Author: AIN Author

ಬಳ್ಳಾರಿ:- ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಏಕಕಾಲಕ್ಕೆ ಲೋಕಯುಕ್ತ ದಾಳಿಯಾಗಿದೆ. ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಂದ್ರಶೇಖರ ಬಳ್ಳಾರಿಯಲ್ಲಿ ಕೆಲಸ ಮಾಡ್ತಿದ್ರು.. ಮನೆ ಮಾತ್ರ ಹೊಸಪೇಟೆಯಲ್ಲಿದೆ. ಇನ್ನು ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಗಂಗಾವತಿಯಲ್ಲಿ‌ ಕೆಲಸ ಮಾಡ್ತಿದ್ರು ಮನೆ ಕಂಪ್ಲಿಯಲ್ಲಿದೆ. ಹೀಗಾಗಿ ಚಂದ್ರಶೇಖರ ಅವರ ಹೊಸಪೇಟೆ ಮನೆ ಮತ್ತು ಮಾರುತಿ ಅವರ ಕಂಪ್ಲಿ ಮತ್ತು ಗಂಗಾವತಿ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ. ಬೀದರ್​​ನಲ್ಲೂ ಸಹ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬೀದರ್ ನ ಪಶು ವೈಧ್ಯಕೀಯ ವಿಶ್ವವಿದ್ಯಾಲಯದ ನೌಕರರ ಸುನೀಲ್ ಕುಮಾರ್ ಮನೆ ಹಾಗೂ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Read More

ಬಳ್ಳಾರಿ: ಸ್ಥಳೀಯ ಶಾಸಕರೇ, ಶಿಕ್ಷಣ ಸಚಿವರೇ ನೀವು ಈ ಸ್ಟೋರಿ ನೋಡಲೇಬೇಕು. ಹೌದು, ಬಾಲಕಿಯ ವಸತಿ ಶಾಲೆಯ ಸ್ಥಿತಿಯ ಅದೋಗತಿಗೆ ತಲುಪಿದ್ದು, ಹಳೆಯ ಚಲನಚಿತ್ರದ ಕಟ್ಟಡದಲ್ಲಿ ಮಕ್ಕಳು ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. ಸುಮಾರು 13 ವರ್ಷಗಳಿಂದ ಸ್ವಂತ ಕಟ್ಟಡ ಇಲ್ಲದೇ ಇರುವ ಈ ವಸತಿ ಶಾಲೆಯ 225 ವಿಧ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಲಾಗುತ್ತಿದೆ. 6ನೇ ತರಗತಿಯಿಂದ 10 ನೇ ತರಗತಿಯವರಗೆ ಎಲ್ಲಾ ವಿಧ್ಯಾರ್ಥಿಗಳಿಗೆ ಒಂದೇ ಕಡೆ ಭೋದನೆ ಮಾಡಲಾಗುತ್ತಿದೆ. ಭೋದನೆಯ ಸಮಯದಲ್ಲಿ ಒಂದು ತರಗತಿಯಿಂದ ಮತ್ತೊಂದು ತರಗತಿಗೆ ಪ್ರತಿಧ್ವನಿ ಕೇಳಿಸುತ್ತಿದೆ. ಕಟ್ಟದ ಸುತ್ತಲಿನ ಮನೆಗಳಿಂದ ಟಿವಿ ಸೌಂಡ್, ಮೊಬೈಲ್ ಸಾಂಗ್ಸ್ ಕೇಳಿಸುತ್ತಿದೆ. ಆಟವಾಡಲು ಗ್ರೌಂಡ್ ವ್ಯವಸ್ಥೆಯೇ ಇಲ್ಲ, ಮಳೆ ಬಂದರೇ ಮಕ್ಕಳಿಗೆ ಮಲಗಲು ಸ್ಥಳವಿಲ್ಲ, ಚಿತ್ರಮಂದಿರದ ಛಾವಣಿ ಸಂಪೂರ್ಣ ಸೋರಿಕೆ ಆಗಿದೆ. 225 ವಿಧ್ಯಾರ್ಥಿಗಳಿಗೆ ಕೇವಲ ಎರಡು ನಲ್ಲಿ(ಕೊಳಾಯಿ), ಸರಿಯಾದ ಶೌಚಾಲಯ, ಸ್ನಾನಗೃಹ ವ್ಯವಸ್ಥೆ ಇಲ್ಲ, ಸಾಕಷ್ಟು ಭಾರಿ ಮೇಲಾಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನವಿಲ್ಲ, ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿಗಳ ಗಮನಕ್ಕೆ…

Read More

ಬಳ್ಳಾರಿ:- ಸಾಗುವಳಿ ಮಾಡುತ್ತಿರುವ ರೈತರಿಗೆ ಭೂಮಿಯನ್ನು ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಸಹಯೋಗದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲಾಗಿದೆ. ಭಜನೆ ಮಾಡುವ ಮೂಲಕ ಸಾಗುವಳಿದಾರರು ವಿಶಿಷ್ಟವಾಗಿ ಪ್ರತಿಭಟಿಸುತ್ತಿದ್ದಾರೆ. ಉಳಿಮೆ ಮಾಡುತ್ತಿರುವ ರೈತರ ಹೆಸರಿಗೆ ಭೂಮಿಯನ್ನು ಪಟ್ಟಮಾಡಲು ಆಗ್ರಹಿಸಿ ಪ್ರತಿಭಟನೆ ಮಾಡಲಾಗಿದೆ. ಕುರುಗೋಡಿನ ತಹಾಶೀಲ್ದರ್ ಅವರ ಕಛೇರಿ ಮುಂದೆ ಸುಮಾರು 13 ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಭಜನೆ ಮಾಡುವ ಮೂಲಕ ಸಾಗುವಳಿ ಮಾಡುತ್ತಿರುವ ರೈತರು, ಪ್ರತಿಭಟನೆ ಮಾಡುತ್ತಿದ್ದಾರೆ. ಸುಮಾರು 50-60 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರು, ಕುರುಗೋಡಿನ ಮಲ್ಲಪ್ಪನ ಕೆರೆಯಲ್ಲಿ ನಿರಂತರವಾಗಿ ಕೃಷಿ ಚಟುವಟಿಕೆಗಳು ನಡೆಯುತ್ತಿವೆ. ಹೆಸರಿಗೆ ಮಾತ್ರ ಕೆರೆ, ಅಲ್ಲಿ ಕೆರೆಯೇ ಇಲ್ಲ, ಫಲವತ್ತಾದ ಭೂಮಿಯಾಗಿದ್ದು, ಕೃಷಿ ಚಟುವಟಿಕೆಗಳಿಗೆ ಯೋಗ್ಯವಾಗಿರುವ ಮಣ್ಣನ್ನು ಹೊಂದಿದೆ. ಈ ಭೂಮಿ ನೂರಾರು ಕುಟುಂಬಗಳಿಗೆ ಕೃಷಿ ಚಟುವಟಿಕೆಗಳಿಗೆ ಆಧಾರವಾಗಿದೆ. ಹಲವು ವರ್ಷಗಳಿಂದ ವ್ಯವಸಾಯ ಮಾಡುತ್ತಿರುವ ಬಾದನಹಟ್ಟಿ ಗ್ರಾಮದ ಕುಟುಂಬಗಳು, ಉಳಿಮೆ ಮಾಡುತ್ತಿರುವ ಬಹುತೇಕರು ಎಸ್ಸಿಗಳೆ ಇದ್ದರೆ, ಪ್ರಸ್ತುತ ಉಳಿಮೆ ಮಾಡುತ್ತಿರುವ ಇವರಿಗೆ, ಈ ಜಮೀನು ಬಿಟ್ಟರೇ…

Read More

ಬೆಂಗಳೂರು:- ಮಿಚುವಾಂಗ್ ಚಂಡಮಾರುತದ ಎಫೆಕ್ಟ್ ಚೆನ್ನೈ ಮೇಲೆ ಜೋರಾಗಿ ಕಂಡು ಬಂದಿದೆ. ಇಡೀ ಚೆನ್ನೈ ಜಲಾವೃತವಾಗಿದೆ. ಇನ್ನು ಮಿಚುವಾಂಗ್ ಎಫೆಕ್ಟ್, ರಾಜ್ಯ ರಾಜಧಾನಿಯಲ್ಲೂ ಕಂಡು ಬಂದಿದೆ. ಚಂಡ ಮಾರುತದ ಪರಿಣಾಮವಾಗಿ ಮೋಡ ಕವಿದ ವಾತಾವರಣವಿದೆ. ಅಲ್ಲದೆ ಚಳಿ ಕೂಡಾ ಹೆಚ್ಚಾಗಿದೆ. ಚುಮು ಚುಮು ಚಳಿಗೆ ಬೆಂಗಳೂರಿನ ಜನ ನಡುಗುವಂತಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜಧಾನಿ ಬೆಂಗಳೂರು ಸೇರಿ ಸುತ್ತಲಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಗರಿಷ್ಠ ಉಷ್ಣಾಂಶ 24 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Read More

ಬೆಂಗಳೂರು:- ಬಂಗಾಳಕೊಲ್ಲಿಯಲ್ಲಿ ಮೈಚಾಂಗ್ ಚಂಡಮಾರುತ ಅಬ್ಬರ ಹಿನ್ನೆಲೆ ತಮಿಳುನಾಡು ರಸ್ತೆಗಳು ಸಂಪೂರ್ಣ ಜಲಾವೃತವಾಗಿದೆ. ಇಂದು ಕೂಡ ತಮಿಳುನಾಡಿಗೆ ತೆರಳಬೇಕಿದ್ದ ರೈಲು ಸೇವೆ ರದ್ದು ಮಾಡಲಾಗಿದೆ. ರಾಜ್ಯದಿಂದ ತೆಳರಬೇಕಿದ್ದ 9 ರೈಲು ಸೇವೆ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಯಾವ ಯಾವ ರೈಲು ಸೇವೆ ರದ್ದಾಗಿದೆ : 1. ರೈಲಿನ ಸಂಖ್ಯೆ: 20607 -ಡಾ. ಎಂಜಿಆರ್ ಚೈನೈ ಸೆಂಟ್ರಲ್ – ಮೈಸೂರು 2. ರೈಲಿನ‌ ಸಂಖ್ಯೆ: 20608 – ಮೈಸೂರು – Dr. MGR ರೈಲ್ವೇ ನಿಲ್ದಾಣ (ಸೆಂಟ್ರಲ್) 3. ರೈಲಿನ‌ ಸಂಖ್ಯೆ :12007 -Dr. MGR ಚೆನೈ ಸೆಂಟ್ರಲ್- ಮೈಸೂರು 4. ರೈಲಿನ ಸಂಖ್ಯೆ : 12008 – ಮೈಸೂರು- Dr. MGR ಚೆನೈ ಸೆಂಟ್ರಲ್ 5. ರೈಲಿನ ಸಂಖ್ಯೆ: 22625 – . MGR ಚೆನೈ ಸೆಂಟ್ರಲ್ – KSR ಬೆಂಗಳೂರು 6. ರೈಲಿನ ಸಂಖ್ಯೆ : 22626 -KSR…

Read More

ನವದೆಹಲಿ: ಜನವರಿ 22 ರಂದು ಆಯೋಧ್ಯೆ ರಾಮಮಂದಿರ (Ram Mandir) ಲೋಕಾರ್ಪಣೆ, ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನಲೆ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡಲಾಗುತ್ತಿದ್ದು ಇದರ ಬೆನ್ನಲ್ಲೇ ಸಾಮಾನ್ಯ ಜನರಿಗೂ ಆಹ್ವಾನ ಪತ್ರಿಕೆಯನ್ನು (Invitations) ಟ್ರಸ್ಟ್‌ ವತಿಯಿಂದ ಕಳುಹಿಸಿಕೊಡಲು ಆರಂಭಿಸಿದೆ. ಆಹ್ವಾನ ಪತ್ರಿಕೆಯಲ್ಲಿ ಏನಿದೆ? ಆಹ್ವಾನಪತ್ರಿಕೆಯ ಫೋಟೊ ಈಗ ಲಭ್ಯವಾಗಿದ್ದು ಇದರಲ್ಲಿ ಸುದೀರ್ಘ ಹೋರಾಟದ ನಂತರ ಶ್ರೀರಾಮನ ಜನ್ಮಸ್ಥಳದಲ್ಲಿ ಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂಬುದು ನಿಮಗೆ ತಿಳಿದಿದೆ. 22 ಜನವರಿ 2024, ರಾಮಲಲ್ಲನ ಹೊಸ ವಿಗ್ರಹವನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು. ಮಹತ್ವದ ಘಟ್ಟಕ್ಕೆ ಸಾಕ್ಷಿಯಾಗಲು ಮತ್ತು ಮಹಾನ್ ಐತಿಹಾಸಿಕ ದಿನದ ಘನತೆಯನ್ನು ಹೆಚ್ಚಿಸಲು ನೀವು ಈ ಶುಭ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ (Ayodhya) ಉಪಸ್ಥಿತರಾಗಿರಬೇಕು ಎಂಬುದು ನಮ್ಮ ಬಲವಾದ ಬಯಕೆಯಾಗಿದೆ. ಇದಕ್ಕಾಗಿ ಜನವರಿ 21ರ ಮೊದಲು ಅಯೋಧ್ಯೆಗೆ ಭೇಟಿ ನೀಡಲು ನಿಮ್ಮನ್ನು ವಿನಂತಿಸುತ್ತಿದ್ದೇವೆ. ನೀವು ಅಯೋಧ್ಯೆಗೆ ಎಷ್ಟು ಬೇಗ ಬರುತ್ತೀರೋ ಅಷ್ಟು ಅನುಕೂಲವಾಗುತ್ತದೆ. ನೀವು ತಡವಾಗಿ ಬಂದರೆ ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹೀಗಾಗಿ…

Read More

ದೊಡ್ಡಬಳ್ಳಾಪುರ:- ತಮಿಳುನಾಡಿನಲ್ಲಿ ಚಂಡ ಮಾರುತ ಎಫೆಕ್ಟ್ ಹಿನ್ನೆಲೆಯಲ್ಲಿ ತೆಂಗಿನ ಮರ ಧರೆಗುರುಳಿದೆ. ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬೈರಾಪುರ ತಾಂಡಾದಲ್ಲಿ ಘಟನೆ ನಡೆದಿದೆ. ಮರ ಬಿದ್ದ ಕಾರಣ ನೆಲಕ್ಕೆ ಮನೆಯ ಗೋಡೆಗೆ ಹಾನಿಯಾಗಿದೆ. ನಾಲ್ಕು ವಿದ್ಯುತ್ ಕಂಬಗಳು ಕೂಡಾ ನೆಲಕ್ಕುರುಳಿವೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಸಮಸ್ಯೆಯಾಗಿಲ್ಲ. ಬೈಕ್ ನಲ್ಲಿ ತೆರಳುತ್ತಿದ್ದ ಯುವಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಬೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿ ಪವರ್ ಕಟ್ ಮಾಡಿಸಿದ್ದಾರೆ.

Read More

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ ಮಾಡಿದ್ದಾರೆ. 13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲಿ 3 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ ಬೆಂಗಳೂರಿನಲ್ಲಿ 3 ಕಡೆಯಾದರೆ, ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿಯೂ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಸಂಬಂಧ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಬೆಂಗಳೂರಿನಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಸ್ಕಾಂ ಜಾಗೃತ ದಳ ಅಧಿಕಾರಿ T.N.ಸುಧಾಕರ್ ರೆಡ್ಡಿ ಮನೆ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್​​​.ಎಸ್​​.ಕೃಷ್ಣಮೂರ್ತಿ ಮನೆ ಹಾಗೂ ಕುಂಬಳಗೂಡು-ಕಣಿಮಿಣಿಕೆ ಬಳಿಯ ಹಾಲು ಉತ್ಪಾದಕರ ಸಹಕಾರ…

Read More

ಬೆಂಗಳೂರು:- ಪೊಲೀಸರ ಸೋಗಿನಲ್ಲಿ ಉದ್ಯಮಿ ಮನೆಗೆ ನುಗ್ಗಿ ದರೋಡೆ ಮಾಡಿರುವ ಘಟನೆ ರಾಜಧಾನಿ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯ ಹೆಚ್​ಎಂಟಿ ಲೇಔಟ್​ನಲ್ಲಿ ನಡೆದಿದೆ. ಎಸ್ ಎನ್ ಆರ್ ಪಾಲಿಫಿಲಮ್ಸ್ ಪ್ಯಾಕೇಜಿಂಗ್ ಕಂಪನಿ ಮಾಲೀಕ ಮನೋಹರ್ ಎಂಬುವವರ ಮನೆಯಲ್ಲಿ ದರೋಡೆ ನಡೆದಿದೆ. ಘಟನೆ ವೇಳೆ ಉದ್ಯಮಿ ಪುತ್ರ ರೂಪೇಶ್​ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ 7.30ರ ಸುಮಾರಿಗೆ, ಮನೆಯಲ್ಲಿ ಉದ್ಯಮಿ ಮನೋಹರ್ ಅವರು ಇಲ್ಲದ ಸಮಯದಲ್ಲಿ 5 ರಿಂದ 6 ಮಂದಿ ದುಷ್ಕರ್ಮಿಗಳು ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿದ್ದಾರೆ. ಈ ವೇಳೆ ಮನೆಯಲ್ಲಿ ಕೇವಲ ಮನೋಹರ್ ಪತ್ನಿ ಸುಜಾತ ಹಾಗೂ ಮಗ ರೂಪೇಶ್ ಮಾತ್ರ ಇದ್ದರು. ಉದ್ಯಮಿ ಮನೋಹರ್ ರವರ ಅಣ್ಣ ತಮ್ಮಂದಿರ ನಡುವೆ ಹಲವು ವಿಚಾರಗಳಲ್ಲಿ ಕಲಹವಿದೆ. ಹೀಗಾಗಿ ಅದೇ ವಿಚಾರಕ್ಕೆ ಪೊಲೀಸರು ಬಂದಿರುವುದಾಗಿ ರೂಪೇಶ್ ಅಂದುಕೊಂಡಿದ್ದಾರೆ. ಆದರೆ ಮನೆಯೊಳಗೆ ಬರುತ್ತಿದ್ದಂತೆ ಪೊಲೀಸರ ವೇಶದಲ್ಲಿ ಬಂದಿದ್ದ ಖದೀಮರು ಏಕಾಏಕಿ…

Read More

ಬೆಂಗಳೂರು:- ಡಿ.23ರಂದು ನಿಗದಿಯಾಗಿದ್ದ ಪಿಎಸ್​ಐ ನೇಮಕಾತಿ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತಾಗಿ ಮಾತನಾಡಿದ ಗೃಹ ಸಚಿವ ಡಾ. ಪರಮೇಶ್ವರ್, PSI ಪರೀಕ್ಷೆ ಸಮಯಾವಕಾಶ ಬೇಕು ಎಂದು ಪರೀಕ್ಷಾರ್ಥಿಗಳು ಮನವಿ ಮಾಡಿದ್ದರು. ಹಾಗಾಗಿ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಲಾಗಿದೆ. ಸದನದಲ್ಲಿ ಯತ್ನಾಳ್ ಈ ವಿಚಾರವನ್ನ ಪ್ರಸ್ತಾಪ ಮಾಡಿದ್ದಾರೆ. ಅನೇಕ ಶಾಸಕರುಗಳು ಪಕ್ಷಾತೀತವಾಗಿ ಬೇಡಿಕೆಯನ್ನ ಇಟ್ಟಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಸಭೆ ನಡೆಸಿ ಒಂದು ತಿಂಗಳ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗಿದೆ. ದಿನಾಂಕವನ್ನ ಶೀಘ್ರದಲ್ಲೇ ಪ್ರಕಟಿಸಲಾಗುವುದು. KEA ಕ್ಯಾಲೆಂಡರ್ ನೋಡಿಕೊಂಡು ದಿನಾಂಕ ಪ್ರಕಟ ಮಾಡುತ್ತೇವೆ. 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ತಯಾರಿ ಮಾಡಿಕೊಂಡು ಬರೆಯಿರಿ ಎಂದು ಹೇಳಿದ್ದಾರೆ.

Read More