ಬಿಚ್ಚುಕತ್ತಿ ಸಿನಿಮಾ ಮೂಲಕ ಭರವಸೆ ಹುಟ್ಟಿಸಿರುವ ಮ್ಯಾಸೀವ್ ಸ್ಟಾರ್ ರಾಜವರ್ಧನ್ ಹಿರಣ್ಯ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಹಾಜರಲು ಸಜ್ಜಾಗಿದ್ದಾರೆ. ಇದೀಗ ಹಿರಣ್ಯ ಸಿನಿಮಾದ ಮಾಸ್ ಟೀಸರ್ ರಿಲೀಸ್ ಆಗಿದೆ. ಭರ್ಜರಿ ಆಕ್ಷನ್ ಮೂಲಕ ರಾಜವರ್ಧನ್ ಅಬ್ಬರಿಸಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಹಿರಣ್ಯ ಟೀಸರ್ ಬಿಡುಗಡೆ ಮಾಡಲಾಯಿತು. ಲಹರಿ ಸಂಸ್ಥೆಯ ವೇಲು ರಾಜವರ್ಧನ್ ಸಿನಿಮಾಗೆ ಸಾಥ್ ಕೊಟ್ಟರು. ಈ ವೇಳೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನಿರ್ದೇಶಕ ಪ್ರವೀಣ್ ಅವ್ಯುಕ್ತ ಮಾತನಾಡಿ, ಮುಹೂರ್ತದಲ್ಲಿ ಹೇಳಿದ್ದೆ ಕೆಲಸ ಆದ್ಮೇಲೆ ನಿಮ್ಮ ಮುಂದೆ ಬರ್ತಿವೆ ಎಂದಿದ್ದೆ. ಕೆಲಸ ಆಗಿದೆ ಬಂದಿದ್ದೇವೆ. ಈ ಮೂವೀ ಎಂಜಾಯ್ ಮಾಡಲು ಮಾತೇ ಬರ್ತಿಲ್ಲ. ರಾಜವರ್ಧನ್ ಅವರು ರಾಣಾ ಡೆಡ್ಲಿ ಕ್ಯಾರೆಕ್ಟರ್ ಮಾಡಿದ್ದಾರೆ. ಟೆಸ್ಟ್ ಲುಕ್ ಮಾಡಿದೆವು. ಇಷ್ಟವಾಯ್ತು. ಅದ್ಭುತವಾಗಿ ಅವರು ಫರ್ಪಾಮ್ ಮಾಡಿದ್ದಾರೆ. ಇಡೀ ತಂಡದ ಬೆಂಬಲದಿಂದ ಸಿನಿಮಾ ತಯಾರಾಗಿದೆ ಎಂದು ತಿಳಿಸಿದರು. ನಟ ರಾಜವರ್ಧನ್ ಮಾತನಾಡಿ, ಹಿರಣ್ಯ ಎರಡು ವರ್ಷದ ಹಿಂದೆ ಪ್ರವೀಣ್ ಬಂದು ಕಥೆ ಹೇಳಿದ್ದರು.…
Author: AIN Author
ಬೆಂಗಳೂರು:- ಡಯಾಲಿಸಿಸ್ ಸಮಸ್ಯೆ ಇರುವವರು ಇವತ್ತು ಪರದಾಟ ಬಹುತೇಕ ಫಿಕ್ಸ್ ಎಂದೇ ಹೇಳಲಾಗುತ್ತಿದೆ. ಆರೋಗ್ಯ ಸಚಿವರ ದಿವ್ಯ ನಿರ್ಲಕ್ಷ್ಯದ ಹಿನ್ನಲೆ ಪ್ರತಿಭಟನೆಯ ಮೂಲಕ ಡಯಾಲಿಸೀಸ್ ಸಿಬ್ಬಂದಿ ಆಕ್ರೋಶ ಹೊರ ಹಾಕಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಇಂದು ಡಯಾಲಿಸಿಸ್ ಎಮರ್ಜೆನ್ಸಿ ಎದುರಾಗುತ್ತಾ..? ಎನ್ನುವ ಪ್ರಶ್ನೆ ಉದ್ಭವಿಸಿದೆ. ಇವತ್ತು ಬಹುತೇಕ ರಾಜ್ಯದ 202 ಡಯಾಲಿಸಿಸ್ ಸೆಂಟರ್ ಬಂದ್ ಆಗಲಿದೆ. ಇಂದಿನಿಂದ ಸೇವೆ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ. ಡಯಾಲಿಸೀಸ್ ನೌಕರರ ಸಂಘದ ಅಧ್ಯಕ್ಷ ಚೇತನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಫ್ರೀಡಂ ಪಾರ್ಕಿನಲ್ಲಿ ನೂರಾರು ಸಿಬ್ಬಂದಿಗಳಿಂದ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಗೆ ಪ್ರಮುಖ ಕಾರಣ – ಕೋವಿಡ್ ನೆಪವೊಡ್ಡಿ ಸಂಬಳಕ್ಕೆ ಕತ್ತರಿ ಹಾಕಿರುವ ಸರ್ಕಾರ – ಏಕಾಏಕಿ 50ರಷ್ಟು ಸಂಬಳ ಕಡಿತ ಮಾಡಿ ಜೀವನ ನಡೆಸುವುದು ಕಷ್ಟಕರ – ಕಳೆದ ಎರಡುವರೆ ವರ್ಷಗಳಿಂದ ಅರ್ಧ ಸಂಬಳ ಪಡೆಯುತ್ತಿರುವ ಡಯಾಲಿಸಿಸ್ ಸಿಬ್ಬಂದಿ – ಕನಿಷ್ಠ ಜೀವನಕ್ಕೂ ಸಾಲದ ಸಂಬಳ ಅಂತ ಸರ್ಕಾರದ ವಿರುದ್ಧ ಕಿಡಿ – ಕಳೆದ ಎರಡುವರೆ ತಿಂಗಳ…
ಉಡುಪಿ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆಯನ್ನು ತಾಳದೆ, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. https://ainlivenews.com/do-you-know-which-are-the-most-visited-websites-by-indians/ ಅವರು ಮಾತನಾಡಿದರು. ಬೈಂದೂರು ತಾಲೂಕಿನ ಮರವಂತೆಯಲ್ಲಿ ಹೊರ ಬಂದರು, ಗಂಗೊಳ್ಳಿ ಮೀನುಗಾರಿಕೆ ಬಂದರಿನ ಮರು ನಿರ್ಮಾಣ ಹಾಗೂ ಗಂಗೊಳ್ಳಿ ಮೀನುಗಾರಿಕಾ ಬಂದರು ಹಾಗೂ ಕೋಡಿ ಜೆಟ್ಟಿಯ ನ್ಯಾವಿಗೇಷನ್ ಚಾನೆಲ್‌ನಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ತಾಂತ್ರಿಕ ಸಮಸ್ಯೆಗಳಿಂದಾಗಿ ಕೈಗೊಳ್ಳದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಬಿಗ್ ಬಾಸ್ ಮನೆಗೆ ಕಾಲಿಟ್ಟು 1 ವರೆ ತಿಂಗಳೂ ಕಳೆಯುತ್ತಾ ಬಂದರೂ ವರ್ತೂರು ಸಂತೋಷ್ ಅವರು ಮಾತ್ರ ತಮ್ಮ ಮದುವೆ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಅಲ್ಲದೇ ಈ ಬಗ್ಗೆ ಹೊರಗಡೆ ಸಾಕಷ್ಟು ಚರ್ಚೆ ಕೂಡ ನಡೆದಿತ್ತು. ಇನ್ನೂ ವರ್ತೂರು ಸಂತೋಷ್ ಮದುವೆ ವಿವಾದಕ್ಕೆ ಸಂಬಂಧಪಟ್ಟಂತೆ Bigboss ಮನೆಯಲ್ಲೇ ವರ್ತೂರು ಸಂತೋಷ್ ಮನಬಿಚ್ಚಿ ಮಾತನಾಡಿದ್ದಾರೆ. ನನ್ನ ತಾಯಿಯನ್ನ ನಿರ್ಲಕ್ಷ್ಯ ಮಾಡಿದ ಕಾರಣ ನನ್ನ ಪತ್ನಿ ದೂರ ಹೋದಳು. ನನ್ನ ಜನ ಮತ್ತು ತಾಯಿಯನ್ನ ಬಿಡಲು ನನಗೆ ಆಗೋಲ್ಲ ಅದನ್ನ ಒಪ್ಪೋದಾದರೆ ಬಾ ನೀನು ರಾಣಿಯಾಗಿರು ಅಂದೆ. ಆದ್ರೆ ಆಕೆ ನನ್ನ ಗೇಟ್ ಯಿಂದ ಹೊರ ಹೋಗುವಂತೆ ಹೇಳಿದಳು ಅಂತ ಪತ್ನಿಯ ಬಗ್ಗೆ ಮೊದಲ ಬಾರೀ ವರ್ತೂರು ಸಂತೋಷ್ ಮಾತನಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೀಕ್ಷಣೆ ಪಡೆಯುತ್ತಿದೆ.
ವಿಶ್ವಕಪ್ ಫೈನಲ್‌ನಲ್ಲಿ ಅವಕಾಶ ನೀಡದಿದ್ದಕ್ಕೆ ನಾಯಕ ರೋಹಿತ್ ಶರ್ಮ ಮೇಲೆ ನನಗೆ ಯಾವುದೇ ರೀತಿಯ ಅಸಮಾಧಾನ ಇಲ್ಲ ಎಂದಿದ್ದಾರೆ. ಆಸ್ಟ್ರೇಲಿಯಾದ ಫೈನಲ್ ಪಂದ್ಯಕ್ಕೆ ರೋಹಿತ್ ಶರ್ಮ ಅವರ ಮನಸ್ಥಿತಿಯನ್ನು ನಾನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೆ ಎಂದು ಹೇಳಿದ್ದಾರೆ. ಆಟಗಾರರ ಸಂಯೋಜನೆಯ ಬಗ್ಗೆ ರೋಹಿತ್ ನೂರು ಬಾರಿ ಯೋಚಿಸುತ್ತಿದ್ದರು. ಆದರೆ, ಇಡೀ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದರಿಂದ ಅದೇ ಹನ್ನೊಂದರ ಬಳಗವನ್ನು ರೋಹಿತ್ ಉಳಿಸಿಕೊಂಡರು. ಆ ಸ್ಥಾನದಲ್ಲಿ ಯಾರೇ ಇದ್ದಿದ್ದರೂ ಇದನ್ನೇ ಮಾಡುತ್ತಿದ್ದರು ಎಂದರು. ಅಂದಹಾಗೆ ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಭಾರತದ ಮೊದಲ ಲೀಗ್ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗ ಸೇರಿದ್ದ ಅಶ್ವಿನ್, 34 ರನ್ ನೀಡಿ 1 ವಿಕೆಟ್ ಪಡೆದಿದ್ದರು. ಆ ಬಳಿಕ ಅಶ್ವಿನ್ರನ್ನು ಬೆಂಚ್ ಕಾಯಿಸಲಾಯಿತು. ಫೈನಲ್ನಲ್ಲೂ ಅವಕಾಶ ನೀಡಲಿಲ್ಲ. ಏಕೆಂದರೆ, ಭಾರತ ಫೈನಲ್ಗೂ ಮುಂಚೆ ಆರು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿತ್ತು. ಹೀಗಾಗಿ ಅದೇ ತಂಡವನ್ನು ಉಳಿಸಿಕೊಳ್ಳಲು ರೋಹಿತ್ ನಿರ್ಧರಿಸಿದರು. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು…
ನವದೆಹಲಿ: ಕೊರೊನಾ ಅವಧಿಯ ನಂತರ ಭಾರತದ ದೇಶೀಯ ವಿಮಾನಯಾನ ಕ್ಷೇತ್ರವು ಪುನಶ್ಚೇತನಗೊಂಡಿದ್ದು, ದೇಶೀಯ ವಿಮಾನ (Airlines) ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ನವೆಂಬರ್ ತಿಂಗಳಿನಲ್ಲಿ ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆ ಕನಿಷ್ಠ ನಾಲ್ಕು ಪಟ್ಟು ಅತ್ಯಧಿಕ ಮಟ್ಟವನ್ನು ತಲುಪಿದ್ದು, ಕಳೆದ ಒಂದೇ ದಿನ 4,63,417 ಮಂದಿ ವಿಮಾನದ ಮೂಲಕ ಸಂಚರಿಸಿದ್ದಾರೆ. ನಾಗರಿಕ ವಿಮಾನಯಾನ ಸಚಿವಾಲಯ ಶುಕ್ರವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, https://ainlivenews.com/do-you-know-which-are-the-most-visited-websites-by-indians/ ಸಕಾರಾತ್ಮಕ ಮನೋಭಾವ, ಪ್ರಗತಿಪರ ನೀತಿಗಳು ಮತ್ತು ಪ್ರಯಾಣಿಕರ ವಿಶ್ವಾಸದಿಂದಾಗಿ ವಿಮಾನ ಪ್ರಯಾಣಿಕರ ಸಂಖ್ಯೆ ಪ್ರತಿದಿನ ಹೆಚ್ಚುತ್ತಿದೆ ಎಂದು ಹೇಳಿದೆ. ಕಳೆದ ಗುರುವಾರ 5,998 ವಿಮಾನ ಪ್ರಯಾಣವಾಗಿದ್ದು, ಈ ಪೈಕಿ 4,63,417 ಮಂದಿ ವಿಮಾನಗಳ ಮೂಲಕ ಸಂಚರಿಸಿದ್ದಾರೆ. 2022 ಇದೇ ದಿನಕ್ಕೆ 5,413 ಬಾರಿ ವಿಮಾನಗಳ ಹಾರಾಟವಾಗಿದ್ದು, 3,86,002 ಮಂದಿ ವಿಮಾನಗಳ ಮೂಲಕ ಸಂಚರಿಸಿದ್ದರು.
ತುಮಕೂರು:-ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಪೊಲೀಸ್ ಪೇದೆ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಸಿದ್ದರಬೆಟ್ಟ ಬಳಿ ಜರುಗಿದೆ. ಮಹೇಶ್,ಚಂದ್ರಯ್ಯ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಗಳು. ಮೃತ ಮಹೇಶ್,ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ಪೇದೆ ಎನ್ನಲಾಗಿದೆ. ನಿನ್ನೆ ತಡರಾತ್ರಿ ಸಂಬಂಧಿಗಳ ಮದುವೆಗೆ ಮೂವರು ಬಂದಿದ್ದರು. ಮದುವೆ ಮುಗಿಸಿ ಬೈಕ್ ನಲ್ಲಿ ವಾಪಸ್ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಮೇಲೆ ಬಿದ್ದು ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಮತ್ತೋರ್ವ ಗಾಯಾಳು ಭರತ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಯಾಂಡಲ್ವುಡ್ ದಿವಂಗತ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳ ಒಕ್ಕೂಟ ಡಿ. 17 ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಅಭಿಮಾನಿಗಳ ಪಾಲಿನ ‘ಹೃದಯವಂತ’ ಡಾ.ವಿಷ್ಣುವರ್ಧನ್ ಬಾರದ ಲೋಕಕ್ಕೆ ಪಯಣ ಬೆಳೆಸಿ ಡಿಸೆಂಬರ್ 30ಕ್ಕೆ 14 ವರ್ಷಗಳಾಗಲಿದೆ. ಇಷ್ಟು ವರ್ಷಗಳು ಕಳೆದರು ವಿಷ್ಣು ಪುಣ್ಯಭೂಮಿಯನ್ನು ನಿರ್ಲಕ್ಷಿಸಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ ಈ ಹಿನ್ನೆಲೆ ಡಾ.ವಿಷ್ಣುವರ್ಧನ್ ಅವರ ಪುಣ್ಯಭೂಮಿಗಾಗಿ ಇದೆ ಡಿಸೆಂಬರ್ 17 ರಂದು ಡಾ.ವಿಷ್ಣುವರ್ಧನ್ ಅಭಿಮಾನಿ ಸಂಘಟನೆಗಳ ಒಕ್ಕೂಟದಿಂದ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಸ್ವಾತಂತ್ರ ಉದ್ಯಾನವನದಲ್ಲಿ ಪ್ರತಿಭಟನೆ ಮಾಡಲು ತೀರ್ಮಾನಿಸಿದೆ. ಈ ಹೋರಾಟಕ್ಕೆ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳನ್ನು ಸೇರಿಸಬೇಕಾಗಿರುವುದರಿಂದ ಡಾ.ವಿಷ್ಣು ಸೇನಾ ಸಮಿತಿ ಕೇಂದ್ರ ಸಮಿತಿ ವತಿಯಿಂದ ಎಲ್ಲಾ ಜಿಲ್ಲಾವಾರು, ತಾಲೂಕುವಾರು, ಶಾಖೆ ಘಟಕಗಳ ಅಧ್ಯಕ್ಷರುಗಳು ಇದೆ ಡಿ.03ರಂದು ಭಾನುವಾರ ಆಯಾ ಭಾಗದಲ್ಲಿರುವ ಅಭಿಮಾನಿಗಳನ್ನು ಒಳಗೊಂಡಂತೆ ಒಂದು ಸಭೆ ಮಾಡುವ ಮೂಲಕ ಪುಣ್ಯಭೂಮಿಗಾಗಿ ಮಾಡುತ್ತಿರುವ ಹೋರಾಟದ ವಿಷಯವನ್ನು ಅಭಿಮಾನಿಗಳಿಗೆ ತಿಳಿಸಿ 17 ರ ಪ್ರತಿಭಟನೆಗೆ ಸಾವಿರಾರು ಜನರು…
ಬೆಂಗಳೂರು: ಭಾರತೀಯ ಕ್ರಿಕೆಟ್‌ನ ಬ್ಯಾಟಿಂಗ್ ದಿಗ್ಗಜ ರಾಹುಲ್ ದ್ರಾವಿಡ್ ಅವರ ಟೀಮ್ ಇಂಡಿಯಾ ಹೆಡ್ ಕೋಚ್ ಅವಧಿಯನ್ನು ಮುಂದಿನ ಎರಡು ವರ್ಷಗಳಿಗೆ ವಿಸ್ತರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ ಎಂದು ವರದಿಯಾಗಿದೆ. ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಭಾರತ ತಂಡ ಟೆಸ್ಟ್ ಚಾಂಪಿಯನ್‌ಷಿಪ್ ಮತ್ತು ಏಕದಿನ ವಿಶ್ವಕಪ್ ಟೂರ್ನಿಗಳಲ್ಲಿ ರನ್ನರ್ ಅಪ್ ಆಗಿದೆ. 2021ರ ಟಿ20 ವಿಶ್ವಕಪ್ ಬಳಿಕ ಭಾರತ ತಂಡದ ಹೆಡ್ ಕೋಚ್ ಹುದ್ದೆಯನ್ನು ಅಲಂಕರಿಸಿದ್ದ ರಾಹುಲ್ ದ್ರಾವಿಡ್, ಇತ್ತೀಚೆಗೆ ಅಂತ್ಯವಾಗಿದ್ದ ಏಕದಿನ ವಿಶ್ವಕಪ್ ಟೂರ್ನಿಯ ಬಳಿಕ ಅವರ ಅವಧಿ ಮುಗಿದಿತ್ತು. ಈ ಹಿನ್ನೆಲೆಯಲ್ಲಿ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಹಲವು ಫ್ರಾಂಚೈಸಿಗಳು ದ್ರಾವಿಡ್ ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿದೆ. ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಭಾರತ ತಂಡ ಅತ್ಯುತ್ತಮ ಪ್ರದರ್ಶನ ತೋರಿದೆ. ಅಲ್ಲದೆ ಹಲವು ಪ್ರತಿಭಾವಂತ ಆಟಗಾರರು ಬೆಳಕಿಗೆ ಬಂದಿದ್ದಾರೆ. 2023ರ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ಹಾಗೂ 2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ…
ಬೆಂಗಳೂರು:- ಪ್ರತಿಷ್ಠಿತ ಬ್ರಾಂಡ್ ಹೆಸರನ್ನ ನಕಲಿಸಿ ಬಟ್ಟೆ ಮಾರುತ್ತಿದ್ದ ಗೋಡೌನ್ ಮೇಲೆ ಸಿಸಿಬಿ ದಾಳಿ ನಡೆಸಿದೆ. ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಬಟ್ಟೆಗಳನ್ನು ಸಿಸಿಬಿ ಜಪ್ತಿ ಮಾಡಿದೆ. ದಾಳಿ ವೇಳೆ ಬರೋಬ್ಬರಿ1.5ಕೋಟಿ ಮೌಲ್ಯದ ಬಟ್ಟೆಯನ್ನು ಸಿಸಿಬಿ ಸೀಜ್ ಮಾಡಿದೆ. ಅರ್ಮನಿ, ಬರ್ಬರಿ, ಗ್ಯಾಂಟ್ ಸೇರಿದಂತೆ ಪ್ರತಿಷ್ಠಿತ ಬ್ರಾಂಡ್ ಗಳ ಬಟ್ಟೆ ಎಂದು ಅಕ್ರಮ ಮಾರಾಟ ಮಾಡಲಾಗುತ್ತಿತು. ಪಟೆಲ್ ಎಕ್ಸ್ಪೋರ್ಟ್ ಹಾಗೂ ಆರ್ ಬಿ ಫ್ಯಾಷನ್ ಗೋಡೌನ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ವೇಳೆ ಬೇರೆ ಬೇರೆ ಕಡೆಯೂ ಇದೇ ರೀತಿ ಫೇಕ್ ಬ್ರಾಂಡ್ ಗೋಡೌನ್ ಹೊಂದಿರೋದು ಬೆಳಕಿಗೆ ಬಂದಿದೆ. ಎಸ್ ಆರ್ ನಗರ, ಮಾಗಡಿ ರೋಡ್, ಬೇಗೂರು ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ನಕಲಿ ಬ್ರಾಂಡ್ ಬಟ್ಟೆಯ ಗೋಡೌನ್ ಇರೋದು ಬೆಳಕಿಗೆ ಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಸಿಸಿಬಿ…