ಬೆಂಗಳೂರು:- ಮುಂದಿನ 5 ವರ್ಷದಲ್ಲಿ ಕರ್ನಾಟಕ ಏಡ್ಸ್‌ಮುಕ್ತ ಮಾಡುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾದ ವಿಶ್ವ ಏಡ್ಸ್ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ದೇಶ ಮತ್ತು ರಾಜ್ಯವನ್ನು ಏಡ್ಸ್ ಮುಕ್ತಗೊಳಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದರು. ಎಚ್‌ಐವಿ ಮಾರಕ ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ತಡೆಗಟ್ಟುವುದು ಎಲ್ಲರ ಜವಾಬ್ದಾರಿಯಾಗಿದೆ. 1981ರಲ್ಲಿ ಮೊದಲು ಇದು ಕಾಣಿಸಿಕೊಂಡಿತ್ತು. 1986ರಲ್ಲಿ ಭಾರತದಲ್ಲಿ, 1996ರಲ್ಲಿ ರಾಜ್ಯದಲ್ಲಿ ಕಾಣಿಸಿಕೊಂಡಿತು. ಇತ್ತೀಚಿನ ದಿನಗಳಲ್ಲಿ ಎಚ್‌ಐವಿಪೀಡಿತರ ಸಂಖ್ಯೆ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿದರು. ನಮ್ಮ ಸಮಾಜವನ್ನು ಎಚ್‌ಐವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಇದಕ್ಕಾಗಿ ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು. 2015-2020ರವರೆಗೆ ಏಡ್ಸ್‌ಪೀಡಿತರ ಸಂಖ್ಯೆಯನ್ನು ಸೊನ್ನೆಗೆ ತನ್ನಿ ಎಂಬ ಘೋಷವಾಕ್ಯವಿತ್ತು. ಆದರೆ ಈ ಗುರಿಯನ್ನು ಇನ್ನೂ ಸಾಧಿಸಲಾಗಿಲ್ಲ. ಈ ಘೋಷಣೆಯನ್ನು ಕಾರ್ಯರೂಪಕ್ಕೆ ತರುವುದು ಕೇವಲ…
Author: AIN Author
ಸ್ಮಾರ್ಟ್ ಫೋನ್‌ಗಳು ಈಗ ಬಹುತೇಕರ ಬದುಕಿನ ಅವಿಭಾಜ್ಯ ಅಂಗವಾಗಿ ಹೋಗಿವೆ. ಈ ಫೋನ್‌ಗಳು ಈಗ ಬರೀ ಕರೆ ಮಾಡುವ ಸಾಧನವಾಗಿ ಮಾತ್ರ ಉಳಿದಿಲ್ಲ. ಹಣ ಪಾವತಿ, ಹಣ ವರ್ಗಾವಣೆ, ಮನರಂಜನೆ, ಮಾಹಿತಿ ಹೀಗೆ ನಮ್ಮ ಬಹುತೇಕ ದೈನಂದಿನ ಚಟುವಟಿಕೆಗಳಿಗೆ ಸ್ಮಾರ್ಟ್ ಫೋನ್‌ಗಳು ಆಧಾರವಾಗಿವೆ ಲಾವಾ ಬ್ಲೇಜ್ 5ಜಿ ಲಾವಾ ಬ್ಲೇಜ್ 5ಜಿ ಫೋನ್‌ನ ಬೆಲೆ 11,999 ರೂಪಾಯಿ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್‌ನಿಂದ ಚಾಲಿತವಾಗಿದ್ದು, 5000mAh ಬ್ಯಾಟರಿ ಹಾಗೂ 3.5 ಎಂಎಂ ಆಡಿಯೋ ಜಾಕ್‌ನೊಂದಿಗೆ ಬರುತ್ತದೆ. ನೋಕಿಯಾ ಜಿ42 5ಜಿ ನೋಕಿಯಾ ಜಿ42 5ಜಿ ಸ್ಮಾರ್ಟ್ ಫೋನ್‌ನ ಬೆಲೆ 12,999 ರೂಪಾಯಿ. ಇದು ಸ್ನಾಪ್‌ಡ್ರಾಗನ್ 480+ ಪ್ರೊಸೆಸರ್‌ನಿಂದ ಚಾಲಿತವಾಗಿದೆ. ಈ ಫೋನ್ ಕೂಡಾ 5000mAh ಬ್ಯಾಟರಿ ಹೊಂದಿದ್ದು, ಇದು 3.5 ಎಂಎಂ ಆಡಿಯೋ ಜಾಕ್‌ನೊಂದಿಗೆ ಲಭ್ಯವಿದೆ. ಟೆಕ್ನೋ ಪೋವಾ 5 ಪ್ರೋ ಪ್ರಸಿದ್ಧ ಟೆಕ್ನೋ ಕಂಪನಿಯ ಟೆಕ್ನೋ ಪೋವಾ 5 ಪ್ರೋ ಸ್ಮಾರ್ಟ್‌ಫೋನ್ 14,999 ರೂಪಾಯಿಗೆ ಸಿಗುತ್ತದೆ. ಈ ಫೋನ್…
ತಿರುವನಂತಪುರಂ: ಈ ಹಿಂದೆ ಪರೀಕ್ಷೆ ಬರೆಯಲು ಹೋಗಿದ್ದಾಗ ಅಳುತ್ತಿದ್ದ ಪುಟ್ಟ ಕಂದಮ್ಮನನ್ನ ಮಹಿಳಾ ಪೊಲೀಸ್ ಸಮಾಧಾನ ಮಾಡಿದ್ದ ಸುದ್ದಿಯನ್ನು ಓದಿದ್ದೇವೆ. ಇದೀಗ ಅಂಥದ್ದೇ ಮನಸ್ಸಿಗೆ ಮುಟ್ಟುವಂತಹ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಕೇರಳದ ಕೊಚ್ಚಿಯಲ್ಲಿ (Kochi Kerala) ಈ ಘಟನೆ ನಡೆದಿದ್ದು, ನಾಲ್ಕು ತಿಂಗಳ ಮಗುವಿಗೆ ಸ್ವತಃ ತಾವೇ ಎದೆ ಹಾಲುಣಿಸುವ ಮೂಲಕ ತಾಯಿ ಪ್ರೀತಿ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಮಹಿಳಾ ಪೊಲೀಸ್ ಅಧಿಕಾರಿಗೆ ಇಲಾಖೆ ಮತ್ತು ಸಾರ್ವಜನಿಕರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. https://twitter.com/RMahatej/status/1727649899133739272?ref_src=twsrc%5Etfw%7Ctwcamp%5Etweetembed%7Ctwterm%5E1727649899133739272%7Ctwgr%5E5510b323ad7f75a9de14b76b7f2a6de2fb704f77%7Ctwcon%5Es1_&ref_url=https%3A%2F%2Ftv9kannada.com%2Ftrending%2Fviral-video-kochi-police-officer-breastfeeds-ailing-woman-4-months-old-baby-sct-724770.html ಘಟನೆ ಏನು..?: ಬಿಹಾರ (Bihar) ಮೂಲದ ಮಗುವಿನ ತಾಯಿಗೆ ಶಸ್ತ್ರಚಿಕಿತ್ಸೆಯೊಂದು ನಡೆದಿತ್ತು. ಆ ಬಳಿಕ ಆಕೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆ ತಾಯಿಯನ್ನು ಎರ್ನಾಕುಲಂ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪುಟ್ಟ ಕಂದಮ್ಮನ ಆರೈಕೆಗೆ ಎರ್ನಾಕುಲಂ ವನಿತಾ ಪೊಲೀಸ್ ಠಾಣೆಯ ಸಿವಿಲ್ ಪೊಲೀಸ್ ಅಧಿಕಾರಿ ಆರ್ಯ ಅವರು ಮುಂದಾಗಿದ್ದಾರೆ. ಸದ್ಯ ಆರ್ಯ ಅವರ ಈ ಕಾರ್ಯಕ್ಕೆ ಸಹ ಅಧಿಕಾರಿಗಳು ಮತ್ತು ಸಾರ್ವಜನಿಕರು ಭೇಷ್ ಎಂದಿದ್ದಾರೆ. ಈ…
ಸಾಮಾನ್ಯವಾಗಿ 3-4 ದಿನಗಳಲ್ಲಿ ಕಡಿಮೆಯಾಗುತ್ತದೆ, ಆದರೆ ಕಫ, ಕೆಮ್ಮು ಒಮ್ಮೆ ಶುರುವಾದರೆ 15-20 ದಿನಗಳಾದರೂ ಹೋಗುವುದಿಲ್ಲ. ನಿರಂತರ ಕೆಮ್ಮು ಸಾಕಷ್ಟು ಅಸ್ವಸ್ಥತೆಯನ್ನು ಉಂಟುಮಾಡುತ್ತದೆ, ಇದಕ್ಕೆ ಒಣ ಕಫವೇ ಕಾರಣ. ಇದು ನಿದ್ರೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಆಹಾರವನ್ನು ನುಂಗಲು ಕಷ್ಟವಾಗುತ್ತದೆ. ಹಾಗಾಗಿ ಮಾತ್ರೆ ಔಷಧಿಗಳಿಗಿಂತ ಮನೆಮದ್ದು ತೆಗೆದುಕೊಂಡರೆ ಒಣ ಕಫವನ್ನು ಕಡಿಮೆ ಮಾಡಬಹುದು. ಹಾಗಾದರೆ ಒಣ ಕೆಮ್ಮನ್ನು ಕಡಿಮೆ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ ಸೋಂಪು: ಇದು ಒಣ ಕೆಮ್ಮಿನ ಸಮಸ್ಯೆಯನ್ನು ತೆಗೆದುಹಾಕುತ್ತದೆ. ಹೊಟ್ಟೆ ನೋವು, ಗ್ಯಾಸ್ ಇತ್ಯಾದಿ ಸಮಸ್ಯೆಗಳನ್ನು ಇದು ನಿವಾರಿಸುತ್ತದೆ ಎಂದು ತಿಳಿದಿದೆ. ಜೊತೆಗೆ ಇದನ್ನು ಶೀತ ಮತ್ತು ಕೆಮ್ಮಿನ ಸಂದರ್ಭದಲ್ಲಿಯೂ ಪ್ರಯತ್ನಿಸಬಹುದು. ಸೋಂಪು ಗಂಟಲಿನ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ. ಅದಕ್ಕಾಗಿ ಸೋಂಪು ಚಹಾವನ್ನು ತಯಾರಿಸಬಹುದು ಮತ್ತು ಕುಡಿಯಬಹುದು. ಈ ಚಹಾದಲ್ಲಿ, ಅದರ ಕೆಲವು ಎಲೆಗಳು ಹೂವುಗಳು, ಜೇನು ತುಪ್ಪವನ್ನು ಸಹ ಸೇರಿಸಬಹುದು. ಕರಿಮೆಣಸು: ಒಣ ಕೆಮ್ಮಿಗೆ ಕರಿಮೆಣಸು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಬಹುದು. ಕರಿಮೆಣಸಿನಲ್ಲಿ ವಿಟಮಿನ್ ಸಿ, ಆಂಟಿ-ಬಯೋಟಿಕ್ ಗುಣಗಳಿವೆ, ಇದು ಒಣ ಕೆಮ್ಮು, ಶೀತವನ್ನು…
ಬೆಂಗಳೂರು:- ಈತ ಓದಿದ್ದು ಬರೀ SSLC, ಆದ್ರೆ ಇವನು ವೃತ್ತಿಯಲ್ಲಿ ಡಾಕ್ಟರ್. ಅರೆ ಹೇಗೆ ಅಂತೀರಾ!? ಈ ಸ್ಟೋರಿ ಪೂರ್ತಿ ಓದಿ. ಹಸುಗೂಸು ಮಾರಾಟ ಹಗರಣದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. ಅವರಲ್ಲಿ ಒಬ್ಬ ನಕಲಿ ವೈದ್ಯನೂ ಇದ್ದಾನೆ. ಅವನೇ ಕೆವಿನ್ ಅಲಿಯಾಸ್ ಕರಣ್. ಬಡ ಕುಟುಂಬಗಳ ಗರ್ಭಿಣಿಯರನ್ನು ಮೊದಲೇ ಗೊತ್ತು ಮಾಡಿಕೊಂಡು ಅವರಿಗೆ ಹಣದ ಆಮಿಷ ಒಡ್ಡಿ, ಹೆರಿಗೆಯಾಗುತ್ತಿದ್ದಂತೆಯೇ ಮಗುವನ್ನು ಬೇರೆಯವರಿಗೆ ಮಾರಾಟ ಮಾಡುವ ಜಾಲ ಇದಾಗಿದೆ. ಐವಿಎಫ್ ನಂಥ ಕೃತಕ ಗರ್ಭಧಾರಣಾ ವಿಧಾನದ ಮೂಲಕವೂ ಮಕ್ಕಳನ್ನು ಸೃಷ್ಟಿಸಿ ಮಾರಾಟ ಮಾಡಲಾಗುತ್ತಿತ್ತು. ಪ್ರಕರಣದಲ್ಲಿ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಸುಹಾಸಿನಿ, ಶರಣ್ಯ, ಹೇಮಲತಾ, ಮಹಾಲಕ್ಷ್ಮಿ, ಗೋಮತಿ, ರಾಧಾಮಣಿ ಮೊದಲ ಹಂತದಲ್ಲಿ ಬಂಧಿತರಾದರೆ ಬಳಿಕ ಕೆವಿನ್ ಅಲಿಯಾಸ್ ಮತ್ತು ರಮ್ಯ ಎಂಬವರನ್ನು ಬಂಧಿಸಲಾಗಿತ್ತು. ಎರಡನೇ ಹಂತದಲ್ಲಿ ಸಿಕ್ಕಿಬಿದ್ದಿರುವ ಕೆವಿನ್ ಅಲಿಯಾಸ್ ಕರಣ್ ಒಬ್ಬ ನಕಲಿ ವೈದ್ಯ. ಅವನು ಓದಿದ್ದು ಬರೀ ಎಸ್‌ಎಸ್‌ಎಲ್‌ಸಿ. ಆದರೆ, ತಾನೊಬ್ಬ ಡಾಕ್ಟರ್ ಎಂದು ಪೋಸ್ ಕೊಟ್ಟು…
ನಮ್ಮ ಬದುಕಿನ ಗುರಿಗಳ ಸಾಧನೆಯಲ್ಲಿ ನಾವು ಸಾಮಾನ್ಯವಾಗಿ ಆರೋಗ್ಯವನ್ನು ನಿರ್ಲಕ್ಷ ಮಾಡುತ್ತೇವೆ. ವಿಶೇಷವಾಗಿ ಪುರುಷರು ಕೆಲಸದ ಒತ್ತಡದಲ್ಲಿ ಯುವ ವಯಸ್ಸಿನಲ್ಲಿ ಆರೋಗ್ಯದ ಕಡೆ ಗಮನಹರಿಸುವುದಿಲ್ಲ. ಆದರೆ ನೀವು ಎಂದಿಗೂ ಕಡೆಗಣಿಸಬಾರದಾದದ ರೋಗಲಕ್ಷಣಗಳನ್ನು ಇಲ್ಲಿ ವಿವರಿಸಲಾಗಿದೆ. ಎದೆಯ ಅಸ್ವಸ್ಥತೆ ಅಥವಾ ನೋವು ಪುರುಷರು ಎಂದಿಗೂ ನಿರ್ಲಕ್ಷಿಸಬಾರದಾದ ಸಾಮಾನ್ಯ ಲಕ್ಷಣಗಳಲ್ಲಿ ಇದು ಒಂದಾಗಿದೆ. ಇದು ಸಾಮಾನ್ಯವಾಗಿ ಹೃದಯ ಸಂಬಂಧಿ ಸಮಸ್ಯೆಗಳೊಂದಿಗೆ ಸಂಬಂಧಿಸಿರಬಹುದು, ಎದೆ ನೋವು ವಿವಿಧ ಕಾರಣಗಳನ್ನು ಹೊಂದಿರಬಹುದು ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಆದಾಗ್ಯೂ, ಈ ರೋಗಲಕ್ಷಣವನ್ನು ನಿರ್ಲಕ್ಷಿಸುವುದು ಜೀವಕ್ಕೆ ಅಪಾಯಕಾರಿ. ಉಸಿರಾಟದ ತೊಂದರೆ ಉಸಿರಾಟದ ತೊಂದರೆಯು ಉಸಿರಾಟ ಮತ್ತು ಹೃದಯರಕ್ತನಾಳದ ಎರಡೂ ಆಧಾರವಾಗಿರುವ ಆರೋಗ್ಯ ಸಮಸ್ಯೆಗಳನ್ನು ಸೂಚಿಸುತ್ತದೆ. ಪುರುಷರು ವಿಶೇಷವಾಗಿ ದೈಹಿಕ ಚಟುವಟಿಕೆಗಳು ಅಥವಾ ವಿಶ್ರಾಂತಿ ಸಮಯದಲ್ಲಿ ಹಠಾತ್ ಅಥವಾ ನಿರಂತರ ಉಸಿರಾಟದ ತೊಂದರೆಯತ್ತ ಗಮನ ಕೊಡಬೇಕು. ಇದು ಆಸ್ತಮಾ, ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆಯಂತಹ(COPD) ಪರಿಸ್ಥಿತಿಗಳ ಸಂಕೇತವಾಗಿರಬಹುದು. ಧೂಮಪಾನಿಗಳಲ್ಲಿ ಅಥವಾ ಪಲ್ಮನರಿ ಎಂಬಾಲಿಸಮ್ ಸಮಸ್ಯೆಯೂ ಆಗಿರಬಹುದು. ವಿವರಿಸಲಾಗದ ತೂಕ ನಷ್ಟ…
ಬೆಂಗಳೂರು:- ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಬದ್ಧವಾಗಿದೆ ಎಂದು ಸಚಿವ ಡಾ. ಎಂಸಿ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅತಿಥಿ ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಲು ರಾಜ್ಯ ಸರಕಾರ ಬದ್ಧವಾಗಿದ್ದು, ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿರುವುದಾಗಿ ಹೇಳಿದರು. ಅತಿಥಿ ಉಪನ್ಯಾಸಕರ ವಿಚಾರದಲ್ಲಿ ಸರಕಾರ ಸಹಾನುಭೂತಿ ಹೊಂದಿದೆ. ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಸ್ಪಷ್ಟತೆ ಹೊಂದಿದ್ದಾರೆ. ಹಾಗಾಗಿ ಮುಷ್ಕರವನ್ನು ಕೈಬಿಟ್ಟು ತರಗತಿಗಳಿಗೆ ತೆರಳುವಂತೆ ಮನವಿ ಮಾಡಿದರು. 2013-18ರ ಅವಧಿಯಲ್ಲಿ ನೀಡಲಾಗಿದ್ದ ಎಲ್ಲ ಭರವಸೆಗಳನ್ನು ಕಾಂಗ್ರೆಸ್ ಸರಕಾರ ಈಡೇರಿಸಿತ್ತು. ಹಾಗೆ ಈ ಅವಧಿಯಲ್ಲೂ ಪ್ರಣಾಳಿಕೆಯಲ್ಲಿ ಹೇಳಿರುವಂತೆ ನಾವು ನಡೆದುಕೊಳ್ಳಲು ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಪ್ರಸಕ್ತ ಶೇ.70ರಷ್ಟು ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ನಿಮ್ಮ ಮೇಲಿನ ಕಾರ್ಯದೊತ್ತಡ ನನಗೆ ತಿಳಿದಿದೆ. ತಮ್ಮನ್ನ ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ. ಆದರೆ ತಮ್ಮ ಬೇಡಿಕೆ ಈಡೇರಿಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಗಳು ಆರ್ಥಿಕ ಇಲಾಖೆ ಮತ್ತು ಕಾನೂನು ಇಲಾಖೆಯ ಜೊತೆ ಚರ್ಚಿಸಿ ತೀರ್ಮಾನಿಸಬೇಕಾಗಿದೆ ಎಂದು…
ಮಾಸ್ಕೋ: ರಷ್ಯಾದ (Russia) ಮಹಿಳೆಯರು 8 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಿ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಕರೆ ನೀಡಿದ್ದಾರೆ. ಮಾಸ್ಕೋದಲ್ಲಿ ನಡೆದ ವಿಶ್ವ ರಷ್ಯಾದ ಪೀಪಲ್ಸ್ ಕೌನ್ಸಿಲ್ ಉದ್ದೇಶಿಸಿ ಮಾತನಾಡಿದ ಪುಟಿನ್, ಮುಂಬರುವ ದಶಕಗಳಲ್ಲಿ ರಷ್ಯಾದ ಜನಸಂಖ್ಯೆ ಹೆಚ್ಚಿಸುವುದು ನಮ್ಮ ಗುರಿ ಎಂದು ಹೇಳಿದ್ದಾರೆ. ರಷ್ಯಾದ ಜನನ ಪ್ರಮಾಣವು 1990 ರ ದಶಕದಿಂದ ಕುಸಿಯುತ್ತಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ದೇಶದಲ್ಲಿ 3,00,000 ಕ್ಕೂ ಹೆಚ್ಚು ಸಾವು-ನೋವುಗಳಾಗಿವೆ ಎಂದು ದಿ ಇಂಡಿಪೆಂಡೆಂಟ್ ವರದಿ ತಿಳಿಸಿದೆ. https://ainlivenews.com/ms-dhoni-bought-a-car-worth-3-30-crores-full-viral-on-social-media/ ದೇಶದ ಅನೇಕ ಜನಾಂಗದವರು ನಾಲ್ಕು ಅಥವಾ ಐದಕ್ಕಿಂತ ಹೆಚ್ಚಿನ ಮಕ್ಕಳಿದ್ದ ಸುಭದ್ರ ಕುಟುಂಬ ವ್ಯವಸ್ಥೆ ಹೊಂದಿದ್ದರು. ನಮ್ಮ ಅಜ್ಜಿ, ಮುತ್ತಜ್ಜಿಯರು 7, 8 ಮತ್ತು ಅದಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿದ್ದರು ಎಂಬುದನ್ನು ಈ ಸಂದರ್ಭದಲ್ಲಿ ನಾವು ನೆನೆಯಬೇಕು ಎಂದು ಪುಟಿನ್ ತಿಳಿಸಿದ್ದಾರೆ. ನಾವು ಈ ಅತ್ಯುತ್ತಮ ಸಂಪ್ರದಾಯಗಳನ್ನು ಸಂರಕ್ಷಿಸೋಣ, ಪುನರುಜ್ಜೀವನಗೊಳಿಸೋಣ. ದೊಡ್ಡ ಕುಟುಂಬಗಳು ರೂಢಿಯಾಗಬೇಕು. ಎಲ್ಲಾ…
ಬೆಂಗಳೂರು:- ಕಾಂಗ್ರೆಸ್ ಬಾಂಬ್ ಇಡುವವರಿಗೆ ಬೆಂಬಲ ನೀಡುತ್ತಿದೆ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ’ ಎಂದು ಹೇಳಿದರು. ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು. ಈ ಕುರಿತು ವಿವಾದ ಭುಗಿಲೇಳುತ್ತಿದ್ದಂತೆ ಸ್ಪಷ್ಟನೆ ನೀಡಿದ್ದ ಸಚಿವ ಜಮೀರ್, ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ನಾನು ಮಾತನಾಡಿದ್ದೇನೆ. ನಾನು ಹೈದರಾಬಾದ್ ನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದವರ ಬಗ್ಗೆ ಅಗೌರವದಿಂದ ಮಾತನಾಡಿಲ್ಲ. ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ…
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಪಿಎಚ್‍ಡಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಡೈಮೊಂಡ್ ಖುಷ್ವಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಐಐಎಸ್‍ಸಿ ಪ್ರಕಟನೆ ಹೊರಡಿಸಿ, ಕ್ಯಾಂಪಸ್ ಎಲ್ಲರಿಗೂ ಸುರಕ್ಷಿತ ಸ್ಥಳವಾಗಿದೆ. ಎಲ್ಲ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿ ತಕ್ಷಣವೇ ತಮ್ಮ ಕ್ಯಾಂಪಸ್‍ನಲ್ಲಿ ಲಭ್ಯವಿರುವ ಆಪ್ತ ಸಹಾಯಕರ ನೆರವು ಪಡೆಯಬೇಕು. ಮಾನಸಿಕ ಆರೋಗ್ಯ ವೃತ್ತಿಪರರೊಂದಿಗೆ ಮಾತನಾಡಲು ಅಗತ್ಯ ಇರುವವರು ದೂರವಾಣಿ ಸಂಖ್ಯೆ 080 47113444 ಅನ್ನು ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.