ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ,ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಣಾತರು. ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಶ್ರೀ ಸಿದ್ಧೇಶ್ವರ ಸ್ವಾಮಿಗಳವರು, ಇವರು ಸಂತರಷ್ಟೇ ಅಲ್ಲ ಜ್ಞಾನೋಪಾಸಕರು ಕೂಡ. ಸಂತರು ನಾಡಿನಲ್ಲಿ ಬಹಳ ಜನ ಇದ್ದರು, ಈಗಲೂ ಇದ್ದಾರೆ. ಆದರೆ ಜ್ಞಾನಯೋಗಿಗಳು ಬಹಳ ಅಪರೂಪ. ಅಂಥವರಲ್ಲೊಬ್ಬರು ಶ್ರೀ ಸಿದ್ಧೇಶ್ವರ ಸ್ವಾಮಿಗಳು. ವಿಜಯಪುರದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರ. ಗದುಗಿನ ಶಿವಾನಂದ ಶ್ರೀಗಳ ಪರಂಪರೆಯಲ್ಲಿ ಬಂದ ಈ ಆಶ್ರಮ ಇವರ ಗುರುಗಳಾದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳ ಕಾಲದಲ್ಲಿ ಅತ್ಯಂತ ಪ್ರವರ್ಧಮಾನಕ್ಕೆ ಬಂತು. ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳವಾಗಿ ಮಹತ್ವ ಪಡೆಯಿತು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ದಲಾಲ ಸ್ಪೋರ್ಟ್ಸ್ ಕ್ಲಬ್ ಆವರಣದಲ್ಲಿ ಲಿಂಗೈಕ ಪರಮಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳ…
Author: AIN Author
ಚಿಕ್ಕಬಳ್ಳಾಪುರ: ತಂಗಿ ಮೇಲಿನ ಸೇಡಿಗೆ ಆಕೆಯ ಮಗುವನ್ನೇ ಕೊಂದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿಯಲ್ಲಿ ನಡೆದಿದೆ. ಅಂಬಿಕಾ ಎಂಬಾಕೆ ಕೊಲೆ ಪಾತಕಿಯಾಗಿದ್ದಾಳೆ. ಅಂಬಿಕಾಳ ಸಿಟ್ಟಿಗೆ ಮುಗ್ದ ಮಗುವೊಂದು ಪ್ರಾಣ ಬಿಟ್ಟಿದೆ. ಅಂಬಿಕಾ ಹಾಗೂ ಅನಿತಾ ಇಬ್ಬರು ಅಕ್ಕ ತಂಗಿಯರು. ತಂಗಿ ಅನಿತಾ ಮೇಲಿನ ಕೋಪಕ್ಕೆ ಆಕೆಯ ಮಗನನ್ನು ಕೊಲೆ ಮಾಡಿ ಹೂತು ಹಾಕಿದ್ದಾಳೆ. https://ainlivenews.com/case-of-sale-of-cow-children-the-woman-who-was-selling-vegetables-is-a-billionaire/ ಅಂಬಿಕಾಳ ಅನೈತಿಕ ಸಂಬಂಧಗಳಿಗೆ ತಂಗಿ ಅನಿತಾ ಅಡ್ಡಿಯಾಗುತ್ತಿದ್ದಳು ಎನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ ಅಂಬಿಕಾ, ತಂಗಿ ಮೇಲಿನ ಕೋಪಕ್ಕೆ ಆಕೆ ಮಗನನ್ನು ಕೊಲೆ ಮಾಡಿದ್ದಾಳೆ. ಸ್ಥಳಕ್ಕೆ ಪೆರೆಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಬೆಂಗಳೂರು: ಮುಂಬೈ ತಾಜ್ ಹೋಟೆಲ್ ಮೇಲಿನ ದಾಳಿ ಮಾದರಿಯಲ್ಲೇ ನಗರದ ಶಾಲೆಗಳ (School) ಮೇಲೆ ಅಟ್ಯಾಕ್ ಮಾಡುವ ಬೆದರಿಕೆ ಸಂದೇಶಗಳು ಬಂದಿವೆ. ಭಾರತೀಯರು ಮುಸ್ಲಿಮರನ್ನು ಅವಹೇಳನ ಮಾಡುತ್ತಿದ್ದಾರೆ ಎಂದೇ ಈ ರೀತಿ ಸಂದೇಶಗಳನ್ನು ಕಳಿಸುತ್ತಿದ್ದಾರೆ ಎಂಬ ಮಾಹಿತಿ ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashoka) ಹೇಳಿದ್ದಾರೆ. ಯಾರು ಈ ರೀತಿ ಸಂದೇಶ ಕಳಿಸಿದ್ದಾರೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಸಂದೇಶದಿಂದ ಶಾಲೆಯ ಮಕ್ಕಳ ಪಾಲಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬಳಿಕ ಬಾಂಬ್ ಬೆದರಿಕೆ (Bomb Threat) ಸಂದೇಶ ಬಂದಿರುವ ಶಾಲೆಗಳ ಬಳಿ ಪರಿಸ್ಥಿತಿ ವೀಕ್ಷಣೆಗೆ ಅವರು ತೆರಳಿದ್ದಾರೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಇ- ಮೇಲ್ ಮೂಲಕ ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ ನಗರದ 20ಕ್ಕೂ ಹೆಚ್ಚು ಶಾಲೆಗಳಿಗೆ ಆಗಂತುಕರು ಬಾಂಬ್ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿ ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಚಿತ್ರದುರ್ಗ: ಅಕ್ರಮವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ವಾಹನವನ್ನೂ ಜಪ್ತಿ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದಲ್ಲಿ ನಡೆದಿದೆ. 21ಕ್ಕೂ ಹೆಚ್ಚು ಜಾನುವಾರು ಸಾಗಿಸುತ್ತಿದ್ದ ವಾಹನ ಜಪ್ತಿಯಾಗಿದ್ದು, ದಾವಣಗೆರೆ ಕಡೆಯದಿಂದ ಬೆಂಗಳೂರಿನ ಕಡೆ ಹೊರಟಿದ್ದ ವಾಹನವಾಗಿದೆ. https://ainlivenews.com/case-of-sale-of-cow-children-the-woman-who-was-selling-vegetables-is-a-billionaire/ ಚಾಲಕ ಇದಾಯತ್ ಸೇರಿ 3ಜನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ವಿಶ್ವ ಹಿಂದೂ ಪರಿಷತ್, ಭಜರಂಗದಳದಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಖಚಿತ ಮಾಹಿತಿ ಮೇರೆಗೆ ವಾಹನ ತಡೆದು ಜಾನುವಾರು ಸಮೇತ ವಶಕ್ಕೆ ಪಡೆಯಲಾಗಿದೆ. ಇನ್ನೂ ಈ ಘಟನೆ ಸಂಭಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ: ಸದ್ಯ ನಡೆದಿರುವ ಪಂಚರಾಜ್ಯಗಳ ಚುನಾವಣೆಯಲ್ಲಿ ನಾವು ಐದೂ ರಾಜ್ಯಗಳಲ್ಲಿ ಗೆಲುವು ಸಾಧಿಸುವ ಗುರಿ ಇದೆ. ಆದರೆ, ಕನಿಷ್ಠ ಮೂರು ರಾಜ್ಯಗಳಲ್ಲಾದರೂ ನಾವು ಗೆಲುವು ಸಾಧಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. https://ainlivenews.com/case-of-sale-of-cow-children-the-woman-who-was-selling-vegetables-is-a-billionaire/ ಧಾರವಾಡದಲ್ಲಿ ಮಾತನಾಡಿದ ಅವರು, ಮಿಜೋರಾಂನಲ್ಲಿ ಎನ್‌ಡಿಎ ಸರ್ಕಾರ ಬರುತ್ತದೆ. ತೆಲಂಗಾಣದಲ್ಲಿ ಮೂರು ಪಕ್ಷಗಳ ಮಧ್ಯೆ ತೀವ್ರ ಪೈಪೋಟಿ ಇದೆ. ಬಿಜೆಪಿ ಮೂರು ರಾಜ್ಯಗಳಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಲ್‌ಪಿಜಿ ಸಿಲಿಂಡಗಳ ಬೆಲೆ ಮತ್ತೆ ಏರಿಕೆಯಾಗಿದೆ.ದರ ಹೆಚ್ಚಳದ ಬಳಿಕ 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಚಿಲ್ಲರೆ ಮಾರಾಟದ ಬೆಲೆ 1796.50 ರೂಪಾಯಿಗೆ ಏರಿಕೆಯಾಗಿದೆ. ಇದು ರಾಷ್ಟ್ರ ರಾಜಧಾನಿ ದೆಹಲಿಯ ಬೆಲೆಯಾಗಿದ್ದು, ಇದೇ ಬೆಲೆ ವಾಣಿಜ್ಯ ನಗರಿ ಮುಂಬೈನಲ್ಲಿ 1,749 ರೂಪಾಯಿಗೆ ಜಿಗಿತವಾಗಿದೆ. ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,904 ರೂಪಾಯಿಗೆ ಏರಿಕೆಯಾಗಿದೆ. ಹೊಸದಾಗಿ ಬೆಲೆ ಪರಿಷ್ಕರಣೆ ಬಳಿಕ ಚೆನ್ನೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,968.5 ರೂಪಾಯಿ ಹಾಗೂ ಕೋಲ್ಕತ್ತದಲ್ಲಿ 1,908 ರೂಪಾಯಿ ಇದೆ. 14.2 ಕೆಜಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಂಪನಿಗಳು ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಸರ್ಕಾರ ಈ ಸಿಲಿಂಡರ್‌ನ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಿತ್ತು. ಇಂಡಿಯನ್ ಆಯಿಲ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಈ ಸಿಲಿಂಡರ್ ದೆಹಲಿಯಲ್ಲಿ 903 ರೂ.ಗೆ ಲಭ್ಯವಿದೆ. ಈ ಸಿಲಿಂಡರ್ ನೋಯ್ಡಾದಲ್ಲಿ 900.50 ರೂ.ಗೆ ಲಭ್ಯವಿದೆ. ಅದೇ ರೀತಿ, ಪ್ರತಿ ಸಿಲಿಂಡರ್ ಕೋಲ್ಕತ್ತಾದಲ್ಲಿ ರೂ…
ಮೈಸೂರು: ಪತ್ನಿ ಮೇಲೆ ವಿಪರೀತ ಸಂಶಯ ಪಡುತ್ತಿದ್ದ ಗಂಡನೊಬ್ಬ ಆಕೆ ತವರು ಮನೆಗೆ ಹೋಗಿದ್ದಾಗ ಅಲ್ಲಿ ಆಕೆಗೆ ಚಾಕುವಿನಿಂದ 5 ಬಾರಿ ಇರಿದು, ಬಳಿಕ ತನ್ನ ಮನೆಗೆ ಪರಾರಿಯಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ (Piriyapatna) ತಾಲೂಕಿನ ಮುತ್ತಿನಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಮುತ್ತಿನ ಮುಳುಸೋಗೆ ಗ್ರಾಮದ ಶ್ವೇತಾ ಎಂಬಾಕೆಯನ್ನು ಗ್ರಾಮದ ಪ್ರಸನ್ನ (36) ಎಂಬಾತ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದ. ಆದರೆ ದಿನಕಳೆದಂತೆ ತನ್ನ ಪತ್ನಿ ಮೇಲೆ ಪ್ರಸನ್ನ ವಿಪರೀತ ಸಂಶಯ ಪಟ್ಟು ಆಕೆಗೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದ. https://ainlivenews.com/case-of-sale-of-cow-children-the-woman-who-was-selling-vegetables-is-a-billionaire/ ಈ ಬಗ್ಗೆ ಹಲವಾರು ಬಾರಿ ಮೈಸೂರು ಹಾಗೂ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿ, ದಂಪತಿಯ ರಾಜಿ ಸಂಧಾನ ಮಾಡಿ ಕಳುಹಿಸಿದ್ದರು. ಆದರೆ ಪ್ರಸನ್ನ ಮಾತ್ರ ಪತ್ನಿ ಮೇಲೆ ಅನುಮಾನ ಪಡುವುದು ಬಿಟ್ಟಿರಲಿಲ್ಲ. ಆಕೆಯ ತಂಗಿಯ ಮೇಲೆ ವ್ಯಾಮೋಹವೂ ಹೆಚ್ಚಾಗಿ, ಆಕೆಯೊಂದಿಗೆ ಮದುವೆ…
ಪೃಥ್ವಿರಾಜ್ ಸುಕುಮಾರನ್ (Pruthviraj Sukumaran) ಅಭಿನಯದ ದಿ ಗೋಟ್ ಲೈಫ್ (The Goat Life), ದಿ ಎಪಿಕ್ ಟೇಲ್ ಆಫ್ ದಿ ಗ್ರೇಟೆಸ್ಟ್ ಸರ್ವೈವಲ್ ಅಡ್ವೆಂಚರ್ ಸಿನಿಮಾಗೆ ರಿಲೀಸ್ ಡೇಟ್ ಫಿಕ್ಸ್ ಆಗಿದೆ. 2024ರ ಏಪ್ರಿಲ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದು ರಾಷ್ಟ ಪ್ರಶಸ್ತಿ ವಿಜೇತ ಬ್ಲೆಸ್ಸಿ (Blessy)ನಿರ್ದೇಶನದ ಸಿನಿಮಾ. ದಿ ಗೋಟ್ ಲೈಫ್ ಚಿತ್ರದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ. ಬ್ಲೆಸ್ಸಿ ನಿರ್ದೇಶನದ ಈ ಸಿನಿಮಾವನ್ಬು ವಿಷುಯಲ್ ರೊಮ್ಯಾನ್ಸ್ ನಿರ್ಮಿಸಿದೆ. ಈ ಚಿತ್ರದಲ್ಲಿ ಹಾಲಿವುಡ್ ನಟ ಜಿಮ್ಮಿ ಜೀನ್-ಲೂಯಿಸ್, ಅಮಲಾ ಪೌಲ್, ಭಾರತೀಯ ನಟ ಕೆ.ಆರ್.ಗೋಕುಲ್ ಮತ್ತು ಪ್ರಸಿದ್ಧ ಅರಬ್ ನಟರಾದ ತಾಲಿಬ್ ಅಲ್ ಬಲೂಶಿ ಮತ್ತು ರಿಕಾಬಿ…
ಹಾಸನ: ನನ್ನ ಕ್ಷೇತ್ರವೊಂದರಲ್ಲೇ 224 ಶಾಲೆಗಳಲ್ಲಿ ಶೌಚಾಲಯ ಇಲ್ಲ. ಇರುವ ಕಡೆ ಶಿಕ್ಷಕರೇ ಸ್ವಚ್ಛ ಮಾಡುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ಬೇಸರ ವ್ಯಕ್ತಪಡಿಸಿದರು. ಹಾಸನ (Hassan) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಚಿವರು ಬಂದರು. ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟರು. ಜಿಪಂನಲ್ಲಿ ಕೇಸರಿಬಾತ್, ಉಪ್ಪಿಟ್ಟು ತಿಂದು ಹೋದರು. ಶೌಚಾಲಯ ತೊಳೆಯುವ ಶಿಕ್ಷಕರ ಸ್ಥಿತಿ ಏನಾಗಬೇಕು. ಇಂಥ ಪರಿಸ್ಥಿತಿ ನಾಚಿಕೆಗೇಡು ಎಂದು ಅಸಮಾಧಾನ ಹೊರಹಾಕಿದರು. ಬಿಜೆಪಿ-ಜೆಡಿಎಸ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಟಾಂಗ್ ನೀಡಿದ ರೇವಣ್ಣ, ಅವರು ಕುಮಾರಣ್ಣನ ಬಳಿ ವ್ಯಾಪಾರ ಮಾಡಿಕೊಂಡು ಹೋಗಿರುವವರು. ಅವರ ಪಕ್ಷದವರೇಕೆ 2009 ರಲ್ಲಿ ನಮ್ಮ ಬಳಿ ಬಂದಿದ್ದರು ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು. https://ainlivenews.com/case-of-sale-of-cow-children-the-woman-who-was-selling-vegetables-is-a-billionaire/ ಹಾಲಿ ಇರುವುದು ನೆಹರೂ, ಮಹಾತ್ಮ ಗಾಂಧಿ ಕಾಲದ ಕಾಂಗ್ರೆಸ್. ಪಕ್ಷ ಹಾಗೂ ಮುಖಂಡರು ಶೀಘ್ರ ಧೂಳೀಪಟ ಆಗುವ ಕಾಲ ಬರಲಿದೆ ಎಂದು ಭವಿಷ್ಯ ನುಡಿದರು. ರಾಜ್ಯದ ದುಡ್ಡಿನಿಂದ ತೆಲಂಗಾಣದಲ್ಲಿ ಚುನಾವಣೆ ಮಾಡಲಾಗುತ್ತಿದೆ. ಗೃಹಲಕ್ಷ್ಮಿ ಆಸೆ…
ಬೆಂಗಳೂರು: ಸಿಲಿಕಾನ್ ಸಿಟಿಯ 15 ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿದೆ.ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಇ-ಮೇಲ್ ಗಂಭೀರವಾಗಿ ಪರಿಗಣಿಸಿದ್ದು, ಪರಿಶೀಲನೆ ಆರಂಭಿಸಿದ್ದಾರೆ ಎಂಡು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿದೆ ಎಂದು ತಿಳಿದು ನಾನು ನನ್ನ ಮನೆಯ ಹತ್ತಿರ ಇರುವ ಶಾಲೆಗೆ ಬಂದಿದ್ದೇನೆ. ಪೊಲೀಸ್ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ” ಎಂದರು. ”ಈ ಹಿಂದೆಯೂ ಹಲವಾರು ಬಾರಿ ನಗರದ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ, ಇ-ಮೇಲ್ ಬಂದಿತ್ತು. ಅಂತಹ ಸಂದರ್ಭದಲ್ಲಿ ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆಯೂ ಹೀಗೆ ಹುಸಿ ಕರೆ ಬಂದಿತ್ತು .ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ಪೊಲೀಸರು ನಿಗಾ ವಹಿಸಲಿದ್ದಾರೆ ಎಂದು ಹೇಳಿದರು.