ಶಿವಮೊಗ್ಗ: ಹಿರಿಯ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಅವರು, ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸ್ ಗಢ್ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಭಾರತದ ಜನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಡಿರುವ ಕೆಲಸಗಳನ್ನು ಮೆಚ್ಚಿ ಅವರ ಮೇಲೆ ವಿಶ್ವಾಸವಿರಿಸಿರುವುದರ ಪ್ರತೀಕವಾಗಿದೆ ಎಂದು ಹೇಳಿದರು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂದೇಶವೊಂದನ್ನು ನೀಡಿದ ಅವರು, https://ainlivenews.com/congress-president-has-called-an-important-meeting-on-december-6/#google_vignette ಮುಂದಿನ ನಾಲ್ಕೂವರೆ ವರ್ಷಗಳ ಅವಧಿವರೆಗೆ ಅವರೇ ಸಿಎಂ ಆಗಿ ಮುಂದುವರಿಯಲಿ, ಅವರ ಕುರ್ಚಿ ಕಸಿಯುವ ಪ್ರಯತ್ನ ಬಿಜೆಪಿ ಖಂಡಿತ ಮಾಡಲ್ಲ, ಆದರೆ ಪ್ರತಿ ವಿಧಾನ ಮಂಡಲ ಆಧಿವೇಶನ ಆರಂಭವಾದಾಗ ದೇವರಾಜ ಅರಸು ಹೆಸರನ್ನು ನೆನೆಯುವ ಅವರು ಆ ಮಹಾನುಭಾವ ದಲಿತರಿಗೆ ಮತ್ತು ಹಿಂದುಳಿದ ವರ್ಗಗಳಿಗಾಗಿ ಮಾಡಿದ ಕೆಲಸಗಳನ್ನು ಜ್ಞಾಪಕ ಮಾಡಿಕೊಳ್ಳಲಿ ಎಂದು ಹೇಳಿದರು. ರಾಜ್ಯದೆಲ್ಲೆಡೆ ಈ ವರ್ಗಗಳ ಜನರಿಗೆ ವಸತಿ ಯೋಜನೆ ಸ್ಥಗಿತಗೊಂಡಿದೆ, ಸಿದ್ದರಾಮಯ್ಯ ಯೋಜನೆ ಪುನಾರಾರಂಭಿಸಲಿ ಎಂದು ಈಶ್ವರಪ್ಪ ಹೇಳಿದರು.
Author: AIN Author
ನವದೆಹಲಿ: ಮೂರು ರಾಜ್ಯಗಳ ಜನಾದೇಶ (ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಢ) ಲೋಕಸಭೆಯ ಹ್ಯಾಟ್ರಿಕ್ ಗೆಲುವಿನ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಶಯ ವ್ಯಕ್ತಪಡಿಸಿದ್ದಾರೆ. ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದೆ. ಬಿಜೆಪಿ ಗೆಲುವಿನ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತು ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು. https://ainlivenews.com/congress-president-has-called-an-important-meeting-on-december-6/#google_vignette ಇದು ರೈತರು, ಆದಿವಾಸಿಗಳು, ಮಹಿಳೆಯರ ಗೆಲುವು. ಈ ಗೆಲುವಿನಲ್ಲಿ ಮಹಿಳೆಯರು, ಯುವಕರು ತಮ್ಮ ಗೆಲುವು ನೋಡುತ್ತಿದ್ದಾರೆ. 2047 ಭಾರತವನ್ನು ವಿಕ್ಸಿತ್ ದೇಶ ಮಾಡುವ ಗುರಿಗೆ ಶಕ್ತಿ ನೀಡಲಿದೆ. ಈ ಚುನಾವಣೆಯಲ್ಲಿ ನಾರಿ ಶಕ್ತಿ ದೊಡ್ಡದಾಗಿ ಹೊರಹೊಮ್ಮಿದೆ. ದೇಶದ ಮಹಿಳೆಯರು ಸುರಕ್ಷಾ ಕವಚವಾಗಿ ನಿಂತರೆ, ಯಾವುದೇ ಕಾರಣಕ್ಕೂ ಹಾನಿಯಾಗಲು ಬಿಡುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ ಮಹಿಳೆಯರು ಸಕ್ರಿಯವಾಗಿ ಭಾಗಿಯಾಗಿದ್ದಾರೆ. ನಮಗೆ ರಕ್ಷಾ ಕವಚವಾಗಿದ್ದಾರೆ ಎಂದು ಮಹಿಳೆಯರಿಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭಗೊಂಡಿದೆ. ಸೋಮವಾರ ಬೆಳಗ್ಗೆ ಸುವರ್ಣ ಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ (Siddaramaiah) ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಸಕಲ ಗೌರವಗಳೊಂದಿಗೆ ಸ್ವಾಗತ ಕೋರಲಾಯಿತು. ಇದಕ್ಕೂ ಮುನ್ನ ಏರ್ಪೋರ್ಟ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸೇರಿದಂತೆ ಇತರ ಗಣ್ಯರು ಹೂಗುಚ್ಚ ನೀಡಿ ಸ್ವಾಗತಿಸಿದರು. ಸುವರ್ಣಸೌಧಕ್ಕೆ ಬರುವ ಮುನ್ನ ವಿಮಾನ ನಿಲ್ದಾಣದಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜಮೀರ್ ಅಹ್ಮದ್ ಅವರನ್ನು ಸಮರ್ಥನೆ ಮಾಡಿಕೊಂಡರು. https://ainlivenews.com/congress-president-has-called-an-important-meeting-on-december-6/#google_vignette ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಜಮೀರ್ ಅಹ್ಮದ್ ಖಾನ್ ʻಮುಸ್ಲಿಂʼ ಸ್ಪೀಕರ್‌ಗೆ (Muslim Speaker) ಕೈಮುಗಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ (BJP) ರಾಜೀನಾಮೆಗೆ ಆಗ್ರಹಿಸಿದೆ. ಈ ಕುರಿತು ಮಾತನಾಡಿದ ಸಿಎಂ, ಜಮೀರ್ ಉದ್ದೇಶಪೂರ್ವಕವಾಗಿ ಆ ಹೇಳಿಕೆ ಕೊಟ್ಟಿಲ್ಲ ಎಂದರು. ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿ, ನಾವು ತೆಲಂಗಾಣ ಗೆದ್ದಿದ್ದೇವೆ, ಉಳಿದ 3 ಸೋತಿದ್ದೇವೆ. ಜನಾಶೀರ್ವಾದ ಸ್ವೀಕರಿಸಿದ್ದೇವೆ, ಜನರ ತೀರ್ಪೇ ಅಂತಿಮ. ನಮ್ಮ ತಪ್ಪುಗಳನ್ನು…
ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ‘ಮಾಫಿಯಾ’ (Mafia) ಚಿತ್ರದ ಟೀಸರ್ (Teaser) ಇತ್ತೀಚಿಗೆ ಬಿಡುಗಡೆಯಾಯಿತು. ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರ್ಗಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾಫಿಯಾ ಕುರಿತು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಲೋಹಿತ್ (Lohit), ಈವರೆಗೂ ಯಾರು ತೋರಿಸಿರದ ಮಾಫಿಯಾ ಈ ಚಿತ್ರದಲ್ಲಿ ತೋರಿಸಿದ್ದೇವೆ. ಬೇರೆ ಬೇರೆ ಮಾರ್ಕೆಟ್ ಹೆಸರು ಕೇಳಿರುತ್ತೀರಾ. ಆದರೆ ಇದೆ ಮೊದಲ ಬಾರಿಗೆ ರೆಡ್ ಮಾರ್ಕೆಟ್ ಪರಿಚಯಿಸಲಾಗಿದೆ. ಅದು ಏನೆಂಬುದನ್ನು ಚಿತ್ರದಲ್ಲೇ ನೋಡಬೇಕು ಎಂದರು. ಪ್ರಜ್ವಲ್ ದೇವರಾಜ್ ಅಭಿನಯದ 35 ನೇ ಚಿತ್ರವನ್ನು ನಿರ್ಮಿಸುತ್ತಿರುವುದು ಖುಷಿಯಾಗಿದೆ. ನಿರ್ದೇಶಕ ಲೋಹಿತ್ ಸೇರಿದಂತೆ ಚಿತ್ರತಂಡದ ಸಹಕಾರದಿಂದ “ಮಾಫಿಯಾ” ಚಿತ್ರ ಚೆನ್ನಾಗಿ ಮೂಡಿಬಂದಿದೆ. ಜನವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ ಎಂದರು ನಿರ್ಮಾಪಕ ಕುಮಾರ್…
ಗದಗ: ವಿಕಲಚೇತನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವಾಗಬೇಕು. ಸಮಾಜದಲ್ಲಿ ವಿಕಲಚೇತನರನ್ನು ಅಶಕ್ತರು ಎಂಬ ಕೀಳರಿಮೆಯಿಂದ ನೋಡಬಾರದು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. https://ainlivenews.com/congress-president-has-called-an-important-meeting-on-december-6/#google_vignette ವಿಕಲಚೇತನರು ವಿಕಲತೆಯನ್ನು ಮೆಟ್ಟಿ ನಿಂತು ತಮ್ಮಲ್ಲಿ ಹುದುಗಿರುವ ಕಲೆಯನ್ನು ಪ್ರೋತ್ಸಾಹಿಸಬೇಕು. ವಿಕಲಚೇತನರನ್ನು ಇತರ ರೀತಿಯಿಂದ ಶಕ್ತನಾಗಿರುವವನು ( Differently Abled Person ) ಎಂದು ಜಗತ್ತು ಗುರುತಿಸುತ್ತಿದೆ.…
ಬೆಂಗಳೂರು: ಇಬ್ಬರು ಚಾಲಕರ ನಡುವೆ ಕಿರಿಕ್ ನಿಂದಾಗಿ ಮತ್ತೋರ್ವ ಚಾಲಕ ಕಾರnfnu ಸ್ವಲ್ಪ ದೂರದವರೆಗೆ ನೂಕಿಕೊಂಡು ಹೋದ ಭಯಾನಕ ಘಟನೆ ನಗರದ ಹೆಬ್ಬಾಳ ಫ್ಲೈ ಓವರ್ ಮೇಲೆ ನಡೆದಿದೆ. ಇಟಿಯಾಸ್ ಚಾಲಕ ಅಡ್ಡ ಬಂದ್ರು ಕಾರು ಮೂವ್ ಮಾಡಿದ ಇನೋವಾ ಡ್ರೈವರ್ ಇಟಿಯಾಸ್ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಇನೋವಾ ಚಾಲಕ ಸ್ವಲ್ವ ಯಾಮಾರಿದ್ರೂ ಹೋಗ್ತಿತ್ತು ಇಟಿಯಾಸ್ ಚಾಲಕನ ಪ್ರಾಣ ಹೆಬ್ಬಾಳ ಫ್ಲೈ ಒವರ್ ಮೇಲೆ ನವೆಂಬರ್ 29ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಎಕ್ಸ್(ಟ್ವಿಟರ್)ನಲ್ಲಿ ಘಟನೆಯ ವಿಡಿಯೋ ಶೇರ್ ಮಾಡಿರುವ ವ್ಯಕ್ತಿ ಘಟನೆಯ ವಿಡಿಯೋ ಪಕ್ಕದಲ್ಲೇ ಇದ್ದ ಕಾರಿನ ಡಾಶ್ ಬೋರ್ಡ್ ಕ್ಯಾಮಾರದಲ್ಲಿ ರೆಕಾರ್ಡ್ ಎರಡು ಯೆಲ್ಲೋ ಬೋರ್ಡ್ ಕಾರುಗಳು ಗಾಡಿಯಲ್ಲಿ ಪ್ಯಾಸೆಂಜರ್ ಕೂಡ ಇದ್ದರೂ ಇಂಥ ಘಟನೆ ನಾನು ಮುಂದೆಯಿಂದ ಟ್ರಾಫಿಲ್ ಪೊಲೀಸರಿಗೂ ಮಾಹಿತಿ ನೀಡಿದ್ದೇನೆ ಎಂದು ಟ್ವೀಟ್ ಕೆಎ 05, ಎಎಲ್ 7999 ವಾಹನ ಚಾಲಕನಿಂದ ಅತಿರೇಕದ ವರ್ತನೆ
ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆ ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಠಾಕ್ರೆ ಬಣದಿಂದ ಹೈಡ್ರಾಮಾ ನಡೆದಿದೆ. ಕೊಲ್ಲಾಪುರ ಜಿಲ್ಲೆಯ ಶಿನ್ನೋಳ್ಳಿ ಗಡಿಯಲ್ಲಿ ರಸ್ತೆ ಬಂದ್ ಮಾಡಿ ಪುಂಡಾಟ ಮೆರೆದಿದ್ದಾರೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಶಿವಸೇನೆ ಕಾರ್ಯಕರ್ತರಿಂದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://ainlivenews.com/congress-president-has-called-an-important-meeting-on-december-6/#google_vignette ಅದಲ್ಲದೆ ಇತ್ತ ಕರ್ನಾಟಕ ಸರ್ಕಾರದ ವಿರುದ್ಧ ಎಂಇಎಸ ಪುಂಡರು ನಾಡವಿರೋಧಿ ಘೋಷಣೆ ಕೂಗಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಬೀಗಿ ಖಾಗಿ ಭದ್ರತೆ ಒದಗಿಸಲಾಗಿದ್ದು, ಕರ್ನಾಟಕ ಗಡಿ ಪ್ರವೇಶಿಸದಂತೆ ಪೊಲೀಸರು ತಡೆ ಹಿಡಿದಿದ್ದಾರೆ.
ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕಾಗಿ ಬೆಳಗಾವಿಗೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿಮಾನ ನಿಲ್ದಾಣದ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಅಧಿವೇಶನದಲ್ಲಿ ಬಿಜೆಪಿ ಒಂದು ಸಮರ್ಥ ವಿರೋಧ ಪಕ್ಷವಾಗಿ ಕೆಲಸ ಮಾಡುವ ಜೊತೆಗೆ ಜನ ಅದರಲ್ಲೂ ವಿಶೇಷವಾಗಿ ಬಡಜನ ಎದುರಿಸುತ್ತಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉತ್ತರ ಪಡೆಯುವುದಾಗಿ ಹೇಳಿದರು. https://ainlivenews.com/congress-president-has-called-an-important-meeting-on-december-6/#google_vignette ಪಂಚ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶಗಳ ಬಗ್ಗೆ ಮಾತಾಡಿದ ಅವರು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪೊಳ್ಳು ಗ್ಯಾರಂಟಿಗಳನ್ನು ನೀಡಿ ಗೆದ್ದ ಹಾಗೆಯೇ ಅದರ ನೇತೃತ್ವ ಇಂಡಿಯ ಮೈತ್ರಿಕೂಟ ದೇಶದ ಬೇರೆ ಭಾಗಗಳಲ್ಲೂ ಗ್ಯಾರಂಟಿಗಳ ಮಂತ್ರ ಪಠಿಸಿತು. ಆದರೆ, ಜನ ಅವಟ ಟೊಳ್ಳು ಗ್ಯಾರಂಟಿಗಳನ್ನು ನಂಬಲು ತಯಾರಿಲ್ಲ, ಅವರಿಗೆ ಬೇಕಿರುವುದು ದೇಶದ ರಕ್ಷಣೆ ಮತ್ತು ಅಭಿವೃದ್ಧಿಯ ಗ್ಯಾರಂಟಿ ಮತ್ತು ಅದನ್ನು ಕೇವಲ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತ್ರ ನೀಡಬಲ್ಲರು ಎಂದು ವಿಜಯೇಂದ್ರ ಹೇಳಿದರು.
ಹೈದರಾಬಾದ್: ತೆಲಂಗಾಣದ ಮೇದಕ್ ಜಿಲ್ಲೆಯ ತೂಪ್ರಾನ್‌ನ ರಾವೆಲ್ಲಿ ಗ್ರಾಮದಲ್ಲಿ ತರಬೇತಿ ವಿಮಾನವೊಂದು (Trainer Aircraft) ಪತನಗೊಂಡ ಪರಿಣಾಮ ಭಾರತೀಯ ವಾಯುಪಡೆಯ (IAF) ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ಹೈದರಾಬಾದ್‌ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ (AFA) ವಾಡಿಕೆಯ ತರಬೇತಿಗಾಗಿ Pilatus PC 7 Mk-II ವಿಮಾನ ಟೇಕಾಫ್ ಆಗಿತ್ತು. ಈ ವೇಳೆ ಅಪಘಾತ ಸಂಭವಿಸಿ ವಿಮಾನದಲ್ಲಿದ್ದ ತರಬೇತುದಾರ ಮತ್ತು ತರಬೇತಿ ನಿರತ ಪೈಲಟ್ ಇಬ್ಬರೂ ಸಾವನ್ನಪ್ಪಿದ್ದಾರೆ. ಸದ್ಯ ಅಪಘಾತಕ್ಕೆ ನಿಖರ ಕಾರಣ ಪತ್ತೆಹಚ್ಚಲು ತನಿಖೆಗೆ ಆದೇಶಿಸಲಾಗಿದೆ. ಪಿಲಾಟಸ್ PC 7 Mk-II ವಿಮಾನವು ಒಂದೇ ಎಂಜಿನ್ ಒಳಗೊಂಡ ತರಬೇತಿ ವಿಮಾನವಾಗಿದೆ. IAF ಪೈಲಟ್‌ಗಳ ತರಬೇತಿಗಾಗಿ ಇದನ್ನು ಬಳಸಲಾಗುತ್ತದೆ. ಸ್ವಿಟ್ಜರ್‌ಲೆಂಡಿನ ಪಿಲಾಟಸ್ ಸಂಸ್ಥೆಯು ಇದನ್ನು ವಿನ್ಯಾಸಗೊಳಿಸಿ, ತಯಾರಿಸಲಿದೆ. ಈ ವಿಮಾನವನ್ನು ಏರೋಬ್ಯಾಟಿಕ್ಸ್, ಯುದ್ಧತಂತ್ರ ಮತ್ತು ರಾತ್ರಿ ಹಾರಾಟ ಸೇರಿದಂತೆ ಎಲ್ಲಾ ಮೂಲಭೂತ ತರಬೇತಿ ಕಾರ್ಯಗಳಿಗೆ ಬಳಸಲಾಗುತ್ತದೆ. ಸರಿಸುಮಾರು 1,330 ಕೆ.ಜಿ ತೂಕ ಹೊಂದಿರುತ್ತದೆ ಎಂದು ಅಂದಾಜಿಸಲಾಗಿದೆ.
ದೆಹಲಿ:ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಭಾರೀ ಹಿನ್ನಡೆಯಾಗಿದ್ದು ಅಂದಾಜು ಮೀರಿ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಪಕ್ಷ ಸೋತಿದ್ದು ಪಕ್ಷದ ಹಿರಿಯ ನಾಯಕರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ಬೆನ್ನಲ್ಲಿಯೇ ಸೋಲಿನ ಪರಾಮರ್ಶೆ ಆರಂಭವಾಗಿದೆ. ಸ್ವತಃ ಕಾಂಗ್ರೆಸ್‌ನಲ್ಲಿಯೇ ಪಕ್ಷದ ಕೆಲವೊಂದು ನಿರ್ಧಾರಗಳ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ ದೇಶದಲ್ಲಿ ಸನಾತನ ಧರ್ಮವನ್ನು ಸ್ವತಃ ಕಾಂಗ್ರೆಸ್ ವಿರೋಧಿಸಲು ನಿಂತಿದ್ದೇ ಈ ಸೋಲಿಗೆ ಕಾರಣ ಎಂದು ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಹೇಳಿದ್ದಾರೆ ಖಾಸಗಿ ವಾಹಿನಿಯೊಂದಿಗೆ ಮಾತನಾಡುವ ವೇಳೆ,ಈ ಮಾತುಗಳನ್ನ ಹೇಳಿದ್ದಾರೆ. ಮಹಾತ್ಮಾ ಗಾಂಧಿ ತೋರಿಸಿಕೊಟ್ಟಿದ್ದ ದಾರಿಯಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪಕ್ಷ, ಮಾರ್ಕ್ಸ್ ದಾರಿಯಲ್ಲಿ ಸಾಗಿದಾಗ ಇಂಥ ಫಲಿತಾಂಶಗಳು ಸಿಗುತ್ತವೆ ಎಂಧು ಆಚಾರ್ಯ ಪ್ರಮೋದ್ ಕಿಡಿ ಕಾರಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ನನ್ನನ್ನು ಸ್ಟಾರ್ ಕ್ಯಾಂಪೇನರ್ ಲಿಸ್ಟ್‌ನಲ್ಲಿ ಇರಿಸಿದ್ದಾಗ ಇಲ್ಲಿ ಸರ್ಕಾರ ರಚನೆ ಮಾಡಿದ್ದೆವು. ಆದರೆ, ಈ ಬಾರಿ ನಾನು ಈ ಪಟ್ಟಿಯಲ್ಲೇ ಇದ್ದಿರಲಿಲ್ಲ. ಇದರಿಂದಾಗಿ ಮೂರೂ ರಾಜ್ಯಗಳಲ್ಲಿ ಸೋಲು ಕಂಡಿದೆ. ಒಬ್ಬ…