ಬೆಂಗಳೂರು:- ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಬದ್ಧವಾಗಿದೆ ಎಂದು ಸಚಿವ ಡಾ. ಎಂಸಿ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅತಿಥಿ ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಲು ರಾಜ್ಯ ಸರಕಾರ ಬದ್ಧವಾಗಿದ್ದು, ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿರುವುದಾಗಿ ಹೇಳಿದರು. ಅತಿಥಿ ಉಪನ್ಯಾಸಕರ ವಿಚಾರದಲ್ಲಿ ಸರಕಾರ ಸಹಾನುಭೂತಿ ಹೊಂದಿದೆ. ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಸ್ಪಷ್ಟತೆ ಹೊಂದಿದ್ದಾರೆ. ಹಾಗಾಗಿ ಮುಷ್ಕರವನ್ನು ಕೈಬಿಟ್ಟು ತರಗತಿಗಳಿಗೆ ತೆರಳುವಂತೆ ಮನವಿ ಮಾಡಿದರು. 2013-18ರ ಅವಧಿಯಲ್ಲಿ ನೀಡಲಾಗಿದ್ದ ಎಲ್ಲ ಭರವಸೆಗಳನ್ನು ಕಾಂಗ್ರೆಸ್ ಸರಕಾರ ಈಡೇರಿಸಿತ್ತು. ಹಾಗೆ ಈ ಅವಧಿಯಲ್ಲೂ ಪ್ರಣಾಳಿಕೆಯಲ್ಲಿ ಹೇಳಿರುವಂತೆ ನಾವು ನಡೆದುಕೊಳ್ಳಲು ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಪ್ರಸಕ್ತ ಶೇ.70ರಷ್ಟು ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ನಿಮ್ಮ ಮೇಲಿನ ಕಾರ್ಯದೊತ್ತಡ ನನಗೆ ತಿಳಿದಿದೆ. ತಮ್ಮನ್ನ ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ. ಆದರೆ ತಮ್ಮ ಬೇಡಿಕೆ ಈಡೇರಿಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಗಳು ಆರ್ಥಿಕ ಇಲಾಖೆ ಮತ್ತು ಕಾನೂನು ಇಲಾಖೆಯ ಜೊತೆ ಚರ್ಚಿಸಿ ತೀರ್ಮಾನಿಸಬೇಕಾಗಿದೆ ಎಂದು…
Author: AIN Author
ಮಾಸ್ಕೋ: ರಷ್ಯಾದ (Russia) ಮಹಿಳೆಯರು 8 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಿ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಕರೆ ನೀಡಿದ್ದಾರೆ. ಮಾಸ್ಕೋದಲ್ಲಿ ನಡೆದ ವಿಶ್ವ ರಷ್ಯಾದ ಪೀಪಲ್ಸ್ ಕೌನ್ಸಿಲ್ ಉದ್ದೇಶಿಸಿ ಮಾತನಾಡಿದ ಪುಟಿನ್, ಮುಂಬರುವ ದಶಕಗಳಲ್ಲಿ ರಷ್ಯಾದ ಜನಸಂಖ್ಯೆ ಹೆಚ್ಚಿಸುವುದು ನಮ್ಮ ಗುರಿ ಎಂದು ಹೇಳಿದ್ದಾರೆ. ರಷ್ಯಾದ ಜನನ ಪ್ರಮಾಣವು 1990 ರ ದಶಕದಿಂದ ಕುಸಿಯುತ್ತಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ದೇಶದಲ್ಲಿ 3,00,000 ಕ್ಕೂ ಹೆಚ್ಚು ಸಾವು-ನೋವುಗಳಾಗಿವೆ ಎಂದು ದಿ ಇಂಡಿಪೆಂಡೆಂಟ್ ವರದಿ ತಿಳಿಸಿದೆ. https://ainlivenews.com/ms-dhoni-bought-a-car-worth-3-30-crores-full-viral-on-social-media/ ದೇಶದ ಅನೇಕ ಜನಾಂಗದವರು ನಾಲ್ಕು ಅಥವಾ ಐದಕ್ಕಿಂತ ಹೆಚ್ಚಿನ ಮಕ್ಕಳಿದ್ದ ಸುಭದ್ರ ಕುಟುಂಬ ವ್ಯವಸ್ಥೆ ಹೊಂದಿದ್ದರು. ನಮ್ಮ ಅಜ್ಜಿ, ಮುತ್ತಜ್ಜಿಯರು 7, 8 ಮತ್ತು ಅದಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿದ್ದರು ಎಂಬುದನ್ನು ಈ ಸಂದರ್ಭದಲ್ಲಿ ನಾವು ನೆನೆಯಬೇಕು ಎಂದು ಪುಟಿನ್ ತಿಳಿಸಿದ್ದಾರೆ. ನಾವು ಈ ಅತ್ಯುತ್ತಮ ಸಂಪ್ರದಾಯಗಳನ್ನು ಸಂರಕ್ಷಿಸೋಣ, ಪುನರುಜ್ಜೀವನಗೊಳಿಸೋಣ. ದೊಡ್ಡ ಕುಟುಂಬಗಳು ರೂಢಿಯಾಗಬೇಕು. ಎಲ್ಲಾ…
ಬೆಂಗಳೂರು:- ಕಾಂಗ್ರೆಸ್ ಬಾಂಬ್ ಇಡುವವರಿಗೆ ಬೆಂಬಲ ನೀಡುತ್ತಿದೆ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ’ ಎಂದು ಹೇಳಿದರು. ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು. ಈ ಕುರಿತು ವಿವಾದ ಭುಗಿಲೇಳುತ್ತಿದ್ದಂತೆ ಸ್ಪಷ್ಟನೆ ನೀಡಿದ್ದ ಸಚಿವ ಜಮೀರ್, ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ನಾನು ಮಾತನಾಡಿದ್ದೇನೆ. ನಾನು ಹೈದರಾಬಾದ್ ನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದವರ ಬಗ್ಗೆ ಅಗೌರವದಿಂದ ಮಾತನಾಡಿಲ್ಲ. ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ…
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಪಿಎಚ್‍ಡಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಡೈಮೊಂಡ್ ಖುಷ್ವಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಐಐಎಸ್‍ಸಿ ಪ್ರಕಟನೆ ಹೊರಡಿಸಿ, ಕ್ಯಾಂಪಸ್ ಎಲ್ಲರಿಗೂ ಸುರಕ್ಷಿತ ಸ್ಥಳವಾಗಿದೆ. ಎಲ್ಲ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿ ತಕ್ಷಣವೇ ತಮ್ಮ ಕ್ಯಾಂಪಸ್‍ನಲ್ಲಿ ಲಭ್ಯವಿರುವ ಆಪ್ತ ಸಹಾಯಕರ ನೆರವು ಪಡೆಯಬೇಕು. ಮಾನಸಿಕ ಆರೋಗ್ಯ ವೃತ್ತಿಪರರೊಂದಿಗೆ ಮಾತನಾಡಲು ಅಗತ್ಯ ಇರುವವರು ದೂರವಾಣಿ ಸಂಖ್ಯೆ 080 47113444 ಅನ್ನು ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.
ಬೆಂಗಳೂರು:- ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ತೀವ್ರಗೊಂಡು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದ್ದು, ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಹಗುರ ಮಳೆಯಾಗುವ ಸಾಧ್ಯತೆ ಇದೆ ರಾಜ್ಯದ ಮೇಲೆ ಇದರ ಪರಿಣಾಮ ಹೆಚ್ಚಾಗಿ ಇರದಿದ್ದರೂ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸಲಿದೆ. ಕೆಲವೆಡೆ ಚದುರಿದಂತೆ ಅಲ್ಲಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಬಂಗಾಲಕೊಲ್ಲಿ ದಕ್ಷಿಣ ಭಾಗದಲ್ಲಿ ಉಂಟಾಗಿದ್ದ ಲಘು ವಾಯುಭಾರ ಕುಸಿತವು ತೀವ್ರವಾಗಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ತಮಿಳುನಾಡು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಪೂರ್ವ ಈಶಾನ್ಯದ ಕಡೆಗೆ ಚಂಡಮಾರುತವು ಚಲಿಸುವ ಸಾಧ್ಯತೆ ಇರುವುದರಿಂದ ರಾಜ್ಯದ ಮೇಲೆ ನೇರ ಪರಿಣಾಮವಾಗುವುದಿಲ್ಲ ಇಲಾಖೆ ಮಾಹಿತಿ ನೀಡಿದೆ. ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುವ ಜೊತೆಗೆ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವಾಹನ ಸವಾರರಿಗೆ ಗುಂಡಿಗಳು ಯಮಧೂತನಂತೆ ಕಾಡ್ತಿವೆ.ಈ ಕಿಲ್ಲರ್ ರಸ್ತೆ ಗುಂಡಿಗಳು ಜನರ ಜೀವ ಬಲಿ ಪಡೆಯುತ್ತಿವೆ.ಪದೇ ಪದೇ ಸಾವುಗಳು ಸಂಭವಿಸಿದರೂ ಬಿಬಿಎಂಪಿ ಕಣ್ಣು ತೆರೆಯುತ್ತಿಲ್ಲ.ಹೈಕೋರ್ಟ್ ಕಿವಿ ಹಿಂಡಿದರೂ ಪಾಲಿಕೆ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಂಡಿಲ್ಲ.ಹೀಗಾಗಿ ಯಥಾಪ್ರಕಾರ ಪಾಲಿಕೆ ಕುಂಭ ಕರ್ಣ ನಿದ್ರೆಗೆ ಜಾರಿದೆ. ಡಿಸಿಎಂ ಡಿಕೆ ಶಿವಕುಮಾರ್ ನವೆಂಬರ್ ತಿಂಗಳೊಳಗೆ ಗುಂಡಿ ಮುಚ್ಚಿ ಎಂದ್ರೂ ಪಾಲಿಕೆ ಮುಚ್ಚಿಲ್ಲ. ಇನ್ನೂ ಸಾಕಷ್ಟು ರಸ್ತೆಗಳಲ್ಲಿ ಬಲಿಯಾಗಿ ಕಾಯ್ತಿವೆ ಯಮಗುಂಡಿಗಳು. ಹಾಗಾದ್ರೆ ಇನ್ನೆರಡು ದಿನಗಳಲ್ಲಿ ಗುಂಡಿ ಮುಚ್ಚುತ್ತಾ ಪಾಲಿಕೆ ಬನ್ನಿ ಹೇಳ್ತೀವಿ. ಸಿಲಿಕಾನ್ ಸಿಟಿ ಬೆಂಗಳೂರು ಅಕ್ಷರಶಃ ರಸ್ತೆ ಗುಂಡಿಗಳ ರಾಜಧಾನಿಯಾಗುತ್ತಿದೆಯಾ? ಎನ್ನುವ ಅನುಮಾನ ಮೂಡುತ್ತಿದೆ.ಅತಿಯಾದ ಮಳೆ ಹಾಗೂ ಪಾಲಿಕೆಯ ಅಸಮರ್ಪಕ ರಸ್ತೆ ನಿರ್ವಹಣೆ ಕಾರಣದಿಂದಾಗಿ ರಾಜಧಾನಿ ರಸ್ತೆಗಳೆಲ್ಲ ಗುಂಡಿಮಯವಾಗಿವೆ ಹೈಕೋರ್ಟ್ ಪದೇ ಪದೆ ಚಾಟಿ ಬೀಸಿದ್ದರೂ ಯಾವುದೇ ಉಪಯೋಗ ಆಗಿಲ್ಲ. ಕಳೆದ ಹತ್ತು ತಿಂಗಳಿನಲ್ಲಿ ಸಾವಿರಾರು ರಸ್ತೆ ಗುಂಡಿ ಮುಚ್ಚಿದ್ದರೂ ನಗರ ರಸ್ತೆಗಳು ಗುಂಡಿ ಮುಕ್ತವಾಗಿಲ್ಲ. ನಗರದ ರಸ್ತೆ ಗುಂಡಿಗಳಿಗೆ…
ತಜ್ಞರ ಪ್ರಕಾರ ಇಂದಿಗೂ ಕೂಡ ನಾವು ಸರಿಯಾಗಿ ನೀರು ಕುಡಿಯುವ ಅಭ್ಯಾಸವನ್ನು ಕಲಿತಿಲ್ಲವಂತೆ. ಕೇಳಿದರೆ ಆಶ್ಚರ್ಯ ಎನಿಸುತ್ತದೆ ಅಲ್ಲವೇ? ಹೆಚ್ಚಾಗಿ ನೀರು ಕುಡಿಯಬೇಕು ಎಂದ ತಕ್ಷಣ ನಿಂತುಕೊಂಡು ನೀರು ಕುಡಿಯಬೇಕು ಎಂದು ಯಾರೂ ಹೇಳಿಲ್ಲ. ಏಕೆಂದರೆ ಇದು ತಪ್ಪಾದ ಅಭ್ಯಾಸ. ನಾವು ಕೂಡ ಇದನ್ನು ಅಭ್ಯಾಸ ಮಾಡಿಕೊಂಡು ನಮ್ಮ ಮುಂದಿನ ಪೀಳಿಗೆಯ ಮಕ್ಕಳಿಗೂ ಸಹ ಇದೇ ರೀತಿ ನೀರು ಕುಡಿಯುವಂತೆ ಆಜ್ಞಾಪನೆ ಮಾಡುತ್ತೇವೆ. ಆದರೆ ನಾವು ಮಾಡುವ ತಪ್ಪು ನಮಗೆ ಕೊನೆಯಾಗಬೇಕಲ್ಲವೇ? ಎಂದಿಗೂ ಅಷ್ಟೇ ನಿಂತುಕೊಂಡು ನೀರು ಕುಡಿಯಬಾರದು ಸಾಮಾನ್ಯವಾಗಿ ನಮ್ಮ ಮನೆಗಳಲ್ಲಿ ನಾವೇನಾದರೂ ತಿಂಡಿ ತಟ್ಟೆಯನ್ನು ಕೈಯಲ್ಲಿ ಹಿಡಿದು ಓಡಾಡಿಕೊಂಡು ಅಥವಾ ನಿಂತುಕೊಂಡು ಆಹಾರ ಸೇವನೆ ಮಾಡುತ್ತಿದ್ದರೆ ಮನೆಯಲ್ಲಿರುವ ದೊಡ್ಡವರು ಒಂದು ಕಡೆ ಅಚ್ಚುಕಟ್ಟಾಗಿ ಕುಳಿತು ಆಹಾರ ಸೇವನೆ ಮಾಡಲು ಹೇಳುತ್ತಾರೆ. ಇದು ಕುಡಿಯುವ ನೀರಿಗೂ ಸಹ ಅನ್ವಯಿಸುತ್ತದೆ. ಆಯುರ್ವೇದ ಪದ್ಧತಿಯ ಪ್ರಕಾರ, ನಾವು ನಿಂತುಕೊಂಡು ನೀರು ಕುಡಿಯುವ ಅಭ್ಯಾಸವನ್ನು ರೂಡಿ ಮಾಡಿಕೊಂಡಿರುವುದರಿಂದ, ನೀರಿನಲ್ಲಿರುವ ಅನೇಕ ಪೌಷ್ಟಿಕ ಸತ್ವಗಳು ನೀರಿನ…
ಸೂರ್ಯೋದಯ: 06.26 AM, ಸೂರ್ಯಾಸ್ತ : 05.51 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಪಂಚಮಿ 05:14 PM ತನಕ ನಂತರ ಷಷ್ಠಿ ನಕ್ಷತ್ರ: ಇವತ್ತು ಪುಷ್ಯ 06:54 PM ತನಕ ನಂತರ ಆಶ್ಲೇಷ ಯೋಗ: ಇವತ್ತು ಬ್ರಹ್ಮ 08:19 PM ತನಕ ನಂತರ ಇಂದ್ರ ಕರಣ: ಇವತ್ತು ಕೌಲವ 04:18 AM ತನಕ ನಂತರ ತೈತಲೆ 05:14 PM ತನಕ ನಂತರ ಗರಜ ರಾಹು ಕಾಲ: 09:00 ನಿಂದ 10:30 ವರೆಗೂ ಯಮಗಂಡ:01:30 ನಿಂದ 03:00 ವರೆಗೂ ಗುಳಿಕ ಕಾಲ: 06:00 ನಿಂದ 07:30 ವರೆಗೂ ಅಮೃತಕಾಲ: 11.54 AM to 01.39 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:43 ನಿಂದ ಮ.12:27 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.…
ಬೆಂಗಳೂರು:- ಐಜಿಎಸ್‌ಟಿ ಹಿಂಬಾಕಿ ಕಡಿತ ಮಾಡಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂದು ಸೀತಾರಾಮನ್ ಅವರಿಗೆ ಶುಕ್ರವಾರ ಪತ್ರ ಬರೆದಿರುವ ಮುಖ್ಯಮಂತ್ರಿ, ‘ರಾಜ್ಯಕ್ಕೆ ಮುಂಗಡವಾಗಿ ಪಾವತಿಸಿದ್ದ ಐಜಿಎಸ್‌ಟಿಯಲ್ಲಿ ಹಿಂಬಾಕಿ ಇದೆ ಎಂಬ ಕಾರಣ ನೀಡಿ 2022ರ ಡಿಸೆಂಬರ್ 26ರಂದು ₹ 798.03 ಕೋಟಿಯನ್ನು ಮರುಹೊಂದಾಣಿಕೆ ಮಾಡಿಕೊಳ್ಳಲಾಗಿತ್ತು. ಈ ರೀತಿ ರಾಜ್ಯಕ್ಕೆ ಸಂದಾಯವಾಗಬೇಕಾದ ತೆರಿಗೆ ಪಾಲನ್ನು ಬಾಕಿ ಹೆಸರಿನಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದರಿಂದ ರಾಜ್ಯಗಳು ಆರ್ಥಿಕವಾಗಿ ಸಮಸ್ಯೆಗೆ ಸಿಲುಕುತ್ತವೆ’ ಎಂದಿದ್ದಾರೆ. ₹ 34,000 ಕೋಟಿಗಳಷ್ಟು ಮೊತ್ತದ ಐಜಿಎಸ್‌ಟಿ ಹಿಂಬಾಕಿ ಇದೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಇಷ್ಟೊಂದು ದೊಡ್ಡ ಮೊತ್ತದ ಹಿಂಬಾಕಿ ಉಳಿಯಲು ಕಾರಣಗಳೇನು? ಈ ರೀತಿ ಬೃಹತ್ ಮೊತ್ತದ ಹಿಂಬಾಕಿಯು ರಾಜ್ಯ ಸರ್ಕಾರಗಳ ಹಣಕಾಸು ನಿರ್ವಹಣೆಯ ಮೇಲೆ ಬೀರಬಹುದಾದ ಪರಿಣಾಮಗಳ ಕುರಿತು ಕಳವಳ ಮೂಡಿದೆ ಎಂದು ಹೇಳಿದ್ದಾರೆ. ಐಜಿಎಸ್‌ಟಿ ಹಿಂಬಾಕಿಯ ಕುರಿತು ಸ್ಪಷ್ಟವಾಗಿ ಅರ್ಥೈಸಿಕೊಳ್ಳಬೇಕಿದೆ. ಈ ಕಾರಣದಿಂದ ಈಗ ಇರುವ ಒಟ್ಟು ಹಿಂಬಾಕಿ ಮತ್ತು ಅದನ್ನು ರಾಜ್ಯಗಳ ಮಧ್ಯೆ ಹಂಚಿಕೆ ಮಾಡುವಲ್ಲಿ…
ಚಿತ್ರದುರ್ಗ: ಕೆ ಆರ್ ಪುರಂ ಠಾಣೆ PSI ಕಲ್ಲಪ್ಪ ಬಳಿಯಿದ್ದ ಪಿಸ್ತೂಲ್ ನಾಪತ್ತೆ ಆಗಿರುವ ಘಟನೆ ಜರುಗಿದೆ. ಬೆಂಗಳೂರಿನ ಕೆ ಆರ್ ಪುರಂ ಠಾಣೆಯ PSI ಕಲ್ಲಪ್ಪ ಅವರ ಪಿಸ್ತೂಲ್ ಕಾಣೆಯಾಗಿದೆ. ಜಾನಕೊಂಡ ಗ್ರಾಮದ ಬಳಿಯ ರೆಸ್ಟೋರೆಂಟ್ ನಲ್ಲಿ ಘಟನೆ ಜರುಗಿದೆ. ಚಿತ್ರದುರ್ಗ ತಾಲೂಕಿನ ಜಾನಕೊಂಡ ಬಳಿಯ ಬಾರ್& ರೆಸ್ಟೋರೆಂಟ್ ಗೆ PSI ಕಲ್ಲಪ್ಪ ಊಟಕ್ಕೆ ಬಂದಿದ್ದಾಗ ಘಟನೆ ಜರುಗಿದೆ. ಊಟ ಮುಗಿಸಿ ಕೈತೊಳೆದು ಬರುವಷ್ಟರಲ್ಲಿ ಪಿಸ್ತೂಲ್ ನಾಪತ್ತೆ? ಆಗಿದೆ. ಶಿವಮೊಗ್ಗ ಕಡೆಯಿಂದ ಬೆಂಗಳೂರಿಗೆ PSI ತೆರಳುತ್ತಿದ್ದ. ಮಾರ್ಗ ಮದ್ಯೆ ಜಾನಕೊಂಡ ಬಳಿ ಊಟಕ್ಕೆ ತೆರಳಿದ್ದರು. ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದೆ. ಘಟನೆ ಕುರಿತು ಚಿತ್ರದುರ್ಗ ಪೊಲೀಸ್ ಮೂಲಗಳಿಂದ ಮಾಹಿತಿ ನೀಡಲಾಗಿದೆ. ಈವರೆಗೆ ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ ಎನ್ನಲಾಗಿದೆ.