ಬೆಂಗಳೂರು:- ಯಾವ ಕಾರಣಕ್ಕೂ ಮುಖ್ಯಮಂತ್ರಿ ಕುರ್ಚಿ ಖಾಲಿಯಾಗುವುದೇ ಇಲ್ಲ ಎಂದು ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು ಇರಬಹುದು. ಅದನ್ನ ತಪ್ಪು ಎಂದು ಹೇಳುವುದಿಲ್ಲ. ಆದರೆ, ಮುಖ್ಯಮಂತ್ರಿ ಕುರ್ಚಿಯೇ ಖಾಲಿ ಇಲ್ಲವಲ್ಲ. ಯಾವ ಕಾರಣಕ್ಕೂ ಮುಖ್ಯಮಂತ್ರಿ ಖುರ್ಚಿ ಖಾಲಿಯಾಗುವುದೇ ಇಲ್ಲ ಎಂದರು. ಈಗ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ಹೀಗಿರುವಾಗ ಯಾಕೆ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ಉದ್ಭವಾಗುತ್ತದೆ’ ಎಂದರು. ‘ಸಿದ್ದರಾಮಯ್ಯಗೆ ಮೊದಲಿದ್ದ ಸ್ವಾತಂತ್ರ್ಯ ಈಗ ಇದ್ದಂತಿಲ್ಲ, 2013 ಸುವರ್ಣಯುಗವಾಗಿತ್ತು ಎಂಬ ಮಾಜಿ ಸಚಿವ ಆಂಜನೇಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಅವರಿಗೆ ಯಾಕೆ ಸ್ವಾತಂತ್ರ್ಯ ಇಲ್ಲ. ಅವರು ಯಾವಾಗಲೂ ಸ್ವಾತಂತ್ರ್ಯ ಇರುವ ವ್ಯಕ್ತಿ. ಅವರು ಎಂದೂ ಸ್ವಾತಂತ್ರ್ಯ ಕಳೆದುಕೊಂಡು ಆಡಳಿತ ನಡೆಸುವುದಿಲ್ಲ. ಅವರ ಕೈ ಕಟ್ಟಿ ಹಾಕಿದಿದ್ದರೆ, ಸಹಿ ಯಾಕೆ ಹಾಕುತ್ತಾರೆ’ ಎಂದು ಪ್ರಶ್ನಿಸಿದರು. ಕಾಂಗ್ರೆಸ್‌ನ ಎಲ್ಲಾ ಅವಧಿಯೂ ಸುವರ್ಣಯುಗವೇ. ಬಡವರು, ದೀನ ದಲಿತರು, ಜನಸಾಮಾನ್ಯರಿಗೆ ಸುವರ್ಣಯುಗವೇ. ಅದರಲ್ಲೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹೆಚ್ಚೆಚ್ಚು ಒಳ್ಳೆಯ…
Author: AIN Author
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಆನೆಗುಂದಿ ಗ್ರಾಮದ ಜಮೀನೊಂದರಲ್ಲಿ ಅರಿಶಿಣ ಬೆಳೆಯ ಮಧ್ಯೆ ಬೆಳೆಯಲಾಗಿದ್ದ ಗಾಂಜಾ ಗಿಡಗಳನ್ನು ಹನೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹನೂರು ತಾಲೂಕಿನ ಆನೆಗುಂದಿ ಗ್ರಾಮದ ಎಸ್ ಬಾಲು (65) ಹಾಗೂ ಇವರ ಮಗ ಮಹಾಲಿಂಗ (35) ರನ್ನು ಪೊಲೀಸರು ಬಂಧಿಸಿದ್ದಾರೆ. ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಆನೆಗುಂದಿ ಗ್ರಾಮದ ಜಮೀನೊಂದರಲ್ಲಿ ಅಕ್ರಮ ಗಾಂಜಾ ಗಿಡಗಳನ್ನು ಬೆಳೆದಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಹನೂರು ಪೊಲೀಸರು ದಾಳಿ ನಡೆಸಿ ಅರಿಶಿಣ ಬೆಳೆಯ ಮಧ್ಯೆ ಬೆಳೆಯಲಾಗಿದ್ದ ಸುಮಾರು 2 ಲಕ್ಷ ಮೌಲ್ಯದ 95 ಗಾಂಜಾ (34 ಕೆಜಿ) ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಾದ ಬಾಲು ಹಾಗೂ ಮಹಾಲಿಂಗರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದಾವಣಗೆರೆ: ಬಿಜೆಪಿ ಬಿಟ್ಟು ಶಾಸಕರು, ಮಾಜಿ ಶಾಸಕರು, ಮುಖಂಡರು ಯಾರೂ ಕಾಂಗ್ರೆಸ್ ಗೆ ಹೋಗುವುದಿಲ್ಲ. ಬಿ. ವೈ. ವಿಜಯೇಂದ್ರ ಯಡಿಯೂರಪ್ಪ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಎಲ್ಲವೂ ಸರಿ ಹೋಗುತ್ತಿದೆ. ಅಸಮಾಧಾನಿತರ ಜೊತೆ ವಿಜಯೇಂದ್ರ ಅವರು ಮಾತುಕತೆ ನಡೆಸಿದ್ದು, ಹಾಗಾಗಿ, ಯಾರೂ ಹೋಗುವುದಿಲ್ಲ ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಛಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ ಗೆ ವಲಸೆ ಹೋಗುತ್ತಾರೆ ಎಂಬ ವದಂತಿ ಹಬ್ಬಿತ್ತು. ಆದ್ರೆ, ಈಗ ಎಲ್ಲವೂ ಶಮನವಾಗಿಲ್ಲ. ನನಗೂ ಪಕ್ಷದ ಕೆಲ ವಿಚಾರಗಳಿಗೆ ಸಂಬಂಧಿಸಿದಂತೆ ಅಸಮಾಧಾನ ಇತ್ತು. ಹಾಗೆಂದ ಮಾತ್ರಕ್ಕೆ ಬಿಜೆಪಿ ಬಿಡ್ತೀನಿ ಎನ್ನುವುದು ಸರಿಯಲ್ಲ. ನಾನು ಸಹ ಎಲ್ಲಿಯೂ ಕಾಂಗ್ರೆಸ್ ಗೆ ಹೋಗುತ್ತೀನಿ ಎಂದು ಹೇಳಿಲ್ಲ. ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪರ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸಬೇಕು ಹಾಗೂ ಬಿ. ವೈ. ವಿಜಯೇಂದ್ರ ರಾಜ್ಯ ಘಟಕದ ಅಧ್ಯಕ್ಷರಾಗಬೇಕು ಎಂಬ ಅಪೇಕ್ಷೆ ಇತ್ತು. ಅದು ಈಡೇರಿದೆ.…
ರಾಯಚೂರು,ಡಿ.2-ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಚ್ಚಳ ಬಹುಮತ ಸಿಗಲಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.ಅವರಿಂದು ಸುದ್ದಿಗಾರರೊಂದಿಗೆ ಮಾತನಾಡಿ ತೆಲಂಗಾಣದಲ್ಲಿ ಮ್ಯಾಜಿಕ್ ನಂಬರ್ ತಲುಪುತ್ತೇವೆ ಯಾವುದೆ ಆಪರೇಶನ್ ಅಥವಾ ಕುದುರೆ ವ್ಯಾಪಾರ ನಡೆಯುವುದಿಲ್ಲವೆಂದ ಅವರು ಬಿಆರ್ ಎಸ್ ಪಕ್ಷ ನೆಲಕ್ಕಚ್ಚಲಿದೆ ಎಂದರು. ಬಿಜೆಪಿಯವರು ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದಿದ್ದರು ಆದರೆ ಈಗ ಬಿಜೆಪಿ ಮುಕ್ತ ದಕ್ಷಿಣ ಭಾರತ ಆಗಲಿದೆ ನಾವು ಆ ರೀತಿ ಹೇಳುವುದಿಲ್ಲ ಕಾಂಗ್ರೆಸ್ ಪಕ್ಷ ಪ್ರಜಾ ಪ್ರಭುತ್ವದಲ್ಲಿ ವಿಶ್ವಾಸವಿಟ್ಟಿದೆ ವಿರೋಧ ಪಕ್ಷಗಳು ಇರಬೇಕು ಎನ್ನುತ್ತೇವೆ ದಮನಕಾರಿ ರಾಜಕಾರಣದಲ್ಲಿ ವಿಶ್ವಾಸವಿರಿಸಿಲ್ಲವೆಂದರು. ಪಂಚ ರಾಜ್ಯಗಳ ಚುನಾವಣೆಯಲ್ಲಿ ರಾಜಸ್ಥಾನ, ಛತ್ತೀಸಗಡ ಮತ್ತಿತರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರ ಬೆಂಬಲ ವ್ಯಕ್ತವಾಗುತ್ತಿದೆ ಎಂದರು. ಬೆಂಗಳೂರಿನಲ್ಲಿ ಶಾಲೆಗಳಲ್ಲಿ ಹುಸಿ ಬಾಂಬ್ ಕರೆ ಬಗ್ಗೆ ಗೃಹ ಇಲಾಖೆ ತನಿಖೆ ನಡೆಸಲಿದೆ ಯಾವುದೇ ವೈಫಲ್ಯ ಸರ್ಕಾರದಿಂದ ನಡೆದಿಲ್ಲವೆಂದು ಹೇಳಿದರು.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಿಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಇಂದಿನಿಂದ ಸಫಾರಿ ಶುರುವಾಗಿದ್ದು ಸ್ಥಳೀಯ ಶಾಸಕ ಎಂ.ಆರ್. ಮಂಜುನಾಥ್ ರಿಂದ ಚಾಲನೆ ದೊರಕಿತು. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗ ವ್ಯಾಪ್ತಿಯ ಪಿಜಿ ಪಾಳ್ಯ ವನ್ಯಜೀವಿ ವಲಯದ ಸಫಾರಿಗೆ ಲೊಕ್ಕನಹಳ್ಳಿ ಬಳಿ ಇಂದು ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಶಾಸಕರು ಮಲೆ ಮಹದೇಶ್ವರ ವನ್ಯಜೀವಿ ವಿಭಾಗ ವ್ಯಾಪ್ತಿಯ ಪಿಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಸಫಾರಿ ಆರಂಭವಾಗಿರುವುದರಿಂದ ಪ್ರವಾಸೋದ್ಯಮ ಅಭಿವೃದ್ದಿಗೆ ಹೆಚ್ಚಿನ ಅವಕಾಶವಾಗಲಿದೆ. ಕೊಳ್ಳೇಗಾಲ ಪಟ್ಟಣದಿಂದ ಸಫಾರಿ ಪ್ರದೇಶಕ್ಕೆ 24 ಕಿ.ಮೀ ದೂರವಿದೆ. ಮೈಸೂರಿನಿಂದ ಪಿಜಿ ಪಾಳ್ಯಕ್ಕೆ 90 ಕಿ.ಮೀ ಅಂತರ ವಿರುವುದರಿಂದ ಪ್ರವಾಸಿಗರು ಸಫಾರಿಗೆ ಬರಲು ಅನುಕೂಲವಾಗಲಿದೆ ಎಂದರು. ಹನೂರು ಭಾಗದಲ್ಲಿ ಗುಂಡಾಲ್ ಜಲಾಶಯ, ಇನ್ನಿತರ ಪ್ರವಾಸಿ ತಾಣಗಳನ್ನು ಪ್ರವಾಸಿಗರು ವೀಕ್ಷಿಸಬಹುದಾಗಿದೆ. ಈ ಭಾಗದ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವುದರಿಂದ ಸ್ಥಳೀಯರಿಗೆ…
ಹುಬ್ಬಳ್ಳಿ: ಬೆಂಗಳೂರಿನಲ್ಲಿ ಶಾಲೆಗಳಿಗೆ ಬಾಂಬ್ ಸುದ್ದಿ ಹುಸಿ ಎಂಬುದು ಸ್ಪಷ್ಟವಾಗಿದೆ. ಬಾಂಬ್ ಸ್ಫೋಟವೇನು ಆಗಿಲ್ಲ. ಇಂತಹ ಕರೆಗಳು ಬರುತ್ತವೆ. ಬಾಂಬ್ ಕರೆ ಹುಸಿ ಎಂದ ಬಳಿಕವೂ ಆ ವಿಷಯವನ್ನೇ ಹಿಡಿದು ಜಗ್ಗಾಡುವುದು ಯಾಕೆ ಎಂದು ಸಚಿವ ಸತೀಶ ಜಾರಕಿಹೊಳಿ ಪ್ರಶ್ನಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏನು ಆಗಿಲ್ಲ ಅಂತಾ ನಿನ್ನೆಯೇ ಸ್ಪಷ್ಟವಾಗಿದೆ. ಅದ್ಯಾವುದೋ ಒಂದು ವಿಷಯಕ್ಕೆ ನಾವು ಇಷ್ಟೆಲ್ಲಾ ಸಮಯ ವ್ಯರ್ಥ ಮಾಡಿದರೆ ಹೇಗೆ? ಅದಕ್ಕೆ ಸರ್ಕಾರ, ಪೊಲೀಸ್ ಇಲಾಖೆ ಇದೆ. ಅದನ್ನು ತನಿಖೆ ಮಾಡಿಯೇ ಮಾಡುತ್ತಾರೆ. ಬೇರೆ ಸಮಸ್ಯೆಗಳು ಸಾಕಷ್ಟಿವೆ. ಇಂತಹ ವಿಷಯಗಳ ಬಗ್ಗೆ ಅನಗತ್ಯ ಭೀತಿ ಹುಟ್ಟಿಸಿದರೆ ಜನ ಗೊಂದಲಕ್ಕೆ ಸಿಲುಕುತ್ತಾರೆ ಎಂದರು. ಲೋಕಸಭಾ ಚುನಾವಣೆ ಸಿದ್ಧತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಮ್ಮ ಪಕ್ಷದಿಂದ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಕಳುಹಿಸಿದ ನಂತರ ಅದನ್ನು ಹೈಕಮಾಂಡ್ ಅಂತಿಮಗೊಳಿಸುತ್ತದೆ ಎಂದರು. ಬೆಳಗಾವಿಯಲ್ಲಿನ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ, ಬರಗಾಲದ ಚರ್ಚೆ ಆಗುತ್ತದೆ. ಶಾಸಕರು ತಮ್ಮ…
ರಾಯಚೂರು: ನಗರದ ಸುಪರ್ ಮಾರ್ಕೆಟ್ ಬಳಿ ಸ್ವಾಗತ ಕಮಾನು ನಿರ್ಮಾಣ ವಿವಾದ ಬಗ್ಗೆ ಜಿಲ್ಲಾಡಳಿತದಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ ಯಾವುದೆ ಕಾರಣಕ್ಕೂ ಕೋಮು ಸೌಹಾರ್ದತೆ ಕದಡಲು ಬಿಡುವುದಿಲ್ಲವೆಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು. ಅವರಿಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸ್ವಾಗತ ಕಮಾನು ನಿರ್ಮಾಣ ಬಗ್ಗೆ ವಿವಾದ ನಡೆದಿದ್ದು ಈ ಬಗ್ಗೆ ಜಿಲ್ಲಾಡಳಿತ ಮತ್ತು ನಗರಸಭೆಯಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆಂದ ಅವರು ಶಾಂತಿ ಸುವ್ಯವಸ್ಥೆ ಹದಗೆಡದಂತೆ ಸರ್ಕಾರ ಎಚ್ಚರಕೆ ವಹಿಸಲಿದ್ದು ಯಾವುದೆ ಅನಾಹುತ ಆಗಲು ಬಿಡುವುದಿಲ್ಲ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದರು.
ಧಾರವಾಡ: ನಾವು ಕಷ್ಟಪಟ್ಟ ಕಬ್ಬಿನ ಬೆಳೆಯನ್ನು ನಮ್ಮಗೆ ಬೇಕಾದ ಸಕ್ಕರೆ ಕಂಪನಿಗಳಿಗೆ ಮಾರಾಟ ಮಾಡಲು ಅನುಮತಿ ನೀಡಬೇಕು ಎಂದು ಅಗ್ರಹಿಸಿ, ಧಾರವಾಡದಲ್ಲಿ ಅಳ್ಳಾವಾರ ಕಬ್ಬು ಬೆಳೆದ ರೈತರು ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡರು. ಸುಮಾರು ಮೂವತೈದಕ್ಕೂ ಹೆಚ್ಚು ರೈತರು ಜಿಲ್ಲಾಧಿಕಾರಿ ಕಚೇರಿಗೆ ಬಂದು, ತಮ್ಮ ಬೇಡಿಕೆ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾರಿಸಿ ಮನವಿ ಮಾಡಿಕೊಂಡರು. ಈಗಾಗಲೇ ಕಡಿಮೆ ಮಳೆ ಮತ್ತು ನೀರಿನ ಕೊರತೆಯಿಂದಾಗಿ ಕಬ್ಬಿನ ಬೆಳೆಯಲ್ಲಿ ಕುಂಠಿತವಾಗಿದೆವಾಗಿ ನಮ್ಮ ಭಾಗದ ಕಬ್ಬು ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ಜೊತೆಗೆ ಅಳ್ಳಾವಾರ ಗ್ರಾಮಗಳಲ್ಲಿನ ಕಬ್ಬಿನ ಬೆಳೆಯನ್ನು ಇಐಡಿ ಪ್ಯಾರಿ ಸಕ್ಕರೆ ಪ್ಯಾಕ್ಟರಿಗೆ ಹಂಚಿಕೆ ಮಾಡಲಾಗಿದೆ. ಪ್ರಸ್ತುತ ಇಐಡಿ ಪ್ಯಾರಿ ಫ್ಯಾಕ್ಟರಿ ರೈತರ ಜೊತೆಗೆ ದ್ವಿಪಕ್ಷೀಯ ಯಾವುದೇ ಒಡಂಬಡಿಕೆ ಮಾಡಿಕೊಂಡಿಲ್ಲ. ಹಾಗಾಗಿ ನಾವೆಲ್ಲರೂ ಕಳೆದ 20 ವರ್ಷಗಳಿಂದ ನಮ್ಮಗೆ ಬೇಕಾದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬನ್ನು ಕಳುಹಿಸುತ್ತಾ ಬಂದಿದ್ದೇವೆ. ಇಐಡಿ ಪ್ಯಾರಿ ಸಕ್ಕರೆ ಫ್ಯಾಕ್ಟರಿಯ ಕೆಲವು ಕ್ರಮಗಳು ರೈತರಿಗೆ ಸರಿ ಹೋಗುತ್ತಿಲ್ಲ. ಈ ಫ್ಯಾಕ್ಟರಿಯಲ್ಲಿ ನಮ್ಮ ಕಬ್ಬಿಗೆ ಬಿಲ್ ಕಡಿಮೆ…
ಬೆಂಗಳೂರು:– ಕಾಂತರಾಜು ವರದಿ ಸ್ವೀಕರಿಸಲು ಸರ್ಕಾರ ಸಿದ್ಧ ಇದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿಯನ್ನು ಸರ್ಕಾರ ಸ್ವೀಕಾರ ಮಾಡಲಿದ್ದು, ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರದಿ ಸ್ವೀಕಾರ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ವರದಿ ಸಲ್ಲಿಕೆಯಾಗಿ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆದು, ಆ ಬಳಿಕ ನಿರ್ಧಾರ ಮಾಡಲಾಗುವುದು. ವರದಿಯಲ್ಲೇನಿದೆ ಎಂದು ಯಾರಿಗೂ ಗೊತ್ತಿಲ್ಲ. ವರದಿ ಬಗ್ಗೆ ಮೊದಲೇ ಕಲ್ಪನೆ ಮಾಡಿಕೊಳ್ಳುವುದು ಬೇಡ ಎಂದರು. https://ainlivenews.com/witchcraft-in-the-prestigious-karnataka-university-professors-chamber/ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿಸಿ ಸಮೀಕ್ಷೆ ಮಾಡಿಸಿರುವ ವರದಿಯನ್ನು ಸ್ವೀಕಾರ ಮಾಡಲ್ಲ ಎನ್ನಲು ಸಾಧ್ಯವೇ?, ಸರ್ಕಾರದಲ್ಲಿ ಸ್ವೀಕಾರ ಮಾಡಲಾಗಿರುವ ಇತರೆ ಹತ್ತಾರು ವರದಿಗಳಿವೆ. ಯಾವುದೇ ವರದಿಯನ್ನು ಸರ್ಕಾರ ಸ್ವೀಕಾರ ಮಾಡಲಿದೆ. ಆ ಬಗ್ಗೆ ಚರ್ಚೆ ನಡೆದು ನಿರ್ಧಾರ ಆಗಲಿದೆ. ವರದಿ ಸ್ವೀಕಾರವಾಗದೆ ಕಾಂತರಾಜು ವರದಿ ಬಗ್ಗೆ ವಿರೋಧ ವ್ಯಕ್ತಪಡಿಸುವುದು ಸೂಕ್ತವಲ್ಲ ಎಂದು ತಿಳಿಸಿದರು.
ಬೆಂಗಳೂರು:– ಯಾವ ಶಾಲೆಗಳಲ್ಲೂ ಬಾಂಬ್ ಇರಲು ಸಾಧ್ಯವಿಲ್ಲ ನನ್ನ ನಂಬಿಕೆ ಎಂದು ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೈಜೈಟ್ಸ್ @ ಬೀಬಲ್ ಡಾಟ್ ಕಾಂ ಅನ್ನೋ ಮೇಲ್ ಐಡಿಯಿಂದ ಮೆಸೇಜ್ ಬಂದಿದೆ. ಬೆಂಗಳೂರಿನ ಸುಮಾರು 15 ಶಾಲೆಗಳಿಗೆ ಬಾಂಬ್ ಇಟ್ಟಿದ್ದೀವಿ, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಮೆಸೇಜ್ ಬಂದಿದೆ. ಇದನ್ನ ನಾವು ಬಹಳ ಗಂಭೀರವಾಗಿ ಪರಿಶೀಲಿಸುತ್ತಿದ್ದೇವೆ. ಮೇಲ್ನ ಮೂಲದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಕಮಿಷನರ್ಗೆ ಹಾಗೂ ಎಲ್ಲಾ ಅಧಿಕಾರಿಗಳಿಗೆ ಎಲ್ಲಾ ಶಾಲೆಗಳನ್ನ ಪರಿಶೀಲನೆ ಮಾಡುವಂತೆ ತಾಕೀತು ಮಾಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. https://ainlivenews.com/witchcraft-in-the-prestigious-karnataka-university-professors-chamber/ ಯಾವ ಶಾಲೆಗಳಲ್ಲೂ ಬಾಂಬ್ ಇರಲು ಸಾಧ್ಯವಿಲ್ಲವೆಂಬುವುದ ನನ್ನ ನಂಬಿಕೆ. ಯಾವ ಉಗ್ರ ಸಂಘಟನೆ ಮಾಡಿದೆ, ಯಾರು ಇದನ್ನೆಲ್ಲಾ ಮಾಡಿದ್ದಾರೆ ಅನ್ನೋ ಪರಿಶೀಲಿಸುತ್ತಿದ್ದೇವೆ. ಅವರು ಭಾರತದವರೇ ಆಗಿದ್ದರೇ ಅಂತವರಿಗೆ ಏನು ಮಾಡಬೇಕು ಅಂತ ಭಾರತ ಸರ್ಕಾರದ ಜೊತೆ ಮಾತನಾಡುತ್ತೇವೆ. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯೇ ಕಳುಹಿಸಿದೆ ಅನ್ನೋದನ್ನ ಇನ್ನೂ ಹೇಳಲು ಆಗಲ್ಲ…