ರಾಯಬಾಗ:- ತಾಲೂಕೀನ ರಾಯಬಾಗ ಪಟ್ಟಣದಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ಕನಕದಾಸರ 536 ನೇಯ ಜಯಂತಿ, ಶ್ರೀ ಕನಕದಾಸರ ಭಾವಚಿತ್ರದ ಪೂಜೆ ಸಲ್ಲಿಸಿ ಮೆರವಣಿಗೆಗೆ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹಾಗೂ ರಾಯಬಾಗ ತಹಶಿಲ್ದಾರ ಎಸ್ ಆರ್ ಮುಂಜೆ ಚಾಲನೆ ನೀಡಿದರು, ಡೋಳ್ಳು ಹಾಗೂ ಸಕಲ ಶುಭಕರ ವಾದ್ಯಗಳೊಂದಿಗೆ ಪಟ್ಟಣ್ಣದ ಪ್ರಮೂಖ ಬಿಗಳಲ್ಲಿ ಮೆರವಣಿಗೆ ಜರಗಿತು,ಹಾಗೂ ಯುಗಪೂರಯಷರ ವೇಷ ಭೂಷಣ ತೊಟ್ಟ ಮಕ್ಕಳು ಕಾರ್ಯಕ್ರಮದಲ್ಲಿ ಬಾಗಿಯಾದ್ದವು. ತಾಲೂಕ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ವೇದಿಕೆ ಕಾಯುಕ್ರಮವನ್ನ ಶ್ರೀ ಶಿವಯೋಗಾಶ್ರಮ ಹಾಲಸಿದ್ದನಾಥ ಮಠದ ಪರಮ ಪೂಜ್ಯ ಶ್ರೀ ಶ್ರೀಮಂತಸಿದ್ದ ಮಹಾರಾಜರು ಹಾಗೂ ವೇದಿಕೆಯ ಮೇಲಿದ್ದ ಗಣ್ಯರು ಜ್ಯೋತಿ ಪ್ರಜ್ವಲಿಸೂವ ಮೂಲಕ ಚಾಲನೆ ನಿಡಿದರು ತಾಲೂಕ ಆಡಳಿತ,ತಾಲೂಕ ಪಂಚಾಯತ,ಪಟ್ಟಣ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲೂಕಾ ಕುರಬರ ಸಂಘ ,ರಾಯಬಾಗ ಇವರ ಆಶ್ರಯದಲ್ಲಿ ನಡೆದ ಕಾರ್ಯಕ್ರಮ, ವೇದಿಕೆ ಮೇಲೆ ಕ್ರೀಡೆಗಳಲ್ಲಿ ರಾಷ್ಟ ಮಟ್ಟಕ್ಕೆ ಆಯ್ಕೆಯಾದ ಮಕ್ಕಳಿಗೆ ಸತ್ಕರಿಸಿ ಗೌರವಿಸಿದರು…
Author: AIN Author
ದಾವಣಗೆರೆ: ವಸತಿ ಸಚಿವ ಜಮೀರ್ ಅಹ್ಮದ್ ಹುಚ್ಚ ಎಂದು ಕರೆದಿರುವ ಮಾಜಿ ಸಚಿವ ಹಾಗೂ ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯರೂ ಒಂದು ರೀತಿಯ ಹುಚ್ಚ ಎಂದು ಮಾಜಿ ಶಾಸಕ ಎಸ್. ರಾಮಪ್ಪ ವಾಗ್ದಾಳಿ ನಡೆಸಿದರು. ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಣುಕಾಚಾರ್ಯ ಯಾವ ರೀತಿ ಮಾತನಾಡುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಹಾಗಾಗಿ, ಅವರ ಹೇಳಿಕೆಗಳನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ. ಜಮೀರ್ ಅಹ್ಮದ್ ಬಗ್ಗೆ ಕೀಳಾಗಿ ಮಾತನಾಡಿರುವುದು ಸರಿಯಲ್ಲ. ಹುಂಬನಂತೆ ಮಾತನಾಡುವುದು ಎಲ್ಲರಿಗೂ ತಿಳಿದಿರುವ ವಿಚಾರ ಎಂದು ಹೇಳಿದರು. ಜಮೀರ್ ಅಹ್ಮದ್ ಖಾನ್ ಅವರು ರಸ್ತೆಯಲ್ಲಿ ಓಡಾಡಲು ಬಿಟ್ಟಿರುವುದೇ ತಪ್ಪು. ಮುಂದಿನ ಅಧಿವೇಶನದಲ್ಲಿ ಜಮೀರ್ ಅಹ್ಮದ್ ಖಾನ್ ಹೇಗೆ ಪಾಲ್ಗೊಳ್ಳುತ್ತಾರೆ ಎಂಬುದನ್ನು ನೋಡುತ್ತೇವೆ ಎಂಬ ಹೇಳಿಕೆ ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಯಡಿಯೂರಪ್ಪರದ್ದು ಧಮಕಿ ರೀತಿಯದ್ದು. ಈ ರೀತಿಯ ಪ್ರಚೋದನಕಾರಿ ಹೇಳಿಕೆಯು ರಾಜ್ಯಾಧ್ಯಕ್ಷ ಹುದ್ದೆಗೆ ಶೋಭೆ ತರುವಂಥದ್ದಲ್ಲ. ಈ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿದರು. ಬಿ. ವೈ.…
ಗದಗ: ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಸರಿಯಾಗಿ ಕಲ್ಪಿಸುವಂತೆ ಒತ್ತಾಯಿಸಿ ABVP ಸಂಘಟನೆ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಪೊಲೀಸರ ಜೊತೆಗೆ ವಾಗ್ವಾದ ನಡೆಸಿದ ಘಟನೆ ಮಧ್ಯಾಹ್ನ ನಡೆದಿದೆ. ಗದಗ ನಗರದ ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣದ ಒಳಗೆ ಬರುತ್ತಿದ್ದ ಬಸ್ ತಡೆಯಲು ಮುಂದಾಗಿದ್ದ ವೇಳೆ ಬಸ್‌ನ ಮುಂದಿನ ಗಾಜು ಜಖಂಗೊಂಡಿದೆ. ಆದರೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳೇ ಗಾಜು ಜಖಂಗೊಳಿಸಿದ್ದಾರೆ ಎಂದು ಸಿಟ್ಟಾದ ಸಾರಿಗೆ ಸಿಬ್ಬಂದಿ ಹಾಗೂ ಪೊಲೀಸರು ಪ್ರತಿಭಟನಾಕಾರರ ಜೊತೆಗೆ ಮಾತಿನ ಚಕಮಕಿ ನಡೆಸಿದರು. ಗಾಜು ಜಖಂಗೊಳ್ಳಲು ನೀವೆ ಕಾರಣ ಎಂದು ಎಬಿವಿಪಿ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ತರಾಟೆಗೆ ತೆಗೆದುಕೊಂಡರು.ಆದರೆ ಗಾಜು ಜಖಂಗೊಳ್ಳಲು ನಾವು ಕಾರಣರಲ್ಲ. ಬಸ್ ತಡೆಯಲು ಮುಂದಾದಾಗ ಚಾಲಕ ಮೈಮೇಲೆ ಬಂದಾಗ ತಡೆದಿದ್ದೇವೆ. ಗಾಜು ಮೊದಲೆ ಒಡೆದಿತ್ತು ಎಂದು ಕಾರ್ಯಕರ್ತರು ಪ್ರತಿವಾದಿಸಿದರು. ಇದರಿಂದಾಗಿ ಕೆಲಕಾಲ ಗೊಂದಲ ನಿರ್ಮಾಣವಾಯಿತು.
ಬೆಂಗಳೂರು:- ಬೆಂಗಳೂರು ಶಾಲೆಗಳಿಗೆ ಬೆದರಿಕೆ ಕೇಸ್ ಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರಿನ ಕೆಲವು ಶಾಲೆಗಳಿಗೆ ಬಂದಿರುವ ಬಾಂಬ್ ಬೆದರಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು. ನಮಗೆ ಮಕ್ಕಳ ಸುರಕ್ಷತೆ ಮುಖ್ಯ. ಹೀಗಾಗಿ ಬೆದರಿಕೆ ಸಂದೇಶವನ್ನು ನಿರ್ಲಕ್ಷಿಸಿಲ್ಲ. ನಾನು ಬೆಂಗಳೂರು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇನೆ. ಮಾಹಿತಿ ಪಡೆದಿದ್ದೇನೆ’ ಎಂದರು. ‘ಈ ಹಿಂದೆ ಯಾವುದೋ ಒಂದು ಶಾಲೆಗೆ ಬೆದರಿಕೆ ಕರೆ ಇಲ್ಲವೇ ಸಂದೇಶ ಬರುತ್ತಿತ್ತು. ಈಗ ಒಂದೇ ಬಾರಿ ಹಲವು ಶಾಲೆಗಳಿಗೆ ಸಂದೇಶ ಕಳುಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಆಗುವುದಿಲ್ಲ. ಶೀಘ್ರ ಆರೋಪಿಗಳನ್ನು ಪೊಲೀಸರು ಬಂಧಿಸಲಿದ್ದಾರೆ ಎಂದರು.
ಮೈಸೂರು: ಮೈಸೂರು ತಾಲೂಕಿನ ಜಯಪುರ ಹೋಬಳಿ ಸಿಂಧುವಳ್ಳಿ, ಬ್ಯಾತಹಳ್ಳಿ, ಚಿಕ್ಕಕಾನ್ಯ, ದೊಡ್ಡಕಾನ್ಯ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿದೆ. ಹುಲಿ ಚಲನವಲನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹುಲಿ ಸೆರೆಗಾಗಿ ಅರಣ್ಯ ಇಲಾಖೆಯಿಂದ ಬೋನ್ ಅಳವಡಿಸಿದೆ. https://ainlivenews.com/ms-dhoni-bought-a-car-worth-3-30-crores-full-viral-on-social-media/ ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ ನೀಡಿ, ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ಮಾಹಿತಿ ಪಡೆದುಕೊಂಡರು. ಸೂಕ್ತ ಕಾರ್ಯಚರಣೆ ಮೂಲಕ ಹುಲಿ ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಜಿ.ಟಿ ದೇವೇಗೌಡ ಸೂಚನೆ ನೀಡಿದರು. ಅಲ್ಲದೆ ಗ್ರಾಮಸ್ಥರು ರಾತ್ರಿ ವೇಳೆಯಲ್ಲಿ ಅನವಶ್ಯಕವಾಗಿ ಓಡಾಡದಂತೆ ಮನವಿ ಮಾಡಿದರು. ಹುಲಿ ಕಾರ್ಯಚರಣೆ ಮುಗಿಯುವವರೆಗೆ ಜನರು ಸಹಕರಿಸುವಂತೆ ವಿನಂತಿಸಿಕೊಂಡರು.
ಬೆಂಗಳೂರು:- ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ ಅವರ ಆದಿಯಾಗಿ ಎಲ್ಲರೂ ಸೆರೆಸಿಕ್ಕ ಉಗ್ರರಿಗೆ ಅಮಾಯಕ ಪಟ್ಟ ಕಟ್ಟಿದ ಕಾರಣ, ಇಂದು ಬೆಂಗಳೂರಿನ ಶಾಲೆಗಳು ಬಾಂಬ್ ಬೆದರಿಕೆಯನ್ನು ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ’ ಎಂದು ಬಿಜೆಪಿ ಟೀಕಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಬೆಲೆ ಏರಿಕೆ ಜತೆಗೆ ಮತಾಂಧರ ಸಂಖ್ಯೆಯೂ ಹೆಚ್ಚಾಗಿದೆ. ಶಾಂತಿ ನೆಮ್ಮದಿಯ ತವರೂರಾಗಿದ್ದ ಕರ್ನಾಟಕದಲ್ಲಿ ಭದ್ರತಾ ವೈಫಲ್ಯಗಳೇ ಜಾಸ್ತಿಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ’ ಎಂದು ಬಿಜೆಪಿ ಕಿಡಿಕಾರಿದೆ.
ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಗ್ರಾಮದ ಬಳಿಯ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ನಡೆದಿದೆ. https://ainlivenews.com/ms-dhoni-bought-a-car-worth-3-30-crores-full-viral-on-social-media/ ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಚಿರತೆ ರಸ್ತೆ ಬದಿ ಹಾರಿ ಬಿದ್ದಿದೆ. ಸುಮಾರು ಮೂರು ವರ್ಷದ ಗಂಡು ಚಿರತೆ ಸಾವಿಗೀಡಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು:- ಹೆಲ್ಮೆಟ್ ವಿಚಾರಕ್ಕೆ ವಕೀಲನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈಕೋರ್ಟ್ ಪೀಠವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಹೆಲ್ಮೆಟ್ ಹಾಕದ ಕಾರಣಕ್ಕೆ ಅಮಾನುಷ ಹಲ್ಲೆ ಆಘಾತಕಾರಿ ಎಂದು ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ಕೃಷ್ಣ ಎಸ್. ದೀಕ್ಷಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಗರಿಕ ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು. ವಕೀಲರಿಗೇ ಹೀಗಾದರೆ ಜನಸಾಮಾನ್ಯರ ಕಥೆ ಏನು? ಹೆಲ್ಮೆಟ್ ಹಾಕದ ಕಾರಣಕ್ಕೆ ಹೀಗೆ ಹಲ್ಲೆ ನಡೆಸಬಹುದೇ? ಎಂದು ಪ್ರಶ್ನಿಸಿದ ಹೈಕೋರ್ಟ್, ಈ ಪ್ರಕರಣದ ಬಗ್ಗೆ ಕೈಗೊಂಡ ಕ್ರಮದ ಮಾಹಿತಿ ನೀಡಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಹಲ್ಲೆ ಕಾರಣಕ್ಕೆ ಕೋರ್ಟ್ ಬಹಿಷ್ಕರಿಸದಂತೆ ವಕೀಲರಿಗೂ ಹೈಕೋರ್ಟ್ ಮನವಿ ಮಾಡಿದ್ದು, ವಕೀಲರು ಟ್ರೇಡ್ ಯೂನಿಯನ್ ರೀತಿ ಕೋರ್ಟ್ ಬಹಿಷ್ಕರಿಸಬಾರದು. ಕಾನೂನು ರೀತ್ಯಾ ಕ್ರಮಕ್ಕೆ ಮುಂದಾಗುವಂತೆ ಹೈಕೋರ್ಟ್ ಸೂಚಿಸಿದೆ. ಇನ್ನು ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ತಪ್ಪಿತಸ್ಥ ಪೊಲೀಸರನ್ನು ಅಮಾನತುಗೊಳಿಸಿರುವುದಾಗಿ ಹೈಕೋರ್ಟ್ ಗೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು:- ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು, ‘ಪಂಚರಾಜ್ಯ ಚುನಾವಣೆ ನಂತರ ಪಕ್ಷದ ಹೈಕಮಾಂಡ್ ಶಾಸಕರ ರಕ್ಷಣೆ ಜವಾಬ್ದಾರಿ ನೀಡಿದೆಯೇ ಎಂದು ಪ್ರಶ್ನೆ ಕೇಳಿದಾಗ ಅದಕ್ಕೆ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು. “ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸ ನನಗಿದೆ. ಶಾಸಕರು ಎಲ್ಲೂ ಹೋಗುವುದಿಲ್ಲ. ಅವರನ್ನು ರಕ್ಷಣೆ ಮಾಡುವ ಅಗತ್ಯವಿಲ್ಲ. ಆ ಬಗ್ಗೆ ನನಗೆ ಇದುವರೆಗೂ ಯಾವುದೇ ಜವಾಬ್ದಾರಿ ನೀಡಿಲ್ಲ. ತೆಲಂಗಾಣ ಸೇರಿದಂತೆ ಕೆಲವು ಕಡೆ ನಮ್ಮ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ನಮ್ಮ ಪಕ್ಷದವರು ಸ್ಥಳೀಯ ಮಟ್ಟದಲ್ಲೇ ಇದನ್ನು ನಿಭಾಯಿಸುತ್ತಾರೆ” ಎಂದು ಕೇಳಿದರು. ರಾಜಸ್ಥಾನದಲ್ಲಿ ತೀವ್ರ ಸ್ಪರ್ಧೆ ಇರುವ ಮುನ್ಸೂಚನೆ ಸಿಕ್ಕಿದೆ ಎಂದು ಕೇಳಿದಾಗ, “ನನಗೆ ನನ್ನದೇ ಆದ ಅಭಿಪ್ರಾಯವಿದೆ. ಮತಯಂತ್ರದಲ್ಲಿರುವ ಮತದ ಮಾಹಿತಿ ನಿಮಗೂ ಗೊತ್ತಿಲ್ಲ, ನಮಗೂ ಗೊತ್ತಿಲ್ಲ. 48 ತಾಸುಗಳ ನಂತರ ಎಲ್ಲವೂ ಹೊರಬೀಳಲಿದೆ. ಈ ಸಮೀಕ್ಷೆಗಳು ಸುಮಾರು 10 ಸಾವಿರ ಮತದಾರರನ್ನು ಸಂಪರ್ಕಿಸಿ ಸಮೀಕ್ಷೆ ಮಾಡಲಾಗಿದೆ. ನಾವು ನಮ್ಮ ರಾಜ್ಯದಲ್ಲಿ ಪ್ರತಿ ಕ್ಷೇತ್ರದಲ್ಲಿ…
ಶಿವಮೊಗ್ಗ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಸಹೋದರರಿಬ್ಬರು ಸಾವನ್ನಪ್ಪಿದ ಘಟನೆ ಭದ್ರಾವತಿ ತಾಲುಕಿನ ಹುಣಸೆಕಟ್ಟೆ ಜಂಕ್ಷನ್ ಬಳಿ ನಡೆದಿದೆ. ಗೌಳಿಗರ ಕ್ಯಾಂಪ್ ನ ನಿವಾಸಿಗಳಾದ ಬೀರ (32) ಹಾಗು ಸುರೇಶ್(35) ಸಾವನ್ನಪ್ಪಿದ ಸಹೋದರರಾಗಿದ್ದಾರೆ. ಜಮೀನಿನಲ್ಲಿ ಕಟಾವು ಮಾಡಿ ಭತ್ತವನ್ನು ಕಣದಲ್ಲಿ ರಾಶಿ ಹಾಕಲಾಗಿತ್ತು. https://ainlivenews.com/ms-dhoni-bought-a-car-worth-3-30-crores-full-viral-on-social-media/ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆ ಗುಡುಗು ಸಿಡಿಲಿನಿಂದ ಭತ್ತದ ರಾಶಿಗೆ ಹೊದಿಕೆ ಹಾಕಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಮೀನಿಗೆ ಹೋದ ಮಕ್ಕಳು ತಡರಾತ್ರಿಯಾದ್ರೂ ಮನೆಗೆ ಬಾರದನ್ನು ಗಮನಿಸಿದ ಪೋಷಕರು ಜೀಮೀನಿಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ,ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.