Author: AIN Author

ಧಾರವಾಡ: ಡಿ.3 ಕಳೆದ ದಿನ ತಡ ರಾತ್ರಿ ಧಾರವಾಡದ ಕೊಪ್ಪದ ಕೇರಿ ಶಿವಾಲಯ ಬಳಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯ ವಿಡಿಯೋ ವೈರಲ್ ಆಗಿದೆ. ನಿನ್ನೆ ರಾತ್ರಿ ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ಓರ್ವ ವ್ಯಕ್ತಿ ಮಚ್ಚಿನಿಂದ ವ್ಯಕ್ತಿಯ ಮೇಲೆ ದಾಳಿ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ಸಹೋದರನಿಂದಲೇ ಹತ್ತೆಯಾಗಿರುವ ಶಂಕೆಯಾಗಿದೆ. ಈಗಾಗಲೇ ಹತ್ಯೆಯ ವಿಡಿಯೋ ಇಟ್ಟುಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ವ್ಯಕ್ತಿಯ ಬರ್ಬರ ಹತ್ಯೆ ಮಾಡಿದ್ದಾರೆ. ನಿಂಗಪ್ಪ ಹಡಪದ (60) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆಯಾಗಿದೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲು ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಉಪನಗರ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

Read More

ಕನ್ನಡದ ಸೂಪರ್ ಸ್ಟಾರ್ ಯಶ್ (Yash) ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗೆದ್ದು ಬೀಗಿದ್ದು ಆಗಿದೆ. ಇನ್ನೂ ಏನೇ ಇದ್ರೂ ಮುಂದಿನ ಚಿತ್ರದ ಬಗ್ಗೆ ಅನೌನ್ಸ್ ಮಾಡೊದೊಂದೇ ಬಾಕಿ. ಹೀಗಿರುವಾಗ ಅಭಿಮಾನಿಗಳ ನಿರೀಕ್ಷೆಯಂತೆ ಯಶ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಯಶ್ ಕಡೆಯಿಂದ ಮುಂದಿನ ಸಿನಿಮಾಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೆಜಿಎಫ್, ಕೆಜಿಎಫ್ 2 (KGF 2) ಸಕ್ಸಸ್ ಬಳಿಕ ಯಶ್ ಸೈಲೆಂಟ್ ಆಗಿ ಮುಂದಿನ ಸಿನಿಮಾಗೆ ಭರ್ಜರಿ ತಯಾರಿ ಮಾಡಿಕೊಳ್ತಾ ಇದ್ದರು. ಈಗ ಬಿಗ್ ಅಪ್‌ಡೇಟ್ ಸಿಕ್ಕಿದೆ. ‘ಲೋಡಿಂಗ್’ ಎಂಬ ಬರಹದ ಫೋಟೋವನ್ನ ಇನ್ಸ್ಟಾಗ್ರಾಂ ಮುಖಪುಟ ಬದಲಿಸಿದ್ದಾರೆ ಯಶ್. ಸಂಡೆ ಸಂಜೆ ಯಶ್ ಸಖತ್ ನ್ಯೂಸ್ ಕೊಟ್ಟಿದ್ದಾರೆ. ರಾಕಿಭಾಯ್ ಆಗಿ ಘರ್ಜಿಸಿದ ಮೇಲೆ ಯಶ್ 19 (Yash 19) ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಲೋಡಿಂಗ್ ಎಂಬ ಬರಹದ ಮೂಲಕ ಮುಂದಿನ ಚಿತ್ರದ ಬಗ್ಗೆ ಸುಳಿವು ನೀಡಿದ್ದಾರೆ. ಈ ಮೂಲಕ ‘ಯಶ್ 19’ ಸಿನಿಮಾಗೆ ಕೌಂಟ್ ಡೌನ್ ಶುರುವಾಗಿದೆ. ನಟ ಯಶ್…

Read More

ಬೆಂಗಳೂರು: ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಕಾಣೆಯಾಗಿದ್ದು, ಎರಡ್ಮೂರು ದಿನ ಕಳೆದರೂ ಸಹ ಅವರ ಪತ್ತೆಯೇ ಇಲ್ಲ.ಆದರೆ ಇದೀಗ ಅವರ ಕಾರು ಚಾಮರಾಜನಗರ ಜಿಲ್ಲೆಯ ರಾಮಾಪುರ ಗ್ರಾಮ ಬಳಿ ಪತ್ತೆಯಾಗಿದೆ. ಹೌದು, ಎರಡ್ಮೂರು ದಿನದಿಂದ ಕಾಣದ ಕಾರು ಇದೀಗ ಪತ್ತೆಯಾಗಿದ್ದು,ಕಾರಿನ ಟೈ ಲ್ಯಾಂಪ್ ಬಳಿ ರಕ್ತದ ಕಲೆ ಇದ್ದು, ಸ್ಥಳಕ್ಕೆ  ರಾಮನಗರ ಪೊಲೀಸ್ ತನಿಖಾ ತಂಡ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ವಿವರ:  ಮೂರು ದಿನಗಳ ಹಿಂದೆ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದಿಂದ ನಾಪತ್ತೆಯಾಗಿರುವ,ಮೆಗಾಸಿಟಿ ಯೋಜನೆಯ ನಿರ್ದೇಶಕ ಮಹಾದೇವಯ್ಯ (62) ಅವರಿಗೆ ಸಂಬಂಧಿಸಿ ಹಲವು ಅನುಮಾನಾಸ್ಪದ ಸುದ್ದಿಗಳು ಹರಿದಾಡುತ್ತಿವೆ. ಸಿ.ಪಿ. ಯೋಗೇಶ್ವರ್‌ ಅವರ ಬಾವನ ನಾಪತ್ತೆ ಪ್ರಕರಣವನ್ನು ರಾಮನಗರ ಎಸ್‌ಪಿ ಕಾರ್ತಿಕ್‌ ರೆಡ್ಡಿ ಅವರು ಗಂಭೀರವಾಗಿ ತೆಗೆದುಕೊಂಡು ತನಿಖೆಗಾಗಿ ನಾಲ್ಕು ವಿಶೇಷ ತಂಡವನ್ನು ರಚಿಸಿದ್ದರು. ಮಹದೇವಯ್ಯ ಪುತ್ರ ಪ್ರಶಾಂತ್ ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು. ಅವರ ಮೊಬೈಲ್‌‌ ಲೊಕೇಶನ್‌ ಸಿಕ್ಕರೆ ಪತ್ತೆ ಮಾಡಬಹುದು ಎಂಬ ನಿರೀಕ್ಷೆಯಲ್ಲಿ…

Read More

ಈ ವಾರ ಬಿಗ್ ಬಾಸ್ ಮನೆಯೊಳಗೆ (Bigg Boss Kannada 10) ಅಚ್ಚರಿಯೊಂದು ನಡೆದಿದೆ. ಸತತ ಹತ್ತು ವರ್ಷಗಳಿಂದ ಬಿಗ್ ಬಾಸ್ ಕನ್ನಡ ಶೋ ಅನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಬರುತ್ತಿರೋ ಸುದೀಪ್, ಇದೇ ಮೊದಲ ಬಾರಿಗೆ ತಮ್ಮ ವಿಶೇಷ ಅಧಿಕಾರವನ್ನು ಬಳಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅದು ಕನ್ನಡದ ಮೇಲಿನ ತಮ್ಮ ಅಭಿಮಾನಕ್ಕೆ ಎನ್ನುವುದು ಇನ್ನೂ ವಿಶೇಷ. ಪ್ರತಿ ವಾರದಂತೆ ಈ ವಾರವೂ ದೊಡ್ಮನೆಯಿಂದ ಒಬ್ಬರು ಎಲಿಮಿನೇಟ್ ಆಗಬೇಕಿತ್ತು. ನಂಬಲರ್ಹ ಮೂಲಗಳ ಪ್ರಕಾರ, ಎಲಿಮಿನೇಷನ್ ತೂಗುಕತ್ತಿಯು ಈ ವಾರ ಸ್ನೇಹಿತ್ ಮತ್ತು ಮೈಕಲ್ ಮೇಲೆ ತೂಗುತ್ತಿತ್ತು. ಎಲ್ಲರ ಲೆಕ್ಕಾಚಾರ ಪ್ರಕಾರ ಈ ವಾರ ಸ್ನೇಹಿತ್ (Snehith Gowda) ಬಿಗ್ ಬಾಸ್ ಮನೆಯಿಂದ ಆಚೆ ಬರ್ತಾರೆ ಎಂದೇ ನಂಬಲಾಗಿತ್ತು. ಆದರೆ, ಸ್ನೇಹಿತ್ ಎಲಿಮಿನೇಷನ್‌ನಿಂದ ಬಚಾವ್ ಆಗಿದ್ದಾರೆ ಎನ್ನಲಾಗಿತ್ತಿದೆ. ಸ್ನೇಹಿತ್ ಬಚಾವ್ ಆಗಿದ್ದರಿಂದ ಮೈಕಲ್ ಮನೆಯಿಂದ ಆಚೆ ಬರೋದು ಅನಿವಾರ್ಯವಾಗಿತ್ತು ಈ ಸಮಯದಲ್ಲಿ ಸುದೀಪ್ ತಮ್ಮ. ವಿಶೇಷ ಅಧಿಕಾರ ಬಳಸಿದ್ದಾರೆ ಎನ್ನುವ ಮಾಹಿತಿ ತೇಲಿ ಬಂದಿದೆ. ಈ ವಿಶೇಷ…

Read More

ಬೆಳಗಾವಿ: ಈ ಭಾರಿಯ ಬೆಳಗಾವಿ ಅಧಿವೇಶನ ರಾಜಕೀಯ ನಾಯಕರ ವಾಗ್ಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳಾದ ಬಿಜೆಪಿ- ಜೆಡಿಎಸ್ ಜಂಟಿ ಯಾಗಿ ಸಮರಕ್ಕಿಳಿದಿವೆ. ಕೈ ಸರ್ಕಾರದ ವಿರುದ್ದ ವಾಗ್ಯುದ್ಧಕ್ಕೆ ಕಮಲಾಧಿಪತಿಗಳು ಬ್ರಹ್ಮಸ್ತ್ರಗಳನ್ನೇ ತಮ್ಮ ಬತ್ತಳಿಕೆಯಲ್ಲಿಟ್ಟುಕೊಂಡಿವೆ. ಬಿಜೆಪಿ- ಜೆಡಿಎಸ್ ಬಳಿ ಇರುವ ಬ್ರಹ್ಮಾಸ್ತ್ರಗಳು… * ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ * ಸರ್ಕಾರದ ಪಂಚ ಗ್ಯಾರಂಟಿಗಳ ವೈಪಲ್ಯ * ಅಧಿಕಾರಿಗಳ ವರ್ಗಾವಣೆ ದಂಧೆ ಆರೋಪ * IT ದಾಳಿಯಲ್ಲಿ ಗುತ್ತಿಗೆ ದಾರರ ಮನೆಯಲ್ಲಿ ಹಣ ಸಿಕ್ಕ ಪ್ರಕರಣ * ಡಿಸಿಎಂ ಡಿಕೆಶಿ CBI ಕೇಸ್ ವಾಪಸ್ ಪಡೆದ ಪ್ರಕರಣ * ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲ ಆರೋಪ * ಜಾತಿಗಣತಿ ವರದಿ ಜಾರಿ ವಾರ್ * ಸಚಿವ ಜಮೀರ್ ಅಹ್ಮದ್ ಸ್ಪೀಕರ್ ವಿಚಾರವಾಗ ಹಿಂದೂ ವಿರೋಧಿ ಹೇಳಿಕೆ * ಅಭಿವೃದ್ಧಿ ಕುಂಟಿತ, ಶಾಸಕರ ಅನುಧಾನ ತಾರತಮ್ಯ ಇನ್ನು ವಿಪಕ್ಷ ನಾಯಕ ಅಶೋಕ್, ಮಾಜಿ ಸಿಎಂ ಕುಮಾರಸ್ವಾಮಿ ಒಟ್ಟಾಗಿ ಸರ್ಕಾರ…

Read More

ಡೆಡ್ಲಿ ಸೋಮ ಖ್ಯಾತಿಯ ಆದಿತ್ಯ (Aditya) ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ (Kishor Megalamane) ನಿರ್ದೇಶನದ ಕಾಂಗರೂ (Kangaroo) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯ ಮಾತಿನ ಜೋಡಣೆ (ಡಬ್ಬಿಂಗ್) ನಡೆಯುತ್ತಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ  ಹೊಂದಿರುವ ಈ ಚಿತ್ರದಲ್ಲಿ ಆದಿತ್ಯ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಸಾಕಷ್ಟು ಬಂದಿದೆ. ಆದರೆ ನಮ್ಮ ಚಿತ್ರ ಸ್ವಲ್ಪ ವಿಭಿನ್ನ. ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್ ಗಾಗಿ ಮಾಡಿರುವ ಕಥೆವಿದು. ಇನ್ನು ಕಾಂಗರೂ ಶೀರ್ಷಿಕೆ ಕುರಿತು ಹೇಳುವುದಾದರೆ, ಕಾಂಗರೂ ಒಂದು ಮುಗ್ಧ ಪ್ರಾಣಿ. ಅದು ಯಾರಿಗೂ ಏನು ಮಾಡುವುದಿಲ್ಲ. ಮತ್ತು ಈ ಕಾಂಗರೂ ತನ್ನ ಮರಿಗೆ ಜನ್ಮ ನೀಡಿದ ನಂತರ ಅದರ ಹೊಟ್ಟೆಯ ಮೇಲ್ಬಾಗದಲ್ಲಿ ಇರುವ ಚೀಲದಲ್ಲಿ ಆ ಮರಿಯನ್ನು ಇಟ್ಟು ಕಾಪಾಡುತ್ತದೆ,…

Read More

ಬೆಂಗಳೂರು: ಬೆಳ್ಳಂ ಬೆಳಗ್ಗೆ ಕಾರ್ ಮತ್ತು ಬಿಎಂಟಿಸಿ ಬಸ್ ನಡುವೆ ನಡೆದ ಅಪಘಾತ ನಾಗರಬಾವಿ ರಿಂಗ್ ರೋಡ್ ನಲ್ಲಿ ಘಟನೆಯಾಗಿದ್ದು ಅಪಘಾತದಲ್ಲಿ ಹೊತ್ತಿ  ಉರಿದ ಕಾರು ಪ್ರಯಾಣಿಕರನ್ನ ಹತ್ತಿಸಿಕೊಳ್ಳಲು ನಿಂತಿದ್ದ ಬಿಎಂಟಿಸಿ ಬಸ್ ಈ ವೇಳೆ ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದ i20 ಕಾರು ಆ ಡಿಕ್ಕಿ ಹೊಡೆದ ರಭಸಕ್ಕೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಆಗ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಾಣಾಪಾಯದಿಂದ ಪಾರಾದ ಚಾಲಕ ಬೆಂಕಿ ಕೆನ್ನಾಲಿಗೆಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಕಾರು ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲಕ

Read More

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವ ವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಮಾತನಾಡಿದ ಅವರು, ಬಿಜೆಪಿಯಲ್ಲಿ ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡಿಲ್ಲ. ದಕ್ಷಿಣ ಕರ್ನಾಟಕದವರ ಗುಲಾಮರು ನಾವಲ್ಲ ಎಂದು ಬಿಜೆಪಿ‌ ಅಧ್ಯಕ್ಷ ಸ್ಥಾನ ಹಾಗೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. https://ainlivenews.com/congress-president-has-called-an-important-meeting-on-december-6/#google_vignette ನರೇಂದ್ರ ‌ಮೋದಿ ನಾಯಕತ್ವ ಇಡೀ ದೇಶದ ಜನರು ಒಪ್ಪಿಕೊಂಡಿದ್ದಾರೆ. ನರೇಂದ್ರ ‌ಮೋದಿ ದೇಶಕ್ಕೆ ಗ್ಯಾರಂಟಿ ಇರುವುದಿಂದ ಗೆಲುವುವಾಗಿದೆ. ಹೊಂದಾಣಿಕೆ ‌ಇಲ್ಲದ ರಾಜಕಾರಣ, ‌ಹಿಂದುತ್ವ ಅಭಿವೃದ್ಧಿ ಕಾರಣವಾಗಿದೆ ಎಂದರು. ಕುಟುಂಬ ರಾಜಕಾರಣ ಕಿತ್ತು ಹಾಕಬೇಕು. ಇಡೀ ದೇಶದಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗುತ್ತದೆ. ವಂಶವಾದವನ್ನು ನಿರ್ಮೂಲನೆ ಮಾಡುವುದೇ ನನ್ನ ಗುರಿ. ಇನ್ನು ಮೇಲೆ ಬದಲಾವಣೆ ಆಗುತ್ತದೆ. ಲೋಕಸಭೆ ಚುನಾವಣೆ ಬಳಿಕ ಬದಲಾವಣೆ! ಇನ್ನು ಇದೇ ಸಂದರ್ಭದಲ್ಲಿ ‌ಲೋಕಸಭೆ ಚುನಾವಣೆ ಬಳಿಕ ಬದಲಾವಣೆ ಆಗಲಿದೆ ಎಂದು ಯತ್ನಾಳ್ ಭವಿಷ್ಯ ‌ನುಡಿದಿದ್ದಾರೆ. ಪ್ರಾಮಾಣಿಕರು ಹಾಗೂ…

Read More

ಬೆಳಗಾವಿ: ವಿಧಾನಸಭೆ ಸ್ಪೀಕರ್ ಯುಟಿ ಖಾದರ್, ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಜಂಟಿಯಾಗಿ ಸುವರ್ಣ ಸೌಧದಲ್ಲಿ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ ಆಧಿಕಾರಿಗಳಿಗೆ ಸಲಹೆ ಸೂಚನೆ ಕೊಟ್ರು. ಇದಾದ್ಮೇಲೆ‌ ಮಾತನಾಡಿದ ಸ್ಪೀಕರ್ ಯುಟಿ ಖಾದರ್ ಅಧಿವೇಶನಕ್ಕೆ ಬರುವ ಶಾಸಕರು, ಅಧಿಕಾರಿಗಳು, ಪ್ರತ್ರಕರ್ತರು ಸೇರಿದಂತೆ ಎಲ್ಲರಿಗೂ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲಾಗಿದೆ. https://ainlivenews.com/congress-president-has-called-an-important-meeting-on-december-6/#google_vignette ಜನಸಾಮಾನ್ಯರಿಗೂ ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ ಅಧಿವೇಶನಕ್ಕೆ ಮೊದಲು ಬರುವ ಶಾಸಕರಿಗೆ ಬಹುಮಾನ ಕೊಡಲಾಗುತ್ತದೆ, ರಾಜ್ಯ,ರಾಷ್ಟದ ಚಿಹ್ನೆ ಅಳವಡಿಸಿರುವ ವಿಶೇಷ ಟೀ ಕಪ್ ಕೊಡಲಾಗುವುದು. ಕರ್ನಾಟಕ ಗೂಡ್ಸ್ ಅಂಡ್ ಸರ್ವಿಸ್ , ಸೇರಿದಂತೆ 3 ಬಿಲ್ ಗಳು ಈಗಾಗಲೇ ಬಂದಿದಾವೆ ಇನ್ನು  5-7 ಬಿಲ್ ಗಳು ಬರಬಹುದು. 2,507 ಪ್ರಶ್ನೆಗಳು ಈಗಾಗ್ಲೆ ಬಂದಿವೆ ರಾಜ್ಯದ ಸಮಸ್ಯೆಗಳು ಸೇರಿದಂತೆ ಹೆಚ್ಚು ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಅವಕಾಶ ಕೊಡ್ತೀವಿ ಎಂದ್ರು..

Read More

ಬೆಂಗಳೂರು: ಅವಧಿ ಮೀರಿ ಹೋಟೆಲ್ ತೆರೆದಿದ್ದನ್ನು ಪ್ರಶ್ನಿಸಿದ್ದ ಮಹಿಳಾ ಪಿಎಸ್‌ಐ ಜೊತೆ ಅನುಚಿತವಾಗಿ ವರ್ತಿಸಿ ಜೀವ ಬೆದರಿಕೆಯೊಡ್ಡಿದ್ದ ಮೂವರು ಆರೋಪಿಗಳನ್ನು ಅನ್ನಪೂರ್ಣೆಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುದ್ದಿನಪಾಳ್ಯ ಮುಖ್ಯ ರಸ್ತೆಯಲ್ಲಿರುವ ಅಶ್ವ ಹೋಟೆಲ್ ಮಾಲೀಕ ಸಂಜೀವ್ ಗೌಡ, ಕ್ಯಾಷಿಯರ್ ಸಂದೀಪ್ ಕುಮಾರ್ ಹಾಗೂ ಹೇಮಂತ್ ಬಂಧಿತರು.ಮೂವರು ಮಹಿಳಾ ಪಿಎಸ್‌ಐ ಪ್ರತಿಮಾ ಅವರಿಗೆ ಜೀವ ಬೆದರಿಕೆಯೊಡ್ಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ. ಡಿ. 1ರಂದು ರಾತ್ರಿ ಪಿಎಸ್‌ಐ ಪ್ರತಿಮಾ ಗಸ್ತಿನಲ್ಲಿದ್ದರು. ತಡರಾತ್ರಿ 1:30 ಗಂಟೆಯಾದರೂ ಹೋಟೆಲ್ ತೆರೆದಿತ್ತು. ಅದನ್ನು ಪ್ರಶ್ನಿಸಿದ್ದ ಪ್ರತಿಮಾ, ಹೋಟೆಲ್ ಬಂದ್ ಮಾಡಲು ಸೂಚಿಸಿದ್ದರು. ಅದಕ್ಕೆ ಒಪ್ಪದ ಮಾಲೀಕ ಹಾಗೂ ಇತರರು, ’24 ಗಂಟೆಯೂ ಹೋಟೆಲ್ ತೆರೆಯಲು ಅನುಮತಿ ಇದೆ’ ಎಂದು ವಾದಿಸಿದ್ದರು. ಒತ್ತಾಯದಿಂದ ಹೋಟೆಲ್ ಬಂದ್ ಮಾಡಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲವೆಂದು ಬೆದರಿಕೆಯೊಡ್ಡಿದ್ದರು.ವಿಷಯ ತಿಳಿದು ಸ್ಥಳಕ್ಕೆ ಹೋಗಿದ್ದ ಹೆಚ್ಚುವರಿ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದೆ. ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

Read More