Author: AIN Author

ವಿಜಯನಗರ: ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿ ದಾಳಿ ನಡೆಸಿವೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದಲ್ಲಿ ದಾಳಿ ನಡೆಸಲಾಗಿದ್ದು, ಮಹಮ್ಮದ್ ರಫಿ (50) ಎಂಬ ನಕಲಿ ವೈದ್ಯನನ್ನು ಬಂಧಿಸಲಾಗಿದೆ. ಶಿವಪುರ ಗ್ರಾಮದ ತನ್ನ ಮನೆಯಲ್ಲಿ ನಕಲಿ ವೈದ್ಯ ಮಹಮ್ಮದ್ ರಫಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ.  ವಿಜಯನಗರ DHO ಡಾ. ಶಂಕರ್ ನಾಯ್ಕ್, ಕೂಡ್ಲಿಗಿ ಸಿಪಿಐ ಸುರೇಶ್ ತಳವಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ದಾಳಿಯ ವೇಳೆ ಅನೇಕ ಸಿರಿಂಜ್‌ಗಳು, ಮಾತ್ರೆಗಳು, ಸ್ಟೆತೋಸ್ಕೋಪ್ ಸೇರಿದಂತೆ ಇತರೆ ವೈದ್ಯಕೀಯ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ. ಮೊಹಮದ್ ರಫಿ ಮೇಲೆ ಹಲವು ದೂರುಗಳು ಬಂದಿದ್ದವು. ದೂರಿನ ಆಧಾರ ಮೇಲೆ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ದಾಳಿ ನಡೆಸಿವೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: 108 ಅಂಬುಲೆನ್ಸ್‌ (108 Ambulance) ಕೆಲ ಚಾಲಕರಿಗೂ ಖಾಸಗಿ ಆಸ್ಪತ್ರೆಯವರಿಗೂ ಒಂದು ಒಪ್ಪಂದ ಇರುತ್ತದೆ. 108 ಅಂಬುಲೆನ್ಸ್‌ ಚಾಲಕರು ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಿ ಬಿಡ್ತಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K.Shivakumar) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ಸ್‌ ಬಳಿ ನಡೆದ ಕಾರ್ಯಕ್ರಮದಲ್ಲಿ ನೂತನ 262 ಅಂಬುಲೆನ್ಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಿದರು. ಈ ವೇಳೆ 108 ಅಂಬುಲೆನ್ಸ್‌ ಕೆಲ ಚಾಲಕರ ವಿರುದ್ಧ ಡಿಕೆಶಿ ಅಸಮಾಧಾನ ಹೊರಹಾಕಿದರು. ಕನಕಪುರದಲ್ಲಿ ಮೆಡಿಕಲ್ ಕಾಲೇಜು ಬೇಕು ಅಂತ ಯಾಕೆ ಬಡಿದುಕೊಳ್ತೇನೆ ಗೊತ್ತಾ? 108 ಅಂಬುಲೆನ್ಸ್‌ನವರಿಗೂ ಖಾಸಗಿ ಆಸ್ಪತ್ರೆಯವರಿಗೂ ಒಂದು ಒಪ್ಪಂದ ಇರುತ್ತೆ. 108 ಅಂಬುಲೆನ್ಸ್‌ ಚಾಲಕರಿಗೆ ಈ ಚೇಷ್ಟೆ ಇದೆ. ರೋಗಿಗಳನ್ನ ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಿ ಬಿಡ್ತಾರೆ ಎಂದು ಗರಂ ಆದರು. ಅಲ್ಲಿಗೆ ಹೋದ ಮೇಲೆ ಬಿಲ್ ಜಾಸ್ತಿ ಆಗೇ ಆಗುತ್ತೆ. ಅವರು ಬಿಲ್ ಕೊಡುವುದಕ್ಕೆ ಆಗದೇ ಶಾಸಕರ…

Read More

ಮಂಡ್ಯ: ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ  ಬೈಕ್’​​ನಲ್ಲಿ ಬಂದು ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆರಗೋಡು ಗ್ರಾಮದ ಚಂದ್ರಶೇಖರ್ ಆರಾಧ್ಯ (35)ಬಂಧಿತ ಆರೋಪಿ. ಚಂದ್ರಶೇಖರ ಹೆಲ್ಮೆಟ್ ಧರಿಸಿ ಬೈಕ್​ನಲ್ಲಿ ಬಂದು ರಸ್ತೆಯಲ್ಲಿ ಹೋಗ್ತಿದ್ದ ಒಂಟಿ ಮಹಿಳೆಯರಿಗೆ ಕಿರುಕುಳ‌ ಕೊಡುತ್ತಿದ್ದನು. ಚಂದ್ರಶೇಖರ ಕಳೆದ ಒಂದು ತಿಂಗಳಿಂದ ಹಲವೆಡೆ ವಿಕೃತವಾಗಿ ನಡೆದುಕೊಂಡಿದ್ದನು. ಬುಧವಾರ ಸಂಜೆ ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದಾನೆ. ಈ ವೇಳೆ ಆರೋಪಿಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಂದ ಮಾಹಿತಿ ಪಡೆದ ಪೊಲೀಸರು ಸಿಸಿಕ್ಯಾಮರಾ ದೃಶ್ಯಾವಳಿ ಆಧರಿಸಿ ಚಂದ್ರಶೇಖರ್​ನನ್ನು ಬಂಧಿಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan), ಕೋರ್ಟಿನಿಂದ ನೆಮ್ಮದಿ ಸಿಕ್ಕಿದ್ದರೂ, ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi)  ಮಾತ್ರ ನೆಮ್ಮದಿ ನೀಡುತ್ತಿಲ್ಲ. ಪದೇ ಪದೇ ನಟನಿಗೆ ಜೀವ ಬೆದರಿಕೆ ಹಾಕುತ್ತಿದ್ದಾನೆ. ಮತ್ತೆ ಶಾರುಖ್ ಇ-ಮೇಲ್ ಖಾತೆಗೆ ಸಂದೇಶವೊಂದನ್ನು ಕಳುಹಿಸಿದ್ದು, ವಿದೇಶದಲ್ಲಿ ನೆಲೆಸೋಕೆ ವಿಸಾ ಇರಬಹುದು. ಸಾವಿಗೆ ಇಲ್ಲ ಎಂದು ಬರೆದಿದ್ದಾನೆ. ಲಾರೆನ್ಸ್ ನಿಂದ ಜೀವ ಬೆದರಿಕೆ (Life Threat) ಮೇಲ್ ಬರುತ್ತಿದ್ದಂತೆಯೇ ಮತ್ತೆ ಪೊಲೀಸ್ ಅಧಿಕಾರಿಗಳು ಸಲ್ಮಾನ್ ಮನೆಯ ಭದ್ರತೆಯನ್ನು ತಪಾಸಣೆ ಮಾಡಿದ್ದಾರೆ. ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗದಿರುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ, ಮತ್ತಷ್ಟು ಭದ್ರತೆಯನ್ನು ಹೆಚ್ಚಿಸುವ ಕುರಿತಂತೆ ಚರ್ಚಿಸಿದ್ದಾರೆ. ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಿನ್ನೆಲೆಯಲ್ಲಿ ಈ ಹಿಂದೆ ಲಾರೆನ್ಸ್ ಸಹಚರರನ್ನು ಬಂಧಿಸಿ ಅಗತ್ಯ ಮಾಹಿತಿಯನ್ನು ಮುಂಬೈ ಪೊಲೀಸ್ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಗಾಬರಿ ಹುಟ್ಟಿಸುವಂತಹ ಹೇಳಿಕೆಗಳು ಆ ಟೀಮ್ ನಿಂದ ಬಂದಿವೆ ಎಂದು ಸುದ್ದಿ ಆಗಿತ್ತು. ಹಾಗಾಗಿ ಈ ಹಿಂದೆಯೂ…

Read More

ಬಿಗ್ ಬಾಸ್​ ಮನೆಯಲ್ಲಿ ಇದೀಗ ಮ್ಯಾರೇಜ್​ ಸೀಕ್ರೆಟ್​ನ್ನು ವರ್ತೂರ್​ ಸಂತೋಷ್​ ಬಿಚ್ಚಿಟಿದ್ದಾರೆ. ಹೌದು, ದೊಡ್ಮನೆಯಲ್ಲಿ ಎಲ್ಲವೂ ಸೀಕ್ರೆಟ್​ ಆಗಿಯೇ ಇರುತ್ತದೆ.ಇಲ್ವೇ ಅದು ಓಪನ್ ಆಗಿಯೇ ಬಿಡುತ್ತದೆ. ಈ ವಿಚಾರದಲ್ಲಿ ವರ್ತೂರ್ ಸಂತೋಷ್ ವಿಚಾರ ಹೆಚ್ಚು ಚರ್ಚೆ ಆಗಿದೆ. ಹುಲಿ ಉಗುರು ವಿಷಯದಲ್ಲಿ ಏನೇನೋ ಆಗಿದೆ. ಇದರ ಬೆನ್ನಲ್ಲಿಯೇ ವರ್ತೂರ್ ಸಂತೋಷ್ ಮದುವೆ ಬಗ್ಗೇನೂ ಸಾಕಷ್ಟು ಸತ್ಯಗಳು ಹೊರ ಬಂದಿವೆ. ಆದರೆ ಇದೀಗ ಈ ಮದುವೆ ವಿಷಯಕ್ಕೆ ಸಂಬಂಧಿಸಿದಂತೆ ವರ್ತೂರ್ ಸಂತೋಷ್ ಮುಕ್ತವಾಗಿಯೇ ಮಾತನಾಡಿದ್ದಾರೆ. ಮದುವೆ ಆದ್ಮೇಲೆ ಏನೆಲ್ಲ ಆಯಿತು ಅನ್ನುವ ಸತ್ಯವನ್ನು ಹೇಳಿಕೊಂಡಿದ್ದಾರೆ. ದೊಡ್ಮನೆಯಲ್ಲಿ ವರ್ತೂರ್ ಸಂತೋಷ್ ಮದುವೆ ವಿಷಯ ಹೇಳಿಕೊಂಡಿದ್ದಾರೆ. ನಮ್ಮ ದೊಡ್ಡಪ್ಪ ಹೇಳಿದ್ರು. ಮದುವೆ ಆಗು ಅಂತಲೇ ತಿಳಿಸಿದ್ರು. ಅವರು ತೋರಿಸಿದ ಹುಡುಗಿಯನ್ನ ನಾನು ಮದುವೆ ಆದೆ. ಆದರೆ ಸ್ವಲ್ಪ ದಿನ ಹೋದ್ಮೇಲೆ ನನ್ನ ತಾಯಿಯನ್ನ ಆ ಹುಡುಗಿ ತಿರಸ್ಕಾರ ಮಾಡುತ್ತಿದ್ದಳು. ಇದಲ್ಲದೇ ನಾನು ನಂಬಿದೆ ಮತ್ತು ನಾನು ಪ್ರೀತಿಸೋ ಅಭಿಮಾನಿಗಳನ್ನ ಬಿಟ್ಟು ಬನ್ನಿ ಎಂದು ಹೇಳ್ತಾ ಇದ್ರು.…

Read More

ದೊಡ್ಡಬಳ್ಳಾಪುರ: ತಾಲೂಕಿನ ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ 2023-24 ನೇ ಸಾಲಿನ ಶಾಲಾ ಹಂತದ ಕ್ರೀಡಾಕೂಟ ನಡೆಯಿತು. ಎರಡು ದಿನಗಳ ಕಾಲ ನಡೆದ ಕ್ರೀಡಾಕೂಟದಲ್ಲಿ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಕ್ರೀಡಾಸ್ಫೂರ್ತಿ ಮೆರೆದು ಸಂತಸ ಪಟ್ಟರು.. ಅತಿ ಹೆಚ್ಚು ಪದಕಗಳೊಂದಿಗೆ ಅಥ್ಲೆಟಿಕ್ಸ್ ಜೂನಿಯರ್ ವಿಭಾಗದಲ್ಲಿ ಮಾನಸ ಎಸ್. ಆರ್, ಯು.ಲಿಖಿತ್ ಚಾಂಪಿಯನ್ ಪ್ರಶಸ್ತಿ ಸ್ವೀಕರಿಸಿದರು. ಅಥ್ಲೆಟಿಕ್ಸ್ ಸೀನಿಯರ್ ವಿಭಾಗದಲ್ಲಿ ಟಿ.ನೀತು ಹಾಗೂ ಯಶವಂತ್ ಚಾಂಪಿಯನ್ ಆಗಿ ಹೊರಹೊಮ್ಮಿದರು. ಗುಂಪು ಸ್ಪರ್ಧೆಯಲ್ಲಿ ಪರ್ಲ್ ತಂಡ ಸಮಗ್ರ ಚಾಂಪಿಯನ್ ಪ್ರಶಸ್ತಿ ಸ್ವೀಕರಿಸಿದರೆ, ಸಫೈರ್ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು. ಇದೇ ಶಾಲೆಯ ನಾಲ್ವರು ವಿದ್ಯಾರ್ಥಿಗಳು 4×100 ರಿಲೇ ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಡಿ.2ರಂದು ಮಂಗಳೂರಿನ ಪುತ್ತೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಶಾಲೆಯನ್ನು ಪ್ರತಿನಿಧಿಸಲಿದ್ದಾರೆ. ಹ್ಯಾಮರ್ ಥ್ರೋ ಸ್ಪರ್ಧೆಯಲ್ಲೂ ಶಾಲೆಯ ವಿದ್ಯಾರ್ಥಿಯೊಬ್ಬರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಶಾಲೆಯ ಕಾರ್ಯದರ್ಶಿ ಕೆ.ಜಿ. ಶ್ರೀನಿವಾಸ್ ಮೂರ್ತಿ ಅವರು, ಕ್ರೀಡೋತ್ಸವದ…

Read More

ಸಂದೀಪ್ ರೆಡ್ಡಿ ವಂಗ ನಿರ್ದೇಶನದ  ಹಾಗೂ ರಣ್ ಬೀರ್ ಕಪೂರ್ (Ranbir Kapoor) , ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna),  ಪ್ರಮುಖಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಅನಿಮಲ್ (Animal) ಡಿಸೆಂಬರ್ 1 ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮುನ್ನ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಬಂದಿದೆ. ಚಿತ್ರಕ್ಕೆ ಸೆನ್ಸಾರ್ (Censor) ಆಗಿದ್ದು, ‘ಎ’ ಪ್ರಮಾಣ ಪತ್ರವನ್ನು ನೀಡಲಾಗಿದೆ. ಜೊತೆಗೆ ರಶ್ಮಿಕಾ ಮತ್ತು ರಣಬೀರ್ ಜೋಡಿಯ ಹಸಿಬಿಸಿ ದೃಶ್ಯಗಳನ್ನೂ ತೆಗೆದು ಹಾಕುವಂತೆ ಸೂಚಿಸಲಾಗಿದೆ. ಈ ಚಿತ್ರದ ಬಗ್ಗೆ ಚಿತ್ರತಂಡಕ್ಕೆ ಸಾಕಷ್ಟು ನಿರೀಕ್ಷೆಯಿದೆ. ನಟ ರಣಬೀರ್ ಕಪೂರ್ ಸಿನಿಮಾದ ಬಗ್ಗೆ ಮಾತನಾಡುತ್ತಾ, ‘ಇದು ವಿಭಿನ್ನವಾದ ಸಿನಿಮಾ. ತಂದೆ – ಮಗನ ಬಾಂಧವ್ಯದ ಜೊತೆ ಜೊತೆಗೆ ಹಿಂಸೆ ಮತ್ತು ಕ್ರೌರ್ಯಕ್ಕೆ ಒತ್ತು ನೀಡಿದ್ದಾರೆ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ. ಸೆಂಟೆಮೆಂಟ್ ಅಥವಾ ಹಿಂಸೆಗೆ ಎಷ್ಟು ಪ್ರಾಧಾನ್ಯತೆ ನೀಡಲಾಗಿದೆ ಎನ್ನುವುದನ್ನು ಚಿತ್ರದಲ್ಲಿ ನೋಡಬೇಕು. ಹಿರಿಯ ನಟರಾದ ಅನಿಲ್ ಕಪೂರ್ ಮತ್ತು ಬಾಬಿ ಡಿಯೋಲ್ ಅವರ…

Read More

ಬೆಂಗಳೂರು: ಇಡೀ ಜಾತ್ಯಾತೀತವಾದ, ಮೇಲು ಕೀಳು ಬೇಧಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವರು ಕನಕದಾಸರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸ ಜಯಂತಿ ಪ್ರಯುಕ್ತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. https://ainlivenews.com/536th-kanakadasa-jayanti-celebration-today-chief-guest-t-a-participating-in-sharavana/ ಕನಕದಾಸರು ಸಮಾಜಸುಧಾರಕರಾಗಿದ್ದರು. ಅವರ ಸಾಹಿತ್ಯದ ಮೂಲಕ ಮನುಷ್ಯತ್ವವನ್ನು ಸಾರಿದರು. ಇಡೀ ಜಾತ್ಯಾತೀತವಾದ, ಮೇಲು ಕೀಳು ಬೇಧಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವ. ರಾಮಧಾನ್ಯ ಚರಿತೆ, ಮೋಹನತರಂಗಿಣಿ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದವರು. ಸಮಾಜದ ತಾರತಮ್ಯ ಹೋಗಲಾಡಿಸಲು ಹೋರಾಡಿದ ದಾಸಶ್ರೇಷ್ಠರ ದಿನವನ್ನು ಸರ್ಕಾರ ಇಂದು ಆಚರಿಸುತ್ತಿದೆ. ಸಾಹಿತ್ಯದ ಮೂಲಕ ತಮ್ಮ ಆದರ್ಶಗಳನ್ನು ಜನರಿಗೆ ತಿಳಿಹೇಳಿ ಜಾಗೃತಿ ಮೂಡಿಸಿದ್ದರು. ಜನರಿಗೆ ಅರ್ಥವಾಗುವ ಸರಳಭಾಷೆಯಲ್ಲಿ ತಮ್ಮ ದಾಸಸಾಹಿತ್ಯವನ್ನು ರಚಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನಾಡಿನ ಎಲ್ಲ ಜನತೆಗೆ ಕನಕದಾಸ ಜಯಂತಿಯ ಶುಭಾಶಯಗಳನ್ನು ಕೋರಿದರು.

Read More

ಚಿತ್ರದುರ್ಗ: ದಾಖಲೆ ಇಲ್ಲದೆ ಇನ್ನೋವಾ ಕಾರಿನಲ್ಲಿ  ಸಾಗಿಸುತ್ತಿದ್ದ ಸುಮಾರು ಎಂಟು ಕೋಟಿ ಹಣವನ್ನು ಹೊಳಲ್ಕೆರೆ ಪೊಲೀಸರು ಜಪ್ತಿ ಮಾಡಿದ್ದಾರೆ. ಹೊಳ್ಕೆರೆಯಿಂದ  ಶಿವಮೊಗ್ಗಾಕ್ಕೆ ಹೋಗುತ್ತಿದ್ದ ಇನ್ನೋವಾ ಕಾರನ್ನು ದುಮ್ಮಿ ಬಳಿ ತಡೆದು ಪರಿಶೀಲಿಸಿದಾಗ  ದಾಖಲೆ ಇಲ್ಲದೆ ಎಂಟು ಕೋಟಿ ರೂಪಾಯಿಗಳನ್ನು ಸಾಗಿಸಲಾಗುತ್ತಿತ್ತು. ಇಷ್ಟೊಂದು ಹಣವನ್ನು ಅಡಿಕೆ ವ್ಯಾಪಾರಿ  ಉದಯ್ ಶೆಟ್ಟಿ ಅವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಜಪ್ತಿ ಮಾಡಿದ ಹಣವ‌ನ್ನು ಪೊಲೀಸರು ತಂದು ಪರಿಶೀಲಿಸುತ್ತಿದ್ದು,  ಅದಕ್ಕೆ ದಾಖಲೆಯನ್ನು‌ ನೀಡುವಂತೆ  ಕೇಳಿದ್ದಾರೆ ಎನ್ನಲಾಗಿದೆ.

Read More

ವಿಜಯಪುರ: ಮಾಗಡಿ ಶಾಸಕನೇ ಬ್ರಿಟಿಷ ಇದ್ದಂಗೆ ಅದಾನ. ಆ ಶಾಸಕನ ಬಗ್ಗೆ ಹೆಚ್ಚು ಮಾತಾಡಿ ಪ್ರಯೋಜನ ಇಲ್ಲ ಎಂದು ಬಿಜೆಪಿಯವ್ರನ್ನು ಬ್ರಿಟಿಷರಿಗೆ ಹೋಲಿಸಿದ್ದ ಮಾಗಡಿ ಶಾಸಕ ಬಾಲಕೃಷ್ಣಗೆ ಸಂಸದ ರಮೇಶ ಜಿಗಜಿಣಗಿ ತಿರುಗೇಟು ನೀಡಿದರು. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಪುಲ್ವಾಮಾದಲ್ಲಿ ಸೈನಿಕರು ಸಾಯಲು ಮೋದಿ ಯಾಕೆ ಕಾರಣರಾಗುತ್ತಾರೆ? ನಮ್ಮ ಸೈನಿಕರಿಗೆ ಉಗ್ರರು ತೊಂದರೆ ಮಾಡಿದ್ದಕ್ಕೆ ಮೋದಿ ಅವರು ಸರ್ಜಿಕಲ್ ಸ್ಟ್ರೈಕ್ ಮಾಡಿ ಪಾಕಿಸ್ತಾನದೊಳಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದರು ಇದು ತಪ್ಪಾ? ಎಂದು ಪ್ರಶ್ನಿಸಿದರು. https://ainlivenews.com/residents-own-property-in-bangalore-heres-the-good-news/ ಇನ್ನು ಬಿಜೆಪಿಯವರು ಬ್ರಿಟಿಷರಿಗಿಂತ ಡೇಂಜರ್ ಇದ್ದಾರೆ ಎಂಬ ಮಾಗಡಿ ಶಾಸಕನ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, ಆ ಶಾಸಕನ ಬಗ್ಗೆ ನಾನೇನು ಮಾತಾನಾಡುವದಿಲ್ಲ. ನೋಡೋದಕ್ಕೆ ಆ ಮಾಗಡಿ ಶಾಸಕನೇ ಬ್ರಿಟಿಷ ಇದ್ದಂಗೆ ಅದಾನ. ಬಿಜೆಪಿ ಜೆಡಿಎಸ್ ಸಮಿಶ್ರ ಸರ್ಕಾರವಾದ್ರೆ ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಗೆ ಆದ ಗತಿ ಜೆಡಿಎಸ್ ಗೆ ಆಗತ್ತೆ ಎಂಬ ಹೇಳಿಕೆ ನೀಡಿರುವ ಆ ಶಾಸಕನ ಬಾಯಿ ಇರೋದೇ ಹಾಗೆ…

Read More