ಬೆಳಗಾವಿ:- ಬಿಜೆಪಿ ಎಸ್‌ಸಿ ಮೋರ್ಚಾ ಸದಸ್ಯ ಪೃಥ್ವಿ ಸಿಂಗ್ ಎನ್ನುವವರ ಮೇಲಿನ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದರು.ದುರುದ್ದೇಶಪೂರ್ವಕವಾಗಿ ಆತ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾನೆ. ಒಂದು ದಾಖಲೆ ಸಲುವಾಗಿ ಅವರ ಮನೆಗೆ ನಮ್ಮ ಕಡೆಯವರು ಹೋಗಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಮ್ಮ ಕಡೆಯವರು ಆತನೊಂದಿಗೆ ಮಾತನಾಡುವಾಗ ಆತ ಕೇಸರಿ ಬಣ್ಣದ ಟೀ ಶರ್ಟ್ ಹಾಕಿದ್ದು ಸೆರೆಯಾಗಿದೆ. ಆದರೆ ರಕ್ತ ಅಂಟಿಕೊಂಡಿದ್ದ ಬಿಳಿ ಬಣ್ಣದ ಅಂಗಿಯನ್ನು ಧರಿಸಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ಈತ ದುರುದ್ದೇಶಪೂರ್ವವಾಗಿ ಆರೋಪ ಮಾಡುತ್ತಿರುವುದು ಸ್ಪಷ್ಟವಾಗಿದೆ. ಪೊಲೀಸರು ತನಿಖೆ ನಡೆಸಿ ಈ ಕೃತ್ಯದ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲಿ ಎಂದು ಆಗ್ರಹಿಸಿದ್ದಾರೆ.
Author: AIN Author
ಕಲಬುರಗಿ:- ಪ್ರಯಾಣಿಕರ ಅನುಕೂಲ ನಿಟ್ಟಿನಲ್ಲಿ ಸೊಲ್ಲಾಪುರ-ಮುಂಬೈ ಹಾಗು ಮುಂಬೈ ಸೊಲ್ಲಾಪುರ ವಂದೇ ಭಾರತ್ ರೈಲನ್ನು ಕಲಬುರಗಿವರೆಗೆ ವಿಸ್ತರಣೆ ಮಾಡಿ ಅಂತ ಸಂಸದ ಡಾ.ಉಮೇಶ್ ಜಾಧವ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಲೋಕಸಭೆಯಲ್ಲಿಂದು ವಿಷಯ ಪ್ರಸ್ತಾಪಿಸಿದ ಜಾಧವ್ ಕಲಬುರಗಿ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಹೀಗಾಗಿ ನೂರಾರು ಪ್ರಯಾಣಿಕರು ದಿನನಿತ್ಯವೂ ಹತ್ತು ಹಲವು ಕೆಲಸಗಳಿಗಾಗಿ ಮುಂಬೈಗೆ ಹೋಗ್ತಾರೆ.ಅದಕ್ಕಾಗಿ ವಂದೇ ಭಾರತ್ ರೈಲಿನ ಅವಶ್ಯಕತೆಯಿದೆ ಅಂದ್ರು. ಇದೇವೇಳೆ ಬೆಂಗಳೂರಿಗೆ ಹೋಗಲು ಕಲಬುರಗಿಯಿಂದಲೇ ಒಂದು ಹೊಸ ರೈಲು ಆರಂಭಿಸುವಂತೆ ಸಹ ಮನವಿ ಮಾಡಿದ್ರು..
ಬೆಂಗಳೂರು:- ಶಾಲೆ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ ವಿತರಣೆ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು, ಜನವರಿಯಿಂದ ಶಾಲೆ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ ವಿತರಣೆಯಾಗಲಿದೆ ಎಂದರು. ಇದೇ ಮೊದಲ ಬಾರಿಗೆ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್ ಗಳನ್ನ ವಿತರಿಸಲು ನಿರ್ಧರಿಸಲಾಗಿದೆ ಎಂದರು. ಶುಚಿ ಒಂದು ಮಹತ್ವವಾದ ಯೋಜನೆ. ಹೆಣ್ಣುಮಕ್ಕಳಿಗೆ ಇದು ಅತ್ಯಗತ್ಯವಾಗಿದೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಬೇರೆ ಬೇರೆ ಕಾರಣಗಳಿಗೆ ಯೋಜನೆ ಸ್ಥಗಿತವಾಗಿತ್ತು. ನಮ್ಮ ಸರ್ಕಾರ ಬಂದ ಬಳಿಕ ಶುಚಿ ಯೋಜನೆಗೆ ಮರುಚಾಲನೆ ನೀಡುತ್ತಿದ್ದೇವೆ. ಈಗಾಗಲೇ ನಾಲ್ಕು ವಿಭಾಗವಾರು ಟೆಂಡರ್ ಆಹ್ವಾನಿ ಬಹುತೇಕ ಪ್ರಕ್ರಿಯೇ ಪೂರ್ಣಗೊಳಿಸಲಾಗಿದೆ. 10 ವರ್ಷದಿಂದ 18 ವರಗಷದ ಒಳಗಿನ ಸುಮಾರು 19 ಲಕ್ಷ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲು ಯೋಜಿಸಲಾಗಿದೆ. ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳಿಗು ನ್ಯಾಪ್ಕಿನ್ ಗಳನ್ನ ವಿತರಿಸಲಾಗುವುದು. ಈ ಮೊದಲು ಸರ್ಕಾರಿ ಆಸ್ಪತ್ರೆಯ ಮೂಲಕ ನ್ಯಾಪ್ಕಿನ್…
ಬೆಳಗಾವಿ/ ಬೆಂಗಳೂರು:- ಆನೆ ಹಾವಳಿ ತಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಕಳೆ ಹೆಚ್ಚಾಗುತ್ತಿರುವುದರಿಂದ ವನ್ಯಜೀವಿಗಳಿಗೆ ಸಮಸ್ಯೆಯಾಗುತ್ತಿದ್ದು, ಕಳೆ ತೆರವು ಮಾಡಿ ವನ್ಯಜೀವಿಗಳ ಸಂಚಾರ ಮತ್ತು ಆಹಾರ ಲಭ್ಯತೆ ಹೆಚ್ಚಿಸಲು ಬೇಕಾದ ಎಲ್ಲ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ. ಅದೇ ರೀತಿ ಆನೆ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ಶಾಶ್ವತ ಪರಿಹಾರವಾಗಿದ್ದು, ಅಗತ್ಯವಿರುವ ಕಡೆ ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಕ್ರಮವಹಿಸಲಾಗುತ್ತದೆ ಎಂದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ಬಂಡೀಪುರ, ನಾಗರಹೋಳೆ, ಬನ್ನೇರುಘಟ್ಟ ಅರಣ್ಯದಲ್ಲಿ ಕಳೆಯದ್ದು ದೊಡ್ಡ ಸಮಸ್ಯೆ ಇದೆ. ಲಂಟಾನ ನಮ್ಮ ಕಳೆಯಲ್ಲ. ವಿದೇಶದಿಂದ ಬಂದಿದೆ. ಸುಟ್ಟರೂ ಮತ್ತೆ ಬೆಳೆಯುತ್ತಿದೆ. ಈ ಬಗ್ಗೆ ಸಂಶೋಧನೆ ಆಗಿದೆ. ಭೂಮಿಯ ಕೆಳಗೆ ನಾಲ್ಕು ಇಂಚು ಒಳಗಿನಿಂದ ತೆಗೆದುಹಾಕಬೇಕು ಎಂದು ವರದಿ ಕೊಟ್ಟಿದ್ದಾರೆ. ಅರಣ್ಯದಲ್ಲಿ ಶೇ.40-50 ರಷ್ಟು ಕಳೆ ಇರುವ ಕಾರಣ ವನ್ಯಜೀವಿಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ.…
ಮಂಡ್ಯ:- ತೆಲಂಗಾಣ ಗೆದ್ದರೆ ನಾಲ್ಕು ರಾಜ್ಯ ಗೆದ್ದಂತೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಮಾತನಾಡಿದ ಅವರು, ಇಂಡಿಯಾ ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೆ ಇಂಡಿಯಾ. ತೆಲಂಗಾಣ ಗೆದ್ದಿದ್ದೇವೆ, ನಾಲ್ಕು ರಾಜ್ಯ ಗೆದ್ದಾಗೆ. ಸೌತ್ ಇಂಡಿಯಾದಲ್ಲಿ ಮತದಾರರು ಬಿಜೆಪಿ ಮುಕ್ತ ಮಾಡಿದ್ದಾರೆ ಎಂದರು. ಕೇಂದ್ರದ ಬಿಜೆಪಿಯವರು 10 ವರ್ಷಗಳಿಂದ ಆಡಳಿತ ಮಾಡ್ತಿದ್ದಾರೆ. ಇದು ಇಂಡಿಯಾ ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೆ ಇಂಡಿಯಾ. ಸ್ವಾತಂತ್ರ್ಯ ತರಲು ಹೋರಾಟ ಮಾಡಿದ್ದು ಮೂಲತಃ ಕಾಂಗ್ರೆಸ್ ನಾಯಕರು. ಮಹಾತ್ಮಗಾಂಧಿ ಅವರಿಂದ ಹಿಡಿದು ಅನೇಕ ನಾಯಕರು. ಕಾಂಗ್ರೆಸ್ ಬಗ್ಗೆ ಲಘುವಾಗಿ ಮಾತನಾಡಿದ್ದು ಸರಿಯಲ್ಲ. ಕಾಂಗ್ರೆಸ್ ಮುಕ್ತ ಇಂಡಿಯಾ ಮಾಡ್ತಿನಿ ಅಂದಿದ್ರು, ಸೌತ್ ಇಂಡಿಯಾದಲ್ಲಿ ಬಿಜೆಪಿ ಮುಕ್ತ ಮಾಡಿದ್ದಾರೆ. ಕೇರಳ, ತಮಿಳುನಾಡು, ಕರ್ನಾಟಕ, ತೆಲಂಗಾಣದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಯಾಗಿದೆ ಎಂದು ಟಾಂಗ್ ಕೊಟ್ಟರು. 10 ವರ್ಷ ತೆಲಂಗಾಣದಲ್ಲಿ ಗ್ಯಾಪ್ ಇತ್ತು. ಇವತ್ತು ಜನರು ಒಂದು ತೀರ್ಮಾನ ತೆಗೆದುಕೊಂಡಿದ್ದಾರೆ. ಮುಂದಿನ ಚುನಾವಣೆಗೆ ಕಾಂಗ್ರೆಸ್ಗೆ ಭವಿಷ್ಯ ಇದೆ. ತೆಲಂಗಾಣ ಮತದಾರರು…
ಬೆಳಗಾವಿ/ಬೆಂಗಳೂರು:- ಬೆಳಗಾವಿ ಅಧಿವೇಶನದಲ್ಲಿ 18 ಬಿಲ್ಗಳ ಮಂಡನೆ ಬಗ್ಗೆ ಚರ್ಚೆ ಮಾಡಲಾಗಿದ್ದು, ವಿಪಕ್ಷಗಳಿಂದ ಅಧಿವೇಶನ ವಿಸ್ತರಣೆಗೆ ಮನವಿ ಮಾಡಲಾಗಿದೆ. ವಿಧಾನಸಭೆ ಕಲಾಪದಲ್ಲಿ 18 ಮಸೂದೆಗಳ ಮಂಡನೆಗೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 18 ಮಸೂದೆ ಮಂಡನೆ ಸಂಬಂಧ ಚರ್ಚೆ ನಡೆಸಲಾಯಿತು. ಮುಂದಿನ ವಾರದಿಂದ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಮಧ್ಯಾಹ್ನದ ಬಳಿಕ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬರ ನಿರ್ವಹಣೆ ಸಂಬಂಧ ಸದನಕ್ಕೆ ಮಾಹಿತಿ ನೀಡಲಿದ್ದಾರೆ. ಬಳಿಕ ಪ್ರತಿಪಕ್ಷಗಳು ಬರ ಸಂಬಂಧ ಚರ್ಚೆಗೆ ಕೋರಿ ಸಲ್ಲಿಸಿರುವ ನಿಲುವಳಿಗೆ ಅವಕಾಶ ನೀಡಲು ನಿರ್ಧರಿಸಲಾಯಿತು. ಇದೇ ವೇಳೆ ಪ್ರತಿಪಕ್ಷಗಳು ಬೆಳಗಾವಿ ಅಧಿವೇಶನವನ್ನು ಒಂದು ವಾರ ಕಾಲ ವಿಸ್ತರಿಸುವಂತೆ ಕೋರಿದರು. ಈ ಬಗ್ಗೆ ಮುಂದಿನ ಬಿಎಸಿ ಸಭೆಯಲ್ಲಿ ಚರ್ಚೆ ನಡೆಸಲು ತೀರ್ಮಾನಿಸಲಾಯಿತು. ಕರ್ನಾಟಕ ಕರಾವಳಿ ಅಭಿವೃದ್ಧಿ ನಿಗಮ ತಿದ್ದುಪಡಿ ವಿಧೇಯಕ 2021, ಕರ್ನಾಟಕ ಗ್ರಾಮ ಸ್ವರಾಜ್…
ಬೆಂಗಳೂರು:- ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮಾತೃಭಾಷೆ ಅಥವಾ ರಾಜ್ಯ ಭಾಷೆಯ ಕಡ್ಡಾಯ ಶಿಕ್ಷಣ ವಿಚಾರ ಕುರಿತು ವಿಧಾನಸಭೆಯ ಉಭಯ ಸದನಗಳಿಂದ ಅಂಗೀಕಾರಗೊಂಡಿರುವ ರಾಜ್ಯದ ಮಸೂದೆಗೆ ಇನ್ನೂ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕದ ಕಾರಣ, ಕಡ್ಡಾಯ ಶಿಕ್ಷಣ ವಿಚಾರದಲ್ಲಿ ಸರ್ಕಾರ ಯಾವುದೇ ಕ್ರಮ ವಹಿಸಿಲ್ಲ. ಆದರೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ ಎಂದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಯು ಬಿ ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, 2015ರಲ್ಲಿ ಉಭಯ ಸದನಗಳಲ್ಲಿ ಮಂಡನೆ ಆಗಿ ರಾಜ್ಯದ ಎಲ್ಲ ಶಾಲೆಗಳಲ್ಲಿ 1-5 ತರಗತಿವರೆಗೆ ಮಾತೃಭಾಷೆ- ರಾಜ್ಯಭಾಷೆ ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸಿ ಅಂಗೀಕರಿಸಲಾಗಿದ್ದ ಮಸೂದೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿಲ್ಲ. ಕೇಂದ್ರ ಸರ್ಕಾರ ಮಾತೃಭಾಷೆಯ ಕಡ್ಡಾಯ ಶಿಕ್ಷಣ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಮಸೂದೆ ಒಪ್ಪದ ಕೇಂದ್ರ ಸುಪ್ರಿಂಕೋರ್ಟ್ ತೀರ್ಪು ಆಧರಿಸಿ, ರಾಜ್ಯದ ವಿಧೇಯಕ…
ಬೆಂಗಳೂರು:- ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತದ ಪರಿಣಾಮ ಡಿ. 7ರವರೆಗೆ ಕೂಡ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಚಂಡಮಾರುತ ಹೈ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ವಿಜ್ಞಾನಿ ಎ ಪ್ರಸಾದ್ ತಿಳಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಕಡಿಮೆ ಒತ್ತಡದ ಪ್ರದೇಶ ಕ್ರಮೇಣ ವಾಯುವ್ಯ ಕಡೆಗೆ ಚಲಿಸಲಿದೆ. ಇದು ಸೈಕ್ಲೋನಿಕ್ ಚಂಡಮಾರುತದ ರೂಪವನ್ನು ತೆಗೆದುಕೊಳ್ಳುತ್ತದೆ. ತಮಿಳುನಾಡು, ಕೇರಳ ಮತ್ತು ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ವಾರ ಮೋಡ ಕವಿದ ವಾತಾವರಣವಿತ್ತು. ಈ ವಾರ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಹೆಚ್ಚಾಗಿದೆ ಎಂದಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,…
ಬೆಳಗಾವಿ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರೊಟೆಸ್ಟ್ ನಡೆದಿದ್ದು, ಬೆಳೆ ಪರಿಹಾರ ನೀಡಬೇಕು. ಎಂಎಸ್ ಪಿ ಶಾಸನಬಧ್ಧವಾಗಿ ಜಾರಿ ಆಗಬೇಕು. ಪ್ರತಿ ಲೀಟರ್ ಹಾಲಿಗೆ 50 ರೂಪಾಯಿ ದರ ನಿಗದಿಪಡಿಸಬೇಕು. ಮಹದಾಯಿ ಎತ್ತಿನಹೊಳೆ ಸೇರಿದಂತೆ ನೀರಾವರಿ ಯೋಜನೆಯ ಜಾರಿಯಾಗಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ ಹೊರ ಹಾಕಿದ್ದಾರೆ. ರೈತ ಸಂಘದಿಂದ ಸುವರ್ಣ ಸೌಧ ಮುತ್ತಿಗೆ ಯತ್ನ ಹಿನ್ನೆಲೆ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರೈತರನ್ನು ಪೊಲೀಸರು ತಡೆದಿದ್ದಾರೆ. ಎರಡು ಬಸ್ ಗಳ ಮೂಲಕ ಪ್ರತಿಭಟನಾ ಸ್ಥಳಕ್ಕೆ ಕರೆದುಕೊಂಡು ಹೋಗಲು ಪೊಲೀಸರು ತಯಾರಿ ನಡೆಸಿದ್ದಾರೆ. ಈ ಹಿನ್ನೆಲೆ ಬಸ್ ಹತ್ತಿ ಪೊಲೀಸರು ತೆರಳಿದರು. ಈ ವೇಳೆ ಭಾರೀ ಬಂದೋಬಸ್ತ್ ಒದಗಿಸಲಾಗಿತ್ತು.
ಚಾಮರಾಜನಗರ:- ಮಾಜಿ ಸಚಿವ ಸಿಪಿಯೋಗೀಶ್ವರ ಬಾವನ ಕಾರು ಹನೂರು ಭಾಗದಲ್ಲಿ ಪತ್ತೆಯಾಗಿದೆ. ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವ್ ಅವರ ಚಾಮರಾಜನಗರದ ಹನೂರು ಬಳಿ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದ ಬಳಿ ಮಹದೇವಯ್ಯ ಅವರ ಕಾರು ಪತ್ತೆಯಾಗಿದೆ. ರಾಮಾಪುರದ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬಿಳಿಬಣ್ಣದ KA 42 N 0012 ನಂಬರ್ನ ಮಾರುತಿ ಬ್ರಿಜಾ ಕಾರು ಪತ್ತೆಯಾಗಿದೆ. ಕಾರನ್ನು ಲಾಕ್ ಮಾಡಲಾಗಿದ್ದು, ನಿನ್ನೆ ರಾತ್ರಿಯಿಂದಲೂ ಅಲ್ಲೆ ಇದೆ ಎಂದು ತಿಳಿದುಬಂದಿದೆ. ಆದರೆ ಕಾರನ್ನು ಸ್ವತಃ ಮಹದೇವಯ್ಯ ಅವರೇ ನಿಲ್ಲಿಸಿ ಹೋಗಿದ್ದಾರಾ? ಅಥವಾ ಇನ್ಯಾರಾದರು ನಿಲ್ಲಿಸಿ ಹೋಗಿದ್ದಾರಾ ಎಂಬುದು ನಿಗೂಢವಾಗಿದೆ. ಸ್ಥಳಕ್ಕೆ ರಾಮಾಪುರ ಪೊಲೀಸರಿಂದ ಪರಿಶೀಲನೆ ನಡೆಸುತ್ತಿದ್ದಾರೆ. ಮಹದೇವಯ್ಯ ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡುವುದರಿಂದ ಅವರನ್ನು ಯಾರೋ ಅಪಹರಣ ಮಾಡಿರುವ ಶಂಕೆ ವ್ಯಕ್ತವಾಗಿದೆ. ತೋಟದ ಮನೆಗೆ ಚನ್ನಪಟ್ಟಣ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರಿಂದ ಅನುಮಾನ ದಟ್ಟವಾಗಿದೆ. ಅಲ್ಲದೇ…