ಡಂಕಿ ಸಿನಿಮಾದ ಕ್ರೇಜ್ ಜೋರಾಗಿದೆ. ಟೀಸರ್ ಧೂಳ್ ಎಬ್ಬಿಸಿದೆ. ಡಂಕಿ ಡ್ರಾಪ್ 1 ಬಳಿಕ ಬಂದ ಡಂಕಿ ಡ್ರಾಪ್ 2 ಅಂದರೆ ಲುಟ್ ಪುಟ್ ಗಯಾ ಎಂಬ ಮೆಲೋಡಿ ಹಾಡು ಎಲ್ಲರ ಗಮನಸೆಳೆದಿದೆ. ಶಾರುಖ್ ಖಾನ್ ಹಾಗೂ ತಾಪ್ಸಿ ಪನ್ನು ನಡುವಿನ ಪ್ರೇಮಗೀತೆ ಹಿಟ್ ಲೀಸ್ಟ್ ಸೇರಿದೆ. ಇದೀಗ ಈ ಹಾಡಿನ ಒಂದು ಸೀನ್ ಎಲ್ಲೆಡೆ ವೈರಲ್ ಆಗ್ತಿದ್ದು, ಕಿಂಗ್ ಖಾನ್ ಫ್ಯಾನ್ಸ್ ಹುಬ್ಬೇರಿಸಿದ್ದಾರೆ. ಡಂಕಿ ಸಿನಿಮಾದ ಲುಟ್ ಪುಟ್ ಗಯಾ ಸಿಂಗಿಂಗ್ ನಂಬರ್ ನಲ್ಲಿ ಕುಸ್ತಿ ಅಖಾಡದಲ್ಲಿ ತಾಪ್ಸಿ ಶಾರುಖ್ ಎತ್ತಿ ಹಾಕುವ ದೃಶ್ಯವಿದೆ. ಅದೇ ರೀತಿ ಜವಾನ್ ಸಿನಿಮಾದ ಹಾಡಿನಲ್ಲಿ ದೀಪಿಕಾ ಶಾರುಖ್ ರನ್ನು ಎತ್ತಿ ಕುಸ್ತಿ ಆಡುತ್ತಾರೆ. ಈ ಎರಡು ಸೀನ್ಸ್ ನೋಡಿ ಫ್ಯಾನ್ಸ್ ಕಿಂಗ್ ಖಾನ್ ಕುಸ್ತಿ ಹಿಂದೆ ಬಿದ್ದಿದ್ಯಾಕೆ ಎಂದು ಚರ್ಚೆ ನಡೆಸುತ್ತಿದ್ದಾರೆ. ‘ಡಂಕಿ’ ರಾಜ್ಕುಮಾರ್ ಹಿರಾನಿ ಬತ್ತಳಿಕೆಯಿಂದ ಬರುತ್ತಿರೋ ಮತ್ತೊಂದು ವಿಶಿಷ್ಠ ಸಿನಿಮಾ. ಭಾರತದ ಪಂಜಾಬ್ ಹಾಗೂ ಸುತ್ತಮುತ್ತಲಿನ ಪ್ರದೇಶದಿಂದ ಕಾನೂನು ಬಾಹಿರವಾಗಿ…
Author: AIN Author
ಬೆಂಗಳೂರು:- ನಗರವನ್ನು ಮಾಲಿನ್ಯ ಮುಕ್ತವಾಗಿರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನೃಪತುಂಗ ರಸ್ತೆಯ ಯವನಿಕ ಸಭಾಂಗಣದಲ್ಲಿ ಸಾರಿಗೆ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಸಮಾರೋಪ ಸಮಾರಂಭ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರವನ್ನು ಮಾಲಿನ್ಯ ಮುಕ್ತವನ್ನಾಗಿ ಮಾಡಿ ಮುಂದಿನ ಯುವ ಪೀಳಿಗೆಗೆ ಉತ್ತಮ ವಾತವರಣ ನಿರ್ಮಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ. ಬೆಂಗಳೂರಿನಲ್ಲಿ ಜಲ ಮಾಲಿನ್ಯ, ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯವೂ ಹೆಚ್ಚುತ್ತಿದೆ. ನಗರೀಕರಣ, ಹೆಚ್ಚುತ್ತಿರುವ ವಾಹನಗಳು, ಜನಸಂಖ್ಯೆಯಿಂದ ವಾಯುಮಾಲಿನ್ಯ ಉಂಟಾಗುತ್ತಿದೆ. https://ainlivenews.com/witchcraft-in-the-prestigious-karnataka-university-professors-chamber/ ನಾವು ಆದಷ್ಟು ವಿದ್ಯುತ್ ಚಾಲಿತ ವಾಹನಗಳ ಬಳಕೆಯನ್ನು ಉತ್ತೇಜಿಸಬೇಕು ಎಂದು ಸಲಹೆ ನೀಡಿದರು. ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್, ರಸ್ತೆ ಸುರಕ್ಷತೆ ಕಾರ್ಯದರ್ಶಿ ಎ.ಎಂ.ಯೋಗೀಶ್, ಅಪರ ಸಾರಿಗೆ ಆಯುಕ್ತ ಬಿ.ಪಿ.ಉಮಾಶಂಕರ್, ಜೆ. ಜ್ಞಾನೇಂದ್ರ ಕುಮಾರ್, ಜೆ.ಪುರುಷೋತ್ತಮ್, ಸಿ.ಮಲ್ಲಿಕಾರ್ಜುನ್, ಜಂಟಿ ಸಾರಿಗೆ ಆಯುಕ್ತ ಎಂ.ಶೋಭ ಸೇರಿದಂತೆ ಉಪಸ್ಥಿತರಿದ್ದರು.
ನವದೆಹಲಿ: 9760 ಕೋಟಿ ರೂ. ಮುಖಬೆಲೆಯ 2000 ರೂ. ನೋಟುಗಳನ್ನು (2000 RS Notes) ಬ್ಯಾಂಕ್ಗಳಲ್ಲಿ ವಿನಿಮಯ ಮಾಡಿಕೊಂಡಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ಹೇಳಿದೆ. ಈ ವರ್ಷ ಮೇ.19 ರಂದು 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಘೋಷಿಸಿತ್ತು. ಈ ಸಮಯದಲ್ಲಿ ಚಲಾವಣೆಯಲ್ಲಿದ್ದ ನೋಟುಗಳ ಮೊತ್ತ 3.56 ಲಕ್ಷ ರೂ. ಕೋಟಿಗಳಷ್ಟಿತ್ತು. ಅಲ್ಲದೇ ನವೆಂಬರ್ 30ರ ವೇಳೆಗೆ ಚಲಾವಣೆಯಲ್ಲಿದ್ದ ಮೌಲ್ಯ 9760 ಕೋಟಿ ರೂ. ಗಳಿಗೆ ಕುಸಿದಿದೆ. ಈ ಮೂಲಕ 97.26% ರಷ್ಟು 2000 ರೂ. ಮುಖಬೆಲೆಯ ನೋಟ್ಗಳು ಠೇವಣೆಯಾಗಿದೆ ಎಂದು ಆರ್ಬಿಐ ಪ್ರಕಟಣೆಯಲ್ಲಿ ತಿಳಿಸಿದೆ. ದೇಶಾದ್ಯಂತ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ 2000 ರೂ. ನೋಟುಗಳನ್ನು ಠೇವಣಿ ಇಡಲು ಅಥವಾ ಬದಲಾಯಿಸಲು ಆರ್ಬಿಐ ಜನಸಾಮಾನ್ಯರಿಗೆ ಅವಕಾಶ ನೀಡಿತ್ತು. https://ainlivenews.com/witchcraft-in-the-prestigious-karnataka-university-professors-chamber/ ಇದರ ಆರಂಭಿಕ ಗಡುವು ಈ ವರ್ಷ ಸೆ.30 ಆಗಿತ್ತು, ನಂತರ ಅದನ್ನು ಅ.7ಕ್ಕೆ ವಿಸ್ತರಿಸಲಾಗಿತ್ತು. ಆರ್ಬಿಐನ 19 ಕಚೇರಿಗಳಲ್ಲಿ ನೋಟುಗಳನ್ನು…
ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣಕ್ಕೀಡಾದ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದೆ. ಮೃತ ವೈಷ್ಣವ್, ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬರು. ಈ ಘಟನೆ 9.30ರ ಸುಮಾರಿಗೆ ನಡೆದಿದೆ. ಘಟನೆ ಸಂದರ್ಭದಲ್ಲಿ ಮಗು ಹಾಗೂ ಆತನ ತಾಯಿ ದಿವ್ಯಾ ಮಾತ್ರ ಮನೆಯಲ್ಲಿದ್ದರು. ಮಗುವಿನ ತಂದೆ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, https://ainlivenews.com/witchcraft-in-the-prestigious-karnataka-university-professors-chamber/ ಪಾಲಕ್ಕಾಡ್ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆ ತೆರಳಿದ್ದರು. ಬಾಲಕ ಚಕ್ಕುಲಿಯನು ತಿಂದುಕೊಂಡು ತನ್ನ ಪಾಡಿಗೆ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ಚಕ್ಕುಲಿಯನ್ನು ನುಂಗಿಬಿಟ್ಟಿದ್ದಾನೆ. ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಆತನಿಗೆ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಕೂಡಲೇ ಆತನನ್ನು ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈಷ್ಣವ್ನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಅವಳಿ ಸಹೋದರಿ ವೈಗಾ ಹಾಗೂ ತಂದೆ, ತಾಯಿಯನ್ನು ವೈಷ್ಣವ್ ಅಗಲಿದ್ದಾನೆ.
ಬೆಂಗಳೂರು: ಸಚಿವ ಮಧು ಬಂಗಾರಪ್ಪ (Madhu Bangarappa) ಅವರಿಗೆ ಅಹಂ ಜಾಸ್ತಿ ಆಗಿದೆ. ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ (Belur Gopalakrishna) ಮಧು ಬಂಗಾರಪ್ಪ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ? ನಮಗೂ ಜವಾಬ್ದಾರಿ ಇಲ್ವಾ? ನಾವೂ ಯಡಿಯೂರಪ್ಪನ (BS Yediyurappa) ಮಕ್ಕಳನ್ನು ಸೋಲಿಸಬೇಕು ಅಂತಾ ಇದ್ದೇವೆ. ರಾಘವೇಂದ್ರನ ಸೋಲಿಸಬೇಕು ಎಂದು ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೇ ಒಡಕು ಮೂಡಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು. https://ainlivenews.com/witchcraft-in-the-prestigious-karnataka-university-professors-chamber/ ಮಧು ಬಂಗಾರಪ್ಪ ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನೂ ಒಗ್ಗೂಡಿಸಿ ಕರೆದುಕೊಂಡು ಹೋಗಬೇಕು. ಅವರೇ ಪಕ್ಷವನ್ನು ಒಡೆಯುವುದಲ್ಲ. ಶಿವಮೊಗ್ಗದಲ್ಲಿ (Shivamogga) ಪಕ್ಷ ಒಡೆದು ಎರಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ, ಎಲ್ಲರನ್ನೂ ವಿಶ್ವಾಸಕ್ಕೆ…
ಬೆಂಗಳೂರು: “ಚುನಾವಣೆ ಕಾರಣ ತೆಲಂಗಾಣಕ್ಕೆ ಹೋಗುತ್ತಿದ್ದು, ಪಕ್ಷ ಏನು ಕೆಲಸ ನೀಡುತ್ತದೆಯೋ ಅದನ್ನು ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಉತ್ತರಿಸಿದರು. ತೆಲಂಗಾಣ ಚುನಾವಣೆ ಫಲಿತಾಂಶ ಬರುವ ಹಿನ್ನೆಲೆಯಲ್ಲಿ ತಾವು ತೆರಳುತ್ತೀರಾ ಎಂದು ಕೇಳಿದಾಗ ಈ ರೀತಿ ಉತ್ತರಿಸಿದರು. “ನನ್ನ ಕ್ಷೇತ್ರದಲ್ಲಿ ಇಂದು ಜನ ಸಂಪರ್ಕ ಸಭೆ ಇಟ್ಟುಕೊಂಡಿದ್ದೇನೆ. ನನ್ನ ಜನರ ಅಹವಾಲು ಸ್ವೀಕರಿಸಲು ಹೋಗುತ್ತಿದ್ದೇನೆ. ನಂತರ 10 ದಿನಗಳ ಕಾಲ ಬೆಳಗಾವಿ ಅಧಿವೇಶನಕ್ಕೆ ಹೋಗಬೇಕಿದೆ. ಈ ಮಧ್ಯೆ ತೆಲಂಗಾಣಕ್ಕೆ ಹೋಗುತ್ತೇನೆ ಎಂದು ತಿಳಿಸಿದರು. ನೆರೆ ರಾಜ್ಯದ ನಾಯಕರು ನಮ್ಮ ರಾಜ್ಯದ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ನಮ್ಮ ನಾಯಕರು ಅಲ್ಲಿನ ಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ನೆರೆ ರಾಜ್ಯದ ಚುನಾವಣೆಯಲ್ಲಿ ನಮಗೆ ನಮ್ಮದೇ ಆದ ಜವಾಬ್ದಾರಿ ಇರುತ್ತದೆ” ಎಂದರು. https://ainlivenews.com/witchcraft-in-the-prestigious-karnataka-university-professors-chamber/ ನಿಮ್ಮ ಪಕ್ಷದ ಶಾಸಕರನ್ನು ಅನ್ಯ ಪಕ್ಷದವರು ಸಂಪರ್ಕ ಮಾಡುತ್ತಿದ್ದಾರಾ? ನಿಮ್ಮ ಶಾಸಕರು ಬೇರೆ ಪಕ್ಷಕ್ಕೆ ಹೋಗುವ ಭೀತಿ…
ಧಾರವಾಡ: ಕಳೆದ ಎರಡು ದಿನಗಳಿಂದ ಹುಬ್ಬಳ್ಳಿ, ಧಾರವಾಡ ಅವಳಿನಗರದಲ್ಲಿ ಪ್ರವಾಸದಲ್ಲಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಇಂದು ಧಾರವಾಡದ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಎಲ್ಲ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಧಾರವಾಡದ ಜಿಲ್ಲಾ ಆಸ್ಪತ್ರೆ, ವಿವಿಧ ಹಾಸ್ಟೆಲ್ ಸೇರಿದಂತೆ ಅವಳಿನಗರದ ಅನೇಕ ಕಡೆಗಳಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ ನ್ಯಾಯಮೂರ್ತಿಗಳು, ಇಂದು ಜಿಲ್ಲಾ ಪಂಚಾಯ್ತಿಯಲ್ಲಿ ಅಧಿಕಾರಿಗಳ ಸಭೆ ನಡೆಸುವುದರ ಜೊತೆಗೆ ಸಾರ್ವಜನಿಕರ ಅಹವಾಲು ಆಲಿಸಿದರು. ಸಭೆಯಲ್ಲಿ ನ್ಯಾಯಮೂರ್ತಿಗಳು ಮುಖ್ಯವಾಗಿ ಸ್ವಚ್ಛತೆಯ ಬಗ್ಗೆಯೇ ಪಾಠ ಮಾಡಿದ್ದು ವಿಶೇಷವಾಗಿತ್ತು. ಉತ್ತರ ಕರ್ನಾಟಕ ಭಾಗದಲ್ಲಿ ನಾವು ಬಯಲು ಶೌಚಾಲಯ ಪದ್ಧತಿಯನ್ನು ತೆಗೆದು ಹಾಕಬೇಕಿದೆ. ಜನರ ಮನಸ್ಥಿತಿ ಬದಲಾಗಬೇಕಿದೆ. ಈ ಬಗ್ಗೆ ಸಾಕಷ್ಟು ಜಾಗೃತಿ ಮಾಡಿದರೂ ಇನ್ನೂ ಬಯಲು ಬಹಿರ್ದೆಸೆಗೆ ಹೋಗುವ ಪದ್ಧತಿ ಹೋಗಿಲ್ಲ. ಇಂತವರಿಗೆ ಕಾನೂನು ಪ್ರಕಾರವೇ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದರು. https://ainlivenews.com/witchcraft-in-the-prestigious-karnataka-university-professors-chamber/ ಅಧಿಕಾರಿಗಳಿಗೂ ಸಹ ಜನರ ಮನಸ್ಥಿತಿ ಬದಲಿಸಲು ಆಗುತ್ತಿಲ್ಲ. ಜನರಂತೆಯೇ ಅಧಿಕಾರಿಗಳು ಸಹ ಆಗಿದ್ದಾರೆ. ಇದು ಹೀಗೇ ಮುಂದುವರೆದರೆ ನೂರು ವರ್ಷವಾದರೂ ನಾವು…
ಬೆಂಗಳೂರು: ವೈದ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ನಡೆದಿದೆ. ನಟರಾಜ್ ಆತ್ಮಹತ್ಯೆಗೆ ಶರಣಾದ ವೈದ್ಯ. ಇವರು ಮಂಡ್ಯ ಆರೋಗ್ಯ ಇಲಾಖೆಯ ವೆಲ್ಫೇರ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಂದು ಮಹಾಲಕ್ಷ್ಮಿ ಲೇಔಟ್ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೃದಯಾಘಾತಕ್ಕೊಳಗಾದ ಹಿನ್ನೆಲೆ ಕಳೆದ ಕೆಲ ದಿನಗಳಿಂದ ನಟರಾಜ್ ರಜೆಯಲ್ಲಿದ್ದರು. https://ainlivenews.com/witchcraft-in-the-prestigious-karnataka-university-professors-chamber/ ಇಂದು ಮಂಡ್ಯಗೆ ಹೋಗಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್ಒ ಇವರಿಗೆ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದು, ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಬೆಟ್ಟಸ್ವಾಮಿ ಎಂಬ ಅಧಿಕಾರಿಯನ್ನು ಪಾಂಡವಪುರ ಟಿಹೆಚ್ಒ ಆಗಿ ವರ್ಗಾವಣೆ ಮಾಡಲಾಗಿತ್ತು. ಆದರೆ ಬೆಟ್ಟಸ್ವಾಮಿ ಪಾಂಡವಪುರದಲ್ಲಿ ರಿಪೋರ್ಟ್ ಮಾಡಿಕೊಂಡಿರಲಿಲ್ಲ. ಡಿಹೆಚ್ಒ ಬೆಟ್ಟಸ್ವಾಮಿ ಪರವಾಗಿ ಇದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಬೆಂಗಳೂರು: ಮಧ್ಯರಾತ್ರಿ ಅತಿ ವೇಗವಾಗಿ ಕಾರು ಚಲಾಯಿಸಿಕೊಂಡು ಬರುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಿರಣ್ (28) ಮೃತ ಚಾಲಕ. ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ 1.20ಕ್ಕೆ ಈ ಅಪಘಾತ ನಡೆದಿದೆ. ಮಹರಾಜ ಪ್ಯಾಲೇಸ್ ಹೋಟೆಲ್ ಕಡೆಯಿಂದ ರೀತು ಆಸ್ಪತ್ರೆ ಕಡೆ ಹೋಗುವಾಗ ಈ ಅಪಘಾತ ಸಂಭವಿಸಿದೆ. https://ainlivenews.com/we-are-moving-fast-in-achieving-ndc-goals-pm-modi/ ಅತಿ ವೇಗ ಮತ್ತು ನಿರ್ಲಕ್ಷ್ಯತೆಯಿಂದ ಬಂದು ಫುಟ್ ಪಾತ್ ಮೇಲಿರುವ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿ ರಸಭಕ್ಕೆ ಕಿರಣ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಲಘಟ್ಟಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತವಾದ ಕಾರನ್ನು ವಶಕ್ಕೆ ಪಡೆದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಧಾರವಾಡ: ಪ್ರಜ್ಞಾವಂತರ ನಗರ ಎನಿಸಿಕೊಂಡಿರುವ ಅದರಲ್ಲೂ ಪ್ರತಿಷ್ಠಿತ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಚೇಂಬರ್ನಲ್ಲೇ ವಾಮಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಕವಿವಿಯ ಪ್ರಾಚೀನ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ರಮಾ ಗುಂಡೂರಾವ್ ಎಂಬುವವರ ಚೇಂಬರ್ನಲ್ಲೇ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ. ಈ ಘಟನೆಯಿಂದ ಆ ವಿಭಾಗದ ಪ್ರಾಧ್ಯಾಪಕರು ಬೆಚ್ಚಿಬಿದ್ದಿದ್ದಾರೆ. ಡಾ.ರಮಾ ಅವರ ಚೇಂಬರ್ನಲ್ಲಿ ಕಪ್ಪು ಬಣ್ಣದ ಮಾಟದ ಗೊಂಬೆ, ಮೂರು ಲಿಂಬೆಹಣ್ಣು ಹಾಗೂ ಅರಿಶಿನ, ಕುಂಕುಮ ಇಡಲಾಗಿದೆ. ಕಿಟಕಿಂದ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಡಾ.ರಮಾ ಅವರು ರಜೆ ಮೇಲೆ ಹೋಗಿದ್ದರು. ಶುಕ್ರವಾರ ಬೆಳಿಗ್ಗೆ ತಮ್ಮ ಚೇಂಬರ್ ತೆಗೆದು ನೋಡಿದಾಗ ಅಲ್ಲಿ ವಾಮಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. https://ainlivenews.com/we-are-moving-fast-in-achieving-ndc-goals-pm-modi/ ಇದನ್ನು ಕಂಡು ಗಾಬರಿಯಿಂದ ಹೊರ ಬಂದ ರಮಾ ಅವರು ಇದರ ವಿರುದ್ಧ ಕುಲಪತಿಗಳಿಗೆ ದೂರು ನೀಡಿದ್ದಾರೆ. ಅದೇ ವಿಭಾಗದ ಪ್ರಾಧ್ಯಾಪಕರೊಬ್ಬರ ಮೇಲೆ ಅನುಮಾನ ಹುಟ್ಟಿಕೊಂಡಿದ್ದು, ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಆ ಚೇಂಬರ್ ಬಿಟ್ಟುಕೊಡುವ ವಿಚಾರವಾಗಿ ತಿಕ್ಕಾಟ…