ಮಣ್ಣಿನ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಪ್ರತಿ ವರ್ಷ ಡಿಸೆಂಬರ್5 ರಂದು ‘ವಿಶ್ವ ಮಣ್ಣಿನ ದಿನ’ ಆಚರಿಸಲ್ಪಡುತ್ತದೆ. ಮಣ್ಣಿಗೂ ಬದುಕಿಗೂ ಅವಿನಾಭಾವ ಸಂಬಂಧ ಇದೆ. ಬದುಕು ಹಸನಾಗಿರಬೇಕಾದರೆ ನಾವು ಬದುಕುವ ಪರಿಸರದಲ್ಲಿ ಫಲವತ್ತತೆಯಿಂದ ಕೂಡಿದ ಮಣ್ಣು ಕೂಡಾ ಮುಖ್ಯ. ಆಹಾರ ಮತ್ತು ಕೃಷಿ ಸಂಘಟನೆ (ಎಫ್ಎಒ) ಪ್ರಕಾರ 2023 ವಿಶ್ವ ಮಣ್ಣಿನ ದಿನ- ಹಿನ್ನೆಲೆಯೇನು? ಮಣ್ಣಿನ ವಿಜ್ಞಾನಗಳ ಅಂತರರಾಷ್ಟ್ರೀಯ ಒಕ್ಕೂಟ (ಐಯುಎಸ್ಎಸ್) 2002ರಲ್ಲಿ ವಿಶ್ವ ಮಣ್ಣಿನ ದಿನ ಆಚರಣೆಗೆ ಶಿಫಾರಸು ಮಾಡಿತ್ತು. ಥಾಯ್ಲೆಂಡ್ ನೇತೃತ್ವದಲ್ಲಿ ಎಫ್ಎಒ ಸಹಾಯದೊಂದಿಗೆ ವಿಶ್ವ ಮಣ್ಣಿನ ದಿನ ಆಚರಣೆ ಆರಂಭವಾಯಿತು. 2013 ಜೂನ್ನಲ್ಲಿ ಎಫ್ಎಒ ಒಕ್ಕೂಟವು ಈ ದಿನಾಚರಣೆಗೆ ಬೆಂಬಲ ಸೂಚಿಸಿದ್ದಲ್ಲದೆ ವಿಶ್ವಸಂಸ್ಥೆಯ 68ನೇ ಸಭೆಯಲ್ಲಿ ಇದನ್ನು ಅಧಿಕೃತವಾಗಿ ಅಂಗೀಕರಿಸುವಂತೆ ಮನವಿ ಮಾಡಿತು. ಇದರ ಪರಿಣಾಮ 2013 ಡಿಸೆಂಬರ್ನಲ್ಲಿ ವಿಶ್ವಸಂಸ್ಥೆ ಡಿಸೆಂಬರ್ 5ರಂದು ವಿಶ್ವ ಮಣ್ಣಿನ ದಿನಾಚರಣೆಗೆ ಸಮ್ಮತಿ ಸೂಚಿಸಿತು. 2014ರಲ್ಲಿ ಮೊದಲ ಬಾರಿ ಡಿಸೆಂಬರ್5ರಂದು ದಿನಾಚರಣೆ ಅಧಿಕೃತವಾಗಿ ಆಚರಿಸಲಾಯಿತು. ನಾವು ಮಣ್ಣಿನ ಬಗ್ಗೆ ಯಾಕೆ ಕಾಳಜಿ ವಹಿಸಬೇಕು? ಜೀವಂತಿಕೆಯ ಮೂಲವೇ…
Author: AIN Author
ರೆಡ್ ಅಂಡ್ ವೈಟ್ ಸೆವೆನ್ ರಾಜ್ ನಿರ್ಮಾಣದ ಲೋಕೇಂದ್ರ ಸೂರ್ಯ ಮತ್ತು ಓಂ ಪ್ರಕಾಶ್ ಪುತ್ರಿ ಶ್ರಾವ್ಯರಾವ್ ಜೋಡಿಯಾಗಿ ನಟಿಸಿರುವ ವಿಭಿನ್ನ ಕಥಾವಸ್ತು ಹೊಂದಿರುವ ಅತಿ ಐ ಲವ್ ಯು. ಈ ಚಿತ್ರ ಇದೇ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವುದು ಇಂದಿನ ದಿನಗಳಲ್ಲಿ ತುಂಬಾ ಕಷ್ಟದ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಸಿನಿಮಾ ಪ್ರೇಕ್ಷಕರನ್ನು ಥಿಯೇಟರಿಗೆ ಕರೆತರಲು ಅತಿ ಚಿತ್ರತಂಡ ವಿಭಿನ್ನ ರೀತಿಯ ಯೋಜನೆ ರೂಪಿಸಿದೆ. ಟಿಕೆಟ್ ಜೊತೆ ಕೂಪನ್ ಒಂದನ್ನು ನೀಡುತ್ತಿದ್ದು, ಲಕ್ಕಿ ಡ್ರಾ ನಲ್ಲಿ ಆಯ್ಕೆಯಾದ ಏಳು ಜೋಡಿಗಳನ್ನು ವಿಮಾನದಲ್ಲಿ ಗೋವಾ ಪ್ರವಾಸಕ್ಕೆ ಕರೆದುಕೊಂಡು ಹೋಗಲಿದೆ. ಆ ಅದೃಷ್ಟ ಶಾಲಿ ದಂಪತಿಗಳು ಯಾರು ಅನ್ನೋದು ಲಕ್ಕಿ ಡ್ರಾ ನಲ್ಲಿ ಗೊತ್ತಾಗಲಿದೆ. ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಎರಡನೇ ಚಿತ್ರ ಅಥಿ ಐ ಲವ್ ಯು. ಒಂದೇ ದಿನದಲ್ಲಿ, ಒಂದು ಮನೆಯಲ್ಲಿ ನಡೆಯುವ ಕತೆ ಈ ಚಿತ್ರದಲ್ಲಿದೆ. ಗಂಡ-ಹೆಂಡತಿಯ ನಡುವಿನ ಆಪ್ತ ದೃಶ್ಯಗಳು…
ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಕಟ್ಟಿದ ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್ ಬಳಸಿ ಧ್ವಂಸ ಮಾಡುವುದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಖ್ಯಾತಿ ಪಡೆದಿದ್ದಾರೆ. ಅದೇ ರೀತಿ ಇದೀಗ ಅವರ ಬುಲ್ಡೋಜರ್ (Buldozer) ನ್ಯೂಯಾರ್ಕ್ ಸಿಟಿಯಲ್ಲೂ (New York City) ಸದ್ದು ಮಾಡಿದ್ದು, ಕಾನೂನು ಬಾಹಿರವಾಗಿ ನಿರ್ಮಿಸುತ್ತಿದ್ದ ಬಡಾವಣೆಯನ್ನು ನೆಲಸಮಗೊಳಿಸಿದೆ. ಇದು ಅಮೆರಿಕಾದ ನ್ಯೂಯಾರ್ಕ್ ನಗರ ಅಲ್ಲ. https://ainlivenews.com/not-only-nutmeg-greens-also-have-many-medicinal-properties/ ಉತ್ತರಪ್ರದೇಶದ ಹೊರವಲಯದಲ್ಲಿರುವ ಕಾಕೋರಿಯಾ ಮೌಡಾ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ನಿರ್ಮಿಸುತ್ತಿದ್ದ `ನ್ಯೂಯಾರ್ಕ್ ಸಿಟಿ’ ಅನ್ನು ಲಕ್ನೋ ಅಭಿವೃದ್ಧಿ ಪ್ರಾಧಿಕಾರ (LDA) ಧ್ವಂಸಗೊಳಿಸಿದೆ. ಈ ಕುರಿತು ಎಲ್‌ಡಿಎ ವಲಯ ಅಧಿಕಾರಿ ದೇವಾಂಶ್ ತ್ರಿವೇದಿ ಮಾತನಾಡಿ, ಪ್ರಾಧಿಕಾರದಿಂದ ಅನುಮೋದನೆ ಪಡೆಯದೇ ಟೌನ್‌ಶಿಪ್ ಅನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಎಲ್‌ಡಿಎ ಡೆವಲಪರ್‌ಗಳಿಗೆ ಈ ಹಿಂದೆ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದರೂ ಮತ್ತೆ ನಿರ್ಮಾಣವನ್ನು ಪ್ರಾರಂಭಿಸಿದ್ದಾರೆ ಎಂದರು.
ಹಾಸನ: ಪುಂಡಾನೆ ಸೆರೆ ಸ್ಥಳಾಂತರ ಹಾಗೂ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ ಒಂದಲ್ಲ, 8 ಬಾರಿ ಯಶಸ್ವಿಯಾಗಿ ಮೈಸೂರು ದಸರಾ ವೇಳೆ ಚಿನ್ನದ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದ ಕ್ಯಾಪ್ಟನ್ ಅರ್ಜುನ ಆನೆ ದುರಂತ ಸಾವಿಗೀಡಾಗಿದೆ. ಕಾರ್ಯಾಚರಣೆ ವೇಳೆ ಕಾಡಾನೆ ಮತ್ತು ಅರ್ಜುನನ ನಡುವೆ ನಡೆದ ಕಾಳಗದಲ್ಲಿ ಎರಬದಿಯ ಕಿಬ್ಬೊಟ್ಟೆ ಭಾಗಕ್ಕೆ ಬಲವಾಗಿ ಕೋರೆ ಇರಿತದ ಪೆಟ್ಟು ಬಿದ್ದು, 63 ವರ್ಷದ ಪಳಗಿದ ಆನೆ ಶಾಶ್ವತವಾಗಿ ನೆಲಕ್ಕುಳಿದಿದೆ. https://ainlivenews.com/not-only-nutmeg-greens-also-have-many-medicinal-properties/ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಫಾರೆಸ್ಟ್‌ನಲ್ಲಿ ಎಂದಿನಂತೆ ಕಾರ್ಯಾಚರಣೆ ಆರಂಭವಾಗಿತ್ತು. ಅರ್ಜುನ ಸೇರಿ ನಾಲ್ಕು ಪಳಗಿದ ಆನೆ ಭಾಗಿಯಾಗಿದ್ದವು. ಪುಂಡಾನೆಗೆ ಅರವಳಿಕೆ ಚುಚ್ಚು ಮದ್ದು ನೀಡುವಾಗ ಏಕಾಏಕಿ ಅರ್ಜುನನ ಮೇಲೆ ಅಟ್ಯಾಕ್ ಮಾಡಿದೆ. ಒಂಟಿ ಸಲಗ ದಾಳಿ ಮಾಡುತ್ತಿದ್ದಂತೆಯೇ ಉಳಿದ ಮೂರು ಪಳಗಿದ ಆನೆ ದಿಢೀರ್ ಹಿಮ್ಮೆಟ್ಟಿದವು. ಆದರೆ ಅರ್ಜುನ ಕಾಳಕ್ಕಿಳಿಯಿತು. ಈ ಸಂದರ್ಭದಲ್ಲಿ ಮರಣ ಹೊಂದಿತು. ಅರ್ಜುನ ಮೇಲೇರಿದ್ದ ಮಾವುತರು ಇಳಿದು ಜೀವ ಉಳಿಸಿಕೊಂಡಿದ್ದಾರೆ. ಮೈಸೂರು ದಸರೆಯಲ್ಲಿ 8…
ವಿಜಯಪುರ: ಇಲ್ಲಿನ ರಾಜಗುರು ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆ ಜೋಳ ಮೂಟೆ ತುಂಬುವ ಯಂತ್ರ ಕುಸಿದು, ಮೂವರು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ವಿಜಯಪುರದ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಇಂಡಸ್ಟ್ರೀಸ್‌ನ ಗೋದಾಮಿನಲ್ಲಿ ಈ ದುರಂತ ಸಂಭವಿಸಿದೆ. ರಾಜೇಶ್ ಮುಖಿಯಾ(25), ರಾಮ್ರೀಜ್ ಮುಖಿಯಾ(29), ಶಂಭು ಮುಖಿಯಾ(26) ಮೃತ ಕಾರ್ಮಿಕರು. ಅವಶೇಷಗಳ ಅಡಿಯಲ್ಲಿ ಇನ್ನೂ 6-7 ಮಂದಿ ಸಿಲುಕಿದ್ದು, ಮೃತಪಟ್ಟಿರುವ ಶಂಕೆಯೂ ವ್ಯಕ್ತವಾಗಿದೆ. ಎಸ್‌ಡಿಆರ್‌ಎಫ್ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ. ಮೃತ ಕಾರ್ಮಿಕರೆಲ್ಲರೂ ಬಿಹಾರ ಮೂಲದವರು ಎಂದು ಗುರುತಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಆ ಕಾರ್ಮಿಕರು ಇದೇ ಇಂಡಸ್ಟ್ರೀಜ್‍ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. https://ainlivenews.com/not-only-nutmeg-greens-also-have-many-medicinal-properties/ ಅವಶೇಷಗಳ ಅಡಿ ಸಿಲುಕಿರುವ ಕಾರ್ಮಿಕರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ರಾತ್ರಿಯಿಂದಲೂ 4 ಜೆಸಿಬಿಗಳ ಮೂಲಕ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಸ್ಥಳದಲ್ಲಿ ಕಾರ್ಮಿಕರು, ಅವರ ಸಂಬಂಧಿಕರು ಗುಂಪುಗೂಡಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಸ್ಥಳದಲ್ಲೇ ಬೀಡುಬಿಟ್ಟು…
ಕಲಬುರಗಿ:- ಮಾಜಿ ಸಿಎಂ ಬಿಎಸ್ವೈ ಬೀಗರ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ಡಾ ಪ್ರಭುಲಿಂಗ ಮಾನ್ಕರ್ ನಿವಾಸದ ಮೇಲೆ ಲೋಕಾ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ನಿಯ ಸಹೋದರರಾಗಿರುವ ಡಾ.ಪ್ರಭುಲಿಂಗ ಮಾನ್ಕರ್ ಪ್ರಸ್ತುತ ಯಾದಗಿರಿ DHO ಆಗಿದ್ದಾರೆ. ಕಲಬುರಗಿ ಯಾದಗಿರಿ ಅಲ್ಲದೇ ಗಬ್ಬೂರಿನಲ್ಲಿರುವ ಫಾರ್ಮ್ ಹೌಸ್ ಮೇಲೂ ದಾಳಿಯಾಗಿದ್ದು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ದಾಖಲೆಗಳನ್ನ ಕಲೆ ಹಾಕುತ್ತಿರುವ ತಂಡ ಆಸ್ತಿಪಾಸ್ತಿ ಸೇರಿ ಎಲ್ಲದರ ಲೆಕ್ಕಾಚಾರ ನಡೆಸಿದ್ದು ಸಂಜೆ ವೇಳೆಗೆ ಸಂಪೂರ್ಣ ಮಾಹಿತಿ ಸಿಗಲಿದೆ ಅಂತ ಹೇಳಲಾಗ್ತಿದೆ.
ತುಮಕೂರು:-ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ನಡೆ ಮಾವಿನಪುರ ಗ್ರಾಮದಲ್ಲಿ ಜರುಗಿದೆ. ಮಹಮದ್ ಪೀರ್ 45 ಮೃತ ದುರ್ದೈವಿ ಎನ್ನಲಾಗಿದೆ. ಮತ್ತೋರ್ವ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಬಳ್ಳಾರಿ:- ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಏಕಕಾಲಕ್ಕೆ ಲೋಕಯುಕ್ತ ದಾಳಿಯಾಗಿದೆ. ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಂದ್ರಶೇಖರ ಬಳ್ಳಾರಿಯಲ್ಲಿ ಕೆಲಸ ಮಾಡ್ತಿದ್ರು.. ಮನೆ ಮಾತ್ರ ಹೊಸಪೇಟೆಯಲ್ಲಿದೆ. ಇನ್ನು ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಗಂಗಾವತಿಯಲ್ಲಿ ಕೆಲಸ ಮಾಡ್ತಿದ್ರು ಮನೆ ಕಂಪ್ಲಿಯಲ್ಲಿದೆ. ಹೀಗಾಗಿ ಚಂದ್ರಶೇಖರ ಅವರ ಹೊಸಪೇಟೆ ಮನೆ ಮತ್ತು ಮಾರುತಿ ಅವರ ಕಂಪ್ಲಿ ಮತ್ತು ಗಂಗಾವತಿ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ. ಬೀದರ್ನಲ್ಲೂ ಸಹ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬೀದರ್ ನ ಪಶು ವೈಧ್ಯಕೀಯ ವಿಶ್ವವಿದ್ಯಾಲಯದ ನೌಕರರ ಸುನೀಲ್ ಕುಮಾರ್ ಮನೆ ಹಾಗೂ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಬಳ್ಳಾರಿ: ಸ್ಥಳೀಯ ಶಾಸಕರೇ, ಶಿಕ್ಷಣ ಸಚಿವರೇ ನೀವು ಈ ಸ್ಟೋರಿ ನೋಡಲೇಬೇಕು. ಹೌದು, ಬಾಲಕಿಯ ವಸತಿ ಶಾಲೆಯ ಸ್ಥಿತಿಯ ಅದೋಗತಿಗೆ ತಲುಪಿದ್ದು, ಹಳೆಯ ಚಲನಚಿತ್ರದ ಕಟ್ಟಡದಲ್ಲಿ ಮಕ್ಕಳು ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. ಸುಮಾರು 13 ವರ್ಷಗಳಿಂದ ಸ್ವಂತ ಕಟ್ಟಡ ಇಲ್ಲದೇ ಇರುವ ಈ ವಸತಿ ಶಾಲೆಯ 225 ವಿಧ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಲಾಗುತ್ತಿದೆ. 6ನೇ ತರಗತಿಯಿಂದ 10 ನೇ ತರಗತಿಯವರಗೆ ಎಲ್ಲಾ ವಿಧ್ಯಾರ್ಥಿಗಳಿಗೆ ಒಂದೇ ಕಡೆ ಭೋದನೆ ಮಾಡಲಾಗುತ್ತಿದೆ. ಭೋದನೆಯ ಸಮಯದಲ್ಲಿ ಒಂದು ತರಗತಿಯಿಂದ ಮತ್ತೊಂದು ತರಗತಿಗೆ ಪ್ರತಿಧ್ವನಿ ಕೇಳಿಸುತ್ತಿದೆ. ಕಟ್ಟದ ಸುತ್ತಲಿನ ಮನೆಗಳಿಂದ ಟಿವಿ ಸೌಂಡ್, ಮೊಬೈಲ್ ಸಾಂಗ್ಸ್ ಕೇಳಿಸುತ್ತಿದೆ. ಆಟವಾಡಲು ಗ್ರೌಂಡ್ ವ್ಯವಸ್ಥೆಯೇ ಇಲ್ಲ, ಮಳೆ ಬಂದರೇ ಮಕ್ಕಳಿಗೆ ಮಲಗಲು ಸ್ಥಳವಿಲ್ಲ, ಚಿತ್ರಮಂದಿರದ ಛಾವಣಿ ಸಂಪೂರ್ಣ ಸೋರಿಕೆ ಆಗಿದೆ. 225 ವಿಧ್ಯಾರ್ಥಿಗಳಿಗೆ ಕೇವಲ ಎರಡು ನಲ್ಲಿ(ಕೊಳಾಯಿ), ಸರಿಯಾದ ಶೌಚಾಲಯ, ಸ್ನಾನಗೃಹ ವ್ಯವಸ್ಥೆ ಇಲ್ಲ, ಸಾಕಷ್ಟು ಭಾರಿ ಮೇಲಾಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನವಿಲ್ಲ, ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿಗಳ ಗಮನಕ್ಕೆ…
ಬಳ್ಳಾರಿ:- ಸಾಗುವಳಿ ಮಾಡುತ್ತಿರುವ ರೈತರಿಗೆ ಭೂಮಿಯನ್ನು ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಸಹಯೋಗದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲಾಗಿದೆ. ಭಜನೆ ಮಾಡುವ ಮೂಲಕ ಸಾಗುವಳಿದಾರರು ವಿಶಿಷ್ಟವಾಗಿ ಪ್ರತಿಭಟಿಸುತ್ತಿದ್ದಾರೆ. ಉಳಿಮೆ ಮಾಡುತ್ತಿರುವ ರೈತರ ಹೆಸರಿಗೆ ಭೂಮಿಯನ್ನು ಪಟ್ಟಮಾಡಲು ಆಗ್ರಹಿಸಿ ಪ್ರತಿಭಟನೆ ಮಾಡಲಾಗಿದೆ. ಕುರುಗೋಡಿನ ತಹಾಶೀಲ್ದರ್ ಅವರ ಕಛೇರಿ ಮುಂದೆ ಸುಮಾರು 13 ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಭಜನೆ ಮಾಡುವ ಮೂಲಕ ಸಾಗುವಳಿ ಮಾಡುತ್ತಿರುವ ರೈತರು, ಪ್ರತಿಭಟನೆ ಮಾಡುತ್ತಿದ್ದಾರೆ. ಸುಮಾರು 50-60 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರು, ಕುರುಗೋಡಿನ ಮಲ್ಲಪ್ಪನ ಕೆರೆಯಲ್ಲಿ ನಿರಂತರವಾಗಿ ಕೃಷಿ ಚಟುವಟಿಕೆಗಳು ನಡೆಯುತ್ತಿವೆ. ಹೆಸರಿಗೆ ಮಾತ್ರ ಕೆರೆ, ಅಲ್ಲಿ ಕೆರೆಯೇ ಇಲ್ಲ, ಫಲವತ್ತಾದ ಭೂಮಿಯಾಗಿದ್ದು, ಕೃಷಿ ಚಟುವಟಿಕೆಗಳಿಗೆ ಯೋಗ್ಯವಾಗಿರುವ ಮಣ್ಣನ್ನು ಹೊಂದಿದೆ. ಈ ಭೂಮಿ ನೂರಾರು ಕುಟುಂಬಗಳಿಗೆ ಕೃಷಿ ಚಟುವಟಿಕೆಗಳಿಗೆ ಆಧಾರವಾಗಿದೆ. ಹಲವು ವರ್ಷಗಳಿಂದ ವ್ಯವಸಾಯ ಮಾಡುತ್ತಿರುವ ಬಾದನಹಟ್ಟಿ ಗ್ರಾಮದ ಕುಟುಂಬಗಳು, ಉಳಿಮೆ ಮಾಡುತ್ತಿರುವ ಬಹುತೇಕರು ಎಸ್ಸಿಗಳೆ ಇದ್ದರೆ, ಪ್ರಸ್ತುತ ಉಳಿಮೆ ಮಾಡುತ್ತಿರುವ ಇವರಿಗೆ, ಈ ಜಮೀನು ಬಿಟ್ಟರೇ…