ಸ್ಪ್ಯಾನಿಷ್ :- ಸ್ಪ್ಯಾನಿಷ್ನಲ್ಲಿ ಇಂತಹದ್ದೊಂದು ವಿಚಿತ್ರ ಘಟನೆ ನಡೆದಿದ್ದು, ಮಹಿಳೆಯೊಬ್ಬಳು ಹಲ್ಲುಜ್ಜುವ ಬ್ರಷ್ ಅನ್ನು ನುಂಗಿ ಉಸಿರುಗಟ್ಟಿ ಸಾವು- ಬದುಕಿನ ಮಧ್ಯೆ ಹೋರಾಡಿ ಕೊನೆಗೂ ಸಾವಿನ ಅಂಚಿನಿಂದ ಪಾರಾಗಿದ್ದಾಳೆ. ಯುವತಿ ಟರ್ಕಿ ಮಾಂಸ ತಿಂದಿದ್ದಳು. ಆದರೆ ಆಕೆಗೆ ಏನಾಯ್ತೋ ಗೊತ್ತಿಲ್ಲ. ಬುಧವಾರ ತನ್ನ ಗಂಟಲಿನಿಂದ ಟರ್ಕಿಯ ಮಾಂಸವನ್ನು ಬಲವಂತವಾಗಿ ಹೊರಹಾಕಲು ಪ್ರಯತ್ನಿಸಿದಳು. ಆದರೆ ಈ ವೇಳೆ ಆಕಸ್ಮಿಕವಾಗಿ ಹಲ್ಲುಜ್ಜುವ ಟೂತ್ ಬ್ರಷ್ ನುಂಗಿದ್ದಾಳೆ. ಹೈಜಿಯಾ ತಂದೆಯನ್ನು ಅನಾರೋಗ್ಯದಿಂದ ಗಾಲಿಕುರ್ಚಿ ಬಿಟ್ಟು ಕೆಳಗೆ ಇಳಿಯಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಅವಳು ಹಲ್ಲುಜ್ಜುವ ಬ್ರಷ್ ಅನ್ನು ಸೇವಿಸಿದಾಗ ಅವಳು ತನ್ನನ್ನು ತಾನೇ ನೋಡಿಕೊಳ್ಳಬೇಕಾಗಿತ್ತು. ತಂದೆ, ಮಗಳು ನರಳಾಡುತ್ತಿರುವುದನ್ನು ನೋಡುತ್ತಿದ್ದರು ಸಹಾಯ ಮಾಡಲು ಆಗದೇ ಇರುವ ಸ್ಥಿತಿ ಇತ್ತು. ಸ್ವಲ್ಪ ಸಮಯದ ನಂತರ, ಅವಳು ಸಹಾಯಕ್ಕಾಗಿ ವೈದ್ಯರ ಬಳಿ ಹೋಗಿದ್ದಾಳೆ. ಆಸ್ಪತ್ರೆಯಲ್ಲಿ ವೈದ್ಯರು ಎಕ್ಸರೆ ಮಾಡಿದ್ದಾರೆ. ಆಕೆಯನ್ನು ಪರೀಕ್ಷಿಸಲು ವೈದ್ಯಕೀಯ ತಜ್ಞರು ಸುಮಾರು ಮೂರು ಗಂಟೆಗಳ ಕಾಲ ತೆಗೆದುಕೊಂಡರು. ನಂತರ ಹಲ್ಲುಜ್ಜುವ ಬ್ರಷ್ ಅನ್ನು ತೆಗೆದುಹಾಕುವಲ್ಲಿ ಯಶಸ್ವಿಯಾಗಿದ್ದಾರೆ.…
Author: AIN Author
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ (Siddaramaiah) ಟಿಪ್ಪು ಅಂದ್ರೆ ಬಹಳ ಪ್ರೀತಿ. ಅವರದ್ದು ಟಿಪ್ಪು ಅಜೆಂಡಾ. ಅವರು ಹಿಂದೂಗಳನ್ನ ಎರಡನೇ ದರ್ಜೆ ಥರಾ ನೋಡ್ತಾ ಇದ್ದಾರೆ. ಸಿದ್ದರಾಮಯ್ಯ ಅವರು ಮುಸ್ಲಿಮರನ್ನಷ್ಟೇ ಓಲೈಕೆ ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಹೇಳಿದರು. ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ಮುಸ್ಲಿಂ ಮತಕ್ಕಾಗಿ ಸಿದ್ಧರಾಮಯ್ಯ ಈ ರೀತ ರಾಜಕಾರಣ ಮಾಡುತ್ತಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ಅವರು ಮುಸ್ಲಿಮರ ಓಲೈಕೆ ಜೊತೆಗೆ ಟಿಪ್ಪು ಜಯಂತಿ, ಶಾದಿ ಭಾಗ್ಯ, ಇವೆಲ್ಲಾ ಕೈ ಬಿಡಬೇಕು ಎಂದರು. ರಾಜ್ಯದಲ್ಲಿ 13 ತಾಲೂಕು ಬಿಟ್ರೆ ಉಳಿದ ಎಲ್ಲಾ ಕಡೆ ಬರಯಿದೆ. ಈ ಸಮಯದಲ್ಲಿ ಸರ್ಕಾರಕ್ಕೆ ತಾಯಿ ಹೃದಯ ಇರಬೇಕಿತ್ತು. ಆದ್ರೆ ಸರ್ಕಾರಕ್ಕೆ ಕಟುಕನ ಹೃದಯವಿದೆ. ಬರ ನಿರ್ವಹಣೆ ಮಾಡೋದು ಬಿಟ್ಟು ತೆಲಂಗಾಣದಲ್ಲಿ ರಾಜಕೀಯ ಮಾಡುವುದಕ್ಕೆ ಹೋಗ್ತಾರೆ. ಇದು ಜನ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಪೃಥ್ವಿ ಸಿಂಗ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸುವೆ. ಬಿಜೆಪಿ ಕಾರ್ಯಕರ್ತರ ಮೇಲೆ…
ಬೆಳಗಾವಿ: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಒಂದೇ ಆಡಳಿತ ಕೊಡಬೇಕು. ಅವರು ಎಲ್ಲಾ ಸಮುದಾಯವನ್ನೂ ಸಮನಾಗಿ ನೋಡಿಕೊಳ್ಳಬೇಕು. ಆದರೆ ರಾಜಕೀಯ ಪ್ರೇರಿತವಾಗಿ ಮುಸ್ಲಿಂ ಸಮುದಾಯಕ್ಕೆ (Muslim Community) ತುಷ್ಟೀಕರಣ ಮಾಡುತ್ತಾರೆ. ಕಾಂಗ್ರೆಸ್ (Congress) ಪಕ್ಷದವರು ಕೋಮುವಾದಿಗಳು ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ (CN Ashwath Narayan) ಹೇಳಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ಮುಸ್ಲಿಂ ಸಮುದಾಯಕ್ಕೆ 10,000 ಕೋಟಿ ರೂ. ಖರ್ಚು ಮಾಡಲು ಸಿದ್ಧ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ಸಿಎಂ ಸಮಾನವಾಗಿ ಎಲ್ಲರನ್ನೂ ನೋಡಿಕೊಳ್ಳಬೇಕು. ಕಾಂಗ್ರೆಸ್ ಪಕ್ಷದ ಕೋಮುವಾದಿಗಳಿಂದ ರಾಜ್ಯದಲ್ಲಿ ಅಸ್ವಾಸ್ತ್ಯ ಇದೆ. ಬರಗಾಲ, ರೈತರ ಆತ್ಮಹತ್ಯೆಗೆ ಪರಿಹಾರ ಕೊಡಲು ಆಗುತ್ತಿಲ್ಲ. ಆದರೆ ಈ ರೀತಿಯಲ್ಲಿ ಮಾತನಾಡಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲರಿಗೂ ಕಿವಿಗೆ ಹೂ ಇಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.
ನ್ಯಾಚುರಲ್ ಸ್ಟಾರ್ ನಾನಿ ನಟನೆಯ ಹಾಯ್ ನಾನ್ನ ಸಿನಿಮಾ ಇದೇ ಡಿಸೆಂಬರ್ 7ರಂದು ಪಂಚ ಭಾಷೆಯಲ್ಲಿ ರಿಲೀಸ್ ಆಗ್ತಿದೆ. ಈ ಹಿನ್ನೆಲೆ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಚಾರ ನಡೆಸುತ್ತಿರುವ ನಾನಿ ಇಂದು ಬೆಂಗಳೂರಿನಲ್ಲಿ ತಮ್ಮ ಚಿತ್ರದ ಪ್ರಮೋಷನ್ ನಡೆಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಗೂ ಮುನ್ನ ಅವರು, ನಾಗವಾರದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮನೆಗೆ ಭೇಟೆ ಕೊಟ್ಟು ಒಂದಷ್ಟು ಅವರ ಮನೆಯಲ್ಲಿ ಬ್ರೇಕ್ ಫಾಸ್ಟ್ ಸವಿದು ಕೆಲ ಕಾಲ ಸಮಯ ಕಳೆದಿದ್ದಾರೆ.ಶಿವಣ್ಣನ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ನಾನಿ ಸಿನಿಮಾ ಬಗ್ಗೆ ಒಂದಷ್ಟು ವಿಷಯ ಹಂಚಿಕೊಂಡಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ಮಾತನಾಡಿ, ನನ್ನ ಹಿಂದಿನ ಸಿನಿಮಾ ದಸರಾಗೆ ನೀವು ಬೆಂಬಲ ಕೊಟ್ಟಿದ್ದೀರಾ. ಅದೇ ರೀತಿ ಹಾಯ್ ನಾನ್ನ ಚಿತ್ರಕ್ಕೂ ಸಪೋರ್ಟ್ ಮಾಡಿ. ಹಾಯ್ ನಾನ್ನ ಎಂದು ಕನ್ನಡದಲ್ಲಿ ಟೈಟಲ್ ಇಡಲು ಕಾರಣವೇನೆಂದರೆ, ಸೌತ್ ಇಂಡಸ್ಟ್ರೀಯ ಎಲ್ಲಾ ಭಾಷೆಯಲ್ಲಿಯೂ ಇದೆ ಟೈಟಲ್ ಇಡಲಾಗಿದೆ. ರಿವ್ಯೂ ಮಾಡಲು, ಬುಕ್ ಮೈಶೋನಲ್ಲಿ ಸಿನಿಮಾ…
ಭಾರತ ಮತ್ತು ಕೋರಿಯಾ ನಡುವಿನ ಹೊಸ ಆರ್ಥಿಕ ಸಂಬಂಧಗಳ ವೃದ್ಧಿಸುವ ನಿಟ್ಟಿನಲ್ಲಿ ಬೆಂಗಳೂರಿನ ನೂತನವಾಗಿ ಜಿಯೊಂಗಿ ಬಿಸಿನೆಸ್ ಸೆಂಟರ್ ನ್ನು ಕರ್ನಾಟಕ ಸರ್ಕಾರದ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ಕಾಂಗ್ ಸುಂಗ್-ಚಿಯೋನ್ ರವರು ಉದ್ಘಾಟಿಸಿದರು.. ಕೇಂದ್ರವು ಮುಂದಿನ ದಿನಗಳಲ್ಲಿ ಆರ್ಥಿಕ ಸಂಬಂಧಗಳು, ವ್ಯಾಪಾರ, ಹೂಡಿಕೆ ಮತ್ತು ಮಾನವ ಸಂಪನ್ಮೂಲ ವಿನಿಮಯವನ್ನು ಜಾಗತಿಕವಾಗಿ ಸುಗಮಗೊಳಿಸಲಿವೆ.. ಭಾರತದ ಅತಿದೊಡ್ಡ ಐಟಿ ಕ್ಲಸ್ಟರ್ ಎನಿಸಿಕೊಂಡಿರುವ ಬೆಂಗಳೂರು ಭರವಸೆಯ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮುವಲ್ಲಿ ಇದು ಮಹತ್ತರ ಪಾತ್ರ ವಹಿಸಲಿದೆ.. GBC ಬೆಂಗಳೂರು ದಕ್ಷಿಣ ಭಾರತಕ್ಕೆ ವಿಸ್ತರಿಸುವ ಕಂಪನಿಗಳಿಗೆ ಗೇಟ್‌ವೇ ಆಗಿದ್ದು, ಹೊಸ ವ್ಯಾಪಾರ ಅವಕಾಶಗಳ ಮೇಲೆ ಕೇಂದ್ರೀಕರಿಸುತ್ತದೆ, ಮುಕ್ತ ವ್ಯಾಪಾರ ಒಪ್ಪಂದಗಳನ್ನು ಹತೋಟಿಗೆ ಮತ್ತು ಕೈಗಾರಿಕೆಗಳ ನಡುವಿನ ಸಹಯೋಗವನ್ನು ಉತ್ತೇಜಿಸುತ್ತದೆ. ಉದ್ಯಮ, ತಂತ್ರಜ್ಞಾನ, ಸ್ಟಾರ್ಟ್‌ಅಪ್‌ಗಳು ಮತ್ತು ‘ಮೇಕ್ ಇನ್ ಇಂಡಿಯಾ’ ಗಾಗಿ ಕೊರಿಯನ್ SME ಗಳೊಂದಿಗಿನ ಪಾಲುದಾರಿಕೆಯು ಹೊಸ ಸಾಧ್ಯತೆಗೆ ಅವಕಾಶ ಮಾಡಿಕೊಡಲಿದೆ. https://ainlivenews.com/good-news-for-rakibhai-fans-next-movie-title-announced-on-december-8/ ನಂತರ ಆಯುಕ್ತೆ ಗುಂಜನ್ ಕೃಷ್ಣ ರವರು ಮಾತನಾಡಿ ಈ ಬೆಳವಣಿಗೆಯು…
ಬೆಂಗಳೂರು: ಚಿಕನ್ ನೀಡಿಲ್ಲ ಎನ್ನುವ ಕಾರಣಕ್ಕೆ ಪುರಸಭೆ ಸದಸ್ಯನೊಬ್ಬ ಚಿಕ್ಕನ್ ಅಂಗಡಿಯನ್ನು ಧ್ವಂಸಗೊಳಿಸಿಲ್ಲದೆ ನಡು ರಸ್ತೆಯಲ್ಲಿ ಮಚ್ಚು ಹಿಡಿದು ಧಮ್ಕಿ ಹಾಕಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಹೊಸೂರು ರಸ್ತೆಯಲ್ಲಿನ ಭಾಷಾ ಚಿಕ್ಕನ್ ಅಂಗಡಿಯಲ್ಲಿ ನಡೆದಿದೆ.. ಇನ್ನೂ ಪುರಸಭೆ ಸದಸ್ಯನ ಗುಂಡಾಗಿರಿಗೆ ಆನೇಕಲ್ ಜನತೆ ಬಿಚ್ಚಿ ಬಿದ್ದಿದ್ದಾರೆ. ಇನ್ನು ವಾರ್ಡ್ ನಂಬರ್ 22ರ ಪುರಸಭೆ ಸದಸ್ಯರಾದ ರವಿ ಅಂಡ್ ಸಹಚಾರರಿಂದ ಅಂಗಡಿಗೆ ನುಗ್ಗಿ ದಾಂದಲೇ ನಡೆಸಿದ್ದಾರೆ ಎನ್ನಲಾಗಿದೆ. ಹೌದು ಹೊಸೂರು ಮುಖ್ಯ ರಸ್ತೆಯ ಭಾಷಾ ಅಂಗಡಿಗೆ ಚಿಕನ್ ತರಲು ಪುರಸಭಾ ಸದಸ್ಯ ರವಿ ಅಂಡ್ ಸಹಚರರು ಹೋಗಿದ್ರಂತೆ, ಅಗ ಕ್ಲುಲ್ಲಕ ಕಾರಣಕ್ಕೆ ಜಗಳ ಶುರುವಾಗಿದೆ ಗಲಾಟೆ ವಿಕೋಪಕ್ಕೆ ತಿರುಗಿ ಭಾಷಾ ಚಿಕ್ಕನ್ ಅಂಗಡಿ ನುಗ್ಗಿ ದಾಂದಲೆ ನಡೆಸಿದ್ದಾರೆ.. ಇನ್ನು ಭಾಷಾ ಅಂಗಡಿ ಕಡೆಯವರು ರವಿಗೆ ಸೇರಿದ ಕಾರು ಗಾಜು ಹೊಡೆದು ಧ್ವಂಸ ಮಾಡಿದರೆಂದು ಅರೋಪ ಸಹ ಕೇಳಿ ಬಂದಿದೆ.. https://ainlivenews.com/good-news-for-rakibhai-fans-next-movie-title-announced-on-december-8/ ಇನ್ನು ಭಾಷಾ ಅಂಗಡಿಯ ಮಾಲೀಕನಿಗೂ ಮತ್ತು ರವಿಗೂ ಮಾತಿನ…
ತಮಿಳು ನಾಡಿನ ಹೆಸರಾಂತ ನಟ ರಜನಿಕಾಂತ್ (Rajinikanth) ಅವರ ಪತ್ನಿ ಲತಾ (Lata) ಅವರಿಗೆ 2024 ಜನವರಿ 6ರ ಒಳಗೆ ಖುದ್ದಾಗಿ ಕೋರ್ಟಿ (Court)ಗೆ ಹಾಜರಾಗಬೇಕು ಎಂದು ಬೆಂಗಳೂರಿನ (Bangalore) 1ನೇ ಎಸಿಎಂಎಂ ನ್ಯಾಯಾಲಯ ತಿಳಿಸಿದೆ. ಲತಾ ಅವರ ಮೇಲಿರೋದು ಜಾಮೀನು ರಹಿತ ಪ್ರಕರಣ ಆಗಿದ್ದರಿಂದ ಖುದ್ದಾಗಿ ಹಾಜರಾಗಬೇಕೆಂದು ವಕೀಲರು ಮನವಿ ಮಾಡಿದ್ದರು. ಪುತ್ರಿ ಸೌಂದರ್ಯ ನಿರ್ದೇಶನದ ಕೊಚಾಡಿಯನ್ ಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಲತಾ ಅವರು ಮೇಲೆ ಐಪಿಸಿ 463 ಅಡಿ ಕೇಸ್ ದಾಖಲಾಗಿತ್ತು. ಕೊಚಾಡಿಯನ್ ಬಿಡುಗಡೆಗೆ ಸಂಬಂಧಿಸಿದಂತೆ ಎರಡು ಕಂಪೆನಿಗಳ ಜೊತೆ ಒಪ್ಪಂದವಾಗಿತ್ತು. ಮೀಡಿಯಾ ಒನ್ ಕಂಪನಿ ಪರವಾಗಿ ಲತಾ ಶ್ಯೂರಿಟಿ ನೀಡಿದ್ದರು. https://ainlivenews.com/good-news-for-rakibhai-fans-next-movie-title-announced-on-december-8/ ಸಿನಿಮಾ ಲಾಸ್ ಆದ ಹಿನ್ನೆಲೆಯಲ್ಲಿ ನಷ್ಟ ತುಂಬಿ ಕೊಡುವಲ್ಲಿ ಲತಾ ವಿಫಲರಾಗಿದ್ದಾರೆ ಎಂದು ದೂರು ದಾಖಲಾಗಿತ್ತು. ಚಿತ್ರಕ್ಕೆ ನಷ್ಟವಾದ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ 2015ರ ಮೇ 30ರಂದು ಎಫ್.ಐ.ಆರ್ ದಾಖಲಾಗಿತ್ತು. ಈಗ ಕೋರ್ಟ್ ಖುದ್ದು ಹಾಜರಾಗಲು ಆದೇಶ ನೀಡಿದೆ. ಕೋರ್ಟಿಗೆ…
ನವದೆಹಲಿ: ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆ ಬುಧವಾರ ನಡೆಯಬೇಕಿದ್ದ INDIA ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ. ಪಂಚರಾಜ್ಯಗಳ ಚುನಾವಣೆ ಹಿನ್ನಲೆ ಒಕ್ಕೂಟದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದರು. ಮಿಚಾಂಗ್ ಚಂಡಮಾರುತದಿಂದ ಚೆನ್ನೈ ವಿಮಾನ ನಿಲ್ದಾಣವನ್ನು ಮುಚ್ಚಿದ್ದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ದೆಹಲಿಗೆ ಭೇಟಿ ನೀಡಲು ಮತ್ತು ಸಭೆಗೆ ಬರಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ನಿತೀಶ್ ಕುಮಾರ್ ಅವರು ಅಸ್ವಸ್ಥರಾಗಿದ್ದು, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಸಭೆಗೆ ಗೈರಾಗುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೂಡಾ ಸಭೆಯಲ್ಲಿ ಭಾಗಿಯಾಗಿರುವ ಖಚಿತ ಪಡಿಸಿದ್ದರು. ಆಮ್ ಆದ್ಮಿ ಪಕ್ಷವು ಸಭೆಯಲ್ಲಿ ಭಾಗಿಯಾಗುವ ಬಗ್ಗೆ ಯಾವುದೇ ದೃಢೀಕರಣ ನೀಡಿರಲಿಲ್ಲ. ಪ್ರಮುಖ ನಾಯಕರ ಅಲಭ್ಯತೆ ಹಿನ್ನಲೆ ಸಭೆಯನ್ನು ಮುಂದೂಡಲು ನಿರ್ಧರಿಸಿದ್ದು ಮುಂದಿನ ಎರಡು ವಾರಗಳಲ್ಲಿ…
ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ವೇಳೆ ಮೃತಪಟ್ಟ ಕರ್ನಾಟಕದ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ. ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದೆ. ಈ ಸಂಬಂಧ ಸಿಎಂ ಆಫ್ ಕರ್ನಾಟಕ ಎಕ್ಸ್ ಮಾಡಿದ್ದು, ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ ಎಂದು ತಿಳಿಸಲಾಗಿದೆ. ಯೋಧರ ಸಾವು-ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. https://twitter.com/CMofKarnataka/status/1731980390359810463 ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದು ಸಿಎಂ ತಿಳಿಸಿದ್ದಾರೆ. ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಬೆಂಗಳೂರಿಗೆ ಬಂದಾಗ ಅವರಿಗೆ ನಮನ…
ಸಕಲೇಶಪುರ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅರ್ಜುನ ಆನೆ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. 8 ಬಾರಿ ಅಂಬಾರಿಯನ್ನು ಹೊತ್ತಿದ್ದ ಅರ್ಜುನ ಆನೆ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅರ್ಜುನ ಆನೆ ಹೆಸರಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕು. ಆ ನಿಟ್ಟಿನಲ್ಲಿ ಸೂಕ್ತ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು, ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಜನರ ಮನವೊಲಿಕೆಗೆ ಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಪ್ರತಿಭಟನೆಯನ್ನು ತೀವ್ರಗೊಳಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಪೊಲೀಸರು ಲಾಠಿ ಬೀಸುತ್ತಿದ್ದಂತೆ ಪ್ರತಿಭಟನಾಕಾರರು, ಸಾರ್ವಜನಿಕರು ದಿಕ್ಕಾಪಾಲಾಗಿ ಓಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ದಬ್ಬಳ್ಳಿಕಟ್ಟೆಯಲ್ಲಿ ಅರ್ಜುನ ಮೃತಪಟ್ಟ ಸ್ಥಳದಲ್ಲಿಯೇ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದು 2 ಜೆಸಿಬಿಗಳ ಮೂಲಕ ಆಳವಾದ ಗುಂಡಿಗಳನ್ನು ತೆಗೆದು…