ಉಡುಪಿ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ. https://ainlivenews.com/the-drunk-driver-stopped-the-truck-on-the-railway-tracks-what-happened-next/ ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದನು. ಲಂಚ ನೀಡಲು ಒಪ್ಪದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.
Author: AIN Author
ಸ್ಯಾಂಡಲ್ವುಡ್ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ದಿಢೀರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಮಂಡ್ಯ ರಮೇಶ್ ದಾಖಲಾಗಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ರಾಜರಾಜೇಶ್ವರಿ ನಗರದಲ್ಲಿ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ಕಲ್ಲು ಕ್ವಾರಿಯಲ್ಲಿ ಶೂಟಿಂಗ್ ಮಾಡುತ್ತಿದ್ದಾಗ ಮಂಡ್ಯ ರಮೇಶ್ ಕಾಲು ಜಾರಿ ಬಿದ್ದರು. ಹೀಗಾಗಿ. ಕಾಲಿಗೆ ಚಿಕಿತ್ಸೆ ಕೊಡಲಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮಂಡ್ಯ ರಮೇಶ್ ಪತ್ನಿ ಸರೋಜಾ ಹೆಗಡೆ ಮಾಹಿತಿ ನೀಡಿದ್ದು, ವೈದ್ಯರ ಸಲಹೆ ಮೇರೆಗೆ ನಾಳೆ ಆಸ್ಪತ್ರೆಯಿಂದ ಮಂಡ್ಯ ರಮೇಶ್ ಡಿಸ್ಚಾರ್ಜ್ ಆಗಲಿದ್ದಾರೆ. ಸದ್ಯ ಮಂಡ್ಯ ರಮೇಶ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಗುಣಮುಖದ ಹಂತದಲ್ಲಿದ್ದಾರೆ ಎಂದು ಹೇಳಿದ್ದಾರೆ.
ಹೈದರಾಬಾದ್: ಜಿದ್ದಾಜಿದ್ದಿ ಕಣವಾಗಿರುವ ತೆಲಂಗಾಣ ರಾಜ್ಯದಲ್ಲಿಂದು ಮತದಾನ (Telangana Assembly Election 2023) ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ ವರೆಗೆ ಮತದಾನಕ್ಕೆ ಅವಕಾಶ ಸಿಗಲಿದೆ. 119 ವಿಧಾನಸಭಾ ಕ್ಷೇತ್ರಗಳಲ್ಲಿರುವ 32.6 ದಶಲಕ್ಷ ಮತದಾರರು 2,290 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi), https://ainlivenews.com/the-drunk-driver-stopped-the-truck-on-the-railway-tracks-what-happened-next/ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಭಾರತ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಸೇರಿ ಹಲವು ಪ್ರಭಾವಿ ನಾಯಕರು ಅಬ್ಬರದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಡ, ಮಿಜೋರಾಂಗಳಲ್ಲಿ ಈಗಾಗಲೇ ನ.7ರಿಂದ ನವೆಂಬರ್ 25ರ ಒಳಗೆ ಮತದಾನ ಮುಕ್ತಾಯವಾಗಿದೆ. ತೆಲಂಗಾಣದಲ್ಲಿಂದು ಮತದಾನ ನಡೆಯಲಿದ್ದು, ಈ ಮೂಲಕ ಪಂಚರಾಜ್ಯ ಚುನಾವಣೆಗೆ (Five State Election) ತೆರೆ ಬೀಳಲಿದೆ. ಡಿಸೆಂಬರ್ 3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಹೈದರಾಬಾದ್: ಜಿದ್ದಾಜಿದ್ದಿ ಕಣವಾಗಿರುವ ತೆಲಂಗಾಣ ರಾಜ್ಯದಲ್ಲಿಂದು ಮತದಾನ (Telangana Assembly Election 2023) ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭಗೊಂಡಿದ್ದು, ಜನರು ತಮ್ಮ ಹಕ್ಕು ಚಲಾಯಿಸಲು ಉತ್ಸಾಹ ತೋರಿದ್ದಾರೆ. ಈ ನಡುವೆ ತೆಲುಗು ಚಿತ್ರರಂಗದ ಖ್ಯಾತ ನಟರಾದ ಅಲ್ಲು ಅರ್ಜುನ್ (Allu Arjun), ಜೂನಿಯರ್ ಎನ್‌ಟಿಆರ್ (Jr NTR) ಹಾಗೂ ಚಿರಂಜೀವಿ (Chiranjeevi) ಹೈದರಾಬಾದ್‌ನಲ್ಲಿ ತಮ್ಮ ಕುಟುಂಬಗಳೊಂದಿಗೆ ಬಂದು ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬೆಳ್ಳಂ ಬೆಳಗ್ಗೆಯೇ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ್ದಾರೆ. ಅಲ್ಲು ಅರ್ಜುನ್ ತಾವೊಬ್ಬರೇ ಮತಗಟ್ಟೆಗೆ ಬಂದು ವೋಟ್ ಮಾಡಿದರು. ಜೂನಿಯರ್ ಎನ್‌ಟಿಆರ್ ಲಕ್ಷ್ಮಿ ಪ್ರಣತಿ, ತಾಯಿ ಶಾಲಿನಿ ನಂದಮೂರಿ ಅವರೊಂದಿಗೆ ಬಂದು ವೋಟ್ ಮಾಡಿದ್ರು. ಇನ್ನೂ ಮೆಗಾಸ್ಟಾರ್ ಚಿರಂಜೀವಿ ಸಹ ತಮ್ಮ ಕುಟುಂಬ ಸಮೇತರಾಗಿ ಬಂದು ವೋಟ್ ಮಾಡಿ ತನ್ಮ ಹಕ್ಕು ಚಲಾಯಿಸಿದರು. ಜೊತೆಗೆ ಪ್ರತಿಯೊಬ್ಬರು ಬಂದು ವೋಟ್ ಮಾಡುವಂತೆ ಮನವಿ ಮಾಡಿದರು. ಸದ್ಯ ಸ್ಟಾರ್ಸ್‌ಗಳು ವೋಟ್ ಮಾಡಿರುವ ಫೋಟೋ ವೀಡಿಯೋ ಜಾಲತಾಣದಲ್ಲಿ ಸಖತ್ ಸದ್ದು…
ಅಮೆರಿಕನ್ ಬಿಲಿಯನೇರ್ ಬಿಲ್ ಗೇಟ್ಸ್(Bill Gate) ಬ್ರಸೆಲ್ಸ್‌ನ ಒಳಚರಂಡಿ ವಸ್ತುಸಂಗ್ರಹಾಲಯಕ್ಕೆ (Sewer Museum in Brussels) ಭೇಟಿ ನೀಡಲು ಒಳಚರಂಡಿಗೆ ಇಳಿದರು. ಗೇಟ್ಸ್ ಅವರು Instagram ನಲ್ಲಿ ಹಂಚಿಕೊಂಡ ವಿಡಿಯೊವು ಅವರು ಒಳಚರಂಡಿಗೆ ಇಳಿದು ಬ್ರಸೆಲ್ಸ್ ನ ಒಳಚರಂಡಿ ವ್ಯವಸ್ಥೆಯ ಗುಪ್ತ ಇತಿಹಾಸವನ್ನು ಅನ್ವೇಷಿಸುವುದನ್ನು ತೋರಿಸಿದೆ. ನಗರದ ನೀರಿನ ತ್ಯಾಜ್ಯ ವ್ಯವಸ್ಥೆಯ ಸಂಕೀರ್ಣ ಕಾರ್ಯನಿರ್ವಹಣೆಯನ್ನು ಅರ್ಥಮಾಡಿಕೊಳ್ಳಲು ಅವರು ವಿಜ್ಞಾನಿಗಳೊಂದಿಗೆ ಭೇಟಿಯಾಗುವುದನ್ನು ವಿಡಿಯೊ ತೋರಿಸಿದೆ. ಒಳಚರಂಡಿ ಮತ್ತು ಸಂಸ್ಕರಣಾ ಘಟಕಗಳ 200 ಮೈಲಿ ಜಾಲವು ನಗರದ ತ್ಯಾಜ್ಯವನ್ನು ಸಂಸ್ಕರಿಸುತ್ತದೆ. https://ainlivenews.com/do-you-know-which-are-the-most-visited-websites-by-indians/ ‘ಈ ವರ್ಷದ #WorldToiletDay ಗಾಗಿ ನಾನು ಬ್ರಸೆಲ್ಸ್‌ನ ಒಳಚರಂಡಿ ವ್ಯವಸ್ಥೆಯ ಗುಪ್ತ ಇತಿಹಾಸವನ್ನು-ಮತ್ತು ಜಾಗತಿಕ ಆರೋಗ್ಯದಲ್ಲಿ ತ್ಯಾಜ್ಯನೀರಿನ ಪಾತ್ರವನ್ನು ಅನ್ವೇಷಿಸಿದ್ದೇನೆ,’ ಎಂದು ವಿಡಿಯೊಗೆ ಶೀರ್ಷಿಕೆ ನೀಡಲಾಗಿದೆ. ನಾನು ಬ್ರಸೆಲ್ಸ್‌ನ ಭೂಗತ ವಸ್ತುಸಂಗ್ರಹಾಲಯದಲ್ಲಿ ಎಲ್ಲವನ್ನೂ ಅನುಭವಿಸಿದೆ. ನಗರದ ತ್ಯಾಜ್ಯನೀರಿನ ವ್ಯವಸ್ಥೆಯ ಇತಿಹಾಸವನ್ನು ದಾಖಲಿಸುವುದಾಗಿದೆ. 1800 ರ ದಶಕದಲ್ಲಿ ನಗರದ ಸೆನ್ನೆ ನದಿಗೆ ಒಳಚರಂಡಿಯನ್ನು ಸುರಿಯಲಾಯಿತು. ಅದು ಭಯಾನಕ ಕಾಲರಾ ಸಾಂಕ್ರಾಮಿಕ ರೋಗಗಳಿಗೆ ಕಾರಣವಾಯಿತು.…
ಮೈಸೂರು:- ಮೈಸೂರಿನ ಬನ್ನಿಮಂಟಪದಲ್ಲಿ ಮೊಬೈಲ್ ಬಳಸುವ ವಿಚಾರಕ್ಕೆ ಶುರುವಾದ ಜಗಳ ಕೊನೆಗೆ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆ ಜರುಗಿದೆ. ಮೊಬೈಲ್ ಬಳಸುವ ವಿಚಾರದಲ್ಲಿ ತಂದೆ ಮಗನ ನಡುವೆ ಗಲಾಟೆ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿನಿಂದ ತಂದೆ ಅಸ್ಲಂಪಾಷ, ತನ್ನ ಮಗ ಉಮೇಜ್‌ಗೆ ಚಾಕುವಿನಿಂದ ಇರಿದಿದ್ದಾಣೆ. ಪರಿಣಾಮ ಉಮೇಜ್ ಮೃತಪಟ್ಟಿದ್ದಾನೆ. ಈ ಬಗ್ಗೆ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಸ್ಲಂಪಾಷನನ್ನು ಬಂಧಿಸಿದ್ದಾರೆ.
ನಟಿ ಪೂಜಾ ಗಾಂಧಿ (Pooja Gandhi) ಅವರು ಮಂತ್ರ ಮಾಂಗಲ್ಯ ಪದ್ಧತಿಯಂತೆ ಬಹುಕಾಲದ ಗೆಳೆಯ ವಿಜಯ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ 10 ವರ್ಷಗಳಿಂದ ವಿಜಯ್ ಮತ್ತು ಪೂಜಾ ಗಾಂಧಿ ಸ್ನೇಹಿತರಾಗಿದ್ದರು. ವಿಜಯ್ ಅವರಿಂದಲೇ ಪೂಜಾ ಗಾಂಧಿ ಕನ್ನಡ ಕಲಿತಿದ್ದರು. ಈ ಪರಿಚಯವೇ ಪ್ರೇಮಕ್ಕೆ ಮುನ್ನುಡಿ ಬರೆದಿದೆ. ಯಲಹಂಕದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಪೂಜಾ ಗಾಂಧಿ ನ.29 ಮದುವೆಯಾಗಿದ್ದಾರೆ. ಪೂಜಾ ಗಾಂಧಿ ಬಿಳಿ ಸೀರೆಯಲ್ಲಿ ಮಿಂಚಿದ್ರೆ, ವಿಜಯ್ ಬಿಳಿ ಬಣ್ಣದ ಶೆರ್ವಾನಿಯಲ್ಲಿ ಕಾಣಿಸಿಕೊಂಡಿದ್ದಾರೆ. 10 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದಾರೆ. ಯೋಗರಾಜ್ ಭಟ್, ಸುಧಾರಾಣಿ, ಶುಭ ಪೂಂಜಾ, ಸುಮನಾ ಕಿತ್ತೂರು, ಸಾಹಿತಿ ಜಯಂತ್ ಕಾಯ್ಕಿಣಿ ಸೇರಿದಂತೆ ಅನೇಕರು ಭಾಗಿಯಾಗಿ ನವಜೋಡಿಗೆ ಶುಭ ಕೋರಿದ್ದಾರೆ. ಮಳೆ ಹುಡುಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರೋದು ಅಭಿಮಾನಿಗಳಿಗೂ ಖುಷಿ ಕೊಟ್ಟಿದೆ. ಅವರು ಶುಭಕೋರಿದ್ದಾರೆ.
ಶಿವಮೊಗ್ಗ: ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕೇಂದ್ರ ಸರಕಾರಕ್ಕೆ ಕನಿಷ್ಠ ಸೌಜನ್ಯವೂ ಇಲ್ಲ. ನಮ್ಮ ರಾಜ್ಯದ ಸಚಿವರು ದೆಹಲಿಗೆ ಹೋದ್ರೂ ಅಧಿಕಾರಿಗಳನ್ನು ಮಾತನಾಡಿಸಲು ಆಗಲ್ಲ. ಕೇಂದ್ರ ಸರಕಾರದಿಂದ ಹಣ ತರುವ ದಮ್ಮು ತಾಕತ್ ಇದೆಯಾ? ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ನಿರ್ವಹಣೆ ಮಾಡುವುದಕ್ಕೆ ಸರಕಾರ ಕ್ರಮ ವಹಿಸಿದೆ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ಒಂದು ತಿಂಗಳ ನಂತರ ತೊಂದರೆ ಬರಬಹುದು. ಬಹಳ ಆಹಾಕಾರ ಆಗೋದು ನೀರಿಗೆ. ಮೇವಿಗೆ ಯಾವುದೇ ತೊಂದರೆ ಇಲ್ಲ ಎಂದರು. https://ainlivenews.com/do-you-know-which-are-the-most-visited-websites-by-indians/ ಸದ್ಯ ಸೊರಬ ಪಟ್ಟಣಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಆಗ್ತಿದೆ. ಜಿಲ್ಲೆಯ 238 ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆ ಆಗಬಹುದು ಎಂದು ಗುರುತಿಸಲಾಗಿದೆ. ಎಂದು ಅಭಿಪ್ರಾಯಪಟ್ಟರು. ರೈತರಿಗೆ ನೀಡುವ ವಿದ್ಯುತ್ ಪೂರೈಕೆ ಸಮಯದಲ್ಲಿ ವ್ಯತ್ಯಾಸ ಆಗಬಹುದು. ಖಜಾನೆಯಲ್ಲಿ ದುಡ್ಡಿಲ್ಲ, ರಾಜ್ಯದಲ್ಲಿ ವಿದ್ಯುತ್ ಇಲ್ಲ ಅಂತಾ ಬಿಜೆಪಿಯವರು ಅಪಪ್ರಚಾರ ಮಾಡಿದರು. ಅಂತಹ ಸಮಸ್ಯೆ ಇಲ್ಲ. ಖಜಾನೆಯಲ್ಲಿ ದುಡ್ಡಿದೆ. ವಿದ್ಯುತ್ ಸಹ ಇದೆ…
ಬೆಂಗಳೂರು:- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ಮಹತ್ವದ ದಾಖಲೆಗಳನ್ನು ತಲುಪಿಸಲುವ ಯೋಜನೆ ರೂಪಿಸಿದೆ. ಡಿಜಿಟಲ್ ಸ್ವತ್ತಿನ ಪತ್ರವನ್ನು ಆಸ್ತಿ ಹೊಂದಿರುವ ಮಾಲೀಕರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. “ಹೆಚ್ಚಿನ ತೆರಿಗೆ ಸಂಗ್ರಹದ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದಲ್ಲಿ ಇರುವವರು ಅವರ ಕ್ಷೇತ್ರಗಳನ್ನು ಆರ್ಥಿಕವಾಗಿ ಸದೃಢ ಮಾಡಬೇಕು” ಎಂದು ಸೂಚನೆ ನೀಡಿದರು. ಈ ಮೂಲಕ ಪರೋಕ್ಷವಾಗಿ ಆಸ್ತಿ ತೆರಿಗೆ ಹೆಚ್ಚಳ ವಾಗುವ ಸೂಚನೆ ನೀಡಿದರೇ? ಕಾದು ನೋಡಬೇಕಿದೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ. ಕೆ. ಶಿವಕುಮಾರ್, “ಬಿಡಿಎ, ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಪತ್ರ ಪತ್ತು ದಾಖಲೆಗಳನ್ನು ಡಿಜಿಟಲೀಕರಣ ಕೆಲವೇ ದಿನಗಳಲ್ಲಿ ಸ್ವತ್ತಿನ ಪತ್ರಗಳನ್ನು ಉಚಿತವಾಗಿ ಮಾಲೀಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ” ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರ 20 ವರ್ಷಗಳ ಹಿಂದೆ ಭೂಮಿ…
ದಾವಣಗೆರೆ : ರಾಜ್ಯದಲ್ಲಿ ಬಿಜೆಪಿ ಎಂದಿಗೂ 114 ಕ್ಷೇತ್ರ ಗೆದ್ದು ಸರ್ಕಾರ ಮಾಡಿಲ್ಲ. ಯಾವಾಗ ಸರ್ಕಾರ ಮಾಡಿದ್ದರೂ ಏನೇನೋ ಮಾಡಿಯೇ ಅಧಿಕಾರ ಹಿಡಿದಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅದೇ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆಯ ಕನಸು ಕಾಣುತ್ತಿರಬಹುದು. ನಮ್ಮ ಶಾಸಕರು ಯಾರೂ ದಡ್ಡರೂ ಅಲ್ಲ ಎಂದರು. https://ainlivenews.com/do-you-know-which-are-the-most-visited-websites-by-indians/ ಕೇವಲ 105 ಶಾಸಕರಿದ್ದ ಬಿಜೆಪಿಯವರೇ ಸರ್ಕಾರ ಮಾಡಿರುವಾಗ 135 ಸ್ಥಾನ ಗೆದ್ದಿರುವ ನಾವು ಸರ್ಕಾರ ಮಾಡದೇ ಇರ್ತೀವಾ? ಬಿಜೆಪಿಯವರು ಆಪರೇಷನ್ ಕಮಲ ಕೈಬಿಟ್ಟು, ಕಾವೇರಿ ನೀರು ಹಂಚಿಕೆ, ಬರ ಪರಿಹಾರ ಇತರೆ ವಿಷಯಗಳಿಗೆ ಹೆಚ್ಚು ಕಿವಿಗೊಡಲಿ ಎಂದು ಸಲಹೆ ನೀಡಿದರು. ತುಮಕೂರು ಜಿಲ್ಲೆಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ಸಿಗೆ ಸೇರಿದ್ದಾರೆ. ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಿಂದ ಎರಡೂ ಪಕ್ಷದ ಅನೇಕ ಶಾಸಕರು ಅಸಮಾಧಾನಗೊಂಡಿದ್ದಾರೆ. ಯಾರೇ ಆಗಲಿ ಪಕ್ಷದ ತತ್ವ, ಸಿದ್ಧಾಂತ ಒಪ್ಪಿಕೊಂಡು ಕಾಂಗ್ರೆಸ್ಸಿಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.