ಬೆಂಗಳೂರು: ಮಧ್ಯರಾತ್ರಿ ಅತಿ ವೇಗವಾಗಿ ಕಾರು ಚಲಾಯಿಸಿಕೊಂಡು ಬರುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಿರಣ್ (28) ಮೃತ ಚಾಲಕ. ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ 1.20ಕ್ಕೆ ಈ ಅಪಘಾತ ನಡೆದಿದೆ. ಮಹರಾಜ ಪ್ಯಾಲೇಸ್ ಹೋಟೆಲ್ ಕಡೆಯಿಂದ ರೀತು ಆಸ್ಪತ್ರೆ ಕಡೆ ಹೋಗುವಾಗ ಈ ಅಪಘಾತ ಸಂಭವಿಸಿದೆ. https://ainlivenews.com/we-are-moving-fast-in-achieving-ndc-goals-pm-modi/ ಅತಿ ವೇಗ ಮತ್ತು ನಿರ್ಲಕ್ಷ್ಯತೆಯಿಂದ ಬಂದು ಫುಟ್ ಪಾತ್ ಮೇಲಿರುವ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿ ರಸಭಕ್ಕೆ ಕಿರಣ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಲಘಟ್ಟಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತವಾದ ಕಾರನ್ನು ವಶಕ್ಕೆ ಪಡೆದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
Author: AIN Author
ಧಾರವಾಡ: ಪ್ರಜ್ಞಾವಂತರ ನಗರ ಎನಿಸಿಕೊಂಡಿರುವ ಅದರಲ್ಲೂ ಪ್ರತಿಷ್ಠಿತ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಚೇಂಬರ್‌ನಲ್ಲೇ ವಾಮಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಕವಿವಿಯ ಪ್ರಾಚೀನ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ರಮಾ ಗುಂಡೂರಾವ್ ಎಂಬುವವರ ಚೇಂಬರ್‌ನಲ್ಲೇ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ. ಈ ಘಟನೆಯಿಂದ ಆ ವಿಭಾಗದ ಪ್ರಾಧ್ಯಾಪಕರು ಬೆಚ್ಚಿಬಿದ್ದಿದ್ದಾರೆ. ಡಾ.ರಮಾ ಅವರ ಚೇಂಬರ್‌ನಲ್ಲಿ ಕಪ್ಪು ಬಣ್ಣದ ಮಾಟದ ಗೊಂಬೆ, ಮೂರು ಲಿಂಬೆಹಣ್ಣು ಹಾಗೂ ಅರಿಶಿನ, ಕುಂಕುಮ ಇಡಲಾಗಿದೆ. ಕಿಟಕಿಂದ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಡಾ.ರಮಾ ಅವರು ರಜೆ ಮೇಲೆ ಹೋಗಿದ್ದರು. ಶುಕ್ರವಾರ ಬೆಳಿಗ್ಗೆ ತಮ್ಮ ಚೇಂಬರ್ ತೆಗೆದು ನೋಡಿದಾಗ ಅಲ್ಲಿ ವಾಮಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. https://ainlivenews.com/we-are-moving-fast-in-achieving-ndc-goals-pm-modi/ ಇದನ್ನು ಕಂಡು ಗಾಬರಿಯಿಂದ ಹೊರ ಬಂದ ರಮಾ ಅವರು ಇದರ ವಿರುದ್ಧ ಕುಲಪತಿಗಳಿಗೆ ದೂರು ನೀಡಿದ್ದಾರೆ. ಅದೇ ವಿಭಾಗದ ಪ್ರಾಧ್ಯಾಪಕರೊಬ್ಬರ ಮೇಲೆ ಅನುಮಾನ ಹುಟ್ಟಿಕೊಂಡಿದ್ದು, ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಆ ಚೇಂಬರ್ ಬಿಟ್ಟುಕೊಡುವ ವಿಚಾರವಾಗಿ ತಿಕ್ಕಾಟ…
ಧಾರವಾಡ : ರಾಜ್ಯದಲ್ಲಿನ ಶಾಲೆಗಳಿಗೆ ಏಕಕಾಲಕ್ಕೆ ಬಾಂಬ್ ಬೆದರಿಕೆ ಬಂದಿರುವುದು ವಿಕ್ ಲೀಡರ್ಶಿಪ್ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರನ್ನು ಎಲ್ಲೋ ಒಂದುಕಡೆ ಭಯದ ವಾತಾವರಣದಲ್ಲಿ ಇಟ್ಟು ಆಡಳಿತ ಮಾಡುವ ಹುನ್ನಾರ ಇದಾಗಿದ್ದು, ಯಾವ ಕಾರಣಕ್ಕೂ ದೇಶದ್ರೋಹಿಗಳನ್ನು ಬಿಡಬಾರದು ಮಟ್ಟಹಾಕಬೇಕು ಎಂದು ತಿಳಿಸಿದರು. https://ainlivenews.com/we-are-moving-fast-in-achieving-ndc-goals-pm-modi/ ಇಷ್ಟೊತ್ತಿಗೆ ಸರ್ಕಾರ ಆರೋಪಿಗಳನ್ನು ಬಂಧಿಸಬೇಕಾಗಿತ್ತು ಆಡಳಿತದಲ್ಲಿ ಹಿಡಿತವಿಲ್ಲದ ಸರ್ಕಾರ ನಡೆಯುತ್ತಿದೆ. ಕೂಡಲೇ ದೇಶದ್ರೋಹಿ ಕೃತ್ಯದಲ್ಲಿ ಭಾಗಿಯಾಗಿರುವ ಈ ಆತಂಕವಾದಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದರು.
ದೊಡ್ಡಬಳ್ಳಾಪುರ: ಮಾರುತಿ ಓಮ್ನಿ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನ ಬಗಲುಗುಂಟೆ ನಿವಾಸಿ ಶಿವಕುಮಾರ್( 32 ) ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಅಂತರಾಮ್ (37) ಗಂಭೀರ ಗಾಯಗೊಂಡಿದ್ದು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.. ಸ್ಥಳಕ್ಕೆ 112 ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಚಾಮರಾಜನಗರ: ಬೈಕಿಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿಂಡನಪುರ ಸಮೀಪವಿರುವ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಮೂಡಲಹುಂಡಿ ಗ್ರಾಮದ ಮಹೇಂದ್ರ ( 33) ಸಾನ್ನಪ್ಪಿರುವ ದುರ್ಧೈವಿಯಾಗಿದ್ದು, https://ainlivenews.com/russian-women-have-more-than-8-children-putin-calls/ kA10 8499 ಪಿಕಪ್ ವಾಹನ ಮತ್ತು ಬೈಕ್ ಕೆ10 ವೈ 7760 ಮುಖಾಮುಖಿ ಡಿಕ್ಕಿಯಾಗಿದೆ. ಈ ಪರಿಣಾಮ ಅಪಘಾತದಲ್ಲಿ ಮಹೇಂದ್ರ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಗುಂಡ್ಲುಪೇಟೆ ಪೋಲೀಸರು ಭೇಟಿ ಪರಿಶೀಲನೆ ನಡೆಸಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
50 ದಿನ ಪೂರೈಸಿರೋ ಸ್ಪರ್ಧಿಗಳೂವಾರದ ಎಲ್ಲಾ ಟಾಸ್ಕ್‌ಗಳಲ್ಲಿ ಡ್ರೋನ್ ಪ್ರತಾಪ್ ನೇತೃತ್ವದ ತಂಡ ಸೋಲು ಅನುಭವಿಸಿದೆ. ಹೀಗಾಗಿ, ಡ್ರೋನ್ ಪ್ರತಾಪ್ ನೇತೃತ್ವದ ಸಂಪೂರ್ಣ ತಂಡ ಕ್ಯಾಪ್ಟೆನ್ಸಿ ರೇಸ್‌ನಿಂದ ಹೊರಬಿದ್ದಿದೆ. ಮೈಕಲ್ ಟೀಮ್ ಗೆದ್ದಿದೆ. ಇನ್ನೂ ಸಂಗೀತಾ ಶೃಂಗೇರಿ ಹಾಗೂ ತುಕಾಲಿ ಸಂತೋಷ್ ಮಧ್ಯೆ ಯಾವುದೂ ಸರಿ ಇಲ್ಲ. ‘ನನ್ನ ಸುದ್ದಿಗೆ ನೀನು ಬರೋದು ಬೇಡ’ ಎಂದು ಸಂತೋಷ್ ಅವರು ಈಗಾಗಲೇ ಸಂಗೀತಾಗೆ ಅನೇಕ ಬಾರಿ ವಾರ್ನ್ ಮಾಡಿದ್ದಾರೆ. ಆದರೆ, ಸಂಗೀತಾ ಇದನ್ನು ಗಂಭೀರವಾಗಿ ಸ್ವೀಕರಿಸಿಲ್ಲ. ಇದುವೇ ಅವರಿಗೆ ಮುಳುವಾಗಿದೆ. https://ainlivenews.com/russian-women-have-more-than-8-children-putin-calls/ ಕಳೆದ ವಾರ ವರ್ತೂರು ಸಂತೊಷ್ ಅವರು ಕಳಪೆ ಪಟ್ಟ ಪಡೆದಿದ್ದರು. ಈ ವಾರ ಡ್ರೋನ್ ಪ್ರತಾಪ್ಗೆ ಕಳಪೆ ಸಿಕ್ಕಿದೆ. ಮುಂದಿನ ವಾರ ಯಾರು ಎನ್ನುವ ಪ್ರಶ್ನೆ ಎದುರಾಗಿದೆ. ಸಂಗೀತಾ ಅವರು ನಗುತ್ತಾ, ‘ತುಕಾಲಿ’ ಎಂದಿದ್ದಾರೆ. ಇದಕ್ಕೆ ತುಕಾಲಿ ಸಂತೋಷ್ ಸಿಟ್ಟಾಗಿದ್ದಾರೆ. ‘ನನ್ನ ವಿಚಾರಕ್ಕೆ ಬರಲೇಬೇಡ. ನನ್ನನ್ನು ಇಗ್ನೋರ್ ಮಾಡಿಬಿಡು’ ಎಂದು ಜೋರು ಧ್ವನಿಯಲ್ಲೇ ಮಾತನಾಡಿದ್ದಾರೆ.
ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಬೀದರ್ (Bidar) ಪ್ರವಾಸ ಕೈಗೊಂಡಿದ್ದು, ಶತಾಯುಷಿ ಡಾ. ಭೀಮಣ್ಣ ಖಂಡ್ರೆಯವರ (Bheemanna Khandre) ಶತಮಾನೋತ್ಸವ ಹಾಗೂ ಲೋಕನಾಯಕ ಭೀಮಣ್ಣ ಖಂಡ್ರೆ ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಇಂದು ಭಾಲ್ಕಿ (Bhalki) ಸಾಕ್ಷಿಯಾಗಲಿದೆ. ಈ ಅಭಿನಂದನಾ ಗ್ರಂಥವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದು, https://ainlivenews.com/russian-women-have-more-than-8-children-putin-calls/ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾಲ್ಕಿ ಬಿಕೆಐಟಿ ಕಾಲೇಜು ಆವರಣದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಾಗಿದೆ. ಮಠಾಧೀಶರು, ಜನಪ್ರತಿನಿಧಿಗಳು, ಗಣ್ಯರಿಗೆ ಬೃಹತ್ ವೇದಿಕೆ ಮೇಲೆ 300 ಆಸನದ ವ್ಯವಸ್ಥೆ ಮಾಡಿದ್ದು, ಜನರಿಗಾಗಿ ಒಂದು ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್, ವೀರಪ್ಪ ಮೊಯ್ಲಿ, ಸಚಿವ ಸಂಪುಟದ ಸಚಿವರು, ಸುತ್ತೂರು ಶ್ರೀ, ಸಿದ್ದಗಂಗಾ ಶ್ರೀಗಳು, ಸಿರಿಗೆರಿ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಮೈಸೂರು: ಏಕದಿನ ವಿಶ್ವಕಪ್ (World Cup) ಟೂರ್ನಿಯ ನಂತರ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಮುಖ್ಯಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರು ತಮ್ಮ ಮಗನ ಸಲುವಾಗಿ ಪತ್ನಿಯೊಂದಿಗೆ ಮೈಸೂರಿಗೆ ಆಗಮಿಸಿದ್ದಾರೆ. ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮೈಸೂರು ವಲಯ ಆಯೋಜಿಸಿದ್ದ U-19 ಕೂಚ್ ಬೆಹಾರ್ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯು ಮೈಸೂರಿನ (Mysuru) ಮಾನಸ ಗಂಗೋತ್ರಿಯ SDNR (ಶ್ರೀ ಕಂಠದತ್ತ ನರಸಿಂಹರಾಜ) ಒಡೆಯರ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ದ್ರಾವಿಡ್ ಅವರ ಹಿರಿಯ ಪುತ್ರ ಸಮಿತ್ ದ್ರಾವಿಡ್ 19 ವಯೋಮಿತಿ ಕೂಚ್ ಬೆಹರ್ ಟ್ರೋಫಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ. ಕರ್ನಾಟಕ ಹಾಗೂ ಉತ್ತರಾಖಂಡ ನಡುವೆ ಮೈಸೂರಿನಲ್ಲಿ ಪಂದ್ಯ ನಡೆಯುತ್ತಿದ್ದು ಅದನ್ನು ವೀಕ್ಷಿಸುವ ನಿಟ್ಟಿನಲ್ಲಿ ದ್ರಾವಿಡ್ ಆಗಮಿಸಿದ್ದಾರೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಉತ್ತರಾಖಂಡ್ ಮೊದಲ ದಿನದಾಟದ ಅಂತ್ಯಕ್ಕೆ 9 ವಿಕೆಟ್‌ಗೆ 232 ರನ್ ಪೇರಿಸಿದೆ. 5 ಓವರ್ ಬೌಲಿಂಗ್ ಮಾಡಿರುವ ಸಮಿತ್ ದ್ರಾವಿಡ್ 2 ಮೇಡನ್ ಎಸೆದು 11 ರನ್ ನೀಡಿದ್ದಾರೆ. https://ainlivenews.com/russian-women-have-more-than-8-children-putin-calls/…
ಗದಗ: ಬೀಡಾಡಿ ದನಗಳು ನಗರದ ರಸ್ತೆಯನ್ನೇ ತಮ್ಮ ವಾಸಸ್ಥಳವನ್ನಾಗಿ ಮಾಡಿಕೊಂಡಿದ್ದರಿಂದ ರಸ್ತೆಗಳಲ್ಲಿ ಮಹಿಳೆಯರು, ಮಕ್ಕಳು ಓಡಾಡಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಗದಗ-ಬೆಟಗೇರಿ ಅವಳಿ ನಗರದಲ್ಲಿ ಬೀದಿ ದನಗಳ ಹಾವಳಿ ಮಿತಿ ಮೀರಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ವ್ಯಕ್ತಿ ಮೇಲೆ ಏಕಾಏಕಿ ಅಟ್ಯಾಕ್ ಮಾಡಲು ಮುಂದಾಗಿದೆ. ಸ್ವಲ್ಪದರಲ್ಲೇ ಅನಾಹುತ ತಪ್ಪಿದೆ. ಗದಗದ ಬೆಟಗೇರಿಯಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಗೆ ಗೂಳಿ ಗುದ್ದೋ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಳೆದ 15 ದಿನಗಳಲ್ಲಿ 8 ಜನರ ಮೇಲೆ ಅಟ್ಯಾಕ್ ಮಾಡಲು ಮುಂದಾಗಿದೆ. ಇದರಿಂದ ಜನರಿಗೆ ರಸ್ತೆಯಲ್ಲಿ ಓಡಾಡೋಕೂ ಹೆದರೋ ಪರಿಸ್ಥಿತಿ ನಿರ್ಮಾಣವಾಗಿದೆ. ಬೀದಿ ದನಗಳನ್ನ ಶಿಫ್ಟ್ ಮಾಡದ ನಗರಸಭೆ ವಿರುಧ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ಸಕ್ರೆಬೈಲು ಆನೆ ಬಿಡಾರ ಇತ್ತಿಚ್ಚಿನ ದಿನಗಳಲ್ಲಿ ಒಂದಿಲ್ಲೊಂದು ವಿವಾದಗಳ ಮೂಲಕ ಸುದ್ದಿಯಾಗುತ್ತಿದೆ. ಬಾನುಮತಿ ಬಾಲ ಕಟ್ ಮಾಡಿದ ಸುದ್ದಿ ಮಾದ್ಯಮಗಳಲ್ಲಿ ಪ್ರಕಟವಾದ ನಂತರ ಬಿಡಾರದಲ್ಲಿ ನಡೆಯುವ ಯಾವೊಂದು ಘಟನಾವಳಿ ಗಳನ್ನುಮಾದ್ಯಮಗಳಿಗೆ ಸೋರಿಕೆಯಾಗದಂತೆ ಅಧಿಕಾರಿ ಸಿಬ್ಬಂದಿಗಳು ಕಟ್ಟೆಚ್ಚರ ವಹಿಸಿದ್ದಾರೆ. ಇಂತಹ ಕಠಿಣ ಸಂದರ್ಭದಲ್ಲಿಯೇ ಸಕ್ರೆಬೈಲು ಆನೆ ಬಿಡಾರದಲ್ಲಿ ಪ್ರವಾಸಿಗರು ಇರುವ ಸಂದರ್ಭದಲ್ಲಿಯೇ ಎಡವಟ್ಟೊಂದು ನಡೆದು ಹೋಗಿದ್ದು, ಆ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಿನ್ನೆ ಬಿಡಾರದಲ್ಲಿ ನವಜೋಡಿಗಳ ವೆಡ್ಡಿಂಗ್ ಶೂಟಿಂಗ್ ವೇಳೆ ಈ ಅಚಾತುರ್ಯ ನಡೆದಿದೆ. https://ainlivenews.com/russian-women-have-more-than-8-children-putin-calls/ ಕುಂತಿ ಆನೆ ಮುಂಬಂದಿಯಲ್ಲಿ ನವ ಜೋಡಿಗಳು ಹೋಗುವ ದೃಷ್ಯದ ವೇಳೆ ದ್ರುವ ಆನೆ ಮರಿ ಏಕಾಏಕಿ ತಾಯಿ ಕುಂತಿ ಬಳಿ ಬಂದಿದೆ. ಆಗ ತಕ್ಷಣ ಕುಂತಿ ತಿರುಗಿದಾಗ ಆಯತಪ್ಪಿ ಮಾವುತ ಸಂಶುದ್ದಿನ್ ಕೆಳಗೆ ಬಿದ್ದಿದ್ದಾನೆ. ಬಿದ್ದ ಸಂಶುದ್ದೀನ್ ಮತ್ತೆ ಏಳಲೇ ಇಲ್ಲ.ಕೈಗೆ ಹಾಗು ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಆಗ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಶಿವಮೊಗ್ಗದ ಮೆಗ್ಗಾನ್…