ಬೆಂಗಳೂರು: ಸಿಲಿಕಾನ್ ಸಿಟಿಯ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಇ-ಮೇಲ್ ಬೆದರಿಕೆ ಕೇಳಿಬಂದ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ ಇಲಾಖೆ ತೀವ್ರ ತಪಾಸಣೆ ಕೈಗೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಅವರು, ಈಗಾಗಲೇ ಬೆದರಿಕೆ ಇ-ಮೇಲ್ ಮಾಡಲಾಗಿದ್ದ ಶಾಲೆಗಳಿಗೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಬಾಂಬ್ ಪತ್ತೆ ಸಿಬ್ಬಂದಿ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಬೆಂಗಳೂರು ನಗರದ ಕೆಲವು ಶಾಲೆಗಳಿಗೆ ಬೆದರಿಕೆ ಕರೆ ಬಂದಿದೆ. ಈ ಬಗ್ಗೆ ನಮಗೆ ಮಾಹಿತಿ ಬಂದಕೂಡಲೇ ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲಾ ಶಾಲೆಗಳಿಗೆ ನಮ್ಮ ಬಾಂಬ್ ನಿಷ್ಕ್ರಿಯ ದಳ ಹೋಗಿ ತಪಾಸಣೆ ನಡೆಸಿದೆ. ಈ ಹಿಂದೆಯೂ ಸಹ ಈ ರೀತಿ ಬೆದರಿಕೆ ಕರೆ ಬಂದಿತ್ತು. ಬಹುಶಃ ಇದು ಸುಳ್ಳು ಬಾಂಬ್ ಬೆದರಿಕೆ ಅನ್ನಿಸುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಆಗಂತುಕರು ಬಾಂಬ್ ಬೆದರಿಕೆ ಹಾಕಿದ್ದಾರೆ. ಇ-ಮೇಲ್…
Author: AIN Author
ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾದ ಬಹು ನಿರೀಕ್ಷಿತ ಟ್ರೈಲರ್ (Trailer) ಇಂದು ಸಂಜೆ 7.19ಕ್ಕೆ ರಿಲೀಸ್ ಆಗಲಿದೆ. ಸಂಜೆಗಾಗಿ ಪ್ರಭಾಸ್ ಅಭಿಮಾನಿಗಳು ಅತೀ ನಿರೀಕ್ಷೆ ಇಟ್ಟುಕೊಂಡು ಕಾಯುತ್ತಿದ್ದಾರೆ. ಈ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದರಿಂದ, ಟ್ರೈಲರ್ ಯಾವ ರೀತಿಯಲ್ಲಿ ಮೋಡಿ ಮಾಡಲಿದೆ ಎಂದು ಈಗಿನಿಂದಲೇ ವಿಶ್ಲೇಷಿಸಲಾಗುತ್ತಿದೆ. ಸಲಾರ್ ಸಿನಿಮಾದ ಕಥೆಯ (Story) ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಶಾಂತ್ ನೀಲ್ (Prashant Neel) ಈ ಹಿಂದೆ ಕನ್ನಡದಲ್ಲಿ ಮಾಡಿದ್ದ ಉಗ್ರಂ ಸಿನಿಮಾವನ್ನೇ ಕೊಂಚ ಬದಲಿಸಿಕೊಂಡು ಚಿತ್ರ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಪ್ರಶಾಂತ್ ನೀಲ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಪ್ರಶಾಂತ್ ಮಾತನಾಡಿದ್ದಾರೆ. ಇದು ರಿಮೇಕ್ ಸಿನಿಮಾವಲ್ಲ ಎಂದು ಸ್ಪಷ್ಟ ಪಡಿಸಿದರುವ ಅವರು, ಸ್ನೇಹಿತರಿಬ್ಬರು ದೊಡ್ಡ ಶತ್ರುಗಳಾಗಿ ಬದಲಾಗುವ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ ಎಂದಿದ್ದಾರೆ. ಈ ಇಬ್ಬರ ಜರ್ನಿಯನ್ನು ಎರಡು ಭಾಗವಾಗಿ ತೋರಿಸಲಾಗುವುದು ಎಂದು ಇದೇ ಮೊದಲ…
ಖ್ಯಾತ ಹಿರಿಯ ನಟಿ ಮತ್ತು ಸಂಗೀತ ಕ್ಷೇತ್ರದಲ್ಲೂ ಸಾಕಷ್ಟು ಹೆಸರು ಮಾಡಿರುವ ಮಲೆಯಾಳಂನ (Malayalam) ಆರ್.ಸುಬ್ಬಲಕ್ಷ್ಮಿ (R.Subbalakshmi) ನಿಧನರಾಗಿದ್ದಾರೆ (Passed away). 87ರ ವಯಸ್ಸಿನ ಈ ಹಿರಿ ಜೀವ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸಿನಮಾ ರಂಗದಲ್ಲಿ ಮಾತ್ರವಲ್ಲ, ಚಿತ್ರಕಲೆ ಮತ್ತು ಸಂಗೀತ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಸುಬ್ಬಲಕ್ಷ್ಮಿ. ಮಲಯಾಳಂನ ಅನೇಕ ಸ್ಟಾರ್ ನಟರ ಜೊತೆಗೆ ಕೆಲಸ ಮಾಡಿದ್ದ ಸುಬ್ಬಲಕ್ಷ್ಮಿ ಅವರು, ಇತ್ತೀಚಿನ ದಿನಗಳಲ್ಲಿ ಅಜ್ಜಿ ಪಾತ್ರಕ್ಕೆ ಫಿಕ್ಸ್ ಆಗಿದ್ದರು. ಸಾಕಷ್ಟು ಚಿತ್ರಗಳಲ್ಲಿ ಅಜ್ಜಿಯಾಗಿಯೇ ಫೇಮಸ್ ಆದವರು. ಪಾಂಡಿಪ್ಪ, ನಂದನಂ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಇವರದ್ದು. ನಟಿಯ ನಿಧನಕ್ಕೆ ನಟರು ಮಾತ್ರವಲ್ಲ, ಕೇರಳದ ಮುಖ್ಯಮಂತ್ರಿಗಳು ಕೂಡ ಸಂತಾಪ ಸೂಚಿಸಿದ್ದಾರೆ. ಸಿನಿಮಾ ರಂಗದ ಕಲಾವಿದರು ಮತ್ತು ತಂತ್ರಜ್ಞರು ಕಂಬನಿ ಮಿಡಿದಿದ್ದಾರೆ.
ಧಾರವಾಡ: ಹುಬ್ಬಳ್ಳಿ, ಧಾರವಾಡದ ಅವಳಿನಗರಗಳಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕಗಳು ಬಹಳ ಹೊಲಸಾಗಿವೆ. ಅವುಗಳ ನಿರ್ವಹಣೆ ಸರಿಯಾಗಿಲ್ಲ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು. https://ainlivenews.com/case-of-sale-of-cow-children-the-woman-who-was-selling-vegetables-is-a-billionaire/ ಧಾರವಾಡದಲ್ಲಿ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ಘಟಕಗಳು ಬಹಳು ಹೊಲಸುತನದಿಂದ ಕೂಡಿವೆ. ಹುಬ್ಬಳ್ಳಿ, ಧಾರವಾಡ ಎರಡೂ ನಗರಗಳನ್ನು ನಾನು ಸುತ್ತಿ ನೋಡುತ್ತೇನೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದ ಹತ್ತಿರ ಚರಂಡಿ ನೀರು ಕೆಲ ಮನೆಗಳಿಗೆ ನುಗ್ಗಿದೆ ಎಂದು ದೂರು ಬಂದಿತ್ತು. ಈ ಸಂಬಂಧ ನಾಳೆ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದೇನೆ. ಇದರ ಬಗ್ಗೆ ಸುಧೀರ್ಘ ಚರ್ಚೆ ಮಾಡಲಿದ್ದೇನೆ ಎಂದರು.
ಮೊನ್ನೆಯಷ್ಟೇ ರಿಲೀಸ್ ಆಗಿರುವ ಕಾಂತಾರ (Kantara) ಚಾಪ್ಟರ್ 1 ಸಿನಿಮಾದ ಟೀಸರ್ (Teaser) ಕೋಟಿ ಕೋಟಿ ವಿವ್ಸ್ಯೂ ಪಡೆಯುತ್ತಿದೆ. ಟೀಸರ್ ನೋಡಿದ ಭಾರತವೇ ಬೆಚ್ಚಿ ಬಿದ್ದಿದೆ. ಟೀಸರ್ ನಲ್ಲಿ ತೋರಿಸಲಾದ ಆಶಯ ಮತ್ತು ರಿಷಬ್ ಶೆಟ್ಟಿ ಕಂಡು ದಕ್ಷಿಣದ ಬಹುತೇಕ ಸ್ಟಾರ್ ನಟರು ಫಿದಾ ಆಗಿದ್ದಾರೆ. ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಅನೇಕ ಕಲಾವಿದರು ಮೆಚ್ಚಿ ಶುಭ ಹಾರೈಸಿದ್ದಾರೆ ಕಳೆದ ವರ್ಷ ಬಿಡುಗಡೆಯಾಗಿ ಜಗತ್ತಿನಾದ್ಯಂತ ಮೆಚ್ಚುಗೆ ಪಡೆಯುವುದರ ಜೊತೆಗೆ ದೊಡ್ಡ ಯಶಸ್ಸು ಕಂಡ ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್, ಈಗ ಇನ್ನೊಂದು ಅಂಥದ್ದೇ ಪ್ರಯತ್ನದೊಂದಿಗೆ ವಾಪಸಾಗುತ್ತಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಮಹತ್ವಾಕಾಂಕ್ಷೆಯ ಮತ್ತು ಬಹುನಿರೀಕ್ಷಿತ ಚಿತ್ರವಾದ ‘ಕಾಂತಾರ – ಅಧ್ಯಾಯ 1’ ರ (Kantara Chapter 1) ಮೊದಲ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರ ವೀಕ್ಷಣೆಗೆ ಸಾಕ್ಷಿಯಾಗಿತ್ತು. ‘ಕಾಂತಾರ’ ಜಗತ್ತನ್ನು ಪರಿಚಯಿಸುವ ಈ ಟೀಸರ್ ನಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರ ಪಾತ್ರ ಮತ್ತು ವೇಷ ಗಮನ…
ನವದೆಹಲಿ: ಗೂಢಾಚಾರದ ಆರೋಪದ ಮೇಲೆ ಕಳೆದ ತಿಂಗಳು ಶಿಕ್ಷೆಗೆ ಗುರಿಯಾಗಿದ್ದ 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ (Ex-Navy Personnel) ಮರಣದಂಡನೆ ವಿಧಿಸುವುದರ ವಿರುದ್ಧ ಭಾರತ (India) ಸಲ್ಲಿಸಿದ್ದ ಮೇಲ್ಮನವಿಯನ್ನು ಕತಾರ್ (Qatar) ನ್ಯಾಯಾಲಯ ಸ್ವೀಕರಿಸಿದೆ. ಭಾರತದ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಮರಣದಂಡನೆ ವಿಧಿಸಿರುವುದನ್ನು ವಿರೋಧಿಸಿ ಭಾರತ ಸಲ್ಲಿಸಿದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯ ಪರಿಶೀಲಿಸಿದ ನಂತರ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸುತ್ತದೆ ಎಂದು ಮೂಲಗಳು ತಿಳಿಸಿವೆ. ವರದಿಗಳ ಪ್ರಕಾರ ಗೂಢಾಚಾರಿಕೆ ಆರೋಪದ ಮೇಲೆ ಕತಾರ್‌ನ ಗುಪ್ತಚರ ಸಂಸ್ಥೆಯು 2022ರ ಆಗಸ್ಟ್‌ನಲ್ಲಿ ಭಾರತದ ನೌಕಾಪಡೆ 8 ಮಾಜಿ ಸಿಬ್ಬಂದಿಯನ್ನು ಬಂಧಿಸಿತು. ಆದರೆ ಕತಾರ್‌ನ ಅಧಿಕಾರಿಗಳು ಅವರ ವಿರುದ್ಧದ ಆರೋಪಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಅವರ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿತ್ತು. ಕಳೆದ ತಿಂಗಳು ಅವರ ವಿರುದ್ಧದ ತೀರ್ಪನ್ನು ಕತಾರ್‌ನ ಪ್ರಥಮ ನಿದರ್ಶನದ ನ್ಯಾಯಾಲಯವು ಪ್ರಕಟಿಸಿತು. ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಸಂಜೀವ್ ಗುಪ್ತಾ, ಕ್ಯಾಪ್ಟನ್ ನವತೇಜ್…
ಬಳ್ಳಾರಿ : ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆ ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ಸೇರಿ ಮೂವರ ವಿರುದ್ಧ ದೂರು ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ವಿಮ್ಸ್ ಆಸ್ಪತ್ರೆಯ ಟ್ರಾಮಾಕೇರ್‌ನಲ್ಲಿ ಸಿಸ್ಟಂ ಇನ್‌ಚಾರ್ಜ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆನ್ನುವ ಮಾಹಿತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. https://ainlivenews.com/case-of-sale-of-cow-children-the-woman-who-was-selling-vegetables-is-a-billionaire/ ನೇಮಕಾತಿ ಆದೇಶ ಪ್ರತಿ ನೀಡುವಂತೆ ನಿರ್ದೇಶಕರ ಕಚೇರಿಗೆ ಹೋಗಿದ್ದ ಮಹಿಳೆಗೆ ಪತ್ರ ನೀಡುವ ವೇಳೆ ಕೈ ಚಾಚಿ ಅಪ್ಪಿಕೊಳ್ಳಲು ಪ್ರಯತ್ನಿಸಿದ ವೇಳೆ ಹೊರಗಡೆ ಓಡಿ ಬಂದಿರುವುದಾಗಿ ಮಹಿಳೆ ದೂರಿನಲ್ಲಿ ದಾಖಲಿಸಿದ್ದಾರೆ. ಅಲ್ಲದೆ ಟ್ರಾಮಾಕೇರ್ ಸೂಪರಿಡೆಂಟ್ ಡಾ.ಶಿವುನಾಯ್ಕ, ಟ್ರಾಮಾ ಕೇರ್‌ನಲ್ಲಿ ಕೆಲಸಮಾಡುತ್ತಿರುವ ಮಹಿಳೆಯೊಬ್ಬರ ಮೇಲೂ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ನ.27ರಂದು ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಹಗುರದಿಂದ ಸಾಧಾರಣ ಮಳೆಯಾಗುವ (Rain In Karnataka) ಸಂಭವವಿದೆ ಎಂದು ಇಲಾಖೆ ತಿಳಿಸಿದೆ. https://ainlivenews.com/good-news-from-state-govt-for-applicants-for-new-ration-card/ ತಮಿಳುನಾಡಿನ ಕರಾವಳಿ ಭಾಗಕ್ಕೆ ವಾಯುಭಾರ ಕುಸಿತ ಬಂದು ತಲುಪಲಿದೆ. ಈ ಹಿನ್ನೆಲೆ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲೂ ನಾಲ್ಕು ದಿನಗಳ ಕಾಲ ಮಳೆ ಇರಲಿದೆ. ಬೆಳ್ಳಂಬೆಳ್ಳಗ್ಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು ಮಳೆಯಾಗುವ ಸಾಧ್ಯತೆ ಇದೆ ತಮಿಳುನಾಡಿನ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ ಗುರುವಾರ ಭಾರೀ ಮಳೆಯಾಗಿದ್ದು, ಅನೇಕ ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿದೆ ಮತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇಂದು ಕೂಡ ಮಳೆ ಮುಂದುವರೆಯಲಿದ್ದು, ತಿರುವಳ್ಳೂರು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ವಿಜಯಪುರ: ನಾನು ಆಳಂದ ಶಾಸಕ ಬಿ. ಆರ್. ಪಾಟೀಲ ಜೊತೆ ಮಾತನಾಡಿಲ್ಲ. ನನಗೆ ಆ ವಿಷಯ ಗೊತ್ತೂ ಇಲ್ಲ. ನಾನು ಎರಡ್ಮೂರು ದಿನಗಳಿಂದ ಮತಕ್ಷೇತ್ರದಲ್ಲಿ ಇರಲಿಲ್ಲ. ತಿಳಿದುಕೊಂಡು ಹೇಳುತ್ತೇನೆ ಎಂದು ಶಾಸಕ ಬಿಆರ್ ಪಾಟೀಲ ಅವರ ಪತ್ರದ ಕುರಿತು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆಯಲ್ಲಿ ಮತ್ತು ವಿಧಾನ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿತ್ತು. ನಾನು ಓರ್ವ ಹಿರಿಯ ಶಾಸಕರು ವ್ಯಕ್ತಪಡಿಸಿರುವ ಆತಂಕಗಳ ಹಿನ್ನೆಲೆಯಲ್ಲಿ ಬಹಳ ಜನ ಶಾಸಕರೂ ಸಹಮತ ವ್ಯಕ್ತಪಡಿಸಿದ್ದರು. https://ainlivenews.com/residents-own-property-in-bangalore-heres-the-good-news/ ಅಂದು ಬಿಆರ್ ಪಾಟೀಲ ಅವರು ಮಾತನಾಡಿರುವುದಕ್ಕೆ ನನ್ನ ಬೆಂಬಲ ಇದೆ ಎಂದರು. ಪ್ರತಿಯೊಂದಕ್ಕೂ ಮಾಧ್ಯಮಗಳ ಬಳಿ ಹೋಗುವುದು ಬೇಡ. ಅಂದು ಅವರು ಮಾತನಾಡಿದ್ದನ್ನು ನಾನು ಹೇಳಿದ್ದೇನೆ. ಅದನ್ನು ಬಿಟ್ಟು ಗೊತ್ತಿರದ ವಿಷಯದ ಕುರಿತು ನಾನು ಮಾತನಾಡುವುದಿಲ್ಲ ಎಂದು ಹೇಳಿದರು.
ಬೆಂಗಳೂರು: ಹೆಣ್ಣು ಭ್ರೂಣ ಹತ್ಯೆ ಅಕ್ಷಮ್ಯ, ಹೀನಾಯ ಕೆಲಸ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಕಿಡಿಕಾರಿದ್ದಾರೆ. https://ainlivenews.com/good-news-from-state-govt-for-applicants-for-new-ration-card/ ಮೈಸೂರು ಹಾಗೂ ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಮಕ್ಕಳ ಮಾರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಇದು ಅತ್ಯಂತ ಅಕ್ಷಮ್ಯ ಹಾಗೂ ಹೀನಾಯ ಕೆಲಸ. ಇದನ್ನು ವೈದ್ಯರು ಕೂಡಾ ಶಾಮೀಲಾಗಿ ಮಾಡುತ್ತಿರುವುದು ಅಪರಾಧ. ಯಾವುದೇ ಸರ್ಕಾರವಿದ್ದರೂ ಇಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಇಂಥ ಕೆಲಸ ಮಾಡುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಇದನ್ನು ತಡೆಗಟ್ಟಲು ಸರ್ಕಾರ ಬದ್ಧ. ಯಾರೇ ಹೆಣ್ಣು ಭ್ರೂಣ ಹತ್ಯೆ ಮಾಡಿದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಹೇಳಿದರು. 12ನೇ ಶತಮಾನದಲ್ಲೇ ಬಸವಣ್ಣ ಹಾಗೂ ಶರಣರು ಗಂಡು ಹೆಣ್ಣು ಭೇದಭಾವ ಅಳಿಸಿ ಹಾಕಿದ್ದರು. ಹೆಣ್ಣು ಲಕ್ಷ್ಮೀ ಇದ್ದಂಗೆ. ಗಂಡು ಮಕ್ಕಳಿಗಿಂತ ಹೆಣ್ಣುಮಕ್ಕಳೇ ಒಳ್ಳೆಯವರು. ತಂದೆ ತಾಯಂದಿರನ್ನು ಸಾಕುವವರು ಅವರೇ ಎಂದು ಹೇಳಿದರು. ವಿಜಯಪುರ ಜಿಲ್ಲೆಯಲ್ಲಿಯೂ ಇಂಥ ಕೆಲಸ ಮಾಡಲು ಬಿಡಲ್ಲ. ಜನರಲ್ಲೂ ಜಾಗೃತಿ ಮೂಡಬೇಕಿದೆ. ಇಂಥ…