ಚಾಮರಾಜನಗರ: ಬಿಜೆಪಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು ಶವವಾಗಿ ಪತ್ತೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಬಳಿ ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮಹದೇವಯ್ಯನವರ ಮೃತದೇಹ ಪತ್ತೆಯಾಗಿದೆ. ಬೆಡ್ಶೀಟ್ ಹೊದಿಸಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಮಹದೇವಯ್ಯ ಅವರನ್ನು ಕೊಲೆ ಮಾಡಲಾಗಿದೆ. ಕೊಲೆಯಾದ ಸ್ಥಳದಿಂದ 6 ಕಿಲೋ ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಏನಿದು ಪ್ರಕರಣ? ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಮಹದೇವಯ್ಯ ಅವರು ಡಿಸೆಂಬರ್ 2 ರಂದು ಏಕಾಏಕಿ ನಾಪತ್ತೆಯಾಗಿದ್ದರು. ಇವರ ಮತ್ತೆಗೆ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು. ಡಿಸೆಂಬರ್ 3 ರಂದು ಮಹದೇವಯ್ಯ ಅವರ ಕಾರು ಹನೂರು ತಾಲೂಕಿನ ರಾಮಾಪುರದಲ್ಲಿ ಪತ್ತೆಯಾಗಿತ್ತು. ಕಾರು ಪತ್ತೆಯಾದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ರಾಮನಗರ ಪೊಲೀಸರು ತನಿಖಾ ತಂಡಕ್ಕೆ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದು, ಈ ವೇಳೆ ಕಾರಿನಲ್ಲಿ ರಕ್ತದ ಕಲೆ ಇರುವುದು ಪತ್ತೆಯಾಗಿತ್ತು. ಹೀಗಾಗಿ…
Author: AIN Author
ಬೆಂಗಳೂರು:- ಗೃಹ ಇಲಾಖೆ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ x ಮಾಡಿರುವ ಅವರು,ಕಾನೂನು ಸುವ್ಯವಸ್ಥೆ ಹದಗೆಟ್ಟು ಗೃಹ ಇಲಾಖೆ ಮೇಲೆ ಸರ್ಕಾರ ಮತ್ತು ಅಧಿಕಾರಿಗಳ ನಿಯಂತ್ರಣ ತಪ್ಪಿದೆ ಎಂದರು. ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನಲ್ಲಿ ಪೊಲೀಸರು-ವಕೀಲರ ಮಧ್ಯೆ ಗಲಾಟೆ ನಡೆದಿದೆ. ಈ ಕುರಿತು ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗೃಹ ಇಲಾಖೆಯು ಈ ರೀತಿ ಅಶಿಸ್ತು ತೋರುತ್ತಿರುವುದು ಒಂದು ಗಂಭೀರವಾದ ವಿಚಾರ. ಸರ್ಕಾರ ಈ ಕೂಡಲೇ ಇದನ್ನು ಸರಿಪಡಿಸದಿದ್ದರೆ ರಾಜ್ಯದಲ್ಲಿ ಅರಾಜಕತೆಗೆ ಉಂಟಾಗಲು ಕಾರಣವಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕೂಡಲೇ ಮಧ್ಯ ಪ್ರವೇಶಿಸಿ ಕಾನೂನು ಎಲ್ಲರೂ ಪಾಲಿಸಬೇಕು ಎಂಬಂತಹ ವಾತಾವರಣ ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಹಾಸನ: 8 ಬಾರಿ ಅಂಬಾರಿ ಹೊತ್ತಿದ್ದ ಕ್ಯಾಪ್ಟನ್ ಅರ್ಜುನ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ ಯಸಳೂರು ಬಳಿ ನಡೆದಿದೆ. ನಾಲ್ಕು ಸಾಕಾನೆಗಳೊಂದಿಗೆ ಇಂದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ಕಾರ್ಯಾಚರಣೆ ಆರಂಭಿಸಿದ್ದರು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಒಂಟಿಸಲಗ ದಾಳಿ ಮಾಡುತ್ತಿದ್ದಂತೆ ಉಳಿದ ಮೂರು ಸಾಕಾನೆಗಳು ಓಡಿ ಹೋಗಿದೆ. https://ainlivenews.com/dialysis-problem-not-caused-by-our-government-dinesh-gundurao/ ಸಾಕಾನೆ ಅರ್ಜುನ ಒಂಟಿಸಲಗದ ಜೊತೆ ಕಾಳಗಕ್ಕಿಳಿದಿದೆ. ಮದಗಜಗಳ ಕಾಳಗದಲ್ಲಿ ಅರ್ಜುನ ಸಾವನ್ನಪ್ಪಿದೆ. ಎರಡು ಆನೆಗಳು ಕಾಳಗಕ್ಕೆ ಬೀಳುತ್ತಿದ್ದಂತೆ ಮಾವುತರು ಅರ್ಜುನನ ಮೇಲಿನಿಂದ ಇಳಿದು ಓಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು:- ಭವಾನಿ ರೇವಣ್ಣ ಬೈಕ್ ಸವಾರನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಕ್ಷಮೆ ಕೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪತ್ನಿ ವರ್ತನೆಯ ಬಗ್ಗೆ ಯಾರಿಗಾದರೂ ನೋವಾದರೆ ಕ್ಷಮೆ ಕೋರುತ್ತೇನೆ. ಬೈಕ್ ಸವಾರ ಕುಡಿದು ಬೈಕ್ ಓಡಿಸಿದ್ದ. ನಾವೇನು ಅವರ ಬಳಿ ಡ್ಯಾಮೇಜ್ ಹಣ ಕೊಡಿ ಎಂದು ಕೇಳಲಿಲ್ಲ. ಏನಾದರೂ ಹೆಚ್ಚು ಕಮ್ಮಿ ಆಗಿದ್ರೆ ಯಾರು ಹೊಣೆ? ಬೇಕಾದರೆ ಭವಾನಿ ರೇವಣ್ಣ ಅವರಿಂದಲೂ ಕ್ಷಮೆ ಕೇಳಿಸುತ್ತೇನೆ. ಸಿಟ್ಟಾಗಿ ಭವಾನಿ ಮಾತನಾಡಿದ್ದಾರೆ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಬೈಕ್ ಅವನೇ ಬಂದು ಸೈಡ್‌ನಿಂದ ಕಾರಿಗೆ ಗುದ್ದಿದ್ದಾನೆ. ಹೆಚ್ಚು ಕಡಿಮೆ ಆಗಿದ್ದರೆ ಏನಾಗಾಗುತ್ತಿತ್ತು?, ಅವರು ಏನೂ ಅಹಂಕಾರ ಮಾಡಿಲ್ಲ. ಭವಾನಿ ಅವರು ಯಾರದ್ದೋ ಸ್ನೇಹಿತನ ಕಾರಿನಲ್ಲಿ ಹೋಗಿದ್ದರು. ಅವರು ಸಿಟ್ಟಿನಲ್ಲಿ ಮಾತನಾಡಿದ್ದಾರೆ. ನಮ್ಮಕುಟುಂಬ ಯಾರಿಗೂ ನೋವು ಆಗುವ ಕೆಲಸ ಮಾಡಲ್ಲ. ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಏನಾಗುವುದು? ಅದನ್ನು ಬೇಕಂತಲೇ ಯಾರೋ ವೈರಲ್ ಮಾಡಿದ್ದಾರೆ. ಅವರು ಬೈಕ್…
ಮೈಸೂರು: ಟಾಲಿವುಡ್ ಸ್ಟಾರ್ ನಟ ರಾಮ್ ಚರಂಣ್ ತೇಜ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದಿದ್ದಾರೆ. https://ainlivenews.com/dialysis-problem-not-caused-by-our-government-dinesh-gundurao/ ತೆಲುಗು ಭಾಷೆಯ ಬಹು ನಿರೀಕ್ಷಿತ ಗೇಮ್ ಚೇಂಜರ್ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದ್ದು ನಟ ರಾಮ್ ಚರಣ್ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ವಾರಾಂತ್ಯವಾದ ಚಿತ್ರ ತಂಡದೊಂದಿಗೆ ನಾಡ ಅದಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು.
ಯಲಹಂಕ:-ವಿಶ್ವ ಅಂಗವಿಕಲರ ದಿನಾಚರಣೆ ಪ್ರಯುಕ್ತ ಮಾತೃ ಅಂಗವಿಕಲರ ಶಿಕ್ಷಣ ಸಂಸ್ಥೆ ವತಿಯಿಂದ ಯಲಹಂಕದಲ್ಲಿ ವಾಕಥಾನ್ ನಡೆದಿದೆ. ಅಂಗವಿಕಲರ ಹಕ್ಕುಗಳು, ರಕ್ಷಣೆ ಮತ್ತು ಅಂಗವಿಕಲರ ಜಾಗೃತಿಗಾಗಿ ವಾಕಥಾನ್ ನಡೆದಿದ್ದು, ಯಲಹಂಕದ ವಿವೇಕಾನಂದ ಪಾರ್ಕ್ ನಿಂದ ಮದರ್ ಡೈರಿ ಸರ್ಕಲ್ ವರೆಗೂ ವಾಕಥಾನ್ ನಡೆದಿದೆ. ಯಲಹಂಕ ಸುತ್ತಮುತ್ತಲಿನ 7ಕ್ಕು ಹೆಚ್ಚು ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ವಾಕಥಾನ್ ನಲ್ಲಿ ಭಾಗಿಯಾಗಿದರು. ರೈತರ ಸೇವಾ ಸಹಕಾರ ಬ್ಯಾಂಕ್ ನಿರ್ದೇಶಕರಾದ ಶ್ರೀಮತಿ ವಾಣಿಶ್ರೀ ವಿಶ್ವನಾಥರಿಂದ ವಾಕಥಾನ್ ಗೆ ಚಾಲನೆ ನೀಡಲಾಗಿದ್ದು, ಮೆರವಣಿಗೆ ಮೂಲಕ ಅಂಗವಿಕಲ ಮಕ್ಕಳ ಶಿಕ್ಷಣ, ವಿದ್ಯಾಭ್ಯಾಸ, ಹಕ್ಕಗಳ ಬಗ್ಗೆ ಜನಜಾಗೃತಿ ಮೂಡಿಸಲಾಗಿದೆ. ಯಲಹಂಕ ಮದರ್ ಡೈರಿ ಸರ್ಕಲ್ ನಲ್ಲಿ ಮಾತೃಶಿಕ್ಷಣ ಸಂಸ್ಥೆಯ ಶಿಕ್ಷಕಿಯರಿಂದ ಬೀದಿನಾಟಕ ಪ್ರದರ್ಶನ ನಡೆದಿದೆ.
ನವದೆಹಲಿ: ಜಾತಿಗಣತಿ (Caste Census) ನಡೆಸಲು ದೇಶದ ಮೂಲೆ ಮೂಲೆಯಿಂದ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ಸಕಾರಾತ್ಮಕ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಹೀಗಾಗಿ ಕೂಡಲೇ ಜಾತಿಗಣತಿ ನಡೆಸಲು ಆದೇಶಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ (Mayawati) ಒತ್ತಡ ಹೇರಿದ್ದಾರೆ. ಣದುಬ್ಬರ, ಬಡತನ, ನಿರುದ್ಯೋಗ, ಹದಗೆಟ್ಟ ರಸ್ತೆಗಳು, ನೀರು, ವಿದ್ಯುತ್, ಶಿಕ್ಷಣ, ಆರೋಗ್ಯ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಮತ್ತು ಜಾತಿವಾದಿ ಶೋಷಣೆ ಮತ್ತು ದೌರ್ಜನ್ಯಗಳಿಂದ ಬಳಲುತ್ತಿರುವ ದೇಶದ ಜನರಲ್ಲಿ ಜಾತಿಗಣತಿಯ ಬಗ್ಗೆ ಅಭೂತಪೂರ್ವ ಆಸಕ್ತಿ ಮತ್ತು ಜಾಗೃತಿ ಬಿಜೆಪಿಗೆ ನಿದ್ದೆ ಇಲ್ಲದಂತೆ ಮಾಡಿದೆ. https://ainlivenews.com/dialysis-problem-not-caused-by-our-government-dinesh-gundurao/ ಕಾಂಗ್ರೆಸ್ ಜಾತಿಗಣತಿ ಮೂಲಕ ತನ್ನ ಅಪರಾಧಗಳನ್ನು ಮುಚ್ಚಿಡುವುದರಲ್ಲಿ ನಿರತವಾಗಿದೆ. ‘ಸಾಮಾಜಿಕ ನ್ಯಾಯ’ದ ಹೆಸರಿನಲ್ಲಿ ಜಾತಿಗಣತಿ ನಡೆಸುವ ಮೂಲಕ ಸಾರ್ವಜನಿಕರ ಭಾವನೆಗಳನ್ನು ಸಾಕಷ್ಟು ಮಟ್ಟಿಗೆ ತೃಪ್ತಿಪಡಿಸಲು ವಿವಿಧ ರಾಜ್ಯ ಸರ್ಕಾರಗಳು ಅರೆಮನಸ್ಸಿನಿಂದ ಪ್ರಯತ್ನಿಸುತ್ತಿದ್ದರೂ, ಕೇಂದ್ರ ಸರ್ಕಾರವು ಸರಿಯಾದ ಜಾತಿಗಣತಿಯನ್ನು ನಡೆಸಿದಾಗ ಮಾತ್ರ ನಿಜವಾದ ಪರಿಹಾರ ಸಾಧ್ಯ. ರಾಷ್ಟ್ರೀಯ ಮಟ್ಟದಲ್ಲಿ, ಜನರಿಗೆ ಅವರ…
ಬೆಂಗಳೂರು:- ಮತ್ತು ಬರಿಸಿ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ IAS ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೆರಿನಾ ವಿಲ್ಸನ್ ಎನ್ನುವ ಮಹಿಳೆ ನಿವೃತ್ತ ಐಎಎಸ್ ಅಧಿಕಾರಿ ರಾಮಚಂದ್ರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದಾರೆ ಪಾನೀಯದಲ್ಲಿ ಮತ್ತುಬರಿಸುವ ಪದಾರ್ಥ ಹಾಕಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದು, ಈ ಬಗ್ಗೆ ತಿಲಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಅನ್ವಯ ಪೊಲೀಸರು, ರಾಮಚಂದ್ರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಬೆಳಗಾವಿ, ಡಿಸೆಂಬರ್ 4 : ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು, ಇನ್ನುಳಿದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗಿಲ್ಲ. ಜನರ ತೀರ್ಮಾನವನ್ನು ಗೌರವಿಸುವ ಜೊತೆಗೆ ಸೋಲಿನ ಕಾರಣಗಳ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉದ್ದೇಶಪೂರ್ವಕ ಹೇಳಿಕೆ ಅಲ್ಲ: ಸಚಿವ ಜಮೀರ್ ಅಹ್ಮದ್ ಅವರು ಮುಸ್ಲಿಂ ಸಮುದಾಯದ ಸಭಾಧ್ಯಕ್ಷರಿಗೆ ಎಲ್ಲರೂ ತಲೆಬಾಗಬೇಕು ಎಂಬ ಹೇಳಿಕೆಗೆ ಬಿಜೆಪಿಯವರು ಅವರ ರಾಜಿನಾಮೆಯನ್ನು ಕೇಳುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಸಚಿವ ಜಮೀರ್ ಅಹ್ಮದ್ ಅವರು ಉದ್ದೇಶಪೂರ್ವಕವಾಗಿ ಈ ಹೇಳಿಕೆಯನ್ನು ನೀಡಿಲ್ಲ ಎಂದರು. ವಿಧಾನಸಭೆಯ ಒಳಗೆ ಸಾವರ್ಕರ್ ಭಾವಚಿತ್ರವನ್ನು ತೆಗೆಯುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ವಿಷಯದ ಬಗ್ಗೆ ಸಭಾಧ್ಯಕ್ಷರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಆನೇಕಲ್: -ಇತ್ತೀಚೆಗೆ ಖಾಸಗಿ ಶಾಲೆಗಳ ನಡುವೆ ಸರ್ಕಾರ ಶಾಲೆಗಳು ಮರೆಯಾಗುತ್ತಿವೆ,ಅತಿ ಹೆಚ್ಚಾಗಿ ಸರ್ಕಾರಿ ಶಾಲೆಗಳಿಗೆ ಬಡ ಕೂಲಿ ಕಾರ್ಮಿಕರ ಮಕ್ಕಳೆ ಹೆಚ್ಚಾಗಿ ಹೊಗುತ್ತಾರೆ,ಅದರಲ್ಲು ಬೆಂಗಳೂರಿನಂತ ನಗರ ಪ್ರದೇಶದಲ್ಲಿ ಬಡವರ ಮಕ್ಕಳು ಸರ್ಕಾರಿ ಶಾಲೆಗಳನ್ನೆ ನೆಚ್ಚಿಕೊಳ್ಳುತ್ತಾರೆ,ಮತ್ತು ಬೆಂಗಳೂರಿಗೆ ಕೆಲಸ ಹರಸಿ ಬಂದ ಕೂಲಿ ಕಾರ್ಮಿಕರ ಮಕ್ಕಳು ಸರ್ಕಾಕಿ ಶಾಲೆಗೆ ಹೋಗಬೇಕು ಅಂತಹ ಮಕ್ಕಳಿಗೆ ಉತ್ತೇಜನ ನೀಡಲು ಶಾಲಾಮಕ್ಕಳಿಗೆ ಸಹಾಯಧನ ನೀಡುವ ಮೂಲಕ ಅರ್ಥಪೂರ್ಣವಾದ ಕನ್ನಡ ರಾಜ್ಯೊತ್ಸವವನ್ನು ಆಚರಿಸಲಾಯಿತು. ಬೊಮ್ಮನಹಳ್ಳಿಯ ಹೊಂಗಸಂದ್ರದಲ್ಲಿ 11 ನೇ ವರ್ಷದ ಕನ್ನಡ ರಾಜ್ಯೊತ್ಸವವನ್ನು ಸ್ಥಳಿಯ ಶಾಸಕ ಎಂ ಸತೀಶ್ ರೆಡ್ಡಿ ಧ್ವಜಾರೊಹಣ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,ಇನ್ನು ಕಾರ್ಯಕ್ರಮದಲ್ಲಿ ಆಶ್ರಿತ್ ಗ್ರೂಪ್ ನ ಮಾಲಿಕರು ಹಾಗು ಸಮಾಜ ಸೇವಕರಾದ. ಶ್ರೀನಿವಾಸ್ ರೆಡ್ಡಿ ರವರು ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 10 ಮಕ್ಕಳಿಗೆ ತಲಾ 5000 ಸಾವಿರ ಸಹಾಧನ ನೀಡುವ ಮೂಲಕ ಮಕ್ಕಳಲ್ಲಿ ಉತ್ತೇಜನ ತುಂಬಿ ತಮ್ಮ ಹೃದಯವಂತಿಕೆ ಮೆರೆದರು.ಇನ್ನು ಕಾರ್ಯಕ್ರಮಕ್ಕೆ ಬಂದಿದ್ದ ಎಲ್ಲರು ಶ್ರೀನಿವಾಸ್ ರೆಡ್ಡಿ ರವರ ಕಾರ್ಯಕ್ಕೆ ಮೆಚ್ಚುಗೆ…