Author: AIN Author

ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿಹಾಕಲು ವಿಪಕ್ಷ ಬಿಜೆಪಿ ಸಜ್ಜಾಗಿದೆ. ಆದ್ರೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷಕ್ಕೆ ವಿಪಕ್ಷದಂತಾಗಿದ್ದಾರೆ. ರಾಜ್ಯಾಧ್ಯಕ್ಷ ಅಥವಾ ವಿಪಕ್ಷ ನಾಯಕ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಗೊಂಡಿರುವ ಕೆಲ ಬಿಜೆಪಿ ಶಾಸಕರು ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ. ಈ ಪಟ್ಟಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಸಹ ಇದೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತ್ನಾಳ್, ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ. ಆದ್ರೆ, ಉಚಿತ ಮಾತ್ರ ಅಲ್ಲ, ಹಣ ಕೊಟ್ಟು ಟಿಕೆಟ್ ಪಡೆದು ಹೋಗಬೇಕು ಎಂದರು. https://ainlivenews.com/the-founder-of-byjus-who-barricaded-his-own-house-to-give-salary-to-the-employees/ ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ನಾನಾಗಿಯೇ ದೆಹಲಿಗೆ ಹೋಗಲ್ಲ, ಕರೆ ಬಂದ ಮೇಲೆ ಹೋಗುತ್ತೇನೆ. ಯಾವಾಗ ಕರೆ ಬರುತ್ತದೆಯೋ ಆಗ ದೆಹಲಿಗೆ ಹೋಗುತ್ತೇನೆ. ಶಾಸಕ ರಮೇಶ್ ಜಾರಕಿಹೊಳಿ‌ ಸೇರಿದಂತೆ ಹಲವರಿಗೆ ಹೇಳಿರಬಹುದು. ಇಬ್ಬರು ಮಹಾನುಭಾವರಿಂದ ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಂದಿದೆ. ದೆಹಲಿಯ ಒಬ್ಬರು, ಕರ್ನಾಟಕ ಒಬ್ಬರು ಇದ್ದಾರೆ ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ…

Read More

ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯ ಸ್ಮರಣೆಯಂದು ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಇಂದು ಘೋಷಣೆ ಮಾಡಿದರು. ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಲಿಡ್ಕರ್ ಉತ್ಪನ್ನಕ್ಕೆ ಡಾಲಿ ರಾಯಭಾರಿಯಾಗಿದ್ಧಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್ ಸಿ ಮಹದೇವಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ (Lidkar) ಇದೇ ಮೊದಲ ಬಾರಿಗೆ ರಾಯಭಾರಿಯನ್ನ (Ambassador) ಆಯ್ಕೆ ಮಾಡಿದೆ. ನಟ‌ರಾಕ್ಷಸ   ಡಾಲಿ ಧನಂಜಯ್ (Dolly Dhananjay) ಲಿಡ್ಕರ್ ಗೆ  ರಾಯಭಾರಿ ಆಗಿದ್ದಾರೆ. ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡಲಿದ್ದಾರೆ. https://ainlivenews.com/the-founder-of-byjus-who-barricaded-his-own-house-to-give-salary-to-the-employees/ ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ.…

Read More

ಕೆ.ಆರ್.ಜಿ ಸ್ಟುಡಿಯೋಸ್‍ ಮತ್ತು ಟಿ.ವಿ.ಎಫ್‍ ಮೋಷನ್‍ ಪಿಕ್ಚರ್ಸ್ ನಿರ್ಮಾಣದಲ್ಲಿ ತಯಾರಾಗುತ್ತಿರುವ ‘ಪೌಡರ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮೈಸೂರಿನಲ್ಲಿ ಮುಕ್ತಾಯವಾಗಿದೆ. 30 ದಿನಗಳ ಕಾಲ ನಡೆದ ಈ ಮೊದಲ ಹಂತದ ಚಿತ್ರೀಕರಣದಲ್ಲಿ ದಿಗಂತ್‍, ಧನ್ಯಾ ರಾಮ್‍ಕುಮಾರ್, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಅಚ್ಯುತ್ ಕುಮಾರ್, ಅನಿರುದ್ಧ್ ಆಚಾರ್ಯ, ರವಿಶಂಕರ್ ಗೌಡ ಮುಂತಾದ ಪ್ರತಿಭಾವಂತ ಕಲಾವಿದರು ಸಂತೋಷದಿಂದ ಚಿತ್ರೀಕರಣ ಮುಗಿಸಿದರೆ. ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡವು ಸದ್ಯದಲ್ಲೇ ಬೆಂಗಳೂರಿನಲ್ಲಿ ಎರಡನೆ ಹಂತದ ಚಿತ್ರೀಕರಣ ಪ್ರಾರಂಭಿಸಲು ಸಜ್ಜಾಗುತ್ತಿದ್ದಾರೆ. ‘ಪೌಡರ್’ ಒಂದು ಹಾಸ್ಯಮಯ ಚಿತ್ರವಾಗಿದ್ದು, ಎಲ್ಲಾ ವರ್ಗದ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣವಾಗಲಿದೆ. ಈ ಚಿತ್ರಕ್ಕೆ ಜನಾರ್ದನ್‍ ಚಿಕ್ಕಣ್ಣ ಕಥೆ ಬರೆದು ನಿರ್ದೇಶಿಸುತ್ತಿದ್ದು, ಕೆ.ಆರ್.ಜಿ ಸ್ಟುಡಿಯೋಸ್‍ ಮತ್ತು ಟಿ.ವಿ.ಎಫ್‍ ಮೋಷನ್‍ ಪಿಕ್ಚರ್ಸ್ ಜೊತೆಯಾಗಿ ನಿರ್ಮಿಸಿವೆ. 2024ರ ಏಪ್ರಿಲ್‍ನಲ್ಲಿ ‘ಪೌಡರ್’ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Read More

ಬೆಂಗಳೂರು:- ಬೆಂಗಳೂರಿನ ಟಿಂಬರ್​ಲೇಔಟ್​ನಲ್ಲಿ ಆಟೋ ಚಾಲಕ ಇನ್ನೇನು ಬ್ರಹ್ಮಚರ್ಯದಿಂದ ಗೃಹಸ್ತಾಶ್ರಮಕ್ಕೆ ಕಾಲಿಡುತ್ತಿರಬೇಕು ಎನ್ನುವಷ್ಟರಲ್ಲೇ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಂದಿರುವ ಘಟನೆ ಜರುಗಿದೆ. 24 ವರ್ಷದ ಅರುಣ್​ಗೆ ಕೊಲೆಯಾದ ದುರ್ದೈವಿ. ಮುಂದಿನ ತಿಂಗಳು ಮದುವೆ ಫಿಕ್ಸ್ ಆಗಿತ್ತು. ಆದ್ರೆ, 10ಕ್ಕೂ ಹೆಚ್ಚು ದುಷ್ಕರ್ಮಿಗಳು ಅರಣ್​ನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. https://ainlivenews.com/the-founder-of-byjus-who-barricaded-his-own-house-to-give-salary-to-the-employees/  ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ಪರಿಶೀಲಿಸಿದ್ದು, ಕೊಲೆಗೆ ಕಾರಣವೇನು ಎನ್ನುವುದನ್ನು ತನಿಖೆ ಕೈಗೊಂಡಿದ್ದಾರೆ. ಆಟೋ ಚಾಲಕ ಅರುಣ್ ಯುವತಿಯೊಬ್ಬಳನ್ನ ಪ್ರೀತಿಸುತ್ತಿದ್ದ. ಆ ಪ್ರೀತಿಯೊಂದಿಗೆ ಮದುವೆಯಾಗಿ ಸಂಸಾರ ಶುರು ಮಾಡಬೇಕಿದ್ದ. ಅದಕ್ಕೆ ಅಂತಾಲೇ ಮುಂದಿನ ತಿಂಗಳು ಮದುವೆ ಫಿಕ್ಸ್​ ಆಗಿತ್ತು ಎಂದು ತಿಳಿದು ಬಂದಿದೆ.

Read More

ಭೋಪಾಲ್: ಮಧ್ಯಪ್ರದೇಶದಲ್ಲಿ (Madhyapradesh) ಕಾಂಗ್ರೆಸ್ ಹೀನಾಯ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ (Congress) ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ. ಗೆಲುವು ಖಚಿತವಾಗಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವು ಸೋಲು ಕಂಡ ಮರುದಿನವೇ ಕಮಲ್‍ ನಾಥ್ (Kamal Nath) ಅವರು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿದುಬಂದಿದೆ.  ಗೆಲುವಿನ ಬಗ್ಗೆ ಪಕ್ಷಕ್ಕೆ ಎಷ್ಟು ಮನವರಿಕೆಯಾಗಿತ್ತೆಂದರೆ ಮತ ಎಣಿಕೆಯ ದಿನ ಬೆಳಿಗ್ಗೆಯೇ ಕಮಲ್‍ನಾಥ್ ಅವರಿಗೆ ಅಭಿನಂದನೆ ಸಲ್ಲಿಸಿ ಬ್ಯಾನರ್‍ಗಳನ್ನು ಹಾಕಲಾಗಿತ್ತು. ಆದರೆ ಮಧ್ಯಾಹ್ನದ ವೇಳೆಗೆ ಬಿಜೆಪಿ ಮುನ್ನಡೆ ಸಾಧಿಸಿದ್ದರಿಂದ ಬ್ಯಾನರ್ ತೆರವುಗೊಳಿಸ ಲಾಯಿತು. ರಾಜ್ಯದಲ್ಲಿ ಬಿಜೆಪಿ ವಿರುದ್ಧ ಅಲೆ ಕಂಡುಬಂದಿದ್ದರಿಂದ ಕಾಂಗ್ರೆಸ್ ಗೆಲುವಿನ ನಿರೀಕ್ಷೆಯಲ್ಲಿತ್ತು. https://ainlivenews.com/the-founder-of-byjus-who-barricaded-his-own-house-to-give-salary-to-the-employees/ ಹೀಗಾಗಿ ಹೆಚ್ಚಿನ ಪ್ರಚಾರವನ್ನು ಕಾಂಗ್ರೆಸ್ ನಾಯಕರು ಕೈಗೊಂಡಿರಲಿಲ್ಲ. ಇದು ಮತದಾರರೊಂದಿಗಿನ ಸಂವಹನದ ಮೇಲೆ ಪರಿಣಾಮ ಬೀರಿತು ಮತ್ತು ಪಕ್ಷದ ಸಂದೇಶವನ್ನು ರವಾನಿಸಲು ಸಾಧ್ಯವಾಗಲಿಲ್ಲ ಎಂದು ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ. ಐಎನ್‍ಡಿಐಎ ಒಕ್ಕೂಟದ ಸಮಾಜವಾದಿ ಪಕ್ಷಕ್ಕೆ ಭರವಸೆ ನೀಡಲಾದ ಐದರಿಂದ ಏಳು ಸ್ಥಾನಗಳನ್ನು ನಿರಾಕರಿಸುವುದು ಮೈತ್ರಿ ನಾಯಕರ ಕೋಪಕ್ಕೆ ಕಾರಣವಾಗಿದೆ.

Read More

ಹೈದರಾಬಾದ್: ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಲು ರೇವಂತ್ ರೆಡ್ಡಿಯವರು (Revanth Reddy) ಸಜ್ಜಾಗಿದ್ದು, ಡಿಸೆಂಬರ್ 7 ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿದೆ. ರೇವಂತ್ ರೆಡ್ಡಿಯವರ ಜೊತೆ ಇತರ ಕೆಲವು ಸಚಿವರುಗಳು ಕೂಡ ಪ್ರಮಣ ವಚನ ಸ್ವೀಕಾರ ಮಾಡಲಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಸಿಎಲ್‍ಪಿ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದ್ದು, ಸಿಎಂ ನೇಮಕದ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್‍ ಕೈಗೊಂಡಿದೆ. https://ainlivenews.com/the-founder-of-byjus-who-barricaded-his-own-house-to-give-salary-to-the-employees/ ಈ ಹಿಂದೆ ಡಿಸೆಂಬರ್‌ 9 ರಂದು ಸೋನಿಯಾ ಗಾಂಧಿಯವರ ಜನ್ಮದಿನವಿದ್ದು, ಇದೇ ದಿನ ರೇವಂತ್‌ ರೆಡ್ಡಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ ಎಂದು ಹೇಳಲಾಗಿತ್ತು. ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ (Telangana Vidhanasabha Election Results) ತೆಲಂಗಾಣದಲ್ಲಿ ಕಾಂಗ್ರೆಸ್ (Congress) ಅಭೂತಪೂರ್ವ ಜಯಗಳಿಸಿತ್ತು. 119 ಸ್ಥಾನಗಳ ಪೈಕಿ 69 ಸ್ಥಾನಗಳನ್ನು ಗಳಿಸುವ ಮೂಲಕ ಸ್ಪಷ್ಟಬಹುಮತ ಪಡೆದಿತ್ತು.

Read More

ಬೆಂಗಳೂರು: ದಸರಾ ಆನೆ ಅರ್ಜುನ ಪ್ರಾಣ ಕಳೆದುಕೊಂಡ ಜಾಗ ಹಾಗೂ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂಬಾರಿ ಹೊತ್ತ ಅರ್ಜುನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅರ್ಜುನನ ಸಾವಿನ ಕುರಿತು ಸಂಪೂರ್ಣ ಮಾಹಿತಿ ಕೇಳಿದ್ದೇನೆ. ಅರ್ಜುನ ಆನೆ ಸಕಲೇಶಪುರದಲ್ಲಿ ಎಲ್ಲಿ ಪ್ರಾಣ ಕಳೆದುಕೊಂಡಿದ್ನೋ ಅಲ್ಲಿಯೇ ಸ್ಮಾರಕ ಮಾಡುತ್ತೇವೆ. ಹಾಗೂ ಹೆಗ್ಗಡದೇವನಕೋಟೆಯಲ್ಲಿಯೂ ಸ್ಮಾರಕ ಮಾಡಲು ತಿಳಿಸಿದ್ದೇವೆ ಎಂದರು. ಅರ್ಜುನ ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದವನ ಅಚಾನಕ್ ಸಾವಾಗಿದೆ. ಆತ ಇನ್ನೂ ಹೆಚ್ಚು ಕಾಲ ಬದುಕಬೇಕಿತ್ತು, ಇನ್ನೊಂದು ಆನೆ ಕಾರ್ಯಾಚರಣೆಗೆ ಅರ್ಜುನ ನನ್ನ ಉಪಯೋಗಿಸಿದ ಕಾರಣ ಸಾವನಪ್ಪಿದೆ ಎಂದು ಸಿಎಂ ಹೇಳಿದರು. ಇತ್ತ ಹಾಸನದಲ್ಲಿ ಮಾವುತ ವಿನು ಮಾತನಾಡುತ್ತಾ, ಅರ್ಜುನನ್ನು ನೆನೆದು ಕಣ್ಣೀರು ಹಾಕಿದರು. https://ainlivenews.com/the-founder-of-byjus-who-barricaded-his-own-house-to-give-salary-to-the-employees/ ಕಾದಾಟದ ವೇಳೆ ಕಾಲಿನಲ್ಲಿ ರಕ್ತ ಬಂತು. ಆದರೂ ಮದಗಜದ ಜೊತೆಗೆ ಹೋರಾಡಿದ. ನಂತರ ಮಿಸ್ ಫೈರ್ ಆಗಿ ಕಾಲಿಗೆ ಗುಂಡು ಬಿತ್ತು. ಪ್ರಶಾಂತ ಇಲ್ಲದಿದ್ದರೂ ಅರ್ಜುನ ಹೋರಾಡಿ ಗೆಲ್ಲುತ್ತಿದ್ದನು. ಆದರೆ…

Read More

ಡಿ.ಎಂ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್ ನಿರ್ದೇಶಿಸಿರುವ “ಲೇಡಿಸ್ ಬಾರ್” ಚಿತ್ರದ ಟೀಸರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು ರಾಜಕೀಯ ಮುಖಂಡರಾದ ಎಂ.ಡಿ.ಲಕ್ಷ್ಮೀನಾರಾಯಣ್ ಟೀಸರ್ ಬಿಡುಗಡೆ ಮಾಡಿದರು. ಹಾಡುಗಳನ್ನು ನಟಿ ರೂಪಿಕಾ, ಮಮತ ಹಾಗೂ ನಿರ್ಮಾಪಕ ಶಿಲ್ಪ ಶ್ರೀನಿವಾಸ್ ಹಾಡುಗಳನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಸಿರಿ ಮ್ಯೂಸಿಕ್ ಮೂಲಕ ಹಾಡುಗಳು ಲೋಕಾರ್ಪಣೆಯಾಗಿದೆ. ನಂತರ ಚಿತ್ರತಂಡದ ಸದಸ್ಯರು “ಲೇಡಿಸ್ ಬಾರ್” ಕುರಿತು ಮಾಹಿತಿ ನೀಡಿದರು. “ಲೇಡಿಸ್ ಬಾರ್” ಶೀರ್ಷಿಕೆ ಕೇಳಿದ ತಕ್ಷಣ ಕುಡಿತದ ಬಗ್ಗೆ ಸಿನಿಮಾ ಅಂದುಕೊಳ್ಳುವುದು ಸಹಜ. ಆದರೆ ನಮ್ಮ ಚಿತ್ರದಲ್ಲಿ ಬರೀ ಕುಡಿತವಷ್ಟೇ ತೋರಿಸಿಲ್ಲ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನ ಮಾಡಿದ್ದೇವೆ. ಚಿತ್ರ ನೋಡಿದಾಗ ಅದು ತಿಳಿಯುತ್ತದೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ‌. ಸದ್ಯದಲ್ಲೇ ಚಿತ್ರವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಲಿದ್ದು, ಜನವರಿಯಲ್ಲಿ ತೆರೆಗೆ ತರುತ್ತೇವೆ ಎಂದು ನಿರ್ದೇಶಕ ಎ.ಎನ್ ಮುತ್ತು ತಿಳಿಸಿದರು. ನಾನು ಉದ್ಯಮಿ ಜೊತೆಗೆ ರೈತ ಕೂಡ ಎಂದು ಮಾತನಾಡಿದ…

Read More

ಬೆಂಗಳೂರು;- ರಾಜ್ಯದಲ್ಲಿ ಭ್ರೂಣಹತ್ಯೆ ತಡೆಗೆ ಪೊಲೀಸ್ ಇಲಾಖೆ ಹೊಸ ನಿಯಮ ಜಾರಿಗೆ ತರಲು ಚಿಂತನೆ ನಡೆಸಿದೆ. ಇನ್ಮುಂದೆ 6 ತಿಂಗಳು ಮತ್ತು ನಂತರದ ಭ್ರೂಣ ಹತ್ಯೆ ಮಾಡಿದರೆ ಕೊಲೆ ಕೇಸ್​ ದಾಖಲಿಸಲು ಪೊಲೀಸ್ ಇಲಾಖೆ ಪ್ಲ್ಯಾನ್ ಮಾಡುತ್ತಿದೆ ಎಂದು ತಿಳಿದುಬಂದಿದೆ. ಇನ್ಮುಂದೆ 6 ತಿಂಗಳು ಮತ್ತು ನಂತರದ ಭ್ರೂಣ ಹತ್ಯೆ ಮಾಡಿದರೆ ಕೊಲೆ ಕೇಸ್​ ದಾಖಲಿಸಲು ಪೊಲೀಸ್ ಇಲಾಖೆ ಪ್ಲ್ಯಾನ್ ಮಾಡುತ್ತಿದೆ ಎಂದು ತಿಳಿದುಬಂದಿದೆ. ಭ್ರೂಣ ಹತ್ಯೆ ಮಾಡಿದ್ರೆ ಐಪಿಸಿ 302 ಅಡಿ ಕೇಸ್ ದಾಖಲಿಸಿಕೊಳ್ಳಲು ಚಿಂತನೆಗಳು ನಡೆದಿದ್ದು, ಈ ಹೊಸ ನಿಯಮ ಜಾರಿಗೆ ತರುವ ಬಗ್ಗೆ ಹಿರಿಯ ಪೊಲೀಸ್​ ಅಧಿಕಾರಿಗಳು ಗಂಭೀರ ಚಿಂತನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲು ಮಾಡಲು ಕರಡು ತಯಾರಿಸುವ ಬಗ್ಗೆ ಚರ್ಚೆಗಳು ನಡೆದಿದ್ದು, ಕರಡು ಸಿದ್ದಪಡಿಸಿ ಜಾರಿಗೆ ತರುವಂತೆ ಆರೋಗ್ಯ ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ. ಒಂದು ವೇಳೆ ಇದು ಜಾರಿಗೆ ಬಂದರೆ ಆರು ತಿಂಗಳು ಮತ್ತು ನಂತರದ ಭ್ರೂಣ ಹತ್ಯೆ ಮಾಡಿದರೆ ಅಂತರವರ ವಿರುದ್ಧ ಐಪಿಸಿ…

Read More

ಬೆಂಗಳೂರು:- ಆರೋಪಿಗೆ ಪಾಸ್​ಪೋರ್ಟ್ ನವೀಕರಣ ಅವಕಾಶ ನಿರಾಕರಿಸಿದ್ದ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ, ಪಾಸ್‌ ಪೋರ್ಟ್ ನವೀಕರಣಕ್ಕೆ ನಿರಾಕರಿಸಿ ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿ ನೀಡಿದ್ದ ಹಿಂಬರಹವನ್ನು ಎತ್ತಿಹಿಡಿದಿದೆ. ಪಾಸ್ ಪೋರ್ಟ್ ಕಾಯಿದೆಯ ಯಾವುದೇ ನಿಯಮಗಳಲ್ಲಿ ಪಾಸ್ ಪೋರ್ಟ್ ವಿತರಣೆ/ನವೀಕರಣಕ್ಕೆ ಬಾಕಿ ಇರುವ ಕ್ರಿಮಿನಲ್ ಕೇಸ್ ಅಲಕ್ಷಿಸುವ ಯಾವುದೇ ಪ್ರತ್ಯೇಕ ಮಾನದಂಡವಿಲ್ಲ. ಭಾರತೀಯ ಸಂವಿಧಾನದ 226ನೇ ವಿಧಿಯಡಿ ಲಭ್ಯವಿರುವ ಅಧಿಕಾರವನ್ನು ಬಳಸಿ ಈ ಕೋರ್ಟ್ ಒಂದು ಆದೇಶದ ಮೂಲಕ ನಿಯಮವನ್ನು ಸರಳೀಕರಣ ಮಾಡಲಾಗದು. ಸೆಕ್ಷನ್ 6(2)(ಎಫ್) ಪ್ರಕಾರ ಯಾವುದೇ ಪಾಸ್​ ಪೋರ್ಟ್ ಅರ್ಜಿ ಸಲ್ಲಿಕೆಯಾದರೂ ಸಹ ಅದು ಹೊಸದಾಗಿ ವಿತರಣೆ, ನವೀಕರಣ ಹಾಗೂ ಮರು ವಿತರಣೆಗೆ ಆಗಿರಬಹುದು. ಅಂತಹ ವೇಳೆ ನಿಯಮಗಳನ್ನು ಸಡಿಲಿಕೆ ಮಾಡಲಾಗದು ಎಂದು ಪೀಠ ತಿಳಿಸಿದೆ.

Read More