ಆಸ್ಟ್ರೇಲಿಯಾ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಸೋಲು ಅನುಭವಿಸಿದ ಹೊರತಾಗಿಯೂ ಆರಂಭಿಕ ಬ್ಯಾಟ್ಸ್‌ಮನ್ ಋತುರಾಜ್ ಗಾಯಕ್ವಾಡ್ ಅವರನ್ನು ನಾಯಕ ಸೂರ್ಯಕುಮಾರ್ ಯಾದವ್ ಮುಕ್ತಕಂಠಿಂದ ಗುಣಗಾನ ಮಾಡಿದ್ದಾರೆ. ಗಾಯಕ್ವಾಡ್ ಅತ್ಯಂತ ವಿಶೇಷ ಆಟಗಾರ ಎಂದು ಶ್ಲಾಘಿಸಿದ್ದಾರೆ. ಮಂಗಳವಾರ ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಭಾರತ ತಂಡ ಆರಂಭದಲ್ಲಿಯೇ ಯಶಸ್ವಿ ಜೈಸ್ವಾಲ್ ಮತ್ತು ಇಶಾನ್ ಕಿಶನ್ ಅವರ ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆದರೂ ಕುಗ್ಗದ ಋತುರಾಜ್ ಗಾಯಕ್ವಾಡ್ ಕೊನೆಯವರೆಗೂ ಬ್ಯಾಟ್ ಮಾಡಿ ಅಜೇಯ 123 ರನ್‌ಗಳನ್ನು ಗಳಿಸಿದರು. ಆ ಮೂಲಕ ಭಾರತ ತಂಡ 222 ರನ್‌ಗಳನ್ನು ಕಲೆ ಹಾಕಲು ನೆರವು ನೀಡಿದರು. ಪೋಸ್ಟ್ ಮ್ಯಾಚ್ ಪ್ರಸೆಂಟೆಷನ್‌ನಲ್ಲಿ ಮಾತನಾಡಿದ ಸೂರ್ಯಕುಮಾರ್ ಯಾದವ್, “ಅದ್ಭುತ. ನಾನು ಔಟ್ ಆದ ಬಳಿಕ ಋತುರಾಜ್ ಗಾಯಕ್ವಾಡ್ ಅವರು ಕೊನೆಯವರೆಗೂ ಬ್ಯಾಟ್ ಮಾಡಿದ್ದರು. ಗಾಯಕ್ವಾಡ್ ಅತ್ಯಂತ ವಿಶೇಷ ಆಟಗಾರ ಎಂದು ನಾನು ಫ್ರಾಂಚೈಸಿ ಕ್ರಿಕೆಟ್ ವೇಳೆ ಸಾಕಷ್ಟು ಬಾರಿ ಹೇಳಿದ್ದೇನೆ.…
Author: AIN Author
ಇಸ್ಲಾಮಾಬಾದ್: ದೇಶೀಯ ಪಂದ್ಯವೊಂದರಲ್ಲಿ ಪ್ಯಾಲೆಸ್ತೀನ್ ಧ್ವಜವನ್ನು (Palestine Flag) ಬ್ಯಾಟ್‌ನಲ್ಲಿ ಪ್ರದರ್ಶನಿಸಿದ್ದ ಬ್ಯಾಟರ್‌ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ದಂಡ ವಿಧಿಸಿ ನಂತರ ಆದೇಶ ವಾಪಸ್ ಪಡೆದುಕೊಂಡಿರುವ ಘಟನೆ ನಡೆದಿದೆ.ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಜಂ ಖಾನ್ ಅವರ ತಂಡ ಕರಾಚಿ ವೈಟ್ಸ್ ಲಾಹೋರ್ ಬ್ಲೂಸ್ ವಿರುದ್ಧ ಸೆಣಸಿತ್ತು. ಆಗ ಖಾನ್ ಬ್ಯಾಟ್ ಪ್ಯಾಲೆಸ್ತೀನ್ ಧ್ವಜವನ್ನು ಒಳಗೊಂಡಿತ್ತು. ಆಜಮ್‌ಗೆ ಪಂದ್ಯದ ಶುಲ್ಕದಲ್ಲಿ 50% ದಂಡವನ್ನು ವಿಧಿಸಲಾಯಿತು. ನಂತರ ಪಿಸಿಬಿ ಪರಿಶೀಲಿಸಿ, ಮ್ಯಾಚ್ ಅಧಿಕಾರಿಗಳು ವಿಧಿಸಿದ ಪೆನಾಲ್ಟಿಯನ್ನು ಮನ್ನಾ ಮಾಡಲು ನಿರ್ಧರಿಸಿತು. ಆಜಮ್ ಖಾನ್‌ಗೆ ಪಂದ್ಯದ ಅಧಿಕಾರಿಗಳು ವಿಧಿಸಿದ ಶೇಕಡಾ 50 ರಷ್ಟು ದಂಡವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಪರಿಶೀಲಿಸಿ ಮನ್ನಾ ಮಾಡಿದೆ. ಕರಾಚಿಯ ನ್ಯಾಶನಲ್ ಬ್ಯಾಂಕ್ ಸ್ಟೇಡಿಯಂನಲ್ಲಿ ಲಾಹೋರ್ ಬ್ಲೂಸ್ ವಿರುದ್ಧ 2023-24ರ ರಾಷ್ಟ್ರೀಯ T20 ಕಪ್ ಪಂದ್ಯ ನಡೆದಿತ್ತು. ಪಂದ್ಯದ ವೇಳೆ ಆಜಂ ಖಾನ್, ಅಪರಾಧ ಎಸಗಿದ್ದಕ್ಕಾಗಿ ತಪ್ಪಿತಸ್ಥರೆಂದು ಪರಿಗಣಿಸಿ ಪಂದ್ಯದ ಶುಲ್ಕದ 50 ಪ್ರತಿಶತದಷ್ಟು ದಂಡವನ್ನು ವಿಧಿಸಲಾಗಿತ್ತು. https://ainlivenews.com/residents-own-property-in-bangalore-heres-the-good-news/ ಪಂದ್ಯದ ಸಮಯದಲ್ಲಿ ಅಂಪೈರ್‌ನ…
ಬೆಂಗಳೂರು: ಭ್ರೂಣ ಹತ್ಯೆಯ ಜಾಲವನ್ನ ಬುಡಸಮೇತ ಕಿತ್ತುಹಾಕಬೇಕಿದೆ. ಮಂಡ್ಯದ ಆಲೆಮನೆ ಹಾಗೂ ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡಿದ್ದು, ಈ ನಿಟ್ಟಿನಲ್ಲಿ ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಇಂದು ಮಂಡ್ಯದ ಆಲೆಮನೆ ಸ್ಥಳಕ್ಕೆ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಸ್ಕ್ಯಾನಿಂಗ್ ಸೆಂಟರ್ ಗಳಿಗೂ ಕೂಡ ಭೇಟಿ ನೀಡಿದ್ದು, ಇವುಗಳ ಮೇಲೆ ಹೆಚ್ಚು ನಿಗಾ ಇಡುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. https://ainlivenews.com/feticide-case-state-government-orders-cid-probe/ ಮೈಸೂರಿನ ಮಾತಾ ಆಸ್ಪತ್ರೆಯ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಅಲ್ಲಿಯ ಸ್ಥಳೀಯರೊಂದಿಗೆ ಆಸ್ಪತ್ರೆ ನಡೆಸುತ್ತಿದ್ದ ಚಟುವಟಿಕೆಗಳ ಕುರಿತು ಮಾಹಿತಿ ಪಡೆದರು. ಆರೋಗ್ಯ ಇಲಾಖೆ ಅಧಿಕಾರಿಗಳ ಕರ್ತವ್ಯ ಲೋಪ ಎಸಗಿರುವುದು ಸ್ಪಷ್ಟವಾಗಿ ಕಂಡುಬಂದಿದ್ದು, ಅಧಿಕಾರಿಗಳು ತಪ್ಪು ಮಾಹಿತಿ ನೀಡಿರವುದನ್ನ ಸಚಿವರು ಗಮನಿಸಿದರು. ಭೇಟಿ ಬಳಿಕ ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ, ಹಿರಿಯ ಪೊಲೀಸ್ ಅಧಿಕಾರಿಗಳು, ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಭ್ರೂಣ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಗಲೇ ತಾನು ಉಳಿಸಿಕೊಂಡ ಮತ್ತು ಬಿಡುಗಡೆ ಮಾಡಿದ ಆಟಗಾರರ ಪಟ್ಟಿ ಪ್ರಕಟ ಮಾಡಿದೆ. ಈ ಬಗ್ಗೆ ತಮ್ಮ ಯೂ ಟ್ಯೂಬ್ ಕಾರ್ಯಕ್ರಮದಲ್ಲಿ ಮಾತನಾಡಿರುವ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹಾಗೂ ಆರ್‌ಸಿಬಿ ತಂಡದ ಮಾಜಿ ಸ್ಟಾರ್ ಬ್ಯಾಟರ್ ಎಬಿ ಡಿ ವಿಲಿಯರ್ಸ್ ಅಸಮಾಧಾನ ಹೊರಹಾಕಿದ್ದಾರೆ. ಕೋಚಿಂಗ್ ಬಳಗ ಬದಲಾಯಿಸಿಕೊಂಡು ಟೀಮ್ ಮ್ಯಾನೇಜ್ಮೆಂಟ್‌ನಲ್ಲಿ ಕ್ರಿಕೆಟ್ ಜಗತ್ತಿನ ಅತ್ಯಂತ ಚತುರ ತಂತ್ರಗಾರರಲ್ಲಿ ಒಬ್ಬರಾದ ಮೋ ಬೋಬಟ್ ಅವರನ್ನು ಆರ್‌ಸಿಬಿ ಕ್ರಿಕೆಟ್ ಡೈರೆಕ್ಟರ್ ಆಗಿ ನೇಮಕ ಮಾಡಿದೆ. ಈ ನಿಟ್ಟಿನಲ್ಲಿ ಚಾಲೆಂಜರ್ಸ್ ಮುಂದಿನ ಆವೃತ್ತಿಗೆ ವಿಭಿನ್ನ ಯೋಜನೆಗಳನ್ನು ಹಾಕಿಕೊಂಡಂತ್ತಿದೆ. ಆದರೆ, ಜಾಶ್ ಹೇಝಲ್‌ವುಡ್ ಅವರಂತಹ ಮ್ಯಾಚ್ ವಿನ್ನಿಂಗ್ ಫಾಸ್ಟ್ ಬೌಲರ್‌ನ ಕೈಬಿಟ್ಟು ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಅವರನ್ನು ಉಳಿಸಿಕೊಂಡಿರುವ ಹಿಂದಿನ ಆಲೋಚನೆ ಅಚ್ಚರಿ ತಂದಿದೆ ಎಂದು ಎಬಿಡಿ ಹೇಳಿಕೊಂಡಿದ್ದಾರೆ. “ದಿನೇಶ್ ಕಾರ್ತಿಕ್ ಅವರನ್ನು ಉಳಿಸಿಕೊಂಡಿರುವುದು ನನಗೆ ದೊಡ್ಡ ಅಚ್ಚರಿ ತಂದಿದೆ. ಕಳೆದ ಆವೃತ್ತಿಯಲ್ಲಿ ಅವರ ಬ್ಯಾಟ್‌ನಿಂದ ರನ್ ಬಂದೇ…
ಧಾರವಾಡ: ಕಳೆದ ಏಪ್ರಿಲ್ 19 ರಂದು ಕೋಟೂರು ಗ್ರಾಮದಲ್ಲಿ ಹತ್ಯೆಯಾಗಿದ್ದ ಧಾರವಾಡ ಜಿಲ್ಲಾ ಬಿಜೆಪಿಯ ಯುವ ಮೋರ್ಚಾ ಉಪಾಧ್ಯಕ್ಷ ದಿ. ಪ್ರವೀಣ ಕಮ್ಮಾರ ಕುಟುಂಬಸ್ಥರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಧನ ಸಹಾಯ ಮಾಡುವ ಮೂಲಕ ಕುಟುಂಬದ ಕಷ್ಟಕ್ಕೆ ನೇರವಾಗಿದ್ದಾರೆ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಹತ್ಯೆಯ ನಂತರ ಆರ್ಥಿಕ ಸಂಕಷ್ಟದಿಂದಾಗಿ ನೂತನ ಮನೆ ನಿರ್ಮಾಣ ಕಾರ್ಯ ಅರ್ಧಕ್ಕೆ ಸ್ಥಗಿತವಾಗಿತ್ತು. ಇದನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ತಿಳಿದುಕೊಂಡ ಕೇಂದ್ರ ಸಚಿವರು ಕುಟುಂಬಸ್ಥರಿಗೆ ಧನ ಸಹಾಯ ಮಾಡಿ ಸಂಕಷ್ಟದಲ್ಲಿ ಕುಟುಂಬಸ್ಥರ ಬೆನ್ನಿಗೆ ನಿಂತಿದ್ದಾರೆ. ಇನ್ನೂ ಕೇಂದ್ರ ಸಚಿವರ ಸಹಾಯಧನವನ್ನು ಇಂದು ಧಾರವಾಡ ಗ್ರಾಮೀಣ ಮಾಜಿ ಶಾಸಕರಾದ ಅಮೃತ ದೆಸಾಯಿ, ಜಿಲ್ಲಾ ಅಧ್ಯಕ್ಷರಾದ ಬಸವರಾಜ ಕುಂದಗೋಳಮಠ, ಮಂಡಲ ಅಧ್ಯಕ್ಷ ರುದ್ರಪ್ಪ ಅರಿವಾಳ,ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಶಂಕರ ಕೋಮಾರದೇಸಾಯಿ ಮತ್ತು ಯಲ್ಲಪ ಜಾನಕನೂರ್ ಸೇರಿದಂತೆ ಪ್ರಮುಖರೆಲ್ಲರು ಸೇರಿ ಕುಟುಂಬಸ್ಥರಿಗೆ ಕೇಂದ್ರ ಸಚಿವರ ಧನ ಸಹಾಯದ ಹಣವನ್ನು ನೀಡಿ, ಕುಟುಂಬಸ್ಥರಿಗೆ…
ಬೆಂಗಳೂರು: ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿದೆ. ಭ್ರೂಣ ಹತ್ಯೆಯ ಜಾಲವನ್ನ ಬುಡಸಮೇತ ಕಿತ್ತುಹಾಕಬೇಕಿದೆ. ಮಂಡ್ಯದ ಆಲೆಮನೆ ಹಾಗೂ ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡಿದೆ.. ಪ್ರಕರಣವನ್ನ ‘ಸಿಐಡಿ’ ತನಿಖೆಗೆ ವಹಿಸಲಾಗಿದ್ದು, ಭ್ರೂಣ ಹತ್ಯೆ ಪ್ರಕರಣದ ತನಿಖೆಗೆ ಆರೋಗ್ಯ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ. ಭ್ರೂಣ ಹತ್ಯೆ ಒಂದು ಸಾಮಾಜಿ ಪಿಡುಗು. ಇದನ್ನು ಕಾನೂನಿನ ಚೌಕಟ್ಟಿನಲ್ಲಿ ಎಷ್ಟು ಮಟ್ಟ ಹಾಕಲು ಸಾಧ್ಯ ಆರೋಗ್ಯ ಇಲಾಖೆ, ಸರ್ಕಾರ ಸಂಪೂರ್ಣವಾಗಿ ಪ್ರಮಾಣಿಕ ಪ್ರಯತ್ನ ನಡೆಸಲಿದೆ. ಈಗಿರುವ ಕಾನೂನು ಗಳನ್ನ ಇನ್ನಷ್ಟು ಬಿಗಿಗೊಳಿಸುತ್ತೇವೆ. ಆದರೆ ನಮ್ಮ ಸಮಾಜ ಕೂಡ ಬದಲಾಗಬೇಕು. ಹೆಣ್ಣು ಎಂಬ ಒಂದೇ ಕಾರಣಕ್ಕೆ ಭ್ರೂಣ ಹತ್ಯೆ ಮಾಡಿಸುವುದು ಸರಿಯಲ್ಲ. ಭ್ರೂಣ ಹತ್ಯೆ ಮಾಡಿಸುವವರ ವಿರುದ್ಧವು ಕ್ರಮಗಳಾಗಬೇಕು. ನಮ್ಮ ಸಮಾಜ ಕೂಡ ಜಾಗೃತರಾಗಿ ಭ್ರೂಣ ಹತ್ಯೆ ಪಿಡುಗನ್ನ ತೊಡಗಿಸಲು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು.
ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ (BMTC) ಬಸ್ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಎಚ್ಚೆತ್ತುಕೊಂಡ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ಬಸ್ ಅಪಘಾತ (Bus Accident) ತಡೆಯಲು ಬಿಎಂಟಿಸಿ ಹೊಸ ಟೆಕ್ನಾಲಜಿಯ ಮೊರೆ ಹೋಗಿದೆ. ಇತ್ತೀಚೆಗೆ ಮಹಿಳಾ ಸುರಕ್ಷತೆಗಾಗಿ ಸಿಸಿಟಿವಿ, ಪ್ಯಾನಿಕ್ ಬಟನ್ ಅಳವಡಿಸುವ ಕ್ರಮಕ್ಕೆ ಮುಂದಾಗಿದ್ದ ಬಿಎಂಟಿಸಿ ಈಗ ಬಸ್‌ಗಳಲ್ಲಿ ಅಡಾಸ್ (ADAS) ಅಂದ್ರೆ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ ಅಳವಡಿಕೆ ಮಾಡುತ್ತಿದೆ ಅತ್ಯಾಧುನಿಕ ಟೆಕ್ನಾಲಜಿ ಒಳಗೊಂಡಿರುವ ಈ ಡಿವೈಸ್ ಮುಂಭಾಗದಲ್ಲಿ ಬರುವ ವಾಹನಗಳ ಅಲರ್ಟ್ ಮಾಡುವ ಜೊತೆಗೆ, ಡ್ರೈವರ್ ಅನ್ನು ಸಹ ಮಾನಿಟರ್ ಮಾಡುತ್ತೆ. ಡ್ರೈವರ್ ವಿಭಾಗದಲ್ಲಿ ಅಳವಡಿಸಲಾಗಿರುವ ಐ ವಾಚ್ ಇತರೇ ವಾಹನಗಳ ನಡುವೆ ಅಂತರ ಎಷ್ಟಿದೆ ಎಂಬುದನ್ನ ರೆಡ್ ಸಿಗ್ನಲ್ ಮೂಲಕ ಅಳವಡಿಕೆ ಮಾಡಿದ್ರೆ, ಡ್ರೈವರ್ ಮಾನಿಟರಿಂಗ್ ಸಿಸ್ಟಮ್ ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರೆ ಅಥವಾ ನಿದ್ರೆಗೆ ಜಾರಿದರೆ ತಕ್ಷಣವೇ ಸಿಗ್ನಲ್ ಮೂಲಕ ಎಚ್ಚರಿಕೆ ನೀಡುತ್ತದೆ. ಇತ್ತೀಚೆಗೆ ಮಾಲ್, ಮೆಟ್ರೋದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ಕಿರುಕುಳದಿಂದ ಎಚ್ಚೆತ್ತ…
ಬೇಸಿಗೆಯಲ್ಲಿ ಸೋರೆಕಾಯಿ ಸೇವಿಸುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಗಳನ್ನು ನೀಡುತ್ತದೆ. ತೂಕವನ್ನು ಕಡಿಮೆ ಮಾಡುವುದರಿಂದ, ಜೀರ್ಣಕ್ರಿಯೆಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಸೋರೆಕಾಯಿ ಪರಿಹಾರ ನೀಡಲಿದೆ. ಇದಲ್ಲದೇ ಬೇಸಿಗೆ ಕಾಲದಲ್ಲಿ ಸೋರೆಕಾಯಿಯನ್ನು ಸೇವಿಸುವುದರಿಂದ ಆರೋಗ್ಯವನ್ನು ಸದೃಢವಾಗಿರಿಸಿಕೊಳ್ಳಬಹುದು. ಎದೆಯುರಿ, ದೇಹದಲ್ಲಿ ನೀರಿನ ಕೊರತೆ, ಶಾಖದಿಂದ ತಲೆಸುತ್ತು, ಉಸಿರಾಟದ ತೊಂದರೆ ಇಂತಹ ಹಲವು ಸಮಸ್ಯೆಗಳಿಂದ ಸೋರೆಕಾಯಿ ಕಾಪಾಡುತ್ತದೆ. ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ: ಸೋರೆಕಾಯಿ ತಿನ್ನುವುದರಿಂದ ಹೃದಯಾಘಾತದ ಅಪಾಯವೂ ಕಡಿಮೆಯಾಗುತ್ತದೆ ಎಂದು ನಿಮಗೆ ತಿಳಿದಿದೆಯೇ? ಇದನ್ನು ಸೇವಿಸುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಒಳ್ಳೆಯ ಕೊಲೆಸ್ಟ್ರಾಲ್ ಸಮತೋಲನದಲ್ಲಿರುತ್ತದೆ. ಇದಲ್ಲದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬಿಳಿ ಕೂದಲಿನ ಸಮಸ್ಯೆಗೆ ಪರಿಹಾರ ಕೂದಲು ಅಕಾಲಿಕವಾಗಿ ಬಿಳಿಯಾಗುವ ಸಮಸ್ಯೆಯಲ್ಲೂ ನೀವು ಪ್ರಯೋಜನವನ್ನು ಪಡೆಯಬಹುದು. ನಿತ್ಯ ಒಂದು ಲೋಟ ಸೋರೆಕಾಯಿ ಜ್ಯೂಸ್ ಕುಡಿದರೆ ಕೂದಲು ಬೆಳೆಯುವುದರ ಜೊತೆಗೆ ಅದು ಬಿಳಿಯಾಗುವುದನ್ನು ತಡೆಯಬಹುದು ಎಂದು ಹೇಳಲಾಗುತ್ತದೆ. ತೂಕವನ್ನು ಕಡಿಮೆ ಮಾಡುವಲ್ಲಿ ಪ್ರಯೋಜನಕಾರಿ: ಸೋರೆಕಾಯಿ ತೂಕವನ್ನು ಕಡಿಮೆ ಮಾಡಲು ಸಹ ತುಂಬಾ ಪ್ರಯೋಜನಕಾರಿಯಾಗಿದೆ. ಬಾಟಲ್ ಸೋರೆಕಾಯಿಯಲ್ಲಿ ವಿಟಮಿನ್-ಸಿ, ಸೋಡಿಯಂ,…
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕವು ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಮೂಲಕ ನವೆಂಬರ್ 2023 ರ ಮೂಲಕ ಆಹ್ವಾನಿಸಿದೆ. ಸುರತ್ಕಲ್ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 02-Dec-2023 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. NIT ಕರ್ನಾಟಕ ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ) ಹುದ್ದೆಗಳ ಸಂಖ್ಯೆ: 02 ಉದ್ಯೋಗ ಸ್ಥಳ: ಸುರತ್ಕಲ್ – ಕರ್ನಾಟಕ ಹುದ್ದೆಯ ಹೆಸರು: ವೈದ್ಯಕೀಯ ಅಧಿಕಾರಿ ವೇತನ: ರೂ.56100/- ಪ್ರತಿ ತಿಂಗಳು NIT ಕರ್ನಾಟಕ ನೇಮಕಾತಿ 2023 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ: NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು MBBS, M.D, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ…
ಸೂರ್ಯೋದಯ: 06.26 AM, ಸೂರ್ಯಾಸ್ತ : 05.51 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಚೌತಿ 03:31 PM ತನಕ ನಂತರ ಪಂಚಮಿ ನಕ್ಷತ್ರ: ಇವತ್ತು ಪುನರ್ವಸು 04:40 PM ತನಕ ನಂತರ ಪುಷ್ಯ ಯೋಗ: ಇವತ್ತು ಶುಕ್ಲ 08:04 PM ತನಕ ನಂತರ ಬ್ರಹ್ಮ ಕರಣ: ಇವತ್ತು ಬವ 02:53 AM ತನಕ ನಂತರ ಬಾಲವ 03:31 PM ತನಕ ನಂತರ ಕೌಲವ ರಾಹು ಕಾಲ: 10:30 ನಿಂದ 12:00 ವರೆಗೂ ಯಮಗಂಡ:03:00 ನಿಂದ 04:30 ವರೆಗೂ ಗುಳಿಕ ಕಾಲ:07:30 ನಿಂದ 09:00 ವರೆಗೂ ಅಮೃತಕಾಲ: 02.06 PM to 03.49 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:42 ನಿಂದ ಮ.12:26 ವರೆಗೂ ಮೇಷ ರಾಶಿ: ಇವರ ಅರ್ಥವಿಲ್ಲದ ದಾಂಪತ್ಯ, ಚಲನಚಿತ್ರ ನಿರ್ಮಾಪಕರಿಗೆ ಆರ್ಥಿಕ ತೊಂದರೆ ಕಾಡಲಿದೆ, ರಾಜಕಾರಣಿಗಳು ಮತ್ತು ಜನಪ್ರತಿನಿಧಿಗಳು ಎಚ್ಚರಿಕೆಯಿಂದ ನಿರ್ವಹಿಸಿ, ಕಾಂಡಿಮೆಂಟ್ಸ್…