ಬೆಂಗಳೂರು:- ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ ಅವರ ಆದಿಯಾಗಿ ಎಲ್ಲರೂ ಸೆರೆಸಿಕ್ಕ ಉಗ್ರರಿಗೆ ಅಮಾಯಕ ಪಟ್ಟ ಕಟ್ಟಿದ ಕಾರಣ, ಇಂದು ಬೆಂಗಳೂರಿನ ಶಾಲೆಗಳು ಬಾಂಬ್ ಬೆದರಿಕೆಯನ್ನು ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ’ ಎಂದು ಬಿಜೆಪಿ ಟೀಕಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಬೆಲೆ ಏರಿಕೆ ಜತೆಗೆ ಮತಾಂಧರ ಸಂಖ್ಯೆಯೂ ಹೆಚ್ಚಾಗಿದೆ. ಶಾಂತಿ ನೆಮ್ಮದಿಯ ತವರೂರಾಗಿದ್ದ ಕರ್ನಾಟಕದಲ್ಲಿ ಭದ್ರತಾ ವೈಫಲ್ಯಗಳೇ ಜಾಸ್ತಿಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ’ ಎಂದು ಬಿಜೆಪಿ ಕಿಡಿಕಾರಿದೆ.
Author: AIN Author
ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಗ್ರಾಮದ ಬಳಿಯ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ನಡೆದಿದೆ. https://ainlivenews.com/ms-dhoni-bought-a-car-worth-3-30-crores-full-viral-on-social-media/ ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಚಿರತೆ ರಸ್ತೆ ಬದಿ ಹಾರಿ ಬಿದ್ದಿದೆ. ಸುಮಾರು ಮೂರು ವರ್ಷದ ಗಂಡು ಚಿರತೆ ಸಾವಿಗೀಡಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು:- ಹೆಲ್ಮೆಟ್ ವಿಚಾರಕ್ಕೆ ವಕೀಲನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈಕೋರ್ಟ್ ಪೀಠವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಹೆಲ್ಮೆಟ್ ಹಾಕದ ಕಾರಣಕ್ಕೆ ಅಮಾನುಷ ಹಲ್ಲೆ ಆಘಾತಕಾರಿ ಎಂದು ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ಕೃಷ್ಣ ಎಸ್. ದೀಕ್ಷಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಗರಿಕ ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು. ವಕೀಲರಿಗೇ ಹೀಗಾದರೆ ಜನಸಾಮಾನ್ಯರ ಕಥೆ ಏನು? ಹೆಲ್ಮೆಟ್ ಹಾಕದ ಕಾರಣಕ್ಕೆ ಹೀಗೆ ಹಲ್ಲೆ ನಡೆಸಬಹುದೇ? ಎಂದು ಪ್ರಶ್ನಿಸಿದ ಹೈಕೋರ್ಟ್, ಈ ಪ್ರಕರಣದ ಬಗ್ಗೆ ಕೈಗೊಂಡ ಕ್ರಮದ ಮಾಹಿತಿ ನೀಡಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಹಲ್ಲೆ ಕಾರಣಕ್ಕೆ ಕೋರ್ಟ್ ಬಹಿಷ್ಕರಿಸದಂತೆ ವಕೀಲರಿಗೂ ಹೈಕೋರ್ಟ್ ಮನವಿ ಮಾಡಿದ್ದು, ವಕೀಲರು ಟ್ರೇಡ್ ಯೂನಿಯನ್ ರೀತಿ ಕೋರ್ಟ್ ಬಹಿಷ್ಕರಿಸಬಾರದು. ಕಾನೂನು ರೀತ್ಯಾ ಕ್ರಮಕ್ಕೆ ಮುಂದಾಗುವಂತೆ ಹೈಕೋರ್ಟ್ ಸೂಚಿಸಿದೆ. ಇನ್ನು ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ತಪ್ಪಿತಸ್ಥ ಪೊಲೀಸರನ್ನು ಅಮಾನತುಗೊಳಿಸಿರುವುದಾಗಿ ಹೈಕೋರ್ಟ್ ಗೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು:- ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು, ‘ಪಂಚರಾಜ್ಯ ಚುನಾವಣೆ ನಂತರ ಪಕ್ಷದ ಹೈಕಮಾಂಡ್ ಶಾಸಕರ ರಕ್ಷಣೆ ಜವಾಬ್ದಾರಿ ನೀಡಿದೆಯೇ ಎಂದು ಪ್ರಶ್ನೆ ಕೇಳಿದಾಗ ಅದಕ್ಕೆ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು. “ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸ ನನಗಿದೆ. ಶಾಸಕರು ಎಲ್ಲೂ ಹೋಗುವುದಿಲ್ಲ. ಅವರನ್ನು ರಕ್ಷಣೆ ಮಾಡುವ ಅಗತ್ಯವಿಲ್ಲ. ಆ ಬಗ್ಗೆ ನನಗೆ ಇದುವರೆಗೂ ಯಾವುದೇ ಜವಾಬ್ದಾರಿ ನೀಡಿಲ್ಲ. ತೆಲಂಗಾಣ ಸೇರಿದಂತೆ ಕೆಲವು ಕಡೆ ನಮ್ಮ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ನಮ್ಮ ಪಕ್ಷದವರು ಸ್ಥಳೀಯ ಮಟ್ಟದಲ್ಲೇ ಇದನ್ನು ನಿಭಾಯಿಸುತ್ತಾರೆ” ಎಂದು ಕೇಳಿದರು. ರಾಜಸ್ಥಾನದಲ್ಲಿ ತೀವ್ರ ಸ್ಪರ್ಧೆ ಇರುವ ಮುನ್ಸೂಚನೆ ಸಿಕ್ಕಿದೆ ಎಂದು ಕೇಳಿದಾಗ, “ನನಗೆ ನನ್ನದೇ ಆದ ಅಭಿಪ್ರಾಯವಿದೆ. ಮತಯಂತ್ರದಲ್ಲಿರುವ ಮತದ ಮಾಹಿತಿ ನಿಮಗೂ ಗೊತ್ತಿಲ್ಲ, ನಮಗೂ ಗೊತ್ತಿಲ್ಲ. 48 ತಾಸುಗಳ ನಂತರ ಎಲ್ಲವೂ ಹೊರಬೀಳಲಿದೆ. ಈ ಸಮೀಕ್ಷೆಗಳು ಸುಮಾರು 10 ಸಾವಿರ ಮತದಾರರನ್ನು ಸಂಪರ್ಕಿಸಿ ಸಮೀಕ್ಷೆ ಮಾಡಲಾಗಿದೆ. ನಾವು ನಮ್ಮ ರಾಜ್ಯದಲ್ಲಿ ಪ್ರತಿ ಕ್ಷೇತ್ರದಲ್ಲಿ…
ಶಿವಮೊಗ್ಗ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಸಹೋದರರಿಬ್ಬರು ಸಾವನ್ನಪ್ಪಿದ ಘಟನೆ ಭದ್ರಾವತಿ ತಾಲುಕಿನ ಹುಣಸೆಕಟ್ಟೆ ಜಂಕ್ಷನ್ ಬಳಿ ನಡೆದಿದೆ. ಗೌಳಿಗರ ಕ್ಯಾಂಪ್ ನ ನಿವಾಸಿಗಳಾದ ಬೀರ (32) ಹಾಗು ಸುರೇಶ್(35) ಸಾವನ್ನಪ್ಪಿದ ಸಹೋದರರಾಗಿದ್ದಾರೆ. ಜಮೀನಿನಲ್ಲಿ ಕಟಾವು ಮಾಡಿ ಭತ್ತವನ್ನು ಕಣದಲ್ಲಿ ರಾಶಿ ಹಾಕಲಾಗಿತ್ತು. https://ainlivenews.com/ms-dhoni-bought-a-car-worth-3-30-crores-full-viral-on-social-media/ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆ ಗುಡುಗು ಸಿಡಿಲಿನಿಂದ ಭತ್ತದ ರಾಶಿಗೆ ಹೊದಿಕೆ ಹಾಕಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಮೀನಿಗೆ ಹೋದ ಮಕ್ಕಳು ತಡರಾತ್ರಿಯಾದ್ರೂ ಮನೆಗೆ ಬಾರದನ್ನು ಗಮನಿಸಿದ ಪೋಷಕರು ಜೀಮೀನಿಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ,ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು:- ಯಾವ ಶಾಲೆಗಳಲ್ಲೂ ಬಾಂಬ್ ಇರಲು ಸಾಧ್ಯವಿಲ್ಲ ನನ್ನ ನಂಬಿಕೆ ಎಂದು ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೈಜೈಟ್ಸ್ @ ಬೀಬಲ್ ಡಾಟ್ ಕಾಂ ಅನ್ನೋ ಮೇಲ್ ಐಡಿಯಿಂದ ಮೆಸೇಜ್ ಬಂದಿದೆ. ಬೆಂಗಳೂರಿನ ಸುಮಾರು 15 ಶಾಲೆಗಳಿಗೆ ಬಾಂಬ್ ಇಟ್ಟಿದ್ದೀವಿ, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಮೆಸೇಜ್ ಬಂದಿದೆ. ಇದನ್ನ ನಾವು ಬಹಳ ಗಂಭೀರವಾಗಿ ಪರಿಶೀಲಿಸುತ್ತಿದ್ದೇವೆ. ಮೇಲ್ನ ಮೂಲದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಕಮಿಷನರ್ಗೆ ಹಾಗೂ ಎಲ್ಲಾ ಅಧಿಕಾರಿಗಳಿಗೆ ಎಲ್ಲಾ ಶಾಲೆಗಳನ್ನ ಪರಿಶೀಲನೆ ಮಾಡುವಂತೆ ತಾಕೀತು ಮಾಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ಯಾವ ಶಾಲೆಗಳಲ್ಲೂ ಬಾಂಬ್ ಇರಲು ಸಾಧ್ಯವಿಲ್ಲವೆಂಬುವುದ ನನ್ನ ನಂಬಿಕೆ. ಯಾವ ಉಗ್ರ ಸಂಘಟನೆ ಮಾಡಿದೆ, ಯಾರು ಇದನ್ನೆಲ್ಲಾ ಮಾಡಿದ್ದಾರೆ ಅನ್ನೋ ಪರಿಶೀಲಿಸುತ್ತಿದ್ದೇವೆ. ಅವರು ಭಾರತದವರೇ ಆಗಿದ್ದರೇ ಅಂತವರಿಗೆ ಏನು ಮಾಡಬೇಕು ಅಂತ ಭಾರತ ಸರ್ಕಾರದ ಜೊತೆ ಮಾತನಾಡುತ್ತೇವೆ. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯೇ ಕಳುಹಿಸಿದೆ ಅನ್ನೋದನ್ನ ಇನ್ನೂ ಹೇಳಲು ಆಗಲ್ಲ ಎಂದರು.…
ಧಾರವಾಡ: ಶಾಸಕ ಬಿ.ಆರ್.ಪಾಟೀಲ ಅವರು ಸಿಎಂಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಭಾಪತಿ ಬಸವರಾಜ ಹೊರಟ್ಟಿ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬಿ.ಆರ್.ಪಾಟೀಲ ಅವರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮಾತನಾಡುವುದಿಲ್ಲ. ಕಲಾಪದ ವೇಳೆ ಅದರ ಬಗ್ಗೆ ಮಾತನಾಡಿದರೆ ಅವಕಾಶ ಕೊಡುತ್ತೇನೆ. ಚರ್ಚೆಗೆ ಅವಕಾಶ ನೀಡುತ್ತೇನೆ. ಅಧಿವೇಶನದ ವೇಳೆ ಮಂತ್ರಿಗಳು ಸ್ಪಂದಿಸಿಲ್ಲ ಎಂದಿದ್ದಾರೆ. ಅದಕ್ಕಾಗಿ ಮಂತ್ರಿಗಳು ಹೆಚ್ಚಿನ ಸಮಯ ಅಧಿವೇಶನದಲ್ಲಿ ಕುಳಿತುಕೊಳ್ಳಬೇಕು. ಜಿಲ್ಲಾ ಪ್ರವಾಸ ಮಾಡಿ ಜನರ ಕಷ್ಟಕ್ಕೆ ಸ್ಪಂದಿಸಬೇಕು ಎಂದರು. ಶಾಸಕರು ಕೇಳುವ ಪ್ರಶ್ನೆಗಳಿಗೆ ಸಚಿವರು ಸರಿಯಾದ ಉತ್ತರ ನೀಡುವ ತಯಾರಿ ಮಾಡಿಕೊಂಡು ಬರಬೇಕು. ವಿವಿಧ ಕಾರ್ಯಕ್ರಮಗಳು ಜಾರಿಯಾಗುವಂತೆ ಕೆಲಸ ಮಾಡಬೇಕು. ದುರ್ದೈವದ ಸಂಗತಿ ಈಗ ಕೆಲಸ ಬಹಳ ಕಡಿಮೆಯಾಗಿವೆ. ಇದು ಸುಧಾರಣೆ ಆಗಬೇಕು. ಉತ್ತರ ಕರ್ನಾಟಕದ ಬಗ್ಗೆ ಅಧಿವೇಶನದಲ್ಲಿ ಹೆಚ್ಚು ಚರ್ಚೆಗಳಾಗಬೇಕಿದೆ. ಡಿ.5, 6 ರಂದು ಪ್ರಶ್ನೋತ್ತರ ಬಳಿಕ ಉತ್ತರ ಕರ್ನಾಟಕ ಚರ್ಚೆ ಬಗ್ಗೆ ಸಮಯ ನೀಡುತ್ತೇನೆ ಎಂದರು. https://ainlivenews.com/ms-dhoni-bought-a-car-worth-3-30-crores-full-viral-on-social-media/ ಯಾರು ಏನು ಬೇಕಾದರೂ ಕೇಳಬಹುದು. ಅದನ್ನು ಅಜೆಂಡಾದಲ್ಲಿ…
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ ಸೂಚಿಸಿದ್ದಾರೆ. ನಗರದ ಶಾಲೆಗಳಿಗೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಈ ಕುರಿತು ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದರು. ಎಲ್ಲಿಂದ ಸಂದೇಶ ಬಂದಿದೆ ಎಂಬುದರ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದೇನೆ. ಎಲ್ಲಾ ಶಾಲೆಗಳಿಗೂ ಭದ್ರತೆ ಕೊಡಲು ಸೂಚನೆ ನೀಡಿದ್ದೇನೆ ಎಂದರು.
ಶಿವಮೊಗ್ಗ: ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕೇಂದ್ರ ಸರಕಾರಕ್ಕೆ ಕನಿಷ್ಠ ಸೌಜನ್ಯವೂ ಇಲ್ಲ. ನಮ್ಮ ರಾಜ್ಯದ ಸಚಿವರು ದೆಹಲಿಗೆ ಹೋದ್ರೂ ಅಧಿಕಾರಿಗಳನ್ನು ಮಾತನಾಡಿಸಲು ಆಗಲ್ಲ. ಕೇಂದ್ರ ಸರಕಾರದಿಂದ ಹಣ ತರುವ ದಮ್ಮು ತಾಕತ್ ಇದೆಯಾ? ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ನಿರ್ವಹಣೆ ಮಾಡುವುದಕ್ಕೆ ಸರಕಾರ ಕ್ರಮ ವಹಿಸಿದೆ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ಒಂದು ತಿಂಗಳ ನಂತರ ತೊಂದರೆ ಬರಬಹುದು. ಬಹಳ ಆಹಾಕಾರ ಆಗೋದು ನೀರಿಗೆ. ಮೇವಿಗೆ ಯಾವುದೇ ತೊಂದರೆ ಇಲ್ಲ ಎಂದರು. ಸದ್ಯ ಸೊರಬ ಪಟ್ಟಣಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಆಗ್ತಿದೆ. ಜಿಲ್ಲೆಯ 238 ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆ ಆಗಬಹುದು ಎಂದು ಗುರುತಿಸಲಾಗಿದೆ. ಎಂದು ಅಭಿಪ್ರಾಯಪಟ್ಟರು. ರೈತರಿಗೆ ನೀಡುವ ವಿದ್ಯುತ್ ಪೂರೈಕೆ ಸಮಯದಲ್ಲಿ ವ್ಯತ್ಯಾಸ ಆಗಬಹುದು. ಖಜಾನೆಯಲ್ಲಿ ದುಡ್ಡಿಲ್ಲ, ರಾಜ್ಯದಲ್ಲಿ ವಿದ್ಯುತ್ ಇಲ್ಲ ಅಂತಾ ಬಿಜೆಪಿಯವರು ಅಪಪ್ರಚಾರ ಮಾಡಿದರು. ಅಂತಹ ಸಮಸ್ಯೆ ಇಲ್ಲ. ಖಜಾನೆಯಲ್ಲಿ ದುಡ್ಡಿದೆ. ವಿದ್ಯುತ್ ಸಹ ಇದೆ ಎಂದು…
ಬೆಂಗಳೂರು, ಡಿಸೆಂಬರ್ 1 : ಮುಂದಿನ ಐದು ವರ್ಷಗಳಲ್ಲಿ ಭಾರತದ ದೇಶ, ಕರ್ನಾಟಕ ಏಡ್ಸ್ ಮುಕ್ತ ದೇಶ /ರಾಜ್ಯ ಆಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಇದ್ದ ವಿಶ್ವ ಏಡ್ಸ್ ದಿನ 2023 ಮತ್ತು 25 ನೇ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಹೆಚ್ ಐ ವಿ ಮುಕ್ತ ಸಮಾಜವಾಗಿಸುವುದು ಎಲ್ಲರ ಜವಾಬ್ದಾರಿ : ಇಂದು ವಿಶ್ವ ಏಡ್ಸ್ ದಿನ. ಈ ಸಾಂಕ್ರಾಮಿಕ ರೋಗವನ್ನು ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ರೋಗ 1986 ರಲ್ಲಿ ಭಾರತದಲ್ಲಿ ಹಾಗೂ 1987 ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಯಿತು. ಇತ್ತಿಚಿನ ದಿನಗಳಲ್ಲಿ ಹೆಚ್ ಐವಿ ಪೀಡಿತರ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ. ನಮ್ಮ ಸಮಾಜವನ್ನು ಹೆಚ್ ಐ ವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಇದಕ್ಕಾಗಿ ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು.2015-2020ರವರೆಗೆ ಏಡ್ಸ್…