ಆಸ್ಟ್ರೇಲಿಯಾ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ತಮ್ಮ ವೃತ್ತಿ ಜೀವನದ ಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನ ತೋರಿದ ಭಾರತ ತಂಡದ ಆರಂಭಿಕ ಋತುರಾಜ್ ಗಾಯಕ್ವಾಡ್, ಅಂತಾರಾಷ್ಟ್ರೀಯ ಚುಟುಕು ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕವನ್ನು ಪೂರ್ಣಗೊಳಿಸಿದರು. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ ಎದುರು ಅವರು ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಇಲ್ಲಿನ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಯಶಸ್ವಿ ಜೈಸ್ವಾಲ್ ಮತ್ತು ಇಶಾನ್ ಕಿಶನ್ ಬಹುಬೇಗ ವಿಕೆಟ್ ಒಪ್ಪಿಸಿದರು. ಆದರೆ, ಒಂದು ತುದಿಯಲ್ಲಿ ಕೊನೆಯವರೆಗೂ ದೀರ್ಘಾವಧಿ ಬ್ಯಾಟ್ ಮಾಡಿದ ಋತುರಾಜ್ ಗಾಯಕ್ವಾಡ್ ಆಸೀಸ್ ಬೌಲರ್‌ಗಳಿಗೆ ಬೆವರಿಳಿಸಿದರು. ಕೇವಲ 52 ಎಸೆತಗಳಲ್ಲಿಯೇ ಗಾಯಕ್ವಾಡ್ ಶತಕವನ್ನು ಪೂರ್ಣಗೊಳಿಸಿದರು. ತಮ್ಮ ಚೊಚ್ಚಲ ಟಿ20ಐ ಶತಕದ ಮೂಲಕ ಋತುರಾಜ್ ಗಾಯಕ್ವಾಡ್ ಭಾರತದ ಪರ ಇತಿಹಾಸ ಸೃಷ್ಟಿಸಿದರು. ಆಸ್ಟ್ರೇಲಿಯಾ ವಿರುದ್ದ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಬಲಗೈ ಆಟಗಾರ ಬರೆದಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್…
Author: AIN Author
ಬೆಂಗಳೂರು: ಅರ್ಹ ಪತ್ರಕರ್ತರಿಗೆ ಪ್ರಶಸ್ತಿ ಅರಸಿ ಬಂದಿರುವುದು ಶ್ಲಾಘನೀಯ ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದ ಅವರು, ಪತ್ರಕರ್ತರು ಸಮಾಜದ ಮತ್ತು ಸರ್ಕಾರದ ಅಂಕು-ಡೊಂಕುಗಳನ್ನು ತಿದ್ದುವವರಾಗಿದ್ದು, ವೃತ್ತಿ ಬದ್ಧತೆ ಕಾಪಾಡಿಕೊಳ್ಳಬೇಕು. ಈ ಬಾರಿ ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬಂದಿರುವುದು ನಿಜಕ್ಕೂ ಶ್ಲಾಘನೀಯ ಎಂದರು. ಇಂದಿನ ಸಮಾಜದಲ್ಲಿ ಪತ್ರಕರ್ತರು ದಿಟ್ಟತನದಿಂದ ಕಾರ್ಯ ನಿರ್ವಹಿಸಬೇಕಾದುದು ಅತ್ಯಗತ್ಯ. ಹಾಗಾಗಿ ಸಮರ್ಥರಿಗೆ ಮನ್ನಣೆ ನೀಡಬೇಕಾದುದು ಎಲ್ಲರ ಕರ್ತವ್ಯ ಎಂದು ಅವರು ಹೇಳಿದರು. ನಾನು ಸದನಕ್ಕೆ ಬಂದ ಹೊಸದರಲ್ಲಿ ಏನೇನು ತಪ್ಪು ಮಾಡಿದೆ ಎನ್ನುವುದನ್ನು ಹಿರಿಯ ಪತ್ರಕರ್ತರೇ ತಿದ್ದಿ ಹೇಳುತ್ತಿದ್ದರು. ಹಾಗಾಗಿ ಬಹಳ ಕಲಿಯಲು ಸಾಧ್ಯವಾಯಿತು. ವೃತ್ತಿಪರವಾಗಿ ಅಷ್ಟು ಪ್ರಬುದ್ಧತೆ ಹೊಂದಿದ ಪತ್ರಕರ್ತರು ಇದ್ದರು. ಈಗ ಆ ಸಂಖ್ಯೆ ಇಳಿಮುಖವಾಗುತ್ತಿದೆ ಎಂದರು.
ಇದೀಗ ಚಳಿಯ ವಾತಾವರಣ ಹೆಚ್ಚಿರುವ ಕಾಲವಾದ್ದರಿಂದ, ನೆಗಡಿ, ಗಂಟಲುನೋವು ಸಾಮಾನ್ಯವಾಗಿ ಕಂಡುಬರುತ್ತದೆ. ಈ ಸಂದರ್ಭ ನೀವು ಆರೋಗ್ಯ ಹಾಗೂ ದೇಹವನ್ನು ಸಮತೋಲನದಲ್ಲಿಟ್ಟುಕೊಳ್ಳಬೇಕೆಂದರೆ ಉತ್ತಮ ಆಹಾರಾಭ್ಯಸವನ್ನು ಮೈಗೂಡಿಸಿಕೊಳ್ಳುವುದೂ ಅಗತ್ಯ. ನಾವಿಂದು ಚಹಾ ಅಥವಾ ಕಾಫಿ ಬದಲಿಗೆ ಸವಿಯಬಹುದಾದ ಆರೋಗ್ಯಕರ ಕಷಾಯ ಮಾಡುವುದು ಹೇಗೆಂದು ಹೇಳಿಕೊಡುತ್ತೇವೆ. ನೆಗಡಿ ಮಾತ್ರವಲ್ಲದೇ ಜೀರ್ಣಕ್ರಿಯೆ ಒಳ್ಳೆಯ ಮದ್ದು! ಒಮ್ಮೆ ಟ್ರೈ ಮಾಡಿ! ಬೇಕಾಗುವ ಪದಾರ್ಥಗಳು: ಕಷಾಯ ಪುಡಿ ತಯಾರಿಸಲು: ಕೊತ್ತಂಬರಿ ಬೀಜ – 1 ಕಪ್ ಜೀರಿಗೆ – ಅರ್ಧ ಕಪ್ ಸೋಂಪು – 3 ಟೀಸ್ಪೂನ್ ಮೆಂತ್ಯ – 2 ಟೀಸ್ಪೂನ್ ಕರಿ ಮೆಣಸು – 2 ಟೀಸ್ಪೂನ್ ಲವಂಗ – 10 ಏಲಕ್ಕಿ – 5 ಜಾಯಿಕಾಯಿ – 1 ಅರಿಶಿನ – 2 ಟೀಸ್ಪೂನ್ ಒಣ ಶುಂಠಿ ಪುಡಿ – 2 ಟೀಸ್ಪೂನ್ ಕಷಾಯ ಮಾಡಲು: ನೀರು – 1 ಕಪ್ ಹಾಲು – 1 ಕಪ್ ಕಷಾಯ ಪುಡಿ – 1-2 ಟೀಸ್ಪೂನ್…
ಸ್ಯಾಂಡಲ್‌ವುಡ್ ನಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಶೈಲಿಯ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಲೇ ಇರುತ್ತಾರೆ. ಇದೀಗ ಬಿಳಿ ಬಣ್ಣದ ಉಡುಗೆಯಲ್ಲಿ ‘ಟೋಬಿ’ (Toby) ಬ್ಯೂಟಿ ಚೈತ್ರಾ ಆಚಾರ್ ಮಿಂಚಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ಬಿಳಿ ಬಣ್ಣದ ಉಡುಗೆಯಲ್ಲಿ ಮಸ್ತ್ ಆಗಿ ‘ಟೋಬಿ’ ಸುಂದರಿ ಫೋಟೋಶೂಟ್ ಮಾಡಿಸಿದ್ದಾರೆ. ಕ್ಯಾಮೆರಾ ಕಣ್ಣಿಗೆ ಬಗೆ ಬಗೆಯ ಪೋಸ್ ಕೊಡುತ್ತಾ ನಗು ಚೆಲ್ಲಿದ್ದಾರೆ. ನಟಿಯ ನಯಾ ಲುಕ್ ನೋಡಿ ಪಡ್ಡೆಹುಡುಗರು ಫಿದಾ ಆಗಿದ್ದಾ ಬೋಲ್ಡ್ & ಬ್ಯೂಟಿಫುಲ್ ನಟಿ ಚೈತ್ರಾ ಫೋಟೋಶೂಟ್‌ನಲ್ಲಿ ಅಷ್ಟೇ ಮಿಂಚೋದು ಅಲ್ಲ. ಹೊಸ ಬಗೆಯ ಪಾತ್ರಗಳ ಮೂಲಕ ಕೂಡ ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ಟೋಬಿ’ ಮತ್ತು ‘ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ’ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.
ಶ್ರೀಲೀಲಾ (Sreeleela) ಅಭಿಮಾನಿಗಳು ಕಂಗಾಲಾಗಿದ್ಧಾರೆ. ಇದೇನಾಗುತ್ತಿದೆ ನಮ್ಮ ದೇವತೆ ಬದುಕಿನಲ್ಲಿ? ನಾಯಕಿ ಪಟ್ಟ ಕಳೆದುಕೊಳ್ಳುತ್ತಾರಾ ಲೀಲಾ. ಅವಸರಕ್ಕೆ ಬಿದ್ದು ಅವಲಕ್ಷಣ ಮಾಡಿಸಿಕೊಂಡರಾ, ಪ್ರಿನ್ಸ್ ಹಾಗೂ ಪವನ್ ಕಲ್ಯಾಣ್ (Pawan Kalyan) ಸಿನಿಮಾ ಕೈ ಹಿಡಿಯದಿದ್ದರೆ ಭವಿಷ್ಯದ ಗತಿ ಏನು? ಇದು ಖುದ್ದು ಶ್ರೀಲೀಲಾಗೂ ಕಂಗಾಲು ಮಾಡಿದೆ. ಏನದು ಸೀಕ್ರೆಟ್. ಶ್ರೀಲೀಲಾ ಅಭಿನಯದ ಮೂರು ಸಿನಿಮಾ ಬ್ಯಾಕ್ ಟು ಬ್ಯಾಕ್ ಬಿಡುಗಡೆಯಾದವು. ಅದರಲ್ಲಿ ಬಾಲಕೃಷ್ಣ (Balayya) ಜೊತೆ ನಟಿಸಿದ, ಅಂದರೆ ಮಗಳಾಗಿ ಕಾಣಿಸಿದ್ದ ಭಗವಂತ ಕೇಸರಿ ಹಿಟ್ ಆಯಿತು. ಆದರೆ ಕ್ರೆಡಿಟ್ ಪೂರ್ತಿ ಬಾಲಯ್ಯ ನುಂಗಿ ನೀರು ಕುಡಿದರು. ಶ್ರೀಲೀಲಾ ಗೆದ್ದೂ ಸೋತರು. ಈ ನಡುವೆ ‘ಸ್ಕಂದ’ (Skanda) ಹಾಗೂ ‘ಆದಿಕೇಶವ’ ಬಂತು ನೋಡಿ. ‘ಸ್ಕಂದ’ ಚಿತ್ರದಲ್ಲಿ ಹಾಡು ಕೆಲವು ದೃಶ್ಯ ಅಷ್ಟೇ ಪಾಲಿಗೆ ಬಂದ ಪಂಚಾಮೃತ. ಹತ್ತತ್ತು ಸಿನಿಮಾ ಕೈಯಲ್ಲಿವೆ. ಹ್ಯಾಪ್‌ನಿಂಗ್ ಸ್ಟಾರ್ ಶ್ರೀಲೀಲಾಗೆ ಪ್ರಿನ್ಸ್ ಹಾಗೂ ಪವನ್ ಜೊತೆ ಅವಕಾಶ ಸಿಕ್ಕಿದೆ. ಈಗಾಗಲೇ ಶ್ರೀಲೀಲಾ ಫ್ಯಾನ್ಸ್ ದಿಕ್ಕೆಟ್ಟಿದ್ದಾರೆ. ‘ಗುಂಟೂರು ಖಾರಂ’…
ಹೆಚ್ಚಿನ ಹೂಡಿಕೆದಾರರು ಡಾಲರ್ ಬಿಟ್ಟು ಚಿನ್ನ ಹಾಗೂ ಷೇರುಗಳತ್ತ ಮುಗಿಬೀಳುತ್ತಿದ್ದಾರೆ. ಇದು ಚಿನ್ನಕ್ಕೆ ಬೇಡಿಕೆ ಹೆಚ್ಚಿಸಿದೆ. ಮೇಲಾಗಿ ಭಾರತದಲ್ಲಿ ಈಗ ಮದುವೆ ಸೀಸನ್ ಕೂಡ ಹೌದು. ಇದು ಹೆಚ್ಚಿನ ಬೇಡಿಕೆ ಸೃಷ್ಟಿಸುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,850 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,800 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 2ಕ್ಕೆ): 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,700 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,950 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 795 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್ನ 10…
ಮೈಸೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಸಂಸದ ಪ್ರತಾಪ್ ಸಿಂಹ ಹೆಸರು ಬದಲಾಯಿಸಿಕೊಂ ಡಿದ್ದಾರೆ. 2 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ ಎಂದು ಹೇಳಿರುವುದು ಉಲ್ಟಾ ಆಗಲಿದ್ದು, 2 ಲಕ್ಷ ಮತಗಳಿಂದ ಸೋಲುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಲೇವಡಿ ಮಾಡಿದ್ದಾರೆ. ‘ರಾಜ್ಯದಲ್ಲಿ ಉಡಾನ್ ಯೋಜನೆಯಡಿ ಪ್ರತಿ ಜಿಲ್ಲೆಗೂ ವಾಯು ಸಾರಿಗೆ ಸಂಪರ್ಕ ಕೊಡುತ್ತೇವೆ ಎಂದು ಭರವಸೆ ನೀಡಿದ್ದಿರಿ. ಆದರೆ, ಎಲ್ಲಿ ಮಾಡಿದ್ದೀರಿ? ಮೈಸೂರು -ಕುಶಾಲನಗರ ಹೈವೇ ಕಾಮಗಾರಿ ಏನಾಯಿತು? ನಾಗನಹಳ್ಳಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಹಾಗೇ ನಿಂತಿದೆ. ಸೆಮಿ ಕಂಡಕ್ಟರ್ ಉತ್ಪಾದನೆ ಘಟಕ ಎಲ್ಲಿ ಹೋಯಿತು?’ ಎಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು. ‘ಪ್ರತಿಪಕ್ಷ ನಾಯಕ ಆರ್.ಅಶೋಕ್ ರಾಜ್ಯದ ಆರ್ಥಿಕ ಪರಿಸ್ಥಿತಿ ಅಧೋಃಗತಿಗೆ ಹೋಗಿದೆ. ರಾಜ್ಯ ಸರಕಾರ ಶ್ವೇತ ಪತ್ರ ಹೊರಡಿಸಬೇಕು ಎನ್ನುತ್ತಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ 75 ಸಾವಿರ ಕೋಟಿ ರೂ. ಸಾಲ ಮಾಡಿದ್ದಾರೆ. 2018ರಿಂದ 2023ರ ಮಾರ್ಚ್ವರೆಗೆ 2.18 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ’ ಎಂದರು.
ಬೆಂಗಳೂರು:- ನಗರ ಶಾಲೆಗಳ ಮೇಲೆ ಹುಸಿ ಬಾಂಬ್ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 48 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ನಿನ್ನೆ ಬೆಳ್ಳಂಬೆಳಗ್ಗೆ ಶಾಲೆಗಳ ಮೇಲೆ ಹುಸಿ ಬಾಂಬ್ ಕರೆಗಳು ಉದ್ಯಾನನಗರಿ ಬೆಂಗಳೂರನ್ನು ಬೆಚ್ಚಿ ಬೀಳಿಸಿತ್ತು. ಈ ಕುರಿತು ಪೊಲೀಸರು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ. ಬೆಳಗ್ಗೆ 15 ಶಾಲೆಗಳಿಂದ ಪ್ರಾರಂಭವಾಗಿ ಬಳಿಕ ಏಕಾಏಕಿ 42 ಶಾಲೆಗಳಿಗೆ ಹುಸಿ ಬಾಂಬ್ ಸಂದೇಶಗಳು ಬಂದಿದ್ದವು. ಕೂಡಲೇ ಎಚ್ಚೆತ್ತುಕೊಂಡ ಶಾಲಾ ಆಡಳಿತ ಮಂಡಳಿ ಮತ್ತು ಬೆಂಗಳೂರು ಪೊಲೀಸ್ ಅಧಿಕಾರಿಗಳು ಬಾಂಬ್ ಸಂದೇಶ ಬಂದ ಎಲ್ಲಾ ಶಾಲೆಗಳನ್ನು ಬಾಂಬಾ ಸ್ಕ್ವಾಡ್ ಕರೆಸಿ ತಪಾಸಣೆಗೆ ಒಳಪಡಿಸಿದರು. ಬಳಿಕ ಇದೊಂದು ಹುಸಿ ಬಾಂಬ್ ಸಂದೇಶ ಎಂದು ತಿಳಿದು ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎಂದು ಆದಷ್ಟು ಬೇಗ ಪತ್ತೆ ಹಚ್ಚುವಂತೆ ಮತ್ತು ಅವರು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ಪೊಲೀಸರಿಗೆ ಸೂಚನೆ ನೀಡಿದೆ. ಈಗಾಗಲೇ ಪ್ರಕರಣಕ್ಕೆ…
ದಾವಣಗೆರೆ :- ಚನ್ನಗಿರಿ ತಾಲೂಕಿನ ಬಸವರಾಜಪುರದಲ್ಲಿ ಪಂಪ್ಸೆಟ್ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಜರುಗಿದೆ. 62 ವರ್ಷದ ಅಲಿಬಾಯಿ ಮೃತ ದುರ್ದೈವಿ ಎನ್ನಲಾಗಿದೆ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ವಿದ್ಯುತ್ ಅವಘಡಕ್ಕೆ ಸಂಬಂಧಿಸಿದಂತೆ ಅನೇಕ ಪ್ರಕರಣಗಳು ದಾಖಲಾಗುತ್ತಿದ್ದು, ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕಿದೆ.
ಬೆಂಗಳೂರು:- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ಅಮಾನತು ಮಾಡಿ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪಿ.ರಾಜು ಹಾಗೂ ಮೈಸೂರು ತಾಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್ವರಿ ಅವರನ್ನು ಅಮಾನತುಗೊಳಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿದೆ. ಇನ್ನು ಭ್ರೂಣ ಲಿಂಗ ಪತ್ತೆ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ‘ಇದು ರಾಜ್ಯಾದ್ಯಂತ ಇರುವ ಜಾಲ. ಭ್ರೂಣ ಹತ್ಯೆ ತಡೆಯಲು ಅಧಿಕಾರಿಗಳು ವಿಫಲ ಆಗಿದ್ದಾರೆ. ನಮ್ಮ ಇಲಾಖೆಯಲ್ಲಿ ಆಗಿರುವ ಲೋಪದ ಬಗ್ಗೆ ಮುಚ್ಚುಮರೆ ಇಲ್ಲ. ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಾಗುತ್ತೆ. ಯಾವುದೇ ಮುಲಾಜು ನೋಡಬೇಡಿ ಎಂದು ಸಿಎಂ ಹೇಳಿದ್ದಾರೆ ಎಂದಿದ್ದರು. ಲಿಂಗಾನುಪಾತ ನೋಡಿದಾಗ ಹೆಣ್ಣುಮಕ್ಕಳ ಸಂಖ್ಯೆಯೂ ಕಡಿಮೆಯಿದೆ. ಸಮಾಜದಲ್ಲಿ ಹೆಣ್ಣು ಮಗು ಅಂದಾಕ್ಷಣ ಬೇಡ ಎನ್ನುವ ಪರಿಸ್ಥಿತಿ ಇದೆ. ಭ್ರೂಣ ಲಿಂಗ…