ಚಿಕ್ಕಬಳ್ಳಾಪುರ: ತನ್ನ ಅನೈತಿಕ ಸಂಬಂಧಗಳಿಗೆ ತನ್ನ ತಂಗಿ ಅಡ್ಡಿಯಾಗಿದ್ದಾಳೆ ಅಂತ ಕೋಪಗೊಂಡ ಅಕ್ಕ, ತಂಗಿಯ 6 ವರ್ಷದ ಮಗನನ್ನು ಕೊಂದು ಶವವನ್ನು ಹೂತು ಹಾಕಿ ಏನು ಆಗಿಲ್ಲ ಎನ್ನುವ ಹಾಗೆ ಇನ್ನೊಬ್ಬ ಮಗಳ ಜೊತೆ ಎಸ್ಕೇಪ್ ಆಗಿದ್ದಳು, ಆದ್ರೆ ಆಟೊ ಚಾಲಕನ ಸಮಯ ಪ್ರಜ್ಞೆಯಿಂದ ಕ್ರಿಮಿನಲ್ ಲೇಡಿ ನೇರವಾಗಿ ಪೊಲೀಸ್ ಠಾಣೆ ಸೇರಿದ್ದಾಳೆ. ಅಷ್ಟಕ್ಕೂ ಅದೇಲ್ಲಿ ಅಂತೀರಾ ಈ ವರದಿ ನೋಡಿ!! ಹೀಗೆ… ಮಾವಿನ ತೋಪಿನಲ್ಲಿ, ಪೊಲೀಸರು ಹಾಗೂ ಸ್ಥಳಿಯರು ಆರು ವರ್ಷದ ಕಂದನ ಕಳೆಬರಹಕ್ಕಾಗಿ ಶೋಧಕಾರ್ಯ ನಡೆಸಿರುವುದು ಚಿಕ್ಕಬಳ್ಳಾಪುರ ತಾಲೂಕುನ ಮುತ್ತಕದಹಳ್ಳಿ ಗ್ರಾಮದ ಬಳಿ ಇರುವ ಮಾವಿನ ತೋಪಿನಲ್ಲಿ. ಮುತ್ತಕದಹಳ್ಳಿ ಗ್ರಾಮದ ಅನಿತಾಳ 8 ವರ್ಷದ ಮನುಶ್ರೀ ಹಾಗೂ 6 ವರ್ಷದ ಬಾಲಕ ಮಧು ನಿನ್ನೆ ಮದ್ಯಾನ್ಹ ಗ್ರಾಮದಿಂದ ನಾಪತ್ತೆಯಾಗಿದ್ರು. ಇತ್ತ ಪೆರೇಸಂದ್ರ ಪೊಲೀಸರು ಹಾಗೂ ಮಕ್ಕಳ ಸಂಬಂಧಿಗಳು ಮಕ್ಕಳಿಗಾಗಿ ಶೋಧಕಾರ್ಯ ನಡೆಸಿರುವಾಗಲೇ… ಅತ್ತ ಬೆಂಗಳೂರಿನ ಕಬ್ಬನ್ ಪಾರ್ಕ ಠಾಣೆ ಪೊಲೀಸರು, ಠಾಣೆಗೆ ಮುತ್ತಕದಹಳ್ಳಿ ಗ್ರಾಮದ ನಿವಾಸಿ ಅಂಬಿಕಾ ಹಾಗೂ…
Author: AIN Author
ಬೆಂಗಳೂರು:- ಬಿಜೆಪಿಯ ಪಕ್ಷ ಕುಟುಂಬ ರಾಜಕಾರಣ ಮಾಡ್ತಿದೆ ಎಂದು ಕೆಪಿಸಿಸಿ ಸೆಂಟ್ರಲ್ ಎಸ್.ಸಿ.ವಿಂಗ್ ಮಾಧ್ಯಮ ವಕ್ತಾರ ಹೆಣ್ಣೂರು ಹರೀಶ್ ಬಾಬು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ದೇಶಕ್ಕಾಗಿ ಕಾಂಗ್ರೆಸ್ ಕುಟುಂಬ ಬಲಿದಾನ ಮಾಡಿದೆ. ಇಂದಿರಾ-ರಾಜೀವ್ ದೇಶಕ್ಕೆ ಪ್ರಾಣ ಬಲಿದಾನ ಮಾಡಿದ್ದಾರೆ. ಬಿಜೆಪಿಯ ಪಕ್ಷ ಕುಟುಂಬ ರಾಜಕಾರಣ ಮಾಡ್ತಿದೆ. ಬಿಜೆಪಿಯರ್ವಿಗೆ ಮುಸ್ಲಿಂರನ್ನ ಕಂಡ್ರೆ ಆಗಲ್ಲ. ಕ್ರಿಶ್ಚಿಯನ್ಸ್ ನ ಕ್ರಿಮಿನಲ್ಸ್ ಅಂತಾರೆ. ದಲಿತರನ್ನ ದರಿದ್ರರೂ ಅಂತಾರೆ. ಅಂಬೇಡ್ಕರ್ ಎಲ್ಲಾ ವಿಷ ಕುಡಿದು ನಮಗೆ ಸಂವಿಧಾನ ನೀಡಿದ ವಿಶಕಂಠ. ಸಂವಿಧಾನವನ್ನು ತಿರುಚುವ ಕೆಲಸ ಬಿಜೆಪಿ ಪಕ್ಷ ಮಾಡ್ತಿದೆ. ಜಾತಿ ಜಾತಿಗಳ ನಡುವೆ, ಧರ್ಮಗಳ ನಡುವೆ ಬಿಜೆಪಿ ವಿಷ ಬೀಜ ಬಿತ್ತುತ್ತಿದೆ. ಸಂವಿಧಾನದ ಆಶಯದಂತೆ ಮನುಷ್ಯ, ಮನುಷ್ಯನನ್ನ ಮನುಷ್ಯನ ರೀತಿ ನೋಡಬೇಕಿದೆ ಎಂದು ಕೆಪಿಸಿಸಿ ಸೆಂಟ್ರಲ್ ಎಸ್.ಸಿ.ವಿಂಗ್ ಮಾಧ್ಯಮ ವಕ್ತಾರ ಹೆಣ್ಣೂರು ಹರೀಶ್ ಬಾಬು ಸ್ಪಷ್ಟನೆ ನೀಡಿದ್ದಾರೆ.
ವಿಜಯಪುರ: ಕಲಬುರಗಿ ಜಿಲ್ಲೆಯ ಆಳಂದ ಕಾಂಗ್ರೆಸ್ ಶಾಸಕ ಬಿ. ಆರ್. ಪಾಟೀಲ ಅವರು ತಮ್ಮ ವಿರುದ್ಧ ಬರೆದಿರುವ ಪತ್ರದ ಕುರಿತು ಮುಖ್ಯಮಂತ್ರಿಗಳೇ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಂದಾಯ ಸಚಿವ ಕೃಷ್ಠ ಭೈರೇಗೌಡ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಬಿ. ಆರ್. ಪಾಟೀಲ ಅವರು ಮುಖ್ಯಮಂತ್ರಿಗೆ ಪತ್ರ ಬರೆದ ವಿಚಾರ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು. ಶಾಸಕರು ಸಿಎಂಗೆ ಪತ್ರ ಬರೆದಿದ್ದಾರೆ. ಈ ಪತ್ರದ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಸದನದಲ್ಲಿ ಏನು ಉತ್ತರ ಕೊಟ್ಟಿದ್ದೇನೆ ಎಂಬುದರ ಕುರಿತು ಮಾಹಿತಿಯನ್ನು ಮಾಧ್ಯಮದವರಿಗೆ ನೀಡುತ್ತೇನೆ. ಅದರಲ್ಲಿ ಏನು ಹೇಳಿದ್ದೀವಿ? ಏನು ಬಿಟ್ಟಿದೀವಿ ಎಂಬುದನ್ನು ನೀವೇ ತೀರ್ಮಾನ ಮಾಡಬಹುದು. ಅಂತಿಮವಾಗಿ ಅದರ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು. https://ainlivenews.com/ms-dhoni-bought-a-car-worth-3-30-crores-full-viral-on-social-media/ ರಾಜ್ಯದಲ್ಲಿ ಉಂಟಾಗಿರುವ ಬರ ಹಾಗೂ ಜನರ ಸಮಸ್ಯೆಗಳನ್ನು ಪ್ರತಿಯೊಂದು ಜಿಲ್ಲೆಗೆ ಹೋಗಿ ಅಲ್ಲಿಯೇ ಪರಿಹಾರ ಒದಗಿಸಬೇಕು ಎಂಬ ಉದ್ದೇಶದಿಂದ ವಿಜಯಪುರ ಜಿಲ್ಲೆಗೆ ಬಂದಿದ್ದೇನೆ. ಜನಗಳ ವಿಷಯವಿದ್ದರೆ ನಾನು ತಮ್ಮ…
ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟಿ -20 ಪಂದ್ಯಾವಳಿಯ 5 ನೇ ಪಂದ್ಯವು ನಾಳೆ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಸೌಲಭ್ಯವನ್ನು ವಿಸ್ತರಣೆ ಮಾಡಿದೆ. ಈ ಕುರಿತು ಮಾಹಿತಿ ನೀಡಿರುವ ಬಿಎಂಆರ್‌ಸಿಎಲ್, ” ಟಿ-20 ಕ್ರಿಕೆಟ್ ಪಂದ್ಯದ ಪ್ರಯುಕ್ತ 3ನೇ ಡಿಸೆಂಬರ್ 2023 ರಂದು ಮೆಟ್ರೋ ರೈಲು ಸೇವೆಗಳ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ನಿತ್ಯ 11 ಗಂಟೆಗೆ ಕೊನೆಯ ರೈಲು ಹೊರಡುತ್ತಿತ್ತು. ಸದ್ಯ ನೇರಳ ಮತ್ತು ಹಸಿರು ಮಾರ್ಗಗಳಲ್ಲಿರುವ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಹೊರಡುವ ರೈಲು ಸೇವೆಗಳನ್ನು ರಾತ್ರಿ 11.45 ರವರೆಗೆ ವಿಸ್ತರಿಸಲಾಗಿದೆ ” ಎಂದು ತಿಳಿಸಿದೆ. ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಭಾನುವಾರ ಮಧ್ಯಾಹ್ನ 2.00 ಗಂಟೆಯಿಂದ ಮಾರಾಟಕ್ಕೆ ಲಭ್ಯವಿರುತ್ತದೆ. ಸದರಿ ಪೇಪರ್ ಟಿಕೆಟ್‌ಗಳು ರಾತ್ರಿ 8 ಗಂಟೆಯಿಂದ, ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ದಿನದ ವಿಸ್ತ್ರತ ಅವಧಿಯಲ್ಲಿ…
ಧಾರವಾಡ: ಕಂಟೇನರ್ ಲಾರಿವೊಂದರಲ್ಲಿ ಇದಕ್ಕಿಂದಂತೆ ಬೆಂಕಿ ಹೊತ್ತಿಕೊಂಡು ರಸ್ತೆಯ ಮಧ್ಯೆ ಹೊತ್ತಿ ಉರಿದಿರುವ ಘಟನೆ ಧಾರವಾಡ ಹೊರವಲಯದ ಮಂಡಿಹಾಳ ಗ್ರಾಮದ ಕ್ರಾಸ್ ಬಳಿ ಮಧ್ಯ ರಾತ್ರಿ ನಡೆದಿದೆ. ಧಾರವಾಡ ಗೋವಾ ರಸ್ತೆಯ ಮಂಡಿಹಾಳ ಗ್ರಾಮದ ಕ್ರಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಬೆಂಕಿಯ ನರ್ತನಕ್ಕೆ ಲಾರಿ ಸಂಪೂರ್ಣ ಸುಟ್ಟು ಹೋಗಿದೆ. ಗೋವಾದಿಂದ ಧಾರವಾಡಕ್ಕೆ ಈ ಕಂಟೇನರ್ ಲಾರಿ ಬರುತ್ತಿತ್ತು ಎಂದು ತಿಳಿದು ಬಂದಿದೆ. ಧಾರವಾಡ ತಾಲೂಕಿನ ಮಂಡಿಹಾಳ ಗ್ರಾಮದ ಹತ್ತಿರ ಬರುತ್ತಿದಂತೆ ಇದಕ್ಕಿದಹಾಗೇ ಲಾರಿಯಲ್ಲಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಲಾರಿಯ ಚಾಲಕ ತನ್ನ ವಾಹನವನ್ನು ರಸ್ತೆ ಪಕ್ಕ ನಿಲ್ಲಿಸಿ ಹೊರ ಬಂದಿದ್ದಾನೆ. ರಸ್ತೆಯಲ್ಲಿ ಧಗ ಧಗನೆ ಹೊತ್ತಿ ಉರಿಯುತ್ತಿರುವುದನ್ನು ನೋಡಿದ ಸ್ಥಳೀಯ ವಾಹನ ಸವಾರರಲ್ಲಿ ಕೆಕಾಲ ಆತಂಕದ ವಾತವರಣ ಸೃಷ್ಟಿಯಾಗಿತ್ತು. ಚಾಲಕನ ಮಾಹಿತಿ ಮೇರೆಗೆ ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟ್ಟಿ ನೀಡಿ ಬೆಂಕಿ ನಂದಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ…
ಬೆಂಗಳೂರು:- ಸಚಿವ ಬೈರತಿ ವಿರುದ್ಧದ ದೋಷಾರೋಪ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಒಂಬತ್ತು ವರ್ಷಗಳ ಹಿಂದೆ ಖರೀದಿಸಿದ್ದ ವಾಣಿಜ್ಯ ಕಟ್ಟಡದಲ್ಲಿ ಕರ್ನಾಟಕ ಅಗ್ನಿಶಾಮಕ ದಳ ಕಾಯ್ದೆ-1964ರ ಕಲಂ 13ರಡಿ ಬರುವ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅವರ ವಿರುದ್ಧ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಸಂಬಂಧ ನಗರದ 10ನೇ ಎಸಿಎಂಎಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಬಿ.ಎಸ್. ಸುರೇಶ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲೆ ಲೀಲಾ ಪಿ.ದೇವಾಡಿಗ ಅವರ ವಾದ ಆಲಿಸಿದ ನ್ಯಾಯಪೀಠ, ಬೈರತಿ ಸುರೇಶ್ ಹಾಗೂ ಇತರರ ವಿರುದ್ಧ ಇಂದಿರಾನಗರ ಪೊಲೀಸರು 10ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಸಿರುವ ದೋಷಾರೋಪ ಪಟ್ಟಿಗೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಇದೇ 15ಕ್ಕೆ ಮುಂದೂಡಿತು
ವೈವಿಧ್ಯಮಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಹೊಂದಿರುವ ಕಂಟೆಂಟ್ ಅನ್ನು ಜನರಿಗೆ ನೀಡುವಲ್ಲಿ JioCinema ಮುಂಚೂಣಿಯಲ್ಲಿದೆ. ಆ ಪ್ರಯತ್ನದ ಭಾಗವಾಗಿ ಇದೀಗ, ಮುತ್ತಯ್ಯ ಮುರಳೀಧರನ್ ಅವರ ಜೀವನವನ್ನಾಧರಿಸಿದ, ಎಂ.ಎಸ್. ಶ್ರೀಪತಿ ನಿರ್ದೇಶಿಸಿರುವ ‘800’ ಸಿನಿಮಾ JioCinemaದಲ್ಲಿ ಬಿಡುಗಡೆಗೊಳ್ಳುತ್ತಿದೆ. ಇದೇ ಡಿಸೆಂಬರ್ 2ರಂದು JioCinema ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೊಳ್ಳುತ್ತಿರುವ ಈ ಸಿನಿಮಾ, ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರ ಬದುಕು ಮತ್ತು ಸಾಧನೆಗಳನ್ನು ಆಧರಿಸಿದ್ದು. ಟೆಸ್ಟ್ ಕ್ರಿಕೆಟ್‌ನಲ್ಲಿ 800 ವಿಕೆಟ್‌ಗಳನ್ನು ಪಡೆದುಕೊಂಡು ದಾಖಲೆ ನಿರ್ಮಿಸಿದ್ದ ಬೌಲರ್ ಬದುಕಿನ ತೆರೆ-ಮರೆಯ ಕಥೆಯನ್ನು ಹೇಳುವ ಈ ಸಿನಿಮಾ, ಕ್ರಿಕೆಟ್ ಪ್ರಿಯರಿಗಂತೂ ಮನರಂಜನೆಯ ಮೃಷ್ಟಾನ್ನವನ್ನೇ ಉಣಿಸುತ್ತದೆ. ವಿವೇಕ್ ರಂಗಾಚಾರಿ ನಿರ್ಮಾಣದ ಈ ಸಿನಿಮಾ ತಮಿಳು, ತೆಲುಗು, ಮಲಯಾಳಂ, ಹಿಂದಿ, ಬೆಂಗಾಲಿ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ವೀಕ್ಷಣೆಗೆ ಲಭ್ಯವಿರುವುದು ವಿಶೇಷ. ಸ್ಪಿನ್ನರ್ ಬದುಕಿನ ಸ್ಟನ್ನಿಂಗ್ ಸ್ಟೋರಿ!: ಖ್ಯಾತ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಕ್ರಿಕೆಟ್ ಬದುಕಿನ ಸಾಧನೆಗಳನ್ನು ಹೇಳುವ ‘800’ ಸಿನಿಮಾ, ಅವರ ಖಾಸಗಿ ಬದುಕಿನ ಸಂಕಷ್ಟಗಳನ್ನೂ ನೋಡುಗರ…
ಕೋಲ್ಕತಾ: ಓಲೈಕೆ, ಒಳನುಸುಳುವಿಕೆ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರ ವಿಚಾರಗಳ ಕುರಿತು ಬಂಗಾಳ ಸಿಎಂ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿನ ಟಿಎಂಸಿ ಸರ್ಕಾರವನ್ನು ಕಿತ್ತು ಹಾಕಬೇಕು ಮತ್ತು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಜನರಿಗೆ ಮನವಿ ಮಾಡಿದರು. ಸಭೆಯಲ್ಲಿ ಅಪಾರ ಸಂಖ್ಯೆಯನ್ನು ಜನರು ಸೇರಿರುವುದನ್ನು ಶ್ಲಾಘಿಸಿದ ಅಮಿತ್ ಶಾ, ಇದು ಜನರ ಭಾವನೆಯನ್ನು ಸೂಚಿಸುತ್ತದೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. https://ainlivenews.com/ms-dhoni-bought-a-car-worth-3-30-crores-full-viral-on-social-media/ “ಬಂಗಾಳವು ಒಳನುಸುಳುವಿಕೆ, ಓಲೈಕೆ, ರಾಜಕೀಯ ಹಿಂಸಾಚಾರ ಮತ್ತು ಭ್ರಷ್ಟಾಚಾರದಿಂದ ನಲುಗುತ್ತಿದೆ. ಇಡೀ ದೇಶದಲ್ಲಿ ಚುನಾವಣೆ ಸಂಬಂಧಿ ಹಿಂಸಾಚಾರವು ಅತ್ಯಧಿಕವಾಗಿರುವುದು ಬಂಗಾಳದಲ್ಲಿ. ಪಶ್ಚಿಮ ಬಂಗಾಳದಲ್ಲಿ 212 ಬಿಜೆಪಿ ಕಾರ್ಯಕರ್ತರನ್ನು ಕೊಲ್ಲಲಾಗಿದೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಜನರು ತಮ್ಮ ಮತಗಳ ಮೂಲಕ ಈ ಕೊಲೆಗಳಿಗೆ ನ್ಯಾಯ ಕೇಳಲಿದ್ದಾರೆ” ಎಂದು ಅಮಿತ್ ಶಾ ಹೇಳಿದರು.
ಬೆಂಗಳೂರು:- ಬಿಜೆಪಿಗೆ ಮುಸ್ಲಿಂ ಮತ ಬೇಡ ಎಂಬ ಹೇಳಿಕೆ ನೀಡಿದ್ದ ಮಾಜಿ ಸಚಿವ ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ , ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನು ಡಿ.15ಕ್ಕೆ ಮುಂದೂಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣ ದಾಖಲಾಗಿದ್ದಾಗ ಅರ್ಜಿದಾರರು ಹಾಲಿ ಶಾಸಕರಾಗಿದ್ದರು. ಹಾಗಾಗಿ ಜನಪ್ರತಿನಿಧಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಲು ಮ್ಯಾಜಿಸ್ಟ್ರೇಟ್‌ಗೆ ಅಧಿಕಾರ ವ್ಯಾಪ್ತಿ ಇಲ್ಲ. ಅದರಂತೆ ಪೊಲೀಸರು ಪಡೆದುಕೊಂಡ ಅನುಮತಿ ಊರ್ಜಿತವಾಗುವುದಿಲ್ಲ. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕಾಯ್ದೆಯ ಸೆಕ್ಷನ್ 125ರ ಉಲ್ಲಂಘನೆಯ ಪ್ರಶ್ನೆ ಉದ್ಭವಿಸುವುದಿಲ್ಲ. ಶಿವಮೊಗ್ಗದ ಮ್ಯಾಜಿಸ್ಟ್ರೇಟ್‌ನಿಂದ ಅನುಮತಿ ಪಡೆದು ದಾಖಲಿಸಿಕೊಂಡಿರುವ ಎಫ್‌ಐಆರ್ ಆಧರಿಸಿ ನಡೆದ ತನಿಖೆಯ ಅಂತಿಮ ವರದಿಯನ್ನು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಾಯಾಲಯಕ್ಕೆ ಸಲ್ಲಿಸಲಾಗಿದೆ. ಖಾಸಗಿ ಸುದ್ದಿ ಸಂಸ್ಥೆಯ ಎಕ್ಸ್ ಖಾತೆಯಲ್ಲಿ ಬಂದ ಮಾಹಿತಿ ಆಧರಿಸಿ ದೂರು ದಾಖಲಿಸಲಾಗಿದೆ. ಉಳಿದಂತೆ ಪ್ರಕರಣದಲ್ಲಿ ಯಾವುದೇ ಬಲವಾದ ಸಾಕ್ಷಿ-ಪುರಾವೆಗಳಿಲ್ಲ. ಆದ್ದರಿಂದ ಇಂತಹ ಪ್ರಕರಣದ ತನಿಖೆ ಕಾನೂನಿನ…
ರಾಯಚೂರು:- ಎಂಪಿ ಚುನಾವಣೆಯ ಉದ್ದೇಶದಿಂದ ನಗರ ಬಿಜೆಪಿ ಶಾಸಕರ ವಿರುದ್ಧ ಕೋಮುಗಲಭೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ ಅಲ್ಲಾವುದ್ದೀನ್ ದರ್ಗಾದ ಹತ್ತಿರ ಸ್ವಾಗತಕಮಾನಗೆ ಟೆಂಡರ್ 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಗರಸಭೆಯಿಂದ ಟೆಂಡರ್ ಕರೆಯಲಾಗಿತ್ತು. ಬಳಿಕ ಕಾಮಗಾರಿ ನಡಿತಿರುವ ವೇಳೆ ಅರ್ಧಕ್ಕೆ ನಿಂತಿಿದ್ದು, ಕೆಲಸ ನಿಲ್ಲಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಮುಸ್ಲಿಂ ಯುವಕರು ಗರಂ ಆಗಿದ್ದಾರೆ. ಅಲ್ಲಾಹು ಅಕ್ಬರ್,ಜೈ ಶ್ರೀ ರಾಮ್ ಪರಸ್ಪರ ಘೋಷಣೆ ಕೂಗಿ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ. ಬಿಜೆಪಿಯ ನಗರ ಶಾಸಕ ಶಿವರಾಜ್ ಪಾಟೀಲ್ ವಿರುದ್ಧ ಕಾಂಗ್ರೆಸ್ ಮುಖಂಡ ಬಸಿರುದ್ದೀನ್ ಫುಲ್ ಗರಂ ಆಗಿದ್ದಾರೆ ಬಿಜೆಪಿಯವರು ನಡಿತಿರುವ ಕಾಮಗಾರಿ ತಡೆಗಟ್ಟಿ ಗುಂಡಾಗಿರಿ ಮಾಡುತ್ತಿದ್ದಾರೆ. ನಗರ ಶಾಸಕರು ಇಂತಹ ನೀಚ ಕೆಲಸಕ್ಕೆ ಕೈ ಹಾಕಬಾರದು ಶಾಂತಿ ಸೌಹಾರ್ತೆ ಕಾಪಾಡುವ ಒಬ್ಬ ಜನಪ್ರತಿನಿಧಿಯ ಕೆಲಸ. ತಾವೇ ಮುಂದೆ ಬಂದು ಕೋಮುಗಲಭೆ ಸೃಷ್ಟಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಗರಂ ಆಗಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬಂದಿರುವುದರಿಂದ ಜಗಳ ಹಚ್ಚುವ ಬೆಂಕಿ…