣ ಭಾರತದ ಮುಸ್ಲಿಂ ಧರ್ಮಗುರುಗಳ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಪ್ರತಿಕ್ರಿಯಿಸಿದರು. ದೇಶದ ಸಂಪತ್ತು ಮುಸ್ಲಿಮರಿಗೆ ಸೇರಿದ್ದು ಎನ್ನುವ ಬದಲು ಭಾರತೀಯರಿಗೆ ಅಥವಾ ಬಡವರಿಗೆ ಸೇರಿದ್ದು ಎಂದು ಸಿದ್ದರಾಮಯ್ಯ ಹೇಳಬಹುದಿತ್ತು. ಓಲೈಕೆ ರಾಜಕಾರಣಕ್ಕಾಗಿ ನೀಡಿರುವ ಈ ಹೇಳಿಕೆ ಅಪಾಯಕಾರಿ. ಇದನ್ನು ಖಂಡಿಸುತ್ತೇನೆ. ಇಂತಹ ಮಾನಸಿಕತೆಯೇ ದೇಶ ವಿಭಜನೆಗೆ ಕಾರಣವಾಗಿದೆ ಎನ್ನುವುದನ್ನೇ ಕಾಂಗ್ರೆಸ್‌ ಮರೆಯಬಾರದು. ಇದು ಕೋಮುವಾದಿ ರಾಜಕಾರಣದ ಪ್ರತ್ಯಕ್ಷ ದರ್ಶನ. ಕಾಂಗ್ರೆಸ್‌ ಪಕ್ಷವೇ ನಿಜವಾದ ಕೋಮುವಾದಿ ಪಕ್ಷ’ ಎಂದರು. ‘ಮುಸ್ಲಿಂ ಧರ್ಮಗುರುಗಳ ಸಮ್ಮೇಳನದಲ್ಲಿ ಐಎಸ್‌ಐ ಏಜೆಂಟ್‌ಗಳೂ ಭಾಗವಹಿಸಿದ್ದರು’ ಎಂದು ಬಿಜೆಪಿಯ ಶಾಸಕ ಬಸನಗೌಡ ಯತ್ನಾಳ್‌ ಮಾಡಿರುವ…

Read More

ಬೆಳಗಾವಿ:- ಮ್ಯೂಸಿಯಂ ಪ್ರವೇಶ ನಿರಾಕರಣೆ ಕುರಿತು ಗೂಳಿಹಟ್ಟಿ ಹೇಳಿಕೆ ವಿಚಾರವಾಗಿ ಆರ್​ಎಸ್​ಎಸ್​ಗೆ​ ಸಚಿವ ಖರ್ಗೆ ಸವಾಲ್ ಹಾಕಿದ್ದಾರೆ. ಮಾಜಿ ಶಾಸಕ ಗೂಳಿಹಟ್ಟಿ ಶೇಖರ್​​​​ ಮಾತನಾಡಿದ್ದಾರೆ ಎನ್ನಲಾದ ಆಡಿಯೋದ ಬಗ್ಗೆ ಸುವರ್ಣಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್​ ಖರ್ಗೆ, “ಆರ್​ಎಸ್​ಎಸ್ ಸರಸಂಘಚಾಲಕರಾಗಿ ದಲಿತರನ್ನು ನೇಮಕ ಮಾಡಲಿ” ಎಂದು ಸವಾಲು ಹಾಕಿದ್ದಾರೆ. ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್​ಗೆ ಸ್ಪಷ್ಟವಾದ ಪ್ರಶ್ನೆಯನ್ನು ಕೇಳಿದ್ದಾರೆ. ಅದಕ್ಕೆ ಬಿಜೆಪಿ ನಾಯಕರು ಉತ್ತರ ಕೊಡಲಿ. ಆರ್​ಎಸ್​ಎಸ್​ ಸಂಸ್ಥಾಪಕ ಕೆ.ಬಿ. ಹೆಡ್ಗೇವಾರ್ ಮ್ಯೂಸಿಯಂಗೆ ಹೋದಾಗ ದಲಿತ ಎಂಬ ಕಾರಣಕ್ಕೆ ಪ್ರವೇಶ ಕೊಟ್ಟಿಲ್ಲ ಎಂದು ಮಾಜಿ ಶಾಸಕ ಗೂಳಿಹಟ್ಟಿ ಶೇಖರ್​ ಆಡಿಯೋದಲ್ಲಿ ಹೇಳಿದ್ದಾರೆ. ಅಲ್ಲದೇ ಈ ನಿಯಮ ಬಿಜೆಪಿಯ ದಲಿತ ನಾಯಕರಿಗೂ ಅನ್ವಯ ಆಗುತ್ತಾ? ಎಂದು ಕೇಳಿದ್ದಾರೆ. ಹಿಂದುತ್ವದಲ್ಲಿ ಆರ್​ಎಸ್​ಎಸ್ ತತ್ವದಲ್ಲಿ ದಲಿತರಿಗೆ, ಹಿಂದುಳಿದವರಿಗೆ ಹಾಗೂ ಅಲ್ಪಸಂಖ್ಯಾತರಿಗೆ, ಬಡವರಿಗೆ ಜಾಗ ಇಲ್ಲ ಎಂದು ಇದರಿಂದ ಸ್ಪಷ್ಟವಾಗುತ್ತದೆ” ಎಂದು ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ. ದಲಿತ ಸಮುದಾಯದ ಗೂಳಿಹಟ್ಟಿ ಅವರಿಗೆ…

Read More

ಶಿವಮೊಗ್ಗ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರಿಗೆ ಹಣ ಕೊಡಲು ನಮ್ಮ ಅಭ್ಯಂತರ ಇಲ್ಲ. 10 ಸಾವಿರ ಕೋಟಿ ಕೊಡುತ್ತೇನೆ ಎಂದು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.  ಶಿವಮೊಗ್ಗದಲ್ಲಿಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಲ್ಪಸಂಖ್ಯಾತರ ಪರ ಹೇಳಿಕೆ ಹಿಂದೂಗಳ ಆಕ್ರೋಶಕ್ಕೆ ಅವಕಾಶ ಆಗುತ್ತದೆ. ಈ ರೀತಿಯ ಮಾತುಗಳನ್ನು ಮುಖ್ಯಮಂತ್ರಿ ಅವರಿಂದ ನಿರೀಕ್ಷೆ ಮಾಡಿರಲಿಲ್ಲ. ಈಗಾಗಲೇ ಅವರ ಹೇಳಿಕೆಯನ್ನು ಮಠಾಧಿಪತಿಗಳು ಸೇರಿದಂತೆ ಎಲ್ಲರೂ ಖಂಡಿಸಿದ್ದಾರೆ. ಏನಾದರೂ ಮಾತನಾಡಬೇಕಾದರೆ ಎಚ್ಚರಿಕೆ ವಹಿಸಿ ಮಾತನಾಡಬೇಕು ಎಂಬುದು ನನ್ನ ಸಲಹೆ ಎಂದರು. https://ainlivenews.com/the-founder-of-byjus-who-barricaded-his-own-house-to-give-salary-to-the-employees/ ಲೋಕಸಭೆ ಚುನಾವಣೆಯಲ್ಲಿ ಮೋದಿ ಹೆಸರಿನಲ್ಲಿ ನೂರಕ್ಕೆ ನೂರು ಗೆಲ್ಲುವುದರಲ್ಲಿ ಯಾವುದೇ ಅನುಮಾನ ಬೇಡ. ಓಲೈಕೆ ರಾಜಕಾರಣದಲ್ಲಿ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದರೆ ಅದು ಸಾಧ್ಯವಿಲ್ಲ. ಬಿಜೆಪಿ ಪರವಾದ, ಮೋದಿ ಪರವಾದ ವಾತಾವರಣದಿಂದ ನಾವು ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲಲ್ಲು ಪ್ರಯತ್ನಿಸುತ್ತಿದ್ದೇವೆ. ಇದರಲ್ಲಿ ನೂರಕ್ಕೆ ನೂರರಷ್ಟು ಯಶಸ್ವಿಯಾಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Read More